Tag: ಬೆಂಕಿ

  • ದೆಹಲಿಯ ಝಂಡೇವಾಲನ್‌ನ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಭಾರೀ ಬೆಂಕಿ – ಹಲವು ಕಾರುಗಳು ಸುಟ್ಟು ಭಸ್ಮ

    ದೆಹಲಿಯ ಝಂಡೇವಾಲನ್‌ನ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಭಾರೀ ಬೆಂಕಿ – ಹಲವು ಕಾರುಗಳು ಸುಟ್ಟು ಭಸ್ಮ

    ನವದೆಹಲಿ: ಇಲ್ಲಿನ ಝಂಡೇವಾಲನ್ (Jhandewalan) ಪ್ರದೇಶದ ಅನಾರ್ಕಲಿ ಕಟ್ಟಡ ಹಾಗೂ ಡಿಡಿಎ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ (DDA Shopping Complex) ಮಂಗಳವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

    ಘಟನಾ ಸ್ಥಳಕ್ಕೆ 15 ಅಗ್ನಿಶಾಮಕ ದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬ್ಲಾಕ್ ಇ 3ರಲ್ಲಿರುವ ಅನಾರ್ಕಲಿ ಕಾಂಪ್ಲೆಕ್ಸ್‌ನಲ್ಲಿ ಮಧ್ಯಾಹ್ನ 2:35ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಖಂಡಿಸಿ ಶೀಘ್ರವೇ ಜೆಡಿಎಸ್‌ನಿಂದ ಹೋರಾಟ – ನಿಖಿಲ್

    ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸ್ಥಳದಲ್ಲಿ ನಿಲ್ಲಿಸಿದ್ದ ಹಲವಾರು ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಬೆಂಕಿ ಹತ್ತಿರದ ಬ್ಯಾಂಕ್‌ಗೂ ಹರಡಿದೆ. ಸದ್ಯ ಬೆಂಕಿ ಅವಘಡದಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಇದನ್ನೂ ಓದಿ: ಹನಿಟ್ರ‍್ಯಾಪ್ ಕೇಸ್‌ನ ಟೀಸರ್‌ನಲ್ಲಿ ಒಂದು, ಸಿನಿಮಾದಲ್ಲಿ ಮತ್ತೊಂದನ್ನು ತೋರಿಸೋ ಕೆಲಸ ಆಗ್ತಿದೆ – ನಿಖಿಲ್ ಕುಮಾರಸ್ವಾಮಿ

    ದೆಹಲಿಯಲ್ಲಿ ಒಂದು ದಿನದಲ್ಲಿ ಸಂಭವಿಸಿದ ಎರಡನೇ ಬೆಂಕಿ ಅವಘಡ ಇದಾಗಿದೆ. ಮಂಗಳವಾರ ಬೆಳಗ್ಗೆ 7:35ಕ್ಕೆ ನ್ಯೂ ಸೀಲಾಂಪುರ್‌ನ ಕೊಳಚೆ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಗೆ ಅಸಲಿ ಕಾರಣವೇನು ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯಗೂ ಔರಂಗಜೇಬ್‌ಗೂ ಯಾವುದೇ ವ್ಯತ್ಯಾಸ ಇಲ್ಲ: ಹರೀಶ್ ಪೂಂಜಾ

  • ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ – ಜೀವ ಉಳಿಸಿಕೊಳ್ಳಲು 2ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿನಿಯರು

    ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ – ಜೀವ ಉಳಿಸಿಕೊಳ್ಳಲು 2ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿನಿಯರು

    ಲಕ್ನೋ: ಗರ್ಲ್ಸ್ ಹಾಸ್ಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಾಸ್ಟೆಲ್ ಒಳಗೆ ಸಿಲುಕಿಕೊಂಡಿದ್ದ ಇಬ್ಬರು ಹುಡುಗಿಯರು ಜೀವ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಗ್ರೇಟರ್‌ ನೋಯ್ಡಾದಲ್ಲಿ  ನಡೆದಿದೆ.

    ಗ್ರೇಟರ್ ನೋಯ್ಡಾದ (Greater Noida) ನಾಲೆಡ್ಜ್ ಪಾರ್ಕ್- 3ರಲ್ಲಿರುವ ಅನ್ನಪೂರ್ಣ ಗರ್ಲ್ಸ್ ಹಾಸ್ಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಎಸಿ ಸ್ಫೋಟಗೊಂಡ ಪರಿಣಾಮ ಹಾಸ್ಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ಮೊದಲು ನನಗೆ ತಲೆ ಸುತ್ತುತ್ತಿದೆ ಎಂದು ಭಾವಿಸಿದ್ದೆ – ಥೈಲ್ಯಾಂಡ್‌ ಭೂಕಂಪದ ಭಯಾನಕ ಚಿತ್ರಣ ಬಿಚ್ಚಿಟ್ಟ ಕನ್ನಡಿಗ

    ಹಾಸ್ಟೆಲ್‌ನ ಎರಡನೇ ಮಹಡಿಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಹುಡುಗಿಯರನ್ನು ಸ್ಥಳೀಯರು ಏಣಿಯ ಸಹಾಯದಿಂದ ರಕ್ಷಿಸಿದರು. ಆದರೆ, ಒಬ್ಬ ಹುಡುಗಿ ಏಣಿಗೆ ಕಾಲಿಡಲು ಪ್ರಯತ್ನಿಸುತ್ತಿದ್ದಾಗ ಕೆಳಕ್ಕೆ ಬಿದ್ದಳು. ಬಿದ್ದ ವಿದ್ಯಾರ್ಥಿನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಕತ್ತಿಯಿಂದ ಹೊಡೆದು ನಾಲ್ವರ ಭೀಕರ ಹತ್ಯೆ

    ಗುರುವಾರ ಸಂಜೆ 5 ಗಂಟೆ ಸುಮಾರಿಗೆ, ನಾಲೆಡ್ಜ್ ಪಾರ್ಕ್ -3 ರಲ್ಲಿರುವ ಅನ್ನಪೂರ್ಣ ಗರ್ಲ್ಸ್ ಹಾಸ್ಟೆಲ್‌ನಲ್ಲಿ (Girl’s Hostel) ಬೆಂಕಿ ಕಾಣಿಸಿಕೊಂಡಿದೆ ಎಂದು ನಮಗೆ ಮಾಹಿತಿ ಸಿಕ್ಕಿತು. ನಮ್ಮ ತಂಡ ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಿಸಿತು ಎಂದು ಅಗ್ನಿಶಾಮಕ ಅಧಿಕಾರಿ ಪ್ರದೀಪ್ ಕುಮಾರ್ ಚೌಬೆ ಮಾಹಿತಿ ನೀಡಿದರು. ಇದನ್ನೂ ಓದಿ: ಮ್ಯಾನ್ಮಾರ್‌ನಲ್ಲಿ ಭಾರೀ ಭೂಕಂಪ – 40ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆ, ಗಗನಚುಂಬಿ ಕಟ್ಟಡಗಳು ನೆಲಸಮ!

  • ನಿಪ್ಪಾಣಿ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ – 5 ಕೋಟಿ ನಷ್ಟ

    ನಿಪ್ಪಾಣಿ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ – 5 ಕೋಟಿ ನಷ್ಟ

    ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ (Sugar Factory) ಅಗ್ನಿ (Fire) ಅವಘಡ ಸಂಭವಿಸಿದೆ.

    ಬಾಯ್ಲರ್‌ನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಗೆ ವ್ಯಾಪಕವಾಗಿ ಹರಡಿದೆ‌. ಬೆಂಕಿಯಿಂದ 24 ಟನ್ ಸಾಮರ್ಥ್ಯದ ಬಾಯ್ಲರ್ (Factory Boiler) ಹೊತ್ತಿ ಉರಿದಿದೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್‌ಐ ಮಗಳು ಆತ್ಮಹತ್ಯೆ

     

    ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಂದಾಜು 5 ಕೋಟಿ ರೂ. ಮೌಲ್ಯದ ಆಸ್ತಿ ಬೆಂಕಿಗಾಹುತಿಯಾಗಿದೆ. ಕಾರ್ಖಾನೆಯಲ್ಲಿನ ಅಗ್ನಿ ನಂದಿಸಲು ಸ್ಥಳದಲ್ಲಿ 9 ಅಗ್ನಿಶಾಮಕ ವಾಹನ ನಿಯೋಜಿಸಲಾಗಿತ್ತು. ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ದೆಹಲಿ ಹೈಕೋರ್ಟ್ ಜಡ್ಜ್ ಮನೆಗೆ ಬೆಂಕಿ – ನಂದಿಸಲು ಹೋದಾಗ ಸಿಕ್ಕಿದ್ದು ಕಂತೆ ಕಂತೆ ನೋಟು

    ದೆಹಲಿ ಹೈಕೋರ್ಟ್ ಜಡ್ಜ್ ಮನೆಗೆ ಬೆಂಕಿ – ನಂದಿಸಲು ಹೋದಾಗ ಸಿಕ್ಕಿದ್ದು ಕಂತೆ ಕಂತೆ ನೋಟು

    – ಸುಪ್ರೀಂಕೋರ್ಟ್ ಸಿಜೆಐ ಸಂಜೀವ್ ಖನ್ನಾ ಕೊಲಿಜಿಯಂ ಸಭೆ
    – ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸುವ ನಿರ್ಧಾರ

    ನವದೆಹಲಿ: ದೆಹಲಿ ಹೈಕೋರ್ಟ್‌ (Delhi High Court) ನ್ಯಾಯಮೂರ್ತಿ ಯಶವಂತ್ ವರ್ಮಾ (Yashwant Varma) ಅವರ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ನಂತರ ಅಪಾರ ಪ್ರಮಾಣದ ನಗದು ಹಣ ಪತ್ತೆಯಾಗಿದ್ದು ಈ ಬೆಳವಣಿಗೆ ಭಾರಿ ಚರ್ಚೆಗೆ ಕಾರಣವಾಗಿದೆ.

    ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (Supreme Court) ಸಂಜೀವ್ ಖನ್ನಾ (Sanjiv Khanna) ಕೊಲಿಜಿಯಂ (Collegium) ಸಭೆ ಕರೆದು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ತಕ್ಷಣವೇ ದೆಹಲಿ ಹೈಕೋರ್ಟ್‌ನಿಂದ ಮಾತೃ ಸಂಸ್ಥೆ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸುವ ನಿರ್ಧಾರ ಕೈಗೊಂಡಿದ್ದಾರೆ. ಇದನ್ನೂ ಓದಿ: ವೈಯಕ್ತಿಕ ಜೀವನವನ್ನು ಖಾಸಗಿಯಾಗಿಡುತ್ತೇನೆ: ಬ್ರೇಕಪ್‌ ಬಗ್ಗೆ ತಮನ್ನಾ ಮಾತು

    ವರದಿಗಳ ಪ್ರಕಾರ, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಮನೆಯಲ್ಲಿ ಇಲ್ಲದ ವೇಳೆ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕುಟುಂಬಸ್ಥರು ಪೊಲೀಸ್ ಮತ್ತು ಅಗ್ನಿಶಾಮಕ ದಳ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಆದರೆ, ತಪಾಸಣೆಯ ವೇಳೆ ಅಲ್ಲಿ ದೊಡ್ಡ ಮೊತ್ತದ ನಗದು ಹಣ ಇರುವುದು ಬೆಳಕಿಗೆ ಬಂದಿದೆ. ಈ ಹಣದ ಮೂಲದ ಬಗ್ಗೆ ಇನ್ನೂ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಇದನ್ನೂ ಓದಿ: ಸಿಎಂ ಕುರ್ಚಿಗಾಗಿ ಹನಿಟ್ರ‍್ಯಾಪ್ – ಸರ್ಕಾರದಲ್ಲಿ ದಲಿತ ಮಂತ್ರಿಗೆ ರಕ್ಷಣೆ ಇಲ್ಲ: ಅಶೋಕ್‌

    ಈ ಘಟನೆಯು ನ್ಯಾಯಮೂರ್ತಿಗಳ ವೃತ್ತಿಪರ ನಡವಳಿಕೆ ಮತ್ತು ಸಮಗ್ರತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿವೆ. ನ್ಯಾಯಮೂರ್ತಿ ವರ್ಮಾ ವಿರುದ್ಧ ತನಿಖೆ ಆರಂಭಿಸುವ ಮತ್ತು ದೋಷಾರೋಪಣೆ ಪ್ರಕ್ರಿಯೆ ಪ್ರಾರಂಭಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಸಾವು

    ನ್ಯಾ. ವರ್ಮಾ ಅವರನ್ನು ವರ್ಗಾವಣೆ ಮಾಡುವುದರಿಂದ ನ್ಯಾಯಾಂಗದ ವರ್ಚಸ್ಸು ಹಾಳಾಗುತ್ತದೆ ಮತ್ತು ಕಾನೂನು ವ್ಯವಸ್ಥೆಯಲ್ಲಿ ಸಾರ್ವಜನಿಕರ ವಿಶ್ವಾಸ ಕುಸಿಯುತ್ತದೆ ಎಂದು ಕೊಲಿಜಿಯಂನ ಕೆಲವು ನ್ಯಾಯಾಧೀಶರು ಕಳವಳ ವ್ಯಕ್ತಪಡಿಸಿದ್ದಾರೆ. ನ್ಯಾ. ವರ್ಮಾ ಅವರು ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡಬೇಕೆಂದು ಕೊಲಿಜಿಯಂನ ಕೆಲವು ನ್ಯಾಯಾಧೀಶರು ಕೋರಿದ್ದಾರೆ. ಇದನ್ನು ಅವರು ನಿರಾಕರಿಸಿದರೆ, ಸಂಸತ್ತಿನಲ್ಲಿ ದೋಷಾರೋಪಣೆ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು. ಇದನ್ನೂ ಓದಿ: ಜಾನ್ವಿ ಕಪೂರ್‌ಗೆ ವಿಶೇಷ ಉಡುಗೊರೆ ನೀಡಿದ ರಾಮ್ ಚರಣ್ ಪತ್ನಿ

    ನಿಯಮ ಏನು ಹೇಳುತ್ತದೆ?
    ಸಂವಿಧಾನದ ಪ್ರಕಾರ, ಯಾವುದೇ ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್ ನ್ಯಾಯಾಧೀಶರ ವಿರುದ್ಧದ ಭ್ರಷ್ಟಾಚಾರ, ದುರ್ನಡತೆ ಅಥವಾ ಅಕ್ರಮಗಳ ಆರೋಪಗಳನ್ನು ತನಿಖೆ ಮಾಡಲು ಸುಪ್ರೀಂಕೋರ್ಟ್ 1999 ರಲ್ಲಿ ಆಂತರಿಕ ಕಾರ್ಯವಿಧಾನವನ್ನು ರೂಪಿಸಿತು.

    ಮಾರ್ಗಸೂಚಿಗಳ ಪ್ರಕಾರ, ಮುಖ್ಯ ನ್ಯಾಯಮೂರ್ತಿಗಳು ಮೊದಲು ಆರೋಪಿ ನ್ಯಾಯಾಧೀಶರಿಂದ ವಿವರಣೆಯನ್ನು ಕೇಳುತ್ತಾರೆ. ಪ್ರತಿಕ್ರಿಯೆ ತೃಪ್ತಿಕರವಾಗಿಲ್ಲದಿದ್ದರೆ ಅಥವಾ ಸಂಪೂರ್ಣ ತನಿಖೆ ಅಗತ್ಯವಿದ್ದರೆ, ಸಿಜೆಐ (Chief Justice of India) ಅವರು ಒಬ್ಬರು ಸುಪ್ರೀಂಕೋರ್ಟ್ ನ್ಯಾಯಾಧೀಶರು ಮತ್ತು ಇಬ್ಬರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಆಂತರಿಕ ಸಮಿತಿಯನ್ನು ರಚಿಸಬೇಕಾಗುತ್ತದೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಕೋಲಾಹಲ- ಸ್ಪೀಕರ್‌ ಮೇಲೆ ಪೇಪರ್‌ ಎಸೆತ

    ತನಿಖೆಯ ಫಲಿತಾಂಶದ ಆಧಾರದ ಮೇಲೆ, ಸಂಬಂಧಪಟ್ಟ ನ್ಯಾಯಾಧೀಶರನ್ನು ರಾಜೀನಾಮೆ ನೀಡುವಂತೆ ಕೇಳಬಹುದು ಅಥವಾ ದೋಷಾರೋಪಣೆಯನ್ನು ಎದುರಿಸಬಹುದು.

  • ಆಕಸ್ಮಿಕ ಬೆಂಕಿ – ಸುಟ್ಟು ಕರಕಲಾಯ್ತು 200ಕ್ಕೂ ಹೆಚ್ಚು ಗಂಧದ ಮರಗಳು

    ಆಕಸ್ಮಿಕ ಬೆಂಕಿ – ಸುಟ್ಟು ಕರಕಲಾಯ್ತು 200ಕ್ಕೂ ಹೆಚ್ಚು ಗಂಧದ ಮರಗಳು

    ಬಳ್ಳಾರಿ: ಆಕಸ್ಮಿಕ ಬೆಂಕಿ (Fire) ತಗುಲಿ 200ಕ್ಕೂ ಹೆಚ್ಚು ಶ್ರೀಗಂಧದ ಮರಗಳು (Sandalwood Trees) ಸುಟ್ಟು ಕರಕಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯಲ್ಲಿ ನಡೆದಿದೆ.

    ರೈತ ಚನ್ನಬಸಪ್ಪ ಎನ್ನುವವರಿಗೆ ಸೇರಿದ ಜಮೀನಿನಲ್ಲಿ ಅವಘಡ ಸಂಭವಿಸಿದೆ. ಚನ್ನಬಸಪ್ಪ ತನ್ನ 9 ಎಕರೆ ಜಮೀನಿನಲ್ಲಿ ಶ್ರೀಗಂಧ, ರಕ್ತಚಂದನ, ಪೇರಲೆ ಹಾಗೂ ಬಾಳೆ ಬೆಳೆದ್ದರು. ಇದನ್ನೂ ಓದಿ: ಲವ್ ಜಿಹಾದ್ ಕಲಿಸೋ ಮದರಸಾಗಳಿಗೆ ಸಿದ್ದರಾಮಯ್ಯ ಸರ್ಕಾರ ಹಣ ಕೊಡ್ತಿದೆ: ಯತ್ನಾಳ್ ಕೆಂಡ

     

    ಚನ್ನಬಸಪ್ಪ ಅವರು 2018 ರಿಂದಲೇ ಸಸಿಗಳನ್ನ ಹಾಕಿ ಪೋಷಣೆ ಮಾಡುತ್ತಿದ್ದರು. ಇದೀಗ ಬೆಂಕಿ ತಗುಲಿ 200ಕ್ಕೂ ಅಧಿಕ ಮರಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.

    ಮಾಹಿತಿ ತಿಳಿದ ಕೂಡಲೇ ಚನ್ನಬಸಪ್ಪ ಕುಟುಂಬದೊಂದಿಗೆ ಜಮೀನಿಗೆ ಬಂದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹೀಗಾಗಿ ಇನ್ನಷ್ಟು ಪ್ರಮಾಣದ ಹಾನಿ ತಪ್ಪಿದೆ. ಸದ್ಯ 200ಕ್ಕೂ ಹೆಚ್ಚು ಮರಗಳಿಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಆಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಅರ್ಚಕನ ಬೈಕ್ ಸುಟ್ಟು ವಿಕೃತಿ ಮೆರೆದ ಅಪ್ರಾಪ್ತರು

    ಅರ್ಚಕನ ಬೈಕ್ ಸುಟ್ಟು ವಿಕೃತಿ ಮೆರೆದ ಅಪ್ರಾಪ್ತರು

    ಚಿಕ್ಕೋಡಿ: ಅಪ್ರಾಪ್ತ (Minor) ವಯಸ್ಸಿನ ಮಕ್ಕಳು ಅರ್ಚಕನ ಬೈಕ್ ಸುಟ್ಟು ವಿಕೃತಿ ಮೆರೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ‌ ಕುಡಚಿ (Kudachi) ಪಟ್ಟಣದಲ್ಲಿ ನಡೆದಿದೆ.

    ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಗೆ ಮಕ್ಕಳ ಗುಂಪು ಬೆಂಕಿ ಹಚ್ಚಿದೆ. ಕುಡಚಿ ಪಟ್ಟಣದ ವಾರ್ಡ್ ನಂಬರ ಎರಡರ ಮರಾಠಾ ಗಲ್ಲಿಯಲ್ಲಿ ಶನಿವಾರ ರಾತ್ರಿ ಪಟ್ಟಣದ ಅರ್ಚಕ ಪ್ರವೀಣ್ ಕುಲಕರ್ಣಿ ಎಂಬುವವರಿಗೆ ಸೇರಿದ ಬೈಕಗೆ ಬೆಂಕಿ ಹಚ್ಚಲಾಗಿದೆ.

    ಮಕ್ಕಳ ವಿಕೃತಿ ಮೆರೆದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕುಡಚಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

  • ರಾಮನಗರ | ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ – 30 ಎಕರೆ ಸುಟ್ಟು ಭಸ್ಮ

    ರಾಮನಗರ | ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ – 30 ಎಕರೆ ಸುಟ್ಟು ಭಸ್ಮ

    – ಕೃತ್ಯವೆಸಗಿದ ಕುರಿಗಾಹಿ ಅರೆಸ್ಟ್

    ರಾಮನಗರ: ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ (Fire) ಹಾಕಿದ ಪರಿಣಾಮ ಸುಮಾರು 30 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಕನಕಪುರ (Kanakapura) ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ.

    ಅರಣ್ಯಕ್ಕೆ ಬೆಂಕಿಹಾಕಿದ ಹೂಳ್ಯ ಗ್ರಾಮದ ರಾಜಪ್ಪ (42) ಎಂಬಾತನನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ಸಂಗಮ ವನ್ಯಜೀವಿ ವಲಯದಲ್ಲಿ ಅರಣ್ಯ ಪ್ರದೇಶದಲ್ಲಿ ಕುರಿಗಾಹಿ ರಾಜಪ್ಪ ಮೇಕೆಗಳ ಮೇಯಿಸಲು ಹೋಗಿದ್ದ. ಅರಣ್ಯದಲ್ಲಿರುವ ಒಣ ಹುಲ್ಲು ಸುಟ್ಟರೆ ಹೊಸ ಹುಲ್ಲು ಚಿಗುರುತ್ತೆ. ಇದರಿಂದ ಕುರಿ, ಮೇಕೆಗಳಿಗೆ ಮೇವು ಸಿಗುತ್ತದೆ ಎಂಬ ಕಾರಣಕ್ಕೆ ಅರಣ್ಯಕ್ಕೆ ಬೆಂಕಿಹಚ್ಚಿದ್ದ. ಇದನ್ನೂ ಓದಿ: ಮೊನಾಲಿಸಾ ಸಿನಿಮಾ ವಿವಾದ – ಐವರ ವಿರುದ್ಧ ಬಿತ್ತು ಕೇಸ್‌

    ಅರಣ್ಯಕ್ಕೆ ಬೆಂಕಿಬಿದ್ದ ಹಿನ್ನೆಲೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಬಳಿಕ ಬೆಂಕಿನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಬೆಂಕಿನಂದಿಸುವಷ್ಟರಲ್ಲಿ ಸುಮಾರು 30 ಎಕರೆಗಳಷ್ಟು ಅರಣ್ಯ ಸುಟ್ಟು ಭಸ್ಮವಾಗಿದೆ. ಈ ವೇಳೆ ಅಕ್ರಮವಾಗಿ ವನ್ಯಜೀವಿ ವಲಯಕ್ಕೆ ಎಂಟ್ರಿಯಾಗಿದ್ದ ರಾಜಪ್ಪನನ್ನ ಹಿಡಿದು ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಬೆಂಕಿಹಾಕಿದ್ದನ್ನ ರಾಜಪ್ಪ ಒಪ್ಪಿಕೊಂಡಿದ್ದಾನೆ. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 300 ಮಕ್ಕಳ ಮೇಲೆ ವೈದ್ಯನಿಂದ ರೇಪ್ – ನಾನು `ಶಿಶುಕಾಮಿ’ ಎಂದು ತಪ್ಪೊಪ್ಪಿಕೊಂಡ ಆರೋಪಿ

    ಅರಣ್ಯಕ್ಕೆ ಬೆಂಕಿಹಾಕಿದ ಹಿನ್ನೆಲೆ ಕೆಲ ವನ್ಯಜೀವಿಗಳೂ ಸಹ ಸಾವನ್ನಪ್ಪಿದ್ದು, ಬೃಹತ್ ಗಾತ್ರದ ಹೆಬ್ಬಾವು ಸಹ ಬೆಂಕಿಯಲ್ಲಿ ಸುಟ್ಟು ಮೃತಪಟ್ಟಿದೆ. ಇದನ್ನೂ ಓದಿ: ಕ್ರಿಪ್ಟೋ ಕರೆನ್ಸಿ ಹಗರಣ – ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ

  • ಆಕಸ್ಮಿಕ ಬೆಂಕಿಗೆ 30 ಹುಲ್ಲಿನ ಬಣವೆಗಳು ಸುಟ್ಟು ಭಸ್ಮ

    ಆಕಸ್ಮಿಕ ಬೆಂಕಿಗೆ 30 ಹುಲ್ಲಿನ ಬಣವೆಗಳು ಸುಟ್ಟು ಭಸ್ಮ

     ಬೇಸಿಗೆಯಲ್ಲಿ ಜಾನುವಾರುಗಳಿಗಾಗಿ ಮೇವು ಸಂಗ್ರಹಿಸಿಟ್ಟಿದ್ದ ರೈತರು

    ಬಳ್ಳಾರಿ: ಆಕಸ್ಮಿಕ ಬೆಂಕಿಗೆ (Fire) 30 ಹುಲ್ಲಿನ ಬಣವೆಗಳು (Haystacks) ಸುಟ್ಟು ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ (Huvinahadagali) ತಾಲೂಕಿನ ಸೋಗಿ ಗ್ರಾಮದಲ್ಲಿ ನಡೆದಿದೆ.

    ರೈತರು ತಮ್ಮ ಜಾನುವಾರುಗಳಿಗೆ ಬೇಸಿಗೆಗಾಗಿ ಸುಮಾರು 30 ಬಣವೆಗಳನ್ನ ಸಂಗ್ರಹಿಸಿಟ್ಟಿದ್ದರು. ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಷ್ಟೂ ಮೇವಿನ ಬಣವೆಗಳು ಸುಟ್ಟು ಹೋಗಿವೆ.

    ಬಣವೆ ಇರುವ ಭಾಗದಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ್ದ ರೈತರು (Farmers) ಸ್ಥಳಕ್ಕೆ ಹೋಗುವಷ್ಟರಲ್ಲಿ ಎಲ್ಲಾ ಬಣವೆಗಳಿಗೆ ಬೆಂಕಿ ತಗುಲಿತ್ತು. ಕೂಡಲೇ ರೈತರು ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಬಣವೆಗಳು ಬೆಂಕಿಗಾಹುತಿಯಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಬಣಗಳ ನಡುವೆ ಏಪ್ರಿಲ್ Vs ಡಿಸೆಂಬರ್ ವಾರ್!

    ರೈತರಾದ ರಫಿ, ನಾಗರಾಜ, ಆನಂದ, ಮಂಜವ್ವ, ಕೊಟ್ರೇಶ, ಖಾಜಾಸಾಬ್, ಜಿನ್ನಾಸಾಬ್, ಟಿ.ಬಸವರಾಜ, ನಾಗಪ್ಪ ತಳಕಲ್, ಕಾಗನೂರು ನಾಗರಾಜಪ್ಪ ಸೇರಿ ಒಟ್ಟು ಹತ್ತು ಜನ ರೈತರಿಗೆ ಸೇರಿದ್ದ ಲಕ್ಷಾಂತರ ಬೆಲೆ ಬಾಳುವ ಮೆಕ್ಕೆಜೋಳದ ಸಿಪ್ಪೆ ಹಾಗೂ ಭತ್ತದ ಹುಲ್ಲಿನ ಬಣವೆಗಳು ಬೆಂಕಿಗಾಹುತಿಯಾಗಿವೆ. ಇದನ್ನೂ ಓದಿ: ಮೂವರನ್ನು ಕೊಲೆ ಮಾಡಿದ್ದೇನೆ, ನಾನು ಸಾಯ್ತಿನಿ – ಅಮೆರಿಕದಲ್ಲಿರುವ ಅಣ್ಣನಿಗೆ ಫೋನ್‌ ಮಾಡಿ ಹೇಳಿದ್ದ ಚೇತನ್‌

    ಪ್ರತಿವರ್ಷ ಬೇಸಿಗೆಯ ಸಂದರ್ಭದಲ್ಲಿ ಯಾರೋ‌ ಕಿಡಿಗೇಡಿಗಳು ಮೇವಿನ ಬಣವೆಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಕಳೆದ ವರ್ಷವೂ ಇದೇ ರೀತಿ ಆಗಿತ್ತು ಎಂದು ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಇಟ್ಟಿಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

     

  • Bengaluru| ಅರಮನೆ ಮೈದಾನದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

    Bengaluru| ಅರಮನೆ ಮೈದಾನದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

    ಬೆಂಗಳೂರು: ಡೆಕೊರೇಷನ್ ವೇಸ್ಟ್ ವಸ್ತುಗಳು ಸ್ಟೋರ್ ಮಾಡಿದ್ದ ಜಾಗದಲ್ಲಿ ಏಕಾಏಕಿ ಬೆಂಕಿ (Fire) ಕಾಣಿಸಿಕೊಂಡ ಘಟನೆ ಪ್ಯಾಲೆಸ್ ಗ್ರೌಂಡ್‌ನಲ್ಲಿ (Palace Ground) ನಡೆದಿದೆ.

    ಡೆಕೊರೇಷನ್ (Decoration) ವೇಸ್ಟ್ ವಸ್ತುಗಳನ್ನು ಸಂಗ್ರಹ ಮಾಡುವ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಇದನ್ನೂ ಓದಿ: ಮುಂಬೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಕಾರ್ಮಿಕರು ಸಜೀವ ದಹನ

    ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಒಂದು ಅಗ್ನಿಶಾಮಕ ದಳ ದೌಡಾಯಿಸಿದೆ. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು: ಬಿ.ಕೆ ಹರಿಪ್ರಸಾದ್

  • ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – 6 ಹಸುಗಳು, 2 ಕರುಗಳು ಸಜೀವ ದಹನ

    ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – 6 ಹಸುಗಳು, 2 ಕರುಗಳು ಸಜೀವ ದಹನ

    ಹಾವೇರಿ: ಆಕಸ್ಮಿಕವಾಗಿ ದನದ ಕೊಟ್ಟಿಗೆಗೆ ( Cattle Shed) ಬೆಂಕಿಬಿದ್ದು 6 ಹಸುಗಳು (Cows) ಹಾಗೂ 2 ಕರುಗಳು (Calves) ಸಜೀವ ದಹನವಾಗಿರುವ ಘಟನೆ ಹಾವೇರಿ (Haveri) ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರೈತ ನಾಗಪ್ಪ ಅಸುಂಡಿ, ಹನುಮಂತಪ್ಪ ಅಸುಂಡಿ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ : ನಿಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಶುಭಹಾರೈಸುತ್ತೇನೆ: ದರ್ಶನ್‌ ಹುಟ್ಟುಹಬ್ಬಕ್ಕೆ ರಕ್ಷಿತಾ ಪ್ರೇಮ್‌ ವಿಶ್‌

    ಊರಿನ ಹೊರಗಿರುವ ದನದ ಕೊಟ್ಟಿಗೆಯಲ್ಲಿ ಹಸುಗಳನ್ನು ಕಟ್ಟಲಾಗಿತ್ತು. ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿಬಿದ್ದು 6 ಹಸು, 2 ಕರುಗಳು ಸ್ಥಳದಲ್ಲಿಯೇ ಸಜೀವ ದಹನಗೊಂಡಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

    ಸುಮಾರು 6 ಲಕ್ಷ ರೂ.ಗೂ ಅಧಿಕ ಮೌಲ್ಯದ ದನದ ಕೊಟ್ಟಿಗೆ ಮತ್ತು ಹಸುಗಳು ಸುಟ್ಟು ಕರಗಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ : ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಕುಂಭಮೇಳಕ್ಕೆ ಹೊರಟಿದ್ದ 18 ಭಕ್ತರು ಸಾವು

    ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.