Tag: ಬೆಂಗಳೂರು ಕೇಂದ್ರ

  • ಮಹಾದೇವಪುರದಲ್ಲಿ ಮತಗಳ್ಳತನ – ದಾಖಲೆ ಸಮೇತ ಮಾಹಿತಿ ಬಹಿರಂಗಪಡಿಸಿದ ರಾಹುಲ್ ಗಾಂಧಿ

    ಮಹಾದೇವಪುರದಲ್ಲಿ ಮತಗಳ್ಳತನ – ದಾಖಲೆ ಸಮೇತ ಮಾಹಿತಿ ಬಹಿರಂಗಪಡಿಸಿದ ರಾಹುಲ್ ಗಾಂಧಿ

    -ಸಂಜೆ 5 ಗಂಟೆ ಬಳಿಕ ಅತೀ ಹೆಚ್ಚು ಮತದಾನವಾಗುತ್ತದೆ 

    ನವದೆಹಲಿ: ಶುಕ್ರವಾರ ಬೆಂಗಳೂರಿಗೆ (Bengaluru) ಬರುವ ಮುನ್ನ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮಹಾದೇವಪುರದಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಲೋಕಸಭೆ ಚುನಾವಣೆ (Lokasabha Election) ವೇಳೆ ಮತಗಳ್ಳತನ ನಡೆದಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷ ನಾಯಕ ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದದಲ್ಲಿ ಬರುವ ಮಹಾದೇವಪುರದಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರೀ ಅಕ್ರಮ ಅಕ್ರಮ ನಡೆದಿದೆ ಎಂದು ದಾಖಲೆ ಸಮೇತವಾಗಿ ಆರೋಪಿಸಿದ್ದಾರೆ.ಇದನ್ನೂ ಓದಿ: 25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 16 ಸ್ಥಾನ ಹಾಗೂ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಅಚ್ಚರಿಯಾಗಿ ಸೋಲನ್ನು ಅನುಭವಿಸಿತು. ಹೀಗಾಗಿ ಕಡಿಮೆ ಅಂತರದಲ್ಲಿ ಸೋತ ಏಳು ಕ್ಷೇತ್ರಗಳ ಪೈಕಿ ಮಹಾದೇವಪುರ ಕ್ಷೇತ್ರದಲ್ಲಿ ತನಿಖೆ ನಡೆಸಿದೆವು. ಈ ವೇಳೆ ಕಾಂಗ್ರೆಸ್ 1,15,586 ಮತಗಳನ್ನು ಪಡೆದರೆ, ಬಿಜೆಪಿ 2,29,632 ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್‌ಗಿಂತ ಬಿಜೆಪಿ 1,14,046 ಮತಗಳ ಬಹುಮತ ಪಡೆದುಕೊಂಡಿದೆ. ಈ ಮತಗಳಲ್ಲಿ 11,965 ನಕಲಿ ಮತದಾರರು, 40,009 ನಕಲಿ ವಿಳಾಸದ ಮತಗಳು, ಒಂದೇ ವಿಳಾಸದಲ್ಲಿ ಹತ್ತಾರು ಮತಗಳಿರುವಂತಹ 10,452 ಮತಗಳು, ಫೋಟೋ ಇಲ್ಲದಿರುವ 4,132 ಹಾಗೂ ಫಾರಂ 6 ದುರ್ಬಳಕೆಯಾದ 33,692 ಮತಗಳಿವೆ ಸ್ಫೋಟಕ ಆರೋಪ ಮಾಡಿದರು.

    ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಚುನಾವಣೆ ಸೇರಿ ಹಲವೆಡೆ ಮತಗಳ್ಳತನ ಆಗಿದೆ. ಇನ್ನೂ ಕಳೆದ ಐದು ತಿಂಗಳಲ್ಲಿ ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ಮತದಾರರು ಸೇರ್ಪಡೆಯಾಗಿದ್ದಾರೆ. ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ. ಸಂಜೆ ಐದು ಗಂಟೆಯ ಬಳಿಕ ಅತಿ ಹೆಚ್ಚು ಮತದಾನವಾಗುತ್ತದೆ ಎಂದು ಆರೋಪಿಸಿದ್ದಾರೆ.

    ಈ ಕುರಿತು ನಾವು ಚುನಾವಣಾ ಆಯೋಗವನ್ನು ಸಂಪರ್ಕಿಸಿದರೆ ನಮಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಆಯೋಗ ನಮಗೆ ಮತದಾರರ ಪಟ್ಟಿ ನೀಡಲು ನಿರಾಕರಿಸಿದೆ. ಅದಲ್ಲದೇ ರಾಜಕೀಯ ಪಕ್ಷಗಳಿಗೂ ಕೂಡ ಮತದಾರರ ಪಟ್ಟಿ ನೀಡಿಲ್ಲ. ಜೊತೆಗೆ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ – ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ

  • ಕೊನೆಯಲ್ಲಿ ಕೈ ಹಿಡಿದ ಮಹಾದೇವಪುರ – ಸತತ 4ನೇ ಬಾರಿ ಪಿಸಿ ಮೋಹನ್‌ಗೆ ಜಯ

    ಕೊನೆಯಲ್ಲಿ ಕೈ ಹಿಡಿದ ಮಹಾದೇವಪುರ – ಸತತ 4ನೇ ಬಾರಿ ಪಿಸಿ ಮೋಹನ್‌ಗೆ ಜಯ

    ಬೆಂಗಳೂರು: ಬಹಳ ರೋಚಕತೆಯಿಂದ ಕೂಡಿದ ಬೆಂಗಳೂರು ಕೇಂದ್ರ (Bengaluru Central) ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಿಸಿ ಮೋಹನ್‌ (PC Mohan) ಜಯಗಳಿಸಿದ್ದಾರೆ. ಈ ಮೂಲಕ ಸತತ ನಾಲ್ಕನೇ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದಾರೆ.

    ಆರಂಭದಲ್ಲಿ ಮುನ್ನಡೆಯಲ್ಲಿದ್ದ ಪಿ. ಸಿ. ಮೋಹನ್ ನಂತರ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದರು. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ (Mansoor Ali Khan) ಈ ಬಾರಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ಲೇಷಣೆ ಒಂದು ಹಂತದಲ್ಲಿ ಬಂದಿತ್ತು.

    ಕೊನೆಯ ಹಂತದಲ್ಲಿ ಮಹದೇವಪುರ ಕ್ಷೇತ್ರದ ಜನ 1 ಲಕ್ಷಕ್ಕೂ ಹೆಚ್ಚು ಮತಗಳ ಲೀಡ್‌ ನೀಡಿದ ಪರಿಣಾಮ 32,707 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಸೋತು ಕಣ್ಣೀರಿಟ್ಟಿದ್ದ ಸೋಮಣ್ಣಗೆ ರಾಷ್ಟ್ರ ರಾಜಕಾರಣಕ್ಕೆ ಆಶೀರ್ವದಿಸಿದ ಮತದಾರ

    ಪಿಸಿ ಮೋಹನ್‌ 6,58,915 ಮತಗಳನ್ನು ಪಡೆದರೆ ಮನ್ಸೂರ್ ಅಲಿಖಾನ್ 6,26,208 ಮತಗಳನ್ನು ಪಡೆದರು. 2009 ರಿಂದ ಪಿಸಿ ಮೋಹನ್‌ ಈ ಕ್ಷೇತ್ರದಿಂದ ಗೆಲ್ಲುತ್ತಾ ಬಂದಿದ್ದಾರೆ.

    2019 ರ ಚುನಾವಣೆಯಲ್ಲಿ 70,968 ಮತಗಳಿಂದ, 2014 ರಲ್ಲಿ 1,37,500 ಮತಗಳಿಂದ, 2009 ರಲ್ಲಿ 35,2018 ಮತಗಳ ಅಂತರದಿಂದ ಪಿಸಿ ಮೋಹನ್‌ ಜಯಗಳಿಸಿದ್ದರು.

     

  • ರಿಜ್ವಾನ್ ನಾಮಪತ್ರ ಸಲ್ಲಿಕೆ ವೇಳೆ ಕೇಸರಿ ಆರ್ಭಟ!

    ರಿಜ್ವಾನ್ ನಾಮಪತ್ರ ಸಲ್ಲಿಕೆ ವೇಳೆ ಕೇಸರಿ ಆರ್ಭಟ!

    ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರ ನಾಮಪತ್ರ ಸಲ್ಲಿಕೆಯ ವೇಳೆ ಅವರ ಬೆಂಬಲಿಗರು ಕೇಸರಿ ಪೇಟಾ ತೊಟ್ಟು, ಕುಂಕುಮ ಇಟ್ಟುಕೊಂಡು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

    ಇಂದು ರಿಜ್ವಾನ್ ಅರ್ಷದ್ ಅವರು ನಾಮಪತ್ರ ಸಲ್ಲಿಸಲು ಮೆರವಣಿಗೆ ಮೂಲಕ ಬೆಂಬಲಿಗರೊಂದಿಗೆ ಸಾಗುತ್ತಿದ್ದರು. ಈ ವೇಳೆ ಅವರ ಬೆಂಬಲಿಗರೇ ಕೇಸರಿ ಪೇಟ ಹಾಗೂ ಕೇಸರಿ ಕುಂಕುಮ ತೊಟ್ಟು ರ್ಯಾಲಿಯಲ್ಲಿ ಭಾಗಿಯಾಗಿದ್ದ ದೃಶ್ಯ ಕಂಡುಬಂದಿತ್ತು. ಬಿಜೆಪಿ ಮಾತ್ರ ಹಿಂದೂಗಳ ಧ್ವನಿಯಲ್ಲ, ಕಾಂಗ್ರೆಸ್ ಕೂಡ ಹಿಂದೂಗಳ ಪರವಿದೆ ಎಂದು ಸಂದೇಶ ಸಾರಲು ರಿಜ್ವಾನ್ ಅರ್ಷದ್ ಬೆಂಬಲಿಗರು ಕುಂಕುಮ, ಪೇಟಾ ಧರಿಸಿದ್ದರು.

    ರಿಜ್ವಾನ್ ಅವರು ಕೇವಲ ಮುಸ್ಲಿಮರ ಪರವಾಗಿ ಮಾತ್ರ ಇರಲ್ಲ, ಹಿಂದೂಗಳ ಪರ ಕೂಡ ನಿಲ್ಲುತ್ತಾರೆ. ಇದರ ಸಂಕೇತವಾಗಿ ಕೇಸರಿ ಪೇಟಾ, ಕೇಸರಿ ಕುಂಕುಮ ತೊಟ್ಟಿದ್ದೇವೆ ಎಂದು ಹೇಳಿದ ರಿಜ್ವಾನ್ ಬೆಂಬಲಿಗರು ಕೇಸರಿ ಕೇವಲ ಬಿಜೆಪಿಯ ಸ್ವತ್ತಲ್ಲ ಎಂದು ಹೇಳಿ ಕಿಡಿಕಾರಿದರು.