Tag: ಬೆಂಗಳೂರು ಕೋರ್ಟ್‌

  • ನಟ ದರ್ಶನ್ & ಗ್ಯಾಂಗ್‌ ಇಂದು ಕೋರ್ಟ್‌ಗೆ – ದೋಷಾರೋಪ ಹೊರಿಸಲಿರುವ ಕೋರ್ಟ್‌

    ನಟ ದರ್ಶನ್ & ಗ್ಯಾಂಗ್‌ ಇಂದು ಕೋರ್ಟ್‌ಗೆ – ದೋಷಾರೋಪ ಹೊರಿಸಲಿರುವ ಕೋರ್ಟ್‌

    ಬೆಂಗಳೂರು: ನಟ ದರ್ಶನ್, ಪವಿತ್ರಾ ಗೌಡ (Pavithra Gowda) ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) 17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ (CCH 64 Court) ಮುಂದೆ ಹಾಜರಾಗಲಿದ್ದಾರೆ.

    ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದೆ. ಎ೧ ಆರೋಪಿ ಪವಿತ್ರಾಗೌಡ (Pavithra Gowda) ಅಂತಾ ಕೂಗಿದಾಗ ಕಟಕಟೆಗೆ ಬರಬೇಕಿದೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆಯತ್ನ, 364 ಕಿಡ್ನ್ಯಾಪ್, 202 ಸಾಕ್ಷಿನಾಶ ಕೇಸ್ ದಾಖಲಾಗಿದೆ. ಇದನ್ನ ನೀವು ಒಪ್ಕೊತೀರಾ ಅಥವಾ ಅಲ್ಲಗೆಳೆಯುತ್ತೀರಾ ಅಂತಾ ನ್ಯಾಯಾದೀಶರು ಕೇಳಲಿದ್ದಾರೆ.‌ ಇದನ್ನೂ ಓದಿ: ದೆಹಲಿಯಲ್ಲಿ ಅಕ್ರಮ ವಾಸ – 25 ಬಾಂಗ್ಲಾ ಪ್ರಜೆಗಳು ಅರೆಸ್ಟ್‌

    ಇಲ್ಲ ಸ್ವಾಮಿ ಇದೆಲ್ಲಾ ಸುಳ್ಳು ವಿಚಾರಣೆ ನಡೆಯಲಿ ಅಂತಾ ಆರೋಪಿಗಳು ಹೇಳಿಕೆ ನೀಡುವ ಸಾಧ್ಯತೆ ಇದೆ. ಇದೇ ರೀತಿ ಎಲ್ಲಾ 17 ಆರೋಪಿಗಳನ್ನ ಕರೆದು ಅವರ ಮೇಲೆ ದಾಖಲಾಗಿರೊ ಸೆಕ್ಷನ್ ಬಗ್ಗೆ ನ್ಯಾಯಾಧೀಶರು ವಿವರಣೆ ಕೇಳಲಿದ್ದಾರೆ. ಈ ಪ್ರಕ್ರಿಯೆ ಮುಗಿದ ಮೇಲೆ ದೊಷಾರೋಪ ನಿಗದಿ ಬಳಿಕ ಮುಂದೊಂದು ದಿನ ಟ್ರಯಲ್‌ಗೆ ದಿನಾಂಕ ನ್ಯಾಯಾಧೀಶರು ನಿಗದಿಪಡಿಸಲಿದ್ದಾರೆ. ಇದೇ ವೇಳೆ ಹಾಸಿಗೆ ತಲೆದಿಂಬು ನೀಡುವ ವಿಚಾರ ಕೂಡ ಚರ್ಚೆಗೆ ಬರುವ ಸಾಧ್ಯತೆ ಇದೆ. ಇದನ್ನೂ ಓದಿ: ಛತ್ತೀಸ್‌ಗಢ ಮದ್ಯ ಹಗರಣ | ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಎಸಿಬಿ ಕಸ್ಟಡಿಗೆ

  • ಬದುಕಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನಗೆ ವಿಷ ಕೊಡಿ: ಜಡ್ಜ್‌ ಮುಂದೆ ದರ್ಶನ್‌ ಮನವಿ

    ಬದುಕಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನಗೆ ವಿಷ ಕೊಡಿ: ಜಡ್ಜ್‌ ಮುಂದೆ ದರ್ಶನ್‌ ಮನವಿ

    ಬೆಂಗಳೂರು: ದಯಮಾಡಿ ನನಗೆ ವಿಷ (Poison) ಕೊಡಿ ಎಂದು ನಟ ದರ್ಶನ್‌ (Darshan) ನ್ಯಾಯಾಧೀಶರ (Judge) ಮುಂದೆ ಮನವಿ ಮಾಡಿದ್ದಾರೆ.

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ ಆರೋಪಿಗಳನ್ನು ರಾಜ್ಯದ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿ ಹಾಗೂ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ವಿಚಾರಣೆ ಇಂದು ನಗರದ 64ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು.

    ವಿಚಾರಣೆ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪರಪ್ಪನ ಅಗ್ರಹಾರದಿಂದ ಹಾಜರಾದ ದರ್ಶನ್‌, ನನಗೆ ದಯಮಾಡಿ ವಿಷ ನೀಡಿ. ಬಿಸಿಲು ನೋಡಿ ಬಹಳ ದಿನವಾಗಿದೆ. ಬಟ್ಟೆಗಳು ವಾಸನೆ ಬರುತ್ತಿವೆ. ಫಂಗಸ್‌ನಿಂದಾಗಿ ಇಲ್ಲಿ ಬದುಕಲು ಆಗುತ್ತಿಲ್ಲ. ದಯಮಾಡಿ ನನಗೆ ವಿಷ ನೀಡುವಂತೆ ಆದೇಶಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ದರ್ಶನ್ ಅಮೇಝಿಂಗ್ ವ್ಯಕ್ತಿ ಕ್ರಾಂತಿ ಸೆಟ್‍ನ ಮೆಲುಕು ಹಾಕಿದ ಪುಷ್ಪವತಿ

     

    ಈ ಮನವಿಗೆ ಜಡ್ಜ್‌ ಹಾಗೆಲ್ಲ ಆದೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ವಿಷ ಕೊಡಿ ಎಂದು ದರ್ಶನ್‌ ಮೂರು ಬಾರಿ ಬೇಡಿಕೊಂಡರೆ ಫಂಗಸ್‌ ಆಗಿದೆ ಎಂದು ಹಲವು ಬಾರಿ ಅಳಲು ತೋಡಿಕೊಂಡರು.  ದೈವ ಭಕ್ತರಾಗಿರುವ ದರ್ಶನ್‌ ಇಂದು ಹಣೆಗೆ ಕುಂಕುಮ ಹಚ್ಚಿಕೊಂಡು ವಿಚಾರಣೆಗೆ ಹಾಜರಾಗಿದ್ದು ವಿಶೇಷವಾಗಿತ್ತು.

    ಪ್ರಾಸಿಕ್ಯೂಷನ್ ಮತ್ತು ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್‌ ಇಂದು ಮಧ್ಯಾಹ್ನ 3 ಗಂಟೆಗೆ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

  • ಟೆಕ್ಕಿ ಅತುಲ್ ಸುಭಾಶ್‌ ಆತ್ಮಹತ್ಯೆ ಕೇಸ್‌- ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

    ಟೆಕ್ಕಿ ಅತುಲ್ ಸುಭಾಶ್‌ ಆತ್ಮಹತ್ಯೆ ಕೇಸ್‌- ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

    ಬೆಂಗಳೂರು: ಟೆಕ್ಕಿ ಅತುಲ್ ಸುಭಾಶ್‌ (Atul Subhash) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಮೂವರು ಆರೋಪಿಗಳಿಗೆ ಬೆಂಗಳೂರು ನ್ಯಾಯಾಲಯ (Bengaluru Court) ಜಮೀನು ಮಂಜೂರು ಮಾಡಿದೆ.

    ನಿಖಿತಾ ಸಿಂಘಾನಿಯಾ, ನಿಶಾ ಸಿಂಘಾನಿಯ ಹಾಗೂ ಅನುರಾಗ್ ಸಿಂಘಾನಿಯಾಗೆ 29ನೇ ಸಿಸಿಹೆಚ್ ಕೋರ್ಟ್ ಜಾಮೀನು (Bail) ನೀಡಿದೆ. ಇದನ್ನೂ ಓದಿ: ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್‌ ಮೇಲೆ ಕೇಸ್‌ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌

    ಅತುಲ್ ಆತ್ಮಹತ್ಯೆ ಸಂಬಂಧ ಮೂವರನ್ನ ಬಂಧಿಸಿದ್ದ ಮಾರತಹಳ್ಳಿ ಪೊಲೀಸರು ಬಂಧಿಸಿತ್ತು. ಬಂಧನ ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್‌ ಜ.4 ರಂದು ಜಾಮೀನು ಅರ್ಜಿ ಇತ್ಯರ್ಥ ಮಾಡುವಂತೆ ಕೆಳ ನ್ಯಾಯಾಲಯಕ್ಕೆ ಸೂಚಿಸಿತ್ತು.ಈ ಹಿನ್ನಲೆಯಲ್ಲಿ ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಹೆತ್ತ ಮಗು ತನ್ನ ಬಳಿಯಿಲ್ಲದಿದ್ದರೂ ಅನಾಥ ಮಕ್ಕಳಿಗೆ ಸಹಾಯ – ಅತುಲ್ ಸಮಾಜಮುಖಿ ಕಾರ್ಯಕ್ಕೆ ಮನಸೋತ ಸ್ನೇಹಿತರು

    ಏನಿದು ಪ್ರಕರಣ?
    ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಡಿ.9 ರಂದು ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಡೆಪ್ಯೂಟಿ ಮ್ಯಾನೇಜರ್‌ ಆಗಿದ್ದ ಇವರು ಸುಮಾರು 40 ಪುಟಗಳ ಡೆತ್ ನೋಟ್ ಬರೆದಿದ್ದ ಇವರು, ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿ ತಾನು ಅನುಭವಿಸಿದ್ದ ಸಂಕಷ್ಟಗಳನ್ನು ವಿವರಿಸಿದ್ದರು.

     

  • `ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’ ಎಂದಿದ್ದ ಉದಯನಿಧಿ – ಇಂದು ಬೆಂಗ್ಳೂರು ಕೋರ್ಟ್‌ಮುಂದೆ ಹಾಜರ್‌ ಸಾಧ್ಯತೆ

    `ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’ ಎಂದಿದ್ದ ಉದಯನಿಧಿ – ಇಂದು ಬೆಂಗ್ಳೂರು ಕೋರ್ಟ್‌ಮುಂದೆ ಹಾಜರ್‌ ಸಾಧ್ಯತೆ

    ಬೆಂಗಳೂರು: ಸನಾತನ ಧರ್ಮ (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಅವರಿಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (Representatives Speical Court) ಮುಂದೆ ಹಾಜರಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

    ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ 5 ತಿಂಗಳ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ನೀಡಿತ್ತು. ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಕಳೆದ ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿತ್ತು. ಆದ್ರೆ ಕಾರಣಾಂತರದಿಂದ ಗೈರಾಗಿದ್ದ ಉದಯನಿಧಿ ಸ್ಟಾಲಿನ್‌ ಅವರಿಂದು ಬೆಳಗ್ಗೆ 10:30ರ ವೇಳೆಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌

    ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ 5 ತಿಂಗಳ ಹಿಂದೆ ಸಮನ್ಸ್‌ ಜಾರಿಗೊಳಿಸಿತ್ತು.

    ಏನಿದು ಪ್ರಕರಣ?
    2023ರ ಸೆಪ್ಟೆಂಬರ್‌ 3 ರಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಉದಯನಿಧಿ ಸ್ಟಾಲಿನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ – ಉದಯನಿಧಿ ಸ್ಟಾಲಿನ್‌ಗೆ ಹೈಕೋರ್ಟ್‌ ರಿಲೀಫ್‌

    ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು. “ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅದನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ಕೊಟ್ಟಿದ್ದರು. ಈ ಸಂಬಂಧ ದೇಶಾದ್ಯಂತ ಪ್ರತಿಪಕ್ಷ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಇದರ ಹೊರತಾಗಿಯೂ ಉದಯನಿಧಿ ಸ್ಟಾಲಿನ್‌ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

  • `ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’ ಎಂದಿದ್ದ ಉದಯನಿಧಿಗೆ ಬೆಂಗ್ಳೂರು ಕೋರ್ಟ್‌ನಿಂದ ಸಮನ್ಸ್

    `ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’ ಎಂದಿದ್ದ ಉದಯನಿಧಿಗೆ ಬೆಂಗ್ಳೂರು ಕೋರ್ಟ್‌ನಿಂದ ಸಮನ್ಸ್

    – ಖುದ್ದು ವಿಚಾರಣೆಗೆ ಹಾಜರಾಗಲು ಸೂಚನೆ

    ಬೆಂಗಳೂರು: ಸನಾತನ ಧರ್ಮ (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ ಬೆಂಗಳೂರು ಕೋರ್ಟ್ (Bengaluru Court) ಸಮನ್ಸ್ ನೀಡಿದೆ.

    ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ (Udhayanidhi Stalin) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ನೀಡಿದ್ದು, ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿದೆ. ಇದನ್ನೂ ಓದಿ: ಸನಾತನ ಧರ್ಮವನ್ನು ಕೊನೆವರೆಗೂ ವಿರೋಧಿಸುತ್ತೇನೆ: ಉದಯನಿಧಿ ಸ್ಟಾಲಿನ್‌

    ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ ಸಮನ್ಸ್‌ ಜಾರಿಗೊಳಿಸಿದೆ. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌

    ಏನಿದು ಪ್ರಕರಣ?
    2023ರ ಸೆಪ್ಟೆಂಬರ್‌ 3 ರಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಉದಯನಿಧಿ ಸ್ಟಾಲಿನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಬಿಜೆಪಿ 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ- ಖರ್ಗೆ ಹೇಳಿಕೆಗೆ ಜೋರಾಗಿ ನಕ್ಕ ಪ್ರಧಾನಿ

    ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು. “ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅದನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ಕೊಟ್ಟಿದ್ದರು. ಈ ಸಂಬಂಧ ದೇಶಾದ್ಯಂತ ಪ್ರತಿಪಕ್ಷ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು.