Tag: ಬೆಂಗಳೂರು ಗ್ರಾಮಂತರ

  • ಸ್ನೇಹಿತರ ಮನೆಗೆ ಹಬ್ಬಕ್ಕೆ ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು

    ಸ್ನೇಹಿತರ ಮನೆಗೆ ಹಬ್ಬಕ್ಕೆ ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು

    ಆನೇಕಲ್: ಸ್ನೇಹಿತರ ಮನೆಗೆ ಹಬ್ಬಕ್ಕೆಂದು ಬಂದಿದ್ದ ವ್ಯಕ್ತಿ ರೈಲು ಹಳಿ (Track) ದಾಟುವ ಸಂದರ್ಭ ರೈಲಿಗೆ (Train) ಸಿಲುಕಿ ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ಸಮೀಪದ ಅರವಂಟಿಗೆಪುರ ರೈಲ್ವೆ ಗೇಟ್ ಬಳಿ ನಡೆದಿದೆ.

    ಚಿತ್ರದುರ್ಗ (Chitradurga) ಮೂಲದ ರಾಮು (40) ಮೃತ ವ್ಯಕ್ತಿ. ಬೊಮ್ಮಸಂದ್ರದ (Bommasandra) ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಮು ಮಂಗಳವಾರ ಸ್ನೇಹಿತರ ಜೊತೆಗೆ ಹಬ್ಬಕ್ಕೆ ಬಂದಿದ್ದರು. ರೈಲ್ವೆ ಹಳಿ ಸಮೀಪವೇ ಸಂಜೆ ಸ್ನೇಹಿತರ ಜೊತೆಗೆ ಎಣ್ಣೆ ಪಾರ್ಟಿ ಮಾಡಿದ್ದು, ಕುಡಿದ ಮತ್ತಿನಲ್ಲಿ ರೈಲ್ವೆ ಟ್ರ‍್ಯಾಕ್ ದಾಟಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡಿದ್ದಾರೆ. ಇದನ್ನೂ ಓದಿ: ಮಡಿಕೇರಿ ದಸರಾ ಶೋಭಯಾತ್ರೆ ವೇಳೆ ಅವಘಡ – ಇಬ್ಬರಿಗೆ ಗಾಯ

    ರೈಲು ಬರುತ್ತಿರುವುದನ್ನು ಗಮನಿಸದೇ ರಾಮು ಹಳಿ ದಾಟಲು ಯತ್ನಿಸಿದ್ದು, ಈ ವೇಳೆ ರೈಲು ಡಿಕ್ಕಿ ಹೊಡೆದು ದೇಹ ಛಿದ್ರ ಛಿದ್ರವಾಗಿದೆ. ಮೃತ ದೇಹವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಈ ಕುರಿತು ಬೈಯಪ್ಪನಹಳ್ಳಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಾಜಿ ಸಿಎಂ ಹರೀಶ್ ರಾವತ್ ಇದ್ದ ಕಾರು ಡಿವೈಡರ್‌ಗೆ ಡಿಕ್ಕಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಸ ವರ್ಷ ಸಂಭ್ರಮಾಚರಣೆ ಮುಗಿಸಿ ಬರೋವಾಗ ಡಿವೈಡರ್‌ಗೆ ಕಾರು ಡಿಕ್ಕಿ- ಸ್ಥಳದಲ್ಲೇ ಮೂವರ ದುರ್ಮರಣ

    ಹೊಸ ವರ್ಷ ಸಂಭ್ರಮಾಚರಣೆ ಮುಗಿಸಿ ಬರೋವಾಗ ಡಿವೈಡರ್‌ಗೆ ಕಾರು ಡಿಕ್ಕಿ- ಸ್ಥಳದಲ್ಲೇ ಮೂವರ ದುರ್ಮರಣ

    ಬೆಂಗಳೂರು: ಡಿವೈಡರ್‌ಗೆ ಟಾಟಾ ಸಫಾರಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ನಡೆದಿದೆ.

    ಬೆಳಗಿನ ಜಾವ ಮೂರು ಗಂಟೆ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಆಂಧ್ರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಆಂಧ್ರದ ಪಶ್ಚಿಮ ಗೋದಾವರಿ ಮೂಲದ ಶ್ರೀನಾಥ್(40), ಶ್ರೀಲೇಖಾ(36), ಶ್ರೀಲತಾ(32) ಮೃತ ದುರ್ದೈವಿಗಳು.

    ಹೊಸ ವರ್ಷಾಚರಣೆ ಮುಗಿಸಿ ಆಂಧ್ರದಿಂದ ಬೆಂಗಳೂರಿನ ವೈಟ್ ಫೀಲ್ಡ್ ನತ್ತ 5 ಮಂದಿ ಕಾರಿನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಬರುತ್ತಿದ್ದ ವೇಳೆ ಡಿವೈಡರ್‌ಗೆ ಟಾಟಾ ಸಫಾರಿ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಘಟನೆ ಕುರಿತು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv