ಬೆಂಗಳೂರು: ದೀಪಾವಳಿ ಹಬ್ಬಕ್ಕೆ (Deepavali festival) ಸಾಲು ಸಾಲು ರಜೆ ಹಿನ್ನೆಲೆ ತಮ್ಮ ಊರುಗಳಿಗೆ ತೆರಳಿದ್ದ ಜನ, ರಜೆ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಈ ಹಿನ್ನೆಲೆ ನಗರದ ವಿವಿಧೆಡೆ ಟ್ರಾಫಿಕ್ ಜಾಮ್ (Traffic Jam) ಸಮಸ್ಯೆ ಉಂಟಾಗಿದೆ.
ಬೆಂಗಳೂರು-ತುಮಕೂರು ರಸ್ತೆ (Bengaluru Tumkur Road), ಕೆ.ಆರ್ ಪುರಂ ಮುಖ್ಯರಸ್ತೆ ಹಾಗೂ ಗೊರಗುಂಟೆಪಾಳ್ಯದಿಂದ ಗೋವರ್ಧನ್ ವೃತ್ತದ ವರೆಗೂ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾನುವಾರ ತಡರಾತ್ರಿಯಿಂದಲೇ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದ್ದು, ಇದರಿಂದ ಅನ್ಯಜಿಲ್ಲೆಯ ಉದ್ಯೋಗಿಗಳು ಪರದಾಡುವಂತಾಗಿದೆ. ಇದನ್ನೂ ಓದಿ: Canada | ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಲಿಸ್ತಾನಿ ಗುಂಪು ಅಟ್ಯಾಕ್ – ಜಸ್ಟಿನ್ ಟ್ರುಡೋ ಖಂಡನೆ
ಮೆಟ್ರೋದತ್ತ ಮುಖ ಮಾಡಿದ ಜನ:
ದೀಪಾವಳಿ ರಜೆ ಮುಗಿಸಿ ಬೆಂಗಳೂರಿನತ್ತ ಜನ ದಾಂಗುಡಿ ಇಡುತ್ತಿದ್ದಾರೆ. ಹೀಗಾಗಿ ತುಮಕೂರು ರಸ್ತೆಯಲ್ಲಿ ಜನರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಟ್ರಾಫಿಕ್‌ಗೆ ಬೇಸತ್ತು ನಾಗಸಂಧ್ರ ಮೆಟ್ರೋ ನಿಲ್ದಾಣದ ಬಳಿ ಇಳಿದು ಜನ ಮೆಟ್ರೋ ಸಂಚಾರದ ಮೊರೆ ಹೋಗುತ್ತಿದ್ದಾರೆ. ಈ ಹಿನ್ನಲೆ ನಾಗಸಂಧ್ರ ಮೆಟ್ರೋ ನಿಲ್ದಾಣ ಫುಲ್ ರಶ್ ಆಗಿದೆ.
ಬೆಂಗಳೂರು: ಇಲ್ಲಿನ ಸಂಚಾರಿ ಪೊಲೀಸ್ (Bengaluru Traffic Police) ಇಲಾಖೆಯ ಕೇಂದ್ರ ಕಚೇರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwara) ಭೇಟಿ ನೀಡಿ ಸಂಚಾರಿ ವಿಭಾಗ ಮುಖ್ಯಸ್ಥ ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಮತ್ತು ನಿರ್ವಹಣೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಅತಿ ಹೆಚ್ಚು ವಾಹನಗಳು ಬೆಂಗಳೂರು ನಗರದಲ್ಲಿವೆ. ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ. ನಗರದಲ್ಲಿ 1.16 ಲಕ್ಷ ವಾಹನಗಳಿವೆ, 70% ಭಾಗ ದ್ವಿಚಕ್ರ ವಾಹನಗಳಿವೆ. ಆ ಕಾಲಕ್ಕೆ ರಸ್ತೆ ಎಷ್ಟು ಬೇಕು ಅಷ್ಟು ಮಾಡಿದ್ದರು. ಇರುವಂತ ಸೌಲಭ್ಯ ಬಳಸಿಕೊಂಡು ಮ್ಯಾನೇಜ್ ಮಾಡ್ತಿದ್ದಾರೆ. ಬಿಬಿಎಂಪಿಯವರು, ಬಿಎಂಟಿಸಿಯವರು ಇದಕ್ಕೆ ಸಾಥ್ ನೀಡಬೇಕು ಎಂದು ಮನವಿ ಮಾಡಿದರು.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಸಮಸ್ಯೆ (Bengaluru Traffic Problem) ನಿವಾರಣೆಗೆ ಸರ್ಕಾರ ಸುರಂಗ ಮಾರ್ಗದ ಮೊರೆ ಹೋಗಿದೆ. 50 ಕೋಟಿ ರೂ. ವೆಚ್ಚದಲ್ಲಿ 6 ಕಡೆ ಸುರಂಗ ಮಾರ್ಗ ಮಾಡಲು ಮುಂದಾಗಿದೆ. ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಕನಿಷ್ಠ 5 ವರ್ಷ ಸಮಯ ಬೇಕಾಗಲಿದೆ. ಈ ನಡುವೆ ಸುರಂಗ ಮಾರ್ಗ ನಿರ್ಮಾಣದ ಹೊಣೆ BBMP ಗಾ? ಅಥವಾ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕಾ? (BDA) ಅನ್ನೋ ಪ್ರಶ್ನೆ ಎದ್ದಿದೆ.
ಬ್ರ‍್ಯಾಂಡ್ ಬೆಂಗಳೂರು ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರದ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ (DK Shivakumar) ಜನರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸಾರ್ವಜನಿಕರಿಂದ ಹಲವಾರು ಸಲಹೆಗಳು ಬರ್ತಿವೆ, ಅದರಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಒಂದು. ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಜೋರಾಗಿದ್ದು ಕಿರಿ-ಕಿರಿಗೆ ಪೊಲೀಸರು ಹೈರಾಣಾಗಿದ್ದಾರೆ. ಹಾಗಾಗಿ ಸರ್ಕಾರ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸುರಂಗ ಮಾರ್ಗದ (Subway Road) ಮೊರೆಹೋಗಿದೆ. 50 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ರಸ್ತೆಗಳ ನಿರ್ಮಾಣಕ್ಕೆ ಪ್ಲ್ಯಾನ್ ಮಾಡುತ್ತಿದೆ. ಇದನ್ನೂ ಓದಿ: ಜಗದೀಶ್ ಆತ್ಮಹತ್ಯೆ ಯತ್ನಕ್ಕೆ ಚಲುವರಾಯಸ್ವಾಮಿ ಕಾರಣ- ಗೆಳೆಯರು, ಕುಟುಂಬಸ್ಥರು ಆಕ್ರೋಶ
ಸುರಂಗ ರಸ್ತೆ ಮಾರ್ಗಗಳ ನಿರ್ಮಾಣ ಬಗ್ಗೆ ಬೇರೆ ದೇಶಗಳ ತಾಂತ್ರಿಕ ತಜ್ಞರಿಂದಲೂ ಸಲಹೆ ಮತ್ತು ಸುರಂಗ ನಿರ್ಮಾಣ ಸಲಹಾ ಸಂಸ್ಥೆ ಅಧಿಕಾರಿಗಳಿಂದಲೂ ಸರ್ಕಾರ ಸಲಹೆ ಪಡೆದಿದೆ. 2 ಹಂತಗಳಲ್ಲಿ ಸುರಂಗ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿದ್ದು, 22 ಸಾವಿರ ಕೋಟಿ ವೆಚ್ಚದಲ್ಲಿ 50 ಕಿಮೀ ರಸ್ತೆ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಸುರಂಗ ಮಾರ್ಗವನ್ನ 4 ಅಥವಾ 6 ಪಥದಲ್ಲಿ ನಿರ್ಮಾಣ ಮಾಡಲು ಚಿಂತನೆ ನಡೆದಿದೆ. ಸರ್ಕಾರದ ನಿರ್ಧಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಟನಲ್ ನಿರ್ಮಾಣ ಮಾಡೋಕೆ ಹೋಗಿ ಬೆಂಗಳೂರನ್ನ ಸಮಾಧಿ ಮಾಡಬೇಡಿ. ವೈಜ್ಞಾನಿಕವಾಗಿ ಕೆಲಸ ಮಾಡಿ ಅಂತಾ ಸಲಹೆ ನೀಡಿದ್ದಾರೆ.
* ಉತ್ತರದಿಂದ ದಕ್ಷಿಣ ಕಾರಿಡಾರ್ – ಒಟ್ಟು 27 ಕಿ.ಮೀ
ಬಳ್ಳಾರಿ ರಸ್ತೆಯಿಂದ ಹೊಸೂರು ರೋಡ್
ಯಲಹಂಕ – ಮೇಖ್ರಿ ಸರ್ಕಲ್ ಮಾರ್ಗವಾಗಿ ಕೇಂದ್ರೀಯ ರೇಷ್ಮೆಮಂಡಳಿ
* ಪೂರ್ವದಿಂದ ಪಶ್ಚಿಮ ಕಾರಿಡಾರ್ 1 – ಒಟ್ಟು 29 ಕಿ.ಮೀ
ಕೆ.ಆರ್ ಪುರದಿಂದ ಗೊರಗುಂಟೆ ಪಾಳ್ಯ
ಹಳೇ ಮದ್ರಾಸ್ ರಸ್ತೆ – ಐಟಿಪಿಎಲ್ – ವರ್ತುಲ ರಸ್ತೆ
ರಾಮಮೂರ್ತಿ ನಗರ ಕಡೆಯಿಂದ ಹೊರಗುಂಟೆ ಪಾಳ್ಯ
* ಪೂರ್ವದಿಂದ ಪಶ್ಚಿಮ ಕಾರಿಡಾರ್ 2 – ಒಟ್ಟು 28.90 ಕಿ.ಮೀ
ಹಳೇ ಏರ್‌ಪೋರ್ಟ್ ರಸ್ತೆಯಿಂದ ಮೈಸೂರು ರಸ್ತೆ
ವರ್ತೂರು ಕೋಡಿಯಿಂದ ಜ್ಞಾನಭಾರತಿವರೆಗೆ
* ಸಂಪರ್ಕ ಕಾರಿಡಾರ್ 1 – ಒಟ್ಟು 4.5 ಕಿ.ಮೀ
ಸೇಂಟ್ ಜಾನ್ ಆಸ್ಪತ್ರೆ ಜಂಕ್ಷನ್‌ನಿಂದ ಅಗರ ವರೆಗೆ * ಸಂಪರ್ಕ ಕಾರಿಡಾರ್ 2 – ಒಟ್ಟು 2.8 ಕಿ.ಮೀ * ಸಂಪರ್ಕ ಕಾರಿಡಾರ್ 3 – ಒಟ್ಟು 6.45 ಕಿ.ಮೀ
ವೀಲರ್ಸ್ ರಸ್ತೆ ಜಂಕ್ಷನ್‌ನಿಂದ ಹೊರವರ್ತುಲದ ಕಲ್ಯಾಣನಗರಕ್ಕೆ
ಬೆಂಗಳೂರು: ಕಳೆದ ವಾರ ಸುರಿದ ಮಳೆಯಿಂದ `ಬ್ರ್ಯಾಂಡ್ ಬೆಂಗಳೂರು’ ಹೆಸರು ಸಹ ನೀರಿನಲ್ಲಿ ಕೊಚ್ಚಿ ಹೋಗ್ತಿದೆ. ಐಟಿ-ಬಿಟಿ ಸಿಟಿ ಎಂದೇ ಹೆಸರಾದ ಬೆಂಗಳೂರಿಗೆ ಐಟಿ ಕಂಪನಿಗಳು ವಲಸೆ ಎಚ್ಚರಿಕೆ ನೀಡಿ ಶಾಕ್ ಕೊಟ್ಟಿವೆ.
ಹೌದು. ಬೆಂಗಳೂರು ಅಂದ್ರೆ ಐಟಿ-ಬಿಟಿ ಹಬ್ ಎಂದೇ ಖ್ಯಾತಿ. ಆದರೀಗ ಒಂದು ದಿನದ ಮಳೆಗೆ ಬ್ರಾ÷್ಯಂಡ್ ಬೆಂಗಳೂರು ಹೆಸರೇ ಬರ್ಬಾದ್ ಆಗ್ತಿದ್ದು, ಬೆಂಗಳೂರಿನಿಂದ ಐಟಿ ಕಂಪನಿಗಳು ವಲಸೆ ಹೋಗುವ ಎಚ್ಚರಿಕೆ ನೀಡಿವೆ. ಹೊರವರ್ತುಲ ರಸ್ತೆ ಕಂಪನಿಗಳ ಅಸೋಸಿಯೇಷನ್ ಖುದ್ದು ಈ ಬಗ್ಗೆ ಸಿಎಂಗೆ ಪತ್ರ ಬರೆದಿದೆ. ಇದನ್ನೂ ಓದಿ: ಅನಧಿಕೃತ ಖಾಸಗಿ ಶಾಲೆಗಳ ತೆರವಿಗೆ ಕ್ರಮ- ಎಲ್ಲ ಶಾಲೆಗಳಿಗೂ ಈ ನಿಯಮ ಕಡ್ಡಾಯ
ಕಳೆದ ವಾರ ಸತತ ಮರ‍್ನಾಲ್ಕು ದಿನ ಸುರಿದ ಮಹಾಮಳೆಗೆ ಐಟಿ ಕಂಪನಿಗಳು ಭಾರೀ ನಷ್ಟ ಅನುಭವಿಸಿವೆ. ಅದ್ರಲ್ಲೂ ಆಗಸ್ಟ್ 30 ರಂದು ಸುರಿದ ಮಳೆಯಿಂದಾಗಿ 5 ಗಂಟೆ ಹೊರವರ್ತುಲದ ರಸ್ತೆಯಲ್ಲಿ ಟೆಕ್ಕಿಗಳು ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ರು. ಐಟಿ ಕಂಪನಿಗಳ ಒಳಭಾಗಕ್ಕೆಲ್ಲಾ ನೀರು ನುಗ್ಗಿತ್ತು. ಇವೆಲ್ಲದರ ಪರಿಣಾಮ 255 ಕೋಟಿ ರೂ ನಷ್ಟವಾಗಿದೆ. ಈ ಹೊರವರ್ತುಲ ರಸ್ತೆಯ ಕಳಪೆ ಕಾಮಗಾರಿ ನಿರ್ವಹಣೆ ಮೂಲ ಸೌಕರ್ಯಗಳ ಕೊರತೆ, ಮಳೆ ಬಂದಾಗ ಆಗುವ ಅವಾಂತರದಿಂದ ಕಂಪನಿಗಳಿಗೆ ಭಾರೀ ನಷ್ಟವಾಗಿದೆ. ಇದನ್ನೂ ಓದಿ: ʻಪೊನ್ನಿಯನ್ ಸೆಲ್ವನ್’ ಚಿತ್ರದ ಗಾಯಕ ಬಂಬಾ ಬಕ್ಯಾ ನಿಧನ
ಸಂಚಾರ ದಟ್ಟಣೆ ನಿರ್ವಹಣೆಗೆ ತೆಗೆದುಕೊಂಡ ಕ್ರಮ ಯಾವುದು? ದೀರ್ಘಕಾಲಿಕ, ತಾತ್ಕಾಲಿಕವಾಗಿ ಯಾವ ರೀತಿಯ ಕ್ರಮಗಳು ಆಗಿದೆ ಅಂತಾ ಪ್ರಶ್ನಿಸಿ ಪತ್ರ ಬರೆದಿದ್ದಾರೆ. ಅಲ್ಲದೇ ಐಟಿ ಕಂಪನಿಗಳು ಅನಿವಾರ್ಯವಾಗಿ ಬೇರೆ ಕಡೆ ವಲಸೆ ಹೋಗಬೇಕಾಗುತ್ತದೆ. ಜೊತೆಗೆ ತಮ್ಮ ಹೂಡಿಕೆಗಳನ್ನು ವಾಪಸ್ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.
ಈ ಬಗ್ಗೆ ಮಾತನಾಡಿರುವ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಐಟಿ ಕಂಪನಿಯವರು ಪದೇ-ಪದೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಕ್ಕೆ ಬಹುದೊಡ್ಡ ಆದಾಯ ತರುವ ವಲಯವನ್ನ ನಿರ್ಲಕ್ಷ್ಯ ಮಾಡೋದು ಸರಿಯಲ್ಲ. ನಿಮ್ಮ ದುರಾಸೆ ಸಾಕು. ಕಳಪೆ ಕಾಮಗಾರಿಯಿಂದ ಬೆಂಗಳೂರಿಗೆ ಸಾಕಾಗಿದೆ ಅಂತಾ ಅಸಮಾಧಾನ ಹೊರಹಾಕಿದ್ದಾರೆ. ಐಟಿ ಉದ್ಯೋಗಿಗಳು ಕೂಡ ಸರ್ಕಾರದ ಆಕ್ರೋಶ ಹೊರಹಾಕಿದ್ದಾರೆ ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಐಟಿ ಕಂಪನಿಗಳ ಬೇಡಿಕೆಗಳೇನು?
ಕೆ.ಆರ್.ಪುರ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ ಸುಧಾರಣೆ ಮಾಡಬೇಕು.
ಬಿಎಂಟಿಸಿಯಿಂದ ವೋಲ್ವೋ ಮತ್ತು ವಿದ್ಯುತ್ ಚಾಲಿತ ಬಸ್ ಸೌಲಭ್ಯ ಕಲ್ಪಿಸಬೇಕು.
ರಸ್ತೆ ಬದಿಗಳಲ್ಲಿ ಪಾರ್ಕಿಂಗ್ ನಿಷೇಧಿಸಬೇಕು.
ಪಾದಚಾರಿ ಮಾರ್ಗ ಮತ್ತು ಸೈಕಲ್ ಮಾರ್ಗ ನಿರ್ಮಿಸಬೇಕು.
ಪ್ರತಿ 500 ಮೀಟರ್‌ಗೊಂದು ಪಾದಚಾರಿ ಮೇಲ್ಸೇತುವೆ ನಿರ್ಮಿಸಬೇಕು.
ರಸ್ತೆ, ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಬೇಕು.
ಖಾಸಗಿ ಕಂಪನಿಗಳ ಬಸ್ ನಿಲ್ಲಿಸಲು ಅವಕಾಶ ಮಾಡಿಕೊಡಬೇಕು.
ಸರ್ಕಾರಕ್ಕೆ ನೀಡಿದ ಸಲಹೆಗಳೇನು?
ಐಟಿ ಕಾರಿಡಾರ್‌ನಲ್ಲಿ ಮೂಲಸೌಕರ್ಯ ಒದಗಿಸಿ.
ಟ್ರಾಫಿಕ್ ಸುಧಾರಣೆಗೆ ಅಂಡರ್‌ಪಾಸ್, ಮೇಲ್ಸೇತುವೆ ನಿರ್ಮಾಣ ಮಾಡಬಹುದು.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸ್ಫೋಟದ ನಡುವೆ ರೋಹಿಣಿ ಮಳೆಯ ಅಬ್ಬರ ಮುಂದುವರಿದಿದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ.
ಬೆಂಗಳೂರಿನಲ್ಲಿ ಸತತ ನಾಲ್ಕನೇ ದಿನವೂ ಸಂಜೆ ಬಿರುಗಾಳಿ ಸಹಿತ ಜೋರು ಮಳೆಯಾಗಿದೆ. ವಾಯು ಮತ್ತು ವರುಣದೇವನ ಅಬ್ಬರಕ್ಕೆ ನಗರದ ಹಲವೆಡೆ 40ಕ್ಕೂ ಹೆಚ್ಚು ಮರಗಳು ಉರುಳಿದ್ದು, ಹಲವು ವಾಹನ ಜಖಂ ಆಗಿದೆ. ಕೆಆರ್ ವೃತ್ತದಲ್ಲಿ ಚಲಿಸುವ ಕಾರಿನ ಮೇಲೆ ಮರ ಬಿದ್ದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಮಲ್ಲೇಶ್ವರಂನಲ್ಲಿ ಕಟ್ಟವೊಂದಕ್ಕೆ ಹಾನಿಯಾಗಿದ್ದು, ಕಾರೊಂದು ಸಂಪೂರ್ಣವಾಗಿ ಹಾನಿಗೊಂಡಿದೆ.
ವರುಣನ ಅಬ್ಬರಕ್ಕೆ ಬೆಂಗಳೂರು ಥಂಡಾ ಹೊಡೆದಿದ್ದು, ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿ ವಾಹನ ಸವಾರರು ಪರದಾಡಿದರು. ಬಹುತೇಕ ಕಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ನೆಲಮಂಗಲದಲ್ಲಿ ಬೈಕೊಂದು ಕೊಚ್ಚಿ ಹೋಗಿದೆ. ಹೆಬ್ಬಾಳ ಬಳಿ ಲುಂಬಿಣಿ ಗಾರ್ಡನ್, ಆನಂದರಾವ್ ಸರ್ಕಲ್ ಸಂದ್ಯಾ ಲಾಡ್ಜ್, ವಿಧಾನ ಸೌಧ, ವಿದ್ಯಾರಣ್ಯಪುರ, ಕಾವೇರಿ ಜಂಕ್ಷನ್ ಸೇರಿದಂತೆ ರಾಜಾಜಿನಗರ ಬಳಿ ರಸ್ತೆಯುದ್ದಕ್ಕೂ ಮರಗಳು ರಸ್ತೆಗೆ ಉರುಳಿ ಬಿದಿದ್ದವು. ಪರಿಣಾಮ ಇಂದು ಸಂಜೆ ವೇಳೆಗೆ ಬಿಬಿಎಂಪಿ ಕಂಟ್ರೋಲ್ ರೂಂಗೆ ಸುಮಾರು 35ಕ್ಕೂ ಹೆಚ್ಚಾಗಿ ಮರ ಉರುಳಿ ಬಿದ್ದಿರುವ ಬಗ್ಗೆ ಕರೆಗಳು ಬಂದಿದೆ. ಇತ್ತ ಹಲವು ಸ್ಥಳಗಳಲ್ಲಿ ರಸ್ತೆಗುರುಳಿದ್ದ ಮರದ ಕೊಂಬೆಗಳನ್ನು ಸ್ಥಳೀಯರೇ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಬಿಬಿಎಂಪಿ ಸಿಬ್ಬಂದಿಗಳು ಕೂಡ ಹಲವು ಭಾಗಗಳಲ್ಲಿ ರಸ್ತೆಗುರುಳಿ ಬಿದಿದ್ದ ಮರಗಳನ್ನು ತೆರವುಗೊಳಿಸಿದರು.
ಇತ್ತ ಕೋಲಾರದಲ್ಲೂ ಬಿರುಗಾಳಿ ಸಹಿತ ಮಳೆಗೆ ಹಲವು ಮನೆಗಳು ಕುಸಿದಿದ್ದೂ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕನುಮನಹಳ್ಳಿ ಚೆಕ್‍ಪೋಸ್ಟ್ ಗೆ ಹಾನಿಯಾಗಿದೆ. ಹತ್ತಾರು ಎಕರೆ ಬಾಳೆ ಬೆಳೆ ನೆಲಕಚ್ಚಿದೆ.