Tag: ಬೆಂಗಳೂರು ಡಿಸಿ

  • Bengaluru | ನಿಲ್ಲದ ವರುಣನ ಆರ್ಭಟ: ನಾಳೆ ಶಾಲೆಗಳಿಗೆ ರಜೆ ಘೋಷಣೆ

    Bengaluru | ನಿಲ್ಲದ ವರುಣನ ಆರ್ಭಟ: ನಾಳೆ ಶಾಲೆಗಳಿಗೆ ರಜೆ ಘೋಷಣೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಅ.16ರಂದು) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

    ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ.ಇದನ್ನೂ ಓದಿ: 95 ನಿಮಿಷಗಳ ಥ್ರಿಲ್ಲರ್ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಈ ವಾರ ತೆರೆಗೆ!

    ಮಳೆ ಅಬ್ಬರದ ಹಿನ್ನೆಲೆ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ (DC Jagadeesh) ರಜೆ ಘೋಷಿಸಿದ್ದು, ಅಂಗನವಾಡಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದ್ದು, ಪ್ರಾಥಮಿಕ, ಪ್ರೌಢಶಾಲಾ ಬಿಟ್ಟು ಉಳಿದ ತರಗತಿಗಳು ಎಂದಿನಂತೆ ನಡೆಯಲಿವೆ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಐಐಟಿ, ಎಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.

    ಎಲ್ಲಾ ಶಾಲೆಗಳಿಗೆ ದಸರಾ ರಜೆ ನೀಡಲಾಗಿದ್ದು, ದಸರಾ ರಜೆ ಕಡಿತ ಮಾಡಿ ತರಗತಿ ನಡೆಸುತ್ತಿರುವ ಶಾಲೆಗಳು ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಬೇಕು ಎಂದು ಖಾಸಗಿ ಶಾಲೆಗಳ ಸಂಘಟನೆಗಳು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿವೆ. ಮಳೆ ಜಾಸ್ತಿಯಿದ್ದರೆ, ಪರಿಸ್ಥಿತಿಗೆ ಅನುಗುಣವಾಗಿ, ಆಯಾ ಪ್ರದೇಶಗಳ ಮಳೆಯ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವಂತೆ ತಿಳಿಸಿದ್ದು, ಕುಸ್ಮಾ, ಕ್ಯಾಮ್ಸ್, ರುಪ್ಸಾ ಸಂಘಟನೆಗಳು ತಮ್ಮ ಸಂಘಟನೆಗಳ ಶಾಲೆಗಳಿಗೆ ಸೂಚನೆ ನೀಡಿವೆ.ಇದನ್ನೂ ಓದಿ:ಕೋಲಾರ| ಮಳೆ, ಚಳಿಯನ್ನೂ ಲೆಕ್ಕಿಸದೇ ಚಿಕನ್ ಬಿರಿಯಾನಿಗಾಗಿ ಮುಗಿಬಿದ್ದ ಜನ

  • ಕಂಠೀರವ ಸ್ಟುಡಿಯೋಗೆ 2 ದಿನ ಸಾರ್ವಜನಿಕರಿಗೆ ಪ್ರವೇಶ ಇಲ್ಲ

    ಕಂಠೀರವ ಸ್ಟುಡಿಯೋಗೆ 2 ದಿನ ಸಾರ್ವಜನಿಕರಿಗೆ ಪ್ರವೇಶ ಇಲ್ಲ

    ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆಯಾದ ಕಂಠೀರವ ಸ್ಟುಡಿಯೋ ಸಮುತ್ತಲಿನ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಿದ್ದು, ಇನ್ನು ಎರಡು ದಿನಗಳು ಸಾರ್ವಜನಿಕರಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಂಜುನಾಥ್ ಹೇಳಿದರು.

    PUNEETH RAJ KUMAR

    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಅವರ ಕುಟುಂಬಸ್ಥರು ಅವರ ಸಂಪ್ರದಾಯವನ್ನು ಮುಂದುವರೆಸಬೇಕಿದೆ. ಕುಟುಂಬದವರು ಸಂಪ್ರದಾಯದಂತೆ ಐದನೇ ದಿನ ಹಾಲು-ತುಪ್ಪ ಬಿಡುತ್ತೇವೆ ಎಂದು ಹೇಳಿದ್ದಾರೆ. ಕಾರ್ಯಕ್ಕೆ ತೊಡಕಾಗದಂತೆ ಕ್ರಮವಹಿಸಲಾಗುವುದು. ಅದಕ್ಕಾಗಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಪುನೀತ್ ನೆನಪು ಮಗಳಿಗೆ ಕಾಡುತ್ತಿದೆ: ರಮೇಶ್ ಅರವಿಂದ್

    ಕಂಠೀರವ ಸ್ಟುಡಿಯೋ ಜಾಗ ತುಂಬಾ ಚಿಕ್ಕದಿದೆ. ಎಲ್ಲಾ ವ್ಯವಸ್ಥೆಯನ್ನು ಅಭಿಮಾನಿಗಳಿಗೆ ಮಾಡುತ್ತೇವೆ. ಈವರೆಗೂ ಎಲ್ಲರೂ ಸಹಕಾರ ನೀಡಿದ್ದೀರಿ, ಎಲ್ಲರಿಗೂ ಧನ್ಯವಾದ ಎಂದರು. ಇದನ್ನೂ ಓದಿ: ಮಣ್ಣಲ್ಲಿ ಮಣ್ಣಾದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್

    PUNEET

    ಪುನೀತ್ ರಾಜ್‍ಕುಮಾರ್ ಅವರ ಅಂತಿಮ ದರ್ಶನಕ್ಕೆ ಎಷ್ಟು ಲಕ್ಷ ಜನ ಬಂದಿದ್ದರು ಎನ್ನುವ ಬಗ್ಗೆ ಸರಿಯಾದ ಮಾಹಿತಿ ಇಲ್ಲ.
    ಮುಂದೆ ತಿಳಿಸುತ್ತೇವೆ ಎಂದು ಹೇಳಿದರು.

  • ಐಎಂಎ ವಂಚನೆ ಪ್ರಕರಣ: ಡಿಸಿ ವಿಜಯಶಂಕರ್​​ರಿಂದ 2.5 ಕೋಟಿ ಜಪ್ತಿ

    ಐಎಂಎ ವಂಚನೆ ಪ್ರಕರಣ: ಡಿಸಿ ವಿಜಯಶಂಕರ್​​ರಿಂದ 2.5 ಕೋಟಿ ಜಪ್ತಿ

    ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬೆಂಗಳೂರು ಡಿಸಿ ವಿಜಯಶಂಕರ್ ಅವರಿಂದ ಎಸ್‍ಐಟಿ ಅಧಿಕಾರಿಗಳು 2.5 ಕೋಟಿ ರೂ. ವನ್ನು ಶುಕ್ರವಾರ ಜಪ್ತಿ ಮಾಡಿಕೊಂಡಿದ್ದಾರೆ.

    ಅಡೋನಿ ಎಂಬ ನಿರ್ಮಾಣ ಸಂಸ್ಥೆಯಿಂದಲೂ 1.5 ಕೋಟಿ ರೂ.ವನ್ನು ಎಸ್‍ಐಟಿ ವಶಕ್ಕೆ ಪಡೆದಿದೆ. ಅಷ್ಟೇ ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಮತ್ತು ತಿಲಕನಗರ ರೌಡಿಶೀಟರ್ ಮುನೀರ್ ಅಲಿಯಾಸ್ ಗನ್ ಮುನೀರ್, ಬ್ರಿಗೇಡ್ ಬಾಬು ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ವಿಜಯಶಂಕರ್ ನಗರದ ಬಿಲ್ಡರ್ ಓರ್ವನಿಗೆ ಫ್ಲಾಟ್ ಮತ್ತು ನಿವೇಶನ ಖರೀದಿಸಲು ಕಿಕ್ ಬ್ಯಾಕ್ ಹಣ ನೀಡಿದ್ದರು. ಈ ಲಂಚದ ಹಣ ಹಾಗೂ ಬಿಲ್ಡರ್ ನನ್ನು ಎಸ್‍ಐಟಿ ವಶಕ್ಕೆ ಪಡೆದಿದೆ. ವಿಜಯಶಂಕರ್ ಮತ್ತೊಂದು ಪ್ರಕಣದಲ್ಲಿ 1 ಕೋಟಿ ರೂ. ಲಂಚ ಪಡೆದಿರುವುದು ತನಿಖೆ ವೇಳೆ ಬಹಿರಂಗಗೊಂಡಿದೆ. ಈ ಹಿನ್ನಲೆ ಆ ಹಣವನ್ನು ಎಸ್‍ಐಟಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

    ಐಎಂಎ ಸಮೂಹ ಕಂಪನಿಗೆ ಕ್ಲೀನ್ ಚಿಟ್ ನೀಡಲು ವಿಜಯಶಂಕರ್ 1.5 ಕೋಟಿ ರೂ. ಲಂಚ ಪಡೆದ ಆರೋಪ ಕೇಳಿ ಬಂದಿತ್ತು. ಅಷ್ಟೇ ಅಲ್ಲದೆ ಬಂಧಿತ ಆರೋಪಿ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಹೇಳಿಕೆ ಆಧಾರದ ಮೇಲೆ ಎಸ್‍ಐಟಿ ಅಧಿಕಾರಿಗಳು ಸೋಮವಾರ ವಿಜಯಶಂಕರ್ ಅವರನ್ನು ಬಂಧಿಸಿದ್ದರು. ಜೊತೆಗೆ ಬಿಲ್ಡರ್ ಕೃಷ್ಣಮೂರ್ತಿ ಅವರನ್ನು ಕೂಡ ಎಸ್‍ಐಟಿ ತಂಡವು ವಿಚಾರಣೆಗೆ ಒಳಪಡಿಸಿತ್ತು.

    ವಿಜಯಶಂಕರ್ ಅವರನ್ನು ಬಂಧಿಸಿದ್ದ ಎಸ್‍ಐಟಿ ಪೊಲೀಸರು ಮಂಗಳವಾರ ಸಿಟಿ ಸಿವಿಲ್ ಸೆಷನ್ಸ್ ಕೋರ್ಟ್ ನ ಪ್ರಧಾನ ನ್ಯಾಯಾಧೀಶ ಶಿವಶಂಕರ ಬಿ.ಅಮರಣ್ಣವರ ಮುಂದೆ ತೆರೆದ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು. ಈ ಮೂಲಕ ಆರೋಪಿಯನ್ನು ಇದೇ 15ರವೆರಗೂ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಪ್ರಾಸಿಕ್ಯೂಷನ್ ಕೋರಿಕೆಯನ್ನು ನ್ಯಾಯಾಧೀಶರು ಭಾಗಶಃ ಪುರಸ್ಕರಿಸಿದ್ದರು.

    ಬಂಧಿತ ವಿಜಯಶಂಕರ್ ವಿರುದ್ಧ ಕಮರ್ಶಿಯಲ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 406 (ಅಪರಾಧಿಕ ನಂಬಿಕೆ ದ್ರೋಹಕ್ಕಾಗಿ ದಂಡನೆ), 409 (ಲೋಕನೌಕರರನಿಂದ ಅಪರಾಧಿಕ ನಂಬಿಕೆ ದ್ರೋಹ), 420 (ವಂಚನೆ) ಹಾಗೂ 120 (ಬಿ) (ಜೈಲು ಶಿಕ್ಷೆ ತಪ್ಪಿಸಿಕೊಳ್ಳಲು ಅಪರಾಧ ಬಚ್ಚಿಡುವುದು) ಅಡಿ ಪ್ರಕರಣ ದಾಖಲಾಗಿದೆ.

  • ಐಎಂಎ ಲಂಚ ತಿಂದ ಡಿಸಿ ವಿಜಯ್ ಶಂಕರ್ ಅರೆಸ್ಟ್

    ಐಎಂಎ ಲಂಚ ತಿಂದ ಡಿಸಿ ವಿಜಯ್ ಶಂಕರ್ ಅರೆಸ್ಟ್

    ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ಸಂಬಂಧ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ಅವರನ್ನು ಎಸ್‍ಐಟಿ ಬಂಧಿಸಿದೆ.

    ಐಎಂಎ ಹಗರಣದ ಸಂಬಂಧ ಈಗಾಗಲೇ ಬಂಧನದಲ್ಲಿರುವ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಹೇಳಿಕೆ ಆಧಾರದ ಮೇಲೆ ಎಸ್‍ಐಟಿ ತಂಡವು ವಿಜಯ್ ಶಂಕರ್ ಅವರನ್ನು ಬಂಧಿಸಿದೆ.

    ಸೋಮವಾರ ಬೆಳಗ್ಗೆ ವಿಜಯ್ ಶಂಕರ್ ಅವರನ್ನು ವಿಚಾರಣೆಗೆ ಕರೆದುಕೊಂಡು ಹೋಗಲಾಗಿತ್ತು. ಅಷ್ಟೇ ಅಲ್ಲದೆ ಬಿಲ್ಡರ್ ಕೃಷ್ಣಮೂರ್ತಿ ಅವರನ್ನು ಕೂಡ ಎಸ್‍ಐಟಿ ತಂಡವು ವಿಚಾರಣೆ ನಡೆಸಿದೆ.

    ಈ ಪ್ರಕರಣದ ಸಂಬಂಧ ಎಲ್.ಸಿ.ನಾಗರಾಜ್ ಹಾಗೂ ಗ್ರಾಮ ಲೆಕ್ಕಿಗ ಮಂಜುನಾಥ್ ಅವರನ್ನು ಬಂಧಿಸಲಾಗಿದೆ. ಎಲ್.ಸಿ.ನಾಗರಾಜ್ ಅವರನ್ನು ಶನಿವಾರ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟಿನ ಪ್ರಧಾನ ನ್ಯಾಯಾಧೀಶ ಶಿವಶಂಕರ ಅಮರಣ್ಣವರ ಅವರ ಮುಂದೆ ಹಾಜರಿಪಡಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 12ರವರೆಗೆ ನಾಗರಾಜ್‍ರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.

  • ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

    ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

    – ಸಿದ್ದರಾಮಯ್ಯಗೆ ಬಿಸಿ ಮುಟ್ಟಿಸಿದ್ರಾ ಎಚ್.ಡಿ.ಕೆ

    ಬೆಂಗಳೂರು: ಅತ್ತ ಧರ್ಮಸ್ಥಳದ ಶಾಂತಿವನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಅವಧಿ, ಉಳಿವಿನ ಬಗ್ಗೆ ಮಾತನಾಡುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿ ಎತ್ತಂಗಡಿ ಭಾಗ್ಯ ಕರುಣಿಸಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ, ಬೆಂಗಳೂರು ಡಿಸಿ ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದೆ. ದಯಾನಂದ್ ಅವರ ಸ್ಥಾನಕ್ಕೆ ಬಿಎಂ ವಿಜಯಶಂಕರ್ ಅವರನ್ನು ನೇಮಕ ಮಾಡಿದ್ದಾರೆ. ಆದರೆ ದಯಾನಂದ್ ಅವರಿಗೆ ಮಾತ್ರ ರಾಜ್ಯ ಸರ್ಕಾರ ಯಾವುದೇ ಹುದ್ದೆಯನ್ನೇ ತೋರಿಸಿಲ್ಲ. ಸಿದ್ದರಾಮಯ್ಯ ಅವರ ಆಪ್ತ ವಲಯದ ಮತ್ತೊಬ್ಬ ಅಧಿಕಾರಿ ಶಂಕರಪ್ಪ ಅವರನ್ನು ಸಹ ವರ್ಗಾವಣೆ ಮಾಡಲಾಗಿದ್ದು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಶಂಕರಪ್ಪ ಅವರನ್ನು ಸಿಎಡಿಎ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಇತರೇ 8 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು, ಅಂತಿಮ ಪಟ್ಟಿ ಇಂತಿದೆ.

    ಎಂ.ಲಕ್ಷ್ಮೀನಾರಾಯಣ್- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ
    ಇವಿ ರಮಣರೆಡ್ಡಿ – ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ
    ಅನಿಲ್ ಕುಮಾರ್- ಕಾರ್ಯದರ್ಶಿ, ವಸತಿ ಇಲಾಖೆ
    ನಿತೇಶ್ ಪಾಟೀಲ್ – ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ ಇಲಾಖೆ
    ಕಪಿಲ್ ಮೋಹನ್ – ಡಿಜಿ, ಆಡಳಿತ ಮತ್ತು ತರಬೇತಿ ಕೇಂದ್ರ
    ಮುನೀಷ್ ಮೌದ್ಗಿಲ್ – ಆಯುಕ್ತರು, ಸರ್ವೆ ಇಲಾಖೆ
    ಬಿಎಸ್ ಶಂಕರಪ್ಪ – ನಿರ್ದೇಶಕರು, ಸಿಎಡಿಎ
    ನಳಿನಿ ಅತುಲ್ – ಜಂಟಿ ವ್ಯವಸ್ಥಾಪಕ ನಿರ್ದೇಶಕರು, ಕೆಯುಐಡಿಎಫ್‍ಸಿ

    ಈ ವರ್ಗಾವಣೆ ಪಟ್ಟಿ ಹೊರಬಿದ್ದ ಬಳಿಕ ಮೈತ್ರಿ ಸರ್ಕಾರದಲ್ಲಿ ಇನ್ನೇನೆಲ್ಲಾ ಬೆಳವಣಿಗೆಗಳಾಗುತ್ತೋ ಕಾದುನೋಡಬೇಕಿದೆ.