Tag: ಬೆಂಗಳೂರು ಮಳೆ

  • ಬೆಂಗಳೂರು ರಣಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್

    ಬೆಂಗಳೂರು ರಣಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್

    ಬೆಂಗಳೂರು: ರಾಜಧಾನಿಗೆ ಅದೇನಾಗಿದ್ಯೋ ಕಾಣೆ… ಸಣ್ಣ ಸಣ್ಣ ಮಳೆಗೂ ಬೆಂಗಳೂರು (Bengaluru) ಪರಿತಪಿಸುವಂತಹ ಪರಿಸ್ಥಿತಿ ಬರುತ್ತಿದೆ. ಮೊನ್ನೆ ರಾತ್ರಿಯಿಂದ ಸುರಿಯುತ್ತಿರೋ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಮಯವಾಗಿದೆ. ಅದೇ ರೀತಿ ನಗರದ ಶಿವಾನಂದ ಸರ್ಕಲ್‌ ಬಳಿಯಿರುವ ʻಬೆಳ್ಳುಳ್ಳಿ ಕಬಾಬ್ʼ ಖ್ಯಾತಿಯ ಚಂದ್ರು ಹೋಟೆಲ್‌ (Chandru Bellulli Kabab Hotel) ಮಳೆ ನೀರಿನಿಂದ ಜಲಾವೃತವಾಗಿದ್ದು, ಭಾರೀ ನಷ್ಟ ತಂದೊಡ್ಡಿದೆ.

    ಬೆಳ್ಳುಳ್ಳಿ ಕಬಾಬ್..! ಒನ್ ಮೋರ್ ಒನ್ ಮೋರ್ ಅಂತಿರಬೇಕು.. ಚಟಪಟ… ಚಟಪಟ.. ಅನ್ನೋ ಡೈಲಾಗ್ ಹೊಡೆದು ಸಿಕ್ಕಾಪಟ್ಟೆ ಫೇಮಸ್ ಆಗಿರುವ ಮಳೆಯಿಂದ ನಷ್ಟ ಅನುಭವಿಸಿದ್ದಾರೆ. ಬೆಂಗಳೂರು ಕೆಫೆ ಕಟ್ಟದಲ್ಲಿರುವ ಚಂದ್ರು ಮಾಲೀಕತ್ವದ ಹೋಟೆಲ್ ಬೇಸ್ಮೆಂಟ್‌ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ ಕಳೆದ 2 ದಿನಗಳಿಂದ ಹೋಟೆಲ್‌ ಬಂದ್‌ ಆಗಿದೆ. ಅಲ್ಲದೇ ಸುಮಾರು 15 ಲಕ್ಷ ರೂ. ವ್ಯಾಪಾರ ಲಾಸ್ ಆಗಿದೆ ಅಂತ ಚಂದ್ರು ಅವಲತ್ತುಕೊಂಡಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ; ಕುಮಟಾ-ಸಿದ್ದಾಪುರ ರಸ್ತೆ ಜಲಾವೃತ

    ಈ ಕುರಿತು ʻಪಬ್ಲಿಕ್‌ ಟಿವಿʼ (Public TV) ಜೊತೆಗೆ ಮಾತನಾಡಿರುವ ಹೋಟೆಲ್‌ ಮಾಲೀಕ ಚಂದ್ರು, ಹೋಟೆಲ್‌ ಓಪನ್‌ ಮಾಡಿ ನಾಲ್ಕು ವರ್ಷ ಆಯ್ತು. ಇದುವರೆಗೆ ಇಂತಹ ಸಮಸ್ಯೆ ಇರಲಿಲ್ಲ. ಆದ್ರೆ ಮೊನ್ನೆ, ನಿನ್ನೆ ರಾತ್ರಿ ಸುರಿದ ಮಳೆಗೆ ರಸ್ತೆಯಲ್ಲಿದ್ದ ನೀರೆಲ್ಲ ಬೇಸ್ಮೆಂಟ್‌ಗೆ ತುಂಬಿಕೊಂಡಿದೆ. ಬೆಳಗ್ಗೆ 7 ಗಂಟೆಯಿಂದ ಹೊರತೆಗೆಯುತ್ತಿದ್ದರೂ ನೀರು ಖಾಲಿ ಆಗ್ತಿಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ

    ರಸ್ತೆಯಲ್ಲಿದ್ದ ಮಳೆ ನೀರಿನೊಂದಿಗೆ ಮರಳೂ ಸೇರಿಕೊಂಡಿದೆ, ಜನರೇಟರ್‌ ಆಯಿಲ್‌, ಡೀಸೆಲ್‌ ಎಲ್ಲ ಹೊರಗೆ ಬಂದುಬಿಟ್ಟಿದೆ. 10 ಎಲೆಕ್ಟ್ರಿಕ್‌ ಬೈಕ್‌ಗಳು ಕೆಟ್ಟುಹೋಗಿದೆ. ಜನರೇಟರ್‌ ಕೂಡ ಕೆಟ್ಟಿದೆ. ವಿಧಿಯಿಲ್ಲದೇ 2 ದಿನಗಳಿಂದ ಹೋಟೆಲ್‌ ಬಂದ್‌ ಮಾಡಬೇಕಾಗಿದೆ. ಎಲ್ಲಾ ಕ್ಲೀನ್‌ ಮಾಡಿದ ಬಳಿಕವೇ ಹೋಟೆಲ್‌ ಓಪನ್‌ ಮಾಡ್ತೀವಿ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ – ಮನೆ ಕುಸಿತ

    ಅಲ್ಲದೇ ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ದೂರು ಕೊಟ್ಟಿದ್ದೇವೆ. ಇಲ್ಲಿನ ರಸ್ತೆಗಳಲ್ಲಿ ನೀರಿನ ವಾಟಗಳಿಲ್ಲ. ಅದಕ್ಕೆ ರಸ್ತೆಯಲ್ಲಿನ ನೀರೆಲ್ಲ ಹೋಟೆಲ್‌ಗೆ ತುಂಬಿಕೊಂಡಿದೆ. ಅಧಿಕಾರಿಗಳು ಸೂಕ್ರ ಕ್ರಮ ಕೈಗೊಂಡು ಸರಿಪಡಿಸಬೇಕು ಅಂತ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: 1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್ 

  • 1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್

    1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್

    – ಗ್ರೇಟರ್ ಬೆಂಗಳೂರು ಹೋಗಿ ವಾಟರ್ ಬೆಂಗಳೂರು ಆಗಿದೆ

    ಬೆಂಗಳೂರು: ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ ಎಂದು ತಿಳಿಸಿ ಎಂದು ವಿಪಕ್ಷ ನಾಯಕ ಆರ್. ಅಶೋಕ್(R Ashok) ಕಿಡಿಕಾರಿದರು.

    ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ(Bengaluru) ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ? ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ 5 ಜನರು ಸತ್ತಿದ್ದಾರೆ. ಇಂಥವರ ಸಾವಿನ ಮೇಲೆ ಕಾಂಗ್ರೆಸ್ ಸಾಧನೆಯ ಸಮಾವೇಶ ಮಾಡುತ್ತಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಮಾವೇಶವನ್ನು ರದ್ದು ಮಾಡಬೇಕಿತ್ತು. ಕಾಂಗ್ರೆಸ್‌ನ ತಪ್ಪಿನಿಂದಲೇ ಜನರು ಸತ್ತಿದ್ದಾರೆ. ಇಂತಹ ಸಮಾವೇಶ ಮಾಡುವ ನೈತಿಕ ಅರ್ಹತೆ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಸ್ಕೀಂ ನಿಲ್ಲೋದಿಲ್ಲ: ಡಿಕೆಶಿ ಸ್ಪಷ್ಟನೆ

    ಬೆಂಗಳೂರಿನ ಸಾಯಿ ಬಡಾವಣೆಗೆ ಡಿಸಿಎಂ ಡಿ.ಕೆ ಶಿವಕುಮಾರ್(D K Shivakumar) ಭೇಟಿ ನೀಡಿ, ಅಭಿವೃದ್ಧಿ ಮಾಡುತ್ತೇನೆಂದು ಹೇಳಿದ್ದರು. ಸಿಲ್ಕ್ ಬೋರ್ಡ್ ಬಳಿ ಕಳೆದ ಸಲವೂ ಪ್ರವಾಹವಾಗಿತ್ತು. ಇಷ್ಟಾದರೂ ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ. ಬಿಜೆಪಿ ಅವಧಿಯಲ್ಲಿ ರಾಜಕಾಲುವೆ, ರಸ್ತೆ ಅಭಿವೃದ್ಧಿಗೆ 1,600 ಕೋಟಿ ರೂ. ನೀಡಲಾಗಿತ್ತು. ಅದನ್ನು ಕಾಂಗ್ರೆಸ್(Congress) ರದ್ದು ಮಾಡಿದೆ. ಆ ಅಭಿವೃದ್ಧಿ ಕಾರ್ಯ ನಡೆದಿದ್ದರೆ, ಈ ರೀತಿ ಪ್ರವಾಹ ಆಗುತ್ತಿರಲಿಲ್ಲ. ಬೆಂಗಳೂರಿನ ಪ್ರಗತಿಗೆ ಹಣ ನೀಡದೆ ಲೂಟಿ ಮಾಡಲು ಆ ಹಣವನ್ನು ಬಳಸಲಾಗಿದೆ. ಎಲ್ಲ ಹಣವನ್ನು ಸುರಂಗ ಮಾರ್ಗ ಯೋಜನೆಗೆ ಮೀಸಲಿಟ್ಟಿದ್ದಾರೆ. ಈಗ ಎಲ್ಲ ರಸ್ತೆಗಳಲ್ಲಿ ಸುರಂಗ ಆಗಿದೆ ಎಂದು ಗುಡುಗಿದರು. ಇದನ್ನೂ ಓದಿ: `ಆಪರೇಷನ್ ಸಿಂಧೂರ’ ಬೂಟಾಟಿಕೆ ಅಂದಿದ್ದ ಕೊತ್ತೂರು ಮಂಜುನಾಥ್ ವಿರುದ್ಧ ಪ್ರಕರಣ ದಾಖಲು

    ಪ್ರವಾಹದ ಸ್ಥಳಗಳಲ್ಲಿ ಸೆನ್ಸರ್ ಅಳವಡಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ ಯಾವ ಕೆಲಸವೂ ಆಗಿಲ್ಲ. ಏ. 15ರಂದೇ ಹವಾಮಾನ ಇಲಾಖೆ ಮಳೆ ಜೋರಾಗಲಿದೆ ಎಂದು ಸೂಚನೆ ನೀಡಿತ್ತು. ಒಂದು ತಿಂಗಳ ಸಮಯದಲ್ಲಿ ಬಿಬಿಎಂಪಿಯಿಂದ(BBMP) ಮುಂಜಾಗ್ರತಾ ಸಭೆ ನಡೆಸಿಲ್ಲ. ಸಮಾವೇಶಕ್ಕೆ ಮಾತ್ರ ತರಾತುರಿಯಲ್ಲಿ ಸಿದ್ಧತೆ ಮಾಡಿಕೊಂಡರು. 14 ಸಾವಿರ ಗುಂಡಿ ಮುಚ್ಚಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಈಗ ಕಾಂಗ್ರೆಸ್ ಪಕ್ಷವನ್ನು ಮುಚ್ಚಿಹಾಕಲು ಜನರೇ ಗುಂಡಿ ತೆಗೆಯುತ್ತಿದ್ದಾರೆ ಎಂದರು. ಇದನ್ನೂ ಓದಿ: ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ

    ಯುದ್ಧಕ್ಕೆ ಸಾಕ್ಷಿ ಕೇಳುವ ಇವರು, ಜನರು ಸಾಯುತ್ತಿರುವುದನ್ನು ಬಂದು ನೋಡಲಿ. ಇದಕ್ಕೆ ಯಾವುದೇ ಸಾಕ್ಷಿ ಬೇಕಿಲ್ಲ. ಬಿಜೆಪಿ ಅವಧಿಯಲ್ಲಿ ಪ್ರತಿ ವರ್ಷ ಏಳೆಂಟು ಸಾವಿರ ಕೋಟಿ ರೂ. ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಬೆಂಗಳೂರಿಗೆ ನೀಡಿರುವ ಹಣವೆಲ್ಲವನ್ನೂ ಸುರಂಗ ನಿರ್ಮಿಸಲು ಬಳಸಲಾಗುತ್ತಿದೆ. ಬೆಂಗಳೂರು ಮುಳುಗುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಗ್ರೇಟರ್ ಬೆಂಗಳೂರು(Greater Bengaluru) ಹೋಗಿ ವಾಟರ್ ಬೆಂಗಳೂರು ಆಗಿದೆ. ಮನೆ ಬಾಗಿಲಿಗೆ ಅವಾಂತರ, ಸಾವುಗಳನ್ನು ಸರ್ಕಾರ ತರುತ್ತಿದೆ ಎಂದು ದೂರಿದರು.

  • ರಾಜಕಾಲುವೆ ಸೇರಿ 4,292 ಕಡೆ ಒತ್ತುವರಿ ಆಗಿದೆ – ಮಳೆಹಾನಿ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದ ಸಿಎಂ

    ರಾಜಕಾಲುವೆ ಸೇರಿ 4,292 ಕಡೆ ಒತ್ತುವರಿ ಆಗಿದೆ – ಮಳೆಹಾನಿ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದ ಸಿಎಂ

    – ಯಲಹಂಕದಲ್ಲಿ ಅಪಾರ್ಟ್‌ಮೆಂಟ್‌ ಮಾಲೀಕರಿಗೆ ಡಿಸಿಎಂ ವಾರ್ನಿಂಗ್‌
    – 166 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳ ಗುರುತು

    ಬೆಂಗಳೂರು: ನಗರದಲ್ಲಿ ರಾಜಕಾಲುವೆ ಸ್ಥಳಗಳೂ ಸೇರಿದಂತೆ 4,292 ಕಡೆ ಒತ್ತುವರಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

    ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ (Bengaluru) ಆಗಿರುವ ಅನಾಹುತಗಳ ಬಗ್ಗೆ ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್‌ನಲ್ಲಿ (BBMP War Room) ಮಾಹಿತಿ ಪಡೆದು, ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದರು. ಇದೇ ವೇಳೆ ಹಾನಿಗೆ ಒಳಗಾಗಿರುವ ಪ್ರದೇಶಗಳ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ಸರೋಪಾದಿಯಲ್ಲಿ ಕೈಗೊಳ್ಳುವಂತೆ ಕರೆಮಾಡಿ ತಾಕೀತು ಮಾಡಿದರು. ಈ ಸಂದರ್ಭದಲ್ಲಿ ಸಚಿವ ಕೆ.ಜೆ ಜಾರ್ಜ್, ಶಾಸಕ ಮುನಿರತ್ನ ಸಾಥ್‌ ನೀಡಿದರು. ಇದನ್ನೂ ಓದಿ:  ಮಹಾಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮಹಿಳೆ ಸಾವು – ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

    ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ನಗರದಲ್ಲಿ ರಾಜಕಾಲುವೆಗಳೂ (Rajakaluve) ಸೇರಿ ಸುಮಾರು 4,292 ಕಡೆ ಒತ್ತುವರಿ (Encroachment) ಆಗಿದೆ. ಇನ್ನೂ ಕೆಲ ರಾಜಕಾಲುವೆಗಳು ಆಳವಾಗಿಲ್ಲ, ಅದರ ಕೆಲಸ ಪ್ರಗತಿಯಲ್ಲಿದೆ. ರಾಜಕಾಲುವೆಗಳು ಪೂರ್ಣವಾಗದೇ ಇರುವುದರಿಂದ ನೀರು ಹೊರಗಡೆ ಬರುವುದನ್ನ ತಡೆಯೋದು ಕಷ್ಟ. ಸದ್ಯ 166 ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಅಂತ ಗುರುತಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 1 ವಾರ ಭಾರೀ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ

    ಬೆಂಗಳೂರಿಗೆ ಅನಿರೀಕ್ಷಿತವಾಗಿ ಹೆಚ್ಚು ಮಳೆ ಬಿದ್ದಿದೆ. ನಿನ್ನೆ ಮಳೆಯಾಗಿದ್ದರಿಂದ ಕೆರೆಗಳು ತುಂಬಿದೆ. 104 ಮೀಮಿ ಮಳೆ ಆಗಿದೆ. ಡಿಕೆಶಿ ಕೆಲವು ಪ್ರದೇಶಕ್ಕೆ ಹೋಗ್ತಾರೆ. ಅವರಿಂದಲೂ ಮಾಹಿತಿ ಪಡೆಯುತ್ತೇನೆ. ಟ್ರಾಫಿಕ್ ಪೊಲೀಸರು 133 ಜಾಗ ಗುರುತಿಸಿದ್ದಾರೆ. ಸಿಲ್ಕ್‌ ಬೋರ್ಡ್‌ ಜಂಕ್ಷನ್, ಹೆಬ್ಬಾಳ ಕಡೆಗಳಲ್ಲಿ ರೈಲ್ವೇ ಪಾಯಿಂಟ್ ಇದ್ದು, ಕೆಲಸ ಮಾಡಲಾಗುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ರಾಯಚೂರು | ಭಾರೀ ಮಳೆಗೆ ಟಿನ್ ಶೆಡ್ ಮನೆ ಕುಸಿದು ಮೂವರಿಗೆ ಗಾಯ

    ಸಾಯಿ ಲೇಔಟ್‌ನಲ್ಲಿ ನಾಲ್ಕೂವರೆ ಅಡಿ ನೀರಿತ್ತು
    ಇವತ್ತು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು 2 ಬಸ್ಸು ತರಿಸಿದ್ದೆ. ಅಲ್ಲಿ ಹೋದ್ರೆ ಅಧಿಕಾರಿಗಳಿಗೆ ತೊಂದ್ರೆ ಆಗುತ್ತೆ ಅಂತ ಹೋಗಿಲ್ಲ. ಸಾಯಿ ಲೇಔಟ್‌ನಲ್ಲಿ ನಾಲ್ಕುವರೆ ಅಡಿ ನೀರು ಇತ್ತು, ಎರಡು ಅಡಿ ನೀರು ಕಡಿಮೆ ಆಗಿದೆ. ಸಮಸ್ಯೆ ಸಿಲುಕಿಕೊಂಡವರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮಳೆಹಾನಿ ಪ್ರದೇಶದಲ್ಲಿರುವ ಸ್ಥಳೀಯರಿಗೆ ಪೊಲೀಸರು ಮತ್ತು ಇತರ ಅಧಿಕಾರಿಗಳು ಊಟದ ವ್ಯವಸ್ಥೆ ಮಾಡುತ್ತಾರೆ. ಮೇ 21ಕ್ಕೆ ನಾನು, ಡಿಸಿಎಂ ಸಿಟಿ ರೌಂಡ್ಸ್ ಮಾಡಿ ಸಂಪೂರ್ಣ ವರದಿ ಪಡೆಯಲಿದ್ದೇವೆ ಎಂದು ತಿಳಿಸಿದರು.

    ಇನ್ನೂ ಡಿಸಿಎಂ ಡಿಕೆಶಿ ಮಾತನಾಡಿ, ಯಲಹಂಕ ವಲಯದಲ್ಲಿ 29 ಕೆರೆ ಇದೆ. ಅಲ್ಲಿಂದ ಒವರ್ ಪ್ಲೋ ಆಗಿ ಸಮಸ್ಯೆ ಆಗುತ್ತಿದೆ. 60 ದಿನಗಳಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದರಲ್ಲದೇ ಯಲಹಂಕಾದಲ್ಲಿ ಅಪಾರ್ಟ್‌ಮೆಂಟ್‌ಗಳ ಅಕ್ಕಪಕ್ಕ ಒತ್ತುವರಿಯಾಗಿರುವ ಜಾಗವನ್ನ ತೆರವು ಮಾಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಗೋಡೆ ತೆರವುಗೊಳಿಸಿದ್ದರೆ ದೊಡ್ಡ ಕಟ್ಟಡವನ್ನೆ ಒಡಯಬೇಕಾಗುತ್ತದೆ ಎಂದು ಸಹ ಎಚ್ಚರಿಸಿದರು. ಇದನ್ನೂ ಓದಿ: Bengauru Rains Photo Gallery – ಮತ್ತೆ ಮಳೆಯಾಗಿದೆ…!

  • Bengauru Rains Photo Gallery – ಮತ್ತೆ ಮಳೆಯಾಗಿದೆ…!

    Bengauru Rains Photo Gallery – ಮತ್ತೆ ಮಳೆಯಾಗಿದೆ…!

    ಮಳೆ ಅಂದ್ರೆ ಏನೋ ಹರುಷ, ಸಂಭ್ರಮ.. ಆದ್ರೆ ಹಳ್ಳಿಯಲ್ಲಿ ಮಳೆ ಅಂದ್ರೆ ಸಂಮೃದ್ಧಿ. ಬೇಸಿಗೆಯ ಬೇಗೆಯನ್ನು ತೊಲಗಿಸಿ ಭೂರಮೆಯ ಬಂಜೆತನವ ತೊಡೆದು, ಹಸಿರು ಸೀರೆಯನುಡಿಸುವ ಅಮೃತ ಸಿಂಚನ. ಮಳೆಯ ಬಗ್ಗೆ ಹೇಳುತ್ತಾ ಹೋದ್ರೆ ವರ್ಣಿಸಲು ಪದಗಳೇ ಸಾಲುವುದಿಲ್ಲ. ಮಕ್ಕಳನ್ನು ಬಿಟ್ಟರೆ ಮಳೆಯನ್ನು ಹೆಚ್ಚು ಇಷ್ಟಪಡುವ ಜೀವವೆಂದರೆ ಅದು ನಮ್ಮ ರೈತ. ಅನ್ನದಾತ ತನ್ನ ಅನ್ನ ಹುಟ್ಟಿಸುವ ಕಾಯಕ ನಡೆಸಲು ಮಳೆರಾಯನ ಕೃಪೆ ಬೇಕೇ ಬೇಕು. ನಾವು ಚಿಕ್ಕವರಿದ್ದಾಗ ಈ ಮಳೆಯ ಹಿಂದೆಯೂ ಒಂದೊಂದು ಕಥೆ ಇರೋದನ್ನ ಅಜ್ಜಿ-ತಾತನಿಂದ ಕೇಳಿರ್ತೀವಿ. ಆದ್ರೆ ಈ ಬೆಂಗಳೂರಿನಂತಹ ಮಹಾನಗರಗಳನ್ನು ನೋಡಿದಾಗ ಮಳೆ ಯಾಕಾದ್ರೂ ಬರುತ್ತದೋ ಅನ್ನಿಸುತ್ತೆ.

    ಬೆಂಗಳೂರಿನಲ್ಲಿ ಕಳೆದ ರಾತ್ರಿಯಿಡೀ ಸುರಿದ ಮಳೆ ಇಂದು ಮಧ್ಯಾಹ್ನದಿಂದ ಮತ್ತೆ ಶುರುವಾಗಿದೆ. ನಗರದ ಮೇಖ್ರಿ ಸರ್ಕಲ್, ಸದಾಶಿವನಗರ, ಶಿವಾಜಿನಗರ, ವಸಂತನಗರ, ಹೈಗ್ರೌಂಡ್ಸ್, ವಿಧಾನಸೌಧ, ಸೆಂಟ್ರಲ್ ಸಿಲ್ಕ್ ಬೋರ್ಡ್, ಚಾಮರಾಜಪೇಟೆ, ಕೆ.ಆರ್ ಮಾರ್ಕೆಟ್, ಮೆಜೆಸ್ಟಿಕ್, ಮೈಸೂರು ರೋಡ್, ವಿಜಯನಗರ, ರಾಜಾಜಿನಗರ, ಮಲ್ಲೇಶ್ವರಂ, ಮಹಾಲಕ್ಷ್ಮಿ ಲೇಔಟ್, ಶೇಷಾದ್ರಿಪುರಂ, ಚಿಕ್ಕಪೇಟೆ, ಅರಮನೆ ಮೈದಾನ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಅವಾಂತರ ಸೃಷ್ಟಿಯಾಗಿದೆ. ಮಳೇ ಬಂದು ರಸ್ತೆಯಲ್ಲಾ ನೀರು ತುಂಬಿಕೊಂಡರೂ ಯಾರೇ ಕೂಡಾಗಲಿ ಊರೇ ಹೋರಾಡಲಿ ಅನ್ನೋ ತರ ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಿರುವ ಜನ ಒಂದುಕಡೆಯಾದ್ರೆ, ಅವಾಂತರಕ್ಕೆ ಸಿಕ್ಕಿ ನಲುಗಿದವರನ್ನ ರಕ್ಷಿಸುವ ಕೆಲಸ ಮತ್ತೊಂದೆಡೆ ಮುಂದುವರಿದಿದೆ. ಇದಕ್ಕೆ ಸಂಬಂಧಿಸಿದ ಒಂದಿಷ್ಟು ಚಿತ್ರಗಳು ಕಣ್ಣಿಗೆ ಕಟ್ಟಿದಂತಿವೆ…. ಮುಂದೆ ನೋಡಿ…

  • ಮಾನ್ಯತಾ ಟೆಕ್‌ ಪಾರ್ಕ್‌ ಜಲಾವೃತ – ಪರ್ಯಾಯ ಮಾರ್ಗ ಬಳಸುವಂತೆ ಮನವಿ

    ಮಾನ್ಯತಾ ಟೆಕ್‌ ಪಾರ್ಕ್‌ ಜಲಾವೃತ – ಪರ್ಯಾಯ ಮಾರ್ಗ ಬಳಸುವಂತೆ ಮನವಿ

    ಬೆಂಗಳೂರು: ರಾತ್ರಿ (Bengaluru Rain) ಸುರಿದ ಭಾರೀ ಮಳೆಗೆ ಮಾನ್ಯತಾ ಟೆಕ್‌ ಪಾರ್ಕ್ (Manyata Tech Park) ಜಲಾವೃತವಾಗಿದೆ.

    ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಮಳೆ ನೀರು ನಿಂತಿರುವುದರಿಂದ ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸಬೇಕೆಂದು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಸಿಸಿಬಿ ಕಚೇರಿ ಜಲಾವೃತ | ಬೊಮ್ಮನಹಳ್ಳಿ -ಸಿಲ್ಕ್ ಬೋರ್ಡ್ ರಸ್ತೆಯಲ್ಲಿ 3 ಅಡಿ ನೀರು

     

     

    ಮಹಾದೇವಪುರ, ಬೆಂಗಳೂರು ಪೂರ್ವ ವಲಯ, ಬೊಮ್ಮನಹಳ್ಳಿ, ಯಲಹಂಕ ವಲಯದಲ್ಲಿ ಭಾರೀ ಮಳೆಯಾಗಿದ್ದು, 4 ವಲಯದ 100 ಕ್ಕೂ ಹೆಚ್ಚು ಪ್ರದೇಶಗಳಿಗೆ ಸಮಸ್ಯೆಯಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ವರುಣನ ಅಬ್ಬರ – 10 ವರ್ಷದಲ್ಲಿ ಮೇ ತಿಂಗಳಲ್ಲಿ ದಾಖಲೆಯ ಮಳೆ

    ಹಲವು ಮನೆಗಳಿಗೆ ನೀರು ನುಗ್ಗಿ ಲೇಔಟ್ ಗಳು ಜಲಾವೃತಗೊಂಡಿದೆ. ಶಾಂತಿನಗರ, ಕೋರಮಂಗಲ, ಬೊಮ್ಮನಹಳ್ಳಿಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ.

    ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ನಾಗವಾರ ವಾರ್ಡ್‌ನಲ್ಲಿ ನಿವಾಸಿಗಳು ರಾತ್ರಿ ಜಾಗರಣೆ ಮಾಡಿದ್ದಾರೆ. Bengaluru Rain| ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್ ಬಂದ್ – ಶಿವಾನಂದ ಸರ್ಕಲ್‌ ಅಂಡರ್‌ ಪಾಸ್‌ ಮುಳುಗಡೆ

  • Bengaluru Rain| ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್ ಬಂದ್ – ಶಿವಾನಂದ ಸರ್ಕಲ್‌ ಅಂಡರ್‌ ಪಾಸ್‌ ಮುಳುಗಡೆ

    Bengaluru Rain| ಎಲೆಕ್ಟ್ರಾನಿಕ್‌ ಸಿಟಿ ಫ್ಲೈಓವರ್ ಬಂದ್ – ಶಿವಾನಂದ ಸರ್ಕಲ್‌ ಅಂಡರ್‌ ಪಾಸ್‌ ಮುಳುಗಡೆ

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಭಾನುವಾರ ರಾತ್ರಿ ಮತ್ತು ಸೋಮವಾರ ನಸುಕಿನ ಜಾವ ಸುರಿದ ಭಾರೀ ಮಳೆಗೆ (Rain) ಹಲವು ಭಾಗಗಳಲ್ಲಿ ಅಲ್ಲೋಲ ಕಲ್ಲೋಲವಾಗಿದೆ. ಎಲೆಕ್ಟ್ರಾನಿಕ್‌ ಸಿಟಿ ಫ್ಲೈ ಓವರ್‌ನಲ್ಲಿ (Electronic City) ನೀರು ನಿಂತ ಹಿನ್ನೆಲೆಯಲ್ಲಿ ಸಂಚಾರವನ್ನು ಬಂದ್‌ ಮಾಡಲಾಗಿದೆ.

    ಧಾರಾಕಾರ ಮಳೆಗೆ ಬೆಂಗಳೂರು ತತ್ತರವಾಗಿದ್ದು, ಮೆಜೆಸ್ಟಿಕ್, ಕೆ ಆರ್ ಮಾರುಕಟ್ಟೆ, ಜಯನಗರ, ವಿಜಯನಗರ, ಚಂದ್ರಲೇಔಟ್, ರಾಜಾಜಿನಗರ, ಆರ್ ಟಿ ನಗರ, ಹೆಬ್ಬಾಳ, ಕೋರಮಂಗಲ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಯಶವಂತಪುರ, ಪೀಣ್ಯ, ಬೊಮ್ಮನ ಹಳ್ಳಿ, ನಾಯಂಡಹಳ್ಳಿ, ಕುಮಾರಸ್ವಾಮಿ ಲೇಔಟ್‌, ಆರ್ ಆರ್ ನಗರ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

     

    ನಗರದ ಶಿವಾನಂದ ಸರ್ಕಲ್ (Shivananda Circle) ಅಂಡರ್ ಪಾಸ್ ಮುಳುಗಡೆಯಾಗಿದೆ. ನೀರಿನಲ್ಲಿ ಬಿಎಂಡಬ್ಲ್ಯೂ ಕಾರು ಕೆಟ್ಟು ನಿಂತು ವಿದೇಶಿ ಮಹಿಳೆಯೊಬ್ಬರು ಪರದಾಟ ನಡೆಸಿದ್ದಾರೆ. ಖಾಸಗಿ ಹೋಟೆಲಿಗೆ ತೆರಳುತ್ತಿದ್ದ ವಿದೇಶಿ ಮಹಿಳೆಯನ್ನು ಪಬ್ಲಿಕ್‌ ಟಿವಿ ರಕ್ಷಿಸಿದೆ.

    ಚಾಮರಾಜಪೇಟೆಯ ಶಿರಸಿ ವೃತ್ತದ ಬಳಿ ದೊಡ್ಡ ಮರ ರಸ್ತೆಗೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ವಾಹನ ಸಿಲುಕಿಲ್ಲ, ಪ್ರಾಣಾಪಾಯವಾಗಿಲ್ಲ.

    ಮತ್ತೆ ಸಾಯಿ ಲೇಔಟ್ ಜನರು ಸಂಕಷ್ಟ ಅನುಭವಿಸಿದ್ದು ರಾತ್ರಿಯಿಡೀ ಸುರಿದ ಮಳೆಗೆ ಲೇಔಟ್ ಪೂರ್ತಿ ಜಲಾವೃತವಾಗಿದೆ. ಮೊಣಕಾಲವರೆಗೂ ನೀರು ತುಂಬಿದ್ದು ಜನ ಆಕ್ರೋಶ ಹೊರಹಾಕಿದ್ದಾರೆ. ಮನೆಯ ಒಳಗಡೆಯೂ ನೀರು ತುಂಬಿದ್ದು ವಸ್ತುಗಳು ಚೆಲ್ಲಾಪಿಲ್ಲಿಯಾಗಿದೆ. ಭಾನುವಾರ ಈ ಜಾಗಕ್ಕೆ ಬಿಬಿಎಂಪಿ ಆಯುಕ್ತ ಮಹೇಶ್ವರರಾವ್ ಭೇಟಿ ನೀಡಿದ್ದರು.

  • ಪೂರ್ವ ಮುಂಗಾರು ಮಳೆಗೆ ಬೆಂಗಳೂರು ತತ್ತರ – ಒಂದೇ ಒಂದು ಮಳೆಗೆ ಕೆರೆಯಂತಾದ ರಸ್ತೆಗಳು

    ಪೂರ್ವ ಮುಂಗಾರು ಮಳೆಗೆ ಬೆಂಗಳೂರು ತತ್ತರ – ಒಂದೇ ಒಂದು ಮಳೆಗೆ ಕೆರೆಯಂತಾದ ರಸ್ತೆಗಳು

    – ಮನೆಗೆ ನುಗ್ಗಿದ ನೀರು, ವಾಹನಗಳು ಮುಳುಗಡೆ

    ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲಿ (Bengaluru Rains) ಶನಿವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆಯಾಗ್ತಿದ್ದಂತೆ ಮಳೆ ಅಬ್ಬರಿಸಿದೆ. ನಿನ್ನೆ ಸಂಜೆ ಸುರಿದ ಮಳೆಗೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ.

    ಎಡೆಬಿಡದೆ ಸುರಿದ ಮಳೆಯಿಂದಾಗಿ ಕೆಲಸ ಮುಗಿಸಿಕೊಂಡು ತೆರಳುತ್ತಿದ್ದ ಜನರು ಪರದಾಡಿದರು. ಭಾರೀ ಮಳೆಯಿಂದಾಗಿ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಹೈರಾಣಾದರು. ವಿಧಾನಸೌಧ, ಎಂಜಿ ರೋಡ್, ಚಿನ್ನಸ್ವಾಮಿ ಸ್ಟೇಡಿಯಂ, ಕಾರ್ಪೊರೇಷನ್ ಸರ್ಕಲ್, ಹಲಸೂರು, ರೇಸ್ ಕೋರ್ಸ್, ಮೆಜೆಸ್ಟಿಕ್, ಶೇಷಾದ್ರಿಪುರಂ, ಮಲ್ಲೇಶ್ವರಂ ಸುತ್ತಮುತ್ತಲೂ ಮಳೆಯಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಭಾರೀ ಮಳೆ – 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಜಾರಿ

    ಬನ್ನೇರುಘಟ್ಟ ಮುಖ್ಯರಸ್ತೆ ಮಳೆಯಿಂದ ಜಲಾವೃತಗೊಂಡಿದೆ. ಅರ್ಧ ಕಾರು ಮುಳುಗುವಷ್ಟರಮಟ್ಟಿಗೆ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಯಿತು. ಪಣತ್ತೂರು, ಕೋರಮಂಗಲ ರಸ್ತೆಯಲ್ಲೂ ನೀರು ನಿಂತು ಅವಾಂತರ ಸೃಷ್ಟಿಯಾಯಿತು. ರಣಭೀಕರ ಮಳೆಗೆ ಬೈಕ್, ಸ್ಕೂಟರ್‌ಗಳೇ ಮುಳುಗಡೆಯಾಗಿವೆ. ನೀರಿನಲ್ಲಿ ವಾಹನಗಳು ತೇಲಾಡಿವೆ.

    ನಾಗವಾರದಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡಿದರು. ಮನೆಯಲ್ಲಿದ್ದ ವಸ್ತುಗಳೆಲ್ಲಾ ಚಲ್ಲಾಪಿಲ್ಲಿಯಾಗಿದ್ದವು. ಮಳೆ ನಿಂತ ಬಳಿಕ ಮಳೆ ನೀರನ್ನ ಹೊರಹಾಕಿದರು. ಯಲಹಂಕದ ಸಾಯಿಲೇಔಟ್ ಮತ್ತೆ ಜಲಾವೃತಗೊಂಡಿದೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಅಬ್ಬರಿಸಿದ ವರುಣರಾಯ – ಎಲ್ಲೆಲ್ಲಿ ಏನಾಗಿದೆ?

    ಹೆಚ್‌ಬಿಆರ್ ಲೇಔಟ್‌ನ ತಗ್ಗುಪ್ರದೇಶಗಳಲ್ಲೂ ಮನೆಗಳಿಗೆ ಮಳೆ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಯಾಯಿತು. ಮತ್ತೊಂದೆಡೆ ರಸ್ತೆಯಲ್ಲಿ ಮೊಣಕಾಲುದ್ದ ನೀರು ನಿಂತು ವಾಹನಗಳು ಮುಳುಗಡೆಯಾಗಿದ್ದವು. ಶ್ರೀರಾಂಪುರದಲ್ಲಿ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬವೊಂದು ಆಟೋ ಮೇಲೆ ಉರುಳಿಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಟೋ ಚಾಲಕ ಉದಯ್ ಕುಮಾರ್ ಹಾಗೂ ಪ್ರಯಾಣಿಕರಾದ ಭಾರತಿ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಲ್ಲಿ ಬೈಕ್ ಚಾಲಕ ಗಾಯಗೊಂಡಿದ್ದಾನೆ.

    ಭಾನುವಾರವೂ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉ.ಕನ್ನಡ, ಶಿವಮೊಗ್ಗ, ಉಡುಪಿ, ದ.ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಬೆಂಗಳೂರು ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ | ಆರ್‌ಸಿಬಿ-ಕೆಕೆಆರ್‌ ಪಂದ್ಯಕ್ಕೆ ಅಡ್ಡಿ

  • ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ; ರಾಯಚೂರಲ್ಲಿ ಸಿಡಿಲಿಗೆ ಇಬ್ಬರು ಬಲಿ

    ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ; ರಾಯಚೂರಲ್ಲಿ ಸಿಡಿಲಿಗೆ ಇಬ್ಬರು ಬಲಿ

    – ಕೊಪ್ಪಳದಲ್ಲಿ ಸಿಡಿಲು ಬಡಿದು 35 ಕುರಿಗಳು ಸಾವು

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆಯಾಗಿದೆ. ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಕೊಪ್ಪಳದಲ್ಲಿ ಸಿಡಿಲಿಗೆ 35 ಕುರಿಗಳು ಬಲಿಯಾಗಿವೆ.

    ಚಿಕ್ಕಬಳ್ಳಾಪುರ ತಾಲೂಕಿನಾದ್ಯಾಂತ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಮಂಚನಬಲೆಯ ಅಂಡರ್ ಪಾಸ್‌ನಲ್ಲಿ ವಾಹನ ಸವಾರರು ಪರದಾಡಿದರು. ತುಮಕೂರು ನಗರ ಸೇರಿದಂತೆ ಸುತ್ತಮುತ್ತ ಅರ್ಧ ತಾಸಿಗೂ ಹೆಚ್ಚು ಕಾಲ ಬಿರುಗಾಳಿ ಸಹಿತ ಮಳೆ ಸುರಿದಿದೆ. ರಾಯಚೂರು ಗ್ರಾಮೀಣ ಭಾಗದಲ್ಲೂ ಗುಡುಗು-ಮಿಂಚು-ಬಿರುಗಾಳಿ ಸಹಿತ ಮಳೆಯಾಗಿದೆ. ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.

    ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿದ ಹಿತವಾದ ವಾತಾವರಣ ಇತ್ತು. ಈ ಮಧ್ಯೆ, ಮತ್ತೊಂದು ಮಳೆಗಾಲ ಬರ್ತಿದ್ದರೂ ಕೂಡ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಕಳಸದ ಹೆಬ್ಬಾಳೆ ಸೇತುವೆ ಕಾಮಗಾರಿ 2 ವರ್ಷಗಳಿಂದಲೂ ಪೂರ್ಣಗೊಂಡಿಲ್ಲ. ಹಾಗಾಗಿ, 3 ಕಿ.ಮೀ. ವರೆಗೆ ಟ್ರಾಫಿಕ್ ಜಾಮ್ ಆಗ್ತಿದೆ.

    ಬಾಗಲಕೋಟೆ ಜಿಲ್ಲೆಯಾದ್ಯಂತ ಆಲಿಕಲ್ಲು ಸುರಿದಿದೆ. ಬೇಸಿಗೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರದಿದ್ದಾನೆ. ಬಾಗಲಕೋಟೆ, ಬೀಳಗಿ, ಹುಮಗುಂದ ಹಾಗೂ ಬಾದಾಮಿಯಲ್ಲಿ ಉತ್ತಮ ಮಳೆಯಾಗಿದೆ.

    ಸಿಡಿಲಿಗೆ 35 ಕುರಿಗಳು ಸಾವು
    ಕೊಪ್ಪಳದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಕಳೆದ ಒಂದು ವಾರದಿಂದ ಮಳೆ ಬಿಡುವು ನೀಡಿತ್ತು. ಇಂದು ಮತ್ತೆ ಮಳೆಯಾಯಿತು. ಇದರಿಂದ ಜನಜೀವನ ಅಸ್ತವ್ಯಸ್ತವಾಯಿತು. ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದಲ್ಲಿ ಸಿಡಿಲು ಬಡಿದು 35 ಕುರಿಗಳು ಸಾವನ್ನಪ್ಪಿವೆ. ಜಮೀನಿನಲ್ಲಿ ಮೇಯಲು ಕುರಿಗಳನ್ನು ಬಿಟ್ಟಿದ್ದಾಗ ಸಿಡಿಲು ಬಡಿದಿದೆ. ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಆಗ್ರಹಿಸಿದ್ದಾರೆ.

    ರಾಯಚೂರು ತಾಲೂಕಿನ ಉಡಮಗಲ್ ಖಾನಾಪುರ ಹಾಗೂ ಮರ್ಚಟಾಳ ಗ್ರಾಮದಲ್ಲಿ ಸಿಡಿಲು ಬಡಿದು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ತಾಲೂಕಿನ ಉಡಮಗಲ್ ಖಾನಾಪುರದಲ್ಲಿ ಸಿಡಿಲು ಬಡಿದು ಕುರಿಗಾಯಿ ಮಹಿಳೆ 50 ವರ್ಷದ ಮಲ್ಲಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಹೊಲದಲ್ಲಿ ಕುರಿ ಮೇಯಿಸಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ. ನೇರವಾಗಿ ತಲೆಗೆ ಸಿಡಿಲು ಹೊಡೆದು ಬೆಂಕಿ ಹೊತ್ತಿಕೊಂಡು ಸ್ಥಳದಲ್ಲೇ ಮಹಿಳೆ ಸಾವಿಗೀಡಾಗಿದ್ದಾಳೆ. ಇನ್ನೊಂದೆಡೆ ರಾಯಚೂರು ತಾಲ್ಲೂಕಿನ ಮರ್ಚಟಾಳ ಗ್ರಾಮದಲ್ಲಿ ಸಿಡಿಲು ಬಡಿದು 46 ವರ್ಷದ ಹನುಮಂತ ಯಾದವ್ ಮೃತಪಟ್ಟಿದ್ದಾನೆ. ಮಧ್ಯಾಹ್ನ ವೇಳೆ ಏಕಾಏಕಿ ಗುಡಗು ಮಿಂಚು ಸಹಿತ ಅಕಾಲಿಕ ಮಳೆ ಸುರಿದಿದ್ದು, ಈ ವೇಳೆ ಸಿಡಿಲು ಬಡಿದು ತಾಲೂಕಿನಲ್ಲಿ ಇಬ್ಬರು ಅಸುನೀಗಿದ್ದಾರೆ. ಎರಡು ಪ್ರತ್ಯೇಕ ಘಟನಾ ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಬಳ್ಳಾರಿಯಲ್ಲಿ ಧಾರಾಕಾರ ಮಳೆಯಾಗಿದೆ. ಭರ್ಜರಿ ಮಳೆಗೆ ಹಲವೆಡೆ ಬೃಹತ್ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ನಗರದ ಹೊಸಪೇಟೆ ಹಾಗೂ ಸಿರಗುಪ್ಪ ರಸ್ತೆಯಲ್ಲಿ ಮರಗಳು ಬಿದ್ದು, ಸಂಚಾರಕ್ಕೆ ತೊಡಕಾಯಿತು. ಬೆಂಗಳೂರು ರಸ್ತೆಯಲ್ಲಿ ಹತ್ತಾರು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ತುಮಕೂರಿನಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು.

  • ಬೆಂಗಳೂರಲ್ಲಿ ಮಳೆ ಎಫೆಕ್ಟ್‌; ಕಾರಿನ ಮೇಲೆ ಬಿದ್ದ ಮರದ ಕೊಂಬೆ – ಬೈಕ್‌ ಸವಾರ ಜಸ್ಟ್‌ ಮಿಸ್‌

    ಬೆಂಗಳೂರಲ್ಲಿ ಮಳೆ ಎಫೆಕ್ಟ್‌; ಕಾರಿನ ಮೇಲೆ ಬಿದ್ದ ಮರದ ಕೊಂಬೆ – ಬೈಕ್‌ ಸವಾರ ಜಸ್ಟ್‌ ಮಿಸ್‌

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ (Bengaluru Rains) ರಾತ್ರಿ ಸುರಿದ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಎಲೆಕ್ಟ್ರಾನಿಕ್‌ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಕಾರಿನ ಮೇಲೆ ಮರದ ಕೊಂಬೆ ಬಿದ್ದಿತು. ಈ ವೇಳೆ ಬೈಕ್‌ ಸವಾರ ಜಸ್ಟ್‌ ಮಿಸ್‌ ಆಗಿದ್ದಾರೆ.

    ರಸ್ತೆಯಲ್ಲಿ ವಾಹನಗಳು ಓಡಾಡುವಾಗ ಮರದ ಕೊಂಬೆ ಬಿದ್ದಿದೆ. ಇಬ್ಬರು ಬೈಕ್‌ ಸವಾರರು ಪಾಸ್‌ ಆದ ಕೆಲವೇ ಸೆಕೆಂಡುಗಳಲ್ಲಿ ಕೊಂಬೆ ಬಿದ್ದಿದೆ. ಅವರ ಹಿಂದೆಯೇ ಬರುತ್ತಿದ್ದ ಕಾರಿನ ಮೇಲೆ ಕೊಂಬೆ ಬಿದ್ದಿತು. ಘಟನೆಯ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ – ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

    ಪೀಣ್ಯದಲ್ಲೂ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೃಹತ್‌ ಮರವೊಂದು ನೆಲಕ್ಕುರುಳಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್‌ ಕಂಬ ನೆಲಕ್ಕುರುಳಿದೆ. ಪರಿಣಾಮ ಪೀಣ್ಯ ಇಂಡಸ್ಟ್ರೀಸ್ ಭವನದಿಂದ ಹೆಚ್‌ಎಂಟಿ ಲೇಔಟ್ ಕಡೆಗೆ ಹೋಗುವ ರಸ್ತೆ ರಸ್ತೆ ಬಂದ್‌ ಆಯಿತು. ವಾಹನ ಸವಾರರು ಪರದಾಡುವಂತಾಯಿತು.

    ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುತ್ತಿದೆ. ಇದನ್ನೂ ಓದಿ: ಖಾಸಗಿ ಶಾಲೆಗಳ ದಾಖಲಾತಿಗೆ ಸರ್ಕಾರದಿಂದ ರೂಲ್ಸ್ – ಪೋಷಕರ ಸಂದರ್ಶನ, ಮನಸೋ ಇಚ್ಛೆ ಫೀಸ್‌ಗೆ ಬ್ರೇಕ್

  • ಒಂದೇ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ – ಎಲ್ಲೆಲ್ಲಿ ಎಷ್ಟು ಮಳೆ?

    ಒಂದೇ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ – ಎಲ್ಲೆಲ್ಲಿ ಎಷ್ಟು ಮಳೆ?

    – ಧರೆಗುರುಳಿದ ಬೃಹತ್ ಗಾತ್ರದ ಮರ, ಕಾರು-ಬೈಕ್‌ಗಳು ಜಖಂ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿಂದು (Silicon City) ಹಲವೆಡೆ ಮಳೆ ಸುರಿದಿದ್ದು, ಒಂದೇ ಮಳೆಗೆ ನಗರ ಅಸ್ತವ್ಯಸ್ತವಾಗಿದೆ.

    ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮದಿಂದ ಬೆಳಗ್ಗೆಯಿಂದಲೂ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಯಶವಂತಪುರ, ರಾಜಾಜೀನಗರ, ಮಾರತ್ತಹಳ್ಳಿ, ಹೆಚ್‌ಎಎಲ್ ಏರ್‌ಪೋರ್ಟ್, ಬೆಳ್ಳಂದೂರು, ಹೆಚ್‌ಆರ್‌ಎಸ್ ಲೇಔಟ್ ಸೇರಿದಂತೆ ವಿವಿಧೆಡೆ ಮಳೆಯಾಗಿದೆ.

    ನಗರದ ಕೆಲವು ಕಡೆಗಳಲ್ಲಿ ಅರೆಬರೆ ಕಾಮಗಾರಿಯಿಂದಾಗಿ ರಸ್ತೆಯಲ್ಲಿ ನೀರು ನಿಂತಿದ್ದು, ಸರಾಗವಾಗಿ ಹರಿದು ಹೋಗಲು ಸಮಸ್ಯೆಯಾಗುತ್ತಿದೆ. ಇನ್ನೂ ಕೆಲವು ಕಾಲುವೆಗಳನ್ನು ಸ್ವಚ್ಛಗೊಳಿಸದ ಕಾರಣ ಈ ಸಮಸ್ಯೆ ಉಂಟಾಗಿದೆ. ನೀರು ಹರಿದು ಹೋಗಲು ಜಾಗ ಬಿಡದೇ ಅವೈಜ್ಞಾನಿಕವಾಗಿ ವೈಟ್ ಟಾಪಿಂಗ್ ಕಾಮಗಾರಿ ಮಾಡಿದ್ದು, ಒಂದೇ ಮಳೆಗೆ ಬೆಂಗಳೂರಿನ ಬಣ್ಣ ಬಯಲಾಗಿದೆ.ಇದನ್ನೂ ಓದಿ:ಬಂಗಾಳಕೊಲ್ಲಿಯಲ್ಲಿ ಚುರುಕುಗೊಂಡ ಚಂಡಮಾರುತ – ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ

    ಯಾವ್ಯಾವ ರಸ್ತೆಗಳಲ್ಲಿ ಸಮಸ್ಯೆ?
    -ಸೆಂಟ್ರಲ್ ಜೈಲ್ ರೋಡ್‌ನಿಂದ ರಾಯಸಂದ್ರ ಕಡೆಗೆ
    -ಹೊರಮಾವು ನಗರದಿಂದ ರಾಮಮೂರ್ತಿ ನಗರದ ಕಡೆಗೆ
    -ಶ್ರೀನಿವಾಗಿಲು ಒಳವರ್ತುಲ ರಸ್ತೆ
    -ಕಾವೇರಿ ಕೆಳಸೇತುವೆಯಿಂದ ಪ್ಯಾಲೇಸ್ ಗುಟ್ಟಹಳ್ಳಿ ಕಡೆಗೆ

    ಕಾರು, ಬೈಕ್‌ಗಳು ಜಖಂ
    ಇನ್ನೂ ರಾಜಾಜಿನಗರದಲ್ಲಿ ಮಳೆ ಜೋರಾಗಿ ಸುರಿದಿದ್ದು, ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಎರಡು ಕಾರುಗಳ ಮೇಲೆ ಮರ ಬಿದ್ದಿದೆ. ಪರಿಣಾಮ ಸ್ಕಾರ್ಫಿಯೋ ಮತ್ತು ಸ್ವಿಫ್ಟ್ ಕಾರಿನ ಜೊತೆಗೆ ಪಕ್ಕದಲ್ಲಿದ್ದ ಬೈಕ್‌ಗಳು ಜಖಂಗೊಂಡಿವೆ. ಮರ ಬಿದ್ದು ರಸ್ತೆ ಬ್ಲಾಕ್ ಆಗಿದ್ದು, ಸ್ಥಳಕ್ಕೆ ಬಿಬಿಎಂಪಿ ಹಾಗೂ ಕೆ.ಇ.ಬಿ ಸಿಬ್ಬಂದಿ ಭೇಟಿ ನೀಡಿದ್ದು, ಮರ ತೆರವುಗೊಳಿಸುತ್ತಿದ್ದಾರೆ.

    ಈಜೀಪುರ ಮುಖ್ಯ ರಸ್ತೆಯಲ್ಲಿ ಕಟ್ಟಡದ ನೆಲ ಮಹಡಿ ಜಲಾವೃತಗೊಂಡಿದ್ದು, ಎರಡು ಅಡಿಯಷ್ಟು ನೀರು ನಿಂತಿದೆ. ಒಳಭಾಗದಲಿದ್ದ ಎರಡು ಕಾರು, ನಾಲ್ಕು ಬೈಕ್ ಜಲಾವೃತಗೊಂಡಿದ್ದು, ಸದ್ಯ ಮೋಟರ್ ಮೂಲಕ ನೀರು ಹೊರತೆಗೆಯಲಾಗುತ್ತಿದೆ. ಜೊತೆಗೆ ಬಿಟಿಎಂ ಲೇಔಟ್ ರಸ್ತೆಗಳು ಜಲಾವೃತಗೊಂಡಿದ್ದು, ಕೃತಕ ನದಿ ಸೃಷ್ಟಿಯಾಗಿದೆ.

    ಮಳೆಯಿಂದಾಗಿ ಲೂಲು ಮಾಲ್ ಎದುರುಗಡೆ ಟ್ರಾಫಿಕ್ ಜಾಮ್ ಆಗಿದ್ದು, ನಡುರಸ್ತೆಯಲ್ಲಿಯೇ ಬೆಂಗಳೂರಿನಿಂದ ತುಮಕೂರು ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಹಿಂಬದಿಯ ಆಕ್ಸಲ್ ಕಟ್ಟಾಗಿ ಕೆಟ್ಟು ನಿಂತಿದೆ. ಒಂದು ಕಡೆ ಮಳೆ, ಇನ್ನೊಂದು ಬಸ್ ಕೆಟ್ಟು ನಿಂತಿದ್ದು, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹಾಗೂ ಸಾರ್ವಜನಿಕರು ಸೇರಿ ಬಸ್ ತಳ್ಳಿ ಬದಿಗೆ ಹಾಕಿದ್ದಾರೆ.

    ಎಲ್ಲೆಲ್ಲಿ ಎಷ್ಟು ಮಳೆ?
    ಕೋರಮಂಗಲ – 36.50 ಮೀ.ಮೀ
    ಹೆಚ್‌ಎಎಲ್ ಏರ್‌ಪೋರ್ಟ್ – 29.50 ಮೀ.ಮೀ
    ಮಾರತಹಳ್ಳಿ – 27.50 ಮೀ.ಮೀ
    ವನ್ನಾರ್‌ಪೇಟೆ – 24 ಮೀ.ಮೀ
    ಹೆಚ್‌ಎಎಲ್ ಏರ್‌ಪೋರ್ಟ್ 2 – 21 ಮೀ.ಮೀ
    ವಿಜ್ಞಾನ ನಗರ – 17 ಮೀ.ಮೀ
    ಹೆಚ್‌ಎಸ್‌ಆರ್ ಲೇಔಟ್ -15.50 ಮೀ.ಮೀ
    ಬೆಲ್ಲಂದೂರು – 15 ಮೀ.ಮೀ
    ಗರುಡಾಚಾರಪಾಳ್ಯ – 14.50 ಮೀ.ಮೀ
    ಬಿಟಿಎಂ ಲೇಔಟ್ – 14 ಮೀ.ಮೀ
    ಕೆಆರ್ ಪುರಂ – 13.50 ಮೀ.ಮೀ
    ಪಟ್ಟಾಭಿರಾಮನಗರ – 13.50 ಮೀ.ಮೀ
    ರಾಮಮೂರ್ತಿ ನಗರ -13 ಮೀ.ಮೀ
    ವಿದ್ಯಾಪೀಠ – 11.50 ಮೀ.ಮೀ
    ಹೊಯ್ಸಳ ನಗರ – 11 ಮೀ.ಮೀ
    ದೊಡ್ಡಾನೆಕುಂಡಿ – 11 ಮೀ.ಮೀ
    ಹೆಮ್ಮಿಗೆಪುರ – 10 ಮೀ.ಮೀ.ಇದನ್ನೂ ಓದಿ:ಬೆಂಗಳೂರಿನ ಹಲವೆಡೆ ಬೆಳಗ್ಗೆಯೇ ತುಂತುರು ಮಳೆ