ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru Airport) ರನ್‌ವೇನಲ್ಲಿ ತುಂತುರು ಮಳೆಯಾಗಿದೆ.
ಇಂದು ಬೆಂಗಳೂರು (Bengaluru Rains) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಬೆಂಗಳೂರು ಏರ್ಪೋರ್ಟ್ನಲ್ಲಿ ತುಂತುರು ಮಳೆಬಂದಿದೆ.
ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಚಿಕ್ಕಮಗಳೂರು, ತುಮಕೂರು, ರಾಮನಗರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ಸೂಚನೆ ನೀಡಿತ್ತು.
ಉಳಿದ ಜಿಲ್ಲೆಗಳಲ್ಲಿ ಒಣಹವೆ ಅಧಿಕ ಇದ್ದು, ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.
ಬೆಂಗಳೂರು: ಫೆಂಗಲ್ ಚಂಡಮಾರುತ ಎಫೆಕ್ಟ್‌ನಿಂದಾಗಿ ಬೆಂಗಳೂರಲ್ಲಿ (Bengaluru Rains) ಕಳೆದ 2 ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಹೊಸೂರು ಹೈವೇಯಲ್ಲಿ ನೀರು ತುಂಬಿ ಸಂಚಾರಕ್ಕೆ ಸಮಸ್ಯೆಯಾಗಿದೆ.
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯ ಕನ್ನಡಿ ಹಿಡಿದಂತಿದೆ. ವಾಹನಗಳು ಸಂಚಾರ ಮಾಡಲು ಸಾಧ್ಯ ಆಗದೇ ಪರದಾಡಿವೆ. ಅಂಡರ್ ಪಾಸ್ ಮೂಲಕ ರಸ್ತೆ ದಾಟಲು ಕೂಡ ಸಾಧ್ಯ ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೆದ್ದಾರಿಯ ಅಂಡರ್‌ಪಾಸ್ ಮುಂಭಾಗ ನೀರು ತುಂಬಿದೆ.
ನಗರದಲ್ಲಿ ಮೂರು ದಿನಗಳಿಂದ ತುಂತುರು ಮಳೆಯಾದ ಹಿನ್ನೆಲೆಯಲ್ಲಿ ಮಳೆಯ ತೇವ ಹೆಚ್ಚಾಗಿ ವಿದ್ಯಾಪೀಠ ವಾರ್ಡ್‌ನಲ್ಲಿ ಕಾಂಪೌಂಡ್ ಮಣ್ಣು ಕುಸಿದಿದೆ. ಎರಡು ತಿಂಗಳ ಹಿಂದೆ ಮಳೆಗೆ ಪಾರ್ಕ್ ಗೋಡೆ ಕುಸಿದಿತ್ತು. ಮತ್ತೆ ಮೂರು ದಿನಗಳಿಂದ ತುಂತುರು ಮಳೆಯ ಹಿನ್ನೆಲೆ, ಕಾಂಪೌಂಡ್ ಜಾಗದಲ್ಲಿ ಮಣ್ಣು ಕುಸಿತ ಆಗಿದೆ. ಇದನ್ನೂ ಓದಿ: ರಾಜ್ಯದ ವಿವಿಧೆಡೆ ಮುಂದಿನ 3 ಗಂಟೆಯ ಒಳಗೆ ಭಾರೀ ಮಳೆಯ ಎಚ್ಚರಿಕೆ
ವಿಧಾನಸೌಧದ ಎದುರು ನೆಲಕ್ಕುರುಳಿದ ಮರ
ನಿರಂತರ ಮಳೆಯಿಂದಾಗಿ ವಿಧಾನಸೌಧದ ಎದುರು ಮರ ನೆಲಕ್ಕುರುಳಿದೆ. ಫುಟ್‌ಪಾತ್ ಮೇಲೆ ಮರ ಬಿದ್ದಿದ್ದರಿಂದ ಜನರಿಗೆ ಓಡಾಟಕ್ಕೆ ಸಮಸ್ಯೆಯಾಗಿದೆ. ಆದರೆ, ಅದನ್ನು ತೆರವುಗೊಳಿಸುವ ಕಾರ್ಯದಲ್ಲಿ ವಿಳಂಬವಾಗಿದೆ.
ಬೆಂಗಳೂರು: ಬಾಬುಸಾಬ್‌ಪಾಳ್ಯದಲ್ಲಿ (Babusapalya) ಭಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತದಿಂದಾಗಿ 8 ಮಂದಿ ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಇಇ ಕೆ.ವಿನಯ್ ಅವರನ್ನು ಅಮಾನತು ಮಾಡಲಾಗಿದೆ.
ನಿಗದಿ ಅವಧಿಯಲ್ಲಿ ನೋಟಿಸ್ ನೀಡಿದ್ದರೂ, ಅಕ್ರಮ ಕಟ್ಟಡ ಎಂದು ತಿಳಿದರೂ ತೆರವು ಮಾಡುವಲ್ಲಿ ಎಇಇ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಬಿಬಿಎಂಪಿ ಮಹದೇವಪುರ ವಲಯ ಆಯುಕ್ತರ ವರದಿ ಮೇರೆಗೆ ಅಮಾನತು ಮಾಡಿ ಆದೇಶಿಸಲಾಗಿದೆ.
ಭಾರೀ ಮಳೆಗೆ ಕಾರಣಕ್ಕೆ ಮಂಗಳವಾರ ಮಧ್ಯಾಹ್ನ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ (Bengaluru Building Collapse) ಬುಡಮೇಲಾಗಿ ಬಿದ್ದಿತು. ಕಟ್ಟಡ ನಿರ್ಮಾಣದಲ್ಲಿ ತೊಡಗಿದ್ದ ಹಲವಾರು ಕಾರ್ಮಿಕರು ಅದರೊಳಗೆ ಸಿಲುಕಿಕೊಂಡಿದ್ದರು. ಅವರ ಪೈಕಿ 8 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಉಳಿದವರ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು ಕಟ್ಟಡ ಕುಸಿತ- ಮಾಲೀಕ, ಮಗನ ವಿರುದ್ಧ ಎಫ್‌ಐಆರ್ ದಾಖಲು
– ರಾಜಕಾಲುವೆ ಒತ್ತುವರಿ ತೆರವಿಗೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿಎಂ ಆದೇಶ
ಬೆಂಗಳೂರು: ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದರು.
ಇದರ ಜತೆಗೆ ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದ್ದು, ಮಳೆ ನೀರುಗಾಲುವೆಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಲು ವಿಶ್ವಬ್ಯಾಂಕಿನಿಂದ 1 ಸಾವಿರ ಕೋಟಿ ಸಾಲ ಪಡೆದು ಈಗಾಗಲೇ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಮಳೆಯಿಂದ ಸಮಸ್ಯೆಗೆ ಒಳಗಾಗಿರುವ ಯಲಹಂಕದ ಕೇಂದ್ರೀಯ ವಿಹಾರ ವಸತಿ ಸಮುಚ್ಚಯ, ಬ್ಯಾಟರಾಯನಪುರದ ಮರಿಯಣ್ಣಪಾಳ್ಯ, ಕೆ.ಆರ್. ಪುರಂನ ಹೊರಮಾವಿನ ಶ್ರೀ ಸಾಯಿ ಬಡಾವಣೆಗೆ ಶಿವಕುಮಾರ್ ಅವರು ಪಾಲಿಕೆ ಅಧಿಕಾರಿಗಳ ತಂಡದೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪರಿಹಾರ ಕಾರ್ಯ ವೀಕ್ಷಣೆ ಜೊತೆಗೆ ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘದ ಸದಸ್ಯರ ಜೊತೆ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿದರು. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿ ಜೊತೆ ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಸ್ಥಳಾಂತರಗೊಂಡ ನಿವಾಸಿಗಳಿಗೆ ಸೂಕ್ತ ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಭೇಟಿ ವೇಳೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ, ನೀರುಗಾಲುವೆ ಸ್ವಚ್ಛತಾ ಕೆಲಸದ ವಿಚಾರವಾಗಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಕೆಲಸ ಮಾಡುತ್ತಿದ್ದಾರೆ. ಎನ್‌ಡಿಆರ್‌ಎಫ್ ಅನುದಾನ ಸೇರಿದಂತೆ ವಿವಿಧ ಯೋಜನೆಗಳ ಅಡಿ ಕೆರೆಗಳ ಸ್ವಚ್ಛತೆ, ಹೂಳು ತೆಗೆಯುವ ಕೆಲಸ ಮಾಡಲಾಗುವುದು. ಶೀಘ್ರದಲ್ಲೇ ಕೆರೆ ನಿರ್ವಹಣಾ ಸಮಿತಿಯ ಸಭೆ ಕರೆಯಲಾಗುವುದು ಎಂದು ಹೇಳಿದರು.
ಮುಲಾಜಿಲ್ಲದೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ
ಅನೇಕ ಕಡೆ ಖಾಸಗಿಯವರು ರಾಜಕಾಲುವೆ ಒತ್ತುವರಿ ತೆರವುಗೊಳಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇವರು ಕೆಲಸ ಮಾಡಲು ಬಿಡುತ್ತಿಲ್ಲ. ತುರ್ತು ಸಂದರ್ಭದಲ್ಲಿ ಇವುಗಳಿಗೆ ಅವಕಾಶವಿಲ್ಲ. ತೆರವುಗೊಳಿಸಲು ಕಾನೂನಿನಲ್ಲಿ ಅವಕಾಶವಿದೆ. ಯಾವುದನ್ನೂ ಪರಿಗಣಿಸದೆ ಕೂಡಲೇ ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಿ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆ ಅಡಿಯಲ್ಲಿ ಕೂಡಲೇ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಜೊತೆಗೆ ಬಿಡಿಎ ಮತ್ತು ಬಿಬಿಎಂಪಿಗೂ ಸೂಚನೆ ನೀಡಿದ್ದೇನೆ. ಯಾರೇ ಖಾಸಗಿಯವರು ಅಡ್ಡಿಪಡಿಸಿದರೂ ನಾವು ನಮ್ಮ ಕೆಲಸ ಮಾಡುತ್ತೇವೆ. ಇಂತಹ ಸಂದರ್ಭದಲ್ಲಿ ನ್ಯಾಯಲಯದ ಪ್ರಕರಣ ಮುಖ್ಯವಲ್ಲ, ನಮಗೆ ಸಾರ್ವಜನಿಕರ ಹಿತ ಮುಖ್ಯ. ನೀರು ಸರಾಗವಾಗಿ ಹರಿಯುವ ಕಡೆ ಒತ್ತುವರಿ ತೆರವುಗೊಳಿಸಲು ಕೂಡಲೇ ಕೆಲಸ ಮಾಡಬೇಕು ಎಂದು ಆದೇಶ ನೀಡಿದ್ದೇನೆ ಎಂದರು.
ಯಲಹಂಕದ ಕೇಂದ್ರೀಯ ವಿಹಾರದಲ್ಲಿ 8 ಬ್ಲಾಕ್‌ಗಳಿದ್ದು ಸುಮಾರು 600 ಕ್ಕೂ ಹೆಚ್ಚು ಫ್ಲಾಟ್‌ಗಳಿವೆ. ಇವುಗಳನ್ನು ಸದ್ಯದ ಮಟ್ಟಿಗೆ ಬಿಬಿಎಂಪಿ ರಕ್ಷಣಾ ಕಾರ್ಯಕ್ಕಾಗಿ ಸುಪರ್ದಿಗೆ ತೆಗೆದುಕೊಂಡಿದೆ. 95% ರಷ್ಟು ನಿವಾಸಿಗಳ ಸ್ಥಳಾಂತರಕ್ಕೆ ಸಹಕಾರ ನೀಡಿದ್ದಾರೆ. 20 ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದಿದ್ದರೂ ನಾವು ಇರುತ್ತೇವೆ ಎಂದು ಹೇಳಿದ್ದಾರೆ. ಅವರನ್ನು ಇಲ್ಲಿಯೇ ಬಿಡಲು ಆಗುವುದಿಲ್ಲ. ಏಕೆಂದರೆ ಕುಡಿಯಲು ನೀರಿಲ್ಲ, ತಿನ್ನಲು ಆಹಾರವಿಲ್ಲ. ಹೀಗಿದ್ದಾಗ ಏನಾದರೂ ತೊಂದರೆ ಆದರೆ ನಾವು ಜವಾಬ್ದಾರರಾಗುತ್ತೇವೆ. ಈ ಕಾರಣಕ್ಕೆ ಅವರ ಮನವೊಲಿಸಿ ಹತ್ತಿರದಲ್ಲಿಯೇ ವಸತಿಗೃಹಗಳಲ್ಲಿ ವ್ಯವಸ್ಥೆ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಅನೇಕ ವಯಸ್ಸಾದವರು ಮನೆ ಬಿಟ್ಟು ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಮನೆಯ ಬಗ್ಗೆ ಭಾವನಾತ್ಮಕವಾಗಿ ಯೋಚನೆ ಮಾಡುತ್ತಿದ್ದಾರೆ. ಅಂತಹವರಿಗೆ ಒಂದು ವಾರದ ಮಟ್ಟಿಗೆ ಹತ್ತಿರದಲ್ಲಿಯೇ ವಸತಿಗೃಹಗಳಲ್ಲಿ ವ್ಯವಸ್ಥೆ ಮಾಡಿಕೊಡಲಾಗುವುದು. ಇದು ನಮ್ಮ ಜವಾಬ್ದಾರಿ. ಇಲ್ಲಿನ ನಿವಾಸಿಗಳ ಸಂಘದವರೂ ಸಹಕಾರ ನೀಡುತ್ತಿದ್ದಾರೆ. ತೊಂದರೆಗೆ ಒಳಗಾದವರಿಗೆ ಅವರ ಮನೆಯಂತೆಯೇ ಸೌಲಭ್ಯ ಕಲ್ಪಿಸಿಕೊಡಲಾಗುವುದು. ನಿವಾಸಿಗಳು ಮುಜುಗರಕ್ಕೆ ಒಳಗಾಗದೆ ಅಧಿಕಾರಿಗಳ ಬಳಿ ಕೇಳಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಳೆ ನೀರು ತುಂಬಿಕೊಂಡಿರುವುದಕ್ಕೆ ಭವಿಷ್ಯದಲ್ಲಿ ಪರಿಹಾರವೇನು ಎಂದು ಕೇಳಿದಾಗ, ಬೆಂಗಳೂರಿನ ಹಾಗೂ ಯಲಹಂಕ ಇತಿಹಾಸದಲ್ಲಿಯೇ 115-120 ವರ್ಷಗಳ ನಂತರ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ನಮಗೆ ಇಷ್ಟು ಜಾಸ್ತಿ ಮಳೆ ಬರುತ್ತದೆ ಎನ್ನುವ ಕಲ್ಪನೆಯೂ ಇರಲಿಲ್ಲ. ಎಲ್ಲೆಲ್ಲಿ ನೀರು ನುಗ್ಗುತ್ತಿದೆ ಹಾಗೂ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡುವುದಕ್ಕೆ ಜಾಗಗಳನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದರು.
ಅಕ್ಕಪಕ್ಕದಲ್ಲಿ ಕೆರೆಗಳ ಪಕ್ಕ ನೀರು ಹರಿಯಲು ಮತ್ತು ನಿಂತುಕೊಳ್ಳಲು ಜಾಗವಿತ್ತು, ಈಗ ಜಾಗ ಕಡಿಮೆಯಾಗಿದೆ. ಅದಕ್ಕಾಗಿ ಶಾಶ್ವತ ಪರಿಹಾರವನ್ನು ಕಲ್ಪಿಸಲಾಗುವುದು. ಈ ರೀತಿಯ ಅವಘಡ ನಮ್ಮಲ್ಲಿ ಮಾತ್ರವಲ್ಲ, ಮುಂಬೈ ಸೇರಿದಂತೆ ಅನೇಕ ನಗರಗಳಲ್ಲಿ ಆಗಿದೆ. ಇತ್ತೀಚೆಗೆ ಫ್ರಾನ್ಸ್‌ನಲ್ಲಿಯೂ ತೊಂದರೆ ಆಗಿದೆ. ನಾವು ಶೀಘ್ರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ಮಾತುಗಳನ್ನಾಡಿದರು.
ಬೆಂಗಳೂರು: ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ (Bengaluru) ಹಲವಾರು ಅವಘಡಗಳು ಸಂಭವಿಸುತ್ತಿವೆ. ಮಂಗಳವಾರ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಐದು ಜನ ಮೃತಪಟ್ಟಿರುವ ಘಟನೆ ನಡೆದಿದೆ.
ನಿರ್ಮಾಣ ಹಂತದ ಕಟ್ಟಡ ದುರಂತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ರಾತ್ರಿಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ನಡೆಯಿತು. ಮಧ್ಯರಾತ್ರಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನು ಕೆಲವರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಹೊರ ತೆಗೆಯಲು ಜೆಸಿಬಿ, ಹಿಟಾಚಿಗಳ ಮೂಲಕ ಕುಸಿದ ಕಟ್ಟಡದ ಅವಶೇಷಗಳನ್ನು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಜೆಡಿಎಸ್‌ನಿಂದ ಕಣಕ್ಕೆ ಇಳಿಯುತ್ತಾರಾ ಯೋಗೇಶ್ವರ್? – ಕೊನೆ ಕ್ಷಣದ ಕಸರತ್ತು ಆರಂಭ
ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ಭೇಟಿ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ. 6 ಮಂದಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ – 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಬೆಂಗಳೂರು ಮಳೆಯೂರು ಆಗಿದೆ. ಹತ್ತಾರು ಬಡಾವಣೆಗಳು ಜಲಾವೃತವಾಗಿವೆ. ಸಿಲಿಕಾನ್ ಸಿಟಿಯಲ್ಲಿ ಅಕ್ಷರಶಃ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
2000ಕ್ಕೂ ಹೆಚ್ಚು ಮಂದಿ ವಾಸವಿರುವ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಮತ್ತೆ ಜಲಮಯವಾಗಿದ್ದು, ಕಾರುಗಳು ಓಡಾಡಬೇಕಾದ ಜಾಗದಲ್ಲಿ ಬೋಟ್‌ಗಳು ಓಡಾಡುತ್ತಿವೆ. ರಸ್ತೆಗಳಲ್ಲಿ ನೀರು ಖಾಲಿಯಾಗದ ಸನ್ನಿವೇಶವಿದೆ. ರಸ್ತೆಗಳಂತೂ ಹಾಳುಗುಂಡಿಗಳಾಗಿ ಬದಲಾಗಿವೆ. ಬೆಂಗಳೂರು ಜನ ದಿಕ್ಕೆಟ್ಟಿದ್ದಾರೆ. ಸರ್ಕಾರದ ವಿರುದ್ಧ ವಿಪಕ್ಷಗಳ ಟೀಕೆ-ಆಕ್ರೋಶ-ಲೇವಡಿ ವ್ಯಕ್ತವಾಗಿದೆ. ಬೋಟ್ ಭಾಗ್ಯಕ್ಕೆ ಆಗ್ರಹಿಸಿದ್ದಾರೆ. ಆದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಎಲ್ಲರೂ ಕೆಲಸ ಮಾಡ್ತಿದ್ದಾರೆ. ನಾನು ಭೇಟಿ ಕೊಡೋದೇನು ದೊಡ್ಡ ವಿಚಾರವಲ್ಲ. ನನಗೆ ಪಬ್ಲಿಸಿಟಿ ಇಷ್ಟವಿಲ್ಲ ಎಂದಿದ್ದಾರೆ.
ಮೇಘಸ್ಫೋಟದಂತಹ ಮಳೆಗೆ ಬೆಂಗಳೂರು ಅಸ್ತವ್ಯಸ್ತವಾಗಿದೆ. ಕಳೆದ ರಾತ್ರಿ ಬೆಂಗಳೂರು ನಗರದಲ್ಲಿ 157, ಗ್ರಾಮೀಣ ಭಾಗದಲ್ಲಿ 176 ಮಿಲಿಮೀಟರ್ ಮಳೆ ಬಿದ್ದಿದೆ. ಇಂದು ದಿನವಿಡೀ ಬಿಟ್ಟುಬಿಡದೇ ಮಳೆಯಾಗಿದೆ. ಕೆರೆಗಳು, ರಾಜಕಾಲುವೆಗಳು ಉಕ್ಕಿ ಹರಿದು ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ಭಾಗಗಳು ಜಲದಿಗ್ಬಂಧನಕ್ಕೆ ಒಳಗಾಗಿವೆ. ರಸ್ತೆಗಳಲ್ಲಿ ನದಿಯೋಪಾದಿಯಲ್ಲಿ ನೀರು ಹರಿದಿದೆ. ಕೆಲವೆಡೆ ಮೊಳಕಾಲುಮಟ್ಟದವರೆಗೆ ನೀರು ನಿಂತಿದೆ.
ಹತ್ತಾರು ಬಡಾವಣೆಗಳು ಜಲಾವೃತಗೊಂಡಿವೆ. ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಮಳೆ ಸಂತ್ರಸ್ತರನ್ನು ರಕ್ಷಿಸಲು ಬೋಟ್‌ಗಳನ್ನು ಬಳಸಲಾಗ್ತಿದೆ. ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಅನ್ನು ಬಿಬಿಎಂಪಿ ಒಂದು ವಾರ ವಶಕ್ಕೆ ಪಡೆದಿದೆ. ಮಳೆ ಪರಿಸ್ಥಿತಿ ವೀಕ್ಷಿಸಲು ಭೇಟಿ ಕೊಟ್ಟ ಸ್ಥಳೀಯ ಶಾಸಕ ಕೃಷ್ಣಬೈರೇಗೌಡಗೆ ಜನರು ಕ್ಲಾಸ್ ತೆಗೆದುಕೊಂಡರು. ಎಲ್ಲೆಂದರಲ್ಲಿ ಮರಗಳು ಉರುಳ್ತಿವೆ. ಕಟ್ಟಡವೊಂದು ಉರುಳಿದೆ. ಭಾರೀ ಮಳೆ ಕಾರಣ ಕಳೆದ ರಾತ್ರಿ 20ಕ್ಕೂ ಹೆಚ್ಚು ವಿಮಾನಗಳ ಸೇವೆಗಳಲ್ಲಿ ವಿಳಂಬ ಉಂಟಾಗಿದೆ. ನಾಲ್ಕು ಇಂಡಿಗೋ ವಿಮಾನಗಳನ್ನು ಚೆನ್ನೈನಲ್ಲಿ ಲ್ಯಾಂಡ್ ಮಾಡಿಸಲಾಗಿದೆ. ಸದ್ಯಕ್ಕೆ ಮಳೆ ನಿಲ್ಲೋ ಲಕ್ಷಣ ಕಾಣುತ್ತಿಲ್ಲ. ಬುಧವಾರ ಕೂಡ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು: ನಗರದಲ್ಲಿ ಮಳೆ ಆಗುತ್ತಿರುವ ಸಂದರ್ಭದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡದೆ ಇರುವುದಕ್ಕೆ ಅಲ್ಲಿ ಹೋಗಿ ನಾನು ಪ್ರಚಾರ ತೆಗೆದುಕೊಳ್ಳುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಅಧಿಕಾರಿಗಳು 48 ಗಂಟೆ ಸತತವಾಗಿ ಕೆಲಸ ಮಾಡಿದ್ದಾರೆ. ನಾನೇ ಕೆಲವರನ್ನ ಈಗ ರಿಲೀವ್ ಮಾಡಲು ಹೇಳಿದ್ದೇನೆ. ನಿನ್ನೆ ಇಡೀ ದಿನ ಬಿಜೆಪಿಯವರಿಗೆ ಕಾಣಿಸಿದ್ದೇನೆ ಅಲ್ವಾ. ನಿನ್ನೆ ತಡರಾತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಆರ್ಭಟ; ನಾಳೆ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಚೌಡೇಶ್ವರಿ ನಗರದ 150 MM ಮಳೆ ಬಿದ್ದಿದೆ, ಜಾಸ್ತಿ ಮಳೆ ಆಗಿದೆ. ಅಧಿಕಾರಿಗಳು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಎಲ್ಲರಿಗೂ ಮಾರ್ಗದರ್ಶನ ನೀಡಿದ್ದೇನೆ. ಕೇಂದ್ರ ವಿದ್ಯಾಲಯ, ಟಾಟಾ ನಗರದಿಂದ ನೀರು ಎತ್ತುವ ಕೆಲಸ ಆಗ್ತಿದೆ. ಐದು ಎಸ್‌ಡಿಆರ್‌ಎಫ್ ತಂಡ ಕೆಲಸ ಮಾಡ್ತಿದೆ. ನನಗೆ ವಿಸಿಟ್ ದೊಡ್ಡದೇನು ಅಲ್ಲ. ಪಬ್ಲಿಸಿಟಿ ನನಗೆ ಮುಖ್ಯ ಅಲ್ಲ. ಅದಕ್ಕಾಗಿ ಒಂದು ಪ್ರತ್ಯೇಕ ಟೀಂ ಮಾಡಿದ್ದೇವೆ. ಎಲ್ಲೆಲ್ಲಿ ಮಳೆ ಸಮಸ್ಯೆ ಇದೆ ಎಂಬ ಬಗ್ಗೆ ವರದಿ ನೀಡಲು ಹೇಳಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಕೃತಿ ಮುಂದೆ ಯಾರೂ ಇಲ್ಲ. ದುಬೈ, ದೆಹಲಿ ಸೇರಿದಂತೆ ಹಲವೆಡೆ ಮಳೆ ಅಗ್ತಿದೆ. ಬರಗಾಲ ಪ್ರದೇಶದಲ್ಲಿಯೂ ಮಳೆ ಆಗ್ತಿದೆ. ನಾವು ಇಡೀ ತಂಡದಿಂದ ಮಾಹಿತಿ ತರಿಸಿಕೊಂಡಿದ್ದೇನೆ. ನಾನು ನಿನ್ನೆ ನೆಲಮಂಗಲ ರಸ್ತೆಯಲ್ಲಿ ತಗಲಾಕಿಕೊಂಡಿದ್ದೆ. ನಿನ್ನೆ ರಾತ್ರಿ ಎಲ್ಲಾ ರಿವ್ಯೂವ್ ಮಾಡಿದ್ದೇನೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ದಾಸರಹಳ್ಳಿಯಲ್ಲಿ ಒಂದು ಟ್ಯಾಂಕ್ ಒಡೆದು ಹೋಗಿದೆ. ಮಹದೇವಪುರ, ಭದ್ರಪ್ಪ ಲೇಔಟ್, ರಮಣಶ್ರೀ ಸೇರಿದಂತೆ ಎಲ್ಲ ಕಡೆ ಮಳೆ ಆಗಿದೆ. ಎಲ್ಲ ಕಡೆ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಾರೀ ಮಳೆಗೆ ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರ ಸಾವು
ಕೆರೆಗೆ ಮಕ್ಕಳು ಬಿದ್ದಿರುವುದು ನನ್ನ ಗಮನಕ್ಕೆ ಬಂದಿದೆ. ಪಾಪ ತಾಯಿಯ ಗೋಳು ಟಿವಿಯಲ್ಲಿ ನೋಡಿದೆ ಎಂದು ಡಿಸಿಎಂ ಮರುಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru Rains) ಸತತ ನಾಲ್ಕು ದಿನಗಳಿಂದ ಮಳೆಯಾರ್ಭಟ ಮುಂದುವರಿದಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ ಇರುವುದಿಲ್ಲ ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.
ಪ್ರಕಟಣೆಯಲ್ಲಿ ಏನಿದೆ?
ಮಳೆ ಹಿನ್ನೆಲೆಯಲ್ಲಿ ಬುಧವಾರ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ| ರಸ್ತೆಗಳಲ್ಲಿ ಶೌಚಗುಂಡಿ, ಒಳಚರಂಡಿ ತುಂಬಿ ಮನೆಗೆ ನುಗ್ಗುತ್ತಿವೆ ಕೊಳಚೆ ನೀರು
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಕಾಲೇಜುಗಳಲ್ಲಿ ಪಾಠ ಮಾಡುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ/ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕು ಎಂದು ಸೂಚಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತಿ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು: ನಗರದಲ್ಲಿ (Bengaluru Rains) ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ.ಇದನ್ನೂ ಓದಿ: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ
ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಇಡೀ ಬೆಂಗಳೂರು ಅವ್ಯವಸ್ಥೆ ಆಗಿದೆ ಎಂದು ಎಕ್ಸ್ (X) ಖಾತೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪೋಸ್ಟ್ ಹಾಕಿದೆ. ಸರ್ಕಾರದ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದೆ.
ಮಾನ್ಯ @H_D_Devegowda ಅವರು ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು.
ಆ ನಂತರ ಬಂದ @INCKarnataka ಸರಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು.
ಆ ರಿಯಲ್ ಎಸ್ಟೇಟ್ ದಂಧೆಯ ರಕ್ಕಸ ರೂಪವೇ ಡೂಪ್ಲಿಕೇಟ್ ಸಿಎಂ ಬ್ರ‍್ಯಾಂಡ್…
Honorable Shri @H_D_Devegowda avaru laid the foundation for Bengaluru’s IT boom with great foresight. However,
the subsequent Congress government turned that vision into a real estate debacle, exploiting the land. The monstrous form of this real estate scam is now drowning Brand…
ಟ್ವೀಟ್‌ನಲ್ಲಿ ಏನಿದೆ?
ಮಾನ್ಯ ಹೆಚ್‌ಡಿ ದೇವೇಗೌಡ (HD Devegowda) ಅವರು ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು. ಆ ನಂತರ ಬಂದ ಕಾಂಗ್ರೆಸ್ ಸರ್ಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು. ಆ ರಿಯಲ್ ಎಸ್ಟೇಟ್ ದಂಧೆಯ ರಕ್ಕಸ ರೂಪವೇ ಡೂಪ್ಲಿಕೇಟ್ ಸಿಎಂ ಬ್ರ‍್ಯಾಂಡ್ ಬೆಂಗಳೂರು!! ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ! ಡೂಪ್ಲಿಕೇಟ್ ಸಿಎಂ ಫೋಟೋಶೂಟ್‌ನಲ್ಲಿ ಬ್ಯುಸಿಯಾಗಿದ್ದಾರೆ!! ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಎಂದು ಜೆಡಿಎಸ್ ಲೇವಡಿ ಮಾಡಿದೆ.ಇದನ್ನೂ ಓದಿ: ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ