Tag: ಬೆಂಗಳೂರು ಮಳೆ

  • ಎಷ್ಟೇ ಮಳೆ ಬಂದರೂ ಅರ್ಧಗಂಟೆಯಲ್ಲಿ ಸರಿ ಮಾಡ್ತೀವಿ – ಡಿಕೆಶಿ

    ಎಷ್ಟೇ ಮಳೆ ಬಂದರೂ ಅರ್ಧಗಂಟೆಯಲ್ಲಿ ಸರಿ ಮಾಡ್ತೀವಿ – ಡಿಕೆಶಿ

    ಮಂಡ್ಯ: ಮಳೆ ಬರಬೇಕು ಬರಲಿ, ಬೆಂಗಳೂರಿನಲ್ಲಿ (Bengaluru) ಯಾವ ಅವಾಂತರವೂ ಇಲ್ಲ. ಎಷ್ಟೇ ಮಳೆ ಬಂದರೂ ಅರ್ಧಗಂಟೆಯಲ್ಲಿ ಸರಿ ಮಾಡುವ ಕೆಲಸ ಮಾಡ್ತೀವಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕೆ ಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಎಷ್ಟೇ ಮಳೆ ಬಂದರೂ ತಡೆದುಕೊಳ್ಳುವ ಶಕ್ತಿ ನಮಗೆ ಇದೆ. ಈಗಾಗಲೇ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ವಿರೋಧ ಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿಕೆಶಿ

    ಮಳೆಯ ಮುಂಜಾಗ್ರತೆ ಬಗ್ಗೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದೇನೆ. ಬೆಂಗಳೂರಿಗೆ ಹೋದ ತಕ್ಷಣ ಮತ್ತೆ ಈ ಬಗ್ಗೆ ಸಭೆ ಮಾಡ್ತೀನಿ. ಯಾರು ಗಾಬರಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಮುಂಜಾಗ್ರತೆಯಾಗಿ ರಜೆ ಘೋಷಣೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದ ಪ್ರಭಾವ ಕುಗ್ಗಿಸಲು ಖಲಿಸ್ತಾನಿಗಳಿಗೆ ಪಾಕ್‌ ಬೆಂಬಲ – ಕೆನಡಾ ಅಧಿಕಾರಿ ಹೇಳಿಕೆ ವಿಡಿಯೋ ವೈರಲ್‌

    ಮಳೆ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಇದ್ದೇ ಇರುತ್ತವೆ. ಟೀಕೆಗಳು ಸತ್ತು ಹೋಗುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೆ. ಈ ಹಿಂದೆಯೂ ಟೀಕೆ ಮಾಡುತ್ತಿದ್ದರು, ಅದು ಸತ್ತು ಹೋಯ್ತು, ಈಗ ಕೆಲಸ ಅಷ್ಟೇ ಉಳಿದಿರೋದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಂಗನ ಕಾಯಿಲೆಗೆ ಲಸಿಕೆ: ಐಸಿಎಂಆರ್ ಮಹಾನಿರ್ದೇಶಕರ ಜೊತೆ ದಿನೇಶ್ ಗುಂಡೂರಾವ್ ಚರ್ಚೆ

  • ಮಳೆ ಬಂದಾಗ ನೀರನ್ನು ವಾಪಸ್ ಆಕಾಶಕ್ಕೆ ಕಳಿಸೋಕಾಗಲ್ಲ – ಬಿಜೆಪಿ ಟೀಕೆಗೆ ಪರಮೇಶ್ವರ್ ತಿರುಗೇಟು

    ಮಳೆ ಬಂದಾಗ ನೀರನ್ನು ವಾಪಸ್ ಆಕಾಶಕ್ಕೆ ಕಳಿಸೋಕಾಗಲ್ಲ – ಬಿಜೆಪಿ ಟೀಕೆಗೆ ಪರಮೇಶ್ವರ್ ತಿರುಗೇಟು

    ಬೆಂಗಳೂರು: ಮಳೆ ಬಂದಾಗ ಆ ನೀರನ್ನು ಮತ್ತೆ ಆಕಾಶಕ್ಕೆ ಕಳಿಸುವುದಕ್ಕೆ ಆಗುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಟಾಂಗ್ ಕೊಟ್ಟಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ ಹಾನಿ ವಿಚಾರವಾಗಿ ಬಿಜೆಪಿ (BJP) ಟೀಕೆಗೆ ಪ್ರತಿಕ್ರಿಯಿಸಿ, ಇದು ಅನಿರೀಕ್ಷಿತ ಮಳೆ. ಯಾವತ್ತಾದರೂ ಅಕ್ಟೋಬರ್ ತಿಂಗಳಲ್ಲಿ ಈ ರೀತಿ ಮಳೆ ಬಿದ್ದದ್ದು ನಾವು ನೋಡಿದ್ದೀವಾ? ಮಳೆ ಬರುತ್ತಿದೆ ಎದುರಿಸಬೇಕು. ಮಳೆ ಬಂದಾಗ ಆ ನೀರನ್ನು ಮತ್ತೆ ಆಕಾಶಕ್ಕೆ ಕಳಿಸುವುದಕ್ಕೆ ಆಗುವುದಿಲ್ಲ. ಬಿದ್ದ ಮಳೆ ನೀರು ಭೂಮಿ ಮೇಲೆಯೇ ಹರಿದು ಹೋಗಬೇಕು ಎಂದು ತಿರುಗೇಟು ಕೊಟ್ಟಿದ್ದಾರೆ.ಇದನ್ನೂ ಓದಿ: ಜ್ಯೂಸ್‌ ಕುಡಿಸಿ ಪ್ರಯಾಣಿಕರಿಂದ ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್‌ ಕಳ್ಳಿ ಅಂದರ್‌

    ಸಂಡೂರು ಉಪಚುನಾವಣೆ:
    ಸಂಡೂರು ಉಪಚುನಾವಣೆಯಲ್ಲಿ ಬಿಜೆಪಿಯವರು ವಾಲ್ಮೀಕಿ ಪ್ರಕರಣ (Valmiki Scam) ಬಗ್ಗೆ ಪ್ರಚಾರ ಮಾಡಬಹುದು. ನಾವು ಕೂಡ ಅದರ ಬಗ್ಗೆ ಏನು ನಡೆದಿದೆ ಅದನ್ನು ಹೇಳುತ್ತೇವೆ. ಅದು ಅಧಿಕಾರಿಗಳ ಮಟ್ಟದಲ್ಲಿ ಆಯಿತಾ? ರಾಜಕಾರಣಿಗಳ ಮಟ್ಟದಲ್ಲಿ ಆಯಿತಾ? ಎಂದು ಹೇಳುತ್ತೇವೆ. ಇದು ಅಧಿಕಾರಿಗಳ ಮಟ್ಟದಲ್ಲಿ ನಡೆದ ಪ್ರಕರಣ. ಇದನ್ನು ನಾವು ಚುನಾವಣಾ ಪ್ರಚಾರ ವೇಳೆ ತಿಳಿಸುತ್ತೇವೆ. ದದ್ದಲ್ ಅವರನ್ನು ವಿಚಾರಣೆಗೆ ಕರೆದಿದ್ದರು. ಆದರೆ ಅವರ ಹೆಸರು ಪ್ರಕರಣದಲ್ಲಿ ಬರಲಿಲ್ಲ. ನಾಗೇಂದ್ರ ಅವರ ವಿಚಾರಣೆಯೂ ಆಗಿದೆ ಎಂದು ಹೇಳಿದರು.

    ಇನ್ನೂ ಹರಿಯಾಣದಲ್ಲಿ (Hariyana) ಮೋದಿಯವರು ಮುಡಾ ಬಗ್ಗೆ ಪ್ರಚಾರ ಮಾಡಿರಬಹುದು. ಅಲ್ಲಿ ಎಷ್ಟು ಜನಕ್ಕೆ ಇದು ಗೊತ್ತಿದೆ? ಅವರು ರಾಜಕೀಯ ಕಾರಣಕ್ಕೆ ಪ್ರಚಾರ ಮಾಡಿರುತ್ತಾರೆ. ಮಹಾರಾಷ್ಟ್ರದಲ್ಲೂ ಪ್ರಚಾರ ಮಾಡಿದರೆ ನಾವು ಸತ್ಯ ಏನಿದೆ ಎಂದು ಹೇಳಿ, ಗೆದ್ದು ಬರುತ್ತೇವೆ. ವೇಣುಗೋಪಾಲ್ ರಾಜ್ಯಕ್ಕೆ ಭೇಟಿ ನೀಡುತ್ತಾರೆ. ಆಗ ಭೇಟಿಗೆ ಸಮಯ ಕೇಳುತ್ತೇನೆ ಎಂದರು.

    ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್ ವಾಪಸ್ ವಿಚಾರ:
    ನಮಗೆ ಮುಂಬೈ ಮತ್ತು ಕೊಂಕಣ್ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ. ಎಂಬಿ ಪಾಟೀಲರಿಗೆ ಕೊಲ್ಹಾಪುರ, ಸೊಲ್ಹಾಪುರ ಭಾಗದಲ್ಲಿ ಉಸ್ತುವಾರಿ ನೀಡಲಾಗಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ, ಕೇಸ್‌ಗಳ ವಿಚಾರವಾಗಿ ಯಾವುದೇ ಪ್ರಸ್ತಾಪ ಬಂದಿಲ್ಲ. ಪ್ರಸ್ತಾಪ ಬಂದರೆ ಸುಳ್ಳು ಕೇಸ್ ಹಾಕಿದ್ದಾರಾ ಇಲ್ವಾ ಎಂದು ಪರಿಶೀಲನೆ ಮಾಡುತ್ತೇವೆ. ಹಿಂದೆ ಪ್ರಸ್ತಾಪ ಬಂದಿರುವ ಬಗ್ಗೆ ನನಗೆ ಗೊತ್ತಿಲ್ಲ. ನಾನು ಈ ಕೇಸ್‌ಗಳನ್ನು ವಾಪಸ್ ಪಡೀತೀವಿ ಎಂದು ಎಲ್ಲಿಯೂ ಹೇಳಿಲ್ಲ. ಪ್ರಸ್ತಾಪ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

    ಹರಿಪ್ರಸಾದ್ ಯಾವುದೋ ಕಾರಣಕ್ಕೆ ಹೇಳಿರಬಹುದು. ಅವರು ಹೇಳಿದ್ದಾರೆ ಎಂದು ನಾವು ಕೇಸ್ ವಾಪಸ್ ಪಡೆಯಲು ಆಗಲ್ಲ. ಪ್ರಸ್ತಾಪ ಬಂದಾಗ ಪರಿಶೀಲನೆ ಮಾಡುತ್ತೇವೆ. ಯಾರೂ ಪತ್ರ ಬರೆದಿಲ್ಲ, ಪ್ರಸ್ತಾವನೆ ಬಂದಿಲ್ಲ. ಹಿಂದೆ ಬರೆದಿದ್ದ ಪತ್ರ ಅದು ಅಲ್ಲಿಗೇ ನಿಂತಿದೆ. ಈಗ ಮತ್ತೇ ಪ್ರಸ್ತಾಪ ಬಂದರೆ ಪರಿಶೀಲನೆ ಮಾಡುತ್ತೇವೆ. ಪ್ರಸ್ತಾಪ ಬಂದರೆ ಕ್ಯಾಬಿನೆಟ್ ಸಬ್ ಕಮಿಟಿಯ ಮುಂದಿಟ್ಟು, ನಂತರ ಸಂಪುಟದಲ್ಲಿ ಚರ್ಚೆ ಆಗುತ್ತದೆ. ಹುಬ್ಬಳ್ಳಿ ಕೇಸ್ ವಿಚಾರದಲ್ಲಿ ಕೋರ್ಟ್ ಏನು ಮಾಡುತ್ತದೆ ನೋಡಬೇಕು ಎಂದು ಹೇಳಿದರು.

    ಸ್ನೇಹಮಯಿ ಕೃಷ್ಣ ದೂರು ವಿಚಾರ:
    ಮುಡಾ ಪ್ರಕರಣದಲ್ಲಿ (MUDA Scam) ಎ1, 12 ಆರೋಪಿಗಳನ್ನು ವಿಚಾರಣೆ ಮಾಡುತ್ತಿಲ್ಲ ಎಂದು ಸ್ನೇಹಮಯಿ ಕೃಷ್ಣ ದೂರು ಕೊಟ್ಟ ವಿಚಾರವಾಗಿ ಮಾತನಾಡಿ, ಲೋಕಾಯುಕ್ತದವರ ಕಾರ್ಯವೈಖರಿ ಬಗ್ಗೆ ನಾನು ಏನೂ ಹೇಳುವುದಿಲ್ಲ. ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಲೋಕಾಯುಕ್ತ ಪೊಲೀಸರಿಗೆ ಯಾವಾಗ, ಯಾರನ್ನು ವಿಚಾರಣೆಗೆ ಕರೆಯಬೇಕು ಎಂಬುದು ಗೊತ್ತಿದೆ. ಅದರಂತೆ ಅವರು ವಿಚಾರಣೆಗೆ ಕರೆಯುತ್ತಾರೆ. ಅವರನ್ನು ಕರೆದಿಲ್ಲ, ಇವರನ್ನು ಕರೆದಿಲ್ಲ ಎಂದು ನಾವು ಹೇಳಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

  • ಭಾರೀ ಮಳೆಗೆ ಟ್ರ್ಯಾಕ್‌ಗೆ ಬಿದ್ದ ಮರ: ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    ಭಾರೀ ಮಳೆಗೆ ಟ್ರ್ಯಾಕ್‌ಗೆ ಬಿದ್ದ ಮರ: ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    – ಮರ ತೆರವು ಬಳಿಕ ಮೆಟ್ರೋ ಸಂಚಾರ ಮತ್ತೆ ಆರಂಭ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಟ್ರ್ಯಾಕ್‌ಗೆ ಮರ ಉರುಳಿ, ನೇರಳ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು (Namma Metro) ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸಿಬ್ಬಂದಿ ಮರ ತೆರವುಗೊಳಿಸಿದ ಬಳಿಕ ಮೆಟ್ರೋ ಸಂಚಾರ ಮತ್ತೆ ಆರಂಭವಾಯಿತು.

    ಎರಡು ದಿನಗಳಿಂದ ಬೆಂಗಳೂರಿನಲ್ಲಿ ವರುಣ ಅಬ್ಬರಿಸುತ್ತಿದ್ದು, ಮಳೆಯ ಪರಿಣಾಮ ನಮ್ಮ ಮೆಟ್ರೋ ರೈಲಿನ ನೇರಳೆ ಬಣ್ಣದ (Purple Line Metro) ಮಾರ್ಗದಲ್ಲಿ ಮರವೊಂದು ಟ್ರ್ಯಾಕ್‌ಗೆ ಉರುಳಿ, ಎಸ್‌ವಿ ರೋಡ್ ಹಾಗೂ ಇಂದಿರಾನಗರ ನಡುವೆ ಮೆಟ್ರೋ ಸಂಚಾರ ಸ್ಥಗಿತಗೊಂಡು ವ್ಯತ್ಯಯ ಉಂಟಾಗಿತ್ತು.ಇದನ್ನೂ ಓದಿ:

    ಬುಧವಾರ ಬೆಳಗ್ಗೆ 6:05ರಿಂದ 8 ಗಂಟೆಯವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ಬಿಎಂಆರ್‌ಸಿಎಲ್ (BMRCL) ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಮರವನ್ನು ತೆರವುಗೊಳಿಸಿದರು. ಈ ವೇಳೆ ಇಂದಿರಾನಗರ -ಚಲಘಟ್ಟ ಹಾಗೂ ಬೈಯಪ್ಪನಹಳ್ಳಿ – ವೈಟ್‌ಫೀಲ್ಡ್ ನಿಲ್ದಾಣದವರೆಗೆ ಮೆಟ್ರೋ ಸುಗಮ ಸಂಚಾರಗೊಂಡಿದ್ದು, ಈ ಎರಡು ಮೆಟ್ರೋ ನಿಲ್ದಾಣಗಳ ಮಧ್ಯೆ ರೈಲು ಸಂಚಾರ ಸ್ಥಗಿತಗೊಂಡಿತ್ತು.

    ಮೆಟ್ರೋ ಸಂಚಾರ ಪುನರಾರಂಭ:
    ಬುಧವಾರ ಬೆಳಗ್ಗೆ 6:05 ಸ್ಥಗಿತಗೊಂಡ ಮೆಟ್ರೋ, ಮರವು ತೆರವುಗೊಳಿಸಿದ ಬಳಿಕ 8 ಗಂಟೆಗೆ ಮತ್ತೆ ಪುನರಾರಂಭಗೊಂಡಿದೆ. ಇದೀಗ ಎಂದಿನಂತೆ ಮೆಟ್ರೋ ರೈಲು ಸಂಚಾರ ಆರಂಭಗೊಂಡಿದೆ.ಇದನ್ನೂ ಓದಿ:

  • Bengaluru Rains | 49 ಪ್ರದೇಶಗಳಲ್ಲಿ ಮಳೆ ಆರ್ಭಟ – ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್!

    Bengaluru Rains | 49 ಪ್ರದೇಶಗಳಲ್ಲಿ ಮಳೆ ಆರ್ಭಟ – ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್!

    – ಮೂರು ಪ್ರದೇಶಗಳಲ್ಲಿ 100 ಮಿಲಿಮೀಟರ್‌ಗೂ ಅಧಿಕ ಮಳೆ

    ಬೆಂಗಳೂರು: ನಗರದಲ್ಲಿ ಮಳೆಯ ಆರ್ಭಟ (Heavy Rain) ಮುಂದುವರಿದಿದೆ. ಶನಿವಾರ ರಾತ್ರಿ ಸುರಿದ ಮಳೆಗೆ 49 ಪ್ರದೇಶಗಳಲ್ಲಿ ಮಳೆಹಾನಿಯಾಗಿದೆ. 49 ಪ್ರದೇಶಗಳ ಪೈಕಿ 3ಕ್ಕೂ ಹೆಚ್ಚು ಪ್ರದೇಶಗಳಲ್ಲಿ 100ಕ್ಕೂ ಹೆಚ್ಚು ಮಿಲಿ ಮೀಟರ್ ಮಳೆಯಾಗಿದೆ. ಬಸವೇಶ್ವರ ನಗರದಲ್ಲಿ 109.50 ಮಿಮೀ, ನಾಗಪುರದಲ್ಲಿ 104 ಮಿಮೀ ಹಾಗೂ ಹಂಪಿನಗರದಲ್ಲಿ 102 ಮಿಮೀ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ರಾತ್ರಿ 9:45 ಗಂಟೆ ಬಳಿಕ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಿದೆ.

    ಹಲವೆಡೆ ಅನಾಹುತ:
    ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಭಾರೀ ಅನಾಹುತವನ್ನುಂಟು ಮಾಡಿದೆ. ನಗರದ ಬಿನ್ನಿಪೇಟೆಯಲ್ಲಿ ಕಾಂಪೌಡ್ ಕುಸಿದಿದ್ದು, ಹತ್ತಾರು ಗಾಡಿಗಳು ಜಖಂಗೊಂಡಿವೆ. 45 ಮನೆಗಳಿಗೆ ನೀರು ನುಗ್ಗಿದೆ.ಕಾಂಪೌಡ್ ಕುಸಿತ ಪರಿಣಾಮ 16 ಮನೆಗಳಿಗೆ ಜಲದಿಗ್ಭಂಧನ ಉಂಟಾಗಿದೆ. ಇದನ್ನೂ ಓದಿ: ಛತ್ತೀಸ್‌ಗಢ ಎನ್‌ಕೌಂಟರ್| 35 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಮತ್ತೊಂದೆಡೆ ಕೆ.ಆರ್ ಮಾರುಕಟ್ಟೆಯ ರಸ್ತೆಯಲ್ಲಾ ಜಲಾವೃತ್ತವಾಗಿತ್ತು. ಮಂಡಿವರೆಗೆ ಮಳೆ ನೀರು ಹರಿಯುತ್ತಿದ್ದರಿಂದ ವಾಹನ ಸವಾರರು ಪರದಾಡವಂತಹ ಸ್ಥಿತಿ ನಿರ್ಮಾಣವಾಗಿತ್ತು. ಸ್ಯಾಂಕಿ ರಸ್ತೆಯಲ್ಲಿ ನೀರು ನಿಂತು ಅಕ್ಷರಶಃ ಜನರು ನಲುಗಿ ಹೋಗಿದ್ದರು. ವಾಹನ ಸವಾರರು ಪರದಾಡಿದ್ರು. ಇದನ್ನೂ ಓದಿ:  Exit Poll Results: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ಅಧಿಕಾರಕ್ಕೆ

    ಟ್ರಾಫಿಕ್ ಜಾಮ್ ಸಮಸ್ಯೆ:
    ಒಂದಡೆ ಮಳೆ.. ಮತ್ತೊಂದಡೆ ಟ್ರಾಫಿಕ್ ಜಾಮ್… ಸಮಸ್ಯೆ ಏಕಕಾಲಕ್ಕೆ ಸಂಭವಿಸಿತ್ತು. ಬಳ್ಳಾರಿ ರಸ್ತೆ ಮಾರ್ಗ ಮಳೆಯಿಂದಾಗಿ ಸ್ಥಬ್ದವಾಗಿತ್ತು. ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರ ಪರಿಸ್ಥಿತಿ ಹೇಳತೀರದಾಗಿತ್ತು.

    ರಸ್ತೆಯೆಲ್ಲಾ ಕೆರೆ:
    ಇದಲ್ಲದೇ ಟೌನ್ ಹಾಲ್, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿದ್ದವು. ಇದನ್ನೂ ಓದಿ: Exit Poll Result | ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟಕ್ಕೆ ಅಧಿಕಾರ – ಬಿಜೆಪಿಗೆ ಹಿಂದಿಗಿಂತ ಹೆಚ್ಚು ಸ್ಥಾನ

  • Bengaluru Rains | ಎಲೆಕ್ಟ್ರಾನಿಕ್ ಸಿಟಿ ಮತ್ತೆ ಜಲಾವೃತ – ಸಣ್ಣ ಮಳೆಗೆ ತತ್ತರಿಸಿದ ಐಟಿಬಿಟಿ ಮಂದಿ

    Bengaluru Rains | ಎಲೆಕ್ಟ್ರಾನಿಕ್ ಸಿಟಿ ಮತ್ತೆ ಜಲಾವೃತ – ಸಣ್ಣ ಮಳೆಗೆ ತತ್ತರಿಸಿದ ಐಟಿಬಿಟಿ ಮಂದಿ

    ಬೆಂಗಳೂರು: ಕಳೆದ 2-3 ದಿನಗಳಿಂದ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೆ ಮಳೆಯ ಆರ್ಭಟ (Heavy Rain) ಮುಂದುವರಿದಿದೆ. ಮಾರ್ಕೆಟ್, ಮೆಜೆಸ್ಟಿಕ್, ಮಲ್ಲೇಶ್ವರ, ಯಶವಂತಪುರ, ಎಲೆಕ್ಟ್ರಾನಿಕ್‌ ಸಿಟಿ, ಮಹದೇವಪುರ ವಲಯಗಳಲ್ಲಿ ಭಾರೀ ಮಳೆಯಾಗ್ತಿದೆ.

    ಶನಿವಾರವೂ ವಿವಿಧೆಡೆ ಸುರಿದ ಮಳೆಗೆ ಬೆಂಗಳೂರು ತತ್ತರಿಸಿಹೋಗಿದೆ. ಮಳೆಯ ಹೊಡೆತಕ್ಕೆ ರಸ್ತೆ ಮೇಲೆಲ್ಲಾ ನೀರು ನಿಂತಿತ್ತು. ಎಲೆಕ್ಟ್ರಾನಿಕ್‌ ಸಿಟಿ ಟೋಲ್ ಬಳಿ ರಸ್ತೆ ತುಂಬೆಲ್ಲಾ ನೀರು ನಿಂತಿತ್ತು. ವಾಹನ ಸವಾರರು ಗಂಟೆಗಟ್ಟಲೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ವೀಕೆಂಡ್ ಮೂಡ್‌ನಲ್ಲಿದ್ದ ಜನರಿಗೆ ಮಳೆ ಎಫೆಕ್ಟ್ ತಟ್ಟಿದೆ. ಹಲವಡೆ ಸಂಜೆ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಹವಾಮಾನ ಇಲಾಖೆ ಅಕ್ಟೋಬರ್ ಮೊದಲ ವಾರದಲ್ಲೇ ಮಳೆ ಎಚ್ಚರಿಕೆ ನೀಡಿತ್ತು. ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಜೋರು ಮಳೆ ಆಗಿದೆ.

    ಇತ್ತ ನೆಲಮಂಗಲದ ಅಮಾನೀ ಕೆರೆ ಕೋಡಿ ಬಿದ್ದಿದ್ದು ತ್ಯಾಜ್ಯದ ನೀರು ಸೇರಿ ನೊರೆ ಉಲ್ಬಣಿಸಿದೆ. ದಿಢೀರ್ ಅಂತ ಆಗೋ ಗುಂಡಿಗಳಿಗೆ,, ಬೀಳೋ ಮರಗಳಿಗೆ ಏನೂ ಮಾಡೋಕಾಗಲ್ಲ ಅಂತ ಬಿಬಿಎಂಪಿ ಆಯುಕ್ತರು ಹಾರಿಕೆ ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ: ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ; ಪ್ರಾಮಾಣಿಕ, ಪಾರದರ್ಶಕವಾಗಿರಬೇಕು ಅಷ್ಟೇ – ಬಸವಜಯ ಮೃತ್ಯುಂಜಯ ಸ್ವಾಮಿಜಿ

    ಎಲೆಕ್ಟ್ರಾನಿಕ್‌ ಸಿಟಿ ಮತ್ತೆ ಜಲಾವೃತ:
    ಬೆಂಗಳೂರಿನಲ್ಲಿ ಸುರಿದ ಸಣ್ಣ ಮಳೆಗೆ ಎಲೆಕ್ಟ್ರಾನಿಕ್‌ ಸಿಟಿ ಅಕ್ಷರಶಃ ತತ್ತರಿಸಿದೆ, ಐಟಿ ಬಿಟಿ ಮಂದಿ ಪರದಾಡುವ ಪರಿಸ್ಥಿತಿಯೂ ನಿರ್ಮಾಣವಾಗಿತ್ತು. ಹೊಸೂರು ಬೆಂಗಳೂರು ಮುಖ್ಯರಸ್ತೆಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸುಮಾರು ಅರ್ಧ ಕಿಮೀ ರಸ್ತೆ ವರೆಗೆ ಮಳೆ ನೀರು ತುಂಬಿಕೊಂಡಿತ್ತು. ಪುರಭವನ, ಬಿಬಿಎಂಪಿ ಸರ್ಕಲ್‌, ಕೆ.ಆರ್ ಮಾರ್ಕೇಟ್, ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಮಳೆಯಾಗಿದ್ದು, ರಸ್ತೆಗಳು ಕೆರೆಯಂತಾಗಿರುವ ವಾತಾವರಣ ಕಂಡುಬಂದಿತು. ಇದನ್ನೂ ಓದಿ: ಉತ್ತರ ಲೆಬನಾನ್‌ ಮೇಲೆ ಇಸ್ರೇಲ್‌ ವಾಯುದಾಳಿ – ಹಮಾಸ್‌ ಟಾಪ್‌ ಕಮಾಂಡರ್‌ ಹತ್ಯೆ

    ಸದ್ಯ ಅಕ್ಟೋಬರ್‌ 8ರವರೆಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಇದನ್ನೂ ಓದಿ: ಮಾಡಿರುವ ತಪ್ಪುಗಳು, ಹಗರಣವನ್ನು ಹೊರ ತೆಗೆಯುತ್ತೇವೆಂದು ಬಿಜೆಪಿಯವರಿಗೆ ಭಯ – ಜಿ. ಪರಮೇಶ್ವರ್

  • ರಾಜಧಾನಿ ಬೆಂಗಳೂರಿಗೆ ನಾಳೆ ಯೆಲ್ಲೋ ಅಲರ್ಟ್

    ರಾಜಧಾನಿ ಬೆಂಗಳೂರಿಗೆ ನಾಳೆ ಯೆಲ್ಲೋ ಅಲರ್ಟ್

    ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದ್ದು, ನಾಳೆ ಬೆಂಗಳೂರಲ್ಲಿ (Bengaluru Rains) ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಬೆಂಗಳೂರು ನಗರ, ಬೆ.ಗ್ರಾಮಾಂತರ, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇದೆ. ಈ ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ – ಸಿಬಿಐ ವಿಚಾರಣೆ ಆದೇಶ ಕಾಯ್ದಿರಿಸಿದ ಹೈಕೋರ್ಟ್

    ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

    ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಮಾನವ-ಆನೆ ಸಂಘರ್ಷ ತಡೆಗೆ ವಿಶೇಷ ಟಾಸ್ಕ್ ಫೋರ್ಸ್‌ ರಚನೆ – ಸಿದ್ದರಾಮಯ್ಯ

    ಬೆಂಗಳೂರಲ್ಲಿ ಇಂದು ಮುಂಜಾನೆ ಬೆಂಗಳೂರು ನಗರದಾದ್ಯಂತ ಎಡೆಬಿಡದೆ ಭಾರೀ ಮಳೆ ಸುರಿಯಿತು. ಪರಿಣಾಮವಾಗಿ ರಸ್ತೆಗಳಲ್ಲೆಲ್ಲ ನೀರು ನಿಂತು ಚರಂಡಿಯಂತಾಯಿತು. ಇದರಿಂದ ವಾಹನ ಸಂಚಾರ ದಟ್ಟಣೆ ಉಂಟಾಯಿತು.

    ಬನ್ನೇರುಘಟ್ಟ ರಸ್ತೆ, ಮಡಿವಾಳ, ಹೊಸೂರು ರಸ್ತೆ, ಜಯದೇವ ಅಂಡರ್‌ಪಾಸ್‌ನಲ್ಲಿ ಬೆಳಗ್ಗೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರದ ರಸ್ತೆಯಲ್ಲೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ನಗರದ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರಿಗೆ ಸಂಕಷ್ಟ ಎದುರಾಯಿತು.

  • ಬೆಂಗಳೂರು ಕೂಲ್‌ ಕೂಲ್‌- ಇಂದು ಸಾಧಾರಣ ಮಳೆ ಸಾಧ್ಯತೆ

    ಬೆಂಗಳೂರು ಕೂಲ್‌ ಕೂಲ್‌- ಇಂದು ಸಾಧಾರಣ ಮಳೆ ಸಾಧ್ಯತೆ

    – ಸೋಮವಾರ ರಾಜ್ಯದಲ್ಲಿ ಎಲ್ಲೆಲ್ಲಿ ಎಷ್ಟು ಮಳೆ?

    ಬೆಂಗಳೂರು: ರಾಜಧಾನಿಯಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಕಳೆದ ಎರಡು-ಮೂರು ದಿನಗಳಲ್ಲಿ ತಂಪಾದ ವಾತಾವರಣ ಇದೆ. ಕೂಲ್‌ ವೆದರ್‌ ಜೊತೆಗೆ ಸಾಧಾರಣ ಮಳೆಯಾಗುತ್ತಿದೆ.

    ಮುಂದಿನ ನಾಲ್ಕು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಮಳೆ ಅಲರ್ಟ್ ಇದೆ. ಇದನ್ನೂ ಓದಿ: KRS ಡ್ಯಾಂನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

    ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನ ಮೋಡ ಕವಿದ ವಾತವರಣ ಮುಂದುವರಿದಿದೆ. ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಇಂದು ಮಳೆ ಎಚ್ಚರಿಕೆ ನೀಡಲಾಗಿದೆ. 30-40 ಕಿಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಗರಿಷ್ಠ- 27°ಸಿ , ಕನಿಷ್ಠ 21° ತಾಪಮಾನವಿರಲಿದೆ.

    ನಿನ್ನೆ ಬೆಂಗಳೂರಿನಾದ್ಯಂತ ಭಾರೀ ಮಳೆಯಾಗಿತ್ತು. ನಗರದ ಯಲಹಂಕ ಹಾಗೂ ದಾಸರಹಳ್ಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇಂದು ಕೂಡ ನಗರದಲ್ಲಿ ಮಳೆ ಸಾಧ್ಯತೆ ಇದೆ. ಜುಲೈ 12ರ ವರೆಗೆ ನಗರದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: Karnataka Rain Alert: ಬೆಂಗ್ಳೂರಲ್ಲಿ ಬಿಟ್ಟೂಬಿಡದ ಮಳೆ – ಬೋಟ್‌ಗಳಲ್ಲಿ ಜನ, ಸಾಕುಪ್ರಾಣಿಗಳ ರಕ್ಷಣೆ; ಎಲ್ಲೆಲ್ಲಿ ಏನಾಯ್ತು?

    ನಿನ್ನೆ ಎಲ್ಲೆಲ್ಲಿ ಎಷ್ಟೆಷ್ಟು ಮಳೆ?
    ಯಲಹಂಕ : 22.40 mm
    ದಾಸರಹಳ್ಳಿ : 22.25 mm
    ಪಶ್ಚಿಮ ವಲಯ : 15.81 mm
    ಪೂರ್ವ ವಲಯ : 11.50 mm
    ಉತ್ತರ ವಲಯ : 10.74 mm
    ಮಹಾದೇವಪುರ : 8.55 mm
    ಬೊಮ್ಮನಹಳ್ಳಿ : 7.04 mm
    ದಕ್ಷಿಣ ವಲಯ : 6.90 mm

    ರಾಜ್ಯದಲ್ಲಿ ನಿನ್ನೆ ಎಲ್ಲೆಲ್ಲಿ ಎಷ್ಟೆಷ್ಟು ಮಳೆ?
    ಬಜ್ಪೆ (ಮಂಗಳೂರು) : 98.9 mm
    ಪಣಂಬೂರು (ಮಂಗಳೂರು) : 64.7 mm
    ಕಾರವಾರ : 8.6 mm
    ಶಿರಾಲಿ : 20.0 mm
    ಹೊನ್ನಾವರ : 41.0 mm
    ಬೆಳಗಾವಿ : 5.0 mm
    ಗದಗ : 8.6 mm
    ಧಾರವಾಡ : 1.8 mm
    ವಿಜಯಪುರ : 13.4 mm
    ಕಲಬುರಗಿ : 22.0 mm
    ಚಿತ್ರದುರ್ಗ : 3.4 mm
    ಬೆಂಗಳೂರು : 22.3 mm
    ಬೆಂಗಳೂರು KIA : 4.5 mm
    ಬೆಂಗಳೂರು HAL : 10.3 mm
    ಮಂಡ್ಯ : 1.0 mm
    ದೊಡ್ಡಬಳ್ಳಾಪುರ : 2.5 mm
    ಮೂಡಿಗೆರೆ : 13.5 mm
    ದಾವಣಗೆರೆ : 3.5 mm
    ಹಾಸನ : 1.0 mm
    ಗೋಣಿಕೊಪ್ಪಲು : 8.0 mm
    ಗಂಗಾವತಿ : 6.5 mm
    ಆಗುಂಬೆ : 55.5 mm
    ಔರಾದ್ : 6.5 mm
    ಮಂಗಳೂರು : 31.0 mm
    ಚಾಮರಾಜನಗರ : 2.5 mm
    ರಾಮನಗರ : 0.5 mm

  • ರಾಜ್ಯದ ಹವಾಮಾನ ವರದಿ: 22-06-2024

    ರಾಜ್ಯದ ಹವಾಮಾನ ವರದಿ: 22-06-2024

    ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಇನ್ನೂ 6 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

    ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

    ಉತ್ತರ ಒಳ ಕರ್ನಾಟಕದ ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳ ಕರ್ನಾಟಕದ ಮೈಸೂರು ಜಿಲ್ಲೆಯ ಮೇಲೆ ಭಾರೀ ಗಾಳಿಯೊಂದಿಗೆ ಮಳೆಯಾಗಲಿದೆ. ದಕ್ಷಿಣ ಒಳಗಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಲಘುವಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 27-24
    ಶಿವಮೊಗ್ಗ: 27-22
    ಬೆಳಗಾವಿ: 27-21
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 21-17
    ರಾಮನಗರ: 29-22
    ಹಾಸನ: 25-19
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 29-21

    ಕೋಲಾರ: 31-22
    ತುಮಕೂರು: 29-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 24-19
    ದಾವಣಗೆರೆ: 29-22

    weather

    ಹುಬ್ಬಳ್ಳಿ: 28-22
    ಚಿತ್ರದುರ್ಗ: 29-22
    ಹಾವೇರಿ: 29-22
    ಬಳ್ಳಾರಿ: 34-24
    ಗದಗ: 30-22
    ಕೊಪ್ಪಳ: 31-23

    ರಾಯಚೂರು: 34-25
    ಯಾದಗಿರಿ: 34-25
    ವಿಜಯಪುರ: 31-23
    ಬೀದರ್: 31-23
    ಕಲಬುರಗಿ: 33-24
    ಬಾಗಲಕೋಟೆ: 32-24

  • ರಾಜ್ಯದ ಹವಾಮಾನ ವರದಿ: 21-06-2024

    ರಾಜ್ಯದ ಹವಾಮಾನ ವರದಿ: 21-06-2024

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂಗಾರು ಚುರುಕು ಪಡೆದುಕೊಂಡಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆ ಅಥವಾ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (30-40 kmph) ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ದಕ್ಷಿಣ ಒಳಗಿನ ಕರ್ನಾಟಕದ ಜಿಲ್ಲೆಗಳ ಕೆಲವೆಡೆ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿಯ ಗಾಳಿಯೊಂದಿಗೆ (30-40 kmph) ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 27-24
    ಶಿವಮೊಗ್ಗ: 27-22
    ಬೆಳಗಾವಿ: 26-22
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 21-17
    ರಾಮನಗರ: 29-21
    ಹಾಸನ: 24-19
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 29-21

    ಕೋಲಾರ: 29-22
    ತುಮಕೂರು: 28-21
    ಉಡುಪಿ: 27-24
    ಕಾರವಾರ: 28-25
    ಚಿಕ್ಕಮಗಳೂರು: 24-19
    ದಾವಣಗೆರೆ: 29-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 29-22
    ಹಾವೇರಿ: 28-23
    ಬಳ್ಳಾರಿ: 33-24
    ಗದಗ: 29-23
    ಕೊಪ್ಪಳ: 31-24

    ರಾಯಚೂರು: 33-25
    ಯಾದಗಿರಿ: 33-26
    ವಿಜಯಪುರ: 31-24
    ಬೀದರ್: 31-23
    ಕಲಬುರಗಿ: 32-24
    ಬಾಗಲಕೋಟೆ: 32-24

  • ಗಾಳಿ, ಮಳೆ ರಭಸಕ್ಕೆ ಭಾರೀ ಗಾತ್ರದ ಮರ ನೆಲಸಮ – ಸ್ಯಾಂಟ್ರೋ ಕಾರು ಜಖಂ

    ಗಾಳಿ, ಮಳೆ ರಭಸಕ್ಕೆ ಭಾರೀ ಗಾತ್ರದ ಮರ ನೆಲಸಮ – ಸ್ಯಾಂಟ್ರೋ ಕಾರು ಜಖಂ

    ಬೆಂಗಳೂರು: ಸಿಲಿಕಾನ್‌ ಸಿಟಿ ಸೇರಿದಂತೆ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗಿದ್ದು (Bengaluru Rains), ಭಾರೀ ಅವಾಂತರಗಳನ್ನೂ ಸೃಷ್ಟಿಸಿದೆ. ಭಾರೀ ಮಳೆಗೆ ಆಕಾಶದೆತ್ತರಕ್ಕೆ ಬೆಳೆದಿದ್ದ ಮರಗಳು ನೆಲ ಕಚ್ಚಿವೆ. ಆಟೋ, ಕಾರು, ಮನೆಗಳ ಮೇಲೆ ಬಿದ್ದು ಜಖಂ ಆಗಿವೆ.

    ಬಸವೇಶ್ವರನಗರದ 17ನೇ ಕ್ರಾಸ್ ಬಳಿ ಮನೆ ಮುಂದೆ ಕಾರು ಪಾರ್ಕ್ ಮಾಡಿದ್ದ ಕಾರಿನ (Car) ಮೇಲೆ ಮರ ಬಿದ್ದಿದ್ದು, ರಸ್ತೆಯಲ್ಲಿ ವಾಹನಗಳು ಓಡಾಡದ ಪರಿಸ್ಥಿತಿ ನಿರ್ಮಾಣ ಆಗಿದೆ. ಮಳೆ ಬಂದು ನಿಂತರೂ ಹಲವೆಡೆ ಮನೆಯಲ್ಲೇ ಗೃಹಬಂಧನವಾಗಿ ಇರಬೇಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಬಸವೇಶ್ವರ ನಗರದ (Basaveshwaranagara) ಶಾರದಾ ಕಾಲೋನಿಯ ಬಳಿ ಬೃಹತ್ ಮರ ಮನೆ ಮೇಲೆ ಬಿದ್ದಿದೆ.

    ಬೃಹತ್‌ ಮರವೊಂದು ಎರಡಂತಸ್ತಿನ ಕಟ್ಟಡದ ಮೇಲೆ ಬಿದ್ದಿದೆ, ಜೊತೆಗೆ ಸ್ಯಾಂಟ್ರೋ ಕಾರಿನ ಮೇಲೆ ಬಿದ್ದು ಜಖಂ ಆಗಿದೆ. ರಸ್ತೆ ಉದ್ದಕ್ಕೂ ಏಳೆಂಟು ಮರಗಳು ಬಿದ್ದಿವೆ. ಇದನ್ನೂ ಓದಿ: Election Results – ಟ್ರೆಂಡ್‌ ಬೇಗನೇ ಗೊತ್ತಾದ್ರೂ ತಡವಾಗಲಿದೆ ಅಧಿಕೃತ ಫಲಿತಾಂಶ

    ನಗರದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಮೆಗಳು ಧರೆಗುರುಳಿವೆ. ಕರ್ನಾಟಕ ಲೇಔಟ್, ಬೆಮೆಲ್ ಲೇಔಟ್, ಕಿರ್ಲೋಸ್ಕರ್ ಕಾಲೋನಿ ಹಾಗೂ ಕುರುಬರಹಳ್ಳಿ ಮೇನ್ ರೋಡ್ ನಲ್ಲಿ ಮರಗಳು ಬಿದ್ದಿದ್ದು, ಬೆಳ್ಳಂ ಬೆಳಗ್ಗೆ ಬಿಬಿಎಂಪಿ ಹಾಗೂ ಬೆಸ್ಕಾಂ ಅಧಿಕಾರಿಗಳು ತೆರವುಗೊಳಿಸುವ ಕಾರ್ಯಾಚರಣೆಗೆ ಇಳಿದಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನ ಕಮಲಾನಗರದ ವಾಟರ್ ಟ್ಯಾಂಕ್ ಮುಖ್ಯ ರಸ್ತೆಯಲ್ಲಿಯೂ ಮರಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಾಸಕ ಕೆ. ಗೋಪಾಲಯ್ಯ ಸಹ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬುರ್ಖಾ ವಿದ್ಯಾರ್ಥಿನಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ: ಪ್ರತಾಪ್‌ ಸಿಂಹ