Tag: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ

  • ನ.15 ರಿಂದ ಹೊಸ ಟೋಲ್ ನಿಯಮ – ಫಾಸ್ಟ್‌ಟ್ಯಾಗ್ ಇಲ್ಲದವರಿಗೆ‌ ಗುಡ್‌ನ್ಯೂಸ್‌, UPI ಪಾವತಿದಾರರಿಗೆ ಭಾರೀ ರಿಯಾಯಿತಿ

    ನ.15 ರಿಂದ ಹೊಸ ಟೋಲ್ ನಿಯಮ – ಫಾಸ್ಟ್‌ಟ್ಯಾಗ್ ಇಲ್ಲದವರಿಗೆ‌ ಗುಡ್‌ನ್ಯೂಸ್‌, UPI ಪಾವತಿದಾರರಿಗೆ ಭಾರೀ ರಿಯಾಯಿತಿ

    ನವದೆಹಲಿ: ಟೋಲ್ (Toll) ಪಾವತಿಗಳಿಗೆ ಸಂಬಂಧಿಸಿದಂತೆ ಡಿಜಿಟಲ್‌ ಪಾವತಿಯನ್ನ ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಮತ್ತೊಂದು ಹೊಸ ನಿಯಮ ಪರಿಚಯಿಸಿದೆ. ಇದರಿಂದ ಫಾಸ್ಟ್‌ಟ್ಯಾಗ್‌ ಹೊಂದಿಲ್ಲದವರು ಯುಪಿಐ ಪಾವತಿ ಮೂಲಕವೂ ರಿಯಾಯಿತಿ ಗಳಿಸಬಹುದಾಗಿದೆ. ನವೆಂಬರ್‌ 15ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ.

    ಸಹೌದು. ಫಾಸ್ಟ್‌ ಟ್ಯಾಗ್‌ (FASTag) ಹೊಂದದೇ ಇರುವ ವಾಹನಗಳು ನವೆಂಬರ್ 15ರಿಂದ ನಗದುರೂಪದಲ್ಲಿ ಟೋಲ್ ಶುಲ್ಕ ಪಾವತಿಸಲು ಬಯಸಿದ್ರೆ ಅವು ಎರಡುಪಟ್ಟು ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಆದ್ರೆ ಯುಪಿಐ (UPI) ರೂಪದಲ್ಲಿ ಶುಲ್ಕ ಪಾವತಿಸುವವರಿಗೆ ನಿಗದಿಗಿಂತ 1.25 ಪಟ್ಟು ಅಧಿಕ ಶುಲ್ಕ ವಿಧಿಸಲಾಗುತ್ತದೆ. ಇದನ್ನೂ ಓದಿ: ಮುಂಬೈಗೆ ಸೈಕ್ಲೋನ್ `ಶಕ್ತಿʼಯ ಭೀತಿ – ಸೋಮವಾರ ಗುಜರಾತ್‌ಗೂ ಅಪ್ಪಳಿಸಲಿದೆ ಚಂಡಮಾರುತ

    ಫಾಸ್ಟ್‌ಟ್ಯಾಗ್‌ ಬಳಕೆದಾರರಲ್ಲದವರಿಗೆ ಅವರ ಟೋಲ್ ಶುಲ್ಕ (Toll) ಪಾವತಿಯ ವಿಧಾನವನ್ನ ಆಧರಿಸಿ ವಿಭಿನ್ನ ಶುಲ್ಕಗಳನ್ನು ವಿಧಿಸಲು ರಸ್ತೆ ಸಾರಿಗೆ ಹಾಗೂ ಹೆದ್ದಾರಿ (MORTH) ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳು ಹಾಗೂ ಆದಾಯ ನಿರ್ಧಾರ) ನಿಯಮಗಳು, 2008 ಅನ್ನು ತಿದ್ದುಪಡಿಗೊಳಿಸಿದೆ. ಟೋಲ್‌ ಪ್ಲಾಜಾಗಳಲ್ಲಿ (Toll Plaza) ಡಿಜಿಟಲ್ ಪಾವತಿ ಉತ್ತೇಜಿಸುವುದು ಹಾಗೂ ನಗದು ಬಳಕೆಯನ್ನು ಕಡಿಮೆಗೊಳಿಸುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

    ನವೆಂಬರ್‌ 15ರಿಂದ ನಿಯಮ ಜಾರಿ
    ಟೋಲ್‌ ಪ್ಲಾಜಾಗಳಲ್ಲಿ ನಗದು ವಹಿವಾಟು ಕಡಿಮೆಮಾಡಲು ಈ ಬದಲಾವಣೆ ತರಲಾಗಿದ್ದು, ನವೆಂಬರ್‌ 15ರಿಂದ ಹೊಸ ನಿಯಮ ಜಾರಿಗೆ ಬರಲಿದೆ. ಅಲ್ಲದೇ ಡಿಜಿಟಲ್‌ ಪಾವತಿ ಮಾಡುವುದರಿಂದ ಪಾರದರ್ಶಕತೆ ಕಾಯ್ದುಕೊಳ್ಳುವ ಜೊತೆಗೆ ವಾಹನ ದಟ್ಟಣೆಯೂ ಕಡಿಮೆಯಾಗಲಿದೆ, ಹೆದ್ದಾರಿ ಬಳಕೆದಾರರ ಪ್ರಯಾಣ ಸಮಯ ಉಳಿತಾಯ ಕೂಡ ಮಾಡಬಹುದಾಗಿದೆ. ಇದನ್ನೂ ಓದಿ: ಕಂದಮ್ಮಗಳ ಜೀವ ತೆಗೆದ ಕೆಮ್ಮಿನ ಸಿರಪ್ – ಕೇಂದ್ರ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

    ಉದಾಹರಣೆಗೆ
    ಫಾಸ್ಟ್‌ಟ್ಯಾಗ್ ಮೂಲಕ ವಾಹನದ ಟೋಲ್ ಶುಲ್ಕ 100 ರೂ. ಆಗಿದ್ದರೆ, ನಗದು ರೂಪದಲ್ಲಿ ಪಾವತಿಸಿದರೆ 200 ರೂ. ಆಗುತ್ತದೆ, ಆದರೆ UPI ಮೂಲಕ ಡಿಜಿಟಲ್ ಆಗಿ ಪಾವತಿಸಿದರೆ 125 ರೂ. ಮಾತ್ರ ಆಗುತ್ತದೆ. ಇದರರ್ಥ ನವೆಂಬರ್ 15 ರಿಂದ FASTag ಅಲ್ಲದ ಬಳಕೆದಾರರು UPI ಮೂಲಕ ಪಾವತಿ ಮಾಡಿದ್ರೆ 100 ರೂ.ನಲ್ಲಿ 75 ರೂ. ಉಳಿತಾಯ ಮಾಡಬಹುದಾಗಿದೆ. ಇದನ್ನೂ ಓದಿ: ಬಿಹಾರದಲ್ಲಿ ವಿಧಾನಸಭೆ ಚುನಾವಣೆ; ತಯಾರಿ ಪರಿಶೀಲಿಸಿದ ಕೇಂದ್ರ ಚುನಾವಣಾ ಆಯೋಗ

  • ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬರುವಾಗ ಡಿಕೆಶಿ ಬೆಂಗಾವಲು ವಾಹನ ಪಲ್ಟಿ – ಪ್ರಾಣಾಪಾಯದಿಂದ ಪಾರು

    ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬರುವಾಗ ಡಿಕೆಶಿ ಬೆಂಗಾವಲು ವಾಹನ ಪಲ್ಟಿ – ಪ್ರಾಣಾಪಾಯದಿಂದ ಪಾರು

    ಮಂಡ್ಯ: ಮೈಸೂರಿನಲ್ಲಿ ನಡೆಯುತ್ತಿದ್ದ ಸಾಧನಾ ಸಮಾವೇಶ ಮುಗಿಸಿ ಬೆಂಗಳೂರಿಗೆ ವಾಪಸ್‌ ತೆರಳುತ್ತಿದ್ದ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರ ಬೆಂಗಾವಲು ವಾಹನ ಪಲ್ಟಿಯಾಗಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bengaluru Mysuru Expressway) ನಡೆದಿದೆ.

    ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಎಕ್ಸ್‌ಪ್ರೆಸ್‌ವೇನಲ್ಲಿ ಘಟನೆ ನಡೆದಿದೆ. ಬೆಂಗಾವಲು ವಾಹನ ಪಲ್ಟಿಯಾಗಿದ್ದು, ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ನಮ್ಮ ಸರ್ಕಾರ ದೇವರ ಮನೆಯಿದ್ದಂತೆ, ಸಿದ್ದರಾಮಯ್ಯ ನಮ್ಮೆಲ್ಲರ ನಾಯಕ: ಡಿಕೆಶಿ

    ಮೈಸೂರಿನ ಸಾಧನಾ ಸಮಾವೇಶಕ್ಕೆ ತೆರಳಿದ್ದ ಡಿಕೆಶಿ ಬೆಂಗಳೂರಿಗೆ ವಾಪಸ್‌ ತೆರಳುತ್ತಿದ್ದರು. ಈ ವೇಳೆ ಡಿಕೆಶಿ ಬೆಂಗಾವಲು ವಾಹನ ಹೊಸೂರು ಬಳಿಯ ಎಕ್ಸ್‌ಪ್ರೆಸ್‌ವೇ ಬಳಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಎಸ್ಕಾರ್ಟ್‌ ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದೃಷ್ಟವಶಾತ್‌ ಹಿಂದೆಯೇ ಇದ್ದ ಡಿಕೆಶಿ ಕಾರಿಗೆ ಯಾವುದೇ ಅಪಾಯ ಆಗಿಲ್ಲ, ಘಟನೆ ಬಳಿಕ ಬಳಿಕ ಬೆಂಗಳೂರಿಗೆ ಸೇಫಾಗಿ ಪ್ರಯಾಣ ಮಾಡಿದ್ದಾರೆ. ಇದನ್ನೂ ಓದಿ: ಜು.23-26ರವರೆಗೆ ಪ್ರಧಾನಿ ಮೋದಿ ಬ್ರಿಟನ್, ಮಾಲ್ಡೀವ್ಸ್‌ಗೆ ಭೇಟಿ

  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಗೆ ಹೊಸ ಎಂಟ್ರಿ-ಎಕ್ಸಿಟ್!

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಗೆ ಹೊಸ ಎಂಟ್ರಿ-ಎಕ್ಸಿಟ್!

    – ಸಂಸದರು, ಶಾಸಕರಿಂದ ಸ್ಥಳ ಪರಿಶೀಲನೆ

    ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಗೆ (Bengaluru-Mysuru Expressway) ಹೊಸ ಎಂಟ್ರಿ-ಎಕ್ಸಿಟ್ (Entry-Exit) ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ರಾಮನಗರ-ಚನ್ನಪಟ್ಟಣ ನಡುವಿನ ಕಣ್ವ ಡ್ಯಾಂ ಜಂಕ್ಷನ್‌ನಲ್ಲಿ (Kanva Dam Junction) ಎಂಟ್ರಿ-ಎಕ್ಸಿಟ್ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದೆ. ಈ ಹಿನ್ನೆಲೆ ಇಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ ಹಾಗೂ ಶಾಸಕ ಸಿ.ಪಿ.ಯೋಗೇಶ್ವರ್ ಸ್ಥಳ ಪರಿಶೀಲನೆ ನಡೆಸಿದರು.

    ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸ್ಥಳ ವೀಕ್ಷಣೆ ಮಾಡಿ ಹೊಸ ಎಂಟ್ರಿ-ಎಕ್ಸಿಟ್‌ನಿಂದಾಗುವ ಅನುಕೂಲಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಮಂಜುನಾಥ್ (Dr Manjunath), ಪ್ರವಾಸಿಗರು ಹಾಗೂ ವಾಹನ ಸವಾರರ ಅನುಕೂಲಕ್ಕಾಗಿ ಹೊಸ ಎಂಟ್ರಿ ಹಾಗೂ ಎಕ್ಸಿಟ್‌ಗೆ ಹೆದ್ದಾರಿ ಪ್ರಾಧಿಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ರಾಂಪುರದ ಬಳಿ ಇದಕ್ಕೆ ಜಾಗ ಗುರುತಿಸಲಾಗಿತ್ತು. ಆದರೆ ಅಲ್ಲಿ ಸೂಕ್ತ ಜಾಗ ಇಲ್ಲದ್ದಕ್ಕೆ ಕಣ್ವ ಜಂಕ್ಷನ್ ಬಳಿ ಜಾಗ ಗುರುತು ಮಾಡಲಾಗಿದೆ. ಹಾಗಾಗಿ ಸ್ಥಳೀಯ ಶಾಸಕರು ಹಾಗೂ ಎನ್‌ಹೆಚ್‌ಎಐ (NHAI) ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ಮಾಡಲಾಗಿದೆ. ಕಣ್ವ ಜಂಕ್ಷನ್‌ನಲ್ಲಿ ಎಕ್ಸಿಟ್-ಎಂಟ್ರಿ ನಿರ್ಮಾಣ ಆದರೆ ಪ್ರವಾಸೋದ್ಯಮಕ್ಕೂ ಅನುಕೂಲ. ಕಣ್ವ ಡ್ಯಾಂ, ಕೆಂಗಲ್ ಆಂಜನೇಯನ ದೇವಾಲಯ ಹಾಗೂ ಬೆಂ-ಮೈ ಹಳೇ ಹೆದ್ದಾರಿಗೆ ನೇರ ಸಂಪರ್ಕ ಕಲ್ಪಿಸುತ್ತದೆ. ಶೀಘ್ರದಲ್ಲೇ ಮೂರು ಕಡೆಗಳಲ್ಲಿ ಸ್ಕೈವಾಕ್ ಕಾಮಗಾರಿ ಸಂಪೂರ್ಣ ಆಗಲಿದೆ. ಚನ್ನಪಟ್ಟಣದ ಬಳಿ ಟಾಯ್ಸ್ ಪಾರ್ಕ್ ಕೂಡಾ ಬರಲಿದೆ. ಅದಕ್ಕೂ ಈಗಾಗಲೇ ಜಾಗ ಗುರುತು ಮಾಡಲಾಗಿದೆ. ಎಕ್ಸ್‌ಪ್ರೆಸ್ ಹೈವೇಯ ಎಲ್ಲಾ ಸಮಸ್ಯೆಗಳನ್ನ ಹಂತಹಂತವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಚೀನಾದ ಹೋಟೆಲ್‌ನಲ್ಲಿ ಭಾರೀ ಬೆಂಕಿ – 22 ಮಂದಿ‌ ಸಾವು, ಮೂವರಿಗೆ ಗಾಯ

    ಇನ್ನೂ ಇದೇವೇಳೆ ಪಹಲ್ಗಾಮ್ ದಾಳಿಗೆ ಕೇಂದ್ರದ ಭದ್ರತಾ ವೈಫಲ್ಯ ಕಾರಣ ಎಂಬ ವಿಪಕ್ಷಗಳ ಆರೋಪ ವಿಚಾರ ಕುರಿತು ಮಾತನಾಡಿ, ಈ ಸಂದರ್ಭದಲ್ಲಿ ಘಟನೆಗೆ ಯಾವ ರೀತಿ ಪ್ರತಿಕ್ರಿಯೆ ನೀಡಬೇಕು ಎಂಬುದು ಮುಖ್ಯ. ಈ ಕ್ಷಣಕ್ಕೆ ಭಯೋತ್ಪಾದನೆ ಹಾಗೂ ಭಯೋತ್ಪಾದಕರಿಗೆ ತಕ್ಕಪಾಠ ಕಲಿಸುವ ಬಗ್ಗೆ ಯೋಚನೆ ಮಾಡಬೇಕು. ಮಿಕ್ಕಿದ್ದೆಲ್ಲ ಆಮೇಲೆ ಮಾತನಾಡಬಹುದು. ಯುದ್ಧ ಎಂಬುದು ಸೂಕ್ಷ್ಮವಾದ ವಿಚಾರ. ಅದರ ಬಗ್ಗೆ ಎಲ್ಲೆಂದರಲ್ಲಿ ಚರ್ಚೆ ಮಾಡೋದು ಸೂಕ್ತ ಅಲ್ಲ ಎಂದರು. ಇದನ್ನೂ ಓದಿ: ಗಡಿಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – ನೆಲಕ್ಕುರುಳಿದ ಬೃಹತ್ ಮರ

  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – ಸವಾರರು ಗ್ರೇಟ್‌ ಎಸ್ಕೇಪ್‌

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – ಸವಾರರು ಗ್ರೇಟ್‌ ಎಸ್ಕೇಪ್‌

    ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ರಸ್ತೆ ಬಳಿ ನಡೆದಿದೆ.

    ಎಕ್ಸ್‌ಪ್ರೆಸ್‌ವೇನಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುವ ವೇಳೆ ಅವಘಡ (Road Accident) ಸಂಭವಿಸಿದೆ. ಬೆಂಗಳೂರು ಕಡೆಗೆ ಹೋಗ್ತಿದ್ದ ಕಾರು ಬ್ಯಾರಿಕೇಡ್ ಗಮನಿಸದೇ ಸಡನ್ ಆಗಿ ಬ್ರೇಕ್ ಹಾಕಿದೆ. ಈ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಮುಂದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮುಂಬದಿ ಕಾರಿನ ಕೆಳಗೆ ನುಗ್ಗಿ ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯಕ್ಕಷ್ಟೇ ಅಲ್ಲ ದೇಶಕ್ಕೆ ಅನಿವಾರ್ಯ – ಕಂಪ್ಲಿ ಶಾಸಕ ಗಣೇಶ್

    ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೋಲಿಸರು ಭೇಟಿ ನೀಡಿ ಕಾರುಗಳನ್ನ ತೆರವು ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಿಬಿಐ ನಿರ್ದೇಶಕರಂತಹ ಕಾರ್ಯನಿರ್ವಾಹಕ ನೇಮಕಾತಿಗಳಲ್ಲಿ ಸಿಜೆಐ ಯಾಕೆ ಭಾಗಿಯಾಗಬೇಕು – ಉಪ ರಾಷ್ಟ್ರಪತಿ ಪ್ರಶ್ನೆ

  • ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್

    ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್

    ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಶಾಕ್ ಕೊಟ್ಟಿದೆ.

    ಟೋಲ್‌ನಿಂದ (Toll) ಎಸ್ಕೇಪ್‌ ಆಗುವುದನ್ನ ತಪ್ಪಿಸಲು ಬಿಡದಿ ಬಳಿಯ ನಿರ್ಗಮನ ರಸ್ತೆ ಬಂದ್ ಮಾಡಿದೆ. ಈ ಮೂಲಕ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಇದ್ದ ಸಂಪರ್ಕವನ್ನು ಕಡಿತಗೊಳಿಸಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ 3 ಸಾವಿರಕ್ಕೆ ವಾರ್ಷಿಕ, 30 ಸಾವಿರಕ್ಕೆ ಜೀವಿತಾವಧಿ ಟೋಲ್‌ ಪಾಸ್‌

    ಮೈಸೂರಿನಿಂದ ಬರುತ್ತಿದ್ದ ವಾಹನ ಸವಾರರು ಬಿಡದಿಯಿಂದ ಮುಂದೆ ಸರ್ವೀಸ್‌ ರಸ್ತೆಗೆ ಇಳಿದು ಟೋಲ್‌ ತಪ್ಪಿಸಿಕೊಳ್ಳುತ್ತಿದ್ದರು. ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸಿ ಶೇಷಗಿರಿಹಳ್ಳಿ ಬಳಿ ಟೋಲ್ ಕಟ್ಟದೇ ಸರ್ವೀಸ್ ರಸ್ತೆ ಮೂಲಕ ಬೆಂಗಳೂರು ತಲುಪುತ್ತಿದ್ದರು. ಹೀಗಾಗಿ ಟೋಲ್‌ ತಪ್ಪಿಸುವ ವಾಹನಗಳಿಗೆ ಕಡಿವಾಣ ಹಾಕಲು ಹೆದ್ದಾರಿ ಪ್ರಾಧಿಕಾರ ಎಂಟ್ರಿಗೆ ಅವಕಾಶ ಕೊಟ್ಟು, ಎಕ್ಸಿಟ್‌ ರಸ್ತೆಯನ್ನು ಬಂದ್‌ ಮಾಡಿದೆ. ಇದನ್ನೂ ಓದಿ: ಗೌತಮ್‌ ಅದಾನಿ ಪುತ್ರನ ವಿವಾಹ ಪ್ರತಿಜ್ಞೆ – ಪ್ರತಿ ವರ್ಷ 500 ಅಂಗವಿಕಲ ಹೆಣ್ಣುಮಕ್ಕಳ ವಿವಾಹಕ್ಕೆ 10 ಲಕ್ಷ ನೆರವು ಘೋಷಣೆ

    ಹೆದ್ದಾರಿ ಪ್ರಾಧಿಕಾರದ ನಡೆಗೆ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. ಸೂಚನಾ ಫಲಕವನ್ನೂ ಅಳವಡಿಸದೇ ಏಕಾಏಕಿ ಎಕ್ಸಿಟ್‌ ರಸ್ತೆಯನ್ನು ಬಂದ್‌ ಮಾಡಿರುವುದು ಸರಿಯಲ್ಲ. ರಾಮನಗರದಿಂದ ಬೆಂಗಳೂರಿಗೆ ಹೋಗೋದಕ್ಕೂ ದುಬಾರಿ ಟೋಲ್ ಕಟ್ಟಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

    ಶೀಘ್ರವೇ ವಾರ್ಷಿಕ, ಜೀವಿತಾವಧಿ ಟೋಲ್‌ ಪಾಸ್‌:
    ಇನ್ನೂ ಟೋಲ್‌ ಸಂಗ್ರಹದಲ್ಲಿ ಉಂಟಾಗುತ್ತಿದ್ದ ಕಿರಿಕಿರಿ ತಪ್ಪಿಸಲು ಹಾಗೂ ಕಾರು ಮಾಲೀಕರಿಗೆ ಅನುಕೂಲ ಮಾಡಿಕೊಡಲು ʻವಾರ್ಷಿಕ ಟೋಲ್‌ ಪಾಸ್‌ʼ ವ್ಯವಸ್ಥೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಚಿಂತನೆ ನಡೆಸಿದೆ. ಅದರಂತೆ ಒಮ್ಮೆಲೆ 3,000 ರೂ. ಪಾವತಿಸಿ ಒಂದು ವರ್ಷದಲ್ಲಿ ಎಷ್ಟು ಬಾರಿ ಬೇಕಾದರೂ ಟೋಲ್‌ಗಳಲ್ಲಿ ಸಂಚಾರ ಮಾಡಬಹುದು. 30,000 ರೂ. ಪಾವತಿಸಿದ್ರೆ ʻಜೀವಮಾನದ ಪಾಸ್‌ʼ ಒದಗಿಸುವ ಸಾಧ್ಯತೆಯೂ ಇದೆ. 30,000 ರೂ.ಗಳ ಪಾಸ್‌ ಪಡೆದರೆ 15 ವರ್ಷಗಳವರೆಗೆ ಟೋಲ್‌ಗಳಲ್ಲಿ ಸಂಚಾರಕ್ಕೆ ಅವಕಾಶ ಇರಲಿದೆ ಎಂದು ಮೂಲಗಳು ತಿಳಿಸಿವೆ.

  • ‌Expressway- ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿಎಲ್ ರದ್ದು: ಅಲೋಕ್ ಕುಮಾರ್

    ‌Expressway- ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿಎಲ್ ರದ್ದು: ಅಲೋಕ್ ಕುಮಾರ್

    – ಮೊಬೈಲ್ ಬಳಕೆ ಮಾಡಿದ್ರೆ ಕೇಸ್

    ರಾಮನಗರ: ಯಾರಾದರೂ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಡಿಎಲ್‌ (Driving Licence) ರದ್ದು ಮಾಡುತ್ತೇವೆ.  ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಹಾಗೂ ಮಿತಿ ಮೀರಿ ವಾಹನ ಚಾಲನೆ ಮಾಡಿದರೆ ಕೇಸ್ (Case) ಹಾಕುವ ಕೆಲಸ ಮಾಡುತ್ತೇವೆ ಎಂದು ಸಂಚಾರಿ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆ ಇಂದು ಎನ್‌ಹೆಚ್ ಅಧಿಕಾರಿಗಳ ಜೊತೆ ಅಲೋಕ್ ಕುಮಾರ್ ಹೆದ್ದಾರಿಯ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಈ ರಸ್ತೆಯಲ್ಲಿ ಬಹಳ ಬಾರಿ ಸಂಚರಿಸಿದ್ದೇನೆ. ಕಳೆದ ಐದಾರು ತಿಂಗಳಿನಿಂದ ರಾಮನಗರ (Ramanagara) ವ್ಯಾಪ್ತಿಯಲ್ಲಿ 58ಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆ. 48ಕ್ಕೂ ಹೆಚ್ಚು ಅಪಘಾತಗಳಾಗಿವೆ. ಎಲ್ಲೆಲ್ಲಿ ಅಪಘಾತ ನಡೆದಿದೆ ಆ ಸ್ಥಳಗಳ ಸಮಸ್ಯೆ ಬಗ್ಗೆ ಪರಿಶೀಲಿಸಿದ್ದೆವೆ. ಹೆದ್ದಾರಿಯಲ್ಲಿ ಆಗಮನ ಮತ್ತು ನಿರ್ಗಮನದ ಸಮಸ್ಯೆ ಇದೆ. ಕೆಲವೆಡೆ ರಸ್ತೆಯಲ್ಲಿ ತೀವ್ರ ತಿರುವುಗಳಿವೆ. ಇದರಿಂದ ವಾಹನಗಳು ಡಿವೈಡರ್ ಹಾರುತ್ತಿವೆ. ಹೈವೆಯಲ್ಲಿ ಲೇನ್ ಶಿಸ್ತನ್ನು ಬಳಸಬೇಕು. ಹೀಗಾಗಿ ಹೈವೇ ಪಟ್ರೋಲಿಂಗ್ (Patroling) ಅಗತ್ಯ ಇದೆ ಎಂದರು. ಇದನ್ನೂ ಓದಿ: ಬಿಜೆಪಿ ನಾಯಕರ ಬೀದಿ ಜಗಳ; ಅಚ್ಚರಿ ಮೂಡಿಸಿದ ಹೈಕಮಾಂಡ್ ಮೌನ

    ಈಗಾಗಲೇ ನಾಲ್ಕು ಹೈವೇ ಪಟ್ರೊಲಿಂಗ್ ವಾಹನಗಳಲ್ಲಿ ಗಸ್ತು ಮಾಡಲಾಗುತ್ತಿದೆ. ಹೈ ಸ್ಪೀಡ್ ಲಿಮಿಟ್ ತಡೆಗೆ ಸ್ಪೀಡ್ ರೆಡಾರ್ (Speed Radar) ಅಳವಡಿಕೆ ಮಾಡುತ್ತೇವೆ. ಯಾರಾದರೂ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಡಿಎಲ್ ರದ್ದು ಮಾಡುತ್ತೇವೆ. ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಹಾಗೂ ಮಿತಿ ಮೀರಿ ವಾಹನ ಚಾಲನೆ ಮಾಡಿದರೆ ಕೇಸ್ ಹಾಕುವ ಕೆಲಸ ಮಾಡುತ್ತೇವೆ. ಸದ್ಯ ಕನಿಷ್ಠ 25% ರಷ್ಟು ಅಪಘಾತ ಕಡಿಮೆ ಮಾಡುವ ಗುರಿ ಇದೆ. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ಸಲಹೆ, ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: LKGಯಿಂದ ಸ್ನಾತಕೋತ್ತರ ಪದವಿವರೆಗೂ ಕೆಂಪೇಗೌಡರ ಪಠ್ಯ ಸೇರಿಸಿ: ನಂಜಾವಧೂತ ಶ್ರೀ

    ದಶಪಥ ಹೆದ್ದಾರಿಯಲ್ಲಿ ವಾಹನ ಸವಾರರು ನಿಯಮ ಪಾಲನೆ ಮಾಡಬೇಕು. ಅಮೂಲ್ಯವಾದ ಜೀವಕ್ಕಾಗಿ ನಿಧಾನವಾಗಿ ಚಲಿಸಿ. ನಮ್ಮ ಕುಟುಂಬಕ್ಕೆ ನಾವುಗಳೇ ಮುಖ್ಯ. ಹಾಗಾಗಿ ಸುಗಮ ಸಂಚಾರಕ್ಕೆ ಸೀಟ್ ಬೆಲ್ಟ್, ಇಂಡಿಕೇಟರ್ ಬಳಕೆ, ಸ್ಪೀಡ್ ಲಿಮಿಟ್‌ನಲ್ಲಿಯೇ ವಾಹನ ಚಲಾಯಿಸಬೇಕು. ದಶಪಥ ಹೆದ್ದಾರಿಯಲ್ಲಿ ಗರಿಷ್ಟ ಮಿತಿ 100 ಕಿ.ಮೀ ಇದೆ. ತಿರುವುಗಳಲ್ಲಿ 60- 80 ವೇಗ ಮಿತಿ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ: ರೇಣುಕಾಚಾರ್ಯ

    ಹೆದ್ದಾರಿಯಲ್ಲಿ ಎನ್‌ಹೆಚ್ ಅಧಿಕಾರಿಗಳ ನ್ಯೂನ್ಯತೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ಸೂಚನೆಗಳನ್ನು ಹೈವೇ ಪ್ರಾಧಿಕಾರ ಪಾಲಿಸದಿದ್ದರೆ, ಅಧಿಕಾರಿಗಳ ಮೇಲೆ ಕ್ರಮ ವಹಿಸುತ್ತೇವೆ. ನಾವು ನೀಡಿರುವ ಕಾಲವಕಾಶವನ್ನು ಮೀರಿದರೆ, ಕ್ರಮ ಖಂಡಿತ ಎಂದರು. ಹೆದ್ದಾರಿ ಪ್ರಾಧಿಕಾರ ಅಂಬುಲೆನ್ಸ್, ಹೈವೆ ಪಟ್ರೋಲ್ ವ್ಯವಸ್ಥೆ ಮಾಡಬೇಕು. ಅಲ್ಲಲ್ಲಿ ತುರ್ತು ಗೇಟ್‌ಗಳನ್ನು ಸಿದ್ಧಪಡಿಸಬೇಕು. ಹಲವೆಡೆ ಸ್ಕೈವಾಕ್ ನಿರ್ಮಾಣ ಮಾಡಬೇಕು. ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ಒತ್ತಡವನ್ನು ಹೇರುತ್ತೇವೆ ಎಂದರು. ಇದನ್ನೂ ಓದಿ: ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿ: ಸಿದ್ದರಾಮಯ್ಯ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಬೆಂ-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಮತ್ತೊಂದು ಭೀಕರ ಅಪಘಾತ – ಓರ್ವ ಸಾವು

    ಬೆಂ-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಮತ್ತೊಂದು ಭೀಕರ ಅಪಘಾತ – ಓರ್ವ ಸಾವು

    – ಮೂವರಿಗೆ ಗಂಭೀರ ಗಾಯ

    ರಾಮನಗರ: ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Express Way) ನಡೆದಿದೆ.

    ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಅಪಘಾತ (Road Accident) ಸಂಭವಿಸಿದ್ದು, ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡು, ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೈಸೂರು ಮಾರ್ಗದಿಂದ ಬರುತ್ತಿದ್ದ ಟಾಟಾ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಅಳವಡಿಸಿದ್ದ ಡಿವೈಡರ್‌ಗೆ ಡಿಕ್ಕಿಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.  ಇದನ್ನೂ ಓದಿ: ಬೆಂ-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭಯಾನಕ ಅಪಘಾತ- 5 ತಿಂಗಳಲ್ಲೇ 55 ಮಂದಿ ಸಾವು!

    ಇನ್ನೂ ರಸ್ತೆ ಅಪಘಾತದ ಹಿನ್ನೆಲೆಯಲ್ಲಿ ಬೆಂ-ಮೈಸೂರು ಎಕ್ಸ್‌ಪ್ರೇಸ್‌ವೇನಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಅಪಘಾತದಿಂದಾಗಿ ಕೆಲಕಾಲ ಟ್ರಾಫಿಕ್‌ಜಾಮ್ ಆಗಿ ಪ್ರಯಾಣಿಕರು ಪರದಾಡುವಂತಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು (Channapattana Rural Police) ಭೇಟಿ ನೀಡಿ ಸಂಚಾರ ಸುಗಮಗೊಳಿಸಿದರು.

    ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ (Channapattana Traffic Police) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಂಬೈ, ದೆಹಲಿಯಷ್ಟೇ ಅಲ್ಲ ಬೆಂಗ್ಳೂರಲ್ಲೂ ಹೆಚ್ಚಾಗ್ತಿದೆ ಲಿವಿಂಗ್ ರಿಲೇಷನ್ ಕೊಲೆ ಕೇಸ್

  • ಮಾರ್ಚ್ 14ರಿಂದಲೇ ದಶಪಥ ರಸ್ತೆಯಲ್ಲಿ ಟೋಲ್ ಸಂಗ್ರಹ ಶುರು

    ಮಾರ್ಚ್ 14ರಿಂದಲೇ ದಶಪಥ ರಸ್ತೆಯಲ್ಲಿ ಟೋಲ್ ಸಂಗ್ರಹ ಶುರು

    ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ (Bengaluru Mysuru Expressway) ಸಂಚಾರಕ್ಕೆ ಮುಕ್ತಗೊಂಡಿದ್ದು, ಮಾರ್ಚ್ 14ರಿಂದಲೇ ಟೋಲ್ (Toll) ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.

    ಬೆಂಗಳೂರು-ನಿಡಘಟ್ಟ ನಡುವಿನ ಶೇಷಗಿರಿಯಹಳ್ಳಿ ಮತ್ತು ಕಣಮಿಣಕಿಯ ಟೋಲ್‌ಗಳು ಕಾರ್ಯಾಚರಣೆ ಆರಂಭಿಸಲಿವೆ. ಬೆಂಗಳೂರಿನಿಂದ ಮೈಸೂರು ಕಡೆ ಹೋಗುವವರು ಕಣಮಿಣಕಿ ಬಳಿ, ಮೈಸೂರು ಕಡೆಯಿಂದ ಬೆಂಗಳೂರು ಬರುವವರು ಶೇಷಗಿರಿಹಳ್ಳಿಯ ಟೋಲ್‌ನಲ್ಲಿ ಶುಲ್ಕ ಪಾವತಿಸಬೇಕಾಗುತ್ತದೆ. ಮೊದಲ ಹಂತದ 55.63 ಕಿಮೀ ರಸ್ತೆಗೆ ಶುಲ್ಕ ಸಂಗ್ರಹ ಮಾಡಲಾಗುತ್ತದೆ ಪ್ರಾಧಿಕಾರ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ

    narendra modi 1

    ಈ ಬೆನ್ನಲ್ಲೇ ಕಾಮಗಾರಿ ಪೂರ್ಣಗೊಳಿಸದೇ, ಸರ್ವೀಸ್ ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡಬಾರದೆಂದು ಹಲವು ಸಂಘ ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಈ ನಡುವೆ ಟೋಲ್ ಸಂಗ್ರಹ ಮಾಡಲು ಎನ್‌ಹೆಚ್‌ಎಐ (NHAI) ಮುಂದಾಗಿದೆ. ಮಂಗಳವಾರ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಹೆದ್ದಾರಿಯಲ್ಲಿ ಸಂಚಾರಕ್ಕೆ ಅನುಮತಿ

    Narendra Modi mandya 3

    ಪ್ರಧಾನಿ ನರೇಂದ್ರ ಮೋದಿ (NarendraModi) ಭಾನುವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೊಳಿಸಿದ ಬಳಿಕ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

    ಟೋಲ್‌ ಶುಲ್ಕ ಎಷ್ಟು – ಹೇಗೆ?
    NHAI ಟೋಲ್‌ ಸಂಗ್ರಹಿಸಲು 6 ರೀತಿಯಲ್ಲಿ ವಾಹನಗಳನ್ನ ವರ್ಗೀಕರಿಸಲಾಗಿದೆ. ನಿಗದಿತ ಶುಲ್ಕದ ಪ್ರಕಾರ ಬೆಂಗಳೂರು-ನಿಡಘಟ್ಟ ವಿಭಾಗದಲ್ಲಿ ಒಂದು ಟ್ರಿಪ್‌ಗೆ ಕಾರು ಮಾಲೀಕರು 135 ರೂ. ಪಾವತಿಸಬೇಕಾಗುತ್ತದೆ. ಅಲ್ಲದೇ ಒಂದೇ ದಿನದಲ್ಲಿ ಮರಳಿದರೆ, 205 ರೂ. ನಿಗದಿಮಾಡಲಾಗಿದೆ. ಮಿನಿ ಬಸ್‌ಗೆ 220 ರೂ. ಹಾಗೂ ಬಸ್‌ಗೆ ಒಂದು ಬಾರಿ ಪ್ರಯಾಣಕ್ಕೆ 460 ರೂ. ಶುಲ್ಕ ವಿಧಿಸಲಾಗುತ್ತದೆ ಎಂದು NHAI ಹೇಳಿದೆ.

  • ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಬೇಗ ತಲುಪಿ!

    ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಬೇಗ ತಲುಪಿ!

    – ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಕಾಮಗಾರಿಗೆ ಚಾಲನೆ
    – ಬೆಂಗಳೂರಿನಿಂದ ಕುಶಾಲನಗರಕ್ಕೆ ಎರಡೂವರೆ ಗಂಟೆ ಸಂಚಾರ

    ಬೆಂಗಳೂರು: ಮೈಸೂರು-ಕುಶಾಲನಗರ (Mysuru-Kushalanagara Four Lane Highway) ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ಬೆಂಗಳೂರು-ಮಂಗಳೂರು (Bengaluru-Mangaluru) ರಸ್ತೆ ಸಂಚಾರಕ್ಕೆ ವೇಗ ಕಲ್ಪಿಸುವ ಕಾಲ ಸನ್ನಿಹಿತವಾಗಿದೆ.

     

    ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಇದರಿಂದ ಹಲವು ವರ್ಷಗಳ ಬೇಡಿಕೆಯಾಗಿದ್ದ ಕುಶಾಲನಗರದಿಂದ ಮಾಣಿವರೆಗಿನ ರಸ್ತೆ ಚತುಷ್ಪಥವಾಗುವ ಕನಸು ನನಸಾಗುತ್ತಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ಪ್ರಯಾಣದ ಸಮಯ ಇಳಿಕೆಯಾಗಲಿದೆ. ಇದನ್ನೂ ಓದಿ: ಬೆಂಗಳೂರು – ಮೈಸೂರು ಹೆದ್ದಾರಿ ಯಾರಿಗೆ ಉಪಯೋಗ : ಹೆಚ್‍ಡಿಕೆ

    ಮೊದಲ ಹಂತವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway) ಇಂದು ಲೋಕಾರ್ಪಣೆಗೊಂಡಿತು. ಈ ಯೋಜನೆಯಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಕ್ಕಂತಾಗಿದೆ. ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯ 3 ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆ ಹಾಗೂ ಕೃಷಿ ಚಟುವಟಿಕೆ ಅಭಿವೃದ್ಧಿಗೂ ಪ್ರೋತ್ಸಾಹ ದಕ್ಕಿದಂತಾಗಿದೆ.

     

    ಇದರ ಮುಂದುವರಿದ ಭಾಗವಾಗಿ 92.33 ಕಿ.ಮೀ ಉದ್ದದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. 4,128.92 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು-ಕುಶಾಲನಗರ ಚುತುಷ್ಪಥ ಹೆದ್ದಾರಿಯಾದರೆ, ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸುವ ಸಮಯದಲ್ಲಿ ಇಳಿಕೆಯಾಗಲಿದೆ. ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸಲು ಹಾಲಿ 5 ಗಂಟೆ ಸಮಯ ಬೇಕು. ಚತುಷ್ಪಥ ಹೆದ್ದಾರಿಯಾದರೆ ಈ ಸಮಯ ಎರಡೂವರೆ ಗಂಟೆಗೆ ಇಳಿಯುತ್ತದೆ. ಆ ಮೂಲಕ ಪ್ರಯಾಣಿಕರಿಗೆ ಎರಡೂವರೆ ಗಂಟೆ ಉಳಿತಾಯವಾಗುತ್ತದೆ. ಈ ಹೆದ್ದಾರಿ ಉತ್ತಮ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ. ಇದನ್ನೂ ಓದಿ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ

    ಎರಡನೇ ಹಂತದಲ್ಲಿ ಕುಶಾಲನಗರ-ಸಂಪಾಜೆ, ಮೂರನೇ ಹಂತದಲ್ಲಿ ಸಂಪಾಜೆಯಿಂದ-ಮಾಣಿಗೆ ಚತುಷ್ಪಥ ಹೆದ್ದಾರಿ ನಿರ್ಮಾಣವಾಗಲಿದೆ. ಈ ಹಂತದ ಕಾಮಗಾರಿಗೆ ಗ್ರೀನ್ ಸಿಗ್ನಲ್ ಸಿಕ್ಕರೆ, ಬೆಂಗಳೂರು-ಮಂಗಳೂರು ಪ್ರಯಾಣದ ಸಮಯದಲ್ಲಿ ಕಡಿತವಾಗಲಿದೆ.

    ಸದ್ಯ ಮೈಸೂರು ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ 395 ಕಿ.ಮೀ ಇದ್ದು ಪ್ರಯಾಣಿಸಲು 8 ರಿಂದ 9 ಗಂಟೆ ಸಮಯ ಬೇಕಾಗುತ್ತದೆ. ಚತುಷ್ಪಥ ರಸ್ತೆಯಾದರೆ ಆ ಸಮಯ 5 ಗಂಟೆಗೆ ಇಳಿಕೆಯಾಗಲಿದೆ. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ. ಇದನ್ನೂ ಓದಿ: ಗುಜರಾತ್ ಸಿಎಂ ಆಗಿದ್ದಾಗಲೂ ಸಕ್ಕರೆ ನಾಡಿಗೆ ಬಂದಿದ್ರು ಮೋದಿ

  • ಮಾರ್ಚ್‌ನಲ್ಲಿ ದಶಪಥ ರಸ್ತೆ ಲೋಕಾರ್ಪಣೆ, 250 ರೂ. ಟೋಲ್ ನಿಗದಿ ಸಾಧ್ಯತೆ: ಪ್ರತಾಪ್ ಸಿಂಹ

    ಮಾರ್ಚ್‌ನಲ್ಲಿ ದಶಪಥ ರಸ್ತೆ ಲೋಕಾರ್ಪಣೆ, 250 ರೂ. ಟೋಲ್ ನಿಗದಿ ಸಾಧ್ಯತೆ: ಪ್ರತಾಪ್ ಸಿಂಹ

    ಮೈಸೂರು: ಮಾರ್ಚ್ ತಿಂಗಳಲ್ಲಿ ದಶಪಥ ರಸ್ತೆ ಲೋಕಾರ್ಪಣೆಯಾಗಲಿದ್ದು, 250 ರೂ. ಟೋಲ್ (Toll) ನಿಗದಿ ಮಾಡುವ ಸಾಧ್ಯತೆ ಇದೆ ಎಂದು ಸಂಸದ ಪ್ರತಾಪ್ ಸಿಂಹ (Pratap Simh) ಹೇಳಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (Bengaluru Mysuru Expressway) ಬಹುತೇಕ ಪೂರ್ಣ ಸ್ಥಿತಿಯಲ್ಲಿದೆ. ಮಾರ್ಚ್ 2 ಅಥವಾ 3ನೇ ವಾರದಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Air Show ಬಡತನ ಓಡಿಸುತ್ತಾ – ಪ್ರಧಾನಿ ಮೋದಿಗೆ ಹೆಚ್‌ಡಿಕೆ ಪ್ರಶ್ನೆ

    ದಶಪಥ ರಸ್ತೆ ಲೋಕಾರ್ಪಣೆಗೊಳಿಸುವ ವೇಳೆ ಪ್ರಧಾನಿಗಳು ಕುಶಾಲನಗರ – ಮೈಸೂರು ನಡುವಿನ ಹೆದ್ದಾರಿಗೂ (Kushalnagar -Mysuru Highway) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 3,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ 115 ಕಿಮೀ ಹೆದ್ದಾರಿ ಕಾಮಗಾರಿಯನ್ನ 24 ತಿಂಗಳಲ್ಲೇ ಪೂರ್ಣಗೊಳಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ದಶಪಥದಲ್ಲಿ ಬೈಕ್‌ಗಳ ಓಡಾಟಕ್ಕೆ ಅನುಮತಿ ಇಲ್ಲ- ಪ್ರತಾಪ್ ಸಿಂಹ

    250 ರೂ. ಟೋಲ್ ನಿಗದಿ ಸಾಧ್ಯತೆ:
    ಮೈಸೂರು-ಬೆಂಗಳೂರು ಹೆದ್ದಾರಿ ಟೋಲ್ ನಿಗದಿ ವಿಚಾರದಲ್ಲಿ ಸದ್ಯ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದೆ. ನನ್ನ ಪ್ರಕಾರ ನನ್ನ ಪ್ರಕಾರ ಅಂತಿಮವಾಗಿ ಎರಡೂ ಕಡೆ ಸೇರಿ ಬೆಂಗಳೂರಿನಿಂದ ಮೈಸೂರಿಗೆ 250 ರೂ. ಟೋಲ್ ನಿಗದಿ ಆಗಬಹುದು. ಫ್ಲೈಓವರ್‌ಗಳು ಬಂದಾಗ ಸಾಮಾನ್ಯವಾಗಿ ಟೋಲ್ ದರ ಕೊಂಚ ಹೆಚ್ಚಾಗುತ್ತದೆ. ಈ ರಸ್ತೆಯಲ್ಲೂ ಫ್ಲೈಓವರ್ ಇರುವ ಕಾರಣ 250 ರೂ. ಟೋಲ್ ನಿಗದಿಯಾಗಬಹುದು ಎಂದು ಮಾಹಿತಿ ನೀಡಿದ್ದಾರೆ.

    ದಶಪಥ ರಸ್ತೆಗೆ ಹೆಸರಿಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಷ್ಟ್ರೀಯ ಹೆದ್ದಾರಿಗೆ ವ್ಯಕ್ತಿಗಳ ಹೆಸರಿಡುವ ಪದ್ಧತಿ ಇಲ್ಲ. ವ್ಯಕ್ತಿಗಳ ಹೆಸರಿಡಿ ಅನ್ನೋರು ಈ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದ ಅವರು, ಎಲ್ಲಾ ಜಿಲ್ಲೆಗಳ ಜನರು ಭಕ್ತಿಯಿಂದ ಕಾವೇರಿ ತಾಯಿಯನ್ನ ನೋಡುತ್ತಾರೆ. ಕಾವೇರಿ ನದಿ ಬಗ್ಗೆ ಈ ಭಾಗದ ಜನರಲ್ಲಿ ಪೂಜ್ಯ ಭಾವನೆ ಇದೆ. ಮಗ ದೊಡ್ಡೋನಾ? ತಾಯಿ ದೊಡ್ಡೋರಾ? ಅನ್ನೋ ರೀತಿ ಚರ್ಚೆ ಬೇಡ. ತಾಯಿಯೆ ದೊಡ್ಡವಳು. ಹಾಗಾಗಿ ದಶಪಥ ರಸ್ತೆಗೆ ಕಾವೇರಿ ಹೆಸರು ಸೂಕ್ತ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k