Tag: ಬೆಂಗಳೂರು ಸಿಟಿ ಪೊಲೀಸ್

  • ಪೊಲೀಸ್ ಇಲಾಖೆಯಿಂದ ಟಫ್ ರೂಲ್ಸ್ – ಗಣೇಶೋತ್ಸವಕ್ಕೆ ಏನೆಲ್ಲಾ ನಿರ್ಬಂಧ?

    ಪೊಲೀಸ್ ಇಲಾಖೆಯಿಂದ ಟಫ್ ರೂಲ್ಸ್ – ಗಣೇಶೋತ್ಸವಕ್ಕೆ ಏನೆಲ್ಲಾ ನಿರ್ಬಂಧ?

    ಬೆಂಗಳೂರು: ಗಣೇಶೋತ್ಸವ (Ganesha Chaturthi) ಸಂಭ್ರಮಕ್ಕೆ ಬೆಂಗಳೂರು ಸಜ್ಜಾಗುತ್ತಿದೆ. ಈ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಿಸುವವರಿಗೆ ನಗರ ಪೊಲೀಸ್ ಇಲಾಖೆ (Bengaluru City Police), ಬಿಬಿಎಂಪಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಹಲವು ಮಾರ್ಗಸೂಚಿಗಳನ್ನ (Ganesha Festival Guidelines) ಜಾರಿಗೊಳಿಸಿದೆ.

    ಅನುಮತಿ, ಮೆರವಣಿಗೆ, ಸುರಕ್ಷತಾ ಕ್ರಮಗಳು ಸೇರಿದಂತೆ ವಿವಿಧ ವಿಷಯಗಳನ್ನ ಉಲ್ಲೇಖಿಸಲಾಗಿದೆ. ನಿಯಮಗಳನ್ನ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿಯೂ ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಗಣೇಶನ ಹಬ್ಬ ಸೆ.18ಕ್ಕಾ ಅಥವಾ 19ಕ್ಕಾ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    ಸಾರ್ವಜನಿಕ ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ ಗೈಡ್‌ಲೈನ್ಸ್

    • ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ.
    • ಚೌತಿ ಕಾರ್ಯಕ್ರಮಕ್ಕೆ ಕಾನೂನು ಬಾಹಿರವಾಗಿ ವಂತಿಕೆ ಸಂಗ್ರಹ ಮಾಡುವಂತಿಲ್ಲ
    • ಕಾರ್ಯಕ್ರಮ ನಡೆಸಲು ಚಪ್ಪರ, ಶಾಮಿಯಾನ, ಪೆಂಡಾಲ್‌ಗೆ ವಿಶೇಷ ಅನುಮತಿ ಪಡೆಯಬೇಕು.
    • ವಿವಾದಿತ ಜಾಗದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತಿಲ್ಲ.
    • ಮೆರವಣಿಗೆ ವೇಳೆ ಏನೇ ಅಹಿತಕರ ಘಟನೆ ನಡೆದರೆ ಸಂಘಟಕರೇ ನೇರ ಹೊಣೆ
    • ಆಯೋಜಕರು ಕಾರ್ಯಕ್ರಮ ನಡೆಯುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಗ್ರಿಗಳು ಹಾಗೂ ಅಡುಗೆ ಮಾಡುವಂತಿಲ್ಲ.
    • ಗಣೇಶೋತ್ಸವದ ವೇದಿಕೆ ಸುತ್ತಮುತ್ತ ಸಿಸಿಟಿವಿ ಸೇರಿದಂತೆ ಅಗತ್ಯ ಕ್ರಮವಹಿಸಬೇಕು.
    • ಮೂರ್ತಿ ಸ್ಥಾಪನೆ ಮಾಡಿರುವ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಒಟ್ಟಾರೆ ಬೆಂಕಿ ಸಂಬಂಧಿಸಿದ ಸಾಮಗ್ರಿಗಳನ್ನು ಇಡಬಾರದು.
    • ವಿದ್ಯುತ್ ಸಂಪರ್ಕ ಬೇಕಾಗಿರುವ ಬಗ್ಗೆ ಬೆಸ್ಕಾಂ ಮತ್ತು ಅಗ್ನಿ ಶಾಮಕ ಇಲಾಖೆಯ ಅನುಮತಿ ಕಡ್ಡಾಯ.
    • ಧ್ವನಿ ವರ್ಧಕ ಬಳಕೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್.
    • ಯಾವುದೇ ಕಾರಣಕ್ಕೂ ಡಿಜೆ ಸೌಂಡ್ ಸಿಸ್ಟಮ್ ಅಳವಡಿಕೆಗೆ ಅವಕಾಶ ಇಲ್ಲ.
    • ಮೆರವಣಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನೆ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧ.
    • ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮಕ್ಕೆ ರಾತ್ರಿ 10 ವರೆಗೆ ಮಾತ್ರ ಅವಕಾಶ ಇದನ್ನೂ ಓದಿ: ಚೈತ್ರಾ ಗ್ಯಾಂಗ್ ಮಾದರಿಯಲ್ಲೇ ಮತ್ತೊಂದು ಪ್ರಕರಣ – ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಲಕ್ಷ ಲಕ್ಷ ವಂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗ್ಳೂರಲ್ಲೂ ದೆಹಲಿ ಮಾದರಿಯ ಮರ್ಡರ್ – ಮಹಿಳೆಯನ್ನ ಕೊಂದು, ದೇಹ ಪೀಸ್ ಪೀಸ್ ಮಾಡಿದ ಹಂತಕರು

    ಬೆಂಗ್ಳೂರಲ್ಲೂ ದೆಹಲಿ ಮಾದರಿಯ ಮರ್ಡರ್ – ಮಹಿಳೆಯನ್ನ ಕೊಂದು, ದೇಹ ಪೀಸ್ ಪೀಸ್ ಮಾಡಿದ ಹಂತಕರು

    ಆನೇಕಲ್: ದೆಹಲಿಯಲ್ಲಿ ಶ್ರದ್ಧಾವಾಕರ್ (Shraddha Walker) ಹಾಗೂ ಮುಂಬೈನಲ್ಲಿ ಸರಸ್ವತಿ ವೈದ್ಯ ಹತ್ಯೆ ಪ್ರಕರಣದ ಮಾದರಿಯಲ್ಲೇ ಈಗ ಬೆಂಗಳೂರಿನಲ್ಲೊಂದು ಕೊಲೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ.

    ಬಿಹಾರದಿಂದ ಬೆಂಗಳೂರಿಗೆ (Bengaluru) ಬಂದಿದ್ದ ಯುವಕರು, ಆಸ್ತಿಗಾಗಿ ಮಹಿಳೆಯನ್ನ ಕೊಲೆ ಮಾಡಿ ದೇಹವನ್ನ ಪೀಸ್ ಪೀಸ್ ಮಾಡಿ ಎಸೆದು ಪರಾರಿಯಾಗಿರುವ ಘಟನೆ ಆನೇಕಲ್ ಉಪವಿಭಾಗದ ಬನ್ನೇರುಘಟ್ಟ ಪೋಲೀಸ್ ಠಾಣಾ (Bannerghatta Police Station) ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳ ಪೈಕಿ ಇಂದಲ್ ಕುಮಾರ್ (21) ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮೃತ ಮಹಿಳೆಯನ್ನು ಗೀತಾ (54) ಎಂದು ಗುರುತಿಸಲಾಗಿದೆ.

    ಜೂನ್ 1ರಂದು ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ತನಿಖೆ ಕೈಗೊಂಡಿದ್ದ ಬನ್ನೇರುಘಟ್ಟ ಪೊಲೀಸರು ಹಂತಕರನ್ನ ಪತ್ತೆಹಚ್ಚಲು ವಿಶೇಷ ತಂಡ ರಚನೆ ಮಾಡಿತ್ತು. ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಓರ್ವನ ಬಂಧನವಾಗಿದೆ. ಇದನ್ನೂ ಓದಿ: ದೇಶದ ಕೋಟ್ಯಂತರ ಜನ ಗಡ್ಡ ಬಿಟ್ಟಿದ್ದಾರೆ, ಅವರೆಲ್ಲ ಲಾಡೆನ್ ಆಗುತ್ತಾರಾ? – ಬಿಜೆಪಿಗೆ ಮನೋಜ್ ಝಾ ಪ್ರಶ್ನೆ

    ಏನಿದು ಕ್ರೈಂ ಸ್ಟೋರಿ?
    ಬಿಹಾರದಿಂದ ಬಂದಿದ್ದ ಯುವಕರು ಕೊಲೆಯಾದ ಮಹಿಳೆ (Women) ಗೀತಾ ಮನೆಯಲ್ಲೇ ಬಾಡಿಗೆಗೆ ಇದ್ದರು. ಕೊನೆಗೆ ಮನೆಯನ್ನು ತಮ್ಮ ಹೆಸರಿಗೇ ಮಾಡಿಕೊಡುವಂತೆ ಆಕೆಯನ್ನ ಒತ್ತಾಯಿಸಿದ್ದರು. ಅದಕ್ಕೆ ಒಪ್ಪದೇ ಇದ್ದದ್ದಕ್ಕೆ ಕೊಲೆ ಮಾಡಿದ್ದಾರೆ. ಈ ವಿಚಾರ ಹೊರಗೆ ತಿಳಿಯದಂತೆ ನೋಡಿಕೊಳ್ಳಲು ದೇಹವನ್ನ ತುಂಡರಿಸಿದ್ದಾರೆ. ಮೃತದೇಹದ ಭಾಗಗಳನ್ನ ತುಂಡು ತುಂಡಾಗಿ ಕತ್ತರಿಸಿ ಅಲ್ಲಲ್ಲಿ ಎಸೆದಿದ್ದಾರೆ. ಪ್ಲಾಸ್ಟಿಕ್ ಕವರ್‌ನಲ್ಲಿ ಕತ್ತರಿಸಿದ ಭಾಗಗಳನ್ನ ತುಂಬಿ ಬೇರೆಡೆಗೆ ಸಾಗಿಸಿದ್ದಾರೆ. ಇದನ್ನೂ ಓದಿ: ಕೆ.ಜಿಗೆ 2.75 ಲಕ್ಷಕ್ಕೆ ಮಾರಾಟವಾಯ್ತು ಜಗತ್ತಿನಲ್ಲೇ ದುಬಾರಿ ಮಾವಿನ ಹಣ್ಣು ‘ಮಿಯಾಝಾಕಿ’

    ಮಹಿಳೆಯನ್ನು ಕೊಲೆ ಮಾಡಿದ ನಂತರವೂ ಏನೂ ಆಗಿಲ್ಲವೆನ್ನುವಂತೆ ಆರೋಪಿಗಳು ಒಂದು ದಿನ ಕೆಲಸಕ್ಕೆ ತೆರಳಿದ್ದರು. ಅವರಲ್ಲಿಬ್ಬರು ಕಿರಾತಕರು ಶವದ ಮುಂದೆಯೇ ಕುಳಿತು ಊಟ ಮಾಡುತ್ತಿದ್ದರು. ಕೃತ್ಯ ನಡೆದ ಮೂರು ದಿನಗಳ ಬಳಿಕ ದುರ್ವಾಸನೆ ಬೀರುತ್ತಿದ್ದಂತೆ ಆತಂಕಗೊಂಡ ಆರೋಪಿಗಳು ಮನೆಯ ಹಿಂಭಾಗ ದೇಹದ ಭಾಗಗಳನ್ನ ಬಿಸಾಡಿ ಎಸ್ಕೇಪ್ ಆಗಿದ್ದಾರೆ. ಅದರಲ್ಲಿ ಮಹಿಳೆಯ ತಲೆ ಮತ್ತು ಒಂದು ಕೈ 1 ಕಿಮೀ ದೂರದಲ್ಲಿ ಪತ್ತೆಯಾದರೆ, ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್ ಅರಣ್ಯ ಪ್ರದೇಶದಲ್ಲಿ ರುಂಡ ಪತ್ತೆಯಾಗಿದೆ.

    ಕೃತ್ಯಕ್ಕೂ ಮುನ್ನ ಅತ್ಯಾಚಾರ ಆಗಿರುವ ಕುರಿತು ಪರಿಶೀಲನೆ ಸಹ ನಡೆಯುತ್ತಿದೆ. ಸದ್ಯದಲ್ಲೇ ಪೊಲೀಸರು ಮರಣೋತ್ತರ ಪರೀಕ್ಷೆ ವರದಿ ಪರಿಶೀಲನೆ ಮಾಡಲಿದ್ದಾರೆ. ಒಟ್ಟಿನಲ್ಲಿ ಈ ಕೊಲೆ ಮೇಲ್ನೋಟಕ್ಕೆ ಆಸ್ತಿ ವಿಚಾರಕ್ಕಾಗಿಯೇ ನಡೆದಿರುವುದು ಕಂಡುಬಂದಿದೆ. ಪ್ರಮುಖ ಆರೋಪಿಗಳಾದ ಪಂಕಜ್ ಕುಮಾರ್, ಸುಮೀತ್, ಉಳಿದ ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿಕೆ ನೀಡಿದ್ದಾರೆ.

  • ಈದ್ಗಾ ಮೈದಾನದ ಸುತ್ತ 1,600 ಪೊಲೀಸರಿಂದ ಬಿಗಿ ಭದ್ರತೆ

    ಈದ್ಗಾ ಮೈದಾನದ ಸುತ್ತ 1,600 ಪೊಲೀಸರಿಂದ ಬಿಗಿ ಭದ್ರತೆ

    ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿದ ಬೆನ್ನಲ್ಲೇ ಮೈದಾನದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಮೈದಾನದಲ್ಲಿ ಬೀಡುಬಿಟ್ಟಿದ್ದಾರೆ.

    ಸಂಘಟನೆಗಳ ಮುಖಂಡರು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಂಗಳವಾರ ಬೆಳಿಗ್ಗೆ ಸಿದ್ಧತೆಯಲ್ಲಿ ತೊಡಗಿದ್ದರು. ಪೆಂಡಾಲ್ ಸಹ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು. ಸಂಜೆ ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಪೆಂಡಾಲ್ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಿದ್ದಾರೆ. ಇದನ್ನೂ ಓದಿ: 200 ವರ್ಷಗಳಿಂದ ವಕ್ಪ್ ಆಸ್ತಿ , ಎರಡು ಬಾರಿ ನಮಾಜ್‌ಗೆ ಮಾತ್ರ ಅವಕಾಶ – ಸುಪ್ರೀಂ ಕೋರ್ಟ್‌ನಲ್ಲಿ ವಾದ ಹೇಗಿತ್ತು?

    ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಸುತ್ತ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಬೆಂಗಳೂರು ಹಾಗೂ ಅಕ್ಕಪಕ್ಕದ ಜಿಲ್ಲೆಗಳಿಂದ ಈದ್ಗಾ ಬಂದೋಬಸ್ತ್ಗೆ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. 1,600 ಪೊಲೀಸರು ಹಗಲು, ಗ್ರೌಂಡ್‌ಬಳಿ ಬೀಡುಬಿಟ್ಟಿದ್ದಾರೆ. ಈ ಮೂಲಕ ಗಣೇಶೋತ್ಸವಕ್ಕೆ ಅವಕಾಶ ಕೊಡಲಿ ಬಿಡಲಿ, ಶಾಂತಿ ಭಂಗಕ್ಕೆ ಅವಕಾಶವಿಲ್ಲ ಅನ್ನೋ ಸಂದೇಶ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆ- ತಂದೆಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ 7ರ ಬಾಲಕ

    ಹೇಗಿದೆ ಬಂದೋಬಸ್ತ್?
    ಮೈದಾನದ ಸುತ್ತ 3 ಡಿಸಿಪಿ, 21 ಎಸಿಪಿ, 47 ಪಿಐ, 130 ಪಿಎಸ್‌ಐ, 126 ಎಎಸ್‌ಐ, 900 ಹೆಚ್‌ಇ ಪಿಸಿ, 120 ಆರ್‌ಎಎಫ್, 100 ಸ್ವಾಟ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶದಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮಂಗಳವಾರ ಪಥಸಂಚಲನ ನಡೆಸಿ ಸ್ಥಳೀಯರಲ್ಲಿ ಧೈರ್ಯ ತುಂಬಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹಿಳೆಯರೇ ಎಚ್ಚರ – ಎಲ್ಲೆಡೆ ಹರಿದಾಡ್ತಿದೆ ಬೆಂಗ್ಳೂರು ಪೊಲೀಸ್ ಸಹಾಯವಾಣಿಯ ನಕಲಿ ನಂಬರ್

    ಮಹಿಳೆಯರೇ ಎಚ್ಚರ – ಎಲ್ಲೆಡೆ ಹರಿದಾಡ್ತಿದೆ ಬೆಂಗ್ಳೂರು ಪೊಲೀಸ್ ಸಹಾಯವಾಣಿಯ ನಕಲಿ ನಂಬರ್

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಮಹಿಳಾ ಸಹಾಯವಾಣಿಯ ನಕಲಿ ನಂಬರ್. ದಯವಿಟ್ಟು ಇಂತಹ ಸುಳ್ಳು ಸುದ್ದಿಗಳಿಂದ ಜಾಗೃತರಾಗಿರಿ ಎಂದು ಸ್ವತಃ ಬೆಂಗಳೂರು ಸಿಟಿ ಪೊಲೀಸರು(ಬಿಸಿಪಿ) ಟ್ವೀಟ್ ಮಾಡಿ ಸಾರ್ವಜನಿಕರನ್ನು ಎಚ್ಚರಿಸಿದ್ದಾರೆ.

    ಹೈದರಾಬಾದ್ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ನಡೆದ ಮೇಲೆ ಎಲ್ಲಾ ರಾಜ್ಯದಲ್ಲಿಯೂ ಮಹಿಳೆಯರ ಸುರಕ್ಷತೆ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಈ ವಿಚಾರವನ್ನೇ ದುರುಪಯೋಗ ಮಾಡಿಕೊಂಡ ದುಷ್ಕರ್ಮಿಗಳು, ಬೆಂಗಳೂರು ಪೊಲೀಸರು ಮಹಿಳಾ ಸಹಾಯವಾಣಿಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ನಕಲಿ ಫೋನ್ ನಂಬರ್ ಹಾಕಿ, ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

    ನಕಲಿ ಪೋಸ್ಟ್‌ನಲ್ಲಿ ಏನಿದೆ?
    ರಾತ್ರಿ ವೇಳೆ ಮಹಿಳೆಯರಿಗೆ ಓಡಾಡಲು ವಾಹನ ಸಿಗದಿದ್ದರೆ ಅವರಿಗೆ ಬೆಂಗಳೂರು ಸಿಟಿ ಪೊಲೀಸರು ತಮ್ಮ ವಾಹನದಲ್ಲಿಯೇ ಕರೆದುಕೊಂಡು ಸುರಕ್ಷಿತವಾಗಿ ಮನೆಗೆ ತಲುಪಿಸುತ್ತಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 8 ಗಂಟೆವರೆಗೆ ಮಹಿಳೆಯರು ಪೊಲೀಸರಿಗೆ ಕರೆ ಮಾಡಿ ಸಹಾಯ ಕೋರಬಹುದಾಗಿದೆ. ಈ ನಂಬರ್‍ಗೆ (1091 ಮತ್ತು 7837018555) ಕರೆ ಮಾಡಿ. ಪೊಲೀಸರು 24/7 ಕೆಲಸ ಮಾಡುತ್ತಿರುತ್ತಾರೆ. ನೀವು ಕರೆ ಮಾಡಿದ ಕೆಲವೇ ನಿಮಿಷಗಳಲ್ಲಿ ಕಂಟ್ರೋಲ್ ರೂಮ್, ಹತ್ತಿರದ ಪಿಸಿಆರ್ ವಾಹನ ಅಥವಾ ಎಸ್‍ಎಚ್‍ಒ ವಾಹನ ನೀವಿದ್ದಲ್ಲಿ ಬಂದು, ನಿಮ್ಮನ್ನು ಸುರಕ್ಷಿತವಾಗಿ ನೀವು ತಲುಬೇಕಾದ ಸ್ಥಳಕ್ಕೆ ತಲುಪಿಸುತ್ತದೆ. ಈ ಸೇವೆಯನ್ನು ಪೊಲೀಸರು ಉಚಿತವಾಗಿ ನೀಡುತ್ತಿದ್ದಾರೆ. ದಯವಿಟ್ಟು ಈ ಸಂದೇಶವನ್ನು ಫಾರ್ವರ್ಡ್ ಮಾಡಿ ಎಂದು ಸುಳ್ಳು ಫೋನ್ ನಂಬರಿನೊಂದಿಗೆ ಸಂದೇಶ ಹರಿಬಿಡಲಾಗಿದೆ.

    ಬಿಸಿಪಿ ಟ್ವೀಟ್‍ನಲ್ಲಿ ಏನಿದೆ?
    ಈ ಸುಳ್ಳು ಸುದ್ದಿ ಬೆಂಗಳೂರು ಸಿಟಿ ಪೊಲೀಸರ ಗಮನಕ್ಕೆ ಬಂದಿದ್ದು, ಈ ರೀತಿ ಯಾವುದೇ ಮಹಿಳಾ ಸಹಾಯವಾಣಿಯನ್ನು ನಾವು ಕಾರ್ಯರೂಪಕ್ಕೆ ತಂದಿಲ್ಲ. ಇದು ಸುಳ್ಳು ಸುದ್ದಿ. ಪೋಸ್ಟ್‌ನಲ್ಲಿ ಇರುವುದು ಪೊಲೀಸರ ನಂಬರ್ ಅಲ್ಲ, ನಕಲಿ ನಂಬರ್. ದಯವಿಟ್ಟು ಇಂತಹ ಸಂದೇಶ, ಪೋಸ್ಟ್‌ಗಳ ಬಗ್ಗೆ ಜಾಗೃತರಾಗಿರಿ.

    ಸುಳ್ಳು ಸುದ್ದಿಗಳನ್ನು ನಂಬಬೇಡಿ, ಶೇರ್ ಮಾಡಬೇಡಿ. ಈ ರೀತಿ ಸುಳ್ಳು ಸಂದೇಶ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ಸಿಟಿ ಪೊಲೀಸರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

    ಹಾಗೆಯೇ ಈ ಟ್ವೀಟ್‍ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಿರ್ಭಯಾ ನಂಬರ್ ಬಗ್ಗೆ ಕೇಳಿದಾಗ, ಅದು ಕೂಡ ನಕಲಿ ನಂಬರ್ ಎಂದು ಪೊಲೀಸರು ರೀ-ಟ್ವೀಟ್ ಮಾಡಿದ್ದಾರೆ. ಹೀಗಾಗಿ ವಾಟ್ಸಾಪ್, ಫೇಸ್‍ಬುಕ್, ಇನ್‍ಸ್ಟಾಗ್ರಾಂಗಳಲ್ಲಿ ಹರಿದಾಡುವ ನಕಲಿ ನಂಬರ್‌ಗಳನ್ನು ಶೇರ್ ಮಾಡುವ ಮುನ್ನ ಅದನ್ನು ಪರಿಶೀಲಿಸಿ. ಒಂದು ವೇಳೆ ಈ ರೀತಿ ಮಹಿಳಾ ಸಹಾಯವಾಣಿಗಳನ್ನು ಕಾರ್ಯರೂಪಕ್ಕೆ ತಂದರೆ ಆ ಬಗ್ಗೆ ಪೊಲೀಸರೇ ಅಧಿಕೃತ ಮಾಹಿತಿ ನೀಡುತ್ತಾರೆ. ಆದ್ದರಿಂದ ಈ ರೀತಿ ಸುಳ್ಳು ಸಂದೇಶ, ಸುದ್ದಿಗಳ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕಿದೆ.

  • ನಾಲ್ವರು ಉಗ್ರರಿಂದ ಐಟಿ ಕಂಪನಿ ಮೇಲೆ ದಾಳಿ – ಸುಳ್ಳು ವದಂತಿಯೆಂದ ಬೆಂಗ್ಳೂರು ಪೊಲೀಸರು

    ನಾಲ್ವರು ಉಗ್ರರಿಂದ ಐಟಿ ಕಂಪನಿ ಮೇಲೆ ದಾಳಿ – ಸುಳ್ಳು ವದಂತಿಯೆಂದ ಬೆಂಗ್ಳೂರು ಪೊಲೀಸರು

    ಬೆಂಗಳೂರು: ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟವಾದ ಬಳಿಕ ನಾಲ್ವರು ಉಗ್ರರು ಬೆಂಗಳೂರಿಗೆ ಬಂದಿದ್ದಾರೆ ಎನ್ನುವ ಸುದ್ದಿ ಸುಳ್ಳು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

    ಸಾರ್ವಜನಿಕರು ಈ ತರಹದ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ. ಈ ತರಹದ ಸುಳ್ಳು ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಬೇಡಿ. ಸುಳ್ಳು ವದಂತಿಗಳನ್ನ ನಂಬಬೇಡಿ ಮತ್ತು ಪ್ರೋತ್ಸಾಹಿಸಬೇಡಿ ಎಂದು ಬೆಂಗಳೂರು ನಗರ ಪೊಲೀಸ್ ಟ್ವೀಟ್ ಮಾಡಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಲಂಕಾದಲ್ಲಿ ಬಾಂಬ್ ಸ್ಫೋಟದಲ್ಲಿ 253 ಮಂದಿ ಬಲಿಯಾದ ಬೆನ್ನಲ್ಲೇ ದಕ್ಷಿಣ ಭಾರತದಲ್ಲಿ ಉಗ್ರ ದಾಳಿಯ ಆತಂಕ ಎದುರಾಗಿದೆ. ದಕ್ಷಿಣದ 8 ರಾಜ್ಯಗಳಿಗೆ 19 ಮಂದಿ ಉಗ್ರರು ನುಸುಳಲಿದ್ದಾರೆ ಎನ್ನುವ ಸುದ್ದಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

    ಮೆಸೆಜ್‍ನಲ್ಲಿ ಏನಿತ್ತು?
    ಬೆಂಗಳೂರಿಗೆ 4 ಮಂದಿ ಉಗ್ರರು ನುಸುಳಿದ್ದಾರೆ. ಅವರು ಇನ್ನೂ 15 ದಿನಗಳ ಒಳಗಡೆ ಭಾರಿ ಅಪಾಯಕಾರಿ ಕೆಲಸವನ್ನು ಮಾಡಲಿದ್ದಾರೆ. ರಾಜಧಾನಿಯ ವೈಟ್‍ಫೀಲ್ಡ್ ಹಾಗೂ ಬೆಳ್ಳಂದೂರು ಪ್ರದೇಶಗಳಲ್ಲಿರುವ ಐಟಿ ಕಂಪನಿಗಳ ಮೇಲೆ ದಾಳಿ ಮಾಡಲು ಸಂಚು ಮಾಡಿದ್ದಾರೆ. ಆದ್ದರಿಂದ ಈ ಪ್ರದೇಶದ ಸುತ್ತಮುತ್ತಲಿನ ನಿವಾಸಿಗಳು ಎಚ್ಚರಿಕೆಯಿಂದ ಇರಿ ಹಾಗೂ ಅನುಮಾನಸ್ಪದ ವ್ಯಕ್ತಿಗಳು ಅಥವಾ ಈ ಫೋಟೋದಲ್ಲಿ ಕಾಣುವ ವ್ಯಕ್ತಿಗಳು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ ಎಂದು ಬರೆದು, ಕೆಲ ಅಪರಿಚಿತರ ಫೋಟೋ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು.

    ಈ ಸಂದೇಶವನ್ನು ನೋಡಿದವರು ನಿಜವೆಂದು ನಂಬಿದ್ದರು. ಆದ್ರೆ ಈಗ ಸ್ವತಃ ಬೆಂಗಳೂರು ನಗರ ಪೊಲೀಸರೇ ಈ ಸುದ್ದಿ ಸುಳ್ಳು. ಇಂತಹದನ್ನು ನಂಬಬೇಡಿ ಎಂದು ಸ್ಪಷ್ಟಪಡಿಸಿದ್ದಾರೆ.