Tag: ಬೆಂಗಾವಲು

  • ಗಾಯಾಳುವನ್ನು ಬೆಂಗಾವಲು ವಾಹನದಲ್ಲಿ ಸಾಗಿಸಿ ಚಿಕಿತ್ಸೆ- ಮಾನವೀಯತೆ ಮೆರೆದ ಮಾಧುಸ್ವಾಮಿ

    ಗಾಯಾಳುವನ್ನು ಬೆಂಗಾವಲು ವಾಹನದಲ್ಲಿ ಸಾಗಿಸಿ ಚಿಕಿತ್ಸೆ- ಮಾನವೀಯತೆ ಮೆರೆದ ಮಾಧುಸ್ವಾಮಿ

    ತುಮಕೂರು: ಸಚಿವ ಮಾಧುಸ್ವಾಮಿ ಅವರು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ತನ್ನ ಬೆಂಗಾವಲು ವಾಹನದಲ್ಲಿ ಸಾಗಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.

    ಶಿರಾ ತಾಲೂಕಿನ ಅಮರಾಪುರ ರಸ್ತೆಯ ಹುಚ್ಚಗೀರನಹಳ್ಳಿ ಗೇಟ್ ಬಳಿ ಟಿವಿಎಸ್ ಮೊಪೆಡ್ ಹಾಗೂ ಬೈಕ್ ನಡುವೆ ಅಪಘಾತ ನಡೆದಿತ್ತು. ಈ ಅವಘಡದಲ್ಲಿ ಮೂವರು ಗಂಭೀರವಾಗಿ ಗಾಯಯೊಂಡಿದ್ದರು. ಈ ವೇಳೆ ಇದೇ ಮಾರ್ಗದಲ್ಲಿ ಸರ್ಕಾರಿ ಕಾರ್ಯಕ್ರಮ ನಿಮಿತ್ತ ಹೋಗುತ್ತಿದ್ದ ಸಚಿವ ಮಾಧುಸ್ವಾಮಿ ಹಾಗೂ ಶಾಸಕರು ಚಿಕ್ಕಬಾಣಗೆರೆಗೆ ಹೋಗುತ್ತಿದ್ದರು.

    ಈ ವೇಳೆ ಗಾಯಾಳುವನ್ನು ಗಮನಿಸಿದ ಸಚಿವರು, ತಕ್ಷಣ ಕಾರು ನಿಲ್ಲಿಸಿ ಗಾಯಗೊಂಡವರ ನೆರವಿಗೆ ಧಾವಿಸಿದ್ದಾರೆ. ಸ್ವತಃ ತಾವೇ 108ಗೆ ಕಾಲ್ ಮಾಡಿ ಬೇಗ ವಾಹನ ಕಳಿಸುವಂತೆ ತಾಕೀತು ಮಾಡಿದರು. ಸಚಿವರು ಕಾಲ್ ಮಾಡಿದ್ರೂ 108 ವಾಹನ ಸಮಯಕ್ಕೆ ಸರಿಯಾಗಿ ಬಂದಿರಲಿಲ್ಲ. ವಿಧಿ ಇಲ್ಲದೇ ಸಚಿವರು ಕೊನೆಗೆ ತಮ್ಮ ಬೆಂಗಾವಲು ವಾಹನದಲ್ಲಿ ಶಿರಾ ಆಸ್ಪತ್ರೆಗೆ ಗಾಯಾಳುಗಳನ್ನು ಕಳುಹಿಸಿಕೊಟ್ಟರು. ಇದನ್ನೂ ಓದಿ: ರಾಜ್ಯದ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ: ಪ್ರಧಾನಿಯಿಂದ ಪ್ರಶಸ್ತಿ ಪ್ರದಾನ

    ಸಚಿವ ಮಾಧುಸ್ವಾಮಿಗೆ ಶಿರಾ ಶಾಸಕ ರಾಜೇಶ್ ಗೌಡ, ಎಮ್ ಎಲ್ ಸಿ ಚಿದಾನಂದ ಗೌಡ ಸಾಥ್ ನಿಡಿದರು. ಜನಪ್ರತಿನಿಧಿಗಳ ಈ ಕಾರ್ಯಕ್ಕೆ ಪ್ರತ್ಯಕ್ಷದರ್ಶಿಗಳ ಹಾಗೂ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನಗೆ ಸಚಿವ ಸ್ಥಾನಕ್ಕಿಂತ ಪಕ್ಷದ ಸಂಘಟನೆ ಹೆಚ್ಚು ಖುಷಿ ನೀಡುತ್ತದೆ: ಕೆ.ಎಸ್ ಈಶ್ವರಪ್ಪ

  • ಶಾಸಕರ ಬೆಂಗಾವಲು ವಾಹನ ಡಿಕ್ಕಿ – 3 ವರ್ಷದ ಕಂದಮ್ಮ ಸ್ಥಳದಲ್ಲೇ ಸಾವು

    ಶಾಸಕರ ಬೆಂಗಾವಲು ವಾಹನ ಡಿಕ್ಕಿ – 3 ವರ್ಷದ ಕಂದಮ್ಮ ಸ್ಥಳದಲ್ಲೇ ಸಾವು

    ಹೈದರಾಬಾದ್: ಮುಲುಗು ಕ್ಷೇತ್ರದ ಎಂಎಲ್‍ಎ ದನ್ಸಾರಿ ಅನುಸುಯಾ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ 3 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

    ವಾರಂಗಲ್ ಜಿಲ್ಲೆಯ ಜೆಡಿವಾಲು ಪ್ರದೇಶದಲ್ಲಿ ಈ ಘಟನೆ ನಡೆದಿದ್ದು. ತಂದೆ ಅರುಣ್ ಮತ್ತು ತಾಯಿ ವಿಜಯ ಜೊತೆ ಬೈಕಿನಲ್ಲಿ ಅಂಗನವಾಡಿಗೆ ಹೋಗುತ್ತಿದ್ದ ಶ್ರಾವಂತಿ (3) ಮೃತಪಟ್ಟ ಕಂದಮ್ಮ. ಅಪಘಾತದಲ್ಲಿ ಬೈಕ್ ಸಂಪೂರ್ಣ ನಜ್ಜುಗಿದ್ದು ಮಗುವಿನ ಪೋಷಕರು ಗಾಯಗೊಂಡಿದ್ದಾರೆ.

    ಮುಲುಗು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗತಿಕೊಯಗುಡೆನ್ ಊರಿಗೆ ಸೇರಿದ ಈ ದಂಪತಿ ತಮ್ಮ ಮಗಳು ಶ್ರಾವಂತಿಯನ್ನು ಅಂಗನವಾಡಿಗೆ ಬಿಟ್ಟು ಬರಲು ಬೈಕಿನಲ್ಲಿ ಬರುತ್ತಿದ್ದರು. ಇದೇ ವೇಳೆಗೆ ಅ ದಾರಿಯಲ್ಲಿ ಎಂಎಲ್‍ಎ ದನ್ಸಾರಿ ಅನುಸುಯಾ ಅವರು ಹೋಗುತ್ತಿದ್ದರು. ಎದುರಿಗೆ ಬಂದ ಬೈಕಿಗೆ ಎಂಎಲ್‍ಎ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಶ್ರಾವಂತಿ ತಲೆಗೆ ಬಲವಾದ ಪೆಟ್ಟಾದ ಕಾರಣ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

    ಈ ಘಟನೆಯ ಬಗ್ಗೆ ಸಂತಾಪ ಸೂಚಿಸಿರುವ ದನ್ಸಾರಿ ಅನುಸುಯಾ ಅವರು, ಕುಟುಂಬಕ್ಕೆ ಅರ್ಥಿಕವಾಗಿ ಇಲ್ಲಾ ರೀತಿಯಲ್ಲೂ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ನನಗೆ ಈ ಅಪಘಾತದಲ್ಲಿ 3 ವರ್ಷದ ಮಗು ಸಾವನ್ನಪ್ಪಿರುವುದು ತುಂಬ ನೋವಾಗಿದೆ. ಈ ಮಗುವಿನ ಕುಟುಂಬ ಕಳೆದ ಚುನಾವಣೆಯಲ್ಲಿ ನನ್ನ ಗೆಲುವಿಗೆ ಶ್ರಮಿಸಿತ್ತು. ನಮ್ಮ ಕಡೆಯಿಂದ ತಪ್ಪಾಗಿದೆ ನಾನು ಈ ದುಃಖದ ಸಮಯದಲ್ಲಿ ಈ ಕುಟುಂಬದ ಜೊತೆಗೆ ಇರುತ್ತೇನೆ ಎಂದು ಹೇಳಿದ್ದಾರೆ.

  • ಚಾಲಕನ ನಿಯಂತ್ರಣ ತಪ್ಪಿ ಸಿಎಂ ಬೆಂಗಾವಲು ವಾಹನ ಪಲ್ಟಿ

    ಚಾಲಕನ ನಿಯಂತ್ರಣ ತಪ್ಪಿ ಸಿಎಂ ಬೆಂಗಾವಲು ವಾಹನ ಪಲ್ಟಿ

    ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ.

    ಮೂಡಿಗೆರೆ ತಾಲೂಕಿನ ಶಂಕರ್ ಫಾಲ್ಸ್ ಬಳಿ ಈ ಘಟನೆ ನಡೆದಿದ್ದು. ಇಬ್ಬರು ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಕೊಪ್ಪ ತಾಲೂಕಿನ ಕುಡ್ನಳ್ಳಿಯಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದ ಸಿ.ಎಂ ಕುಮಾರಸ್ವಾಮಿ ಅವರ ಕುಟುಂಬದವರು ಪೂಜೆ ಮುಗಿಸಿ ಹಾಸನಕ್ಕೆ ವಾಪಸ್ ಹೋಗುವ ವೇಳೆ ಈ ಅಪಘಾತವಾಗಿದೆ.

  • ಪೇಜಾವರ ಶ್ರೀಗಳ ಬೆಂಗಾವಲು ವಾಹನ, ಕಾರಿನ ನಡುವೆ ಡಿಕ್ಕಿ- ದಂಪತಿ ದುರ್ಮರಣ

    ಪೇಜಾವರ ಶ್ರೀಗಳ ಬೆಂಗಾವಲು ವಾಹನ, ಕಾರಿನ ನಡುವೆ ಡಿಕ್ಕಿ- ದಂಪತಿ ದುರ್ಮರಣ

    ಚಿಕ್ಕಬಳ್ಳಾಪುರ: ಉಡುಪಿ ಪೇಜಾವರ ಶ್ರೀಗಳಿಗೆ ಭದ್ರತೆ ನೀಡುತ್ತಿದ್ದ ಬೆಂಗಾವಲು ವಾಹನ ಮತ್ತು ಇಂಡಿಗೋ ಕಾರಿನ ನಡುವೆ ಡಿಕ್ಕಿ ಸಂಭವಿಸಿ ದಂಪತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಪನಹಳ್ಳಿ ಗೇಟ್ ಬಳಿ ನಡೆದಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ರಾಮಕೃಷ್ಣಯ್ಯ(75) ಸರ್ವಲೋಚನಾ(70) ಮೃತ ದಂಪತಿ. ನಾಮಕರಣ ಕಾರ್ಯಕ್ರಮಕ್ಕೆ ಜ್ಯುವೆಲ್ಲರಿ ಶಾಪ್ ಮಾಲೀಕರಾದ ರಾಮಕೃಷ್ಣಯ್ಯ ಕುಟುಂಬ ಸಮೇತ ಚಿಂತಾಮಣಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

    ಅಪಘಾತದಲ್ಲಿ ರಾಮಕೃಷ್ಣಯ್ಯ ಸೊಸೆ 55 ವರ್ಷದ ನಳಿನಿ ಗಂಭೀರವಾಗಿ ಗಾಯಗೊಂಡಿದ್ದು, ಕಾರು ಚಾಲಕ ನಾಗೇಶ್ ಕಾಲುಗಳಿಗೆ ಗಂಭೀರವಾದ ಗಾಯಗಳಾಗಿವೆ. ಮತ್ತೊಂದೆಡೆ ಡಿಕ್ಕಿಯಾದ ಹೈವೇ ಪ್ಯಾಟ್ರೋಲಿಂಗ್ ಪೊಲೀಸ್ ವಾಹನದ ಚಾಲಕ ಸೇರಿದಂತೆ ಎಎಸ್ ಶಂಭಯ್ಯ ಕೂಡ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

    ಪೇಜಾವರ ಶ್ರೀಗಳು ಚಿಂತಾಮಣಿ ತಾಲೂಕಿನ ಕೋನಕುಂಟ್ಲು ಗ್ರಾಮದಲ್ಲಿ ನಡೆಯುತ್ತಿರುವ ಕಾನ್ವ ಸಮ್ಮೇಳನದಲ್ಲಿ ಭಾಗವಹಿಸಿಲು ಬೆಂಗಳೂರಿನಿಂದ ಚಿಂತಾಮಣಿ ಕಡೆಗೆ ಆಗಮಿಸುತ್ತಿದ್ದರು. ದಂಪತಿಯಿಂದ ಕಾರು ಬಲ ಭಾಗದಲ್ಲಿ ಬಂದಿದ್ದ ಕಾರಣ ಈ ಅಪಘಾತ ಸಂಭವಿಸಿದೆ.

    ಘಟನೆ ಬಳಿಕ ಪ್ರತಿಕ್ರಿಯಿಸಿದ ಪೇಜಾವರ ಶ್ರೀಗಳು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಪ್ರಾಣಾಪಾಯದಲ್ಲಿದ್ದಾರೆ. ನಮ್ಮ ಕಾರಿಗೆ ಏನೂ ಆಗಿಲ್ಲ. ಪೊಲೀಸ್ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆ ಕಾರಿನಲ್ಲಿದ್ದ ಇಬ್ಬರು ಮೃತರಾಗಿದ್ದಾರೆ. ಘಟನೆ ನಡೆದ ಕೂಡಲೇ ಪೊಲೀಸರಿಗೆ ವಿಚಾರ ತಿಳಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸುವ ಏರ್ಪಾಡು ಮಾಡಿದ್ದೇವೆ. ಒಟ್ಟಿನಲ್ಲಿ ಇದೊಂದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

    ಈ ಸಂಬಂಧ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews