ಮಡಿಕೇರಿ/ಚಿಕ್ಕಮಗಳೂರು: ಸ್ವಿಮ್ಮಿಂಗ್ ಪೂಲ್‌ಗೆ (Swimming Pool) ಧುಮುಕಿದ ವೇಳೆ ಬೆನ್ನುಮೂಳೆಗೆ (Spinal Cord) ಘಾಸಿಯುಂಟಾಗಿ, ಚಿಕಿತ್ಸೆ ಫಲಿಸದೇ ಮೊಬೈಲ್ ಶಾಪ್ ಮಾಲೀಕ (Mobile Shop Owner) ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಕುಶಾಲನಗರದ ಮೊಬೈಲ್ ಗ್ಯಾಲರಿ ಮಾಲೀಕ ನಿಶಾಂತ್ (35) ಮೃತ ದುರ್ದೈವಿ. ನಿಶಾಂತ್ ಕೊಡಗಿನ ಕುಶಾಲನಗರದಿಂದ ಚಿಕ್ಕಮಗಳೂರಿಗೆ 10 ಮಂದಿ ಸ್ನೇಹಿತರೊಂದಿಗೆ ಶನಿವಾರ ಪ್ರವಾಸಕ್ಕೆ ತೆರಳಿದ್ದರು. ಭಾನುವಾರ ಇಲ್ಲಿನ ಖಾಸಗಿ ರೆಸಾರ್ಟ್‌ನ (Resort) ಸ್ವಿಮ್ಮಿಂಗ್ ಪೂಲ್‌ಗೆ ಧುಮುಕುವ ವೇಳೆ ಬೆನ್ನುಮೂಳೆಗೆ ಘಾಸಿಯಾಗಿದೆ. ಇದನ್ನೂ ಓದಿ: Kolar| ವಾಯು ವಿಹಾರಕ್ಕೆ ತೆರಳಿದ್ದ ನಿವೃತ್ತ ಉಪನ್ಯಾಸಕರಿಗೆ ಬೈಕ್ ಡಿಕ್ಕಿ – ಚಿಕಿತ್ಸೆ ಫಲಿಸದೇ ಸಾವು
ಬೆಂಗಳೂರು: ಬೆನ್ನುಮೂಳೆಯ ಡಿಸ್ಕ್‌ಲೊಕೇಟ್ (ಬೆನ್ನು ಮೂಳೆ ಪಲ್ಲಟಗೊಳ್ಳುವುದು) ಆಗಿದ್ದ ಪರಿಣಾಮ, ಪಾರ್ಶ್ವವಾಯುಗೆ ಒಳಗಾಗಬೇಕಿದ್ದ 111 ಕೆ.ಜಿ. ತೂಕದ 15 ವರ್ಷದ ಬಾಲಕನಿಗೆ, ʻಮೈಕ್ರೋ-ಲುಂಬಾರ್ ಡಿಸ್ಸೆಕ್ಟಮಿʼ (Micro Lumbar Discectomy) ಎಂಬ ಕಾಲು ಉಳಿಸುವ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯನ್ನು ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ಮಾಡಿದೆ.
ಈ ಕುರಿತು ಮಾತನಾಡಿದ ವೈದ್ಯರು, 111 ಕೆ.ಜಿ. ತೂಕವಿದ್ದ 15 ವರ್ಷದ ಸೈಯದ್ ಸಲಾಹುದೀನ್ ಕ್ವಾದ್ರಿ ಎಂಬ ಬಾಲಕನಿಗೆ ಕಾರಣಾಂತರಗಳಿಂದ ಬೆನ್ನಿನ ಮೂಳೆಯ ಡಿಸ್‌ಲೊಕೇಟ್ ನಿಂದ (Back Bone Dislocated) ಅಸಾಧ್ಯ ನೋವು ಕಾಣಿಸಿಕೊಂಡಿತ್ತು. ಈ ನೋವು ಕ್ರಮೇಣ ಬೆನ್ನಿನಿಂದ ಕಣಕಾಲುವರೆಗೂ ಹಬ್ಬಿತ್ತು. 4 ತಿಂಗಳ ಕಾಲ ಈ ನೋವನ್ನು ಹಾಗೆಯೇ ನಿರ್ಲಕ್ಷಿಸಿದ್ದರು. ಇದರಿಂದಾಗಿ ಬಾಲಕ ನಡೆಯಲು ಹಾಗೂ ಕೂರಲು ಸಹ ಆಗದಷ್ಟು ಅಗಾಧ ನೋವಿಗೆ ಒಳಗಾಗಿದ್ದ. ಇದನ್ನೂ ಓದಿ: ವಿವಾದಿತ ಭೋಜಶಾಲಾ ಮಸೀದಿಯಲ್ಲಿ ಮಂದಿರದ ಕುರುಹು – ಪುರಾತತ್ವ ಇಲಾಖೆಯ 2,000 ಪುಟಗಳ ವರದಿಯಲ್ಲಿ ಏನಿದೆ?
ಫೋರ್ಟಿಸ್ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ MRI ಸ್ಕ್ಯಾನ್ ಮಾಡುವ ಮೂಲಕ ಅವರ ಬೆನ್ನುಮೂಳೆಯ L3-L4 ಮಟ್ಟದಲ್ಲಿ ತೀವ್ರವಾದ ಪೋಸ್ಟರೊಸೆಂಟ್ರಲ್ ಡಿಸ್ಕ್ ಎಕ್ಸ್‌ಟ್ರಶನ್ ಆಗಿರುವುದು ಬಹಿರಂಗವಾಯಿತು. ಹೀಗಾಗಿ ಬಾಲಕನ ಕಣಕಾಲಿನವರೆಗೂ ಡಿಸ್‌ಲೊಕೇಟ್‌ನ ಪರಿಣಾಮ ಸಂಭವಿಸಿತ್ತು. ಬಾಲಕ ಈ ನೋವನ್ನು ಹೀಗೆಯೇ ನಿರ್ಲಕ್ಷ್ಯ ಮಾಡಿದ್ದರೇ ಮುಂದೊಂದುದಿನ ಆ ಕಾಲು ಪಾರ್ಶ್ವವಾಯುವಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿಯೇ ಇತ್ತು. ಇದನ್ನೂ ಓದಿ: Jammu Terrorist Attack: ಜಮ್ಮುವಿನಲ್ಲಿ ದಿಢೀರ್ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವುದು ಏಕೆ?
ಬಾಲಕನ ಆರೋಗ್ಯದ ಗಂಭೀರತೆ ಪರಿಗಣಿಸಿ ಆತನಿಗೆ ಮೈಕ್ರೊ-ಲುಂಬರ್ ಡಿಸೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಶಿಫಾರಸು ಮಾಡಿದೆವು. ಇದು ನರಗಳ ಮೇಲಿನ ಒತ್ತಡ ನಿವಾರಿಸಲು ಡಿಸ್‌ಲೊಕೇಟ್ ಆಗಿರುವ ಡಿಸ್ಕ್ ಅನ್ನು ತೆಗೆದುಹಾಕುವ ಶಸ್ತ್ರಚಿಕಿತ್ಸಾ ವಿಧಾನವಾಗಿದೆ. ಬಾಲಕನ ತೂಕ ಅಧಿಕವಾಗಿದ್ದರಿಂದ ಈ ಶಸ್ತ್ರಚಿಕಿತ್ಸೆ ಸಾಕಷ್ಟು ಸವಾಲಾಗಿತ್ತು, ಆದರೂ ನಮ್ಮ ತಂಡ ಕಾರ್ಯಕ್ರಮತೆಯಿಂದ ಸುರಕ್ಷತೆಯಾಗಿ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಈ ಶಸ್ತ್ರಚಿಕಿತ್ಸೆಯ ನಂತರ ಬಾಲಕನ ನೋವು ಸಂಪೂರ್ಣ ನಿವಾರಣೆಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಹರ್ಷವ್ಯಕ್ತಪಡಿಸಿದ್ದಾರೆ.
ಎರಡು ವರ್ಷಗಳ ಹಿಂದೆ ನಡೆದ ಭೀಕರ ಅಪಘಾತದಲ್ಲಿ (accident) ನಟಿ ರಿಷಿಕಾ ಸಿಂಗ್ (Rishika Singh) ಅವರ ಬೆನ್ನುಮೂಳೆಗೆ (spine) ಬಲವಾಗಿ ಪೆಟ್ಟಾಗಿತ್ತು. ಮಾವಳ್ಳಿಪುರ ಸಮೀಪದಲ್ಲಿ ನಡೆದ ತೀವ್ರ ಅಪಘಾತದಲ್ಲಿ ಅವರ ಕಾರು ನುಜ್ಜುಗುಜ್ಜಾಗಿತ್ತು. ನಿಲಗಿರಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎರಡು ಕಾಲುಗಳ ಸ್ವಾಧೀನವನ್ನೂ ಅವರು ಕಳೆದುಕೊಂಡಿದ್ದರು. ಆನಂತರ ಅವರ ಆರೋಗ್ಯದ ಸ್ಥಿತಿಯ ಬಗ್ಗೆ ಎಲ್ಲವೂ ವರದಿ ಆಗಿರಲಿಲ್ಲ. ಇದೀಗ ಸ್ವತಃ ನಟಿಯೇ ತಮ್ಮ ಆರೋಗ್ಯದ ಬಗ್ಗೆ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.
ಬೆನ್ನುಮೂಳೆಗೆ ಬಲವಾಗಿಯೇ ಪೆಟ್ಟುಬಿದ್ದ ಪರಿಣಾಮ ಅವರು ಹಾಸಿಗೆಯಲ್ಲೇ ಹಲವು ತಿಂಗಳ ಕಾಲ ಕಳೆಯಬೇಕಾಗಿತ್ತು. ವೈದ್ಯರ ಸತತ ಪ್ರಯತ್ನ ಮತ್ತು ರಿಷಿಕಾ ಅವರ ಧೈರ್ಯದ ಕಾರಣದಿಂದಾಗಿ ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವ್ಹೀಲ್ ಚೇರ್ ಸಹಾಯದಿಂದ ಓಡಾಡುತ್ತಿದ್ದ ಅವರು, ಇದೀಗ ಎರಡು ಕೋಲುಗಳ ಆಶ್ರಯ ಪಡೆದುಕೊಂಡು ನಡೆದಾಡುವಂತಹ ಚೇತರಿಕೆಯನ್ನು ಕಂಡಿದ್ದಾರೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಚಂದ್ರಮುಖಿ – 2 ಡ್ಯಾನ್ಸ್ ಪ್ರಾಕ್ಟಿಸ್ ಶುರು ಮಾಡಿದ ಕಂಗನಾ ರಣಾವತ್
ಒಂದೂವರೆ ವರ್ಷಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದೆ. ದೇವರಿಂದ ನಾನು ಸರಿ ಹೋಗಿದ್ದೇನೆ. ವೈದ್ಯರನ್ನು ನಾರಾಯಣನಿಗೆ ಹೋಲಿಸುತ್ತಾರೆ. ಅವರಿಂದಾಗಿ ನನ್ನ ಬೆನ್ನುಮೂಳೆ ಸರಿ ಹೋಗಿದೆ. ನನ್ನನ್ನು ಐರನ್ ಮಹಿಳೆಯನ್ನಾಗಿಸಿದ ಡಾಕ್ಟರ್ ಗೆ ಧನ್ಯವಾದಗಳು. ನನ್ನ ಕುಟುಂಬ ನನಗೆ ಶಕ್ತಿಯಾಗಿ ಬೆನ್ನು ಹಿಂದೆ ನಿಂತಿತ್ತು. ನಂಬಿಕೆಯೇ ನನ್ನನ್ನು ಸುಧಾರಿಸಿದೆ. ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.
ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ರಿಷಿಕಾ. ಕಳ್ಳ ಮಳ್ಳ ಸುಳ್ಳ, ಕಂಠೀರವ, ಕಠಾರಿ ವೀರ ಸುರಸುಂದರಾಂಗಿ, ಕಿರೀಟ, ದೇವಯಾನಿ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಬಿಗ್ ಬಾಸ್ ಶೋನಲ್ಲೂ ಅವರು ಸ್ಪರ್ಧಿಯಾಗಿ ಭಾಗಿಯಾಗಿದ್ದರು. ವಿವಾದಗಳ ಕಾರಣದಿಂದಾಗಿಯೂ ಸುದ್ದಿಯಾಗಿದ್ದರು.
Live Tv
[brid partner=56869869 player=32851 video=960834 autoplay=true]