Tag: ಬೆನ್‌ ಡಕೆಟ್‌

  • ಡಕೆಟ್‌, ರೂಟ್‌ ಶತಕದ ಜೊತೆಯಾಟ – ಗರಿಷ್ಠ ರನ್‌ ದಾಖಲೆ, ಆಸೀಸ್‌ ಗೆಲುವಿಗೆ 352 ರನ್‌ ಗುರಿ

    ಡಕೆಟ್‌, ರೂಟ್‌ ಶತಕದ ಜೊತೆಯಾಟ – ಗರಿಷ್ಠ ರನ್‌ ದಾಖಲೆ, ಆಸೀಸ್‌ ಗೆಲುವಿಗೆ 352 ರನ್‌ ಗುರಿ

    ಲಾಹೋರ್: ಪಾಕಿಸ್ತಾನದ ಗಡಾಫಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ 4ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿರುವ ಇಂಗ್ಲೆಂಡ್‌ ತಂಡವು 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 351 ರನ್‌ ಗಳಿಸಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡದ ಗೆಲುವಿಗೆ 352 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡಿದೆ. ಅಲ್ಲದೇ ಚಾಂಪಿಯನ್ಸ್‌ ಟ್ರೋಫಿ ಇತಿಹಾಸದಲ್ಲಿ ತಂಡವೊಂದು ಗಳಿಸಿದ ಅತಿಹೆಚ್ಚು ರನ್‌ ಕೂಡ ಇದಾಗಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ 5.2 ಓವರ್‌ಗಳಲ್ಲೇ 43 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡಿತ್ತು. ಪ್ಯಾಟ್‌ ಕಮ್ಮಿನ್ಸ್‌, ಮಿಚೆಲ್‌ ಸ್ಟಾರ್ಕ್‌, ಜೋಶ್‌ ಹ್ಯಾಜಲ್ವುಡ್‌ ಅವರಂತಹ ದೈತ್ಯ ಬೌಲರ್‌ಗಳಿಲ್ಲದೇ ಅನೇಕ ಹೊಸಬರೊಂದಿಗೆ ಕಣಕ್ಕಿಳಿದ ಆಸೀಸ್‌ ಸ್ಪರ್ಧಾತ್ಮಕ ಪೈಪೋಟಿ ನೀಡುವ ನಿರೀಕ್ಷೆ ಹೆಚ್ಚಿಸಿತ್ತು. ಆದ್ರೆ 3ನೇ ವಿಕೆಟ್‌ಗೆ ಜೊತೆಯಾದ ಬೆನ್‌ ಡಕೆಟ್‌ ಹಾಗೂ ಜೋ ರೂಟ್‌ ಶತಕದ ಜೊಯಾಟ ನೀಡುವ ಮೂಲಕ ಇಂಗ್ಲೆಂಡ್‌ಗೆ ಜೀವ ತುಂಬಿದರು.

    ಡಕೆಟ್, ರೂಟ್‌ ಶತಕದ ಜೊತೆಯಾಟ:
    ತಾಳ್ಮೆಯ ಬ್ಯಾಟಿಂಗ್‌ ಪ್ರದರ್ಶಿಸಿದ ಈ ಜೋಡಿ 155 ಎಸೆತಗಳಲ್ಲಿ 158 ರನ್‌ಗಳ ಜೊತೆಯಾಟ ನೀಡಿತು. ರೂಟ್‌ 78 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 68 ರನ್‌ ಗಳಿಸಿ ಔಟಾದರು. ಆ ಬಳಿಕವೂ ಘಾತುಕ ದಾಳಿ ನಡೆಸಿದ ಬೆನ್‌ ಡಕೆಟ್‌ ಆಸೀಸ್‌ ಬೌಲರ್‌ಗಳನ್ನು ಚೆನ್ನಾಗಿ ಬೆಂಡೆತ್ತಿದರು. ಕೊನೆಯವರೆಗೂ ಹೋರಾಡಿದ ಡಕೆಟ್‌ 143 ಎಸೆತಗಳಲ್ಲಿ 165 ರನ್‌ (17 ಬೌಂಡರಿ, 3 ಸಿಕ್ಸರ್) ಗಳಿಸಿ ಔಟಾದರು. ಇದರೊಂದಿಗೆ ನಾಯಕ ಜೋಸ್‌ ಬಟ್ಲರ್‌ 23 ರನ್‌, ಜೋಫ್ರಾ ಆರ್ಚರ್‌ 21 ರನ್‌, ಲಿಯಾಮ್‌ ಲಿವಿಂಗ್‌ಸ್ಟನ್‌14 ರನ್‌, ಜೇಮಿ ಸ್ಮಿತ್‌ 15 ರನ್‌, ಫಿಲ್‌ ಸಾಲ್ಟ್‌ 10 ರನ್‌ಗಳ ಕೊಡುಗೆ ನೀಡಿದರು.

    ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅತಿಹೆಚ್ಚು ರನ್‌ಗಳಿಸಿದ ಟೀಮ್‌ಗಳು
    * 351/8 – ಇಂಗ್ಲೆಂಡ್ – ಲಾಹೋರ್ – 2025
    * 347/4 – ನ್ಯೂಜಿಲೆಂಡ್ – ದಿ ಓವಲ್ – 2004
    * 338/4 – ಪಾಕಿಸ್ತಾನ – ಓವಲ್ – 2017
    * 331/7 – ಭಾರತ – ಕಾರ್ಡಿಫ್ – 2013
    * 323/8 – ಇಂಗ್ಲೆಂಡ್ – ಸೆಂಚುರಿಯನ್ – 2009
    * 322/3 – ಶ್ರೀಲಂಕಾ – ದಿ ಓವಲ್ – 2017

    ಇನ್ನೂ ಆಸ್ಟ್ರೇಲಿಯಾ ಪರ ಬೆನ್ ದ್ವಾರ್ಶುಯಿಸ್ 3 ವಿಕೆಟ್‌ ಕಿತ್ತರೆ, ಮಾರ್ನಸ್‌ ಲಾಬುಶೇನ್‌, ಆಡಂ ಝಂಪಾ ತಲಾ 2 ವಿಕೆಟ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ 1 ವಿಕೆಟ್‌ ಪಡೆದರು.

  • ಚಾಂಪಿಯನ್ಸ್‌ ಟ್ರೋಫಿಯಲ್ಲಿ ಇತಿಹಾಸ ನಿರ್ಮಿಸಿದ ಬೆನ್‌ ಡಕೆಟ್‌ – ಸಚಿನ್‌, ಗಂಗೂಲಿ ದಾಖಲೆಗಳು ನುಚ್ಚುನೂರು

    ಚಾಂಪಿಯನ್ಸ್‌ ಟ್ರೋಫಿಯಲ್ಲಿ ಇತಿಹಾಸ ನಿರ್ಮಿಸಿದ ಬೆನ್‌ ಡಕೆಟ್‌ – ಸಚಿನ್‌, ಗಂಗೂಲಿ ದಾಖಲೆಗಳು ನುಚ್ಚುನೂರು

    ಲಾಹೋರ್‌: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿಯ (ICC Champions Trophy) ಪ್ರತಿ ಪಂದ್ಯದಲ್ಲೂ ಒಂದಿಲ್ಲೊಂದು ದಾಖಲೆಗಳು ಆಗುತ್ತಲೇ ಇವೆ. ಇಂದು (ಫೆ.22) ಲಾಹೋರ್‌ನ ಗಡಾಫಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿಯ 4ನೇ ಪಂದ್ಯದಲ್ಲಿ ಇಂಗ್ಲೆಂಡ್‌ ಬ್ಯಾಟರ್‌ ಬೆನ್‌ ಡಕೆಟ್‌ (Ben Duckett) ಇತಿಹಾಸ ನಿರ್ಮಿಸಿದ್ದಾರೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ (England) ಪರ ಆರಂಭಿಕನಾಗಿ ಕಣಕ್ಕಿಳಿದ ಡಕೆಟ್‌, ಚಾಂಪಿಯನ್ಸ್‌ ಟ್ರೋಫಿ ಇತಿಹಾಸದಲ್ಲೇ ಅತಿಹೆಚ್ಚು ರನ್‌ ಗಳಿಸಿದ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 146 ರನ್‌ (129 ಎಸೆತ, 3 ಸಿಕ್ಸರ್‌, 14 ಬೌಂಡರಿ) ಗಳಿಸುತ್ತಿದ್ದಂತೆ ಟ್ರೋಫಿ ಇತಿಹಾಸದಲ್ಲೇ ಅತಿಹೆಚ್ಚು ರನ್‌ ಗಳಿಸಿದ ಸಾಧನೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌, ದಾದಾ ಸೌರವ್‌ ಗಂಗೂಲಿ ಅವರ ದಾಖಲೆಗಳನ್ನು ಪುಡಿ ಪುಡಿ ಮಾಡಿದ್ದಾರೆ.

    ನ್ಯೂಜಿಲೆಂಡ್‌ ಮಾಜಿ ಕ್ರಿಕೆಟರ್‌ ನಾಥನ್ ಆಸ್ಟಲ್ 2004ರಲ್ಲಿ ಯುಎಸ್‌ಎ ವಿರುದ್ಧ, ಜಿಂಬಾಬ್ವೆ ಮಾಜಿ ಆಟಗಾರ ಆಂಡಿ ಫ್ಲವರ್‌ ತಲಾ 145 ರನ್‌ ಗಳಿಸಿ ಮೊದಲ ಎರಡು ಸ್ಥಾನಗಳಲ್ಲಿದ್ದರು. ಆ ಬಳಿಕ ಟೀಂ ಇಂಡಿಯಾ ಸ್ಟಾರ್ಸ್‌ ಸೌರವ್‌ ಗಂಗೂಲಿ, ಸಚಿನ್‌ ತೆಂಡೂಲ್ಕರ್‌, ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ ತಲಾ 141 ರನ್‌ ಗಳಿಸಿ ಕ್ರಮವಾಗಿ 3, 4, 5ನೇ ಸ್ಥಾನದಲ್ಲಿದ್ದರು. ಇದೀಗ ಬೆನ್‌ ಡಕೆಟ್‌ ಇವರೆಲ್ಲರ ದಾಖಲೆಗಳನ್ನ ಉಡೀಸ್‌ ಮಾಡಿದ್ದಾರೆ.

    ಕೊನೆಯವರೆಗೂ ಹೋರಾಡಿದ ಡಕೆಟ್‌‌ 115.38 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿ ಬರೋಬ್ಬರಿ 165 ರನ್‌ (143 ಎಸೆತ, 17 ಬೌಂಡರಿ, 3 ಸಿಕ್ಸರ್) ಗಳಿಸಿದ್ದಾರೆ. ಇದರೊಂದಿಗೆ ಇಂಗ್ಲೆಂಡ್‌ ಯಶಸ್ವಿಯಾಗಿ 300 ರನ್‌ಗಳ ಗಡಿ ದಾಟಿದೆ.

    ಅತಿಹೆಚ್ಚು ರನ್‌ ಗಳಿಸಿದ ಟಾಪ್‌-5 ಸ್ಟಾರ್ಸ್‌
    ಬೆನ್‌ ಡಕೆಟ್‌ – ಇಂಗ್ಲೆಂಡ್‌ – 165 ರನ್‌ (143 ಎಸೆತ) – 2025
    ನಾಥನ್ ಆಸ್ಟಲ್ – ನ್ಯೂಜಿಲೆಂಡ್‌ – 145 ರನ್‌ (151 ಎಸೆತ) – 2004
    ಆಂಡಿ ಫ್ಲವರ್‌ – ಜಿಂಬಾಬ್ವೆ – 145 ರನ್‌ (164 ಎಸೆತ) – 2002
    ಸೌರವ್‌ ಗಂಗೂಲಿ – ಭಾರತ – 141 ರನ್‌ (142 ಎಸೆತ) – 2000
    ಸಚಿನ್‌ ತೆಂಡೂಲ್ಕರ್‌- ಭಾರತ – 141 ರನ್‌ (128 ಎಸೆತ) – 1998

  • 112 ರನ್‌ಗಳಿಗೆ 8 ವಿಕೆಟ್‌ ಉಡೀಸ್‌; ಸಿರಾಜ್‌ ಮಿಂಚಿನ ದಾಳಿಗೆ ಆಂಗ್ಲ ಪಡೆ ಕಂಗಾಲು, ಭಾರತಕ್ಕೆ ಮುನ್ನಡೆ

    112 ರನ್‌ಗಳಿಗೆ 8 ವಿಕೆಟ್‌ ಉಡೀಸ್‌; ಸಿರಾಜ್‌ ಮಿಂಚಿನ ದಾಳಿಗೆ ಆಂಗ್ಲ ಪಡೆ ಕಂಗಾಲು, ಭಾರತಕ್ಕೆ ಮುನ್ನಡೆ

    ರಾಜ್‌ಕೋಟ್: ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 319 ರನ್‌ಗಳಿಗೆ ಇಂಗ್ಲೆಂಡ್‌ ಆಲೌಟ್‌ ಆಗಿದೆ.

    238 ರನ್ ಹಿನ್ನಡೆಯೊಂದಿಗೆ ಶನಿವಾರ (ಇಂದು) ಬೆನ್ ಡಕೆಟ್ ಮತ್ತು ಜೋ ರೂಟ್ ಜೋಡಿ ಕ್ರೀಸ್ ಆರಂಭಿಸಿದ್ದರು. 2ನೇ ದಿನ ಬಿರುಸಿನ ಶತಕ ಬಾರಿಸಿದ್ದ ಡಕೆಟ್‌ 153 ರನ್‌ (151 ಎಸೆತ, 23 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟಾದರು. ಇದಕ್ಕೂ ಮುನ್ನವೇ ಜೋ ರೂಟ್‌ ಕೇವಲ 18 ರನ್‌ಗಳಿಗೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದ್ದರು. ಬಳಿಕ ಬೆನ್‌ಸ್ಟೋಕ್ಸ್‌ 41 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಟೀಂ ಇಂಡಿಯಾ ಬೌಲರ್‌ಗಳ ದಾಳಿ ಎದುರಿಸುವಲ್ಲಿ ವಿಫಲರಾದರು. ಪರಿಣಾಮ ಇಂಗ್ಲೆಂಡ್‌ 319 ರನ್‌ಗಳಿಗೆ ಆಲೌಟ್‌ ಆಯಿತು.

    ಶುಕ್ರವಾರ 5 ವಿಕೆಟ್‌ಗೆ 326 ರನ್ ಗಳಿಸಿದ್ದಲ್ಲಿಂದ 2ನೇ ದಿನದಾಟ ಆರಂಭಿಸಿದ ಭಾರತ 130.5 ಓವರ್‌ಗೆ 445 ರನ್ ಗಳಿಸಿ ಆಲೌಟ್ ಆಯಿತು. ಪದಾರ್ಪಣೆ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನಾಡಿದ ಧ್ರುವ್ ಜುರೆಲ್ 46 ರನ್ ಗಳಿಸುವ ಮೂಲಕ ಗಮನ ಸೆಳೆದರು. ಇದರೊಂದಿಗೆ ಆರ್. ಅಶ್ವಿನ್ 37 ರನ್ ಮತ್ತು ಜಸ್ಪ್ರೀತ್ ಬುಮ್ರಾ 26 ರನ್‌ಗಳ ಕೊಡುಗೆ ನೀಡಿದರು. ಇದರೊಂದಿಗೆ ಭಾರತ 445 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ನಲ್ಲಿ 500 ವಿಕೆಟ್‌ – ಇತಿಹಾಸ ಬರೆದ ಸ್ಪಿನ್‌ ಮಾಂತ್ರಿಕ ಅಶ್ವಿನ್‌

    2ನೇ ದಿನದಲ್ಲಿ ಮೊದಲ ಇನ್ನಿಂಗ್ಸ್‌ ಆರಂಭಿಸಿದ್ದ ಇಂಗ್ಲೆಂಡ್‌ ತಂಡದ ಪರ ಆರಂಭಿಕ ಆಟಗಾರ ಬೆನ್ ಡಕೆಟ್ ಬಿರುಸಿನ ಶತಕ ನೆರವಿನಿಂದ ಭಾರತಕ್ಕೆ ತಿರುಗೇಟು ನೀಡುವ ಸೂಚನೆ ನೀಡಿತ್ತು. 2ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ಓವರ್‌ಗಳಲ್ಲಿ 35 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತ್ತು. ಆರಂಭಿಕ ಆಟಗಾರ ಝಾಕ್ ಕ್ರಾವ್ಲಿನ್ 15 ರನ್, ಓಲೆ ಪೋಪ್ 39 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದರು.  ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ʻಚಿನ್ನʼ ಗೆದ್ದವರಿಗೆ 6 ಕೋಟಿ ರೂ. ಗಿಫ್ಟ್‌ – ಬೆಂಗ್ಳೂರಿಗೇ ಬರಲಿದೆ ʻಕ್ರೀಡಾ ನಗರʼ

    ಸದ್ಯ 126 ರನ್‌ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿರುವ ಭಾರತ 16 ಓವರ್‌ಗಳಲ್ಲಿ 44 ರನ್‌ಗಳಿಗೆ 1 ವಿಕೆಟ್‌ ಕಳೆದುಕೊಂಡಿದೆ. ಒಟ್ಟು 170 ರನ್‌ಗಳ ಮುನ್ನಡೆ ಸಾಧಿಸಿದೆ. 19 ರನ್‌ಗಳಿಸಿದ್ದ ನಾಯಕ ರೋಹಿತ್‌ ಶರ್ಮಾ ಔಟಾಗಿದ್ದು, ಯಶಸ್ವಿ ಜೈಸ್ವಾಲ್‌, ಶುಭಮನ್‌ ಗಿಲ್‌ ಕ್ರೀಸ್‌ನಲ್ಲಿದ್ದಾರೆ.

    ಡೆಕೆಟ್ ಬಿರುಸಿನ ಶತಕ: ಭಾರತ ನೀಡಿದ ಬೃಹತ್ ಮೊತ್ತವನ್ನು ಬೆನ್ನಟ್ಟಿದ್ದ ಆಂಗ್ಲರ ತಂಡಕ್ಕೆ ಡೆಕೆಟ್ ಬಲ ತುಂಬಿದ್ದರು. ಮೊದಲ ಇನ್ನಿಂಗ್ಸ್‌ನ 2ನೇ ದಿನದಾಟದಲ್ಲಿ ಬಿರುಸಿನ ಶತಕ ಬಾರಿಸುವ ಮೂಲಕ ಭಾರತದ ವಿರುದ್ಧ ಗೆಲುವಿನ ವಿಶ್ವಾಸ ಮೂಡಿಸಿದ್ದರು. ಇದನ್ನೂ ಓದಿ: ದಿಢೀರ್‌ ಮನೆಗೆ ತೆರಳಿದ ಅಶ್ವಿನ್‌ – 10 ಮಂದಿಯೊಂದಿಗೆ ಕಣಕ್ಕೆ ಇಳಿಯಲಿದೆ ಭಾರತ

    ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಬೌಲಿಂಗ್‌ ಹಿಡಿತ ಸಾಧಿಸಿದ ಟೀಂ ಇಂಡಿಯಾ ಪರ ವೇಗಿ ಮೊಹಮ್ಮದ್‌ ಸಿರಾಜ್‌ 4 ವಿಕೆಟ್‌ ಪಡೆದರೆ, ರವೀಂದ್ರ ಜಡೇಜಾ ಮತ್ತು ಕುಲ್ದೀಪ್‌ ಯಾದವ್‌ ತಲಾ 2 ವಿಕೆಟ್‌ ಹಾಗೂ ಜಸ್ಪ್ರೀತ್‌ ಬುಮ್ರಾ, ರವಿಚಂದ್ರನ್‌ ಅಶ್ವಿನ್‌ ತಲಾ ಒಂದು ವಿಕೆಟ್‌ ಪಡೆದರು.

  • ಭಾರತಕ್ಕೆ ಬಿಕ್ಕಟ್ಟಾದ ಡಕೆಟ್‌ ಬಿರುಸಿನ ಶತಕ – 2ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್‌ 207/2

    ಭಾರತಕ್ಕೆ ಬಿಕ್ಕಟ್ಟಾದ ಡಕೆಟ್‌ ಬಿರುಸಿನ ಶತಕ – 2ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್‌ 207/2

    – ಭಾರತಕ್ಕೆ 238 ರನ್‌ಗಳ ಮುನ್ನಡೆ
    – 500 ವಿಕೆಟ್‌ ಪೂರೈಸಿ ಇತಿಹಾಸ ನಿರ್ಮಿಸಿದ ಅಶ್ವಿನ್‌

    ರಾಜ್‌ಕೋಟ್‌: ಆರಂಭಿಕ ಆಟಗಾರ ಬೆನ್‌ ಡಕೆಟ್‌ ವೇಗದ ಶತಕ ನೆರವಿನಿಂದ ಇಂಗ್ಲೆಂಡ್​ ತಂಡ 3ನೇ ಟೆಸ್ಟ್​ನಲ್ಲಿ ಭಾರತಕ್ಕೆ (Team India) ತಿರುಗೇಟು ನೀಡುವ ಸೂಚನೆ ನೀಡಿದೆ.

    ರಾಜ್‌ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ 3ನೇ ಟೆಸ್ಟ್‌ ಪಂದ್ಯದಲ್ಲಿ 2ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್‌ ಓವರ್‌ಗಳಲ್ಲಿ 35 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ನಷ್ಟಕ್ಕೆ 207 ರನ್‌ ಗಳಿಸಿದೆ. 238 ರನ್​ ಹಿನ್ನಡೆಯೊಂದಿಗೆ 3ನೇ ದಿನದಾಟಕ್ಕೆ ಬ್ಯಾಟಿಂಗ್​ ಕಾಯ್ದುಕೊಂಡಿದೆ. ಬೆನ್‌ ಡಕೆಟ್‌ (Ben Duckett) ಮತ್ತು ಜೋ ರೂಟ್‌ ಶನಿವಾರ ಕ್ರೀಸ್‌ ಆರಂಭಿಸಲಿದ್ದಾರೆ. ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ʻಚಿನ್ನʼ ಗೆದ್ದವರಿಗೆ 6 ಕೋಟಿ ರೂ. ಗಿಫ್ಟ್‌ – ಬೆಂಗ್ಳೂರಿಗೇ ಬರಲಿದೆ ʻಕ್ರೀಡಾ ನಗರʼ

    5 ವಿಕೆಟ್​ಗೆ 326 ರನ್ ಗಳಿಸಿದ್ದಲ್ಲಿಂದ 2ನೇ ದಿನದಾಟ ಆರಂಭಿಸಿದ ಭಾರತ 130.5 ಓವರ್‌ಗೆ 445 ರನ್‌ ಗಳಿಸಿ ಆಲೌಟ್‌ ಆಯಿತು. ಚೊಚ್ಚಲ ಅಂತಾರಾಷ್ಟ್ರೀಯ ಟೆಸ್ಟ್‌ ಪಂದ್ಯವನ್ನಾಡಿದ ಧ್ರುವ್‌ ಜುರೆಲ್‌ 46 ರನ್‌ ಗಳಿಸುವ ಮೂಲಕ ಗಮನ ಸೆಳೆದರು. ಇದರೊಂದಿಗೆ ಆರ್​. ಅಶ್ವಿನ್​ 37 ರನ್‌ ಮತ್ತು ಜಸ್ಪ್ರೀತ್‌ ಬುಮ್ರಾ 26 ರನ್‌ಗಳ ಕೊಡುಗೆ ನೀಡಿದರು. ಇದರೊಂದಿಗೆ ಭಾರತ 455 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಿತು. ಇದನ್ನೂ ಓದಿ: 3rd Test: ರೋಹಿತ್‌, ಜಡೇಜಾ ಶತಕ; ಸರ್ಫರಾಜ್‌ ಫಿಫ್ಟಿ – ಭಾರತ ಮೊದಲ ದಿನದಾಟದ ಅಂತ್ಯಕ್ಕೆ 326/5

    ಡೆಕೆಟ್‌ ಬಿರುಸಿನ ಶತಕ:
    ಭಾರತ ನೀಡಿದ ಬೃಹತ್​ ಮೊತ್ತವನ್ನು ಬೆನ್ನಟ್ಟಿರುವ ಆಂಗ್ಲರ ತಂಡಕ್ಕೆ ಡೆಕೆಟ್‌ ಬಲ ತುಂಬಿದ್ದಾರೆ. ಮೊದಲ ಇನ್ನಿಂಗ್ಸ್‌ನ 2ನೇ ದಿನದಾಟದಲ್ಲಿ ಬಿರುಸಿನ ಶತಕ ಬಾರಿಸುವ ಮೂಲಕ ಭಾರತದ ವಿರುದ್ಧ ಗೆಲುವಿನ ವಿಶ್ವಾಸ ಮೂಡಿಸಿದ್ದಾರೆ. ಏಕದಿನ ಕ್ರಿಕೆಟ್‌ ಮಾದರಿಯಲ್ಲಿ ಆಕ್ರಮಣಕಾರಿ ಬ್ಯಾಟಿಂಗ್‌ ನಡೆಸಿದ ಡಕೆಟ್‌ ಭರ್ಜರಿ ಶತಕ ಬಾರಿಸಿದ್ದಾರೆ,

    ಆರಂಭಿಕ ಆಟಗಾರ ಝಾಕ್‌ ಕ್ರಾವ್ಲಿನ್‌ 15 ರನ್‌, ಓಲೆ ಪೋಪ್‌ 39 ರನ್‌ ಗಳಿಸಿ ಪೆವಿಲಿಯನ್‌ ಸೇರಿಕೊಂಡರೆ, ಬೆನ್‌ ಡಕೆಟ್‌ 133 ರನ್‌ (118 ಎಸೆತ, 21 ಬೌಂಡರಿ, 2 ಸಿಕ್ಸರ್‌), ಜೋ ರೂಟ್‌ 9 ರನ್‌ ಗಳಿಸಿ ಕ್ರೀಸ್‌ ಉಳಿಸಿಕೊಂಡಿದ್ದಾರೆ. ಇದನ್ನೂ ಓದಿ: ವಿದೇಶದಲ್ಲಿ ಅಲ್ಲ, ಈ ಬಾರಿಯೂ ಭಾರತದಲ್ಲೇ IPL – ಯಾವಾಗಿನಿಂದ ಶುರು?

    500 ವಿಕೆಟ್‌ ಪಡೆದ ಸ್ಪಿನ್‌ ಮಾಂತ್ರಿಕ:
    ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್ ಮಾಂತ್ರಿಕ ಆರ್.ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ ತಂಡದ ಝಾಕ್ ಕ್ರಾವ್ಲಿ ಅವರನ್ನು ಔಟ್ ಮಾಡುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಜೊತೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್ ಪಡೆದ 2ನೇ ಭಾರತೀಯ, ವಿಶ್ವದ 9ನೇ ಆಟಗಾರ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.

  • ಕ್ಯಾಚ್ ವಿವಾದ; ಮತ್ತೆ ಮೋಸದಾಟ ಆಡಲು ಪ್ರಯತ್ನಿಸಿತಾ ಆಸೀಸ್? – ಅಭಿಮಾನಿಗಳು ಕೆಂಡ

    ಕ್ಯಾಚ್ ವಿವಾದ; ಮತ್ತೆ ಮೋಸದಾಟ ಆಡಲು ಪ್ರಯತ್ನಿಸಿತಾ ಆಸೀಸ್? – ಅಭಿಮಾನಿಗಳು ಕೆಂಡ

    ಲಂಡನ್: ಇತ್ತೀಚಿನ ಕ್ರಿಕೆಟ್ ಟೂರ್ನಿಗಳಲ್ಲಿ ಅಂಪೈರ್ ತೆಗೆದುಕೊಳ್ಳುವ ನಿರ್ಧಾರಗಳು ಕ್ರಿಕೆಟ್ ಲೋಕದಲ್ಲಿ ಭಾರೀ ವಿವಾದಗಳನ್ನ ಸೃಷ್ಟಿಸುತ್ತಿವೆ. ಆದ್ರೆ ಇಂಗ್ಲೆಂಡ್-ಆಸೀಸ್ ನಡುವಿನ ಆಶಸ್ (Ashes 2023) ಟೂರ್ನಿಯ 2ನೇ ಟೆಸ್ಟ್ ಪಂದ್ಯದಲ್ಲಿ ವಿವಾದಕ್ಕೀಡಾಗುತ್ತಿದ್ದ ಇಂಗ್ಲೆಂಡ್ ಬ್ಯಾಟ್ಸ್‌ಮ್ಯಾನ್‌ ಬೆನ್ ಡಕೆಟ್ (Ben Duckett) ಅವರ ಕ್ಯಾಚ್ 3ನೇ ಅಂಪೈರ್‌ನ ಸಮಯ ಪ್ರಜ್ಞೆಯಿಂದ ತಪ್ಪಿದೆ.

    ಹೌದು. ಆಶಸ್ ಟೂರ್ನಿಯಲ್ಲಿ 2ನೇ ಟೆಸ್ಟ್‌ನ 4ನೇ ದಿನದಾಟದಲ್ಲಿ ಆಸ್ಟ್ರೇಲಿಯಾ (Australia) ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಬೌಲಿಂಗ್‌ನಲ್ಲಿ ಬೆನ್ ಡಕೆಟ್ ಅವರು ಬಾರಿಸಿದ ಹೊಡೆತ ಬೌಂಡರಿ ಲೈನ್‌ನಲ್ಲಿ ಕ್ಯಾಚ್ ಆಗಿತ್ತು. ವೇಗಿ ಮಿಚೆಲ್ ಸ್ಟಾರ್ಕ್ ಕ್ಯಾಚ್ ಹಿಡಿಯುತ್ತಿದ್ದಂತೆ ಇಡೀ ತಂಡ ಕುಣಿದು ಕುಪ್ಪಳಿಸಿತ್ತು. ಇದರಿಂದ ಬಾಡಿದ ಮುಖಹೊತ್ತು ಪೆವಿಲಿಯನ್‌ನತ್ತ ಹೊರಟಿದ್ದರು. ಆಗ ಕ್ರೀಸ್‌ನಲ್ಲಿದ್ದ ನಾಯಕ ಬೆನ್‌ಸ್ಟೋಕ್ಸ್ (Ben Stokes) 3ನೇ ಅಂಪೈರ್ ಪರಿಶೀಲನೆಗೆ ತೆಗೆದುಕೊಂಡರು. ನಂತರ ಸ್ಟಾರ್ಕ್ ಕ್ಯಾಚ್ ಹಿಡಿದು ನಿಯಂತ್ರಿಸಲಾಗದೇ ಚೆಂಡನ್ನು ನೆಲಕ್ಕೆ ತಾಕಿಸಿದ್ದದ್ದು ಕಂಡುಬಂದಿತು. ಇದರಿಂದ 3ನೇ ಅಂಪೈರ್ ನಾಟೌಟ್ ತೀರ್ಪು ನೀಡಿದರು.

    ಈ ಬಗ್ಗೆ ಮೈದಾನದಲ್ಲಿ ಭಾರೀ ಚರ್ಚೆ ಸಹ ನಡೆಯಿತು. ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಆನ್-ಫೀಲ್ಡ್ ಅಂಪೈರ್‌ನೊಂದಿಗೆ ಏಕೆ ಔಟ್ ಇಲ್ಲ ಎಂದು ವಾಗ್ವಾದಕ್ಕಿಳಿದರು. ಆದ್ರೆ ಕ್ಯಾಚ್ ಹಿಡಿದ ನಂತರ ಸ್ಟಾರ್ಕ್ ಚೆಂಡನ್ನು ನೆಲಕ್ಕೆ ತಾಕಿಸಿದ್ದಾರೆ. ಕ್ಯಾಚ್ ಅನ್ನು ಸಂಪೂರ್ಣವಾಗಿ ನಿಯಂತ್ರಿಸದ ಕಾರಣ, ಬ್ಯಾಟರ್ ಪರವಾಗಿ ನಿರ್ಧಾರ ನೀಡಬೇಕಾಯಿತು ಎಂದು ಅಂಪೈರ್ ಸಮಾಧಾನಪಡಿಸಿದರು. ಹಾಗಾಗಿ ಆಸ್ಟ್ರೇಲಿಯಾ ತಂಡ ನಿರಾಶೆಗೊಂಡಿತು. ಇದನ್ನೂ ಓದಿ: 48 ವರ್ಷಗಳ ಇತಿಹಾಸದಲ್ಲೇ ಫಸ್ಟ್‌ ಟೈಂ ವಿಶ್ವಕಪ್‌ ಟೂರ್ನಿಯಿಂದಲೇ ವೆಸ್ಟ್‌ ಇಂಡೀಸ್‌ ಔಟ್‌

    ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌ನಲ್ಲಿ ಟೀಂ ಇಂಡಿಯಾ (Team India) ಆಟಗಾರ ಶುಭಮನ್ ಗಿಲ್ ಅವರ ಕ್ಯಾಚ್ ವಿಚಾರ ಭಾರೀ ವಿವಾದ ಹುಟ್ಟುಹಾಕಿತ್ತು. ದೇಶ-ವಿದೇಶ ಕ್ರಿಕೆಟ್ ದಿಗ್ಗಜರಿಂದಲೂ ಟೀಕೆಗಳು ಕೇಳಿಬಂದಿತ್ತು. ಅಲ್ಲದೇ ಸ್ಟೀವ್ ಸ್ಮಿತ್ ತೆಗೆದುಕೊಂಡಿದ್ದ ಜೋ ರೂಟ್ ಅವರ ಕ್ಯಾಚ್ ಸಹ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೂ ಓದಿ: ಕೊಹ್ಲಿ ಮತ್ತು ಬಾಬರ್‌ ಇಬ್ಬರಲ್ಲಿ ಯಾರು ಶ್ರೇಷ್ಠ? – ಭಜ್ಜಿ ಪ್ರಶ್ನೆಗೆ ಶಾಕಿಂಗ್‌ ಉತ್ತರ ಕೊಟ್ಟ ಅಖ್ತರ್‌

    ಆಶಸ್ ಟೂರ್ನಿಯ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಮೊದಲ ಇನಿಂಗ್ಸ್‌ನ 47ನೇ ಓವರ್‌ನಲ್ಲಿ ವೇಗಿ ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ಇಂಗ್ಲೆಂಡ್ ಸ್ಟಾರ್ ಬ್ಯಾಟರ್ ಜೋ ರೂಟ್ ಪುಲ್ ಮಾಡಲು ಪ್ರಯತ್ನಿಸಿದರು. ಚೆಂಡು ಬ್ಯಾಟ್ ಸರಿಯಾಗಿ ಸಿಗದ ಬ್ಯಾಕ್‌ವಾರ್ಡ್ ಪಾಯಿಂಟ್ ಕಡೆ ಹಾರಿತು. ಈ ವೇಳೆ ಸ್ಟೀವ್ ಸ್ಮಿತ್ ಕ್ಯಾಚ್ ಪಡೆದರು. ಕ್ಯಾಚ್ ಪಡೆದ ತಕ್ಷಣ ಸ್ಮಿತ್ ಕುಣಿದು ಕುಪ್ಪಳಿಸಿದರು. ಈ ವೇಳೆ ಗೊಂದಲಕ್ಕೆ ಒಳಗಾದ ಫೀಲ್ಡ್ ಅಂಪೈರ್‌ಗಳು 3ನೇ ಅಂಪೈರ್ ಸಹಾಯಕ್ಕೆ ಮೊರೆ ಹೋದರು. ಇದನ್ನೂ ಓದಿ: ಇಷ್ಟಕ್ಕೆ ಮುಗಿದಿಲ್ಲ – ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ಗಿಲ್ ಖಡಕ್ ರಿಯಾಕ್ಷನ್

    3ನೇ ಅಂಪೈರ್‌ಗಳು ಹಲವು ಬಾರಿ ವಿಡಿಯೋ ರೀಪ್ಲೇ ವೀಕ್ಷಿಸಿದ ಬಳಿಕ ಅಂತಿಮವಾಗಿ ಜೋ ರೂಟ್ ಔಟ್ ಎಂದು ತೀರ್ಪು ನೀಡಲಾಯಿತು. ಈ ಬೆನ್ನಲ್ಲೇ ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಗಳು ಆಸೀಸ್ ತಂಡ ಹಾಗೂ 3ನೇ ಅಂಪೈರ್ ವಿರುದ್ಧ ಕಿಡಿ ಕಾರಿದರು. ಸ್ಟೀವ್ ಸ್ಮಿತ್ ಚೆಂಡನ್ನು ಪಡೆಯುವಾಗ ನೆಲಕ್ಕೆ ತಾಗಿಸಿದ್ದಾರೆಂದು ಫೋಟೋ ಸಹಿತ ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಅಲ್ಲದೇ 2ನೇ ಟೆಸ್ಟ್ನ ನಾಲ್ಕನೇ ದಿನದಾಟದಲ್ಲಿ ಮಿಚೆಲ್ ಸ್ಟಾರ್ಕ್ ಹಿಡಿದ ಬೆನ್ ಡಕೆಟ್ ಅವರ ಕ್ಯಾಚರ್ ಡಿಆರ್‌ಎಸ್‌ಗೆ ಮನವಿ ಮಾಡಲಾಗಿತ್ತು. ಆದ್ರೆ, ಅಂಪೈರ್ ನಿಗಾ ವಹಿಸಿ ನಾಟೌಟ್ ತೀರ್ಪು ಪ್ರಕಟಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]