Tag: ಬೆಲೆ

  • ವಾಣಿಜ್ಯ ಬಳಕೆ LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ

    ವಾಣಿಜ್ಯ ಬಳಕೆ LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ

    ನವದೆಹಲಿ: ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ (Commercial LPG Cylinder Price) ಪರಿಷ್ಕರಣೆ ಮಾಡಲಾಗಿದ್ದು, ದರದಲ್ಲಿ 19 ರೂ. ಇಳಿಕೆ ಮಾಡಲಾಗಿದೆ.

    ಮೆಟ್ರೋ ನಗರಗಳಾದ ನವದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ಸೇರಿದಂತೆ ದೇಶದಾದ್ಯಂತ 19 ಕಿ.ಗ್ರಾಂಗಳಷ್ಟು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ತೈಲ ಮಾರುಕಟ್ಟೆ ಕಂಪನಿಗಳು ಬುಧವಾರ ಕಡಿತಗೊಳಿಸಿವೆ. ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ.

    ನವದೆಹಲಿಯಲ್ಲಿ ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ 1,745.50 ರೂ. ಆಗಿದೆ. ಮುಂಬೈನಲ್ಲಿ 1,74917.50 ರೂ. ನಿಂದ 1,698.50 ಕ್ಕೆ ಇಳಿಕೆಯಾಗಿದೆ. ಚೆನ್ನೈನಲ್ಲೂ 19 ರೂ. ಇಳಿಕೆಯಾಗಿದೆ. ಈಗಿನ ಬೆಲೆ 1,930 ರೂ. ಗಳಾಗಿದ್ದು, 1,911 ರೂಪಾಯಿಗೆ ಇಳಿಕೆಯಾಗಿದೆ. ಈ ನಡುವೆ ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,860 ರೂ.ನಿಂದ ಕುಸಿತ ಕಂಡಿದೆ. ಇದನ್ನೂ ಓದಿ: ಫ್ರೀ ಫ್ರೀ ಫ್ರೀ; ಟಿಡಿಪಿ ಗೆದ್ದರೇ ಫ್ರೀ ಸೈಟ್‌, ಮಹಿಳೆಯರಿಗೆ ಫ್ರೀ ಬಸ್‌, 3 ಎಲ್‌ಪಿಜಿ ಸಿಲಿಂಡರ್‌ ಫ್ರೀ – NDA ಗ್ಯಾರಂಟಿ

  • ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ- 67 ಸಾವಿರಕ್ಕೆ ಏರಿದ ಬಂಗಾರದ ರೇಟ್

    ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ- 67 ಸಾವಿರಕ್ಕೆ ಏರಿದ ಬಂಗಾರದ ರೇಟ್

    ಬೆಂಗಳೂರು: ಚಿನ್ನ ಅಂದ್ರೇ ಯಾರಿಗೆ ಇಷ್ಟ ಆಗಲ್ಲ ಹೇಳಿ. ಅದರಲ್ಲೂ ಮುಂದಿನ ತಿಂಗಳು ಮದುವೆ ಸೀಜನ್ ಆರಂಭವಾಗಿದ್ದು, ಸಾಕಷ್ಟು ಮದುವೆ, ಶುಭ ಸಮಾರಂಭಗಳು ನಡೆತ್ತವೆ. ಈ ಟೈಮ್ ನಲ್ಲೇ ಜನರಿಗೆ ಗೋಲ್ಡ್ ಶಾಕ್ ಎದುರಾಗಿದ್ದು, ಎಲ್ಲಾ ರೆರ್ಕಾಡ್‍ಗಳನ್ನ ಬ್ರೇಕ್ ಮಾಡಿದೆ.

    ಬಡವರು ಹಾಗೂ ಮಧ್ಯಮ ಪಾಲಿನ ಜನರಿಗೆ ಗಗನ ಕುಸುಮವಾಗಿದೆ. ಭಾನುವಾರ ಬಂಗಾರದ ರೇಟ್ (Gold & Silver Rate) ಚಿನಿವಾರಪೇಟೆಯ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆ 67 ಸಾವಿರದ ಗಡಿ ದಾಟಿದ್ದು, ಬೆಳ್ಳಿ 75 ಸಾವಿರವನ್ನು ಕ್ರಾಸ್ ಮಾಡಿದೆ.

    ನಿನ್ನೆ ಚಿನ್ನ, ಬೆಳ್ಳಿಯ ರೇಟ್ ಎಷ್ಟಿತ್ತು?
    * 24 ಕ್ಯಾರೆಟ್ 10 ಗ್ರಾಂ ಚಿನ್ನ- 67,800 ರೂ.
    * 22 ಕ್ಯಾರೆಟ್ 10 ಗ್ರಾಂ ಚಿನ್ನ- 61,100 ರೂ.
    * 1 ಕೆ.ಜಿ ಬೆಳ್ಳಿ- 75,000 ರೂ.

    ಇದೊಂದು ಆಲ್ ಟೈಮ್ ಹೈಯೆಸ್ಟ್ ರೆರ್ಕಾಡ್ ಆಗಿದೆ. ಬಂಗಾರ ಯಾವತ್ತೂ ಈ ರೇಟ್‍ಗೆ ತಲುಪಿರಲಿಲ್ಲ. ಮುಂದಿನ ತಿಂಗಳಿನಿಂದ ಮದುವೆ ಸೀಜನ್ ಇದ್ದು, ಅಕ್ಷಯ ತೃತೀಯಕ್ಕೂ ಚಿನ್ನಕ್ಕೆ ಡಿಮ್ಯಾಂಡ್ ಇರೋದ್ರಿಂದ ಈ ರೇಟ್ ಇದೇ ತರಹ ಮುಂದುವರಿಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಖಜಾಂಚಿ ರವಿಕುಮಾರ್ ಹೇಳುತ್ತಾರೆ.

    ದರ ಏರಿಕೆಗೆ ಕಾರಣಗಳೇನು?: ಅಮೆರಿಕದ ಡಾಲರ್ ದುರ್ಬಲವಾಗಿರೋದು. ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಬಂಗಾರದ ಮೇಲೆ ಇನ್ವೆಸ್ಟ್ ಮಾಡ್ತಾ ಇರೋದು ಚಿನ್ನದ ಪೂರೈಕೆಗಿಂತ ಡಿಮ್ಯಾಂಡ್ ಹೆಚ್ಚಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಕದ್ದುಮುಚ್ಚಿ ತಮಿಳುನಾಡಿಗೆ ನೀರು ಹರಿಸುತ್ತಿದೆ: ಹೆಚ್‍ಡಿಕೆ ಗರಂ

    ಶುಭ ಸಮಾರಂಭಗಳ ಹೊತ್ತಲ್ಲಿ ಬಂಗಾರದ ಬೆಲೆ ಏರಿಕೆಯಾಗಿರೋದು ಗ್ರಾಹಕರಲ್ಲಿ ಆತಂಕ ತಂದಿದೆ. ಮದುವೆಗೆ ಆಭರಣಗಳನ್ನು ಮಾಡಿಸೋದು ಹೇಗೆ ಅಂತಾ ಚಿಂತಿತರಾಗಿದ್ದಾರೆ. ಒಟ್ಟಿನಲ್ಲಿ ಚಿನ್ನದ ರೇಟ್ ಮತ್ತಷ್ಟು ಗಗನಕ್ಕೆ ಏರುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದ ಮಧ್ಯೆ ಗ್ರಾಹಕರಿಗೆ ಮತ್ತೊಂದು ಬರೆ ಬಿದ್ದಿದೆ.

  • ಹೊಸ ವರ್ಷಕ್ಕೂ ಮುನ್ನವೇ ಪೆಟ್ರೋಲ್, ಡೀಸೆಲ್ ದರದಲ್ಲಿ 10 ರೂ. ಇಳಿಕೆ?

    ಹೊಸ ವರ್ಷಕ್ಕೂ ಮುನ್ನವೇ ಪೆಟ್ರೋಲ್, ಡೀಸೆಲ್ ದರದಲ್ಲಿ 10 ರೂ. ಇಳಿಕೆ?

    ನವದೆಹಲಿ: ಹೊಸವರ್ಷಕ್ಕೆ (New Year) ಕಾಲಿಡಲು ಕೇವಲ 3 ದಿನಗಳಷ್ಟೇ ಬಾಕಿ ಉಳಿದಿವೆ. ಈ ಹೊತ್ತಲ್ಲೇ ನರೇಂದ್ರ ಮೋದಿ (Narendra Modi) ಸರ್ಕಾರ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಯನ್ನು ಕಡಿತಗೊಳಿಸಲು ನಿರ್ಧರಿಸಿದ್ದು, ಜನವರಿಗೂ ಮೊದಲೇ ಪೆಟ್ರೋಲ್ ಬೆಲೆಯಲ್ಲಿ ಪ್ರತೀ ಲೀಟರ್‌ಗೆ 10 ರೂ. ಕಡಿತಗೊಳಿಸುವ ಸಾಧ್ಯತೆಯಿದೆ.

    ವರದಿಗಳ ಪ್ರಕಾರ ಪೆಟ್ರೋಲಿಯಂ ಸಚಿವಾಲಯ (Petroleum Ministry) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 8 ರೂ. ನಿಂದ 10 ರೂ.ವರೆಗೆ ಕಡಿತವನ್ನು ಒಳಗೊಂಡ ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದು, ಇದಕ್ಕೆ ಪ್ರಧಾನಿ ಮೋದಿಯ ಅನುಮೋದನೆ ಸಿಗಬೇಕಿದೆ. ಇದನ್ನೂ ಓದಿ: ಗಲ್ಲು ಶಿಕ್ಷೆ ರದ್ದು – ಕತಾರ್‌ ಜೈಲಿನಲ್ಲಿರುವ 8 ಭಾರತೀಯರಿಗೆ ಬಿಗ್‌ ರಿಲೀಫ್‌

    2023-24ರ ಹಣಕಾಸು ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಕೇವಲ 2 ತಿಂಗಳು ಹೊರತುಪಡಿಸಿ ಪ್ರತಿ ಬ್ಯಾರೆಲ್‌ಗೆ ಸರಾಸರಿ 77.14 ಡಾಲರ್ (ಸುಮಾರು 6,415.71 ರೂ.) ಇತ್ತು. ಇನ್ನು ಸೆಪ್ಟೆಂಬರ್‌ನಲ್ಲಿ 93.54 ಡಾಲರ್ (7,779.69 ರೂ.) ಹಾಗೂ ಅಕ್ಟೋಬರ್‌ನಲ್ಲಿ 90.08 ಡಾಲರ್‌ನಷ್ಟು (7,491.92 ರೂ.) ಏರಿಕೆಯಾಗಿದೆ. 2022-23ರ ಹಣಕಾಸು ವರ್ಷದಲ್ಲಿ ಸರಾಸರಿ ಕಚ್ಚಾತೈಲದ ಬೆಲೆ ಬ್ಯಾರೆಲ್‌ಗೆ 93.15 ಡಾಲರ್ (7,747.25 ರೂ.) ಆಗಿತ್ತು. ಇದನ್ನೂ ಓದಿ: ಆರ್‌ಎಸ್‌ಎಸ್‌ಗೂ ರಾಮಮಂದಿರಕ್ಕೂ ಏನೂ ಸಂಬಂಧವಿಲ್ಲ: ಡಿಕೆಶಿ

    2022ರ ಏಪ್ರಿಲ್‌ನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿರುವ ಜೊತೆಗೆ ದರಗಳು ಬದಲಾಗದೇ ಇರುವುದರಿಂದ ಪ್ರಸಕ್ತ ಹಣಕಾಸು ಅವಧಿಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದ್ದ ಕಾರಣ ಇಂಡಿಯನ್ ಆಯಿಲ್ ಕಾರ್ಪೋರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ತೈಲ ಮಾರುಕಟ್ಟೆ ಕಂಪನಿಗಳಿಗೆ ದೊಡ್ಡ ಲಾಭವನ್ನು ನೀಡಿವೆ. ಈ ವರ್ಷದ ಮೊದಲ ಆರು ತಿಂಗಳಲ್ಲಿ ಈ 3 ಕಂಪನಿಗಳು ಒಟ್ಟು 58,198 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಇದನ್ನೂ ಓದಿ: ಅಯೋಧ್ಯೆ ಹೆಸರಿನಲ್ಲಿ ಒಂದು ಧರ್ಮಕ್ಕೆ ಮಿತಿಮೀರಿದ ಪ್ರಾಧಾನ್ಯತೆ ನೀಡಲಾಗುತ್ತಿದೆ: ಸ್ಯಾಮ್‌ ಪಿತ್ರೋಡಾ ಕಿಡಿ

  • ಕೃಷಿ ಉಪಕರಣಗಳ ಬೆಲೆ ದುಪ್ಪಟ್ಟು – ಅಂದು 30 ಪೈಪ್‌, 5 ಸ್ಪ್ರಿಂಕ್ಲರ್‌ಗೆ 1,876 ರೂ. – ಈಗ 4,667 ರೂ.ಗೆ ಏರಿಕೆ

    ಕೃಷಿ ಉಪಕರಣಗಳ ಬೆಲೆ ದುಪ್ಪಟ್ಟು – ಅಂದು 30 ಪೈಪ್‌, 5 ಸ್ಪ್ರಿಂಕ್ಲರ್‌ಗೆ 1,876 ರೂ. – ಈಗ 4,667 ರೂ.ಗೆ ಏರಿಕೆ

    – ರೈತ ಸಂಪರ್ಕ ಕೇಂದ್ರಗಳಿಗೆ ಹೋದ ರೈತರಿಗೆ ಶಾಕ್‌

    ಹಾವೇರಿ: ರಾಜ್ಯದಲ್ಲಿ ತೀವ್ರ ಬರಗಾಲ (Drought) ಆವರಿಸಿದೆ. ಮಳೆ ಇಲ್ಲದೆ ಭಾರೀ ಸಂಕಷ್ಟವನ್ನು ರೈತ (Farmer) ಎದುರಿಸುತ್ತಿದ್ದಾನೆ. ಈ ಮಧ್ಯೆ ಕೃಷಿ ಉಪಕರಣಗಳಿಗೆ (Agriculture Equipment) ಪಾವತಿಸಬೇಕಾದ ಹಣವನ್ನು ದುಪ್ಪಟ್ಟು ಮಾಡಿ ಸರ್ಕಾರ ರೈತರಿಗೆ ಶಾಕ್‌ ನೀಡಿದೆ.

    ಹೌದು, ರೈತ ಸಂಪರ್ಕ ಕೇಂದ್ರಗಳಿಗೆ ಖರೀದಿಗೆ ಹೋದ ರೈತರು ಕೃಷಿ ಉಪಕರಣ ಬೆಲೆ ಕೇಳಿ ಅಘಾತಗೊಂಡಿದ್ದಾರೆ. ತುಂತುರು ಹಾಗೂ ಹನಿ ನೀರಾವರಿ ಉಪಕರಣಗಳ ಮೇಲಿನ ದರವನ್ನು ದುಪ್ಪಟ್ಟು ಮಾಡಿದೆ.  ಕಳೆದ ಅವಧಿಯಲ್ಲಿ 1,876 ರೂ. ರಿಯಾಯಿತಿ ದರ ಪಾವತಿಸಿ 30 ಪೈಪ್‌, 5 ಸ್ಪ್ರಿಂಕ್ಲರ್ ಖರೀದಿಸಬಹುದಿತ್ತು.  ಇದನ್ನೂ ಓದಿ: ಮತ್ತೆ ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ

    ಈಗ ಈ ಸರ್ಕಾರದ ಅವಧಿಯಲ್ಲಿ 30 ಪೈಪ್, 5 ಸ್ಪ್ರಿಂಕ್ಲರ್ ಖರೀದಿಗೆ 4,667 ರೂ. ದರ ನಿಗದಿ ಮಾಡಲಾಗಿದೆ. ಏಕಾಏಕಿ ಈ ಪರಿ ದರವನ್ನು ಹೆಚ್ಚಿಸಲು ಕಾರಣ ಏನು ಎನ್ನುವುದು ಗೊತ್ತಿಲ್ಲ. ಹೀಗೆ ದರವನ್ನು ದುಪ್ಪಟ್ಟು ಮಾಡಿದರೆ ನಾವು ಹೇಗೆ ಬದುಕುವುದು ಎಂದು ರೈತರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆ ಇಕ್ಕಟ್ಟಿನಲ್ಲಿ ಸಾರಿಗೆ ಇಲಾಖೆ – ಮೀಸಲಿಟ್ಟ ಹಣ ಹೈಸ್ಪೀಡ್‌ನಲ್ಲಿ ಖರ್ಚು

    ರೈತ ಸಂಪರ್ಕ ಕೇಂದ್ರಗಳಿಗೆ ಬಂದವರು ಹಣ ಹೊಂದಿಸಲು ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಯಾರಿಗೂ ತಿಳಿಯದಂತೆ ಸರ್ಕಾರ ಆದೇಶ ಮಾಡಿದೆ ಎಂದು ಅನ್ನದಾತರು ಸಿಟ್ಟು ಹೊರಹಾಕುತ್ತಿದ್ದಾರೆ.

     

  • ಟೊಮೆಟೋ ದರ ಭಾರೀ ಇಳಿಕೆ – ಕೆಜಿಗೆ 4 ರೂ.

    ಟೊಮೆಟೋ ದರ ಭಾರೀ ಇಳಿಕೆ – ಕೆಜಿಗೆ 4 ರೂ.

    ಕೋಲಾರ: ಕಳೆದ ಮೂರು ತಿಂಗಳ ಹಿಂದೆ ಕಿಚನ್ ಕ್ವೀನ್ ಟೊಮೆಟೋಗೆ (Tomato) ಬಂಗಾರದ ಬೆಲೆ ಬಂದಿತ್ತು. ಟೊಮೆಟೋ ಬೆಳೆದ ರೈತರೇ ಕೋಟ್ಯಧಿಪತಿಗಳು ಎಂಬಂತೆ ಎಲ್ಲೆಡೆ ಸಖತ್ ಸದ್ದು ಮಾಡುತ್ತಿದ್ದರು. ಆದರೆ ಅಂಥಾದೊಂದು ಸಮಯ ಕಳೆದು ಇನ್ನೂ ಮೂರು ತಿಂಗಳು ಕಳೆದಿಲ್ಲ. ಅಷ್ಟರಲ್ಲೇ ಟೊಮೆಟೋ ಬೆಳೆದ ರೈತನೇ ದುರಾದೃಷ್ಟವಂತ ಎನ್ನುವಂತ ಸ್ಥಿತಿಗೆ ಬಂದು ನಿಂತಿದೆ. ಅದಕ್ಕಾಗಿಯೇ ಟೊಮೆಟೋವನ್ನು ಜೂಜಾಟದ ಬೆಳೆ ಎಂದು ಇಲ್ಲಿನ ರೈತರು ಕರೆಯುತ್ತಾರೆ.

    ಟೊಮೆಟೋಗೆ ಬೆಲೆ ಬಂದರೆ ಬಂಪರ್, ಇಲ್ಲವಾದರೆ ಬೆಳೆ ಬೆಳೆದ ರೈತರ ಪಾಪರ್ ಎನ್ನುವಂತಾಗಿದೆ. ಸದ್ಯ ಒಂದು ತಿಂಗಳು ಕಳೆದರೂ ಕೂಡ ಟೊಮೆಟೋ ಬೆಲೆ ಮಾತ್ರ ಚೇತರಿಕೆ ಕಂಡಿಲ್ಲ. ಒಂದೆಡೆ ಕೋಲಾರದಲ್ಲಿ ಮಳೆ ಇಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಇನ್ನೊಂದೆಡೆ ಕಷ್ಟಪಟ್ಟು ಬೋರ್‌ವೆಲ್‌ನಿಂದ ನೀರು ತೆಗೆದು ಬೆಳೆದ ತೋಟಗಾರಿಕಾ ಬೆಳೆ ಕೂಡ ಬೆಲೆ ಇಲ್ಲದೆ ಕೈಕೊಟ್ಟಿದೆ. ಇದರಿಂದ ಕೋಲಾರ (Kolar) ಜಿಲ್ಲೆಯ ರೈತರ ಪರಿಸ್ಥಿತಿ ಮಾತ್ರ ಹೇಳತೀರದಾಗಿದೆ. ಇದನ್ನೂ ಓದಿ: ಇಸ್ರೇಲ್-ಹಮಾಸ್ ಯುದ್ಧ; ಚಿನ್ನ, ಬೆಳ್ಳಿ ದರದ ಮೇಲೆ ಎಫೆಕ್ಟ್

    ಒಂದು ಎಕರೆ ಟೊಮೆಟೋ ಬೆಳೆಯಲು ಸುಮಾರು ಒಂದೂವರೆ ಲಕ್ಷ ರೂಪಾಯಿ ರೈತರಿಗೆ ಖರ್ಚು ಬರುತ್ತದೆ. ಆದರೆ ಸದ್ಯ ಮಾರುಕಟ್ಟೆಯಲ್ಲಿರುವ ಬೆಲೆ ನೋಡಿದರೆ ರೈತರು ಮಾಡಿದ ಖರ್ಚಿನ ಅರ್ಧದಷ್ಟು ಹಣವೂ ರೈತರಿಗೆ ಸಿಗುತ್ತಿಲ್ಲ. ಹಾಗಾಗಿ ಬೆಳೆದ ಟೊಮೆಟೋವನ್ನು ಹೊಲದಲ್ಲೇ ಬಿಟ್ಟರೆ ರೈತ ನಷ್ಟದಿಂದ ತಪ್ಪಿಸಿಕೊಳ್ಳಬಹುದು ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಸರ್ಕಾರ ರೈತರ ನೆರವಿಗೆ ಬರಬೇಕು ಅನ್ನೋದು ರೈತರ ಮನವಿ. ಇದನ್ನೂ ಓದಿ: ದೇವೇಗೌಡರ ಮೈತ್ರಿ ನಿರ್ಧಾರಕ್ಕೆ ನನ್ನ ಒಪ್ಪಿಗೆ ಇದೆ: ಜಫ್ರುಲ್ಲಾ ಖಾನ್

    ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಅತಿಹೆಚ್ಚು ಟೊಮೆಟೋ ಬೆಳೆಯುತ್ತಾರೆ. ಇಲ್ಲಿ ಬೆಳೆಯುವ ಟೊಮೆಟೋವನ್ನು ದೇಶದ ಬಹುತೇಕ ಎಲ್ಲಾ ರಾಜ್ಯಗಳಿಗೆ ಹಾಗೂ ಬಾಂಗ್ಲಾ, ಪಾಕಿಸ್ತಾನ, ದುಬೈ, ಸೇರಿ ಹೊರ ದೇಶಗಳಿಗೂ ರಫ್ತು ಮಾಡುತ್ತಿದ್ದರು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ನೋಡೋದಾದ್ರೆ ಈಗ ಎಲ್ಲಿಂದಲೂ ಕೂಡಾ ಟೊಮೆಟೋಗೆ ಡಿಮ್ಯಾಂಡ್ ಇಲ್ಲ. ಆದರೆ ರೈತರು ಕಳೆದ ಮೂರು ತಿಂಗಳ ಹಿಂದೆ ಟೊಮೆಟೋಗೆ ಬಂಗಾರದ ಬೆಲೆ ಬಂದಿದ್ದ ಕಾರಣದಿಂದ ಒಳ್ಳೆಯ ಬೆಲೆಯ ನಿರೀಕ್ಷೆಯಲ್ಲಿ ಬಹುತೇಕ ರೈತರು ಟೊಮೆಟೋ ಬೆಳೆದಿದ್ದಾರೆ. ಪರಿಣಾಮ ಕೋಲಾರ ಎಪಿಎಂಸಿ ಮಾರುಕಟ್ಟೆಗೆ (APMC Market) ಬೇಡಿಕೆಗಿಂತ ಅತಿ ಹೆಚ್ಚಿನ ಟೊಮೆಟೋ ಪೂರೈಕೆಯಾಗುತ್ತಿದೆ. ಈ ಕಾರಣದಿಂದಲೇ ಟೊಮೆಟೋ ಇಂದು ಬೆಲೆ (Pi ಕಳೆದುಕೊಂಡಿದೆ. ಕೆಜಿ ಟೊಮೆಟೋ 3 ರಿಂದ 4 ರೂಪಾಯಿಗೆ ಬಿಕರಿಯಾಗುತ್ತಿದೆ. ಅಂದರೆ ಹದಿನೈದು ಕೆಜಿಯ ಒಂದು ಬಾಕ್ಸ್ ಟೊಮೆಟೋ ಸರಿ ಸುಮಾರು 50 ರಿಂದ 80 ರೂಪಾಯಿಗೆ ಮಾರಾಟವಾಗುತ್ತಿದೆ. ಇನ್ನು ಕೆಲವು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ. ಇದನ್ನೂ ಓದಿ: ಯಾವುದಕ್ಕೂ ಡಿಸ್ಟರ್ಬ್ ಆಗಲ್ಲ, ಮ್ಯಾನಿಪುಲೇಟ್ ಮಾಡಲ್ಲ- ಪಬ್ಲಿಕ್ ಟಿವಿಗೆ ಸಿಎಂ EXCLUSIVE ಸಂದರ್ಶನ

    ಒಟ್ಟಿನಲ್ಲಿ ಟೊಮೆಟೋ ಬೆಳೆಯುವ ರೈತರ ಪರಿಸ್ಥಿತಿ ಹಾಗೂ ಟೊಮೆಟೋ ಬೆಲೆಯನ್ನು ನೋಡಿದ್ರೆ ಇದು ಟೊಮೆಟೋ ಹಾಗೂ ರೈತರ ನಡುವಿನ ಜೂಜಾಟದಂತೆ ಭಾಸವಾಗುತ್ತಿದೆ. ಟೊಮೆಟೋ ಬೆಳೆದ ರೈತರಿಗೆ ಯಾವಾಗಲೂ ಬೆಲೆ ಸಿಗೋದಿಲ್ಲ. ರೈತರಿಗೆ ಅದೃಷ್ಟ ಬಂದಾಗ ಮಾತ್ರವೇ ಅವರಿಗೆ ಬೆಲೆ ಸಿಗೋದು ಅನ್ನೋದು ಮಾತ್ರ ಖಚಿತ. ಇದನ್ನೂ ಓದಿ: ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ ಮುಂದುವರಿದ ನೀರು ಬಿಡುಗಡೆ; ಈಗ ನೀರು ಎಷ್ಟಿದೆ?

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿಢೀರ್ ಕುಸಿದ ಟೊಮೆಟೋ ರೇಟ್- ಕೆ.ಜಿಗೆ 40ಕ್ಕೆ ಕುಸಿದ ದರ

    ದಿಢೀರ್ ಕುಸಿದ ಟೊಮೆಟೋ ರೇಟ್- ಕೆ.ಜಿಗೆ 40ಕ್ಕೆ ಕುಸಿದ ದರ

    ಬೆಂಗಳೂರು: ಕೆಲವು ದಿನಗಳಿಂದ ಚಿನ್ನದಂತಾಗಿದ್ದ ಟೊಮೆಟೋ ಬೆಲೆ (Tomato Price) ಇದೀಗ ದಿಢೀರ್ ಇಳಿಕೆ ಕಂಡಿದೆ.

    ಹೌದು. 200 ರೂ. ಗಡಿ ದಾಟಿ ಗ್ರಾಹಕರ ಆತಂಕಕ್ಕೆ ಕಾರಣವಾಗಿದ್ದ ಟೊಮೆಟೋ ಬೆಲೆ ಈಗ ಏಕಾಏಕಿ ಕುಸಿದಿದೆ. ಸದ್ಯ ಕೆ.ಜಿ ಟೊಮೆಟೋ ಬೆಲೆ 30-40ರೂ.ಗೆ ಕುಸಿತ ಕಂಡಿದೆ. ಇದನ್ನೂ ಓದಿ: ಬಳ್ಳಾರಿಯ ಮದರ್‌ ಟ್ಯಾಂಕ್‌ ಬಳಿ ಪುಂಡರ ಹಾವಳಿ – ನಿಯಂತ್ರಣಕ್ಕೆ ಎಸ್‌ಪಿಗೆ ಮನವಿ

    ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಟೊಮೆಟೋ ದರ ಭಾರೀ ಇಳಿಕೆಯಾಗಿದೆ. 15 ಕೆಜಿ ಬಾಕ್ಸ್ 2,000-2,500 ರೂಪಾಯಿ ಕಂಡಿದ್ದ ಟೊಮೆಟೋ ಬೆಲೆ ಈಗ 450 ರೂಪಾಯಿಗೆ ಇಳಿದಿದೆ. ಕಳೆದ ನಾಲ್ಕೈದು ದಿನದ ಹಿಂದೆ ಟೊಮ್ಯಾಟೊ ದರ 150 ರಿಂದ 169 ರೂಪಾಯಿ ಇತ್ತು. ಒಂದು ಕ್ರೇಟ್ ಗೆ 2,000 ಇತ್ತು. ಇಂದು ಒಂದು ಕ್ರೇಟ್ ಗೆ 1,500 ರೂಪಾಯಿ ಆಗಿದೆ.

    ಮಳೆ ಇದ್ದ ಕಾರಣದಿಂದ ರೈತರಿಂದ ಮಾರುಕಟ್ಟೆಗೆ ಟೊಮೆಟೋ ಸರಬರಾಜು ಆಗದ ಕಾರಣ ದರ ಜಾಸ್ತಿ ಆಗಿತ್ತು. ಮಳೆ ನಿಂತ ಕಾರಣ ಇದೀಗ ಟೊಮೆಟೋ ಸರಬರಾಜು ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಂಪು ಸುಂದರಿಯ ಬೆಲೆ ಕಡಿಮೆ ಆಗಿದೆ. ಬೆಲೆ ಕಡಿಮೆ ಆದ ಮೇಲೆ ಗ್ರಾಹಕರು ಬರುತ್ತಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟೊಮೆಟೋ ಬಳಕೆಯನ್ನೇ ನಿಲ್ಲಿಸಿ- ಪಂಜಾಬ್ ರಾಜ್ಯಪಾಲ ಕರೆ

    ಟೊಮೆಟೋ ಬಳಕೆಯನ್ನೇ ನಿಲ್ಲಿಸಿ- ಪಂಜಾಬ್ ರಾಜ್ಯಪಾಲ ಕರೆ

    ಚಂಡೀಗಢ: ದೇಶದಲ್ಲಿ ಕೆಂಪು ಸುಂದರಿ, ಕಿಚನ್ ಕ್ವೀನ್ ಟೊಮೆಟೋ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಈ ನಡುವೆ ಪಂಜಾಬ್‍ನ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ (Punjab Governor Banwarilal Purohit) ಅವರು ಟೊಮೆಟೋ ಬಳಕೆ ಮಾಡುವುದನ್ನು ನಿಲ್ಲಿಸುವಂತೆ ಕರೆ ನೀಡಿದ್ದಾರೆ.

    ಪ್ರಸ್ತುತ ಕೆ.ಜಿ ಟೊಮೇಟೊ ಬೆಲೆ (Tomato Price) 200 ರೂಪಾಯಿಯ ಗಡಿದಾಟಿದೆ. ಮುಂದಿನ ದಿನಗಳಲ್ಲಿ ಇದರ ಬೆಲೆ 300 ರೂ. ಗಡಿ ದಾಟುವ ಸಾಧ್ಯತೆಗಳಿವೆ ಎಂದು ವ್ಯಾಪರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಜ್ಯದ ಜನತೆಗೆ ಈ ಕರೆ ನೀಡಿದ್ದಾರೆ.

    ಕಳೆದ ಕೆಲವು ವಾರಗಳಿಂದ ಪಂಜಾಬ್ ಮತ್ತು ಚಂಡೀಗಢದಲ್ಲಿಯೂ ಟೊಮೆಟೋ ಬೆಲೆ ಭಾರೀ ಏರಿಕೆಯಾಗುತ್ತಿದ್ದು, ಜನ ಕಂಗಾಲಾಗಿದ್ದಾರೆ. ಯಾಕೆಂದರೆ ಅಡುಗೆಗೆ ಟೊಮೆಟೋ ಬೇಕೇ ಬೇಕಾಗುತ್ತದೆ. ಭಾರೀ ಮಳೆ ಹೀಗೆ ಹವಾಮಾನ ವೈಪರೀತ್ಯದಿಂದಾಗಿ ಕೆಲ ತಿಂಗಳುಗಳಿಂದ ಟೊಮೆಟೋ ಬೆಲೆಗಳು ನಾಶವಾಗುತ್ತಿದ್ದು, ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ಬೆಲೆ ದಿಢೀರ್ ಏರಿಕೆ ಕಂಡಿದೆ. ಇದನ್ನೂ ಓದಿ: ಟೊಮೆಟೋ ತಿನ್ನೋದನ್ನೇ ನಿಲ್ಲಿಸಿದ್ರೆ ಬೆಲೆ ಕಡಿಮೆಯಾಗುತ್ತೆ – ಯುಪಿ ಸಚಿವೆ ಸಲಹೆ

    ಸದ್ಯ ಈ ಪರಿಸ್ಥಿತಿಯು ಸಾಮಾನ್ಯ ಜನರ ಮೇಲೆ ಭಾರೀ ಹೊರೆಯನ್ನುಂಟು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು, ಗಗನಕ್ಕೇರುತ್ತಿರುವ ಟೊಮೆಟೋ ಬೆಲೆಗಳಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತಮ್ಮ ಮನೆಯಲ್ಲಿಯೂ ಟೊಮೆಟೋ ಬಳಸದಂತೆ ಹೇಳಿರುವುದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ಕೋಟಿ ಕುಟುಂಬಗಳಿಗೆ 566 ಕೋಟಿ ಅನ್ನಭಾಗ್ಯ ಹಣ ವರ್ಗಾವಣೆ- ಕೆ.ಎಚ್ ಮುನಿಯಪ್ಪ

    ಒಂದು ವಸ್ತುವಿನ ಬಳಕೆಯನ್ನು ನಿಲ್ಲಿಸುವುದು ಅಥವಾ ಕಡಿಮೆ ಮಾಡುವುದು ಅದರ ಮೇಲಿನ ಬೆಲೆಯ ಮೇಲೆ ಪರಿಣಾಮ ಬೀರುತ್ತದೆ. ಬೇಡಿಕೆಯನ್ನು ಕಡಿಮೆ ಮಾಡುವುದರಿಂದ ತನ್ನಿಂದ ತಾನೇ ಬೆಲೆ ಕಡಿಮೆಯಾಗುತ್ತದೆ. ಜನರು ಸದ್ಯಕ್ಕೆ ತಮ್ಮ ಮನೆಯಲ್ಲಿ ಟೊಮೆಟೋಗೆ ಪರ್ಯಾಯಗಳನ್ನು ಬಳಸುತ್ತಿದ್ದಾರೆ. ಈ ಮೂಲಕ ಟೊಮೆಟೋ ಬೆಲೆ ಏರಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತಿದ್ದಾರೆ ಎಂದು ನಾನು ಭಾವಿಸಿರುವುದಾಗಿ ರಾಜ್ಯಪಾಲರು ತಾವು ಹೊರಡಿಸಿರುವ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಣ್ಣೆಪ್ರಿಯರಿಗೆ ಕಿಕ್‌ ಕೊಟ್ಟ ಸರ್ಕಾರ

    ಎಣ್ಣೆಪ್ರಿಯರಿಗೆ ಕಿಕ್‌ ಕೊಟ್ಟ ಸರ್ಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 20 ಬಾಕ್ಸ್ ಟೊಮೆಟೋ 58 ಸಾವಿರಕ್ಕೆ ಮಾರಾಟ- ರೈತ ಫುಲ್ ಖುಷ್

    20 ಬಾಕ್ಸ್ ಟೊಮೆಟೋ 58 ಸಾವಿರಕ್ಕೆ ಮಾರಾಟ- ರೈತ ಫುಲ್ ಖುಷ್

    ಕೊಪ್ಪಳ: ಕಳೆದ ಕೆಲ ದಿನಗಳಿಂದ ಟೊಮೆಟೋ (Tomato Price) ಬೆಲೆಯಲ್ಲಿ ಏರಿಕೆ ಕಂಡಿದೆ. ಇದರಿಂದ ಗ್ರಾಹಕರು ಕಂಗಾಲಾದರೆ, ಕೊಪ್ಪಳದ ರೈತರೊಬ್ಬರಿಗೆ ಜಾಕ್‍ಪಾಟ್ ಹೊಡೆದಿದೆ.

    ಕೊಪ್ಪಳದ (Koppala Farmer) ಕನಕಗಿರಿ ಸಗಟು (ಸವಾಲು) ಮಾರುಕಟ್ಟೆಯಲ್ಲಿ ರೈತ ಶರಣಪ್ಪ ಕರಡಿ ಅವರು ತಾನು ಬೆಳೆದ ಟೊಮೆಟೋಗೆ ಬಂಗಾರದ ಬೆಲೆ ಪಡೆದಿದ್ದಾರೆ. ಟೊಮೆಟೋ ಬಾಕ್ಸ್ ಗೆ 2,900 ರೂ. ಮಾರಾಟ ಮಾಡಿದ್ದಾರೆ. ಇದನ್ನೂ ಓದಿ: ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು – ಇಂದು BJP ಕೇಂದ್ರ ನಾಯಕರು ಬೆಂಗ್ಳೂರಿಗೆ

    20 ಬಾಕ್ಸ್ ಟೊಮೆಟೋವನ್ನು ಶರಣಪ್ಪ ಅವರು ಮಾರುಕಟ್ಟೆಗೆ ತಂದಿದ್ದರು. ಇದೀಗ ಪ್ರತಿ ಬಾಕ್ಸ್ ಟೊಮೆಟೋ 2,900 ರೂ. ನಂತೆ ಮಾರಾಟವಾಗುತ್ತಿದೆ. ಈ ಮೂಲಕ 20 ಬಾಕ್ಸ್ ಟೊಮೆಟೋ ಒಟ್ಟು 58 ಸಾವಿರಕ್ಕೆ ಮಾರಾಟವಾಗಿದೆ. ಇದರಿಂದ ರೈತ ಫುಲ್ ಖುಷಿಯಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ

    ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ

    ನವದೆಹಲಿ: ಕಾರ್ಮಿಕರ ದಿನದಂದು ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ (Commercial Cylinder) ಬೆಲೆ (Price) ಭಾರೀ ಇಳಿಕೆ ಕಂಡಿದ್ದು, 171. 50 ರೂ. ಕಡಿತಗೊಂಡಿದೆ. ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ.

    ಈ ಹಿಂದೆ ಏಪ್ರಿಲ್‌ನಲ್ಲಿ ಸರ್ಕಾರವು ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ನ ಬೆಲೆಗಳನ್ನು 92 ರೂ. ಇಳಿಕೆ ಮಾಡಿತ್ತು. ಇದೀಗ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿದ್ದು, ಪುನಃ ಇಳಿಕೆಯಾಗಿದೆ. ಆದರೆ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್‌ ದರ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ತೂಕದ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ದರ ಕಳೆದ ತಿಂಗಳಿನಂತೆಯೇ ಇದೆ. ಇದನ್ನೂ ಓದಿ: ಮಧು ಬಂಗಾರಪ್ಪ ಗೆದ್ದರೆ, ಸೊರಬಕ್ಕೆ ಬಂದು ಕುಣಿದು ಕುಪ್ಪಳಿಸುತ್ತೇನೆ: ಶಿವಣ್ಣ

    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 1856.50 ರೂ. ಆಗಿದೆ. ಈ ಹಿಂದೆ 2,028 ರೂ. ಇತ್ತು. ಅದೇ ರೀತಿ ಮುಂಬೈನಲ್ಲಿ (Mumbai) ಈ ಮೊದಲು 1,980 ರೂ. ಇದ್ದು, ಇದೀಗ ಇದರ ಬೆಲೆ 1,808.50 ರೂ. ಆಗಿದೆ. ಚೆನ್ನೈನಲ್ಲಿ (Chennai) ವಾಣಿಜ್ಯ ಸಿಲಿಂಡರ್‌ನ ಬೆಲೆ ಈ ಮೊದಲು 2,192.50 ರೂ. ಇದ್ದು, ಇದೀಗ 2,021.50 ರೂ. ಆಗಿದೆ. ಇದನ್ನೂ ಓದಿ: ಹಳೇ ಮೈಸೂರು ಕ್ಷೇತ್ರಗಳನ್ನು ಕಬ್ಜ ಮಾಡಲು ಮೋದಿ ಪಣ – 25+ ಸ್ಥಾನ ಗೆಲ್ಲಲು ರಣತಂತ್ರ