Tag: ಬೆಲೆ

  • ಈ ದೇಶದಲ್ಲಿ ಸ್ಮಾರ್ಟ್‌ ಟಿವಿಗಿಂತ ಕಾಂಡೋಮ್ ಬೆಲೆ ದುಬಾರಿ – ಎಷ್ಟು ಅಂದ್ರೆ ನೀವು ಬೆಚ್ಚಿಬೀಳ್ತೀರಾ!

    ಈ ದೇಶದಲ್ಲಿ ಸ್ಮಾರ್ಟ್‌ ಟಿವಿಗಿಂತ ಕಾಂಡೋಮ್ ಬೆಲೆ ದುಬಾರಿ – ಎಷ್ಟು ಅಂದ್ರೆ ನೀವು ಬೆಚ್ಚಿಬೀಳ್ತೀರಾ!

    ವಾಷಿಂಗ್ಟನ್: ಅನೇಕ ದೇಶಗಳಲ್ಲಿ ಸರ್ಕಾರ ಕಾಂಡೋಮ್‍ಗಳನ್ನು ಉಚಿತವಾಗಿ ಪೂರೈಸುತ್ತದೆ. ಇನ್ನೂ ಅನೇಕ ದೇಶಗಳಲ್ಲಿ ಗರ್ಭಪಾತವನ್ನು ನಿಷೇಧಿಸಲಾಗಿದೆ. ಈ ವಿಚಾರವಾಗಿ ವಿವಿಧ ರೀತಿಯ ಕಾನೂನುಗಳಿವೆ. ಆದರೆ ಇತ್ತೀಚೆಗೆ ವೆನೆಜುವೆಲಾದಲ್ಲಿ ಕಾಂಡೋಮ್ ಬೆಲೆ ವಿಶ್ವಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಈ ದೇಶದಲ್ಲಿ ಒಂದು ಪ್ಯಾಕ್‌ ಕಾಂಡೋಮ್ ಬೆಲೆ ಸುಮಾರು 60,000 ರೂಪಾಯಿ ಎಂದು ತಿಳಿದು ಬಂದಿದೆ.

    ಕಾಂಡೋಮ್‍ಗಳಲ್ಲಿ ವಿವಿಧ ರೀತಿಯ ಹೆಸರಾಂತ ದುಬಾರಿ ಬ್ರ್ಯಾಂಡ್‍ಗಳಿದೆ. ಎಂದಾದರೂ ಕಾಂಡೋಮ್ ಬೆಲೆ 60,000 ರೂಪಾಯಿ ಎಂದು ನೀವು ಕೇಳಿದ್ದೀರಾ? ಆದರೆ ವೆನೆಜುವೆಲಾದ ಸಾಮಾನ್ಯ ಕಾಂಡೋಮ್‍ಗಳ ಬೆಲೆಯು ಪ್ರತಿಷ್ಠಿತ ಬ್ರ್ಯಾಂಡ್‍ನ ಟಿವಿ ಬೆಲೆಗಿಂತಲೂ ಹೆಚ್ಚಾಗಿದೆ. ಕಾಂಡೋಮ್‍ಗೆ ನೀಡುವ ಬೆಲೆಗೆ ಟಿವಿಯನ್ನೇ ಖರೀದಿಸಬಹುದು.

    ವೆನೆಜುವೆಲಾದ ಅಂಗಡಿಯೊಂದರಲ್ಲಿ ಒಂದು ಪ್ಯಾಕ್‌ ಕಾಂಡೋಮ್ 60,000 ರೂ.ಗೆ ಮಾರಾಟವಾಗುತ್ತಿದೆ. ಪ್ರಪಂಚಾದ್ಯಂತ ಈ ಸುದ್ದಿ ಜನರನ್ನು ದಿಗ್ಭ್ರಮೆಗೊಳಿಸಿದೆ. ಇದೀಗ ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ. ಇದನ್ನೂ ಓದಿ: ಮನೆಗೆ ಕರೆಸಿ ನವಜೋಡಿಯನ್ನು ಹತ್ಯೆ ಮಾಡಿದ ನವವಧು ಪೋಷಕರು

    ವೆನೆಜುವೆಲಾ ಲ್ಯಾಟಿನ್ ಅಮೆರಿಕದ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದ್ದು, ಈ ದೇಶದಲ್ಲಿ ಗರ್ಭಪಾತವನ್ನು ನಿಷೇಧಿಸಲಾಗಿದೆ. ಯುಎನ್‍ನ ಸ್ಟೇಟ್ ಆಫ್ ವರ್ಲ್ಡ್ ಪಾಪ್ಯುಲೇಶನ್ ರಿಪೋರ್ಟ್ 2015ರ ಪ್ರಕಾರ, ವೆನೆಜುವೆಲಾ ಅತಿ ಹೆಚ್ಚು ಅಪ್ರಾಪ್ತರು ಗರ್ಭಧಾರಣೆ ಮಾಡಿರುವ ಪ್ರಕರಣಗಳು ವರದಿಯಾಗಿದೆ.

    ವೆನೆಜುವೆಲಾದಂತಹ ಇತರೆ ದೇಶಗಳಲ್ಲಿ ಅಪ್ರಾಪ್ತರು ಹೆಚ್ಚಾಗಿ ಗರ್ಭಧಾರಣೆ ಮಾಡುತ್ತಿದ್ದಾರೆ. ಇದೇ ವೇಳೆ ಗರ್ಭಪಾತ ಮಾಡಿಸುವುದರ ಮೇಲೆ ನಿಷೇಧ ಹೇರಲಾಗಿದ್ದು, ಕಾಂಡೋಮ್‍ಗಳ ಬೆಲೆಯನ್ನು ಗಗನಕ್ಕೇರಿಸಲಾಗಿದೆ. ಇದರಿಂದ ಆ ದೇಶದ ಜನ ಸಾಮಾನ್ಯರು ತಲೆ ಮೇಲೆ ಕೈ ಹೊತ್ತುಕೊಂಡಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಸರ್ಕಾರ ಸರಿಯಾದ ಕ್ರಮ ಕೈಗೊಂಡಿಲ್ಲ. ಇದನ್ನೂ ಓದಿ: ಮೊದಲಬಾರಿಗೆ ಟ್ವಿಟ್ಟರ್ ಉದ್ಯೋಗಿಗಳ ಜೊತೆ ಮಾತನಾಡಲಿದ್ದಾರೆ ಮಸ್ಕ್

  • ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಇಳಿಕೆ

    ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಇಳಿಕೆ

    ನವದೆಹಲಿ: ತೈಲ ಮಾರ್ಕೆಟಿಂಗ್ ಕಂಪನಿಗಳು 1 ಜೂನ್ ರಂದು 19 ಕೆಜಿ ಕಮರ್ಷಿಯಲ್ ಸಿಲಿಂಡರ್‌ ಬೆಲೆಗಳನ್ನು ಕಡಿಮೆ ಮಾಡುವುದಾಗಿ ಘೋಷಿಸಿದೆ.

    ಇಂದಿನಿಂದ 19 ಕೆಜಿಯ ಕಮರ್ಷಿಯಲ್ ಸಿಲಿಂಡರ್ ಬೆಲೆ 135 ರೂ. ಇಳಿಕೆಯಾಗಿದೆ. 19 ಕೆಜಿಯ ಕಮರ್ಷಿಯಲ್ ಸಿಲಿಂಡರ್‌ನ ಬೆಲೆ ದೆಹಲಿಯಲ್ಲಿ 2,354 ರೂ.ಗೆ ಇತ್ತು, ಆದರೆ ಈಗ 2,219 ರೂ.ಗೆ ಇಳಿಕೆಯಾಗಿದೆ. ಇದನ್ನೂ ಓದಿ:  ರಾಜ್ಯಕ್ಕೆ ಮುಂಗಾರು ಪ್ರವೇಶ – ಮುಂದಿನ 3, 4 ದಿನ ಭಾರೀ ಮಳೆ ಸಾಧ್ಯತೆ

    ಕೋಲ್ಕತ್ತಾದಲ್ಲಿ 2,454 ರೂ. ಇದ್ದರೆ ಈಗ 2,322 ರೂ.ಗೆ ಇಳಿದಿದೆ. ಮುಂಬೈನಲ್ಲಿ 2,306 ರೂ., ಚೆನ್ನೈನಲ್ಲಿ 2,507 ರೂ. ಇತ್ತು. ಈಗ ಇಲ್ಲಿ ಅನುಕ್ರವಮವಾಗಿ 2,171.50 ರೂ., 2,373 ರೂ.ಗೆ ಇಳಿಕೆಯಾಗಿದೆ. ಇಂದಿನಿಂದಲೇ ಈ ಪರಿಷ್ಕೃತ ಬೆಲೆ ಜಾರಿಯಾಗಲಿದೆ ಎಂದು ತೈಲ ಮಾರ್ಕೆಟಿಂಗ್ ಕಂಪನಿಗಳು ತಿಳಿಸಿದೆ.

    LPG

    ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ.

    ಮೇ 19 ರಂದು ಭಾರತದಲ್ಲಿ ಗೃಹೋಪಯೋಗಿ ಮತ್ತು ಕಮರ್ಷಿಯಲ್ ಎಲ್‍ಪಿಜಿ ಸಿಲಿಂಡರ್‍ಗಳ ಬೆಲೆಯನ್ನು ಹೆಚ್ಚಿಸಲಾಗಿತು. ಒಂದೇ ತಿಂಗಳಲ್ಲಿ ಎರಡು ಬಾರಿ ಅಡುಗೆ ತೈಲದ ಬೆಲೆ ಹೆಚ್ಚಿಸಲಾಗಿತ್ತು. 14 ಕೆಜಿ ಗೃಹಬಳಕೆಯ ಸಿಲಿಂಡರ್‍ನ ದರವನ್ನು 3.50 ರೂ. ಹೆಚ್ಚಿಸಲಾಗಿತ್ತು ಮತ್ತು 19 ಕೆಜಿಯ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು 8 ರೂ. ಹೆಚ್ಚಿಸಲಾಗಿತ್ತು. ಇದನ್ನೂ ಓದಿ: ಖಿನ್ನತೆಗೆ ಒಳಗಾಗಿ ಮಗು ಸಮೇತ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

  • ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ – 1,000 ರೂ. ದಾಟಿದ LPG ಸಿಲಿಂಡರ್ ದರ

    ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ – 1,000 ರೂ. ದಾಟಿದ LPG ಸಿಲಿಂಡರ್ ದರ

    ನವದೆಹಲಿ: ಜನ ಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ ಬಿದ್ದಿದೆ. ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಮತ್ತೊಮ್ಮೆ ಏರಿಕೆಯಾಗಿದ್ದು, ಸಿಲಿಂಡರ್ ಬೆಲೆ 1,000ರೂ. ದಾಟಿದೆ. ಅಲ್ಲದೇ ವಾಣಿಜ್ಯ ಎಲ್‍ಪಿಜಿ ಗ್ಯಾಸ್ ದರ ಕೂಡ ಏರಿಕೆಯಾಗಿದೆ.

    ಗುರುವಾರದಿಂದ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 3 ರೂಪಾಯಿ 50 ಪೈಸೆ ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆ 8 ರೂಪಾಯಿಯಷ್ಟಾಗಿದೆ. ಇಂದಿನಿಂದ ದೆಹಲಿ ಮತ್ತು ಮುಂಬೈಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್‌ನ ಬೆಲೆ 1,003 ರೂ. ಆಗಿದ್ದು, ಕೋಲ್ಕತ್ತಾದಲ್ಲಿ 1,029 ರೂ. ಮತ್ತು ಚೆನ್ನೈನಲ್ಲಿ 1,018.5 ರೂ. ಆಗಿದೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – 9 ಮಂದಿ ಸಾವು, ಸಂಕಷ್ಟದಲ್ಲಿ ಲಕ್ಷಾಂತರ ಜನ

    ಈ ಮುನ್ನ ಮೇ 7ರಂದು ಸಿಲಿಂಡರ್ ಬೆಲೆ 50 ರೂ. ಏರಿಕೆಯಾಗಿತ್ತು. ಗೃಹಬಳಕೆಯ ಸಿಲಿಂಡರ್ ಜೊತೆಗೆ ವಾಣಿಜ್ಯ ಸಿಲಿಂಡರ್ ಕೂಡ ದುಬಾರಿಯಾಗಿತ್ತು. ಇದನ್ನೂ ಓದಿ: ಮಹಾಮಳೆಗೆ ನಲುಗಿದ ಬೆಂಗಳೂರು – ಇಂದು ಸಿಎಂ ಸಿಟಿ ರೌಂಡ್ಸ್

  • ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಮೇಲೆ ಮಸಿ ಎರಚಿದ ಕೈ ಕಾರ್ಯಕರ್ತರು

    ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಮೇಲೆ ಮಸಿ ಎರಚಿದ ಕೈ ಕಾರ್ಯಕರ್ತರು

    ಭುವನೇಶ್ವರ್: ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಸಿ ಎರಚಿದ ಘಟನೆ ಒಡಿಶಾದಲ್ಲಿ ನಡೆದಿದೆ.

    ಒಡಿಶಾದ ಪುರಿಯ ಮಾರ್ಕೆಟ್ ಸ್ಕ್ವೇರ್ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಕೇಂದ್ರ ಸಚಿವರು ನಗರದ ಶ್ರೀಮಂದಿರದಲ್ಲಿ ತ್ರಿಮೂರ್ತಿಗಳ ದರ್ಶನ ಪಡೆದು ಹಿಂದಿರುಗುತ್ತಿದ್ದರು. ಈ ವೇಳೆ ಪೆಟ್ರೋಲ್, ಡೀಸೆಲ್ ಮತ್ತು ಇತರ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವುದನ್ನು ಖಂಡಿಸಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‍ಎಸ್‍ಯುಐ) ಕಾರ್ಯಕರ್ತರು ಅವರ ವಾಹನಕ್ಕೆ ಕಪ್ಪು ಮಸಿ ಎಸೆದಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆ

    ಈ ಕುರಿತು ಎನ್‍ಎಸ್‍ಯುಐ ಒಡಿಶಾ ಅಧ್ಯಕ್ಷ ಯಾಶೀರ್ ನವಾಜ್ ಮಾತನಾಡಿ, ಪ್ರತಿಯೊಂದು ಕುಟುಂಬವು ಹಣದುಬ್ಬರ ಮತ್ತು ಎಲ್‍ಪಿಜಿ ಸಿಲಿಂಡರ್‌ಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರೊಚ್ಚಿಗೆದ್ದಿವೆ. ಕುಟುಂಬ ನಿರ್ವಹಣೆಯ ವೆಚ್ಚಗಳು ನಿರಂತರವಾಗಿ ಹೆಚ್ಚುತ್ತಿರುವಾಗ ಆದಾಯವು ಕುಂಠಿತವಾಗಿದೆ. ಬಿಜೆಪಿ ಇತರ ಸಂಬಂಧವಿಲ್ಲದ ವಿಷಯಗಳ ಮೂಲಕ ಜನಸಾಮಾನ್ಯರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಪರಿಸರವಾದಿಗಳ ತೀವ್ರ ವಿರೋಧ

    ಎನ್‍ಎಸ್‍ಯುಐ ಕಾರ್ಯಕರ್ತರು ಒಡಿಶಾಗೆ ಭೇಟಿ ನೀಡುವ ಯಾವುದೇ ಕೇಂದ್ರ ಸಚಿವರನ್ನು ಗುರಿಯಾಗಿಸಿಕೊಂಡಿದ್ದಾರೆ. ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ವಿರುದ್ಧ ಪ್ರತಿಭಟಿಸುತ್ತಾರೆ ಎಂದು ಹೇಳಿದರು.

    ಇದಕ್ಕೂ ಮುನ್ನ, ಏರುತ್ತಿರುವ ಹಣದುಬ್ಬರದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಅವರ ಮೇಲೆಯೂ ಸಹ ಕಾಂಗ್ರೆಸ್‍ನ ವಿದ್ಯಾರ್ಥಿ ಘಟಕದ ಕಾರ್ಯಕರ್ತರು ಕಪ್ಪು ಮಸಿ ಎಸೆದು, ಕಪ್ಪು ಬಾವುಟವನ್ನು ಎಸೆದಿದ್ದರು.

  • ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50ರೂ. ಏರಿಕೆ

    ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50ರೂ. ಏರಿಕೆ

    ನವದೆಹಲಿ: ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿದೆ.

    ಈ ಹಿಂದೆ ಮಾರ್ಚ್ 22ರಂದು ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯು 50ರೂ. ಹೆಚ್ಚಳವಾಗಿತ್ತು. ಏಪ್ರಿಲ್‍ನಲ್ಲಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರಲಿಲ್ಲ. ಆದರೆ ಇದೀಗ ನವದೆಹಲಿಯಲ್ಲಿ 949.50ರೂ. ಇದ್ದ 14.2 ಕೆ.ಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆ 999.50ರೂ. ಆಗಿದೆ. ಇದನ್ನೂ ಓದಿ: ಪಡಿತರ ಅಕ್ಕಿ ಅಕ್ರಮ ಸಾಗಾಟ – ಲಕ್ಷಾಂತರ ಮೌಲ್ಯದ ಅಕ್ಕಿ ಜಪ್ತಿ

    ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಮೇ 1 ರಂದು, ವಾಣಿಜ್ಯ ಬಳಕೆಯ 19 ಕೆಜಿ ಎಲ್‍ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ 102.50ರೂ.ಗೆ ಹೆಚ್ಚಳ ಮಾಡುವ ಮೂಲಕ 2,355.50ರೂ.ಗೆ ಏರಿಸಲಾಗಿತ್ತು. ಅಲ್ಲದೆ, 5 ಕೆ.ಜಿ ಸಿಲಿಂಡರ್‌ನ ಬೆಲೆಯನ್ನು 655ರೂ.ಗೆ ಏರಿಸಲಾಗಿತ್ತು. ಇದನ್ನೂ ಓದಿ: ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

    ಏಪ್ರಿಲ್ 1 ರಂದು, 19 ಕೆ.ಜಿ ವಾಣಿಜ್ಯ ಬಳಕೆಯ ಎಲ್‍ಪಿಜಿ ಪ್ರತಿ ಸಿಲಿಂಡರ್ ಬೆಲೆಯಲ್ಲಿ 250ರೂ. ಏರಿಕೆ ಮಾಡಲಾಗಿತ್ತು. ಮಾರ್ಚ್ 1 ರಂದು ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 105ರೂ. ರಷ್ಟು ಹೆಚ್ಚಳವಾಗಿತ್ತು.

  • ಜೂನ್‌ ಆರಂಭದಲ್ಲಿ 5ಜಿ ಸ್ಪೆಕ್ಟ್ರಂ ಹರಾಜು: ಅಶ್ವಿನಿ ವೈಷ್ಣವ್‌

    ಜೂನ್‌ ಆರಂಭದಲ್ಲಿ 5ಜಿ ಸ್ಪೆಕ್ಟ್ರಂ ಹರಾಜು: ಅಶ್ವಿನಿ ವೈಷ್ಣವ್‌

    ನವದೆಹಲಿ: ಜೂನ್ ಆರಂಭದಲ್ಲಿ ಸರ್ಕಾರವು 5ಜಿ ಸ್ಪೆಕ್ಟ್ರಂ (ತರಂಗಾಂತರ) ಹರಾಜನ್ನು ನಡೆಸುವ ಸಾಧ್ಯತೆಯಿದೆ ಎಂದು ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ.

    ಟೆಲಿಕಾಂ ಇಲಾಖೆ ನಿರೀಕ್ಷಿತ ಟೈಮ್‌ಲೈನ್‌ಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಸ್ಪೆಕ್ಟ್ರಂ ಬೆಲೆಯ ಬಗ್ಗೆ ಉದ್ಯಮದ ಕಳವಳಗಳನ್ನು ಪರಿಹರಿಸಲು ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಕೆಲವರ ಹಿತಾಸಕ್ತಿಗೆ ಸ್ಪೆಕ್ಟ್ರಂ ಹರಾಜು ಪ್ರಕ್ರಿಯೆ ವಿಳಂಬ – ಕೇಂದ್ರಕ್ಕೆ ಜಿಯೋ ಪತ್ರ

    ಭಾರತೀಯ ದೂರ ಸಂರ್ಪಕ ಪ್ರಾಧಿಕಾರ(ಟ್ರಾಯ್‌) ಮೆಗಾ ಹರಾಜು ಯೋಜನೆಯನ್ನು ರೂಪಿಸಿದ್ದು, ಎಲ್ಲ ಬ್ಯಾಂಡ್‌ಗಳ ಸ್ಪೆಕ್ಟ್ರಂಗಳ ಮೂಲ ಬೆಲೆ 7.5 ಲಕ್ಷ ಕೋಟಿ ರೂ. ನಿಗದಿ ಪಡಿಸಿದೆ. ಇದು 30 ವರ್ಷ ಅವಧಿಗೆ ಇರಲಿದೆ ಎಂದು ತಿಳಿಸಿದರು.

    ಜಾಗತಿಕ ಮಾನದಂಡಗಳಿಗಿಂತ ಸ್ಪೆಕ್ಟ್ರಂ ಬೆಲೆ ದುಬಾರಿಯಾಗಿದೆ ಎಂದು ಟೆಲಿಕಾಂ ಕಂಪನಿಗಳು ಹೇಳಿದ ಹಿನ್ನೆಲೆಯಲ್ಲಿ ಟ್ರಾಯ್‌ ಸ್ಪೆಕ್ಟ್ರಂ ಬೆಲೆಯನ್ನು ಕಳೆದ ಬೆಲೆಗೆ ಹೋಲಿಸಿದರೆ ಶೇ.39 ರಷ್ಟು ಕಡಿಮೆ ಮಾಡಿದೆ.

  • ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ: ಶಾಂತಕುಮಾರ್

    ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ: ಶಾಂತಕುಮಾರ್

    ಬೆಳಗಾವಿ: ʼಕನಿಷ್ಟ ಬೆಂಬಲ ಬೆಲೆ ರೈತರಿಗೆ ಏಕೆ ಬೇಕು?ʼ ಎಂಬ ವಿಚಾರವಾಗಿ ಚರ್ಚಿಸಲು ಏ.29ರಂದು ಬೆಂಗಳೂರಿನಲ್ಲಿ ಚಿಂತನ ಮಂಥನ ಸಂವಾದ ಹಮ್ಮಿಕೊಳ್ಳಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರ ಶಾಂತಕುಮಾರ್ ಹೇಳಿದರು.

    ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ರೈತರ ಉತ್ಪನ್ನಗಳಿಗೆ ಎಂಎಸ್‍ಪಿ ನಿಗದಿಗೊಳಿಸದೇ, ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಈ ವಿಷಯವಾಗಿ ಕೃಷಿ ಪರಿಣಿತರು ರೈತ ಮುಖಂಡರ ನೇತೃತ್ವದಲ್ಲಿ ಸಂವಾದ ನಡೆಸಲಾಗುವುದು. ರೈತರಿಗೆ ಎಂ.ಎಸ್.ಪಿ ಅಗತ್ಯದ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು. ಇದನ್ನೂ ಓದಿ: ಲವ್ ಜಿಹಾದ್ ಬದಲಿಗೆ `ಲವ್ ಕೇಸರಿ’ ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ

    BRIBE

    ಕಬ್ಬಿನಿಂದ ಬರುವ ಎಥೆನಾಲ್ ಉತ್ಪಾದನೆ, ಆದಾಯ ನೀತಿ ನಿಯಮಗಳ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಸಮಿತಿ ರಚಿಸಿದೆ. ಈ ಸಮಿತಿ ಶೀಘ್ರದಲ್ಲಿಯೇ ಉತ್ತರ ಪ್ರದೇಶದ ಲಕ್ನೋ ಹಾಗೂ ಕಾನ್ಪುರದ ಕಬ್ಬು ಸಂಶೋಧನಾ ಕೇಂದ್ರ ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಲವ್ ಕೇಸರಿಗೆ ಕರೆಕೊಟ್ಟು ಪ್ರಚೋದನಕಾರಿ ಭಾಷಣ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    ರಾಜ್ಯದಲ್ಲಿ 70 ಸಕ್ಕರೆ ಕಾರ್ಖಾನೆಗಳಿವೆ. ಕಬ್ಬು ಪೂರೈಸಿದ ರೈತರಿಗೆ 2022ರ ಫೆಬ್ರವರಿಯಿಂದ ಈವರೆಗೆ 3,500 ಕೋಟಿ ರೂ. ಬಿಲ್ ಬರಬೇಕಿದೆ. ಅದಕ್ಕೆ ಶೇ.15 ಬಡ್ಡಿ ಸೇರಿಸಿ ಬಿಲ್ ಪಾವತಿಸುವಂತೆ ಸರ್ಕಾರ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

    ರಾಮದುರ್ಗ ತಾಲೂಕಿನಲ್ಲಿ ವೀರಭದ್ರೇಶ್ವರ ನೀರಾವರಿ ಯೋಜನೆ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ಯೋಜನೆಗೆ ಭೂಮಿ ನೀಡಿರುವ ರೈತರಿಗೆ ಪರಿಹಾರ ನೀಡಿಲ್ಲ. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು. ರೈತರಿಗೆ ಪರಿಹಾರ ಒದಗಿಸಿ, ಕಾಮಗಾರಿಗೆ ವೇಗ ನೀಡಬೇಕು. ಇಲ್ಲದಿದ್ದರೆ ಮೇ ಮೊದಲ ವಾರ ಸಾಲಹಳ್ಳಿ ಬಳಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

  • ಹಣ್ಣುಗಳ ರಾಜನಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್- ಈ ಬಾರಿ ಮಾವಿಗೆ ದುಪ್ಪಟ್ಟು ಬೆಲೆ

    ಹಣ್ಣುಗಳ ರಾಜನಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್- ಈ ಬಾರಿ ಮಾವಿಗೆ ದುಪ್ಪಟ್ಟು ಬೆಲೆ

    ಬೆಂಗಳೂರು: ಬೇಸಿಗೆ ಬಂದರೆ ಸಾಕು ಮಾವುಗಳದೇ ಸಾಮ್ರಾಜ್ಯ. ಮ್ಯಾಂಗೋ ಕೊಳ್ಳದವರೇ ಇಲ್ಲ. ಮಾವಿನ ಹಣ್ಣಿನ ರುಚಿ ಸವಿಬೇಕು ಅನ್ನೋರಿಗೆ ಈ ಬಾರಿ ಬೆಲೆ ಏರಿಕೆಯ ಬಿಸಿ ತಟ್ಟಿದೆ.

    ಯುಗಾದಿ ಬಳಿಕ ಎಲ್ಲಿ ನೋಡಿದ್ರೂ ಘಮಘಮಿಸುವ ಮಾವಿನ ಹಣ್ಣುಗಳದ್ದೇ ಕಾರುಬಾರು. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ ಮಾವು ಬೆಳೆ ನಿರೀಕ್ಷೆಗಿಂತ ಕಡಿಮೆ ಫಸಲು ಬಂದಿದೆ. ಏಪ್ರಿಲ್ ಅಂತ್ಯಕ್ಕೆ ಫಸಲು ಕೈಗೆ ಬರುವ ನಿರೀಕ್ಷೆ ಇದೆ. ಹೀಗಾಗಿ ಕೇವಲ 40% ರಿಂದ 50% ಇಳುವರಿ ಬರಬಹುದು ಅಂತಾ ಮಾವು ನಿಗಮದ ತಾಂತ್ರಿಕ ಸಮಿತಿ ಊಹಿಸಿದೆ. ಈ ವರ್ಷ ಕರ್ನಾಟಕದಲ್ಲಿ ಕೇವಲ 8 ಲಕ್ಷ ಮೆಟ್ರಿಕ್ ಟನ್ ಮಾವು ಬರೋ ಅಂದಾಜು ಮಾಡಲಾಗಿದೆ. ಮೇನಲ್ಲಿ ಹೆಚ್ಚಿನ ಮಾವು ಬರಬಹುದು. ಮಾವಿನ ಇಳುವರಿ ಕಡಿಮೆಯಾಗುವುದರಿಂದ ರೇಟ್ ಸಹ ಹೆಚ್ಚಾಗಲಿದೆ ಅಂತಾ ಹೇಳಲಾಗುತ್ತಿದೆ.

    ಇನ್ನೂ ಈ ಬಾರಿ ಮಾವಿನ ಹಣ್ಣಿನ ಬೆಲೆ ದುಪ್ಪಟ್ಟು ಜಾಸ್ತಿ ಆಗಿದೆ. ಕಳೆದ ವರ್ಷ ಕೆಜಿಗೆ 150 ರಿಂದ 200 ರೂಪಾಯಿಗೆ ಸಿಗುತ್ತಿದ್ದ ಮಾವು ಡಬಲ್ ಬೆಲೆ ಆಗಿದೆ. ಬಾದಾಮಿ ಕೆಜಿಗೆ 300 ರೂಪಾಯಿ, ರಸಪೂರಿ ಕೆ.ಜಿಗೆ 250 ರೂಪಾಯಿ, ಹಿಮಪಾಶ್ ಕೆಜಿಗೆ 300 ರೂಪಾಯಿ, ಬೈಗನಪಲ್ಲಿ 200 ರೂಪಾಯಿ ಆಗಿದೆ. ಈ ಬಾರಿ ಮಾವು ದುಬಾರಿಯಾಗಿರೋದಕ್ಕೆ ಗ್ರಾಹಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

    ಒಟ್ಟಿನಲ್ಲಿ ಈ ಬಾರಿ ಹಣ್ಣುಗಳ ರಾಜ ಮಾವಿನ ಬೆಲೆ ಗಗನಕ್ಕೇರಿದ್ದು. ಮಾವು ಪ್ರಿಯರಲ್ಲಿ ನಿರಾಶೆ ಮೂಡಿಸಿದೆ. ಇದನ್ನೂ ಓದಿ: ವಿಜೃಂಭಣೆಯಿಂದ ಜರುಗಿದ ಬೆಂಗ್ಳೂರು ಕರಗ- ಮೆರವಣಿಗೆಯಲ್ಲಿ ಅಪ್ಪುಗೆ ಜೈಕಾರ

  • 14.23 ಕೋಟಿ ರೂಪಾಯಿಗೆ ಹರಾಜಾದ ಒಂಟೆ

    14.23 ಕೋಟಿ ರೂಪಾಯಿಗೆ ಹರಾಜಾದ ಒಂಟೆ

    ರಿಯಾದ್: ವ್ಯಕ್ತಿಯೊಬ್ಬರು ವಿಶ್ವದ ಅತ್ಯಂತ ದುಬಾರಿ ಬೆಲೆಯ ಒಂಟೆಯನ್ನು ಖರೀದಿ ಮಾಡಿದ್ದಾರೆ. ಈ ಒಂಟೆಯೂ 7 ಮಿಲಿಯನ್ ಅಂದರೆ ಸುಮಾರು 14.23 ಕೋಟಿ ರೂಪಾಯಿಗೆ ಮಾರಾಟವಾಗಿದೆ.

    ಒಂಟೆಯ ವಿಶೇಷತೆ: ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ವಿಶೇಷ ಸೌಂದರ್ಯವನ್ನು ಹೊಂದಿದೆ. ಜಗತ್ತಿನಲ್ಲಿ ಈ ಜಾತಿಯ ಒಂಟೆಗಳು ಬಹಳ ಕಡಿಮೆ. ಸೌದಿ ಅರೇಬಿಯಾದಲ್ಲಿ ಜಗತ್ತಿನ ಅತಿ ದೊಡ್ಡ ಒಂಟೆ ಮೇಳವೂ ನಡೆಯುತ್ತದೆ.

    ಸೌದಿ ಅರೇಬಿಯಾದಲ್ಲಿ ಈ ಒಂಟೆಗಾಗಿ ಸಾರ್ವಜನಿಕ ಹರಾಜು ಆಯೋಜಿಸಲಾಗಿತ್ತು. ಹರಾಜಿನ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ, ಒಂಟೆಯನ್ನು ಚೌಕಾಕಾರದ ಕಬ್ಬಿಣದ ಮಧ್ಯೆ ಇರಿಸಿರುವುದನ್ನು ನೀವು ನೋಡಬಹುದು. ಇದನ್ನೂ ಓದಿ: ನಾವು ಪರಿಶುದ್ಧವಾಗಿದ್ದಾಗ ಯಾರು ಏನು ಮಾಡೋದಕ್ಕೆ ಆಗೋದಿಲ್ಲ: ಹೆಚ್‍ಡಿಕೆ

    ಒಂಟೆಯ ಆರಂಭಿಕ ಬಿಡ್ (5 ಮಿಲಿಯನ್ ರಿಯಾದ್) ಸುಮಾರು 10.16 ಕೋಟಿ ರೂಪಾಯಿ ಆಗಿದೆ. ನಂತರ ಒಂಟೆ 14.23 ಕೋಟಿ (7 ಮಿಲಿಯನ್ ಸೌದಿ ರಿಯಾಲ್‍ಗಳಲ್ಲಿ)ಗೆ ಹರಾಜು ಹಾಕಲಾಗಿದೆ. ಇಷ್ಟು ಹೆಚ್ಚು ಬಿಡ್ ಮಾಡಿ ಒಂಟೆ ಖರೀದಿಸಿದವರ ಗುರುತು ಬಹಿರಂಗವಾಗಿಲ್ಲ. ಆದರೆ ಈ ದುಬಾರಿ ಬೆಲೆಯ ಒಂಟೆ ಮಾತ್ರ ಸಖತ್ ಸುದ್ದಿಯಾಗುತ್ತಲಿದೆ.

  • ಟೊಮೆಟೊ ಬೆಲೆ ಭಾರೀ ಕುಸಿತ – ಬೆಳೆಗಾರರಿಗೆ ಎದುರಾಗಿದೆ ಸಂಕಷ್ಟ

    ಟೊಮೆಟೊ ಬೆಲೆ ಭಾರೀ ಕುಸಿತ – ಬೆಳೆಗಾರರಿಗೆ ಎದುರಾಗಿದೆ ಸಂಕಷ್ಟ

    – 1 ರೂ. ಗಿಂತಲೂ ಕಡಿಮೆ ಬೆಲೆಗೆ 1 ಕೆಜಿ ಟೊಮೆಟೊ ಬಿಕರಿ
    – ಲಕ್ಷ ಲಕ್ಷ ಖರ್ಚು ಮಾಡಿ ಟೊಮೆಟೊ ಬೆಳೆದ ರೈತರಿಗೆ ಸಂಕಷ್ಟ
    – 15 ಕೆಜಿ ಯ ಟೊಮೆಟೊ ಬಾಕ್ಸ್ 10, 20, 30 ರೂ.ಗೆ ಬಿಕರಿ

    ಚಿಕ್ಕಬಳ್ಳಾಪುರ: ಒಂದು ಕಡೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು ಜನಸಾಮಾನ್ಯರು ಹೈರಾಣಾಗುವಂತಾಗಿದೆ. ಮತ್ತೊಂದೆಡೆ ಲಕ್ಷ ಲಕ್ಷ ಖರ್ಚು ಮಾಡಿ ರೈತರು ಬೆಳೆದ ಬೆಳೆಗಳ ಬೆಲೆ ಪಾತಾಳಕ್ಕಿಳಿಯುವಂತಾಗಿದೆ.

    ಲಕ್ಷ ಲಕ್ಷ ಖರ್ಚು ಮಾಡಿ ರೈತ ಬೆಳೆದ ಟೊಮೆಟೊ ಬೆಲೆ ಈಗ ಪಾತಾಳಕ್ಕಿಳಿದಿದ್ದು, ಅನ್ನದಾತ ಅಕ್ಷರಶಃ ನಲುಗಿ ಹೋಗುವಂತಾಗಿದೆ. ಒಂದು ಕೆಜಿ ಟೊಮೆಟೊ 1 ರೂ.ಗೂ ಕಡಿಮೆ ದರಕ್ಕೆ ಬಿಕರಿಯಾಗುತ್ತಿದ್ದು, ರೈತ ಸಾಲದ ಶೂಲಕ್ಕೆ ಸಿಲುಕುವಂತಾಗಿ ದಿಕ್ಕು ತೋಚದಂತಾಗಿದ್ದಾನೆ. ಇದನ್ನೂ ಓದಿ: ಮಲ್ಲೇಶ್ವರಂ 18ನೇ ಅಡ್ಡರಸ್ತೆ ಮೈದಾನದಲ್ಲಿ ವಾಕಿಂಗ್ ಪಥ ನಿರ್ಮಾಣ ಇಲ್ಲ: ಅಶ್ವತ್ಥನಾರಾಯಣ

    ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಟೊಮೆಟೊ ಮಾರುಕಟ್ಟೆಗೆ ರೈತರೇನೋ ಹಗಲು ರಾತ್ರಿ ಎನ್ನದೇ ಕಷ್ಟಪಟ್ಟು ಬಂಪರ್ ಟೊಮೆಟೊ ಬೆಳೆದು ಲೋಡ್ ಗಟ್ಟಲೇ ಸಾವಿರಾರು ಟನ್ ಟೊಮೆಟೊವನ್ನು ಮಾರುಕಟ್ಟೆಗೆ ಹೊತ್ತು ತರುತ್ತಾರೆ. ಆದರೆ ಈಗ ಚಿಂತಾಮಣಿ ಟೊಮೆಟೊ ಮಾರುಕಟ್ಟೆಯಲ್ಲಿ ಟೊಮೆಟೊ ಖರೀದಿಸುವವರೇ ಕಡಿಮೆಯಾಗಿದ್ದಾರೆ.

    ಟೊಮೆಟೊ ಖರೀದಿ ಮಾಡಿದರೂ 15 ಕೆಜಿಯ ಬಾಕ್ಸ್ 10 ರೂಪಾಯಿ, 20 ರೂಪಾಯಿ, ಹೆಚ್ಚೆಂದರೆ 30 ರೂಪಾಯಿಗೆ ಬಿಕರಿಯಾಗುತ್ತಿದೆ. ಇದರಿಂದ 1 ಕೆಜಿ ಟೊಮೆಟೊ 1 ರೂ. ಗಿಂತಲೂ ಕಡಿಮೆ ಬೆಲೆಗೆ ಬಿಕರಿಯಾಗುತ್ತಿದ್ದು, ಟೊಮೆಟೊ ಬೆಳೆದ ರೈತರು ಬೀದಿಪಾಲಾಗುವಂತಾಗಿದೆ ಎಂದು ಟೊಮೆಟೊ ಬೆಳೆಗಾರ, ರೈತ ತಿಪ್ಪಣ್ಣ ತಮ್ಮ ಅಳಲು ತೋಡಿಕೊಂಡಿದ್ದಾರೆ.

    1 ಎಕೆರೆ ಪ್ರದೇಶದಲ್ಲಿ ಟೊಮೆಟೊ ಬೆಳೆಯಲು ಸರಿಸುಮಾರು 2 ಲಕ್ಷ ರೂ. ಖರ್ಚಾಗುತ್ತದೆ. ಆದರೆ ಈಗ ಮಾರುಕಟ್ಟೆಯಲ್ಲಿ ಟೊಮೆಟೊ ರೇಟ್ ನೋಡಿದರೆ ಅಸಲು ಅಲ್ಲ, ಕನಿಷ್ಠ ಟೊಮೆಟೊ ಕೀಳಲು ಕೂಲಿಯಾಳುಗಳಿಗೆ ಕೂಲಿ ಹಾಗೂ ಟ್ರಾನ್ಸ್ ಪೋರ್ಟ್ ವೆಚ್ಚ ಕೂಡಾ ವಾಪಾಸ್ ಬರುವುದಿಲ್ಲ. ಈ ಸಂದರ್ಭದಲ್ಲಿ ಏನು ಮಾಡುವುದು ಎಂದು ರೈತ ಮಂಜುನಾಥ್ ರೆಡ್ಡಿ ಆಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಖಾಕಿ ಶರ್ಟ್ ಧರಿಸಿ ಸ್ಟೇರಿಂಗ್ ಹಿಡಿದು ರಸ್ತೆಯಲ್ಲಿ ಸಂಚಾರ – ನೋವಿನ ಹಿಂದಿದೆ ಇಂಟರೆಸ್ಟಿಂಗ್ ಸ್ಟೋರಿ

    ಕಳೆದ 3 ತಿಂಗಳ ಹಿಂದೆ 15 ಕೆಜಿ ಟೊಮೆಟೊ ಬಾಕ್ಸ್ 2 ರಿಂದ 3 ಸಾವಿರ ರೂ.ಗೆ ಬಿಕರಿಯಾಗುತ್ತಿತ್ತು. ಹೀಗಾಗಿ ರೈತರು ಈ ಬಾರಿ ಹೆಚ್ಚಾಗಿ ಟೊಮೆಟೊ ಬೆಳೆದಿದ್ದಾರೆ. ಇನ್ನೂ ಟೊಮೆಟೊ ಆಮದು ಮಾಡಿಕೊಳ್ಳುವ ರಾಜ್ಯಗಳಲ್ಲೂ ಈ ಬಾರಿ ಟೊಮೆಟೊ ಬೆಳೆ ಬಂಪರ್ ಇಳುವರಿ ಬಂದಿದ್ದು, ಆಮದು ಕುಂಠಿತವಾಗಿ ಬೆಲೆ ಕುಸಿತ ಕಂಡಿದೆ.