Tag: ಬೆಲ್‌ಗ್ರೇಡ್

  • ಮತ್ತೆ ಗುಂಡಿನ ದಾಳಿಗೆ ಸರ್ಬಿಯಾದಲ್ಲಿ 8 ಮಂದಿ ಬಲಿ – ಎರಡು ದಿನದಲ್ಲಿ 2ನೇ ಘಟನೆ

    ಮತ್ತೆ ಗುಂಡಿನ ದಾಳಿಗೆ ಸರ್ಬಿಯಾದಲ್ಲಿ 8 ಮಂದಿ ಬಲಿ – ಎರಡು ದಿನದಲ್ಲಿ 2ನೇ ಘಟನೆ

    ಬೆಲ್‌ಗ್ರೇಡ್: ಸರ್ಬಿಯಾದ (Serbia) ರಾಜಧಾನಿ ಬೆಲ್‌ಗ್ರೇಡ್ (Belgrade) ಬಳಿಯ ಪಟ್ಟಣದಲ್ಲಿ ಗುರುವಾರ ತಡರಾತ್ರಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಸರ್ಬಿಯಾದಲ್ಲಿ ಇದು ಕೇವಲ ಎರಡೇ ದಿನದೊಳಗೆ ನಡೆದಿರುವ 2ನೇ ಗುಂಡಿನ ದಾಳಿಯಾಗಿದ್ದು, ಜನತೆಯಲ್ಲಿ ಭೀತಿ ಹೆಚ್ಚಿಸಿದೆ.

    ರಾಜಧಾನಿ ಬೆಲ್‌ಗ್ರೇಡ್‌ನಿಂದ ದಕ್ಷಿಣಕ್ಕೆ ಸುಮಾರು 50 ಕಿ.ಮೀ ದೂರದಲ್ಲಿರುವ ಮ್ಲಾಡೆನೊವಾಕ್ ಬಳಿ 21 ವರ್ಷದ ಶಂಕಿತ ಯುವಕನೊಬ್ಬ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ ಎಂದು ವರದಿಗಳು ತಿಳಿಸಿವೆ. ದಾಳಿಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

    ಕೇವಲ 2 ದಿನಗಳ ಹಿಂದೆ ಬುಧವಾರ ಬೆಲ್‌ಗ್ರೇಡ್‌ನ ವ್ಲಾಡಿಸ್ಲಾವ್ ರಿಬ್ನಿಕಸ್ ಪ್ರಾಥಮಿಕ ಶಾಲೆಯಲ್ಲಿ 7 ನೇ ತರಗತಿಯ 13 ವರ್ಷದ ಬಾಲಕನೊಬ್ಬ ತನ್ನ ತಂದೆಯ ಬಂದೂಕನ್ನು ಬಳಸಿ ಗುಂಡಿನ ದಾಳಿ ನಡೆದಿದ್ದ. ಘಟನೆಯಲ್ಲಿ 8 ಮಕ್ಕಳು ಹಾಗೂ ಒಬ್ಬ ಶಾಲೆಯ ಸಿಬ್ಬಂದಿ ಸಾವನ್ನಪ್ಪಿದ್ದರು. ಈ ಗುಂಡಿನ ದಾಳಿಯ ಬಳಿಕ ದೇಶಾದ್ಯಂತ ಭೀತಿ ಹೆಚ್ಚಾಗಿದ್ದು, ಅಧಿಕಾರಿಗಳು ಬಂದೂಕು ನಿಯಂತ್ರಣಕ್ಕೆ ಕರೆಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಕೇರಳದ ಮೊದಲ ಸಲಿಂಗಿ ಬಾಡಿಬಿಲ್ಡರ್ ಆತ್ಮಹತ್ಯೆ

    ಬಾಲಕ ಗುಂಡಿನ ದಾಳಿ ನಡೆಸಿದ ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಆತ ಗುಂಡಿನ ದಾಳಿ ನಡೆಸಲು ಯಾವುದೇ ಉದ್ದೇಶವಿದ್ದ ಬಗ್ಗೆ ತಿಳಿಸಿಲ್ಲ. ಬಾಲಕ ಬೆಳಗ್ಗೆ ಶಾಲೆಯನ್ನು ಪ್ರವೇಶಿಸುತ್ತಲೇ ಮೊದಲು ವಾಚ್‌ಮ್ಯಾನ್ ಹಾಗೂ ಮೂವರು ವಿದ್ಯಾರ್ಥಿಗಳನ್ನು ಪ್ರವೇಶ ದ್ವಾರದ ಬಳಿ ಗುಂಡು ಹಾರಿಸಿ ಕೊಂದಿದ್ದಾನೆ. ಬಳಿಕ ಆತ ತರಗತಿಗೆ ತೆರಳಿ ಇತರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ಗುಂಡು ಹಾರಿಸಿದ್ದಾನೆ. ಇದರಿಂದ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಶಿಕ್ಷಕರು ಸೇರಿದಂತೆ ಒಟ್ಟು 7 ಮಂದಿಗೆ ಗಾಯಗಳಾಗಿವೆ.

    ಸರ್ಬಿಯಾದಲ್ಲಿ ಇಂತಹ ಸಾಮೂಹಿಕ ಗುಂಡಿನ ದಾಳಿಗಳು ತೀರಾ ಅಪರೂಪ. ಆದರೂ 1990ರ ಯುದ್ಧದ ಬಳಿಕ ದೇಶದಲ್ಲಿ ಉಳಿದಿರುವ ಶಸ್ತ್ರಾಸ್ತ್ರಗಳ ಸಂಖ್ಯೆಯ ಬಗ್ಗೆ ತಜ್ಞರು ಪದೇ ಪದೇ ಎಚ್ಚರಿಸಿದ್ದಾರೆ. ಆರ್ಥಿಕ ಸಂಕಷ್ಟ ಹಾಗೂ ಇತರ ಘರ್ಷಣೆಗಳಿಂದಾಗಿ ಇಂತಹ ಘಟನೆಗಳಿಗೆ ಪ್ರಚೋದನೆ ಸಿಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕುಡಿದ ಪೊಲೀಸರಿಂದ ಹಲ್ಲೆ ಆರೋಪ – ದೇಶದ ಅತ್ಯುನ್ನತ ಪ್ರಶಸ್ತಿ ಹಿಂದಿರುಗಿಸಲು ಮುಂದಾದ ಕುಸ್ತಿಪಟುಗಳು

  • ಸರ್ಬಿಯಾದ ಶಾಲೆಯಲ್ಲಿ ಅಪ್ರಾಪ್ತ ಬಾಲಕನಿಂದ ಗುಂಡಿನ ದಾಳಿ – 8 ಮಕ್ಕಳ ಸಾವು

    ಸರ್ಬಿಯಾದ ಶಾಲೆಯಲ್ಲಿ ಅಪ್ರಾಪ್ತ ಬಾಲಕನಿಂದ ಗುಂಡಿನ ದಾಳಿ – 8 ಮಕ್ಕಳ ಸಾವು

    ಬೆಲ್‌ಗ್ರೇಡ್: ಸರ್ಬಿಯಾದ (Serbia) ರಾಜಧಾನಿ ಬೆಲ್‌ಗ್ರೇಡ್‌ನ (Belgrade) ಶಾಲೆಯೊಂದರಲ್ಲಿ (ಅಪ್ರಾಪ್ತ ಬಾಲಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಶಾಲಾ ಸಿಬ್ಬಂದಿ ಸೇರಿದಂತೆ 8 ಮಕ್ಕಳು ಸಾವನ್ನಪ್ಪಿದ್ದಾರೆ.

    ಬೆಲ್‌ಗ್ರೇಡ್‌ನ ವ್ಲಾಡಿಸ್ಲಾವ್ ರಿಬ್ನಿಕರ್ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 8:40ರ ವೇಳೆಗೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಒಟ್ಟು 9 ಮಂದಿ ಸಾವನ್ನಪ್ಪಿದರೆ, ಇನ್ನೂ 6 ಮಕ್ಕಳು ಹಾಗೂ ಶಿಕ್ಷಕರು ಗಾಯಗೊಂಡಿದ್ದಾರೆ. ಗುಂಡು ಹಾರಿಸಿದ್ದ 7ನೇ ತರಗತಿಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

    ವರದಿಗಳ ಪ್ರಕಾರ ಬಾಲಕ ತನ್ನ ತಂದೆಯ ಬಂದೂಕಿನಿಂದ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋಗಳು ಹರಿದಾಡುತ್ತಿದ್ದು, ಪೊಲೀಸರು ಆರೋಪಿ ಬಾಲಕನ ತಲೆಯನ್ನು ಮುಚ್ಚಿ ತಮ್ಮ ವಾಹನದೆಡೆಗೆ ಕರೆದುಕೊಂಡು ಹೋಗುವುದು ಕಂಡುಬಂದಿದೆ. ಹಲವು ಮಕ್ಕಳ ಸಾವಿನ ಸುದ್ದಿ ಕೇಳುತ್ತಲೇ ಭಯಭೀತರಾದ ಪೋಷಕರು ತಮ್ಮ ಮಕ್ಕಳನ್ನು ಹುಡುಕಿಕೊಂಡು ಶಾಲೆಗೆ ಧಾವಿಸಿದ್ದಾರೆ. ಇದನ್ನೂ ಓದಿ: ಸಾಕಿದ್ದ ಮುದ್ದಿನ ಗಿಳಿ ಸಾವು – ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ

    ಸರ್ಬಿಯಾದಲ್ಲಿ ಇಂತಹ ಸಾಮೂಹಿಕ ಗುಂಡಿನ ದಾಳಿಗಳು ತೀರಾ ಅಪರೂಪವಾಗಿದೆ. ಆದರೂ 1990ರ ಯುದ್ಧದ ಬಳಿಕ ದೇಶದಲ್ಲಿ ಉಳಿದಿರುವ ಶಸ್ತ್ರಾಸ್ತ್ರಗಳ ಸಂಖ್ಯೆಯ ಬಗ್ಗೆ ತಜ್ಞರು ಪದೇ ಪದೇ ಎಚ್ಚರಿಸಿದ್ದಾರೆ. ಆರ್ಥಿಕ ಸಂಕಷ್ಟ ಹಾಗೂ ಇತರ ಘರ್ಷಣೆಗಳಿಂದಾಗಿ ಇಂತಹ ಘಟನೆಗಳಿಗೆ ಪ್ರಚೋದನೆ ಸಿಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಲಿಂಗ ವಿವಾಹ ಕೇಸ್ – ಸಲಹಾ ಸಮಿತಿ ರಚಿಸುತ್ತೇವೆ ಎಂದ ಕೇಂದ್ರ ಸರ್ಕಾರ