ಬೀದರ್: ಜಿಲ್ಲೆಯ ಬಿಜೆಪಿ ಮುಖಂಡರು ಬೀದರ್‌ನಾದ್ಯಂತ ಸಂಚರಿಸಿ ಅತೀವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿಯನ್ನು ವೀಕ್ಷಿಸಿದರು. ಈ ವೇಳೆ ಶಾಸಕ ಪ್ರಭು ಚವ್ಹಾಣ್ (Prabhu Chauhan) ಬೆಳೆ ಹಾನಿಯ ಬಗ್ಗೆ ವಿವರಣೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ನೇತೃತ್ವದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಯಿತು. ಕೌಠಾ(ಬಿ) ಗ್ರಾಮದಲ್ಲಿ ಹಾನಿಯಾದ ಕೃಷಿಭೂಮಿಗಳಿಗೆ ಟ್ರಾಕ್ಟರ್ ಮೂಲಕ ತೆರಳಿ ಹಾನಿಯ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಬೆಳೆಹಾನಿಯ ಬಗ್ಗೆ ಶಾಸಕ ಪ್ರಭು ಚವ್ಹಾಣ್ ಅವರು, ಔರಾದ(ಬಿ) ಕ್ಷೇತ್ರದಲ್ಲೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ಪ್ರತಿಯೊಂದು ಗ್ರಾಮದಲ್ಲಿ ಸಾವಿರಾರು ಎಕರೆಯಷ್ಟು ಬೆಳೆ ಹಾನಿಯಾಗಿದೆ. ಇಲ್ಲಿನ ಬಹುತೇಕ ರೈತರು ಉಪಜೀವನಕ್ಕೆ ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ ಬೆಳೆದು ನಿಂತಿದ್ದ ಉದ್ದು, ಹೆಸರು, ಸೋಯಾಬೀನ್, ತೊಗರಿ, ಹತ್ತಿ, ಕಬ್ಬು ಸೇರಿದಂತೆ ಎಲ್ಲ ಬೆಳೆಗಳು ಮುಳುಗಡೆಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: ಟ್ರಂಪ್ ಭಾಷಣಕ್ಕೆ ಅಡ್ಡಿ – ಇಬ್ಬರು ಇಸ್ರೇಲ್ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ
ನಮ್ಮೂರಿನ ಎಲ್ಲ ಕಡೆಗಳಲ್ಲಿ ಬೆಳೆ ನಷ್ಟವಾಗಿದೆ. ನದಿ ತೀರದಲ್ಲಿ ಅತೀ ಹೆಚ್ಚು ಹಾಳಾಗಿದ್ದು, ಎಲ್ಲ ಹೊಲಗಳು ಸಂಪೂರ್ಣ ಮುಳುಗಡೆಯಾಗಿವೆ. ಮಳೆಗಾಲದ ಆರಂಭದಲ್ಲಿ ಎಲ್ಲ ಬೆಳೆಗಳು ಚೆನ್ನಾಗಿದ್ದವು. ಹಾಗಾಗಿ ರೈತರು ಈ ಬಾರೀ ಹೆಚ್ಚಿನ ಲಾಭ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದರು. ಆದರೆ ಅನಿರೀಕ್ಷಿತವಾಗಿ ಸುರಿದ ಧಾರಾಕಾರ ಮಳೆಗೆ ಎಲ್ಲ ಬೆಳೆಗಳು ಕೊಚ್ಚಿಕೊಂಡು ಹೋಗಿವೆ. ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ಬೇಗ ಪರಿಹಾರ ಕೊಡಲು ತಾವು ಸಹಕರಿಸಬೇಕು ಎಂದು ಮನವಿ ಮಾಡಿದರು.
ಧಾರವಾಡ: ಈ ಬಾರಿ ಅತಿಯಾದ ಮಳೆಯಿಂದ ರಾಜ್ಯದಾದ್ಯಂತ ಸಾಕಷ್ಟು ಬೆಳೆ ನಾಶವಾಗಿದ್ದು, ಈಗಾಗಲೇ ಜಂಟಿ ಸಮೀಕ್ಷೆ ಮಾಡಲು ಹೇಳಿದ್ದೇವೆ. ರೈತರಿಗೆ ಆದಷ್ಟು ಬೇಗ ಪರಿಹಾರ (Crop Relief) ಕೊಡುತ್ತೇವೆ. ದುಡ್ಡಿಗೆ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.
ಧಾರವಾಡದ (Dharwad) ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಕೃಷಿ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಧಾರವಾಡದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮುತುವರ್ಜಿಯಿಂದ ಶೀಘ್ರ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದ್ದಾರೆ ಎಂದು ಡಿಸಿ ಹಾಗೂ ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ದಸರಾ ಉದ್ಘಾಟಕಿ ಬಾನು ಮುಷ್ತಾಕ್‌ಗೆ ಹೈಕೋರ್ಟ್ ಸಿಗ್ನಲ್ – ವಾದ, ಪ್ರತಿವಾದ ಹೇಗಿತ್ತು?
ನಮ್ಮ ದೇಶ ಕೃಷಿ ಪ್ರಧಾನ ರಾಷ್ಟ್ರ. ನಾಗರಿಕತೆ ಆರಂಭ ಆದ ಮೇಲೆ ಕೃಷಿಯನ್ನೇ ಮಾಡುತ್ತ ಬರಲಾಗಿದೆ. ಭಾರತದಲ್ಲಿ ಜನಸಂಖ್ಯೆ ಏರುತ್ತಿದೆ. ಇಡೀ ಜಗತ್ತಲ್ಲೇ ಹೆಚ್ಚು ಜನಸಂಖ್ಯೆ ಇರುವ ದೇಶ ಭಾರತ. ಚೀನಾ ಜನಸಂಖ್ಯೆಯಲ್ಲಿ ಮುಂದೆ ಇತ್ತು. ಈಗ ನಾವು ಅವರನ್ನು ಹಿಂದೆ ಹಾಕಿ ಮುಂದೆ ಬಂದಿದ್ದೇವೆ. ಇಷ್ಟೂ ಜನರಿಗೆ ಆಹಾರ ಹಾಕಬೇಕು. ದೇಶದಲ್ಲಿ ಹಸಿರು ಕ್ರಾಂತಿ ಆದ ಮೇಲೆ ಆಹಾರ ಭದ್ರತೆ ಬಂದಿದೆ. ಆಹಾರ ಉತ್ಪಾದನೆ ಈಗ ಆಗುತ್ತಿಲ್ಲ, ಅದು ಸ್ಥಗಿತ ಆಗಿದೆ. ಇದಕ್ಕೆ ಕಾರಣ ಮಣ್ಣಿನ ಫಲವತ್ತತೆ. ಇದನ್ನು ಕೃಷಿ ವಿವಿಯವರು ಗಮನಕ್ಕೆ ತೆಗೆದುಕೊಳ್ಳಬೇಕು ಎಂದರು. ಇದನ್ನೂ ಓದಿ: Hassan Tragedy – ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಿದ ನಿಶ್ಚಲಾನಂದನಾಥ ಶ್ರೀ
ಜನಸAಖ್ಯೆ ಬೆಳೆದಂತೆ ಹೆಚ್ಚು ಆಹಾರ ಉತ್ಪಾದನೆ ಮಾಡಬೇಕು. ಸ್ವತಂತ್ರ ಬಂದಾಗ ಆಹಾರ ಉತ್ಪಾದನೆ ಇರಲಿಲ್ಲ, ಸ್ವಾವಲಂಬನೆ ಇತ್ತು. ಬೇರೆ ದೇಶದಿಂದ ಆಗ ಆಹಾರ ಆಮದು ಮಾಡಿಕೊಳ್ಳಲಾಗುತ್ತಿತ್ತು. ಈಗ ರಪ್ತು ಮಾಡುತ್ತಿದ್ದೇವೆ. ಜನಸಂಖ್ಯೆಗೆ ತಕ್ಕ ಆಹಾರ ಇರಬೇಕು. ಕೃಷಿ ವಿವಿ ಇದನ್ನು ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರ ಕೃಷಿಗೆ ಆದ್ಯತೆ ಕೊಟ್ಟಿದೆ. ಮುಂದೆಯೂ ಕೊಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಧಾರವಾಡ-ಬೆಳಗಾವಿ ನೇರ ರೈಲು ಯೋಜನೆ ವಿಳಂಬಕ್ಕೆ ರಾಜ್ಯ ಸರ್ಕಾರ, ಸಂತೋಷ್ ಲಾಡ್ ಕಾರಣ: ಸೋಮಣ್ಣ
ನಮ್ಮ ರಾಜ್ಯ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಗುಜರಾತ್ ಒಂದನೇ ಸ್ಥಾನದಲ್ಲಿದೆ. ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ನಮ್ಮ ರಾಜ್ಯದಲ್ಲಾಗುತ್ತಿದೆ. ಮುಂದೆ ನಂಬರ್ ಒನ್ ಸ್ಥಾನಕ್ಕೆ ನಾವು ಹೋಗಬೇಕು. ಒಂದೇ ಬೆಳೆ ಬೇಳೆಯುವಂತೆ ಆಗಬಾರದು. ತೋಟಗಾರಿಕೆ, ತರಕಾರಿ, ಭತ್ತ, ರಾಗಿ ಬೆಳೆಯಬೇಕು. ಬಹಳ ಜನರಿಗೆ ಈಗ ಮಧುಮೇಹ ಇದೆ. ಹೀಗಾಗಿ ಸಿರಿಧಾನ್ಯ ಬೆಳೆಯಲು ನಾವು ಸಬ್ಸಿಡಿ ಕೊಡುತ್ತಿದ್ದೇವೆ. ಹೆಚ್ಚು ಸಿರಿ ಧಾನ್ಯ ಬೆಳೆಯಬೇಕು. ಮನುಷ್ಯನಿಗೆ ಆಹಾರ ಪದ್ಧತಿಯಿಂದ ದೈಹಿಕ ಕಾಯಿಲೆ ಬರುತ್ತಿವೆ. ಕೃಷಿ ವಿಜ್ಞಾನಿಗಳು ಇದನ್ನ ಗಮನಕ್ಕೆ ತೆಗೆದುಕೊಳ್ಳಬೇಕು. ಅಕ್ಕಿ, ಗೋಧಿಯಲ್ಲಿ ಸಕ್ಕರೆ ಇದೆ. ಸಿರಿಧಾನ್ಯದಲ್ಲಿ ಸಕ್ಕರೆ ಕಡಿಮೆ ಇದೆ. ಹೀಗಾಗಿ ಅವುಗಳನ್ನು ಬೆಳೆಯಬೇಕು. ಸಂಶೋಧನೆಗೆ ಹೆಚ್ಚು ಒತ್ತು ಕೊಡಬೇಕು. ಹೊಸ ತಳಿ ಬಂದ ಮೇಲೆ ಅವು ರೈತರಿಗೆ ತಲುಪಬೇಕು. ಲ್ಯಾಬ್ ಟು ಲ್ಯಾಂಡ್ ಆಗಬೇಕು ಮತ್ತು ಲ್ಯಾಂಡ್ ಟು ಲ್ಯಾಬ್ ಆಗಬೇಕು. ಇವತ್ತು ಮತ್ತು ನಿನ್ನೆ ಕೃಷಿ ಮೇಳಕ್ಕೆ 6 ಲಕ್ಷ ರೈತರು ಬಂದಿದ್ದಾರೆ. ನಾವು ಭಾಗವಹಿಸಿ ಹೇಳೋದು ಒಂದು ಭಾಗ. ಆದರೆ, ರೈತರು ಭಾಗವಹಿಸುವುದು ಮುಖ್ಯ. ಹೊಸ ತಳಿ, ಹೊಸ ಬೀಜ, ಹೊಸತು ಏನೆಲ್ಲಾ ಇದೆ ಎಂದು ತಿಳಿಯಬೇಕು. ಇದರಿಂದ ಸಮೃದ್ಧಿ ಆಗಲಿದೆ ಎಂದು ನುಡಿದರು. ಇದನ್ನೂ ಓದಿ: ಹಾಸನ ದುರಂತ – ಕಂಬನಿ ಮಿಡಿದ ಟ್ರಕ್ ಚಾಲಕನ ಗ್ರಾಮಸ್ಥರು
ಹಿಂದೆ ಗ್ರಾಮಸೇವಕರು ಇದ್ದರು. ಈಗ ಅವರು ಕಡಿಮೆಯಾಗಿದ್ದಾರೆ. ಅವರು ರೋಗಕ್ಕೆ ಔಷಧಿ ಕೊಡುತ್ತಿದ್ದರು, ಈಗ ಅದು ಕಡಿಮೆಯಾಗಿದೆ. ಕೃಷಿ ಇಲಾಖೆ ಮತ್ತು ಕೃಷಿ ವಿವಿ, ರೈತರ ನಡುವೆ ಸೇತುವೆ ನಿರ್ಮಾಣ ಮಾಡಬೇಕು. ನವಲಗುಂದದಲ್ಲಿ ಬೆಣ್ಣೆ ಹಳ್ಳ ಇದೆ. ಅದಕ್ಕೆ ಪ್ರವಾಹ ಬಂದಾಗ ರೈತರಿಗೆ ತೊಂದರೆ ಆಗುತ್ತಿದೆ. ಅದಕ್ಕಾಗಿ ನಮ್ಮ ಸರ್ಕಾರ 200 ಕೋಟಿ ಕೊಟ್ಟಿದೆ. ಟೆಂಡರ್ ಕೂಡ ಆಗಲಿದೆ ಎಂದರು. ಇದನ್ನೂ ಓದಿ: 14 ಸೈಟ್ ನುಂಗಿದ ನೀವು ನನಗೆ ಹೇಳಲು ಬರೋದು ಬೇಡ: ಸಿಎಂಗೆ ಪ್ರತಾಪ್ ತಿರುಗೇಟು
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಹಾನಿಗೀಡಾದ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಇಂದು ತಿಳಿಸಿದರು.
ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಒಟ್ಟು 10 ಲಕ್ಷಕ್ಕೂ ಹೆಚ್ಚಿನ ರೈತರಿಗೆ 969 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ ಎಂದರು. ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಒಣಭೂಮಿ ಬೇಸಾಯದ ಜಮೀನಿನಲ್ಲಿ ಸಂಭವಿಸಿದ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್‌ಗೆ 6800 ರೂ. ಪರಿಹಾರ ನಿಗದಿಪಡಿಸಲಾಗಿದೆ. ಇದಕ್ಕೆ ರಾಜ್ಯ ಸರ್ಕಾರವು ಇನ್ನೂ 6,800 ರೂ. ಸೇರಿಸಿ, 13600 ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು. ಅಂತೆಯೇ ನೀರಾವರಿ ಜಮೀನಿನಲ್ಲಿ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್‌ಗೆ 13,500 ರೂ. ನೀಡಲಾಗುತ್ತಿದೆ. ಇದಕ್ಕೆ ಹೆಚ್ಚುವರಿಯಾಗಿ 11,500 ರೂ. ನೀಡಲು ನಿರ್ಧರಿಸಿದ್ದು, ಇದರಿಂದ ರೈತರಿಗೆ ಹೆಕ್ಟೇರ್‌ಗೆ 25,000 ರೂ. ದೊರೆಯಲಿದೆ. ತೋಟಗಾರಿಕಾ ಬೆಳೆಗಳಿಗೆ ಹೆಕ್ಟೇರ್‌ಗೆ 18,000 ರೂ. ಪರಿಹಾರ ನಿಗದಿ ಪಡಿಸಿದ್ದು, ರಾಜ್ಯದ ಬೊಕ್ಕಸದಿಂದ ಇದಕ್ಕೆ 10,000 ರೂ. ಸೇರಿಸಿ, ಒಟ್ಟು 28,000 ರೂ. ಪರಿಹಾರ ನೀಡಲಾಗುವುದು. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 1200 ಕೋಟಿ ರೂ. ಹೊರೆ ಉಂಟಾಗಲಿದೆ ಎಂದು ಅವರು ಸದನದಲ್ಲಿ ಹೇಳಿದರು. ಇದನ್ನೂ ಓದಿ: ಮೇಕೆದಾಟು ಯೋಜನೆಯಿಂದ ಕರ್ನಾಟಕ, ತಮಿಳುನಾಡು ಎರಡು ರಾಜ್ಯಕ್ಕೂ ಅನುಕೂಲ: ಸಿದ್ದರಾಮಯ್ಯ
48 ಗಂಟೆಗಳಲ್ಲಿ ಪರಿಹಾರ ಕೊಟ್ಟಿದ್ದು ರಾಜ್ಯದ ಇತಿಹಾಸದಲ್ಲಿಯೇ ಮೊದಲು!: ಹಿಂದಿನ ವರ್ಷಗಳಲ್ಲಿ ಅತಿವೃಷ್ಟಿಯಿಂದ ನದಿ ತಟದಲ್ಲಿರುವ 10-15 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿತ್ತು. ಆದರೆ ಈ ಬಾರಿ ಅತಿವೃಷ್ಟಿಯಿಂದ ರಾಜ್ಯಾದ್ಯಂತ ನಷ್ಟ ಸಂಭವಿಸಿದೆ. ಚಿಕ್ಕಬಳ್ಳಾಪುರ, ಕೋಲಾರಗಳಂತಹ ಅತ್ಯಂತ ಬರ ಪೀಡಿತ ಜಿಲ್ಲೆಗಳಲ್ಲೂ ಕೆರೆ-ಕಟ್ಟೆ ತುಂಬಿ ಒಡೆದಿದೆ. ಬೆಳೆದು ನಿಂತ ಪೈರಿಗೆ ಹಾನಿಯಾಗಿ, ಬೆಳೆ ಕೈಗೆ ಸಿಗುವ ಕಾಲದಲ್ಲಿ ರೈತರಿಗೆ ನಷ್ಟವಾಗಿದೆ. ರೈತರ ಕಷ್ಟಕ್ಕೆ ಸ್ಪಂದಿಸಿದ ಸರ್ಕಾರ ಅಧಿಕಾರಿಗಳಿಗೆ ಕೂಡಲೇ ಜಂಟಿ ಸಮೀಕ್ಷೆ ಕೈಗೊಂಡು ವರದಿಯನ್ನು ಪರಿಹಾರ appನಲ್ಲಿ ಅಪ್ಲೋಡ್ ಮಾಡುವಂತೆ ಹಾಗೂ ಮಾಹಿತಿ ಅಪ್ಲೋಡ್ ಆದ 48 ಗಂಟೆಗಳೊಳಗೆ ಪರಿಹಾರ ವಿತರಿಸುವಂತೆ ಸೂಚನೆ ನೀಡಲಾಯಿತು. ಅದರಂತೆ ಕರ್ನಾಟಕದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜಂಟಿ ಸಮೀಕ್ಷೆ ವರದಿ ಅಪ್ಲೋಡ್ ಆದ 48 ಗಂಟೆಯೊಳಗೆ ನಮ್ಮ ಸರ್ಕಾರ ಪರಿಹಾರ ವಿತರಿಸಿದೆ. ಈವರೆಗೆ 10 ಲಕ್ಷಕ್ಕೂ ಹೆಚ್ಚು ರೈತರಿಗೆ 969 ಕೋಟಿ ರೂ. ತಲುಪಿರುವುದು ಒಂದು ದಾಖಲೆ ಎಂದು ಸಿಎಂ ತಿಳಿಸಿದರು. ಅತಿವೃಷ್ಟಿಯಿಂದ 12.69 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಸಂಭವಿಸಿದ ಬೆಳೆ ಹಾನಿಗೆ ಪರಿಹಾರ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ರೈತ ವಿದ್ಯಾನಿಧಿ: ನಮ್ಮ ಸರ್ಕಾರ ಸದಾ ರೈತರ ಸಮಸ್ಯೆಗೆ ಸ್ಪಂದಿಸುತ್ತಾ ಬಂದಿದೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಯೋಜನೆಯಿಂದ ತ್ವರಿತ ಪರಿಹಾರ ವಿತರಣೆಯವರೆಗೆ ಹಲವು ರೀತಿಯಲ್ಲಿ ಬೆಂಬಲ ನೀಡಿದೆ. ಇದೀಗ ಸದನದ ಒಟ್ಟಾರೆ ಅಭಿಪ್ರಾಯವನ್ನು ಗಮನಿಸಿ ಹೆಚ್ಚುವರಿ ಪರಿಹಾರ ವಿತರಿಸಲು ತೀರ್ಮಾನಿಸಲಾಗಿದೆ. ರೈತ ವಿದ್ಯಾನಿಧಿ ಯೋಜನೆಯಡಿ ಪಿಯುಸಿಯ 2.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಗಿದೆ. ಪದವಿ ಶಿಕ್ಷಣಕ್ಕೆ ಈಗ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಅದು ಪೂರ್ಣಗೊಳ್ಳುತ್ತಿದ್ದಂತೆ ಅರ್ಹರಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗುವುದು ಎಂದರು. ಇದನ್ನೂ ಓದಿ: ಸಾಲಬಾಧೆ ತಾಳಲಾರದೆ ಕಾಲುವೆಗೆ ಬಿದ್ದು ರೈತ ಆತ್ಮಹತ್ಯೆ
ಬೆಂಗಳೂರು: ಬೆಳೆ ಪರಿಹಾರದ ಮೊತ್ತವನ್ನು ಮಧ್ಯವರ್ತಿಗಳಿಗೆ ಅವಕಾಶವಿಲ್ಲದಂತೆ ನೇರವಾಗಿ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಅಕಾಲಿಕ ಮಳೆಯಿಂದ ಅಪಾರ ಬೆಳೆ ಮತ್ತು ಆಸ್ತಿ ಹಾನಿ ಸಂಭವಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆ ಪ್ರವಾಸ ನಡೆಸಿ ಪರಿಶೀಲನೆ ನಡೆಸಿ ಶೀಘ್ರ ಪರಿಹಾರ ವಿತರಿಸುವ ಭರವಸೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜನಪದರ ಬಾಯಲ್ಲಿ ಹಾಡಾದ ಪುನೀತ್ – ತಾಯಂದಿರ ಕಣ್ಣಲ್ಲಿ ನೀರು ತರಿಸ್ತಿದೆ ಹಾಡು
ಬೆಳೆ ಪರಿಹಾರಕ್ಕೆ ಸಂಬಂಧಿಸಿದಂತೆ ‘ಇಂದಿನವರೆಗೆ 3 ಲಕ್ಷ ರೈತರಿಗೆ 226.57 ಕೋಟಿ ಪರಿಹಾರ ವಿತರಿಸಿದ್ದೇವೆ. ಇಂದು 1.61 ರೈತರಿಗೆ 92.30 ಕೋಟಿ ಹಣ ಬಿಡುಗಡೆ ಮಾಡುತ್ತಿದ್ದೇವೆ. ಒಟ್ಟು 4.61 ರೈತರಿಗೆ 318.87 ಕೋಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಆಗಿದ್ದು, ಮಧ್ಯವರ್ತಿಗಳಿಗೆ ಯಾವುದೇ ಅವಕಾಶ ಸಿಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದರು.
ಈ ಹಿಂದೆ ಮೂರು ತಿಂಗಳಿಗೊಮ್ಮೆ ಬೆಳೆ ಪರಿಹಾರ ವಿತರಿಸಲಾಗುತ್ತಿತ್ತು. ಈಗ ಈ ವ್ಯವಸ್ಥೆಯನ್ನು ಸಂಪೂರ್ಣ ಬದಲಾವಣೆ ಮಾಡಿದ್ದು, ಎರಡು ಮೂರು ದಿನಕ್ಕೆ ಒಮ್ಮೆ ತಂತ್ರಾಂಶದಲ್ಲಿ ನಮೂದಿಸಿ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಲಾಗಿದೆ. ಕೇಂದ್ರಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ವರದಿ ಸಿದ್ಧಪಡಿಸುತ್ತಿದ್ದೇವೆ. ಬೆಳೆ ಪರಿಹಾರ ನೀಡಲು ರಾಜ್ಯದಲ್ಲಿ ಹಣಕಾಸಿನ ಕೊರತೆ ಇಲ್ಲ. ರೈತರಿಗೆ ಅನುಕೂಲವಾಗಬೇಕು. ರೈತರ ಹಿತ ಕಾಯಲು ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದರು.
ಸದ್ಯಕ್ಕಿಲ್ಲ ಲಾಕ್ ಡೌನ್
ಲಾಕ್‍ಡೌನ್ ಕುರಿತು ಮಾತನಾಡಿದ ಅವರು, ಸದ್ಯಕ್ಕೆ ಲಾಕ್ ಡೌನ್ ಇಲ್ಲ. ರಾಜ್ಯದ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಹೊರ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳಿಗೆ ಎರಡು ಬಾರಿ ಪರೀಕ್ಷೆ ನಡೆಸಬೇಕು. ನಿರಂತರವಾಗಿ ಸರ್ಕಾರ ಕೋವಿಡ್ ಪರಿಸ್ಥಿತಿಯ ಅವಲೋಕನ ಮಾಡುತ್ತಿದೆ. ಹೊರದೇಶದಿಂದ ಬರುವವರನ್ನು ತೀವ್ರ ತಪಾಸಣೆಗೆ ಒಳಪಡಿಸುತ್ತೇವೆ. ಹೊರದೇಶಗಳ ಸ್ಥಿತಿ ಸಹ ನಮ್ಮ ಗಮನದಲ್ಲಿದೆ ಎಂದರು.
ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಾಕಷ್ಟು ಹಣ ಬಿಡುಗಡೆ ಮಾಡುತ್ತೇನೆ. ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ. ಸಾರ್ವಜನಿಕರು ಸಹಕರಿಸಬೇಕು. ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳುತ್ತದೆ. ಜನರು ಭಯ ಬಿಟ್ಟು ಜವಾಬ್ದಾರಿಯಿಂದ ಇರಬೇಕು ಎಂದು ಮನವಿ ಮಾಡಿದರು.
ಹಾವೇರಿ: ನೆರೆ ಪರಿಹಾರ ವಿತರಣೆಯಲ್ಲಿ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಬಂಧನ ಮಾಡಲಾಗಿದೆ.
ಬಂಧಿತ ಗ್ರಾಮ ಲೆಕ್ಕಾಧಿಕಾರಿಯನ್ನು ವೆಂಕಟೇಶ ಮಡಿವಾಳರ(26) ಎಂದು ಗುರುತಿಸಲಾಗಿದೆ. ಸರ್ಕಾರಿ ಜಮೀನಿನ ಹೆಸರಿನಲ್ಲಿ ಬೆಳೆ ಪರಿಹಾರ ಹಂಚಿಕೆ ಮಾಡಿದ್ದ. ಅಲ್ಲದೆ ಬೆಳೆ ಪರಿಹಾರದ ಹಣವನ್ನು ಸ್ನೇಹಿತನ ಖಾತೆಗೆ ಜಮಾ ಆಗುವಂತೆ ಈ ಗ್ರಾಮ ಲೆಕ್ಕಾಧಿಕಾರಿ ಮಾಡಿದ್ದ ಎಂದು ಆರೋಪಿಸಲಾಗಿದೆ.
ಅಲ್ಲದೆ ಆಗಸ್ಟ್ 2019ರಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ರೈತರ ಅಪಾರ ಪ್ರಮಾಣದ ಬೆಳೆ ಹಾಳಾಗಿತ್ತು. ಇದರ ಬೆಳೆ ಪರಿಹಾರ ನೀಡುವಲ್ಲಿ ಸಹ ಗ್ರಾಮ ಲೆಕ್ಕಾಧಿಕಾರಿ ತಾರತಮ್ಯ ಮಾಡಿದ್ದ. ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ದೂರು ದಾಖಲಿಸಿದ್ದರು. ಇದರ ಆಧಾರದಲ್ಲಿ ಗ್ರಾಮೀಣ ಠಾಣೆಯ ಪೊಲೀಸರು ಗ್ರಾಮ ಲೆಕ್ಕಾಧಿಕಾರಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಚಿತ್ರದುರ್ಗ: ಬೆಳೆ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತರು ವಿಷದ ಬಾಟಲಿ ಹಿಡಿದು ಪ್ರತಿಭಟನೆ ನಡೆಸಿದರು.
ಸೆಪ್ಟಂಬರ್ ತಿಂಗಳಲ್ಲಿ ಸುರಿದ ಮಹಾಮಳೆಯಿಂದಾಗಿ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲ್ಲೊಡು ಸೇತುವೆ ಒಡೆದು ರೈತರ ಹೊಲಗಳಿಗೆ ನೀರು ನುಗ್ಗಿ ಬೆಳೆ ನಾಶವಾಗಿದೆ. ಇದರ ಪರಿಹಾರ ಮೊತ್ತವನ್ನು ಸರ್ಕಾರ ಇನ್ನೂ ನೀಡಿಲ್ಲ ಕೂಡಲೇ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯ ಅವರ ಕಚೇರಿ ಬಳಿ ರೈತ ಚಿಕ್ಕಣ್ಣ ಕುಟುಂಬ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಮಂಜುನಾಥ್ ಅವರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳು ಬರುವವರೆಗೆ ಕಚೇರಿ ಮುಂಭಾಗ ವಿಷದ ಬಾಟಲಿ ಹಿಡಿದು ಪ್ರತಿಭಟನೆ ನಡೆಸಿದರು.
ಕಚೇರಿಗೆ ಜಿಲ್ಲಾಧಿಕಾರಿಗಳು ಆಗಮಿಸುತ್ತಿದ್ದಂತೆ ಅವರ ಟೇಬಲ್ ಮೇಲೆ ವಿಷದ ಬಾಟಲಿ ಇಟ್ಟು ಅಳಲು ತೋಡಿಕೊಂಡರು. ಮಹಾಮಳೆಗೆ 2 ಎಕರೆಯಲ್ಲಿ ಬೆಳೆದಿದ್ದ ಸುಮಾರು 50 ತೆಂಗಿನ ಮರಗಳು ಹಾನಿಯಾಗಿದ್ದು, ಬುಡಸಮೇತಕೊಚ್ಚಿ ಹೋಗಿವೆ. ಘಟನೆ ನಡೆದು ಒಂದೂವರೆ ತಿಂಗಳು ಕಳೆದರೂ ಇನ್ನೂ ಪರಿಹಾರ ಸಿಕ್ಕಿಲ್ಲ ಅಂತ ಕಣ್ಣೀರಿಟ್ಟರು. ಶೀಘ್ರದಲ್ಲೇ ಬೆಳೆ ಪರಿಹಾರ ಬಿಡುಗಡೆ ಮಾಡಿ ಇಲ್ಲವಾದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಡಿಸಿಗೆ ಎಚ್ಚರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದ್ದು, 5,900 ರೂ.ಗಳನ್ನು ತಾತ್ಕಲಿಕ ಪರಿಹಾರ ನೀಡಲಾಗಿದೆ. ಆದರೆ ರೈತರ ಮನವಿ ಮೇರೆಗೆ ಹೊಸದುರ್ಗ ತಹಶೀಲ್ದಾರ್ ಅವರಿಂದ ವರದಿ ಪಡೆದು ಹೆಚ್ಚಿನ ಪರಿಹಾರಕ್ಕಾಗಿ ಮತ್ತೊಮ್ಮೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಜಿಲ್ಲೆಯ ಹೊಸದುರ್ಗ ತಾಲೂಕಿನಾದ್ಯಂತ ಸುರಿದ ಮಹಾಮಳೆಯಿಂದಾಗಿ ಕೆಲ್ಲೊಡು ಸೇತುವೆ ಒಡೆದು ರೈತರ ಹೊಲ ಗದ್ದೆಗಳಿಗೆ ನೀರು ನುಗ್ಗಿತ್ತು. ಇದರಿಂದಾಗಿ ಲಕ್ಷಾಂತರ ರೂ. ಮೌಲ್ಯದ 40ಕ್ಕೂ ಹೆಚ್ಚು ತೆಂಗಿನ ಮರಗಳು ಹಾಗೂ ಫಲಕ್ಕೆ ಬಂದಿದ್ದ ಅಡಿಕೆ, ದಾಳಿಂಬೆ ಹಾಗು ಮೆಕ್ಕೆಜೋಳ ನೀರಲ್ಲಿ ಕೊಚ್ಚಿ ಹೋಗಿತ್ತು. ಇದರಿಂದಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಸಮಸ್ಯೆ ಆಲಿಸಲು ತಾಲೂಕಿಗೆ ಭೇಟಿ ನೀಡುವ ಭರವಸೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಭೇಟಿ ನೀಡಿಲ್ಲ. ಇತ್ತ ಜಿಲ್ಲಾಡಳಿತ ಸಹ ಬೆಳೆ ಪರಿಹಾರ ನೀಡದೇ ನಿರ್ಲಕ್ಷ್ಯ ತೋರಿದ್ದು, ಕೇವಲ 5,949 ರೂ. ಪರಿಹಾರ ಕೊಟ್ಟು ಕೈ ತೊಳೆದುಕೊಂಡಿದೆ. ಈ ಬಗ್ಗೆ ಹಲವು ಬಾರಿ ಶಾಸಕ ಗೂಳಿಹಟ್ಟಿಶೇಖರ್ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಹೀಗಾಗಿ ರೈತರು ಪ್ರತಿಭಟನೆ ನಡೆಸಿದರು.
ಮಂಡ್ಯ: 2.20 ಎಕರೆ ಬಾಳೆ ಬೆಳೆ ಹಾನಿಯಾಗಿದ್ದಕ್ಕೆ ಕೃಷ್ಣರಾಜಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ವಿಜಯ ಹೊಸಹಳ್ಳಿ ಗ್ರಾಮದ ರೈತರೊಬ್ಬರಿಗೆ ಪರಿಹಾರದ ಹಣವೆಂದು ತಹಶೀಲ್ದಾರ್ 1,350 ರೂ. ಚೆಕ್ ನೀಡಿದ್ದಾರೆ.
40 ವರ್ಷದ ರೈತ ಸಿದ್ದಲಿಂಗೇಗೌಡರು 2 ಎಕರೆ 20 ಗುಂಟೆ ಜಮೀನಿನಲ್ಲಿ ಬಾಳೆ ಬೆಳೆ ಬೆಳೆದಿದ್ದರು. ಕಳೆದ ತಿಂಗಳು ಸುರಿದ ಭಾರೀ ಮಳೆಗೆ ಒಂದು ಎಕರೆ ಬೆಳೆ ಸಂಪೂರ್ಣ ನಾಶವಾಗಿತ್ತು. 1 ಲಕ್ಷಕ್ಕೂ ಹೆಚ್ಚು ಮೌಲ್ಯದ ಬಾಳೆ ಬೆಳೆ ನಾಶವಾಗಿತ್ತು. ಅಂದು ಸಂಬಂಧಪಟ್ಟ ಅಧಿಕಾರಿಗಳು ನಾಶವಾಗಿದ್ದ ಬೆಳೆ ವೀಕ್ಷಣೆ ಮಾಡಿ ಪರಿಹಾರ ಕೊಡುವುದಾಗಿ ಭರವಸೆ ನೀಡಿದ್ದರು.
ಪ್ರಕೃತಿ ವಿಕೋಪದಿಂದ ನಾಶವಾಗಿದ್ದ ಬೆಳೆಗೆ ಕೇವಲ 1,350 ರೂಪಾಯಿಗಳನ್ನು ಪರಿಹಾರದ ಹಣ ಎಂದು ಕೆ.ಆರ್.ಪೇಟೆ ತಹಶೀಲ್ದಾರ್ ನೀಡಿದ್ದಾರೆ. ಪರಿಹಾರ ಹಣದ ಚೆಕ್ ನೋಡಿ ರೈತ ಸಿದ್ದಲಿಂಗೇಗೌಡ ದಿಕ್ಕು ತೋಚದಂತಾಗಿದ್ದಾರೆ.
ನಾನು ಸಾಲ ಮಾಡಿ ಬೆಳೆದಿದ್ದ ಬೆಳೆ ಪ್ರಕೃತಿ ವಿಕೋಪದಿಂದ ನಾಶವಾಗಿದೆ. ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದ ಅಧಿಕಾರಿಗಳು ಕೇವಲ 1,350 ರೂ.ಗಳ ಪರಿಹಾರ ನೀಡಿ ಕೈ ತೊಳೆದುಕೊಂಡಿದ್ದಾರೆ. ಹೀಗಾಗಿ ನನಗೆ ನೀಡಿದ್ದ ಚೆಕ್ ತಹಶೀಲ್ದಾರರಿಗೆ ಮರಳಿ ನೀಡಿದ್ದೇನೆ. ಹೆಚ್ಚಿನ ಪರಿಹಾರಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು: ಭತ್ತ ಬೆಳಯೋಕೆ ಸಿದ್ಧವಾಗಿದ್ದವರಿಗೆ ಸರ್ಕಾರ ರಾಗಿ ಬೆಳೆಯಿರಿ ಎಂದು ಹೇಳಿದ್ದರಿಂದ ರೈತರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜಿಲ್ಲೆಯ ಕೆ.ಆರ್. ನಗರ ತಾಲೂಕು ಭತ್ತದ ಕಣಜ. ಇಲ್ಲಿ ಬರೋಬ್ಬರಿ 17 ಸಾವಿರ ಹೆಕ್ಟೇರ್‍ನಲ್ಲಿ ರೈತರು ಭತ್ತ ಬೆಳೆಯುತ್ತಾರೆ. ಭತ್ತದ ಕೃಷಿಗಾಗಿ ರೈತರು ಭೂಮಿಯನ್ನು ಹದ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ದಿಢೀರನೆ ರೈತರಿಗೆ ಈ ಬಾರಿ ಭತ್ತ ಬೆಳೆಯಬೇಡಿ ಬದಲಾಗಿ ರಾಗಿ ದ್ವಿಧಳ ಧಾನ್ಯಗಳನ್ನು ಬೆಳೆಯಿರಿ ಎಂದು ಆದೇಶ ನೀಡಿದೆ.
ಒಂದು ವೇಳೆ ಭತ್ತ ಬೆಳೆದು ನೀರಿನ ಅಭಾವದಿಂದ ಬೆಳೆ ನಷ್ಟವಾದರೆ ಯಾವುದೇ ಪರಿಹಾರ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. ವಾಸ್ತವಾವಾಗಿ ಅಣೆಕಟ್ಟು ಸಮೀಪ ಇರುವ ಜಮೀನಿನಲ್ಲಿ ತೇವಾಂಶದ ಕಾರಣ ರಾಗಿ ಮತ್ತು ದ್ವಿದಳ ಧಾನ್ಯಗಳನ್ನು ಬೆಳೆಯಲು ಆಗದು. ಹಾಗಂತ ಭತ್ತ ಬೆಳೆದು ಅದು ನಷ್ಟವಾದರೆ ಪರಿಹಾರ ಕೊಡುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಧಿಕಾರಿಗಳ ಈ ಹೇಳಿಕೆಯಿಂದ ರೈತರು ಏನು ಮಾಡಬೇಕು ಎಂದು ತಿಳಿಯದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬಳ್ಳಾರಿ: ಅಧಿಕಾರಿಗಳೇ ನಕಲಿ ಸಹಿ ಮಾಡಿ ರೈತರಿಗೆ ಸೇರಬೇಕಾಗಿದ್ದ ಬೆಳೆ ಪರಿಹಾರದ ಹಣವನ್ನ ನುಂಗಿ ನೀರು ಕುಡಿದಿರುವಂತಹ ಘಟನೆ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹತ್ತಕ್ಕೂ ಹೆಚ್ಚು ಹಳ್ಳಿಗಳ ರೈತರಿಗೆ ಸೇರಬೇಕಾದ ಬೆಳೆನಷ್ಟ ಪರಿಹಾರವನ್ನು ಅಧಿಕಾರಿಗಳು ನುಂಗಿ ನೀರು ಕುಡಿದಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರ ಕಚೇರಿಯ ಸಿಬ್ಬಂದಿ ರೈತರ ನಕಲಿ ಸಹಿ ಮಾಡಿ ಮುಂಡರಗಿ, ದಾವಣಗೆರೆ ಪಟ್ಟಣದ ಎಸ್‍ಬಿಐ ಬ್ಯಾಂಕ್‍ನಲ್ಲಿ ಬರೋಬ್ಬರಿ 2 ಕೋಟಿ ರೂ. ಡ್ರಾ ಮಾಡಿರೋದು ದಾಖಲೆ ಸಹಿತ ಬಯಲಾಗಿದೆ.
ಭ್ರಷ್ಟ ಅಧಿಕಾರಿಗಳ ನುಂಗಾಟ ಕಂಡು ಬೆಚ್ಚಿಬಿದ್ದಿರುವ ಹೊಸಪೇಟೆ ಉಪವಿಭಾಗಾಧಿಕಾರಿಗಳೇ ತನಿಖೆಗೆ ಆದೇಶಿಸಿದ್ದಾರೆ. ಆದಷ್ಟು ಶೀಘ್ರವೇ ತನಿಖೆ ಪೂರ್ಣಗೊಳಿಸಿ ರೈತರಿಗೆ ಮೋಸ ಮಾಡಿದ ಅಧಿಕಾರಿಗಳಿಗೆ ಶಿಕ್ಷೆ ನೀಡ್ಬೇಕಿದೆ.
ಜಿಲ್ಲೆಯ ಮದ್ದೂರು ತಾಲೂಕಿನ ಆಬಲವಾಡಿ ಗ್ರಾಮದ ರೈತ ಕೃಷ್ಣೇಗೌಡ (41) ಆತ್ಮಹತ್ಯೆಗೆ ಶರಣಾದ ರೈತ. ಕೃಷ್ಣೇಗೌಡ ಅವರು ಸುಮಾರು ಒಂದು ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆ ಬೆಳೆದಿದ್ರು. ಬೇಸಾಯಕ್ಕೆಂದು ಸುಮಾರು ಮೂರುವರೆ ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ರು. ಆದ್ರೆ ಬೆಳೆ ನೀರಿಲ್ಲದೆ ಒಣಗಿ ಹೋಗಿತ್ತು. ಜೊತೆಗೆ ಸಾಲಗಾರರ ಕಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಬೇಸತ್ತು ಇಂದು ಬೆಳಗ್ಗೆ ತಮ್ಮ ಜಮೀನಿನ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ರೈತ ಕೃಷ್ಣೇಗೌಡ, ನನ್ನ ಸಾವಿಗೆ ನಾನೇ ಕಾರಣ. ನನ್ನ ಹೆಂಡತಿ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ವ್ಯವಸಾಯಕ್ಕಾಗಿ ಬ್ಯಾಂಕ್ ನಲ್ಲಿ ಮತ್ತು ಸ್ನೇಹಿತರ ಬಳಿ ಸಾಲ ಮಾಡಿದ್ದೆ. ಯಾವುದೇ ಬೆಳೆ ಆಗದಿರುವುದರಿಂದ ಮನನೊಂದಿದ್ದೇನೆ. ದಯಮಾಡಿ ಕ್ಷಮಿಸಿ ಅಂತಾ ಬರೆದಿದ್ದಾರೆ. ಈ ಸಂಬಂಧ ಕೊಪ್ಪ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.