Tag: ಬೆಳೆ ಹಾನಿ

  • ನೈಋತ್ಯ ಮುಂಗಾರಿನಲ್ಲಿ ಸುಮಾರು 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿ – ಯಾವ ಜಿಲ್ಲೆಗೆ ಎಷ್ಟು ಲಾಸ್?

    ನೈಋತ್ಯ ಮುಂಗಾರಿನಲ್ಲಿ ಸುಮಾರು 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿ – ಯಾವ ಜಿಲ್ಲೆಗೆ ಎಷ್ಟು ಲಾಸ್?

    ಬೆಂಗಳೂರು: ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ (Flood) ಹಿನ್ನೆಲೆಯಲ್ಲಿ ಸರ್ಕಾರ ಮಾಡಿದ ಬೆಳೆಹಾನಿ (Crop Loss) ಜಂಟಿ ಸಮೀಕ್ಷೆ ಹಾಗೂ ಪರಿಹಾರ ವಿವರಗಳ ಕಂದಾಯ ಇಲಾಖೆ ಮಾಹಿತಿ ನೀಡಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda ) ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಈವರೆಗೂ ಬಿಡುಗಡೆಯಾದ ಪರಿಹಾರದ ಬಗ್ಗೆ ಮಾಹಿತಿ ನೀಡಿದ್ದಾರೆ.

    2025ರ ನೈಋತ್ಯ ಮುಂಗಾರು (Southwest Mansoon) ಅವಧಿಯಲ್ಲಿ ಸೆಪ್ಟೆಂಬರ್ ಮೊದಲ ವಾರದವರೆಗೆ ಸುರಿದ ಭಾರೀ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆ ಪ್ರದೇಶಗಳು ಜಲಾವೃತಗೊಂಡು ಸುಮಾರು 5.29 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕಾ ಬೆಳೆ ನಷ್ಟವಾಯಿತು. ಬೆಳೆ ಹಾನಿಗೊಂಡ ಜಿಲ್ಲೆಗಳು ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಬೆಳೆ ಹಾನಿ ಪರಿಹಾರ ಪಾವತಿಗೆ ಸಿದ್ಧವಾಗಿದ್ದವು. ತದನಂತರ ಸೆಪ್ಟೆಂಬರ್ ಮಾಹೆಯ ಅಂತ್ಯದಲ್ಲಿ ಸುರಿದ ಭಾರಿ ಮಳೆ ಹಾಗೂ ಮಹಾರಾಷ್ಟ್ರ ಭಾಗದ ಜಲಾಶಯಗಳಿಂದ ಹೊರ ಹರಿಸಲಾದ ನೀರಿನಿಂದಾಗಿ ಉತ್ತರ ಒಳನಾಡಿನ ಭೀಮಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ನದಿ ಪ್ರವಾಹ ಉಂಟಾಗಿ ಈ ಭಾಗದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ 4 ಜಿಲ್ಲೆಗಳಲ್ಲಿ ಸುಮಾರು 7.24 ಲಕ್ಷ ಹೆಕ್ಟೇರ್ ಬೆಳೆ ನಷ್ಟಕ್ಕೆ ಕಾರಣವಾಯಿತು ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ. ಇದನ್ನೂ ಓದಿ: ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ಕೊಡಿ: ಜಾಲಿವುಡ್ ಆಡಳಿತ ಮಂಡಳಿ

    ಈ 4 ಜಿಲ್ಲೆಗಳು ಬೆಳೆ ಹಾನಿ ಜಂಟಿ ಸಮೀಕ್ಷೆಯನ್ನು ಪುನಃ ಮಾಡಬೇಕಾದ ಅಗತ್ಯವಿದ್ದು, ಬೆಳೆ ಹಾನಿ ಪ್ರದೇಶವು ಪರಿಷ್ಕರಣೆಗೊಳ್ಳಲಿದ್ದು, ಜಂಟಿ ಸಮೀಕ್ಷೆಯು ಸುಮಾರು 10 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಒಟ್ಟಾರೆಯಾಗಿ, 2025 ನೈಋತ್ಯ ಮುಂಗಾರಿನಲ್ಲಿ ಸುಮಾರು 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿರುವುದು ಕಂಡು ಬಂದಿದೆ ಎಂದರು. ಇದನ್ನೂ ಓದಿ: ಬೆಂಗ್ಳೂರು ಗುಂಡಿಗಳನ್ನ ಯಾವಾಗ ಬಂದ್ ಮಾಡಿಸ್ತೀರಾ? – ಬಿಗ್‌ಬಾಸ್‌ಗೆ ಬೀಗ ಹಾಕಿದ ಸರ್ಕಾರಕ್ಕೆ JDS ಲೇವಡಿ

    ಈಗಾಗಲೇ ಬೆಳೆ ಹಾನಿ ಜಂಟಿ ಸಮೀಕ್ಷೆ ಪೂರ್ಣಗೊಳಿಸಲಾದ 9 ಜಿಲ್ಲೆಗಳಲ್ಲಿನ ಸುಮಾರು 5.29 ಲಕ್ಷ ಹೆಕ್ಟೇರ್ ಬೆಳೆಹಾನಿಗೆ ಮೊದಲ ಸುತ್ತಿನ ಬೆಳೆ ಹಾನಿ ಪರಿಹಾರ ಪಾವತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್‌ಗೆ 8,500 ರೂ. ಹೆಚ್ಚುವರಿ ಪಾವತಿಯೊಂದಿಗೆ ಮಳೆಯಾಶ್ರಿತ ಬೆಳೆ ಹಾನಿಗೆ 17000 ರೂ., ನೀರಾವರಿ ಬೆಳೆ ಹಾನಿಗೆ 25500 ರೂ. ಮತ್ತು ದೀರ್ಘಕಾಲಿಕ ಬೆಳೆ ಹಾನಿಗೆ 31,000 ರೂ. ಬೆಳೆ ಹಾನಿ ಪರಿಹಾರ ಪಾವತಿಯನ್ನು ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಬಿಗ್‌ಬಾಸ್‌ಗೆ ಬೀಗ| 2 ಸಾವಿರ ಉದ್ಯೋಗಿಗಳಿಗೆ ಸಮಸ್ಯೆ – ಇಂದು ಮಧ್ಯಾಹ್ನ ತುರ್ತು ಅರ್ಜಿ ವಿಚಾರಣೆ

    ಇತ್ತೀಚೆಗೆ ಹಾನಿಗೊಳಗಾದ ಸುಮಾರು 7.24 ಲಕ್ಷ ಹೆಕ್ಟೇರ್ ಬೆಳೆ ಹಾನಿ ಜಂಟಿ ಸಮೀಕ್ಷೆಯು ಪ್ರಗತಿಯಲ್ಲಿದ್ದು, ಸುಮಾರು 10 ದಿನಗಳಲ್ಲಿ ಬೆಳೆ ಹಾನಿ ಪರಿಹಾರ ಪಾವತಿ ಮಾಡಲಾಗುವುದು. ದೇಶದಲ್ಲೇ ರಾಜ್ಯ ಸರ್ಕಾರವು ಸಂಪೂರ್ಣ ಪಾರದರ್ಶಕತೆಯೊಂದಿಗೆ ಆಧಾರ್ ಜೋಡಣೆ ಹೊಂದಿದ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಅತ್ಯಂತ ತ್ವರಿತ ಪಾವತಿ ವ್ಯವಸ್ಥೆಯೊಂದಿಗೆ ಬೆಳೆ ಹಾನಿ ಪರಿಹಾರ ಪಾವತಿ ಮಾಡಲಾಗುತ್ತಿದೆ. ರಾಜ್ಯದಲ್ಲಿ ಅತಿವೃಷ್ಠಿ ಮತ್ತು ಪ್ರವಾಹ ಪೀಡಿತ ಪ್ರದೇಶದ ರೈತರ ಬೆಳೆ ಹಾನಿ ಪರಿಹಾರ ಪಾವತಿಗಾಗಿ ಸುಮಾರು 2000 ಕೋಟಿ ರೂ. ಪಾವತಿ ಪ್ರಕ್ರಿಯೆಯು ಪ್ರಾರಂಭಿಸಲಾಗಿದ್ದು, ಇನ್ನು 30 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಇದನ್ನೂ ಓದಿ: Kolar | ಮದುವೆ ಮುಗಿಸಿ ವಾಪಸ್ ಹೋಗುತ್ತಿದ್ದ ಬಸ್ ಪಲ್ಟಿ – 30ಕ್ಕೂ ಹೆಚ್ಚು ಮಂದಿಗೆ ಗಾಯ

  • ಗಡಿಜಿಲ್ಲೆ ಬೀದರ್‌ನಲ್ಲಿ ಮಾಂಜ್ರಾ ಪ್ರವಾಹದ ಎಫೆಕ್ಟ್‌ – ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶ

    ಗಡಿಜಿಲ್ಲೆ ಬೀದರ್‌ನಲ್ಲಿ ಮಾಂಜ್ರಾ ಪ್ರವಾಹದ ಎಫೆಕ್ಟ್‌ – ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶ

    ಬೀದರ್: ಜಿಲ್ಲೆಯಲ್ಲಿ ಸಂಭವಿಸಿದ್ದ ಮಾಂಜ್ರಾ ಪ್ರವಾಹದಿಂದಾಗಿ ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.

    ಸಾವಿರಾರು ಎಕರೆಯಲ್ಲಿ ಪ್ರವಾಹದ ನೀರು ಬರೋಬ್ಬರಿ 10 ದಿನಗಳ ಕಾಲ ನಿಂತು ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿದೆ. ಸೋಯಾ, ಕಬ್ಬು, ಹೆಸರು, ತೊಗರಿ ಸೇರಿದಂತೆ ಎಲ್ಲಾ ಬೆಳೆಗಳು ಕೊಳೆತು ಕಪ್ಪಾಗಿ ಹೋಗಿದೆ.ಇದನ್ನೂ ಓದಿ:ಬಿಹಾರ ವಿಧಾನಸಭೆ ಚುನಾವಣೆ; ಎನ್‌ಡಿಎ-ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ

    ಹುಲಸೂರು, ಭಾಲ್ಕಿ, ಔರಾದ್, ಬೀದರ್ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಲಕ್ಷ ಲಕ್ಷ ಎಕರೆ ಬೆಳೆಗಳು ಮಾಂಜ್ರಾ ಪ್ರವಾಹದ ಪಾಲಾಗಿದೆ. ಬೀದರ್ ತಾಲೂಕಿನ ಹಿಪ್ಪಳಗಾಂವ್ ಗ್ರಾಮದ ಕಲ್ಯಾಣರಾವ್ ಪಾಟೀಲ್, ರಾಮಶೆಟ್ಟಿ ಬಿರಾದರ್ಷ, ಶಿವರಾಜ್ ಬಿರಾದರ್, ಸಂಜುಕುಮಾರ್ ದನ್ಗರ್ ಸೇರಿದಂತೆ 800ಕ್ಕೂ ಅಧಿಕ ಎಕರೆಯಲ್ಲಿ ಬೆಳೆದಿದ್ದ ಬೆಳೆಗಳು ಸರ್ವನಾಶವಾಗಿದೆ.

    40 ವರ್ಷದಲ್ಲೇ ಈ ಬಾರಿ ಮಾಂಜ್ರಾ ಪ್ರವಾಹ ಬಂದಿದ್ದು, ನದಿ ದಡದಲ್ಲಿರುವ ಸಾವಿರಾರು ಎಕರೆ ಬೆಳೆಗಳು ಹಾಳಾಗಿದೆ. ಸಿದ್ದರಾಮಯ್ಯ ಮೇಲಿಂದ ಬಂದು ಮೇಲೆಯೇ ಹೋದರು. ಇಷ್ಟೊಂದು ಬೆಳೆ ಹಾನಿಯಾದರೂ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಕ್ಷೇತ್ರದ ಶಾಸಕ ಹಾಗೂ ಸಚಿವ ರಹೀಂಖಾನ್ ಒಂದು ಬಾರಿಯೂ ಬಂದಿಲ್ಲ ಎಂದು ಜಿಲ್ಲೆಯ ರೈತರು ಹಿಡಿಶಾಪ ಹಾಕುತ್ತಿದ್ದಾರೆ.ಇದನ್ನೂ ಓದಿ: ರಾಯಚೂರಿನಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌

  • ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಧಾರಾಕಾರ ಮಳೆ – ಅಂಡರ್ ಪಾಸ್ ಮುಳುಗಡೆ; ಬೆಳೆಗಳು ಜಲಾವೃತ

    ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಧಾರಾಕಾರ ಮಳೆ – ಅಂಡರ್ ಪಾಸ್ ಮುಳುಗಡೆ; ಬೆಳೆಗಳು ಜಲಾವೃತ

    ಚಿಕ್ಕಬಳ್ಳಾಪುರ: ಬರದನಾಡು ಅಂದೇ ಖ್ಯಾತಿ ಪಡೆದಿದ್ದ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆ, ಇದೀಗ ಮಲೆನಾಡಿನಂತಾಗಿದೆ. ಕಳೆದ ಮೂರು ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ-ಕುಂಟೆ, ಜಲಾಶಯಗಳು ಮೈದುಂಬಿ ಹರಿಯುತ್ತಿವೆ. ಬಾಗೇಪಲ್ಲಿ ತಾಲೂಕಿನ ಚಿತ್ರಾವತಿ ಜಲಾಶಯ ನೀರಿನಿಂದ ತುಂಬಿ ಹರಿಯುತ್ತಿರುವುದು ಜನರಲ್ಲಿ ಹರ್ಷ ಮೂಡಿಸಿದೆ.

    ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಿಂದ 80 ಅಡಿ ಎತ್ತರದಿಂದ ಧುಮ್ಮುಕ್ಕುತ್ತಿರುವ ನೀರು ನಯನ ಮನೋಹರ ದೃಶ್ಯ ಸೃಷ್ಟಿಸಿದೆ. ಮಂಚೇನಹಳ್ಳಿ ರಾಯನಕಲ್ಲು ಕೆರೆ ಹಾಗೂ ಗೌರಿಬಿದನೂರು ತಾಲೂಕಿನ ಉತ್ತರ ಪಿನಾಕಿನಿ ನದಿಗೂ ಮಳೆ ಜೀವ ತುಂಬಿದೆ. ಆದರೆ, ಭಾರೀ ಮಳೆಯಿಂದ (Heavy Rain) ಚಿಕ್ಕಬಳ್ಳಾಪುರ ನಗರದಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಚನಬಲೆ ಅಂಡರ್ ಪಾಸ್ ನೀರಿನಿಂದ ಮುಳುಗಡೆಯಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇದನ್ನೂ ಓದಿ: ದುರಹಂಕಾರದ ಮಾತು ಬಿಟ್ಟು, ಜನಪರ ಕೆಲಸ ಮಾಡಿ – ಉದ್ಯಮಿಗಳ ಬಗ್ಗೆ ಡಿಕೆಶಿ ಹೇಳಿಕೆಗೆ ಅಶ್ವಥ್ ನಾರಾಯಣ್‌ ಖಂಡನೆ

    ರೈತರಿಗೆ ಸಂಕಷ್ಟ:
    ಮುಷ್ಟೂರು ಕೆರೆ ಕೋಡಿ ಹರಿದು, ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಹಿಂಭಾಗದ ರಾಜಕಾಲುವೆಗಳ ಬದಲಿಗೆ ಹೊಲ-ತೋಟಗಳಿಗೆ ನೀರು ನುಗ್ಗಿದೆ. ದ್ರಾಕ್ಷಿ, ಗುಲಾಬಿ, ಎಲೆ ಕೋಸು, ಬದನೆಕಾಯಿ, ರಾಗಿ ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿವೆ. ರಾಜಕಾಲುವೆಗಳು ಹಾಗೂ ಚರಂಡಿಗಳು ಮುಚ್ಚಿಕೊಂಡಿರುವುದೇ ಹೊಲ-ತೋಟಗಳಿಗೆ ನೀರು ನುಗ್ಗಲು ಕಾರಣ ಎಂದು ರೈತರು (Farmers) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270 ಕೋಟಿ ಕೊಡಲು ಒಪ್ಪಿಗೆ: ಎಂ.ಬಿ ಪಾಟೀಲ್

    ನಗರಸಭೆ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಕೆರೆ-ಜಲಾಶಯಗಳು ತುಂಬಿ ಹರಿಯುತ್ತಿರುವುದು ಸಂತಸದ ಸಂಗತಿ. ಆದ್ರೆ, ರಾಜಕಾಲುವೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯದಿಂದ ನಮ್ಮ ಬೆಳೆಗಳು ಹಾನಿಯಾಗಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 88% ಅಂಕ ಪಡೆದ್ರೂ ಹಾಸ್ಟೆಲ್‌ ಸಿಗದ್ದಕ್ಕೆ ವೇದಿಕೆಯಲ್ಲೇ ಸನ್ಮಾನ ತಿರಸ್ಕರಿಸಿ ವಿದ್ಯಾರ್ಥಿನಿಯಿಂದ ಆಕ್ರೋಶ!

    ಒಟ್ಟಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿ ಸಂತಸ ತಂದಿದ್ದರೂ, ಬೆಳೆ ನಷ್ಟ ಮತ್ತು ನಗರದಲ್ಲಿ ಜಲಾವೃತ ಸಮಸ್ಯೆಗಳು ಜನರಿಗೆ ಕಹಿ ಅನುಭವವಾಗಿವೆ.

  • ತಹಶೀಲ್ದಾರ್ ಕಚೇರಿಗೆ ರೈತರ ಮುತ್ತಿಗೆ – ಹಾನಿಯಾದ ಬೆಳೆಗಳಿಗೆ ಪರಿಹಾರಕ್ಕೆ ಆಗ್ರಹ

    ತಹಶೀಲ್ದಾರ್ ಕಚೇರಿಗೆ ರೈತರ ಮುತ್ತಿಗೆ – ಹಾನಿಯಾದ ಬೆಳೆಗಳಿಗೆ ಪರಿಹಾರಕ್ಕೆ ಆಗ್ರಹ

    ಗದಗ: ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ರೈತೆರು ಎತ್ತು, ಚಕ್ಕಡಿಗಳೊಂದಿಗೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆ ಮುಂಡರಗಿ (Mudaragi) ಪಟ್ಟಣದಲ್ಲಿ ನಡೆದಿದೆ.

    ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಎತ್ತು, ಚಕ್ಕಡಿಗಳನ್ನು ನಿಲ್ಲಿಸಿ ರೈತರು ಪ್ರತಿಭಟನೆ ಮಾಡಿದರು. ಹೆಸರು, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಸೂರ್ಯಕಾಂತಿ ಸೇರಿದಂತೆ ಅನೇಕ ಬೆಳೆಗಳು ಮಳೆಯಿಂದ ನಾಶವಾಗಿವೆ. ರೈತರು (Farmers) ಸಾಕಷ್ಟು ಸಾಲ ಮಾಡಿ ಬೆಳೆದ ಬೆಳೆಗಳು ಕೈತಪ್ಪಿವೆ. ಅನ್ನದಾತರು ಬೀದಿಗೆ ಬರುವಂತಾಗಿದೆ. ಇನ್ನು ಅಲ್ಪ ಸ್ವಲ್ಪ ಬೆಳೆಗೆ ಖರೀದಿ ಕೇಂದ್ರ ಇಲ್ಲ. ಶೀಘ್ರದಲ್ಲೇ ಖರೀದಿ ಕೇಂದ್ರ ಆರಂಭಿಸಬೇಕು. ಬೆಳೆ ವಿಮೆ ಏಜೆಂಟ್‌ಗಳ ಹಾವಳಿ ತಪ್ಪಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಾವೇರಿ | ಕತ್ತು ಸೀಳಿ ಡ್ಯಾನ್ಸ್ ಮಾಸ್ಟರ್ ಬರ್ಬರ ಹತ್ಯೆ – ಲಾಂಗ್‌ಡ್ರೈವ್ ಹೋಗಿ ಬರುತ್ತೇನೆ ಅಂದಾತ ಶವವಾಗಿ ಪತ್ತೆ

    ಈ ವೇಳೆ ಕೃಷಿ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿಗಳು ಸರಿಯಾಗಿ ರೈತರ ಬೆಳೆ ಸಮೀಕ್ಷೆ ಮಾಡುತ್ತಿಲ್ಲ. ಕಾಟಾಚಾರಕ್ಕೆ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಮೈಸೂರಿನ ಮಧುಸೂದನ್‌ಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ – ಸೆ.5ರಂದು ರಾಷ್ಟ್ರಪತಿಗಳಿಂದ ಪ್ರದಾನ

    ಬಳಿಕ ಪ್ರತಿಭಟನಾ ಸ್ಥಳಕ್ಕೆ ಬಂದ ಕೃಷಿ ಅಧಿಕಾರಿಗಳನ್ನು ರೈತರು ತರಾಟೆಗೆ ತೆಗೆದುಕೊಂಡರು. ಕೆಲಕಾಲ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಮುಂದಾದರು. ಪ್ರತಿಭಟನೆಯಲ್ಲಿ ರೈತ ಮುಖಂಡರು, ಮಹಿಳೆಯರು, ಸಾರ್ವಜನಿಕರು ಭಾಗಿಯಾಗಿದ್ದರು.

  • ಗದಗ | ಬೆಳೆ ಹಾನಿ ಪ್ರದೇಶಗಳಿಗೆ ಹೆಚ್.ಕೆ ಪಾಟೀಲ್ ಭೇಟಿ – ರೈತರಿಗೆ ಪರಿಹಾರದ ಭರವಸೆ

    ಗದಗ | ಬೆಳೆ ಹಾನಿ ಪ್ರದೇಶಗಳಿಗೆ ಹೆಚ್.ಕೆ ಪಾಟೀಲ್ ಭೇಟಿ – ರೈತರಿಗೆ ಪರಿಹಾರದ ಭರವಸೆ

    ಗದಗ: ನಿರಂತರ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಗದಗ (Gadag) ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ (H K Patil) ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಗದಗ ತಾಲೂಕಿನ ಬಿಂಕದಕಟ್ಟಿ ಭಾಗದಲ್ಲಿ ಹೆಸರು ಹಾಗೂ ಮೆಕ್ಕೆಜೋಳ ಬೆಳೆ ಹಾನಿಯಾಗಿತ್ತು. ಬಿಂಕದಕಟ್ಟಿ ರೈತ ಶ್ರೀನಿವಾಸ್ ಇಟಗಿ ಅವರ 10 ಎಕ್ರೆ ಜಮೀನಿನಲ್ಲಿ ಬೆಳೆದ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ಬೆಳೆಹಾನಿ ವೀಕ್ಷಣೆ ನಡೆಸಿ ಪರಿಹಾರದ ಭರವಸೆ ನೀಡಿದರು. ಇದನ್ನೂ ಓದಿ: ಡಿಕೆಶಿ ಆರ್‌ಎಸ್‌ಎಸ್ ಗೀತೆ ಹಾಡಿದ್ದನ್ನು ಸ್ವಾಗತಿಸುತ್ತೇವೆ: ಅಶ್ವಥ್ ನಾರಾಯಣ್

    ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ನಿಖರ ಸಮೀಕ್ಷೆ ನಡೆಸಿ, ಹಾನಿಗೊಳಗಾದ ಪ್ರತಿ ಎಕರೆಯ ಲೆಕ್ಕವನ್ನು ದಾಖಲಿಸುವಂತೆ ಸೂಚನೆ ನೀಡಿದರು. ರೈತರ ಕಷ್ಟವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ ದೊರೆಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ಷೇಪ

    ಗದಗ ಜಿಲ್ಲೆಯಲ್ಲಿ ಆ.1 ರಿಂದ ಆ.18 ವರೆಗೆ ವಾಡಿಕೆ ಮಳೆ 46.9 ಮೀ.ಮೀ ಆಗಬೇಕಿತ್ತು. ಆದ್ರೆ 140.2 ರಷ್ಟು ಮಳೆ ಆಗುವ ಮೂಲಕ 198.9% ರಷ್ಟು ಅಧಿಕ ಮಳೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 94,884 ಹೆಕ್ಟೇರ್ ಬೆಳೆ ಹಾನಿಗೀಡಾಗಿದೆ. ಇದರಲ್ಲಿ ಹೆಸರು ಬೆಳೆ 67,533 ಹೆಕ್ಟೇರ್ ನಷ್ಟು ಹಾನಿಯಾಗಿದೆ ಎಂದು ಪ್ರಾಥಮಿಕ ಸಮೀಕ್ಷೆ ಮೂಲಕ ಅಂದಾಜಿಸಲಾಗಿದೆ. ಇನ್ನು ಸಮೀಕ್ಷಾಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಪ್ರೀತ್ಸೆ ಪ್ರೀತ್ಸೆ ಎಂದು ವಿದ್ಯಾರ್ಥಿನಿಯ ಹಿಂದೆ ಬಿದ್ದು, ಕೊಲೆ ಬೆದರಿಕೆ – ಪಾಗಲ್ ಪ್ರೇಮಿ ಅರೆಸ್ಟ್

    ಈ ವೇಳೆ ಎಡಿಸಿ ದುರಗೇಶ್ ಕೆ.ಆರ್, ಎಸಿ ಗಂಗಪ್ಪ, ತಹಶೀಲ್ದಾರ್ ಶ್ರೀನಿವಾಸ್ ಕುಲಕರ್ಣಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ, ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಶೈಲೇಂದ್ರ ಬಿರಾದಾರ ಸೇರಿದಂತೆ ಅನೇಕ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.

  • ಭಾರೀ ಮಳೆಗೆ ಅವಾಂತರ ಸೃಷ್ಟಿ – ಕೋಟ್ಯಂತರ ರೂ. ಮೌಲ್ಯದ 30 ಎಕರೆ ದಾಳಿಂಬೆ ನಾಶ

    ಭಾರೀ ಮಳೆಗೆ ಅವಾಂತರ ಸೃಷ್ಟಿ – ಕೋಟ್ಯಂತರ ರೂ. ಮೌಲ್ಯದ 30 ಎಕರೆ ದಾಳಿಂಬೆ ನಾಶ

    ರಾಯಚೂರು: ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಕೋಟ್ಯಂತರ ರೂಪಾಯಿ ಮೌಲ್ಯದ 30 ಎಕರೆ ದಾಳಿಂಬೆ ಬೆಳೆ ನಾಶವಾಗಿರುವ ಘಟನೆ ಸಿಂಧನೂರು (Sindhanuru) ತಾಲೂಕಿನಲ್ಲಿ ನಡೆದಿದೆ.

    ಗೊಬ್ಬರಕಲ್, ಹುಡಾ, ಸಾಲಗುಂದ ಸೇರಿ ವಿವಿಧೆಡೆ ಸುರಿದ ಭಾರೀ ಮಳೆಗೆ ಮಲ್ಲಯ್ಯ ಸ್ವಾಮಿ, ಶಿವಲಿಂಗಯ್ಯಸ್ವಾಮಿ, ಹನುಮಂತರೆಡ್ಡಿ ಅವರಿಗೆ ಸೇರಿದ 30 ಎಕರೆ ದಾಳಿಂಬೆ ಬೆಳೆ ನಾಶವಾಗಿದೆ.ಇದನ್ನೂ ಓದಿ: ವಾಲ್ಮೀಕಿ ಸಮುದಾಯದ ದಯಾನಂದ್‌ ಮೇಲೆ ಏಕೆ ಸಿಎಂಗೆ ಕೋಪ – ಪ್ರತಾಪ್‌ ಸಿಂಹ ಪ್ರಶ್ನೆ

    ಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ದಾಳಿಂಬೆ ಬೆಳೆ ನೆಲಕ್ಕೆ ಬಿದ್ದು ಹಾಳಾಗಿದೆ. ಎಕರೆಗೆ 3 ಲಕ್ಷ ರೂ. ಖರ್ಚು ಮಾಡಿ ಬೆಳೆದಿದ್ದ ದಾಳಿಂಬೆ ಕೆಲವೇ ಕೆಲವು ದಿನಗಳಲ್ಲಿ ಮಾರುಕಟ್ಟೆ ಸೇರಬೇಕಿತ್ತು. ಆದರೆ ಇದೀಗ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಕೆ.ಜಿಗೆ 130 ರಿಂದ 160 ರೂ.ಯಂತೆ ಮಾರಾಟವಾಗುತ್ತಿದ್ದು, ಮಳೆ ಸೃಷ್ಟಿಸಿದ ಅವಾಂತರದಿಂದಾಗಿ ಎಲ್ಲವೂ ಮಣ್ಣುಪಾಲಾಗಿದೆ. ಕೋಟ್ಯಂತರ ರೂಪಾಯಿ ಬೆಳೆ ನಷ್ಟವಾಗಿದ್ದು, ಕೂಡಲೇ ಸರ್ಕಾರ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಸರ್ಕಾರಕ್ಕೂ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೂ ಸಂಬಂಧವಿಲ್ಲ- ಹೆಚ್.ಕೆ.ಪಾಟೀಲ್

  • ರಾಯಚೂರು | ಸಿಡಿಲು ಬಡಿದು ವ್ಯಕ್ತಿ ಸಾವು – ಆಲಿಕಲ್ಲು ಮಳೆಗೆ ಕೋಟ್ಯಂತರ ರೂ. ಮೌಲ್ಯದ ಭತ್ತ ಹಾನಿ

    ರಾಯಚೂರು | ಸಿಡಿಲು ಬಡಿದು ವ್ಯಕ್ತಿ ಸಾವು – ಆಲಿಕಲ್ಲು ಮಳೆಗೆ ಕೋಟ್ಯಂತರ ರೂ. ಮೌಲ್ಯದ ಭತ್ತ ಹಾನಿ

    ರಾಯಚೂರು: ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದ್ದು (Heavy Rain) ನಾನಾ ಅವಾಂತರ ಸೃಷ್ಟಿಸಿದೆ. ಸಿರಿವಾರ ತಾಲೂಕಿನ ಕೆ.ಗುಡದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವನ್ನಪ್ಪಿದ್ದು, ವೃದ್ದೆ ಗಂಭೀರವಾಗಿ ಗಾಯಗೊಂಡಿದ್ದಾರೆ.

    55 ವರ್ಷದ ಸಾಯಣ್ಣ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಅಮವಾಸ್ಯೆ ಹಿನ್ನೆಲೆ ತಾಯಿ ಮಗ ಜಮೀನಿನಲ್ಲಿನ ತಾಯಮ್ಮ ಗುಡಿಗೆ ಪೂಜೆ ಸಲ್ಲಿಸಲು ಹೋಗಿದ್ದ ವೇಳೆ ಸಿಡಿಲು ಬಡಿದಿದೆ. ಸಿಡಿಲಿನ ಹೊಡೆತಕ್ಕೆ ಸಾಯಣ್ಣ ಗುಡಿಯಲ್ಲೇ ಸಾವನ್ನಪ್ಪಿದ್ದಾರೆ. ತಾಯಿ 70 ವರ್ಷದ ಲಕ್ಷ್ಮಮ್ಮಗೆ ಗಂಭೀರ ಗಾಯಗಳಾಗಿದ್ದು ಮಾನ್ವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ: 2ನೇ ದಿನ ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಭರ್ಜರಿ ಪ್ರತಿಕ್ರಿಯೆ – ಮುಗಿಯುವ ಮುನ್ನ ಭಾಗಿಯಾಗಿ

    ಇನ್ನೂ ಸಿರಿವಾರ, ಮಾನ್ವಿ ತಾಲೂಕಿನಲ್ಲಿ ಆಲಿಕಲ್ಲು ಸಹಿತ ಜೋರು ಮಳೆ ಸುರಿದಿದ್ದು ಭತ್ತ ಮೆಣಸಿನಕಾಯಿ ಬೆಳೆ ಹಾಳಾಗಿದೆ. ರೈತರು ಒಣಗಲು ಹಾಕಿದ್ದ ಭತ್ತದ ರಾಶಿಗಳು ಸಂಪೂರ್ಣ ಒದ್ದೆಯಾಗಿದ್ದು ಕೋಟ್ಯಾಂತರ ರೂಪಾಯಿ ಭತ್ತ ಹಾನಿಯಾಗಿದೆ. ಅಕಾಲಿಕ ಮಳೆಯಿಂದ ರೈತರು ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದಾರೆ.  ಇದನ್ನೂ ಓದಿ: ಭಾರತದ ಮೇಲೆ ದಾಳಿಗೆಂದೇ 130 ಅಣು ಬಾಂಬ್‌ಗಳನ್ನು ಬಚ್ಚಿಟ್ಟಿದ್ದೇವೆ – ಪಾಕ್‌ ಸಚಿವನ ಬೆದರಿಕೆ

  • ಬಾಗಲಕೋಟೆ | ಹಲವೆಡೆ ಬಿರುಗಾಳಿ ಸಹಿತ ಮಳೆ, ನೆಲಕ್ಕುರುಳಿದ ಬೆಳೆ

    ಬಾಗಲಕೋಟೆ | ಹಲವೆಡೆ ಬಿರುಗಾಳಿ ಸಹಿತ ಮಳೆ, ನೆಲಕ್ಕುರುಳಿದ ಬೆಳೆ

    ಬಾಗಲಕೋಟೆ: ಜಿಲ್ಲೆಯ ಜಮಖಂಡಿ (JamaKhandi) ತಾಲೂಕಿನ ಕೆಲವು ಕಡೆಗಳಲ್ಲಿ ಸೋಮವಾರ ಸಂಜೆ ಬಿರುಗಾಳಿ ಸಹಿತ ಮಳೆಯಿಂದ ಕಟಾವಿಗೆ ಬಂದಿದ್ದ ಬೆಳೆಗಳು ನೆಲಕ್ಕುರುಳಿದೆ.

    ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಕೇಶವ್ ಜಾಧವ್, ಅನೀಲ್ ಬಬಲೇಶ್ವರ, ಉಮೇಶ್ ಜಾಧವ್, ಶಿವಾಜಿ ಜಾಧವ್ ಎಂಬುವವರ ಒಣದ್ರಾಕ್ಷಿ ಘಟಕಗಳಿಗೆ ಗಾಳಿ ಸಹಿತ ಮಳೆಯಿಂದ ಹಾನಿ ಆಗಿದೆ. ಹಾಗೆಯೇ ತೊದಲಬಾಗಿ ಗ್ರಾಮದ ಅಣ್ಣಪ್ಪ ಶಿರಹಟ್ಟಿ ಎನ್ನುವವರ ಜಮೀನಿನಲ್ಲಿ ಬೆಳೆದು ನಿಂತಿದ್ದ ಮೆಕ್ಕೆಜೋಳ ಗಾಳಿ ಹೊಡೆತಕ್ಕೆ ಸಿಕ್ಕು ನೆಲಕ್ಕಪ್ಪಳಿಸಿದೆ. ಇದನ್ನೂ ಓದಿ: ನಾಗ್ಪುರ ಕೋಮು ಗಲಭೆ – ಮಾಸ್ಟರ್‌ಮೈಂಡ್‌ ಮನೆ ಮೇಲೆ ಬುಲ್ಡೋಜರ್ ಅಸ್ತ್ರ ಪ್ರಯೋಗ!

    ಜಿಲ್ಲೆಯಲ್ಲಿ ಒಂದು ಕಡೆಗೆ ಬೇಸಿಗೆ ಬಿರುಬಿಸಿಲು ಜನಸಾಮಾನ್ಯರನ್ನು ಹೈರಾಣಾಗಿಸುತ್ತಿದೆ. ಮತ್ತೊಂದೆಡೆ ತಾಪಮಾನ ಹೆಚ್ಚಾಗಿ ಅಕಾಲಿಕ ಮಳೆ ಆಗುತ್ತಿದ್ದು, ಇದೀಗ ಮಳೆಯ ಜೊತೆ ಗಾಳಿ ಬೀಸುವುದು ಬೆಳೆಗಳಿಗೆ ಕಂಟಕವಾಗುತ್ತಿದೆ. ಗಾಳಿ ಹಾಗೂ ಅಕಾಲಿಕ ಮಳೆಯು ದ್ರಾಕ್ಷಿ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದೆ. ಇದನ್ನೂ ಓದಿ: ಸಂವಿಧಾನ ತಿದ್ದುಪಡಿ ಹೇಳಿಕೆ ಡಿಕೆಶಿ ಬಂಡವಾಳ ಬಯಲು ಮಾಡಿದೆ: ಬಿವೈವಿ

  • 5 ಲಕ್ಷ ಹೆಕ್ಟರ್ ತೊಗರಿ ಹೂ ಬಿಡದೇ ಸರ್ವನಾಶ – ಬೆಳೆ ಹಾನಿ ಸಮೀಕ್ಷೆಗೆ ರೈತರ ಒತ್ತಾಯ

    5 ಲಕ್ಷ ಹೆಕ್ಟರ್ ತೊಗರಿ ಹೂ ಬಿಡದೇ ಸರ್ವನಾಶ – ಬೆಳೆ ಹಾನಿ ಸಮೀಕ್ಷೆಗೆ ರೈತರ ಒತ್ತಾಯ

    – ತೊಗರಿ ಕಣಜದ ನಾಡಲ್ಲಿಯೇ ತೊಗರಿಗೆ ಬರ

    ವಿಜಯಪುರ: ಗುಮ್ಮಟ ನಗರಿ ವಿಜಯಪುರ (Vijayapura) ತೊಗರಿಯ ಕಣಜ ಎಂದು ಖ್ಯಾತಿ ಪಡೆದಿದೆ. ಆದರೆ ಖ್ಯಾತಿಯಾಗಿರುವ ಜಿಲ್ಲೆಯಲ್ಲಿ ತೊಗರಿಗೆ ಈಗ ಬರ ಬಂದಿದೆ. ಚಿತ್ರದುರ್ಗದ (Chitradurga) ಕೃಷಿ ಇಲಾಖೆಯಲ್ಲಿ ತೊಗರಿ ಬೀಜ ಖರೀದಿಸಿ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ರೈತರಿಗೆ ತೊಗರಿ ಬೆಳೆ ಕೈಕೊಟ್ಟಿದೆ.

    ಜಿಲ್ಲೆಯನ್ನು ಜೋಳದ ನಾಡು ಎಂದು ಕರೆಯುತ್ತಿದ್ದರು. ಆದರೆ ದಶಕದ ಈಚೆಗೆ ತೊಗರಿಯ ಕಣಜ ಎಂದು ಕರೆಸಿಕೊಳ್ಳುತ್ತಿದೆ. ಇದಕ್ಕೆ ಪ್ರಮುಖ ಕಾರಣ ಜಿಲ್ಲೆಯಲ್ಲಿ ಅತೀ ಹೆಚ್ಚು ತೊಗರಿ ಬೆಳಯಲಾಗುತ್ತಿತ್ತು. ಆದರೆ ಇದೀಗ ಈ ಹೆಸರು ಅಳಿಸುವಂತೆ ಗೋಚರಿಸುತ್ತಿದೆ. ಅದಕ್ಕೆ ಕಾರಣ ಈ ಬಾರಿ ಜಿಲ್ಲೆಯಲ್ಲಿ ತೊಗರಿ ಬೆಳೆ ಹೂ ಬಿಡದೇ ಸಂಪೂರ್ಣ ಹಾಳಾಗಿ ಹೋಗಿದೆ.ಇದನ್ನೂ ಓದಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಆದಿತ್ಯ ಠಾಕ್ರೆ ಕಿರಿಕ್‌

    ಜಿಲ್ಲೆಯಲ್ಲಿ 5 ಲಕ್ಷ 34 ಹೆಕ್ಟರ್‌ನಲ್ಲಿ ತೊಗರಿ ಬೆಳೆಯಲಾಗಿದ್ದು, 80% ರಷ್ಟು ಬೆಳೆ ಹಾನಿಯಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇಷ್ಟೊಂದು ಬೆಳೆ ಹಾಳಾಗಲು ರಾಜ್ಯ ಸರ್ಕಾರದಿಂದ ವಿತರಿಸಿದ ಬೀಜ ಒಂದು ಕಡೆಯಾದರೆ, ಇನ್ನೊಂದೆಡೆ ಅಕಾಲಿಕ ಮಳೆ, ಮೋಡಕವಿದ ವಾತಾವರಣದಿಂದ ಇಬ್ಬನಿ ಬಿದ್ದು, ಬೆಳೆ ಹಾಳಾಗಿದೆ. ಇದರಿಂದ ಜಿಲ್ಲೆಯ ಸಾವಿರಾರು ರೈತರು ಕಂಗಾಲಾಗಿ ಸಮೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಕೊಟಿದ್ದಾರೆ. ಆದರೆ ಈವರೆಗೂ ಯಾವುದೇ ಕ್ರಮಗೊಳ್ಳದ ಅಧಿಕಾರಿಗಳು, ಸರ್ಕಾರದ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ಡಿ.10ರಂದು ಜಿಲ್ಲಾಧಿಕಾರಿ ಹಾಗೂ ಜಂಟಿ ಕೃಷಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ.

    ಚಿತ್ರದುರ್ಗ ಜಿಲ್ಲೆಯಾದ್ಯಂತ ಕೃಷಿ ಇಲಾಖೆ ಸರಬರಾಜು ಮಾಡಿರುವ ತೊಗರಿಯ ಬಿತ್ತನೆ ಬೀಜಗಳು ಕಳಪೆಯಾಗಿವೆ. ಹೀಗಾಗಿ ತೊಗರಿ ಬೆಳೆ ಸಂಪಾಗಿ ಬೆಳೆದಿವೆ. ಆದರೆ ಕಾಯಿ ಮಾತ್ರ ಹಿಡಿದಿಲ್ಲ. ಕೆಲವೆಡೆ ಕಾಯಿಹಿಡಿದರೂ ಗಟ್ಟಿಯಾಗದೇ ಉದುರುತ್ತಿವೆ. ಹೂವು ಕಾಯಾಗುವ ಮುನ್ನವೇ ನೆಲಕ್ಕೆ ಬೀಳುತ್ತಿವೆ. ಹೀಗಾಗಿ ಒಂದು ಎಕರೆಗೆ 10 ರಿದ 15 ಸಾವಿರ ಖರ್ಚು ಮಾಡಿ, ತೊಗರಿ ಬೆಳೆದ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ.

    ಇನ್ನೂ ಬಿತ್ತನೆ ಬೀಜದ ಬೆಲೆಯನ್ನು ಸಹ ದಿಢೀರ್ ಎಂದು 2 ಪಟ್ಟು ಹೆಚ್ಚಿಸಿರುವ ಸರ್ಕಾರ ರೈತರಿಗೆ ಕಳಪೆ ಬೀಜ ಕೊಟ್ಟು ವಂಚಿಸಿದೆ. ಹೀಗಾಗಿ ರೈತರು ಭಾರೀ ನಷ್ಟ ಅನುಭವಿಸುವಂತಾಗಿದೆ. ಆದ್ದರಿಂದ ಸರ್ಕಾರ ಕೂಡ ಬೆಳೆನಷ್ಟ ಪರಿಹಾರ ಒದಗಿಸುವಂತೆ ರೈತ ಮುಖಂಡರು ಆಗ್ರಹಿಸಿದ್ದಾರೆ.

    ಒಟ್ಟಾರೆ ಕಳಪೆ ತೊಗರಿ ಬೀಜದ ದೆಸೆಯಿಂದ ವಿಜಯಪುರ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಹೇಳಿಕೊಂಡಂತೆ ಬೆಳೆ ಬಂದಿಲ್ಲ. ಈ ಎರಡೂ ಜಿಲ್ಲೆಗಳಲ್ಲಿ ತೊಗರಿಬೆಳೆ ಕೈಕೊಡಲು ಕಳಪೆ ಬೀಜ, ಅಕಾಲಿಕ ಮಳೆ ಕಾರಣವಾಗಿದೆ. ನಷ್ಟದಲ್ಲಿರುವ ರೈತರಿಗೆ ಸರ್ಕಾರ ಪರಿಹಾರ ನೀಡಲು ಮುಂದಾದರೆ, ಬೆಳೆ ಸಿಗದೆ ಕುಗ್ಗಿಹೋಗಿರುವ ರೈತರು ಕೊಂಚ ಸುಧಾರಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎನ್ನುವುದು ಕುತೂಹಲವಾಗಿದೆ.ಇದನ್ನೂ ಓದಿ: ಉಗ್ರರು ಕೈವಶ ಮಾಡಿದ ಬೆನ್ನಲ್ಲೇ ಸಿರಿಯಾದ ಮೇಲೆ ಅಮೆರಿಕ ವಾಯು ದಾಳಿ

  • ನವೆಂಬರ್ 30ರವರೆಗೆ ಮಳೆ ಬೀಳುವ ಸಂಭವವಿದೆ: ಆರ್.ಅಶೋಕ್

    ನವೆಂಬರ್ 30ರವರೆಗೆ ಮಳೆ ಬೀಳುವ ಸಂಭವವಿದೆ: ಆರ್.ಅಶೋಕ್

    ಹಾಸನ: ರಾಜ್ಯದಲ್ಲಿ ವಿಪರೀತ ಮಳೆಯಿಂದ ಸುಮಾರು 5 ಲಕ್ಷ ಹೆಕ್ಟೇರ್ ಬೆಳೆಹಾನಿ ಸಂಭವಿಸಿದ್ದು ತ್ವರಿತಗತಿಯಲ್ಲಿ ಪರಿಹಾರ ವಿತರಣೆಗೆ ಅಗತ್ಯ ಕ್ರಮವಹಿಸಲು ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

    ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯಲ್ಲಿ 47,022 ಹೆಕ್ಟೇರ್ ಬೆಳೆಹಾನಿ, 310 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಸುಮಾರು 100 ಕೋಟಿಗೂ ಹೆಚ್ಚು ಮೌಲ್ಯದ ಬೆಳೆ ನಾಶವಾಗಿದ್ದು ಪರಿಹಾರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಬೆಳೆ ಹಾನಿ ಅಗತ್ಯ ಮಾಹಿತಿ ಪಡೆದು ಪರಿಹಾರ ವಿತರಣೆ ಕ್ರಮಕೈಗೊಳ್ಳುವಂತೆ ಕಂದಾಯ- ಕೃಷಿ- ತೋಟಗಾರಿಕೆ ಇಲಾಖೆ ಅಧಿಕಾರಿಗಳೇ ಈಗಾಗಲೇ ಸೂಚನೆ ನೀಡಿದ್ದು, ವಾರದಿಂದ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ. ಹಂತಹಂತವಾಗಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು .  ಇದನ್ನೂ ಓದಿ: ನಮಗೆ ಇಡೀ ಜಿಲ್ಲೆ ಅಭಿವೃದ್ದಿ ಮುಖ್ಯ, ಅಂತಹ ಪಾಪದ ಕೆಲಸ ನಾವು ಮಾಡಿಲ್ಲ: ಮಾಧುಸ್ವಾಮಿ

    ಬೆಳೆ ಹಾನಿ ಪರಿಹಾರಕ್ಕೆ ಈಗಾಗಲೇ 300 ಕೋಟಿ ರೂ ಪರಿಹಾರ ವಿತರಣೆ ಮಾಡಲಾಗಿದ್ದು, ನಿನ್ನೆ ಸಹ 68 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಇಂದು ಕೊಡಗು- ಹಾಸನ -ಮಂಡ್ಯ- ತುಮಕೂರು ಜಿಲ್ಲೆಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ಮಾಡಲಾಗುವುದು. ನಂತರ ರಾಜಧಾನಿಗೆ ತೆರಳಿ ಎನ್ ಡಿ.ಆರ್ ಎಫ್ ಬೆಳೆಹಾನಿ ಇದುವರೆಗೆ ಎಷ್ಟು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ಪಡೆಯಲಾಗುವುದು ಎಂದರು.

    ಅಲ್ಲದೇ ಕೇಂದ್ರ ಸರ್ಕಾರಕ್ಕೆ ಎಮ್ ಡಿ ಆರ್ ಎಫ್ ನಿಯಮದಡಿ ನೀಡುತ್ತಿರುವ ಹೆಕ್ಟೇರ್ ಗೆ 6,800 ಪರಿಹಾರವನ್ನು ಹೆಚ್ಚಿಸಬೇಕು ಎಂದು ಈಗಾಗಲೇ ಪ್ರಧಾನಿ ಅವರಿಗೆ ಪತ್ರ ಮುಖೇನ ತಿಳಿಸಲಾಗಿದೆ. ಎನ್ ಡಿ ಆರ್ ಎಫ್ ಪರಿಹಾರ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಇರುವ ನಿಯಮದಂತೆ ನೀಡಲಾಗುತ್ತಿದೆ. ಇದರ ಮೂರು ಪಟ್ಟು ಪರಿಹಾರ ಏರಿಸಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜಯಲಲಿತಾ ನಿವಾಸ ಸ್ವಾಧೀನ- ತಮಿಳುನಾಡು ಸರ್ಕಾರದ ನಿಲುವಿಗೆ ಹೈಕೋರ್ಟ್ ತಡೆ

    ನವೆಂಬರ್ 30ರವರೆಗೆ ಮಳೆ:
    ಚೆನ್ನೈನಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ ನವಂಬರ್ 30ರವರೆಗೂ ಸಹ ಮಳೆ ಮುಂದುವರಿಯಲಿದೆ. ಆದ್ದರಿಂದ ಅಗತ್ಯ ಕ್ರಮವಹಿಸುವಂತೆ ಇಲಾಖೆಗೆ ಸೂಚನೆ ನೀಡಲಾಗಿದ್ದು, ರೈತರು ಸಹ ಮಳೆಯ ಹವಾಮಾನದ ವೈಪರೀತ್ಯವನ್ನು ಗಮನಿಸಿ ಬೆಳೆ ಕೊಯ್ಲು ಹಾಗೂ ಬೆಳೆ ಸಂರಕ್ಷಣೆಗೆ ಹೆಚ್ಚು ಗಮನಹರಿಸಬೇಕು ಎಂದು ಸಚಿವರು ಮನವಿ ಮಾಡಿದರು.

    ಸಕಲೇಶಪುರ- ಆಲೂರು -ಕೊಡಗು ಭಾಗದಲ್ಲಿ ಆನೆ ಹಾವಳಿ ಸಂಬಂಧ ಈಗಾಗಲೇ ಮಾಹಿತಿ ಪಡೆಯಲಾಗಿದೆ. ಆನೆ ಹಾವಳಿ ಪರಿಹಾರ ಹಾಗೂ ಹಾವಳಿ ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗುವುದು. ಹಾಗೂ ಆನೆ ಹಾವಳಿಯಿಂದ ತುತ್ತಾದ ಬೆಳೆ ನಷ್ಟ ಹಾಗೂ ಪ್ರಾಣಹಾನಿಗೆ ಅಗತ್ಯ ಪರಿಹಾರ ವಿತರಣೆಗೆ ಸೂಚನೆ ನೀಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

    ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬೆಳೆಹಾನಿ ಸಂಬಂಧ ಅಗತ್ಯ ಮಾಹಿತಿಯನ್ನು ನೀಡುವಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು..ಅಗತ್ಯ ಮಾಹಿತಿ ಪಡೆದ ನಂತರ ಹಂತಹಂತವಾಗಿ ಪರಿಹಾರ ವಿತರಣೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತೋಟಕಾರಿಗೆ ಮತ್ತು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ರವಿ, ಸುಶ್ಮ, ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.