Tag: ಬೆಳ್ತಂಗಡಿ ಪೊಲೀಸ್‌

  • ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ಮಹೇಶ್ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್ ಜಾರಿ

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ಮಹೇಶ್ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್ ಜಾರಿ

    ಮಂಗಳೂರು: ಎಸ್‌ಐಟಿ (SIT) ಶೋಧ ಸಂದರ್ಭ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ (Illegal Arms Collection) ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ (MaheshShetty Thimarody) ಮೂರನೇ ಹಾಗೂ ಅಂತಿಮ ನೋಟಿಸ್ ಅನ್ನು ಜಾರಿ ಮಾಡಲಾಗಿದೆ.

    ಮನೆ ಶೋಧ ಸಂದರ್ಭ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು 2 ತಲವಾರು ಮತ್ತು ಒಂದು ಬಂದೂಕು ವಶಕ್ಕೆ ಪಡೆದಿದ್ದರು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ಎರಡು ನೋಟಿಸ್ ಜಾರಿ ಮಾಡಿದ್ದರು. ಆದರೆ ಮಹೇಶ್ ಶೆಟ್ಟಿ ತಿಮರೋಡಿ ಎರಡು ಬಾರಿಯೂ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅಂತಿಮ ನೋಟಿಸ್ ಅನ್ನು ಜಾರಿ ಮಾಡಲಾಗಿದೆ. ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ಎಸ್‌.ಎಲ್‌ ಭೈರಪ್ಪ – ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    ಇಂದು ಬೆಳ್ತಂಗಡಿ ಠಾಣೆಯ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ತೆರಳಿ ನೋಟಿಸ್ ಅಂಟಿಸಿದ್ದಾರೆ. ಸೆ.29ಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಮನೆಯ ಗೋಡೆಗೆ ನೋಟೀಸ್ ಅಂಟಿಸಲಾಗಿದೆ. ಸೆ.29ಕ್ಕೆ ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಕ್ರಮಕೈಗೊಳ್ಳುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಸರ್ಕಾರಿ ಬಸ್ ಪಲ್ಟಿ – ಪ್ರಯಾಣಿಕನ ಕಾಲು ಮುರಿತ, 15 ಮಂದಿಗೆ ಗಾಯ

  • Dharmasthala Case | ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ SIT ನೋಟಿಸ್

    Dharmasthala Case | ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ SIT ನೋಟಿಸ್

    ಮಂಗಳೂರು: ಸ್ನೇಹಿತರ ಜೊತೆ ಧರ್ಮಸ್ಥಳಕ್ಕೆ (Dharmasthala) ಹೋಗಿದ್ದ ನನ್ನ ಮಗಳು ಕಾಣೆಯಾಗಿದ್ದಳು ಅಂತ ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದ ಸುಜಾತಾ ಭಟ್ ವಿಚಾರದಲ್ಲಿ ಒಂದೊಂದೇ ಸತ್ಯಗಳು ಹೊರ ಬರುತ್ತಿವೆ. ತಮ್ಮ ಮಗಳು ಅಂತ ಸುಜಾತಾ ಭಟ್ ಫೋಟೋ ರಿಲೀಸ್ ಮಾಡುತ್ತಿದ್ದಂತೆ ಸಾಕಷ್ಟು ಹಲ್‌ಚಲ್ ಎದ್ದಿದೆ. ಯಾರದ್ದೋ ಮನೆಯ ಸೊಸೆ ಫೋಟೋ ತೋರಿಸಿ ತಮ್ಮ ಮಗಳು ಎನ್ನುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ವಸಂತಾ ಎಂಬುವವರ ಸಹೋದರ ನನ್ನ ತಂಗಿ ಫೋಟೋ ಬಳಸಿಕೊಂಡಿದ್ದಾರೆ ಅಂತ ಆರೋಪ ಮಾಡಿದ್ರು. ಇದೀಗ ಅನನ್ಯಾ ಭಟ್‌ ಅವರ ಪೂರ್ವಾಪರ ಕೆದಕಲು ಎಸ್‌ಐಟಿ ತಂಡ ಮುಂದಾಗಿದೆ, ಈ ಬೆನ್ನಲ್ಲೇ ಸುಜಾತಾ ಭಟ್‌ಗೆ (Sujatha Bhat) ನೋಟಿಸ್‌ ನೀಡಿದೆ.

    ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ (Belthangady SIT office) ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ ಸುಜಾತಾ ಭಟ್‌ ಅವರಿಗೆ ನೋಟಿಸ್‌ ನೀಡಿದೆ. ಬೆಳ್ತಂಗಡಿ ಕಚೇರಿ ಸಿಬ್ಬಂದಿ ಬೆಂಗಳೂರಿಗೆ ಬಂದು ನೋಟಿಸ್‌ ಜಾರಿಮಾಡಿದ್ದಾರೆ. ನೋಟೀಸ್ ಸ್ವೀಕರಿಸಿ ಶೀಘ್ರದಲ್ಲೇ ವಿಚಾರಣೆಗೆ ಬರೋದಾಗಿ ಸುಜಾತ ಭಟ್ ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನೊಂದು ವಾರದಲ್ಲಿ ಮನೆ ಖಾಲಿ ಮಾಡೋದಾಗಿ ಹೇಳಿದ್ದಾರಂತೆ ಸಮೀರ್‌

    ಪ್ರಕರಣದ ಪೂರ್ವಾಪರ ಕೆದಕಿದ ತನಿಖಾ ತಂಡ
    ಅನನ್ಯಾ ಭಟ್ ನಾಪತ್ತೆ ಆಗಿದ್ದಾರೆ ಅನ್ನೋ ವಿಚಾರದಲ್ಲಿ ಇದೀಗ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಪ್ರಕರಣದ ಬೆನ್ನುಹತ್ತಿರೋ ಎಸ್‌ಐಟಿ ತಂಡ ಪ್ರಕರಣದ ಪೂರ್ವಾಪರ ಕೆದಕಲು ಮುಂದಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌- ಮೊದಲ ಬಾರಿಗೆ ಮೌನ ಮುರಿದ ಸಿಎಂ

    ಈಗಾಗಲೇ ಅನನ್ಯಾ ಭಟ್ ಅಸ್ತಿತ್ವದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಶಿವಮೊಗ್ಗ, ಬೆಂಗಳೂರು, ಉಡುಪಿಯಲ್ಲಿ ದಾಖಲೆ ಸಂಗ್ರಹಿಸಿದೆ. ಈ ಮಾಹಿತಿಗಳ ಆಧಾರದಲ್ಲಿ ಸುಜಾತ್ ಭಟ್‌ರನ್ನ ವಿಚಾರಣೆ ನಡೆಸುವ ಸಾಧ್ಯತೆ ಇದ್ದು, ವಿಚಾರಣೆ ಬಳಿಕ ಸುಜಾತ ಭಟ್ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಎಡಪಂಥೀಯರು ಸಿಎಂ ಮನೆಯಲ್ಲೇ ಸಭೆ ಮಾಡಿ SIT ತನಿಖೆ ಶುರು ಮಾಡಿಸಿದ್ದಾರೆ: ಆರ್‌. ಅಶೋಕ್‌ ಕಿಡಿ