Tag: ಬೆಳ್ಳಿಹಬ್ಬ

  • ದರ್ಶನ್ ಚಿತ್ರಜೀವನದ ಬೆಳ್ಳಿ ಹಬ್ಬ: ಶ್ರೀರಂಗಪಟ್ಟಣದತ್ತ ಸೆಲೆಬ್ರಿಟಿಗಳು

    ದರ್ಶನ್ ಚಿತ್ರಜೀವನದ ಬೆಳ್ಳಿ ಹಬ್ಬ: ಶ್ರೀರಂಗಪಟ್ಟಣದತ್ತ ಸೆಲೆಬ್ರಿಟಿಗಳು

    ಟ ದರ್ಶನ್ (Darshan) ಚಂದನವನಕ್ಕೆ (sandalwood) ಪದಾರ್ಪಣೆ ಮಾಡಿ ಭರ್ತಿ 25 ವರ್ಷಗಳಾಗಿವೆ. ಇದೇ ಶುಭ ಸಂದರ್ಭದಲ್ಲಿ ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅರ್ಥಪೂರ್ಣವಾದ ಸಮಾರಂಭವೊಂದನ್ನು ಇಂದು ಏರ್ಪಡಿಸಿದ್ದಾರೆ. ಈ ಸಮಾರಂಭದಲ್ಲಿ ಭಾಗಿ ಆಗುವುದಕ್ಕಾಗಿ ಸ್ಯಾಂಡಲ್ ವುಡ್ ಅನೇಕ ಸೆಲೆಬ್ರಿಟಿಗಳು ಶ್ರೀರಂಗಪಟ್ಟಣದತ್ತ (Srirangapatna) ಹೊರಟಿದ್ದಾರೆ.

    ಕೇವಲ ಕನ್ನಡ ಚಿತ್ರರಂಗದ ಗಣ್ಯರು ಮಾತ್ರವಲ್ಲ, ಶ್ರೀ ಆದಿಚುಂಚನಗಿರಿ ಶ್ರೀಗಳು, ಶ್ರೀ ಸುತ್ತೂರು ಶ್ರೀಗಳು, ಬೇಬಿ ಮಠ  ಶ್ರೀಗಳ ಸಾನಿಧ್ಯದಲ್ಲಿ ಹಾಗೂ ಸಂಸದೆ, ಚಿತ್ರನಟಿ ಸುಮಲತಾ ಅಂಬರೀಶ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಲಿದೆ.

    ಇಂದು (ಫೆ.17) ಸಂಜೆ 5 ಗಂಟೆಗೆ ಬೆಳ್ಳಿ ಪರ್ವ ಡಿ-25 ಎಂಬ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಕನ್ನಡ ಚಿತ್ರರಂಗದಲ್ಲಿ 25 ವರ್ಷ ಪೂರೈಸಿರುವ ದರ್ಶನ್ ಅವರಿಗೆ ಸನ್ಮಾನ ಕಾರ್ಯಕ್ರಮ ನೆರವೇರಲಿದೆ. ಜತೆಗೆ ವಿ.ಹರಿಕೃಷ್ಣ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    ವಿನೋದ್ ರಾಜ್ ಕುಮಾರ್, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್, ಧನ್ವೀರ್, ಚಿಕ್ಕಣ್ಣ, ಝೈದ್ ಖಾನ್, ಶಿವರಾಜ್ ಕೆ.ಆರ್ ಪೇಟೆ ಹಾಗೂ ಸೂರಜ್ ಸೇರಿದಂತೆ ಸಾಕಷ್ಟು ನಟ, ನಟಿಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಿಮಿಕಾ ರತ್ನಾಕರ್, ನಿಶ್ವಿಕಾ ನಾಯ್ಡು, ಬೃಂದಾ ಆಚಾರ್ಯ, ಶರಣ್ಯ ಶೆಟ್ಟಿ, ನಮ್ರತಾ ಗೌಡ, ತನ್ವಿಯ ಬಾಲರಾಜ್, ಪ್ರಿಯಾಂಕ ಗೌಡ ನೃತ್ಯ ಮಾಡಲಿದ್ದಾರೆ.

     

    ಹಲವು ಸಾಮಾಜಿಕ ಕಾರ್ಯಕ್ರಮಗಳು ಇದೇ ವೇಳೆ ಜರುಗಲಿದೆ. ಇವೆಲ್ಲ ಕಾರ್ಯಗಳ ಉಸ್ತುವಾರಿಯನ್ನು ದರ್ಶನ್ ಅವರ ಆತ್ಮೀಯರಾದ ಎಸ್.ಸಚ್ಚಿದಾನಂದ ಇಂಡುವಾಳು ವಹಿಸಿಕೊಂಡಿದ್ದಾರೆ. ಶ್ರೀರಂಗಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಮೈದಾನದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ನಡೆಯಲಿದೆ.

  • ದರ್ಶನ್ ಚಿತ್ರರಂಗಕ್ಕೆ ಬಂದು 25 ವರ್ಷ: ಅದ್ಧೂರಿ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜು

    ದರ್ಶನ್ ಚಿತ್ರರಂಗಕ್ಕೆ ಬಂದು 25 ವರ್ಷ: ಅದ್ಧೂರಿ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜು

    ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಚಂದನವನಕ್ಕೆ (sandalwood) ಪದಾರ್ಪಣೆ ಮಾಡಿ ಭರ್ತಿ 25 ವರ್ಷಗಳಾಗಿವೆ. ಇದೇ ಶುಭ ಸಂದರ್ಭದಲ್ಲಿ ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅರ್ಥಪೂರ್ಣವಾದ ಸಮಾರಂಭವೊಂದನ್ನು ಏರ್ಪಡಿಸಿದ್ದಾರೆ. ಶ್ರೀ ಆದಿಚುಂಚನಗಿರಿ ಶ್ರೀಗಳು, ಶ್ರೀ ಸುತ್ತೂರು ಶ್ರೀಗಳು, ಬೇಬಿ ಮಠ  ಶ್ರೀಗಳ ಸಾನಿಧ್ಯದಲ್ಲಿ ಹಾಗೂ ಸಂಸದೆ, ಚಿತ್ರನಟಿ ಸುಮಲತಾ ಅಂಬರೀಶ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಲಿದೆ.

    ಫೆಬ್ರವರಿ 17ರ ಶನಿವಾರ ಸಂಜೆ 5 ಗಂಟೆಗೆ ಬೆಳ್ಳಿ ಪರ್ವ ಡಿ-25 ಎಂಬ ಕಾರ್ಯಕ್ರಮ ನಡೆಯಲಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಈ ಸಮಾರಂಭ ನಡೆಯಲಿದ್ದು, ಕನ್ನಡ ಚಿತ್ರರಂಗದಲ್ಲಿ 25 ವರ್ಷ ಪೂರೈಸಿರುವ ದರ್ಶನ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜತೆಗೆ ವಿ.ಹರಿಕೃಷ್ಣ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ.

    ವಿನೋದ್ ರಾಜ್ ಕುಮಾರ್, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್, ಧನ್ವೀರ್, ಚಿಕ್ಕಣ್ಣ, ಝೈದ್ ಖಾನ್, ಶಿವರಾಜ್ ಕೆ.ಆರ್ ಪೇಟೆ ಹಾಗೂ ಸೂರಜ್ ಸೇರಿದಂತೆ ಸಾಕಷ್ಟು ನಟ, ನಟಿಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಿಮಿಕಾ ರತ್ನಾಕರ್, ನಿಶ್ವಿಕಾ ನಾಯ್ಡು, ಬೃಂದಾ ಆಚಾರ್ಯ, ಶರಣ್ಯ ಶೆಟ್ಟಿ, ನಮ್ರತಾ ಗೌಡ, ತನ್ವಿಯ ಬಾಲರಾಜ್, ಪ್ರಿಯಾಂಕ ಗೌಡ ನೃತ್ಯ ಮಾಡಲಿದ್ದಾರೆ.

    ಹಲವು ಸಾಮಾಜಿಕ ಕಾರ್ಯಕ್ರಮಗಳು ಇದೇ ವೇಳೆ ಜರುಗಲಿದೆ. ಇವೆಲ್ಲ ಕಾರ್ಯಗಳ ಉಸ್ತುವಾರಿಯನ್ನು ದರ್ಶನ್ ಅವರ ಆತ್ಮೀಯರಾದ ಎಸ್.ಸಚ್ಚಿದಾನಂದ ಇಂಡುವಾಳು ವಹಿಸಿಕೊಂಡಿದ್ದಾರೆ. ಶ್ರೀರಂಗಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಮೈದಾನದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ನಡೆಯಲಿದೆ.

  • ಹರೀಶ್ ರಾಜ್ ಸಿನಿಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ: ಅಭಿಮಾನಿಗಳಿಗೆ ಋಣಿ ಎಂದ ನಟ

    ಹರೀಶ್ ರಾಜ್ ಸಿನಿಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ: ಅಭಿಮಾನಿಗಳಿಗೆ ಋಣಿ ಎಂದ ನಟ

    ಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ.  ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಈ ಹೊತ್ತಿನಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭವೊಂದನ್ನು ಆಯೋಜಿಸಿದ್ದರು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಟ, ನಿರ್ದೇಶಕ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕ ಮಧುಸೂದನ್ ಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    1997 ರಲ್ಲಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಸೌಂದರ್ಯ ಅವರು ನಟಿಸಿದ್ದ”ದೋಣಿ ಸಾಗಲಿ” ಚಿತ್ರದ ಮೂಲಕ ನನ್ನ ಸಿನಿಪಯಣ ಆರಂಭವಾಯಿತು. ಅದೇ ವರ್ಷ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ನಿರ್ದೇಶಿಸಿದ್ದ “ತಾಯಿ ಸಾಹೇಬ” ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಅದರಲ್ಲಿ ನಾನು ಜಯಮಾಲ ಅವರ ಮಗನ ಪಾತ್ರ ನಿರ್ವಹಣೆ ಮಾಡಿದ್ದೆ.  ಇಂದಿನ ಸಮಾರಂಭಕ್ಕೆ ನನ್ನ ಮೊದಲ ಸಿನಿಮಾ ನಿರ್ಮಾಪಕರಾದ ಮಧುಸೂದನ್ ಗೌಡ ಅವರು, ಖ್ಯಾತ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ ಸರ್, ಸುನೀಲ್ ಪುರಾಣಿಕ್ ಹಾಗೂ ಭಾ.ಮ.ಹರೀಶ್  ಸರ್ ಬಂದಿರುವುದು ತುಂಬಾ ಖುಷಿಯಾಗಿದೆ. ಅವರಿಗೆ ಅನಂತ ಧನ್ಯವಾದ. ನಾನು, ಸುನೀಲ್ ಪುರಾಣಿಕ್ ಅವರು ಫಣಿ ರಾಮಚಂದ್ರ ನಿರ್ದೇಶನದ “ದಂಡ ಪಿಂಡಗಳು” ಧಾರಾವಾಹಿಯಲ್ಲಿ ಜೊತೆಗೆ ನಟಿಸಿದ್ದೆವು. ಇದೆಲ್ಲಾ ನೆನಪಿಸಿಕೊಂಡರೆ ಇಷ್ಟು ಬೇಗ 25 ವರ್ಷಗಳು ಕಳೆದು ಹೋಯಿತಾ? ಅನಿಸುತ್ತದೆ.  ಈ ಇಪ್ಪತ್ತೈದು ವರ್ಷಗಳಲ್ಲಿ 60 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಾಡಿದ್ದೇನೆ. ಗಿರೀಶ್ ಕಾಸರವಳ್ಳಿ, ಗಿರೀಶ್ ಕಾರ್ನಾಡ್, ರಾಜೇಂದ್ರ ಸಿಂಗ್ ಬಾಬು ಅವರಂತಹ ಶ್ರೇಷ್ಠ ನಿರ್ದೇಶಕರ ಚಿತ್ರಗಳಲ್ಲಿ ನಟಿಸಿದ್ದೇನೆ.

    ಬಿಗ್ ಬಾಸ್ ನನಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದೆ. ನಾನು ಏನಾದರೂ ಈ ರಂಗದಲ್ಲಿ ಸಾಧನೆ ಮಾಡಿದ್ದೀನಿ ಅಂದರೆ ಅದಕ್ಕೆ ಕಾರಣ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಕಲಾವಿದರು ಹಾಗೂ ಮಾಧ್ಯಮದವರು. ಇಡೀ ಚಿತ್ರರಂಗಕ್ಕೆ ನಾನು ಚಿರ ಋಣಿ ಎಂದರು ಹರೀಶ್ ರಾಜ್. ಇದನ್ನೂ ಓದಿ:ಅಫೇರ್ ಆರೋಪ ಬೆನ್ನಲ್ಲೇ ಧಿಡೀರ್ ಸಂಭಾವನೆ ಹೆಚ್ಚಿಸಿಕೊಂಡ ಪವಿತ್ರಾ ಲೋಕೇಶ್

    ಸ್ನೇಹಿತರೊಬ್ಬರ ಮೂಲಕ ನನಗೆ ಹರೀಶ್ ರಾಜ್ ಪರಿಚಯವಾದರು. ರಬಕವಿಯಲ್ಲಿ “ತಾಯಿಸಾಹೇಬ” ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಜಯಮಾಲ, ಶಿವರಾಮಣ್ಣ ಭಾಗವಹಿಸಿದ್ದರು. ತುರ್ತುಕಾರ್ಯದ ನಿಮಿತ್ತ ಶಿವರಾಮಣ್ಣ ಬೆಂಗಳೂರಿಗೆ ತೆರಳಬೇಕಾಯಿತು. ಆಗ ತಕ್ಷಣ ಹರೀಶ್ ರಾಜ್ ಅವರಿಗೆ ಫೋನ್ ಮಾಡಿ, ನಾಳೆ ನಿಮ್ಮ ಪಾತ್ರದ ಚಿತ್ರೀಕರಣವಿದೆ. ರಾತ್ರಿಯೇ ಹೊರಟು ಬನ್ನಿ ಎಂದೆ. ಬೆಳಗ್ಗೆ ಬಂದರು. ಯಾವುದೇ ಆಯಾಸವಿಲ್ಲದೆ ಅಂದಿನ ಚಿತ್ರೀಕರಣದಲ್ಲಿ ಲವಲವಿಕೆಯಿಂದ ಭಾಗವಹಿಸಿ, ಎಲ್ಲರ ಮೆಚ್ಚುಗೆ ಪಡೆದರು. ನಂತರ ನನ್ನ “ದ್ವೀಪ” ಚಿತ್ರದಲ್ಲೂ ಅಭಿನಯಿಸಿದ್ದರು. ಆ ಚಿತ್ರದ ಅಭಿನಯಕ್ಕಾಗಿ ಇವರು ರಾಷ್ಟ್ರೀಯ ಪ್ರಶಸ್ತಿ ರೇಸ್ ನಲ್ಲಿ ಇದ್ದರು ಎಂದು ನನಗೆ ನಿಧಾನವಾಗಿ ತಿಳಿಯಿತು. ಒಟ್ಟನಲ್ಲಿ ಹರೀಶ್ ರಾಜ್ ಉತ್ತಮ ನಟ.‌ ಮುಂದೆ ಸಹ ಅವರಿಗೆ ಒಳ್ಳೆಯ ಅವಕಾಶಗಳು ಸಿಗಲಿ ಎಂದು ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾರೈಸಿದರು.

    ತಮ್ಮ ಹರೀಶ್ ರಾಜ್ ಒಡನಾಟದ ಬಗ್ಗೆ ಸುನೀಲ್ ಪುರಾಣಿಕ್ ನೆನಪಿಸಿಕೊಂಡರು.  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್  ಶುಭಾಶಯ ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]