Tag: ಬೆಳ್ಳೂರು

  • ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ- 11ಕ್ಕೂ ಹೆಚ್ಚು ಮಂದಿ ಮೇಲೆ ಎಫ್‌ಐಆರ್

    ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ- 11ಕ್ಕೂ ಹೆಚ್ಚು ಮಂದಿ ಮೇಲೆ ಎಫ್‌ಐಆರ್

    ಮಂಡ್ಯ: ಬೆಳ್ಳೂರು (Belluru) ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ಎಫ್‌ಐಆರ್ (FIR) ದಾಖಲಿಸಲಾಗಿದೆ.

    ಸೋಮವಾರ ರಾತ್ರಿ ಬೆಳ್ಳೂರಿನ ಅಭಿಲಾಷ್ ಎಂಬಾತನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದರು. ಚೇರ್, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ಅಭಿಲಾಷ್ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಹಲ್ಲೆ ನಡೆಸಿದವರ ಮೇಲೆ ಅಭಿಲಾಷ್ ತಂದೆ ರಾಮು ದೂರು ನೀಡಿದ್ದಾರೆ. ಇದನ್ನೂ ಓದಿ: ರಬ್ಬರ್‌ ಕಾರ್ಖಾನೆಯಲ್ಲಿ ಅಗ್ನಿ ಅವಘಡ- 40 ಕ್ಕೂ ಹೆಚ್ಚು ಕಾರ್ಮಿಕರು ಸುಟ್ಟು ಭಸ್ಮ

    ದೂರಿನನ್ವಯ ಆರೋಪಿಗಳ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ನವೀದ್, ಸೂಫೀಯಾನ್, ಇಮ್ರಾನ್, ಸಮೀರ್, ಮುದಾಸೀರ್ ಸೇರಿ 11ಕ್ಕೂ ಹೆಚ್ಚು ಮಂದಿ ಮೇಲೆ ಎಫ್‌ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 341 (ಅಕ್ರಮ ಪ್ರತಿಬಂಧಕ್ಕಾಗಿ ದಂಡನೆ), 307 (ಕೊಲೆ ಮಾಡುವ ಪ್ರಯತ್ನ), 504 (ಶಾಂತಿ ಭಂಗ ಮಾಡಲು ಉದ್ರೇಕಿಸುವುದಕ್ಕಾಗಿ ಉದ್ದೇಶಪೂರ್ವಕ ಅವಮಾನ), 506 (ಅಪರಾಧಿಕ ಭಯೋತ್ಪಾದನೆಗೆ ದಂಡನೆ) ಅಡಿ ಪ್ರಕರಣ ದಾಖಲಿಸಿದ್ದು, ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಎಣ್ಣೆ ಬೇಡ ಎಂದಿದ್ದಕ್ಕೆ ಸ್ನೇಹಿತನೇ ಮನೆಯ ಟೆರೇಸ್‌ನಿಂದ ತಳ್ಳಿದ!

    ಏನಿದು ಪ್ರಕರಣ?
    ಬೈಕ್ ಟಚ್ ಮಾಡಿಕೊಂಡು ಓವರ್‌ಟೇಕ್ ಮಾಡಿದ್ದ ಇಬ್ಬರು ಮುಸ್ಲಿಂ ಯುವಕರನ್ನು ಶನಿವಾರ ಅಭಿಲಾಷ್ ಪ್ರಶ್ನೆ ಮಾಡಿದ್ದರು. ಅದೇ ದ್ವೇಷ ಮುಂದಿಟ್ಟುಕೊಂಡು ಸೋಮವಾರ ರಾತ್ರಿ ಹತ್ತಾರು ಜನರ ತಂಡ ಕಟ್ಟಿಕೊಂಡು ಬಂದು ಅಭಿಲಾಷ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ವಿಡಿಯೋ ಮಾಡಿಕೊಳ್ಳಲು ಕಾಂಗ್ರೆಸ್‌ನವರು ಹೇಳಿದ್ರಾ : ತಂಗಡಗಿ ಪ್ರಶ್ನೆ

    ಅಷ್ಟೇ ಅಲ್ಲದೇ ಕೆಲ ಹಿಂದೂಗಳ ಮನೆಗಳಿಗೆ ನುಗ್ಗಿ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ್ದಾರೆ. ಈ ವೇಳೆ ಗಲಾಟೆ ನಡೆದಿದ್ದು, ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ನಿರಾಶ್ರಿತರಿದ್ದ ಡೇರೆಗಳ ಮೇಲೆ ಇಸ್ರೇಲ್‌ ವಾಯುದಾಳಿ; 45 ಮಂದಿ ಸಾವು

  • ಬೆಳ್ಳೂರಿನಲ್ಲಿ ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

    ಬೆಳ್ಳೂರಿನಲ್ಲಿ ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

    – ಮಹಿಳೆಯರು ಸೇರಿ ನೂರಾರು ಗ್ರಾಮಸ್ಥರಿಂದ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಮಂಡ್ಯ: ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ (Belluru town) ಹಿಂದೂಗಳ ಮನೆಗಳಿಗೆ ನುಗ್ಗಿ ಅನ್ಯಕೋಮಿನ ಯುವಕರು ದಾಂಧಲೆ ನಡೆಸಿದ ಆರೋಪ ಕೇಳಿ ಬಂದಿದೆ.

    ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾತ್ರಿಯೇ ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು ಬೆಳ್ಳೂರು ಪೊಲೀಸ್ ಠಾಣೆ (Belluru Police Station) ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

     

    ಏನಿದು ಘಟನೆ?
    ಬೈಕ್ ಟಚ್ ಮಾಡಿಕೊಂಡು ಓವರ್‌ಟೇಕ್‌ ಮಾಡಿದ್ದ ಇಬ್ಬರು ಮುಸ್ಲಿಂ ಯುವಕರನ್ನು ಶನಿವಾರ ಅಭಿಷೇಕ್ ಪ್ರಶ್ನೆ ಮಾಡಿದ್ದರು. ಅದೇ ದ್ವೇಷ ಮುಂದಿಟ್ಟುಕೊಂಡು ಇಂದು ಹತ್ತಾರು ಜನರ ತಂಡ ಕಟ್ಟಿಕೊಂಡು ಬಂದು ಅಭಿಷೇಕ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬಂದಿದೆ.

    ಅಷ್ಟೇ ಅಲ್ಲದೇ ಕೆಲ ಹಿಂದೂಗಳ ಮನೆಗಳಿಗೆ ನುಗ್ಗಿ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ್ದಾರೆ. ಈ ವೇಳೆ ಗಲಾಟೆ ನಡೆದಿದ್ದು ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಭಾರತದಲ್ಲಿದ್ದೀವಾ? ಪಾಕಿಸ್ತಾನದಲ್ಲಿದ್ದೀವಾ ಎಂದು ಪ್ರಶ್ನಿಸಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಯುವಕರೇ ಈ ಕೃತ್ಯ ಎಸಗಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಳ್ಳೂರು ಗ್ರಾಮಸ್ಥರ ಆಗ್ರಹಿಸಿದ್ದಾರೆ. ಮಹಿಳೆಯರು ಸೇರಿದಂತೆ ಪೊಲೀಸ್ ಠಾಣೆ ಎದುರು ನೂರಾರು ಗ್ರಾಮಸ್ಥರ ಜಮಾವಣೆಗೊಂಡಿದ್ದಾರೆ. ಗ್ರಾಮಸ್ಥರ ಮನವಿ ಆಲಿಸಿದ ಡಿವೈಎಸ್‌ಪಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

     

  • ಕೊಕ್ಕರೆ ಬೆಳ್ಳೂರಿನಲ್ಲಿ ಅಸ್ವಸ್ಥಗೊಂಡು ಮೇಲಿನಿಂದ ನೆಲಕ್ಕೆ ಬೀಳುತ್ತಿವೆ ವಿದೇಶಿ ಕೊಕ್ಕರೆಗಳು

    ಕೊಕ್ಕರೆ ಬೆಳ್ಳೂರಿನಲ್ಲಿ ಅಸ್ವಸ್ಥಗೊಂಡು ಮೇಲಿನಿಂದ ನೆಲಕ್ಕೆ ಬೀಳುತ್ತಿವೆ ವಿದೇಶಿ ಕೊಕ್ಕರೆಗಳು

    ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನಲ್ಲಿರುವ ಪ್ರಸಿದ್ಧ ಪಕ್ಷಿಧಾಮ ಕೊಕ್ಕರೆ ಬೆಳ್ಳೂರಿನಲ್ಲಿ ಅಸ್ವಸ್ಥಗೊಂಡು ಹಾರಲು ಸಾಧ್ಯವಾಗದೇ ಕೊಕ್ಕರೆಗಳು ನೆಲಕ್ಕೆ ಬೀಳುತ್ತಿದ್ದು, ಇದು ಎಲ್ಲರ ಆತಂಕಕ್ಕೆ ಕಾರಣವಾಗಿದೆ.

    ಕೊಕ್ಕರೆ ಬೆಳ್ಳೂರು ಗ್ರಾಮಕ್ಕೆ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ದೇಶ, ವಿದೇಶಗಳಿಂದ ವಿವಿಧ ಜಾತಿಗೆ ಸೇರಿದ ಕೊಕ್ಕರೆಗಳು ವಲಸೆ ಬರುತ್ತವೆ. ನಂತರ ಇಲ್ಲಿ ಬಂದು ನೆಲೆಸಿ ಸಂತಾನೋತ್ಪತ್ತಿ ಮಾಡಿ ಜೂನ್, ಜುಲೈ ತಿಂಗಳಲ್ಲಿ ವಾಪಸ್ ಹೋಗುತ್ತವೆ. ಆದರೆ ಈ ಬಾರಿ ವಲಸೆ ಬಂದಿರುವ ಕೊಕ್ಕರೆಗಳು ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡು ಸಂಕಟ ಪಡುತ್ತಿದ್ದು, ಹಾರಲಾರದೇ ನೆಲಕ್ಕೆ ಬೀಳುತ್ತಿವೆ.

    ಇದನ್ನು ಗಮನಿಸಿದ ಗ್ರಾಮಸ್ಥರು ಪಕ್ಷಿಗಳಿಗೆ ತಮ್ಮ ಕೈಲಾದ ಆರೈಕೆ ಮಾಡುತ್ತಿದ್ದಾರೆ. ವಿಷಯ ತಿಳಿದು ವೈದ್ಯರು ಸ್ಥಳಕ್ಕೆ ಧಾವಿಸಿ ಪಕ್ಷಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಈಗಾಗಲೇ ಸುಮಾರು ಮೂರು ಪಕ್ಷಿಗಳು ಅನಾರೋಗ್ಯಕ್ಕೀಡಾಗಿದ್ದು, ಅದರಲ್ಲಿ ಒಂದು ಪಕ್ಷಿ ಸಾವನ್ನಪ್ಪಿದೆ.

    ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲೇ ಪಕ್ಷಿಗಳು ಅನಾರೋಗ್ಯಕ್ಕೆ ತ್ತುತ್ತಾಗಿ ಆತಂಕಕ್ಕೆ ಕಾರಣವಾಗಿತ್ತು. ಈಗ ಮತ್ತೆ ಪಕ್ಷಿಗಳ ಅನಾರೋಗ್ಯ ಮರುಕಳಿಸಿದೆ. ಕಳೆದ ವರ್ಷ ಮೈಸೂರು ಸೇರಿದಂತೆ ಹಲವೆಡೆ ಪಕ್ಷಿಗಳ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈಗಾಗಲೇ ಮೃತಪಟ್ಟ ಪಕ್ಷಿಯನ್ನು ವಶಕ್ಕೆ ಪಡೆದಿರುವ ಅರಣ್ಯಾಧಿಕಾರಿಗಳು ಅಸ್ವಸ್ಥಕ್ಕೆ ನಿಖರ ಕಾರಣ ತಿಳಿಯಲು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

    ಕಳೆದ ವರ್ಷ ಕೂಡ ಇದೇ ರೀತಿ ಐದಕ್ಕೂ ಹೆಚ್ಚು ಕೊಕ್ಕರೆ ಸಾವನ್ನಪ್ಪಿದ್ದವು. ಈ ಬಾರಿಯೂ ಪ್ರಾರಂಭದಲ್ಲಿಯೇ ಕೊಕ್ಕರೆ ಅನಾರೋಗ್ಯಕ್ಕೆ ತುತ್ತಾಗಿರುವುರಿಂದ ನಾವು ಪಕ್ಷಿಗಳ ತಪಾಸಣೆ ನಡೆಸಿದ್ದೇವೆ. ಒಂದು ವೇಳೆ ಮತ್ತೆ ಪಕ್ಷಿಗಳು ಅನಾರೋಗ್ಯಕ್ಕೆ ತುತ್ತಾದ್ರೆ ಪ್ರಯೋಗಾಲಯದಲ್ಲಿ ಪರಿಶೀಲಿಸಿ, ನಂತರ ಅಲ್ಲಿಂದ ವರದಿ ತರಿಸಿಕೊಂಡು ಚಿಕಿತ್ಸೆ ಕೊಡುತ್ತೇವೆ ಎಂದು ಡಾ. ಸತೀಶ್ ತಿಳಿಸಿದ್ದಾರೆ.

    ತಕ್ಷಣ ಪಕ್ಷಿಗಳು ಅಸ್ವಸ್ಥಗೊಳ್ಳುತ್ತಿರುವುದಕ್ಕೆ ಶೀಘ್ರವೇ ಕಾರಣ ಹುಡುಕಿ ಮುಂದೆ ಯಾವುದೇ ಪಕ್ಷಿಗಳಿಗೂ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕೆಂದು ಪಕ್ಷಿ ಪ್ರಿಯರು, ಗ್ರಾಮಸ್ಥರು ಆಗ್ರಹಿಸಿದ್ದಾರೆ.