Tag: ಬೆಳ್ಳೂರ್ ಕ್ರಾಸ್

  • ನಿಂತಿದ್ದ ಟ್ರ್ಯಾಕ್ಟರ್‌ಗೆ  ಕಾರು ಡಿಕ್ಕಿ – ಇಬ್ಬರು ಸಾವು, ಓರ್ವ ಗಂಭೀರ

    ನಿಂತಿದ್ದ ಟ್ರ್ಯಾಕ್ಟರ್‌ಗೆ  ಕಾರು ಡಿಕ್ಕಿ – ಇಬ್ಬರು ಸಾವು, ಓರ್ವ ಗಂಭೀರ

    ಮಂಡ್ಯ: ನಿಂತಿದ್ದ ಟ್ರ್ಯಾಕ್ಟರ್‌ಗೆ  ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ ಹಾಗೂ ಓರ್ವ ಗಂಭೀರವಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.

    ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಗಳು ಕೊಡಗಿನಿಂದ ವಾಪಸ್ ಬೆಂಗಳೂರಿಗೆ ಬರುವ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಐವರು ಪ್ರಯಾಣ ಮಾಡುತ್ತಿದ್ದು, ಅಪಘಾತದಲ್ಲಿ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಒಬ್ಬನ ಸ್ಥಿತಿ ಗಂಭೀರವಾಗಿದೆ. ಇನ್ನೂ ಉಳಿದ ಇಬ್ಬರಿಗೆ ಗಾಯಗಳಾಗಿವೆ. ಸದ್ಯ ಬೆಳ್ಳೂರು ಕ್ರಾಸ್‍ನಲ್ಲಿರುವ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಲಿದ್ದಾರೆ.