Tag: ಬೇತಮಂಗಲ

  • PUBLiC TV Impact | ಕೃಷಿ ಹೊಂಡದಂತಿದ್ದ ಅಂತರರಾಜ್ಯ ರಸ್ತೆಗೆ ಡಾಂಬರೀಕರಣ ಭಾಗ್ಯ

    PUBLiC TV Impact | ಕೃಷಿ ಹೊಂಡದಂತಿದ್ದ ಅಂತರರಾಜ್ಯ ರಸ್ತೆಗೆ ಡಾಂಬರೀಕರಣ ಭಾಗ್ಯ

    ಕೋಲಾರ: ಕೃಷಿ ಹೊಂಡದಂತಿದ್ದ ರಸ್ತೆಗೆ ಡಾಂಬರೀಕರಣ ಭಾಗ್ಯ ಒದಗಿ ಬಂದಿದ್ದು, ಪಬ್ಲಿಕ್ ಟಿವಿ (PUBLiC TV) ವರದಿಯನ್ನು ಬಿತ್ತರಿಸಿದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

    ಒಂದು ವರ್ಷದಿಂದ ಕೋಲಾರ-ಬೇತಮಂಗಲ (Kolar-Betamangala) ಮುಖ್ಯರಸ್ತೆಗೆ ಡಾಂಬರು ಇಲ್ಲದೇ ಜನರು ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ಈ ಸಮಸ್ಯೆಯ ಕುರಿತು ಪಬ್ಲಿಕ್ ಟಿವಿ ಸುದ್ದಿಯನ್ನು ಬಿತ್ತರಿಸಿತ್ತು.ಇದನ್ನೂ ಓದಿ: ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಪ್ರಿಯಾಂಕಾ ವಯನಾಡಿನಲ್ಲಿ ಸ್ಪರ್ಧೆ – ಪಿಣರಾಯಿ ವಿಜಯನ್‌

    ಕೋಲಾರ ಮತ್ತು ವಿಕೋಟಕ್ಕೆ ಅಂತರರಾಜ್ಯ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಸಂಪೂರ್ಣ ಹಾಳಾಗಿ ಕೃಷಿ ಹೊಂಡದಂತಾಗಿತ್ತು. ರಸ್ತೆಯಲ್ಲಿ ದೊಡ್ಡ ದೊಡ್ಡ ಕಂದಕಗಳು ನಿರ್ಮಾಣವಾಗಿ ದ್ವಿಚಕ್ರ ವಾಹನಗಳು, ಕಾರು, ಬಸ್ ಸವಾರರು ಪ್ರತಿದಿನ ಈ ರಸ್ತೆಯಲ್ಲಿ ಓಡಾಡಲು ನರಕಯಾತನೆ ಅನುಭವಿಸುತ್ತಿದ್ದರು.

    ಮಳೆ ಬಂದರೆ ರಸ್ತೆಗಳು ಕುಂಟೆಗಳಾಗಿ ಪರಿವರ್ತನೆಯಾಗುತ್ತಿತ್ತು. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿರಲಿಲ್ಲ. ಇದರಿಂದ ಕಳೆದ ಅ.28 ರಂದು ಸ್ಥಳೀಯ ನಿವಾಸಿಗಳು ರಸ್ತೆ ನಿರ್ಮಾಣಕ್ಕಾಗಿ ಚಂದಾ ಪಡೆದು ಸ್ವತಃ ರಸ್ತೆ ನಿರ್ಮಿಸುವುದಾಗಿ ಅಣುಕು ಪ್ರದರ್ಶನ ಮಾಡಿ, ಸ್ಥಳೀಯ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಛೀಮಾರಿ ಹಾಕಿದರು.

    ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾದ ಹತ್ತು ದಿನದಲ್ಲೇ ರಸ್ತೆ ಕಾಮಗಾರಿ ಆರಂಭವಾಗಿದೆ. ಎಚ್ಚೆತ್ತ ಅಧಿಕಾರಿಗಳು ಕಳೆದ ಹಲವು ವರ್ಷಗಳಿಂದ ಹಾಳಾಗಿದ್ದ ರಾಜ್ಯ ಹೆದ್ದಾರಿಗೆ ಡಾಂಬರೀಕರಣ ಮಾಡಿಸಿದ್ದಾರೆ. ಇದರಿಂದಾಗಿ ಜನರು ಸಂತಸ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಮುಂದಿನ ವರ್ಷದ ಚುನಾವಣೆಯಲ್ಲಿ ಕೆನಡಾ ಪ್ರಧಾನಿ ಟ್ರುಡೋಗೆ ಸೋಲು : ಮಸ್ಕ್‌ ಭವಿಷ್ಯ

  • ಕೋಲಾರದಲ್ಲಿ ಉಕ್ಕಿ ಹರಿಯುತ್ತಿದೆ ಪಾಲಾರ್‌ ನದಿ – 19 ಗೇಟ್ ಓಪನ್

    ಕೋಲಾರದಲ್ಲಿ ಉಕ್ಕಿ ಹರಿಯುತ್ತಿದೆ ಪಾಲಾರ್‌ ನದಿ – 19 ಗೇಟ್ ಓಪನ್

    ಕೋಲಾರ : ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಬಹುತೇಕ ಕೆರೆಗಳು ತುಂಬಿ ಕೋಡಿ ಹರಿದಿವೆ. ಅದರಲ್ಲೂ ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದಾದ ಪಾಲಾರ್ ನದಿಯಲ್ಲಿ ನೀರಿನ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಜಲಾಶಯದ 19 ಗೇಟ್ ಗಳ ಮೂಲಕ ನೀರನ್ನು ಬಿಡಲಾಗುತ್ತಿದೆ.

    ಬೇತಮಂಗಲದ ಪಾಲಾರ್ ಜಲಾಶಯ ಕೆರೆಗೆ ಹೆಚ್ಚಿನ ನೀರು ಬಂದಿದ್ದು 19 ಗೇಟ್ ತೆರೆಯಲಾಗಿದೆ. ನೀರು ಹೆಚ್ಚಾದ ಹಿನ್ನೆಲೆ ಜಲಾಶಯಕ್ಕೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಬಾಗಿಲುಗಳು ಹಾಗೂ ಕೆರೆ ಕಟ್ಟೆಯ ಭಾಗ ಬಿರುಕು ಬಿಟ್ಟಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಇದನ್ನೂ ಓದಿ: ನಾಯಿ ಮೂತ್ರ ವಿರ್ಸಜನೆ ಮಾಡಿದ್ದಕ್ಕೆ ವೃದ್ಧನಿಗೆ ಕಲ್ಲಿನಿಂದ ಹೊಡ್ದ

    ನಾಲ್ಕು ವರ್ಷಗಳ ಹಿಂದೆ 2017 ರಲ್ಲಿ ಕೆರೆ ತುಂಬಿತ್ತು. 1,600 ಎಕರೆ ವಿಸ್ತೀರ್ಣ ಹೊಂದಿರುವ ಪಾಲಾರ್ ಜಲಾಶಯದಲ್ಲಿ 6 ಸಾವಿರ ಕ್ಯೂಸೆಕ್ ನೀರು ಸಂಗ್ರಹವಾಗುತ್ತದೆ. ಒಮ್ಮೆ ತುಂಬಿ ಹರಿದಿದ್ದೆ ಆದಲ್ಲಿ 2-3 ವರ್ಷ ಕೆಜಿಎಫ್ ನಗರ ಸೇರಿದಂತೆ ಬೇತಮಂಗಲದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಇಂದು ಮಳೆ ಎಚ್ಚರಿಕೆ – ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

    ಕೆರೆ ಕಟ್ಟೆಯಲ್ಲಿ ಬಿರುಕು ಬಿಟ್ಟಿರುವ ಹಿನ್ನೆಲೆ ಮುನ್ನಚ್ವರಿಕಾ ಕ್ರಮವಾಗಿ ನೀರನ್ನು ಹೆಚ್ಚಾಗಿ ಹೊರಕ್ಕೆ ಬಿಡಲಾಗುತ್ತಿದೆ. ಇದರ ಜೊತೆಗೆ ಸರಿಯಾದ ನಿರ್ವಹಣೆ ಇಲ್ಲದೆ ಕ್ರಸ್ಟ್ ಗೇಟ್ ಗಳ ಮೂಲಕವೂ ನೀರು ಸಾಕಷ್ಟು ಸೋರಿಕೆಯಾಗುತ್ತಿರುವುದು ಆತಂಕ ಮೂಡಿಸಿದೆ.