Tag: ಬೇತುಲ್

  • ಮಧ್ಯಪ್ರದೇಶದಲ್ಲಿ ಲೋಕಸಭಾ ಅಭ್ಯರ್ಥಿ ನಿಧನ- ಚುನಾವಣೆ ಮುಂದೂಡಿಕೆ

    ಮಧ್ಯಪ್ರದೇಶದಲ್ಲಿ ಲೋಕಸಭಾ ಅಭ್ಯರ್ಥಿ ನಿಧನ- ಚುನಾವಣೆ ಮುಂದೂಡಿಕೆ

    ಭೋಪಾಲ್:‌ ಮಧ್ಯಪ್ರದೇಶದ ಬೆತುಲ್ ಕ್ಷೇತ್ರದಿಂದ ಮಾಯಾವತಿಯವರ ಬಹುಜನ ಸಮಾಜ ಪಕ್ಷದ (BSP) ಲೋಕಸಭಾ ಅಭ್ಯರ್ಥಿ ಅಶೋಕ್ ಭಾಲವಿ (Ashok Bhalawi) ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ನಡೆಯಬೇಕಿದ್ದ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

    ಪಕ್ಷದ ಪ್ರಕಾರ, ಭಾಲವಿಗೆ ಎದೆನೋವು ಕಾಣಿಸಿಕೊಂಡ ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ವಿಚಾರವನ್ನು ಬೆತುಲ್ ಡಿಎಂ ನರೇಂದ್ರ ಕುಮಾರ್ ಸೂರ್ಯವಂಶಿ ಖಚಿತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದೇವೆ. ಹೀಗಾಗಿ ಏಪ್ರಿಲ್‌ 26ರಂದು ನಡೆಯಬೇಕಿದ್ದ ಎರಡನೇ ಹಂತದ ಮತದಾನವನ್ನು ಮುಂದೂಡಿದ್ದೇವೆ ಎಂದು ಹೇಳಿದರು.

    ಇತ್ತ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನರೇಂದ್ರ ಸಿಂಗ್ ರಘುವಂಶಿ ಪ್ರತಿಕ್ರಿಯಿಸಿ, ಪ್ರಜಾಪ್ರತಿನಿಧಿ ಕಾಯ್ದೆಯಡಿ ಚುನಾವಣಾ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖಿಸಲು ಭಯ – ಕಾಂಗ್ರೆಸ್‌ ವಿರುದ್ಧ ಪಿಣರಾಯಿ ಕಿಡಿ

    ಬೇತುಲ್‌ನ ಹಾಲಿ ಸಂಸದ ದುರ್ಗಾ ದಾಸ್ ಉಯಿಕೆ ಅವರನ್ನು ಬಿಜೆಪಿ ಮತ್ತೊಮ್ಮೆ ಕ್ಷೇತ್ರದಿಂದ ಕಣಕ್ಕಿಳಿಸಿದರೆ, ಕಾಂಗ್ರೆಸ್ ರಾಮು ಟೇಕಂ ಅವರನ್ನು ಕಣಕ್ಕಿಳಿಸಿದೆ. ಏಪ್ರಿಲ್ 26 ರಂದು ಟಿಕಮ್‌ಗಢ್, ದಾಮೋಹ್, ಖಜುರಾಹೊ, ಸತ್ನಾ, ರೇವಾ ಮತ್ತು ಹೊಶಂಗಾಬಾದ್ ಸ್ಥಾನಗಳೊಂದಿಗೆ ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಬೇತುಲ್ ಮತದಾನ ಮಾಡಲು ನಿರ್ಧರಿಸಲಾಗಿತ್ತು.

  • ಕಾರು, ಬಸ್ ನಡುವೆ ಡಿಕ್ಕಿ – ಭೀಕರ ಅಪಘಾತದಲ್ಲಿ 11 ಸಾವು

    ಕಾರು, ಬಸ್ ನಡುವೆ ಡಿಕ್ಕಿ – ಭೀಕರ ಅಪಘಾತದಲ್ಲಿ 11 ಸಾವು

    ಭೋಪಾಲ್: ಕಾರು (Car) ಹಾಗೂ ಬಸ್ (Bus) ನಡುವೆ ಡಿಕ್ಕಿ ಉಂಟಾಗಿ ಭೀಕರ ಅಪಘಾತದಲ್ಲಿ (Accident) 11 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಬೇತುಲ್‌ನಲ್ಲಿ (Betul) ಶುಕ್ರವಾರ ನಸುಕಿನ ವೇಳೆ ನಡೆದಿದೆ.

    ಘಟನೆ ಗುಡ್ಗಾಂವ್ ಹಾಗೂ ಭೈಸ್ದೇಹಿ ಪ್ರದೇಶದ ನಡುವೆ ನಡೆದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಧಾವಿಸಿದ್ದಾರೆ. ಗಾಯಗೊಂಡ ಒಬ್ಬ ಪ್ರಯಾಣಿಕನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಇದನ್ನೂ ಓದಿ: ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿ: ಸಚಿವೆ ಉಷಾ ಠಾಕೂರ್

    ವರದಿಗಳ ಪ್ರಕಾರ ಘಟನೆಯಲ್ಲಿ ಸಾವನ್ನಪ್ಪಿರುವ 11 ಪ್ರಯಾಣಿಕರು ಮಹಾರಾಷ್ಟçದ ಅಮರಾವತಿಯಿಂದ ಹಿಂದಿರುಗುತ್ತಿದ್ದರು. ಘಟನೆ ಮಧ್ಯರಾತ್ರಿ 2 ಗಂಟೆ ವೇಳೆ ನಡೆದಿದೆ. ಕಾರು ಚಾಲಕ ವಾಹನ ಚಲಾಯಿಸುತ್ತಿದ್ದ ವೇಳೆ ನಿದ್ರೆಗೆ ಜಾರಿದ್ದರಿಂದ ಅಪಘಾತ ಉಂಟಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲೂ ಸಂಚಾರ ಆರಂಭಿಸಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ – ನ.11ಕ್ಕೆ ಮೋದಿ ಚಾಲನೆ

    ಭೀಕರ ಘಟನೆಯ ಬಳಿಕ 7 ಶವಗಳನ್ನು ತಕ್ಷಣವೇ ಹೊರತೆಗೆಯಲಾಗಿದೆ. ಉಳಿದ ದೇಹಗಳನ್ನು ಹೊರತೆಗೆಯಲು ನಜ್ಜುಗುಜ್ಜಾದ ವಾಹನದ ಭಾಗಗಳನ್ನು ಬೇರ್ಪಡಿಸಬೇಕಾಯಿತು ಎಂದು ಬೇತುಲ್ ಹಿರಿಯ ಪೊಲೀಸ್ ಅಧಿಕಾರಿ ಸಿಮಲಾ ಪ್ರಸಾದ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]