Tag: ಬೈಕ್ ಕಾರು

  • ಕಾರು ಫಾಲೋ ಮಾಡಿ ಡೋರ್‌ ತೆಗೆಯಲು ಯತ್ನ – ಬೆಂಗಳೂರಲ್ಲಿ ಯುವತಿಗೆ ಕಿಡಿಗೇಡಿಗಳಿಂದ ಕಿರುಕುಳ

    ಕಾರು ಫಾಲೋ ಮಾಡಿ ಡೋರ್‌ ತೆಗೆಯಲು ಯತ್ನ – ಬೆಂಗಳೂರಲ್ಲಿ ಯುವತಿಗೆ ಕಿಡಿಗೇಡಿಗಳಿಂದ ಕಿರುಕುಳ

    ಬೆಂಗಳೂರು: ಯುವತಿ ಕಾರನ್ನು (Car) ಚೇಸ್ ಮಾಡಿದ ಮೂವರು ಯುವಕರು ಪುಂಡಾಟ ಮೆರೆದ ಘಟನೆ ಬೆಂಗಳೂರಿನ (Bengaluru) ಕೋರಮಂಗದಲ್ಲಿ (Koramangala) ರಾತ್ರಿ ನಡೆದಿದೆ.

    ಮಡಿವಾಳ ಸಿಗ್ನಲ್‌ನಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರಿಗೆ ಮತ್ತು ಕಾರಿನಲ್ಲಿದ್ದ ಯುವತಿಗೆ ಕಿರಿಕ್ ನಡೆದಿದೆ. ನಂತರ ಕಾರನ್ನು ಚೇಸ್ ಮಾಡಿದ ಮೂವರು ಕಿರುಕುಳ ನೀಡಿದ್ದಾರೆ. ಇದನ್ನೂ ಓದಿ: ಮೂರು ದಿನಗಳ ಕಾಲ ಸಿಎಂ ಮೈಸೂರು ಪ್ರವಾಸ

    ಮಡಿವಾಳ ಅಂಡರ್‌ಪಾಸ್‌ ಸೇತುವೆಯಿಂದ ಕೋರಮಂಗಲ 5ನೇ ಬ್ಲಾಕ್‌ವರೆಗೆ ಕಾರನ್ನು ಕಿಡಿಗೇಡಿಗಳು ಹಿಂಬಾಲಿಸಿದ್ದಾರೆ. ಅಷ್ಟೇ ಅಲ್ಲದೇ ಕೋರಮಂಗಲದಲ್ಲಿ ಕಾರು ಡೋರ್ ಓಪನ್ ಮಾಡಲು ಯತ್ನಿಸಿ ಕೋರಮಂಗಲ 5ನೇ ಬ್ಲಾಕ್‌ನಲ್ಲಿ ಪರಾರಿಯಾಗಿದ್ದಾರೆ. ಇದನ್ನೂ ಓದಿ:‌ ಎನ್‌ಡಿಎ ಅಧಿಕಾರಕ್ಕೆ ಬರುವ ಮೊದಲು ಕಂಪನಿಗಳು ಪಕ್ಷಗಳಿಗೆ ಎಷ್ಟು ದೇಣಿಗೆ ನೀಡಿದೆ ಹೇಳಬಹುದೇ – ಮೋದಿ ಪ್ರಶ್ನೆ

    ಯುವಕರು ಕಾರು ಫಾಲೋ ಮಾಡುವ ದೃಶ್ಯ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ ಯುವತಿ ಆಳುತ್ತಲೇ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಡಿವಾಳ ಪೊಲೀಸ್ ಠಾಣೆಯಲ್ಲಿ (Madivala Police Station) ಯುವತಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶೋಧ ಕಾರ್ಯ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ತೇಜಸ್, ಜಗನ್ನಾಥ ಬಂಧಿತ ಆರೋಪಿಗಳಾಗಿದ್ದು ಮತ್ತೊಬ್ಬನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ಬೈಕ್ ಗೆ ಕಾರ್ ಡಿಕ್ಕಿ- ಟೆಂಪೋ  ಟ್ರಾವೆಲರ್ಸ್  ಚಕ್ರದಡಿ ಸಿಲುಕಿ ಸವಾರ ದುರ್ಮರಣ

    ಬೈಕ್ ಗೆ ಕಾರ್ ಡಿಕ್ಕಿ- ಟೆಂಪೋ ಟ್ರಾವೆಲರ್ಸ್ ಚಕ್ರದಡಿ ಸಿಲುಕಿ ಸವಾರ ದುರ್ಮರಣ

    ಮಂಡ್ಯ: ಬೆಳ್ಳಂಬೆಳಗ್ಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಂಡ್ಯದ ಸಿದ್ದಯ್ಯನ ಗೇಟ್ ಬಳಿ ಬೈಕ್, ಕಾರ್ ಮತ್ತು ಟೆಂಪೋ ಟ್ರಾವೆಲರ್ಸ್ ನಡುವೆ ಸರಣಿ ಅಪಘಾತವಾಗಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಮಾದೇಶ್ (45) ಹಾಗೂ ಜೇಮ್ಸ್ (30) ಮೃತ ದುರ್ದೈವಿಗಳು. ಇಂದು ಬೆಳಗ್ಗೆ ಗಾರೆ ಕೆಲಸಕ್ಕೆಂದು ಮಾದೇಶ್ ಹಾಗೂ ಜೇಮ್ಸ್ ಬೈಕ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿಂದ ಬರುತ್ತಿದ್ದ ಕಾರೊಂದು ಬೈಕ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಪಕ್ಕದಲ್ಲಿ ಚಲಿಸುತ್ತಿದ್ದ ಟೆಂಪೋ ಟ್ರಾವೆಲ್ಸ್‍ಗೆ ಗುದ್ದಿದೆ. ಅಪಘಾತದಿಂದ ಬೈಕ್ ಸವಾರರಲ್ಲಿ ಓರ್ವ ಟೆಂಪೋ ಟ್ರಾವೆಲರ್ಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟರೆ, ಇನ್ನೋರ್ವ ರಸ್ತೆ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ. ಸದ್ಯ ಮೃತರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಸರಣಿ ಅಪಘಾತದಿಂದಾಗಿ ಬೆಂಗಳೂರು- ಮೈಸೂರು ಹೆದ್ದಾರಿ ಸುಮಾರು 5 ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಆಗಿ ಸಂಚಾರಿ ಅಸ್ತವ್ಯಸ್ಥಗೊಂಡಿದೆ.

    ಘಟನೆ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews