Tag: ಬೈಕ್ ಲಾರಿ

  • ಬೈಕ್‌, ಲಾರಿ ಮುಖಾಮುಖಿ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

    ಬೈಕ್‌, ಲಾರಿ ಮುಖಾಮುಖಿ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

    ವಿಜಯಪುರ: ಬೈಕ್-ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಆಲಮೇಲಪಟ್ಟದಲ್ಲಿ ನಡೆದಿದೆ.

    ಚಂದು ಅಗಸರ (24) ಮೃತ ದುರ್ದೈವಿ. ಈತ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಬಿ.ಕೆ. ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಇಸ್ಪೀಟ್ ಅಡ್ಡ ನಡೆಸುತ್ತಿದ್ದ ನಟ ನಾಗಶೌರ್ಯ ತಂದೆ ಬಂಧನ

    ಆಲಮೇಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆಲಮೇಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 2 ವರ್ಷಗಳ ನಂತರ ಹಜ್ ಯಾತ್ರೆ ಪ್ರಕ್ರಿಯೆಗೆ ಶಶಿಕಲಾ ಜೊಲ್ಲೆ ಅಧಿಕೃತ ಚಾಲನೆ

  • ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಸಾವು

    ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಸಾವು

    ಬಳ್ಳಾರಿ: ಜಿಲ್ಲೆಯ ಹೊಸಪೇಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 50ರ ಟೂಲ್ ಗೇಟ್ ಮುಂಭಾಗದಲ್ಲಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾಗಿದ್ದಾನೆ.

     

    ಮೃತನು ರಾಮಪ್ಪ (46) ಮೃತನಾಗಿದ್ದಾನೆ. ಕೊಟ್ಟೂರು ತಾಲೂಕಿನ ಪತ್ರಳ್ಳಿ ಗ್ರಾಮದವನು ಎಂದು ಗುರುತಿಸಲಾಗಿದೆ. ತಾಲೂಕಿನ ತಿಮ್ಮಲಾಪುರದ ಬಳಿ ಇರುವ ಟೋಲ್‍ಗೆಟ್‍ನ ಹತ್ತಿರ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

    ಲಾರಿ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಹೊರಟಿತ್ತು, ಟೋಲ್ ಬಳಿ ಲಾರಿಯನ್ನು ನಿಲ್ಲಿಸಿದ್ದಾನೆ, ಬೈಕ್ ಸವಾರ ಹೊಸಪೇಟೆಗೆ ಹೊರಟಿದ್ದ ಈ ವೇಳೆ ಹಿಂಬದಿಯಿಂದ ನಿಂತ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇನ್ನೋರ್ವ ಹಿಂಬದಿ ಸವಾರನಿಗೆ ಪೆಟ್ಟಾಗಿವೆ.

    ಈ ಕುರಿತು ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.