Tag: ಬೈಯಪ್ಪನಹಳ್ಳಿ

  • ವಿಂಗ್ ಕಮಾಂಡರ್ ತಪ್ಪು ಮಾಡಿದ್ರೂ ತಪ್ಪೇ: ಸಿಎಂ

    ವಿಂಗ್ ಕಮಾಂಡರ್ ತಪ್ಪು ಮಾಡಿದ್ರೂ ತಪ್ಪೇ: ಸಿಎಂ

    ಮಂಡ್ಯ: ವಿಂಗ್ ಕಮಾಂಡರ್ (Wing Commander) ಯುವಕನ ಮೇಲೆ ಹಲ್ಲೆ ವಿಚಾರವಾಗಿ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ. ವಿಂಗ್ ಕಮಾಂಡರ್ ಆಗಲಿ ಯಾರೇ ಆಗಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಅದ್ದಿಹಳ್ಳಿ ಹೆಲಿಪ್ಯಾಡ್‌ನಲ್ಲಿ ವಿಂಗ್ ಕಮಾಂಡರ್ ಯುವಕನ ಮೇಲೆ ಹಲ್ಲೆ ವಿಚಾರಕ್ಕೆ ಅವರು ಪ್ರತಿಕ್ರಿಯೆ ನೀಡಿದರು. ಈಗಾಗಲೇ ಈ ಪ್ರಕರಣ ಸಂಬಂಧ ದೂರು ದಾಖಲಾಗಿದೆ. ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಆಗುತ್ತದೆ. ವಿಂಗ್ ಕಮಾಂಡರ್ ತಪ್ಪು ಮಾಡಿದ್ರೂ ತಪ್ಪೇ. ಸೂಕ್ತ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ಸಂಸತ್ತೇ ಸರ್ವೋಚ್ಚ, ಚುನಾಯಿತ ಪ್ರತಿನಿಧಿಗಳು ಸಾಂವಿಧಾನಿಕ ವಿಷಯದ ಅಲ್ಟಿಮೇಟ್‌ ಮಾಸ್ಟರ್ಸ್‌: ಧನಕರ್‌

    ರಾಜ್ಯದಲ್ಲಿ ಹಿಂದಿ ಹೇರಿಕೆಗೆ ನಾವು ಬಿಡಲ್ಲ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಒಪ್ಪಲ್ಲ, ನಮ್ಮ ವಿರೋಧವಿದೆ. ರಾಜ್ಯದಲ್ಲಿ ದ್ವಿಭಾಷ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಮತ್ತು ಇಂಗ್ಲಿಷ್ ಕಲಿಯುವ ಅವಕಾಶ ಇದೆ. ನಮ್ಮಲ್ಲಿ ತ್ರಿಭಾಷ ಸೂತ್ರವಿಲ್ಲ. ಕನ್ನಡ, ಇಂಗ್ಲಿಷ್ ಮಾತ್ರ ಕಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಚಾಕು ಇರಿದ ಪ್ರಿಯಕರ

  • ವಿಂಗ್ ಕಮಾಂಡರ್ ಹಣೆಯಲ್ಲಿ ರಕ್ತ ಸೋರಿದ್ದು ಹೇಗೆ?

    ವಿಂಗ್ ಕಮಾಂಡರ್ ಹಣೆಯಲ್ಲಿ ರಕ್ತ ಸೋರಿದ್ದು ಹೇಗೆ?

    ಬೆಂಗಳೂರು: ವಿಂಗ್ ಕಮಾಂಡರ್ (Wing Commander) ಮೇಲೆ ಹಲ್ಲೆ ಪ್ರಕರಣ ಸಂಬಂಧ ವಿಂಗ್ ಕಮಾಂಡರ್ ಮಾಡಿದ್ದ ವೀಡಿಯೋದಲ್ಲಿ ಅವರ ಹಣೆಯಿಂದ ರಕ್ತ ಸೋರುತ್ತಿತ್ತು. ಯುವಕ ವಿಕಾಸ್ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಈ ರೀತಿಯಾಗಿದೆ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Shiladitya Bose) ಬಿಂಬಿಸಿದ್ದರು. ಆದರೆ ಅಸಲಿ ಕಾರಣವೇ ಬೇರೆ ಇದೆ. ವಿಕಾಸ್‌ಗೆ ಡಿಚ್ಚಿ ಹೊಡೆಯಲು ಹೋಗಿ ವಿಂಗ್ ಕಮಾಂಡರ್ ಹಣೆಯಲ್ಲಿ ರಕ್ತ ಬರಿಸಿಕೊಂಡಿದ್ದಾರೆ.

    ಗಲಾಟೆ ನಡೆದ ಸಂದರ್ಭ ವಿಂಗ್‌ ಕಮಾಂಡರ್‌ ಬೈಕ್‌ ಅನ್ನು ಬೀಳಿಸಿದ್ದಾರೆ. ಈ ವೇಳೆ  ವಿಕಾಸ್‌ ಬೈಕ್‌ ಕೀಯನ್ನು ಬೈಕಿನಿಂದ ತೆಗೆದು ತಮ್ಮ ಕೈಯಲ್ಲಿ ಹಿಡಿದುಕೊಂಡಿದ್ದರು. ರೊಚ್ಚಿಗೆದ್ದ ವಿಂಗ್‌ ಕಮಾಂಡರ್ ವಿಕಾಸ್‌ಗೆ ಡಿಚ್ಚಿ ಹೊಡೆಯಲು ಹೋದ ಸಂದರ್ಭ ವಿಕಾಸ್ ಕೈಯಲ್ಲಿದ್ದ ಗಾಡಿ ಕೀ ವಿಂಗ್ ಕಮಾಂಡರ್ ಹಣೆಗೆ ತಗುಲಿ ರಕ್ತ ಬಂದಿದೆ. ಇದನ್ನೇ ಸಿಂಪತಿ ವೀಡಿಯೋಗೆ ಬಳಸಿಕೊಂಡ ವಿಂಗ್ ಕಮಾಂಡರ್, ದೇವರು ನನಗೆ ಪವರ್ ಕೊಟ್ಟಿರೋದು ಸೇಡು ತೀರಿಸಿಕೊಳ್ಳಲು ಅಲ್ಲ ಎಂದು ಸುಳ್ಳು ಹೇಳಿದ್ದಾರೆ. ಇದನ್ನೂ ಓದಿ: ಕುತ್ತಿಗೆ ಹಿಡಿದು ಕೊಲೆಗೆ ಯತ್ನಿಸಿದ್ದ – ವಿಂಗ್‌ ಕಮಾಂಡರ್‌ ವಿರುದ್ಧ ಕೊನೆಗೂ ಎಫ್‌ಐಆರ್‌ ದಾಖಲು

     

    ಭಾಷೆಯ ವಿಚಾರ ಹಾಗೂ ಸ್ಥಳೀಯರು ಯಾರೂ ನನ್ನ ನೆರವಿಗೆ ಬರಲಿಲ್ಲ ಎಂದು ವಿಂಗ್ ಕಮಾಂಡರ್ ವೀಡಿಯೋ ಮಾಡಿ ಸಿಂಪತಿಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ. ವಿಂಗ್ ಕಮಾಂಡರ್ ಕಾರಿನ ಡ್ಯಾಶ್‌ಕ್ಯಾಮೆರಾ ವೀಡಿಯೋ ಬಿಡುಗಡೆ ಮಾಡದೇ ಹಲ್ಲೆಯ ವೀಡಿಯೋ ಅಷ್ಟೆ ಅಪ್ಲೋಡ್ ಮಾಡಿದ್ದರು. ಸಿಸಿಟಿವಿ ದೃಶ್ಯಗಳು ಬೆಳಕಿಗೆ ಬರುತ್ತಿದ್ದಂತೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮುಖವಾಡ ಕಳಚಿದೆ. ಇದನ್ನೂ ಓದಿ: ಹಿಂದಿಯಲ್ಲಿ ಬೈದಿದ್ದು ಅರ್ಥ ಆಗಿಲ್ಲ ಎಂದಿದ್ದಕ್ಕೆ ಗಲಾಟೆ: ಯುವಕನ ತಾಯಿ ಅಳಲು

    ವಿಕಾಸ್ ಪಕ್ಕೆಲುಬುಗಳಿಗೆ ವಿಂಗ್ ಕಮಾಂಡರ್ ಕಾಲಿನಿಂದ ಒದ್ದಿರುವ ಹಿನ್ನೆಲೆ ವಿಕಾಸ್ ಪಕ್ಕೆಲುಬು ನೋವಿನಿಂದ ಬಳಲುತ್ತಿದ್ದಾರೆ. ಸದ್ಯ ಹಲ್ಲೆಗೊಳಗಾದ ವಿಕಾಸ್ ಪರ ಹಲವು ಕನ್ನಡಪರ ಸಂಘಟನೆಗಳು ನಿಂತಿವೆ. ಸೋಮವಾರ ಸಂಜೆಯಿಂದಲೇ ಶಿಲಾದಿತ್ಯ ಬೋಸ್ ಬಂಧನಕ್ಕೆ ಆಗ್ರಹ ವ್ಯಕ್ತವಾಗಿತ್ತು. ವಿಕಾಸ್‌ಗೆ ಕಾನೂನಿನ ನೆರವು ನೀಡಲು ಸಂಘಟನೆಗಳು ಮುಂದಾಗಿವೆ. ಇದೀಗ ವಿಕಾಸ್ ನೀಡಿದ ದೂರನ್ನು ಸ್ವೀಕರಿಸಿದ ಬೈಯಪ್ಪನಹಳ್ಳಿ ಪೊಲೀಸರು ವಿಂಗ್ ಕಮಾಂಡರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಓಂ ಪ್ರಕಾಶ್‌ ಹತ್ಯೆಗೆ 1 ವಾರದಿಂದ ಸ್ಕೆಚ್‌ ಹಾಕಿದ್ದ ಪತ್ನಿ, ಪುತ್ರಿ!

  • ಹಿಂದಿಯಲ್ಲಿ ಬೈದಿದ್ದು ಅರ್ಥ ಆಗಿಲ್ಲ ಎಂದಿದ್ದಕ್ಕೆ ಗಲಾಟೆ: ಯುವಕನ ತಾಯಿ ಅಳಲು

    ಹಿಂದಿಯಲ್ಲಿ ಬೈದಿದ್ದು ಅರ್ಥ ಆಗಿಲ್ಲ ಎಂದಿದ್ದಕ್ಕೆ ಗಲಾಟೆ: ಯುವಕನ ತಾಯಿ ಅಳಲು

    ಬೆಂಗಳೂರು: ವಿಂಗ್ ಕಮಾಂಡರ್ (Wing Commander) ಮೇಲೆ ಯುವಕ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಯುವಕ ವಿಕಾಸ್ ತಾಯಿ ಪ್ರಕರಣದಲ್ಲಿ ಮಗನದ್ದು ಯಾವುದೇ ತಪ್ಪು ಇಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

    ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೈಕಿನ ಸೈಲೆನ್ಸರ್‌ಗೆ ಕಾರು ಟಚ್ ಆಗಿದೆ. ಈ ವೇಳೆ ಹಿಂದಿಯಲ್ಲಿ ಬೈದಿದ್ದಾರೆ. ಹಿಂದಿಯಲ್ಲಿ ಹೇಳಿದ್ದು ಅರ್ಥ ಆಗಿಲ್ಲ ಎಂದು ಹೇಳಿದ್ದಕ್ಕೆ ಗಲಾಟೆ ಮಾಡಿದ್ದಾರೆ. ಮಹಿಳೆ ಬಳಿ ಕೇಳಬಾರದೆಂದು ಗಂಡನ ಬಳಿ ಕೇಳಿದ್ದಾನೆ. ವಿಂಗ್ ಕಮಾಂಡರ್‌ನನ್ನು ಕೇಳಿದ್ದಕ್ಕೆ ಮಗನನ್ನು ತಳ್ಳಿದ್ದಾರೆ. ಕೈ ಕಚ್ಚಿ, ಮೈ ಪರಚಿದ್ದಾರೆ. ಬೈಕ್ ಅನ್ನು ಎತ್ತಿಹಾಕಿ ಕಾಲಿಂದ ಒದ್ದಿದ್ದಾರೆ. ನಮ್ಮ ಮೇಲೆ ಹಲ್ಲೆ ಮಾಡಿ ನಮ್ಮ ಮೇಲೆಯೇ ಗೂಬೆ ಕೂರಿಸಿದ್ದಾರೆ. ಇದು ಎಷ್ಟು ನ್ಯಾಯ ಎಂದು ಯುವಕನ ತಾಯಿ ಬೇಸರ ವ್ಯಕ್ತಪಡಿಸಿದ್ದಾರೆ.‌ ಇದನ್ನೂ ಓದಿ: ಓಂ ಪ್ರಕಾಶ್‌ ಹತ್ಯೆಗೆ 1 ವಾರದಿಂದ ಸ್ಕೆಚ್‌ ಹಾಕಿದ್ದ ಪತ್ನಿ, ಪುತ್ರಿ!

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ವಿಂಗ್ ಕಮಾಂಡರ್ ಬಂಧನಕ್ಕೆ ಆಗ್ರಹ ಹೆಚ್ಚಿದೆ. ಕನ್ನಡಿಗನ ಮೇಲೆ ವಿಂಗ್ ಕಮಾಂಡರ್ ಮನಸೋಇಚ್ಛೆ ಥಳಿಸಿದ್ದಾರೆ. ತೀವ್ರ ಹೊಡೆತದಿಂದ ಯುವಕ ಅಸ್ವಸ್ಥನಾಗಿ ಬಿದ್ದಿದ್ದಾನೆ. ಯುವಕನ ರಕ್ಷಣೆಗೆ ಧಾವಿಸಿದ ಸ್ಥಳೀಯರಿಗೆ ವಿಂಗ್ ಕಮಾಂಡರ್ ಶಿಲಾದಿತ್ಯಾ ಅವಾಜ್ ಕೂಡ ಹಾಕಿದ್ದಾರೆ. ಕನ್ನಡಿಗನ ಮೇಲೆ ಹಲ್ಲೆಗೆ ಕನ್ನಡಿಗರು ಕೆರಳಿದ್ದಾರೆ. ಸೈನಿಕನ ಹೆಸರಲ್ಲಿ ಸಿಂಪತಿ ಗಿಟ್ಟಿಸಿಕೊಂಡವನ ಬಂಧನಕ್ಕೆ ಪಟ್ಟುಹಿಡಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಂಗ್ ಕಮಾಂಡರ್ ಬಂಧನಕ್ಕೆ ಆಗ್ರಹ ಹೆಚ್ಚಿದ್ದು, ಸಂಘಟನೆಗಳು ಬೈಯಪ್ಪನಹಳ್ಳಿ ಪೊಲೀಸರಿಗೆ ಮನವಿ ಮಾಡಲಿವೆ. ಇದನ್ನೂ ಓದಿ: ರಿಕ್ಕಿ ರೈ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಫೇಕಾ?

    ಪ್ರಕರಣ ಏನು?
    ಬೆಂಗಳೂರಿನಲ್ಲಿ ಕೋಲ್ಕತ್ತಾ ಮೂಲದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ತಮ್ಮ ಪತ್ನಿಯೊಂದಿಗೆ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಸಿವಿ ರಾಮನ್ ನಗರದ ಗೋಪಾಲನ್ ಗ್ರ್ಯಾಂಡ್ ಮಾಲ್ ಬಳಿ ತೆರಳುತ್ತಿದ್ದರು. ಈ ವೇಳೆ, ಬೈಕ್‌ನಲ್ಲಿ ಬಂದ ಸವಾರ, ನೆರೆ ರಾಜ್ಯದವರು ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದಾನೆ ಎಂದು ಶಿಲಾದಿತ್ಯ ಆರೋಪಿಸಿದ್ದಾರೆ. ಮುಖ, ತಲೆಗೆ ಗಾಯಗಳಾಗಿದ್ದು, ರಕ್ತ ಹರಿದಿದೆ. ಸ್ಥಳೀಯರು ಘಟನೆಯನ್ನು ನೋಡುತ್ತಾ ನಿಂತಿದ್ದರು. ಯಾರೂ ಕೂಡ ನನ್ನ ನೆರವಿಗೆ ಬರಲಿಲ್ಲ ಎಂದು ಬೇಸರ ತೋಡಿಕೊಂಡಿದ್ದ ವೀಡಿಯೋ ಹರಿಬಿಟ್ಟಿದ್ದರು. ಇದನ್ನೂ ಓದಿ: ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭೇಟಿಯಾದ ಪ್ರಧಾನಿ ಮೋದಿ – ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆ

    ಇದು ಭಾಷಾ ಹಲ್ಲೆ ಎಮದು ದೇಶಾದ್ಯಂತ ಚರ್ಚೆಗೀಡಾಗಿತ್ತು. ಇದರ ಬೆನ್ನಲ್ಲೇ ಬೈಯ್ಯಪ್ಪನಹಳ್ಳಿ ಪೊಲೀಸರು ತನಿಖೆಗೆ ಇಳಿದು ಇದು ಭಾಷಾ ವಿಚಾರಕ್ಕೆ ನಡೆದ ಹಲ್ಲೆ ಅಲ್ಲ. ಕಾರಿಗೆ ಬೈಕ್ ಟಚ್ ಆಗಿದ್ದಕ್ಕೆ ನಡೆದ ಹಲ್ಲೆ ಎಂದು ಸ್ಪಷ್ಟನೆ ನೀಡಿದರು. ಎಫ್‌ಐಆರ್ ದಾಖಲಿಸಿಕೊಂಡು, ಬೈಕ್ ಸವಾರ, ಡೆಲಿವರಿಬಾಯ್ ವಿಕಾಸ್ ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ. ಈ ಮಧ್ಯೆ ವಿಂಗ್ ಕಮಾಂಡರೇ ಆ ಯುವಕನ ಮೇಲೆ ಮುಗಿಬಿದ್ದು, ಪದೇ ಪದೇ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ ಯುವಕನ ಮೊಬೈಲ್ ಕೂಡ ಕಿತ್ತು ಬಿಸಾಕಿದ್ದಾರೆ. ಇದನ್ನೂ ಓದಿ: ನಿವೃತ್ತ ಡಿಜಿಪಿ ಕೊಲೆ ಕೇಸ್‌ – ಆರೋಪಿ ಪತ್ನಿಗೆ 14 ದಿನ ನ್ಯಾಯಾಂಗ ಬಂಧನ

  • ಎಂಜಿ ರೋಡ್- ಬೈಯಪ್ಪನಹಳ್ಳಿ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ- ಪ್ರಯಾಣಿಕರ ಪರದಾಟ

    ಎಂಜಿ ರೋಡ್- ಬೈಯಪ್ಪನಹಳ್ಳಿ ಮೆಟ್ರೋ ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ- ಪ್ರಯಾಣಿಕರ ಪರದಾಟ

    ಬೆಂಗಳೂರು: ನೇರಳೆ ಮಾರ್ಗದಲ್ಲಿ ತಾತ್ಕಾಲಿಕವಾಗಿ ಮೆಟ್ರೋ (Namma Metro) ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಟ ಅನುಭವಿಸುತ್ತಿದ್ದಾರೆ.

    ಎಂಜಿ ರೋಡ್ ನಿಂದ (MG Road) ಬೈಯಪ್ಪನಹಳ್ಳಿ (Baiyappanahalli) ಮಾರ್ಗ ಸಂಚಾರ ಬಂದ್ ಆಗಿದ್ದು, ಮೊದಲು ತಾಂತ್ರಿಕ ಸಮಸ್ಯೆ ಹಿನ್ನೆಲೆ ಎಂದು ಬಿಎಂಆರ್ ಸಿಎಲ್ ವಿಷಾದ ವ್ಯಕ್ತಪಡಿಸಿದೆ. ಜೊತೆಗೆ ಶೀಘ್ರವೇ ಬಗೆಹರಿಸುವ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿತ್ತು. ಇದನ್ನೂ ಓದಿ: ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ: ಮೋದಿ ಹೊಗಳಿದ ರೆಡ್ಡಿ

    ಆದರೆ ಇದೀಗ ಮೆಟ್ರೋ ಪವರ್ ಡಿಸ್ಟ್ರಿಬ್ಯೂಷನ್ ನಲ್ಲಿ ಸಮಸ್ಯೆಯಾಗಿದೆ. ಅದನ್ನ ಸರಿಪಡಿಸಲು ಪ್ರಯತ್ನ ಮಾಡಲಾಗುತ್ತಿದೆ. ಕಳೆದ ಒಂದು ಗಂಟೆಯಿಂದ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಲಾಗುತ್ತಿದೆ. ಇನ್ನೂ ಒಂದು ಗಂಟೆ ಹೆಚ್ಚಾಗುವ ಸಾಧ್ಯತೆಯಿದೆ. ಯಾವ ಕಾರಣಕ್ಕೆ ಈ ಸಮಸ್ಯೆ ಆಯ್ತು ಅಂತ ಇನ್ನೂ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಬಿಎಂಆರ್ ಸಿಎಲ್ ಉನ್ನತ ಮೂಲಗಳು ಮಾಹಿತಿ ನೀಡಿವೆ.

    ಹೋಯ್ಸಳ ಪೊಲೀಸರು ಪ್ರಯಾಣಿಕರಿಗೆ ಈ ಕುರಿತು ಅನೌನ್ಸ್ ಮೆಂಟ್ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಆಟೋ, ಕ್ಯಾಬ್ ಗಳ ಮೂಲಕ ಜನ ಹೋಗುತ್ತಿದ್ದಾರೆ.

  • ಇಂದಿನಿಂದ 15 ದಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    ಇಂದಿನಿಂದ 15 ದಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    ಬೆಂಗಳೂರು: ನಗರದ ನೇರಳೆ ಮಾರ್ಗದ (Purple Line) ಮೆಟ್ರೋ (Bengaluru Metro) ಸೇವೆಯಲ್ಲಿ ಇಂದಿನಿಂದ 15 ದಿನಗಳವರೆಗೆ ವ್ಯತ್ಯಯವಾಗಲಿದೆ. ಇಂದು ಕೆಂಗೇರಿ ಹಾಗೂ ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲುಗಳು ಸಂಚರಿಸುತ್ತಿಲ್ಲ.

    ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ, ಬೈಯಪ್ಪನಹಳ್ಳಿ ಹಾಗೂ ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವಿನ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆ ನಡೆಯಲಿರುವ ಕಾರಣ 15 ದಿನಗಳವರೆಗೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆ ಲಭ್ಯವಿರಲಿದೆ.

    ಯಾವ ದಿನ, ಯಾವ ಸಮಯ ವ್ಯತ್ಯಯ?
    ಆಗಸ್ಟ್ 17:
    ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆ ಲಭ್ಯವಿರಲಿದೆ.

    ಆಗಸ್ಟ್ 23 ಮತ್ತು 24:
    ಕೆಂಗೇರಿ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಈ ವೇಳೆ ಮೈಸೂರು ರಸ್ತೆ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ. ಬೆಳಗ್ಗೆ 7 ಗಂಟೆ ನಂತರ ಕೆಂಗೇರಿಯಿಂದ ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ. ಇದನ್ನೂ ಓದಿ: ಬೆಂಗಳೂರಿನಲ್ಲೊಂದು ವಿಚಿತ್ರ ಘಟನೆ- ಬಾಡಿಗೆದಾರನನ್ನ ಗಮನಿಸದೇ ಮನೆ ಸೀಜ್

    ಆಗಸ್ಟ್ 20 ರಿಂದ 29:
    ಬೈಯಪ್ಪನಹಳ್ಳಿ ಟರ್ಮಿನಲ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ (ಕಾಡುಗೋಡಿ) ಮಾರ್ಗಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಮೆಟ್ರೋ ಸೇವೆ ಸ್ಥಗಿತವಿರಲಿದೆ. ಈ ಅವಧಿಯಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ.

    ಆಗಸ್ಟ್ 23 ಮತ್ತು 24:
    ಬೆಳಗ್ಗೆ 5 ರಿಂದ 7 ಗಂಟೆಯವರೆಗೆ ಮೈಸೂರು ರಸ್ತೆ ನಿಲ್ದಾಣದಲ್ಲಿ ರೈಲು ಸೇವೆ ಕೊನೆಗೊಳ್ಳುವುದು. ಇನ್ನುಳಿದ ದಿನಗಳಲ್ಲಿ ರೈಲು ಸೇವೆ ಕೆಂಗೇರಿ ನಿಲ್ದಾಣದವರೆಗೆ ಲಭ್ಯವಿರಲಿದೆ. ಇದನ್ನೂ ಓದಿ: ಕರುನಾಡ ಮಂದಿಗೆ ಮತ್ತೊಂದು ಶಾಕ್- ಬೇಳೆ, ತರಕಾರಿ ಬಳಿಕ ಅಕ್ಕಿ ಬೆಲೆಯೂ ದುಬಾರಿ

    ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಸಿಎಂ ಸೂಚನೆ

    ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಸಿಎಂ ಸೂಚನೆ

    ಬೆಂಗಳೂರು: ಒಡಿಶಾದಲ್ಲಿ ನಡೆದ ರೈಲು ದುರಂತ ಹಿನ್ನೆಲೆಯಲ್ಲಿ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣ (Baiyappanahalli Railway Station) ದಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ ಅವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ (BBMP Commissioner) ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿರುವ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳು, ಕೋಲ್ಕತ್ತಾ ಮುಂತಾದ ಕಡೆಗಳಿಗೆ ತೆರಳಬೇಕಿರುವ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ ಅವರೆಲ್ಲರಿಗೂ ಊಟ, ತಿಂಡಿ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: 200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್- ಗ್ಯಾರಂಟಿ ಬೆನ್ನಲ್ಲೇ ವಿದ್ಯುತ್ ಹೊಂದಾಣಿಕೆ ಶುಲ್ಕ ಹೆಚ್ಚಳ

    ಇದಕ್ಕೆ ಪ್ರತಿಕ್ರಿಯಿಸಿಉರವ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಿಗೆ ತೆರಳಬೇಕಾಗಿದ್ದ ರೈಲುಗಳ ಪ್ರಯಾಣ ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ & ಯಶವಂತಪುರ ಜಂಕ್ಷನ್ ಗಳಲ್ಲಿಯೇ ಪ್ರಯಾಣಿಕರು ಉಳಿದುಕೊಂಡಿದ್ದಾರೆ.

    ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಉಪ ಮುಖ್ಯಮಂತ್ರಿಗಳ ನಿರ್ದೇಶನದಂತೆ ಬಿಬಿಎಂಪಿ ವತಿಯಿಂದ ಈ ಪ್ರಯಾಣಿಕರಿಗೆ ತಿಂಡಿ, ಊಟ, ವಸತಿ ಸೇರಿದಂತೆ ಚಿಕ್ಕ ಮಕ್ಕಳಿಗೆ ಬಿಸಿಹಾಲು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಮತ್ತು ಈ ಪ್ರಯಾಣಿಕರಿಗೆ ಅಗತ್ಯವಾದ ತುರ್ತು ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

  • ಡ್ರಮ್‍ನಲ್ಲಿ ಮಹಿಳಾ ಶವ ಪತ್ತೆ ಪ್ರಕರಣ- ಮೂವರ ಬಂಧನ

    ಡ್ರಮ್‍ನಲ್ಲಿ ಮಹಿಳಾ ಶವ ಪತ್ತೆ ಪ್ರಕರಣ- ಮೂವರ ಬಂಧನ

    ಬೆಂಗಳೂರು: ಬೈಯಪ್ಪನಹಳ್ಳಿ ರೈಲ್ವೇ ನಿಲ್ದಾಣ (Baiyappanahalli Railway Station) ದ ಡ್ರಮ್‍ನಲ್ಲಿ ಮಹಿಳಾ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ಕಮಾಲ್, ತನ್ವೀರ್ ಹಾಗೂ ಶಾಕೀಬ್ ಬಂಧಿತರು. ಬಿಹಾರ ಮೂಲದ ಈ ಮೂವರು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ತಮ್ಮನ್ನಾ 27 ವರ್ಷ ಕೊಲೆಯಾಗಿರೋ ಮಹಿಳೆ. ಇದನ್ನೂ ಓದಿ: ಬೆತ್ತಲೆಯಾಗಿ ಓಡಾಡುತ್ತಿದ್ದ ವಿದೇಶಿ ಪ್ರಜೆ ಪೊಲೀಸರ ವಶಕ್ಕೆ

    ಇಂತಿಕಾಮ್ ಮತ್ತು ತಮ್ಮನ್ನಾ ಮದುವೆ ಆಗಿದ್ರು. ತಮ್ಮನ್ನಾಳಿಗೆ ಇದು ಎರಡನೇ ಮದುವೆ. ಇದೇ ವಿಚಾರಕ್ಕೆ ಇಂತಿಕಾಮ್ ಮತ್ತು ಸಹೋದರರ ನಡುವೆ ವೈಮನಸ್ಸು ಮೂಡಿತ್ತು. ಈ ಹಿನ್ನೆಲೆಯಲ್ಲಿ ಮಾ.12ರಂದು ಆರೋಪಿಗಳು ಕಲಾಸಿಪಾಳ್ಯ (Kalasipalya) ದ ಮನೆಗೆ ಊಟಕ್ಕೆ ಕರೆದಿದ್ದರು. ಊಟವಾದ ನಂತರ ಜಗಳ ಶುರುವಾಗಿತ್ತು.

    ಈ ಜಗಳದಲ್ಲಿ ತಮ್ಮನ್ನಾಳನ್ನು ವೇಲ್‍ನಿಂದ ಬಿಗಿದು ಆರೋಪಿಗಳು ಕೊಲೆ ಮಾಡಿದ್ದರು. ನಂತರ ಮೃತದೇಹವನ್ನು ಡ್ರಮ್ ನಲ್ಲಿಟ್ಟು ಬಿಹಾರಕ್ಕೆ ಸಾಗಿಸಲು ಯತ್ನಿಸಿದ್ದರು. ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಶವ ಬಿಟ್ಟು ಪರಾಗಿಯಾಗಿದ್ದರು. ಘಟನೆಯಲ್ಲಿ ಇನ್ನೂ ಐವರು ನಾಪತ್ತೆಯಾಗಿದ್ದಾರೆ.

  • ಇಂದು ರಾತ್ರಿ ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ರೈಲು ಸೇವೆ ಸ್ಥಗಿತ

    ಇಂದು ರಾತ್ರಿ ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ರೈಲು ಸೇವೆ ಸ್ಥಗಿತ

    ಬೆಂಗಳೂರು: ಇಂದು ರಾತ್ರಿ ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ಸ್ಥಗಿತಗೊಳ್ಳಲಿದೆ. ಇಂದಿರಾನಗರ ನಂತರ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಲ್ಲಿ ಸಿವಿಲ್ ಸರ್ವಿಸ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಎಂಜಿ ರಸ್ತೆ ಮತ್ತು ಬೈಯಪ್ಪನಹಳ್ಳಿವರೆಗೂ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, ಈ ಅವಧಿಯಲ್ಲಿ ಎಂ.ಜಿ ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

    ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಬಿಎಂಆರ್‌ಸಿಎಲ್‌, ಬೆಂಗಳೂರು ಮೆಟ್ರೋ ರೈಲು ನಿಗಮವು 2022ರ ಏಪ್ರಿಲ್ 23ರಂದು ಶನಿವಾರ ರಾತ್ರಿ 9.30 ಗಂಟೆಯಿಂದ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದೆ.

    ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈತಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು 2022ರ ಏಪ್ರಿಲ್ 23ರಂದು ಶನಿವಾರ ರಾತ್ರಿ 9.30 ಗಂಟೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.  ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೆ ಮುಂಬೈ ನಂಟು!

    ಈ ಅವಧಿಯಲ್ಲಿ ವೇಳಾಪಟ್ಟಿಯ ಪ್ರಕಾರ ಪ್ರಯಾಣಿಕರಿಗೆ ಮೆಟ್ರೋ ಸೇವೆಯು ಎಂ.ಜಿ.ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಲಭ್ಯವಿರುತ್ತದೆ. ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 9.30 ಗಂಟೆಗೆ ಹೊರಡುತ್ತದೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಕಡೆಗೆ ರಾತ್ರಿ 9.30 ಗಂಟೆಗೆ ಹೊರಡುತ್ತದೆ.

    ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಹಸಿರು ಮಾರ್ಗದ ರೈಲುಗಳನ್ನು ಸಂಪರ್ಕಿಸಿದ ನಂತರ ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿಗೆ ಕೊನೆಯ ರೈಲು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ರಾತ್ರಿ 9 ಗಂಟೆಗೆ ಹೊರಡಲಿದೆ. ಇದನ್ನೂ ಓದಿ: ಮುಸ್ಲಿಮ್‌ ಬಾಹುಳ್ಯ ಜಾಗದಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ – ದಾರಿ ಬದಲಾವಣೆ ಮಾಡುವಂತೆ ಮನವಿ

    ಭಾನುವಾರದಂದು ಮೆಟ್ರೋ ಸೇವೆಯು ನೇರಳೆ ಮಾರ್ಗದಲ್ಲಿ ಪೂರ್ಣವಾಗಿ ಬೆಳಗ್ಗೆ 7 ಗಂಟೆಯಿಂದ ವೇಳಾಪಟ್ಟಿಯ ಪ್ರಕಾರ ರೈಲು ಸೇವೆಯು ಈ ಮಾರ್ಗದಲ್ಲಿ ಲಭ್ಯವಿರುತ್ತದೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.

  • ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್‍ಗೆ ಕೆಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆ

    ಬೈಯಪ್ಪನಹಳ್ಳಿ ನೂತನ ರೈಲ್ವೆ ಟರ್ಮಿನಲ್‍ಗೆ ಕೆಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ, ಪರಿಶೀಲನೆ

    ಆನೇಕಲ್: ದೇಶದಲ್ಲೆ ಮೊಟ್ಟಮೊದಲ ಹವಾನಿಯಂತ್ರಿತ ರೈಲ್ವೆ ನಿಲ್ದಾಣ ಎಂಬ ಹೆಗ್ಗಳಿಕೆ ಪಡೆದಿರುವ ವಿಮಾನ ನಿಲ್ದಾಣ ಮಾದರಿಯಲ್ಲಿ ನಿರ್ಮಿಸಲಾದ ಮತ್ತು ಉದ್ಘಾಟನೆಗೆ ಸಿದ್ಧವಾಗಿರುವ ಬೈಯಪ್ಪನಹಳ್ಳಿ ನೂತನ ರೈಲ್ವೆ ನಿಲ್ದಾಣದ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಗೆ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ರೈಲ್ವೆ ಯಾರ್ಡ್ ನ ಕಾರ್ಯಕಾರಿ ಅಂಶಗಳು, ಸೌಲಭ್ಯಗಳು ಮತ್ತು ನಿಲ್ದಾಣದಲ್ಲಿ ಒದಗಿಸಲಾದ ನವೀನ ವೈಶಿಷ್ಟ್ಯಗಳನ್ನು ಪರಿಶೀಲಿಸಿದರು. ಪರಿಶೀಲನೆಗೂ ಮುನ್ನ ಸಚಿವರಿಗೆ ರೈಲ್ವೆ ಪೊಲೀಸರಿಂದ ಗೌರವ ಗೌರವ ವಂದನೆ ಅರ್ಪಿಸಲಾಯಿತು.

    ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ನೇತೃತ್ವದ ಎಸ್‍ಡಬ್ಲ್ಯೂಆರ್‍ನ ಹಿರಿಯ ಅಧಿಕಾರಿಗಳೊಂದಿಗೆ ಅವರು ಈ ಟರ್ಮಿನಲ್ ನಿಂದ ಪಾರ್ಸೆಲ್ ಸಾಗಿಸುವ ಸಾಮರ್ಥ್ಯದ ಕುರಿತು ಚರ್ಚಿಸಿದರು. ನಿಲ್ದಾಣ ನಿರ್ಮಾಣವನ್ನು ನೋಡಿ ತುಂಬಾನೆ ಸಂತೋಷ ವ್ಯಕ್ತಪಡಿಸಿದ ಸಚಿವರು ಟರ್ಮಿನಲ್ ನ ಇಂಚಿಂಚೂ ಮಾಹಿತಿಯನ್ನ ಅಧಿಕಾರಿಗಳಿಂದ ಪಡೆದರು. ನಂತರ ಮಾತನಾಡಿದ ಸಚಿವರು, ಈ ಪ್ರದೇಶದಲ್ಲಿ ತಯಾರಿಸಿದ ಬಿಳಿ ಸರಕುಗಳು, ಕೈಗಾರಿಕಾ ಉಪಕರಣಗಳು, ಜವಳಿ ಮತ್ತು ಇತರ ಉತ್ಪನ್ನಗಳನ್ನು ಸಾಗಿಸಲು ಪಾರ್ಸೆಲ್ ವಿಶೇಷ ರೈಲುಗಳ ಓಡಾಟದಿಂದ ಆದಾಯವನ್ನು ಗಳಿಸಲು ಪ್ರಸ್ತಾಪಗಳನ್ನು ರೂಪಿಸಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಟೋಕಿಯೋ ಪ್ಯಾರಾಲಂಪಿಕ್ಸ್ ಭಾರತೀಯ ಕ್ರೀಡಾ ಇತಿಹಾಸದಲ್ಲಿ ವಿಶೇಷ: ಮೋದಿ

    ಈ ವಿಮಾನ ನಿಲ್ದಾಣ ರೀತಿಯಲ್ಲಿ ರೂಪಿಸಿದ ಮತ್ತು ಕಾರ್ಯಗತಗೊಳಿಸಿದ ಎಂಜಿನಿಯರ್‍ಗಳ ತಂಡವನ್ನು ವೈಷ್ಣವ್ ಶ್ಲಾಘಿಸಿದರು. ಸರ್ ಎಂವಿ ಟರ್ಮಿನಲ್‍ನಲ್ಲಿ ಪ್ರಯಾಣಿಕರ ಸೌಕರ್ಯ ಮತ್ತು ಸೌಕರ್ಯವನ್ನು ಹೆಚ್ಚಿಸಲು ಒದಗಿಸಲಾದ ಸೌಲಭ್ಯಗಳು ಮತ್ತು ಸೌಕರ್ಯಗಳು ಭವಿಷ್ಯದಲ್ಲಿ ದೇಶದಾದ್ಯಂತ ನಿರ್ಮಾಣಗೊಳ್ಳುವ ನಿಲ್ದಾಣಗಳಿಗೆ ಮಾನದಂಡವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಅವರು ನಿರ್ಧರಿಸಿದ್ದ ಗುರಿಯನ್ನು ತಲುಪಿದ್ದಾರೆ- ಸುಹಾಸ್ ಸಾಧನೆಗೆ ಪತ್ನಿಯ ಮೆಚ್ಚುಗೆ

    ಇಡೀ ದೇಶಕ್ಕೆ ಮಾದರಿಯಾದ ನಿಲ್ದಾಣ:
    ಈ ನಿಲ್ದಾಣವು 7 ಪ್ಲಾಟ್‍ಫಾರ್ಮ್‍ಗಳನ್ನು ಹೊಂದಿದ್ದು, ದಿನಕ್ಕೆ 1 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುವ ಸಾಮಥ್ರ್ಯವನ್ನು ಹೊಂದುವಂತೆ ವಿನ್ಯಾಸಗೊಳಿಸಲಾಗಿದೆ. ಎಸ್ಕಲೇಟರ್‍ಗಳು ಮತ್ತು ಲಿಫ್ಟ್‍ಗಳನ್ನು ಹೊರತುಪಡಿಸಿ ಸಬ್‍ವೇಗೆ ಪ್ರವೇಶಿಸಲು ಬ್ರೈಲ್ ಚಿಹ್ನೆಗಳು, ಅಂಡರ್ ಪಾಸ್ ಗಳ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ದಿವ್ಯಾಂಗ(ಅಂಗವಿಕಲರ) ಸ್ನೇಹಿ ನಿಲ್ದಾಣವಾಗಿದೆ. ನಿಲ್ದಾಣದಲ್ಲಿ ಪರಿಸರ ಸ್ನೇಹಿ ನೀರಿನ ಮರುಬಳಕೆ ಘಟಕವೂ ಇದೆ. ಬಿಬಿಎಂಪಿಯೊಂದಿಗೆ ಸಮಾಲೋಚಿಸಿ ಟರ್ಮಿನಲ್‍ಗೆ ಪ್ರವೇಶಕ್ಕೆ ಕಿರಿದಾದ ರಸ್ತೆಗಳ ಪ್ರವೇಶದ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಿ ಶೀಘ್ರದಲ್ಲೇ ನಿಲ್ದಾಣ ಉದ್ಘಾಟನೆ ಆಗಲಿದೆ ಎಂದು ಸಚಿವರು ಹೇಳಿದರು.

    ಇದೇ ಸಂದರ್ಭದಲ್ಲಿ ರೈಲ್ವೆ ನಿಲ್ದಾಣ ಪರಿಶೀಲನೆಗೆ ಸಚಿವ ಜೊತೆಗೆ ಸಂಸದ ಪಿ.ಸಿ.ಮೋಹನ್, ಜನರಲ್ ಮ್ಯಾನೇಜರ್ ಎಸ್ ಡಬ್ಲ್ಯುಆರ್ ಸಂಜೀವ್ ಕಿಶೋರ್, ಪ್ರಿನ್ಸಿಪಾಲ್ ಚೀಫ್ ಆಪರೇಷನ್ ಮ್ಯಾನೇಜರ್ ಹರಿ ಶಂಕರ್ ವರ್ಮಾ, ಡಿ ಆರ್ ಎಂ ಬೆಂಗಳೂರು ಶ್ಯಾಮ್ ಸಿಂಗ್, ಮುಖ್ಯ ಆಡಳಿತಾಧಿಕಾರಿ, ನಿರ್ಮಾಣ ದೇಶ್ ರತನ್ ಗುಪ್ತಾ, ಮತ್ತು ರೈಲ್ವೇಸ್ ನ ಹಿರಿಯ ಅಧಿಕಾರಿಗಳು ಭಾಸ್ಕರ್ ರಾವ್, ಮುಖ್ಯ ಆಯುಕ್ತ ಬಿಬಿಎಂಪಿ ಗೌರವ್ ಗುಪ್ತಾ ಭಾಗವಹಿಸಿದ್ದರು.

  • ಮೊಬೈಲ್ ಕಳ್ಳತನ ಪ್ರಕರಣ- 1 ಲಕ್ಷ ಲಂಚ ಕೇಳಿದ್ದ ಲೇಡಿ ಎಸ್‍ಐ ಎಸಿಬಿ ಬಲೆಗೆ

    ಮೊಬೈಲ್ ಕಳ್ಳತನ ಪ್ರಕರಣ- 1 ಲಕ್ಷ ಲಂಚ ಕೇಳಿದ್ದ ಲೇಡಿ ಎಸ್‍ಐ ಎಸಿಬಿ ಬಲೆಗೆ

    ಬೆಂಗಳೂರು: 1 ಲಕ್ಷ ರೂ. ಲಂಚ ಕೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಬ್ ಇನ್‍ಸ್ಪೆಕ್ಟರ್ ಸೌಮ್ಯ ಹಾಗೂ ಹೆಡ್ ಕಾನ್‍ಸ್ಟೇಬಲ್ ಜೆಪಿ ರೆಡ್ಡಿಯವರನ್ನು ಟ್ರ್ಯಾಪ್ ಮಾಡಿದ್ದಾರೆ.

    ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಸಬ್ ಇನ್ಸ್‍ಪೆಕ್ಟರ್ ಸೌಮ್ಯ 1 ಲಕ್ಷ ರೂ. ಲಂಚ ಕೇಳಿದ್ದರು. ಲಂಚ ಪಡೆಯುವ ವೇಳೆ ಪಿಎಸ್‍ಐ ಮತ್ತು ಹೆಡ್ ಕಾನ್‍ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇಬ್ಬರನ್ನೂ ಬಂಧಿಸಿ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

    ಎಸಿಬಿ ಅಧಿಕಾರಿಗಳನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿ ಪೇದೆ ಕುಮಾರ್ ಸ್ಟೇಷನ್ ಮೇಲಿಂದ ಕೆಳಗೆ ಜಿಗಿದಿದ್ದು, ಘಟನೆಯಲ್ಲಿ ಕಾನ್‍ಸ್ಟೆಬಲ್ ಕುಮಾರ್ ಕಾಲು ಮುರಿದಿದೆ. ಒಂದು ಲಕ್ಷ ರೂ. ಲಂಚ ಪಡೆದಿದ್ದ ಹಣವನ್ನು ಪಿಎಸ್‍ಐ ಸೌಮ್ಯ ಕುಮಾರ್ ಕೈಗೆ ಕೊಟ್ಟಿದ್ದರು. ಹೀಗಾಗಿ ಕುಮಾರ್ ಎಸಿಬಿ ಅಧಿಕಾರಿಗಳನ್ನು ಕಂಡು ತಪ್ಪಿಸಿಕೊಳ್ಳುವ ಭರದಲ್ಲಿ ಮೇಲಿಂದ ಜಿಗಿದು ಕಾಲು ಮುರಿದುಕೊಂಡಿದ್ದಾರೆ.