Tag: ಬೊಮ್ಮಾಯಿ ಸಂಪುಟ

  • ಬೊಮ್ಮಾಯಿ ಸಂಪುಟ ಸೇರಲಿರುವ ಶಾಸಕರ ಪಟ್ಟಿ ರಿಲೀಸ್ – ಮಧ್ಯಾಹ್ನ 2.15ಕ್ಕೆ 29 ಮಂದಿ ಪ್ರಮಾಣ ವಚನ

    ಬೊಮ್ಮಾಯಿ ಸಂಪುಟ ಸೇರಲಿರುವ ಶಾಸಕರ ಪಟ್ಟಿ ರಿಲೀಸ್ – ಮಧ್ಯಾಹ್ನ 2.15ಕ್ಕೆ 29 ಮಂದಿ ಪ್ರಮಾಣ ವಚನ

    ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರುವ ನಾಯಕರ ಪಟ್ಟಿ ಕೊನೆಗೂ ಅಂತಿಮಗೊಂಡಿದ್ದು, ಇಂದು 29 ಮಂದಿಯ ಹೆಸರುವುಳ್ಳ ಪಟ್ಟಿ ಅಧಿಕೃತವಾಗಿದೆ. ವಲಸಿಗರ ಕೋಟಾದಲ್ಲಿ ಜನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಮಾಧ್ಯಾಹ್ನ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

    ಮೂರು ದಿನಗಳಿಂದ ದೆಹಲಿಯಲ್ಲಿಯೇ ಉಳಿದುಕೊಂಡಿದ್ದ ಸಿಎಂ ಬೊಮ್ಮಾಯಿ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಎಲ್ಲರಿಗೂ ಶುಭ ಕೋರಿದರು. ಈ ಬಾರಿ ಯಾವುದೇ ಡಿಸಿಎಂ ಹುದ್ದೆ ಸೃಷ್ಟಿಗೆ ಬಿಜೆಪಿ ಹೈಕಮಾಂಡ್ ಮುಂದಾಗಿಲ್ಲ. 8 ಲಿಂಗಾಯತ, 7 ಒಕ್ಕಲಿಗ, 7 ಒಬಿಸಿ, 3 ದಲಿತ, 3 ಎಸ್.ಸಿ., 1 ಎಸ್.ಟಿ ಮತ್ತು ಮಹಿಳೆ ಶಾಸಕಿಗೂ ಸ್ಥಾನ ನೀಡಲಾಗಿದೆ ಎಂದು ಸಿಎಂ ತಿಳಿಸಿದರು. ಇದನ್ನೂ ಓದಿ: ಮೋಸ, ವಂಚನೆ, ವಸೂಲಿಯಿಂದ ಸಚಿವ ಸ್ಥಾನ ತಪ್ಪಿತು: ಸಿಎಂ ವಿರುದ್ಧವೇ ಗುಡುಗಿದ ಶಾಸಕ ಓಲೇಕಾರ್

    ಬೊಮ್ಮಾಯಿ ಸಂಪುಟದ ಫೈನಲ್ ಪಟ್ಟಿ
    ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ, ಆರ್.ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬೀಳಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣಗೌಡ – ಕೆಆರ್ ಪೇಟೆ, ಸುನೀಲ್ ಕುಮಾರ್ – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ, ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂಎಲ್‍ಸಿ, ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂಎಲ್‍ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ.ಸಿ.ಪಾಟೀಲ್ – ನರಗುಂದ, ಬಿ.ಸಿ.ನಾಗೇಶ್ – ತಿಪಟೂರು, ಬಿ.ಶ್ರೀ ರಾಮುಲು- ಮೊಳಕಾಲ್ಮೂರು ಇದನ್ನೂ ಓದಿ: ಇನ್‍ಸೈಡ್ ಸ್ಟೋರಿ – ಕೊನೆಯ ಹಂತದಲ್ಲಿ ವಿಜಯೇಂದ್ರಗೆ ಸಚಿವ ಸ್ಥಾನ ತಪ್ಪಿದ್ದೇಗೆ?

  • ನಾಳೆ ಅಥವಾ ಬುಧವಾರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕೆ.ಎಸ್.ಈಶ್ವರಪ್ಪ

    ನಾಳೆ ಅಥವಾ ಬುಧವಾರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಕೆ.ಎಸ್.ಈಶ್ವರಪ್ಪ

    – ಕೇಂದ್ರದ ನಾಯಕರ ತೀರ್ಮಾನವೇ ಅಂತಿಮ

    ಶಿವಮೊಗ್ಗ : ಸಚಿವ ಸಂಪುಟ ವಿಸ್ತರಣೆಯನ್ನು ಆದಷ್ಟು ಶೀಘ್ರವಾಗಿ ಮುಗಿಸಬೇಕು ಎಂಬುದು ಕೇಂದ್ರದ ನಾಯಕರಿಗೂ ಇದೆ. ಹೀಗಾಗಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದೆ. ಮಂಗಳವಾರ ಅಥವಾ ಬುಧವಾರ ಸಂಪುಟ ವಿಸ್ತರಣೆ ಆಗಲಿದೆ ಎಂಬ ಮಾಹಿತಿ ಇದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

    ಶಿವಮೊಗ್ಗದಲ್ಲಿ ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬೊಮ್ಮಾಯಿ ಅವರ ಜೊತೆ ಹೈ ಕಮಾಂಡ್ ಚರ್ಚೆ ನಡೆಸಿದೆ. ಸಚಿವ ಸಂಪುಟ ವಿಸ್ತರಣೆ ವೇಳೆ ಪ್ರಾದೇಶಿಕವಾರು ಸಚಿವ ಸ್ಥಾನ ನೀಡಬೇಕು. ಹಿರಿಯರು ಹಾಗೂ ಕಿರಿಯರಿಗೂ ಸ್ಥಾನ ಕಲ್ಪಿಸಿ ಕೊಡಬೇಕು ಎಂಬ ಚರ್ಚೆ ನಡೆಯುತ್ತಿದೆ. ಅಲ್ಲದೇ ಕೇಂದ್ರದ ನಾಯಕರು ಯಾವುದೇ ಒತ್ತಡಕ್ಕೆ ಮಣಿಯದೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಈಶ್ವರಪ್ಪ ತಿಳಿಸಿದರು.

    ಜಾತಿ ರಾಜಕಾರಣ ಬಿಟ್ಟು ಬಿಜೆಪಿ ಸೈದ್ದಾಂತಿಕವಾಗಿ, ಸಚಿವ ಸಂಪುಟ ವಿಸ್ತರಣೆ ಮಾಡಲಿದೆ ಎಂಬ ನಂಬಿಕೆ ಇದೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಸ್ವಂತ ಬಹುಮತದೊಂದಿಗೆ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬ ಆಸಕ್ತಿ ಸಹ ಹೈಕಮಾಂಡ್ ಗೆ ಇದೆ ಎಂದರು. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್ ಮುಂದೆ ‘ವಿಜಯ’ ಪ್ರಸ್ತಾಪದ ಇನ್‍ಸೈಡ್ ಸ್ಟೋರಿ

    ಇನ್ನು ಸಚಿವ ಸಂಪುಟ ವಿಸ್ತರಣೆ ವೇಳೆ ನನ್ನ ಅನುಭವ ಬಳಕೆ ಮಾಡಿಕೊಳ್ಳಬೇಕೋ ಅಥವಾ ಬೇಡವಾ ಎಂಬುದು ಕೇಂದ್ರದ ನಾಯಕರಿಗೆ ಬಿಟ್ಟಿದ್ದು. ಹಿರಿತನವನ್ನು ಸಚಿವ ಸಂಪುಟದಲ್ಲಿ ಇದ್ದುಕೊಂಡೇ ಬಳಕೆ ಮಾಡಿಕೊಳ್ಳಬೇಕು ಎಂಬುದು ಇಲ್ಲ. ಮುಖ್ಯಮಂತ್ರಿ ಆಯ್ಕೆಯಿಂದ ಹಿಡಿದು ಸಚಿವ ಸಂಪುಟವನ್ನು ಕೃಷ್ಣನ ತಂತ್ರಗಾರಿಕೆಯಿಂದ ಬಹಳ ಬುದ್ದಿವಂತಿಕೆಯಿಂದ ಮಾಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಯಾವ ರೂಪದಲ್ಲಿ ಸಚಿವ ಸಂಪುಟ ಹಾಗೂ ಸರ್ಕಾರ ಇರಬೇಕು ಎಂಬುದನ್ನು ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಇದನ್ನೂ ಓದಿ: ಕ್ಲೈಮ್ಯಾಕ್ಸ್ ಹಂತದಲ್ಲಿ ಸಂಪುಟ ಸರ್ಕಸ್ – ಕ್ಯಾಬಿನೆಟ್ ಪಟ್ಟಿ ಫೈನಲ್‍ಗೆ ಕೌಂಟ್‍ಡೌನ್

  • ಕ್ಲೈಮ್ಯಾಕ್ಸ್ ಹಂತದಲ್ಲಿ ಸಂಪುಟ ಸರ್ಕಸ್ – ಕ್ಯಾಬಿನೆಟ್ ಪಟ್ಟಿ ಫೈನಲ್‍ಗೆ ಕೌಂಟ್‍ಡೌನ್

    ಕ್ಲೈಮ್ಯಾಕ್ಸ್ ಹಂತದಲ್ಲಿ ಸಂಪುಟ ಸರ್ಕಸ್ – ಕ್ಯಾಬಿನೆಟ್ ಪಟ್ಟಿ ಫೈನಲ್‍ಗೆ ಕೌಂಟ್‍ಡೌನ್

    – ಬೊಮ್ಮಾಯಿ ಸಂಪುಟಕ್ಕೆ ಯಾರು ಇನ್, ಯಾರು ಔಟ್?

    ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ದಿನಗಳಿಂದ ನಡೆಯುತ್ತಿರುವ ಸಂಪುಟ ಸರ್ಕಸ್ ಇಂದು ಮುಗಿಯುವ ಸಾಧ್ಯತೆ ಇದೆ. ಸಂಪುಟ ಪಟ್ಟಿ ಭಾನುವಾರ ರಾತ್ರಿಯೇ ಫೈನಲ್ ಆಗೋದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ.

    ಹೈಕಮಾಂಡ್ ಸೂಚನೆ ಮೇರೆಗೆ ಸಂಭಾವ್ಯರ ಪಟ್ಟಿಯೊಂದಿಗೆ ಭಾನುವಾರ ಸಂಜೆ ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಂಪುಟ ಪಟ್ಟಿಯನ್ನು ಬಸವರಾಜ ಬೊಮ್ಮಾಯಿ ಫೈನಲ್ ಮಾಡಿಕೊಂಡು ಇಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಒಂದೊಮ್ಮೆ ಎಲ್ಲಾ ಸರಿ ಹೋದಲ್ಲಿ ಇಂದು ಅಥವಾ ನಾಳೆ ಸಂಜೆಯೇ ನೂತನ ಸಂಪುಟ ಅಸ್ತಿತ್ವಕ್ಕೆ ಬರಲಿದೆ. ಈ ಬೆಳವಣಿಗೆ ಸಚಿವ ಸ್ಥಾನದ ಆಕಾಂಕ್ಷಿಗಳ ಎದೆ ಬಡಿತ ಹೆಚ್ಚಿಸಿದೆ.

    ಕಳೆದ ಬಾರಿ ಸಿಕ್ಕಂತೆ ಈ ಬಾರಿ ಬೆಂಗಳೂರಿನ ಶಾಸಕರಿಗೆ ಹೆಚ್ಚು ಪ್ರಾತಿನಿಧ್ಯ ಸಿಗೋದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ. ಬಿಎಸ್‍ವೈ ಸಂಪುಟದಲ್ಲಿ ಬೆಂಗಳೂರಿನ 8 ಸಚಿವರಿದ್ದರು. ಬೊಮ್ಮಾಯಿ ಸಂಪುಟದಲ್ಲಿ ಅಷ್ಟು ಮಂದಿಗೆ ಚಾನ್ಸ್ ಸಿಗೋದು ಕಡಿಮೆ ಎನ್ನಲಾಗ್ತಿದೆ. ಇನ್ನು ಭಾನುವಾರ ಬೊಮ್ಮಾಯಿ ನಿವಾಸಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ ನೀಡಿ ಲಾಬಿ ಮಾಡಿದ್ರು. ಇದನ್ನೂ ಓದಿ: ಸ್ವಾಮೀಜಿಗಳು ಬಿಜೆಪಿಗೆ ಬೆದರಿಕೆ ಹಾಕುವುದು ತಪ್ಪು: ಈಶ್ವರಪ್ಪ

    ಬೊಮ್ಮಾಯಿ ಸಂಪುಟ ಸೇರಬಹುದು ಎನ್ನಲಾಗಿರುವ ಸಂಭಾವ್ಯರ ಪಟ್ಟಿ:
    ಬಸವ’ರಾಜ’ ‘ಮಂತ್ರಿ’ ಮಂಡಲ!
    ಅಶ್ವತ್ಥ ನಾರಾಯಣ್- ಮಲ್ಲೇಶ್ವರಂ ಶಾಸಕ, ಶ್ರೀರಾಮುಲು-ಮೊಳಕಾಲ್ಮೂರು ಶಾಸಕ, ಅರವಿಂದ್ ಲಿಂಬಾವಳಿ-ಮಹದೇವಪುರ ಶಾಸಕ, ಮಾಧುಸ್ವಾಮಿ-ಚಿಕ್ಕನಾಯಕನಹಳ್ಳಿ ಶಾಸಕ, ಮುರುಗೇಶ್ ನಿರಾಣಿ-ಬೀಳಗಿ ಶಾಸಕ, ಮುನಿರತ್ನ-ಆರ್.ಆರ್.ನಗರ ಶಾಸಕ, ಬಿ.ಸಿ.ಪಾಟೀಲ್-ಹಿರೇಕೆರೂರು ಶಾಸಕ, ಬೈರತಿ ಬಸವರಾಜು-ಕೆಆರ್ ಪುರಂ ಶಾಸಕ, ಡಾ.ಕೆ.ಸುಧಾಕರ್-ಚಿಕ್ಕಬಳ್ಳಾಪುರ ಶಾಸಕ, ಎಸ್.ಟಿ.ಸೋಮಶೇಖರ್-ಯಶವಂತಪುರ ಶಾಸಕ, ಅರವಿಂದ ಬೆಲ್ಲದ್-ಧಾರವಾಡ ಪಶ್ಚಿಮ, ಉಮೇಶ್ ಕತ್ತಿ-ಹುಕ್ಕೇರಿ ಶಾಸಕ, ವಿ.ಸೋಮಣ್ಣ-ಗೋವಿಂದರಾಜನಗರ ಶಾಸಕ, ಸುನಿಲ್ ಕುಮಾರ್-ಕಾರ್ಕಳ ಶಾಸಕ, ಎಸ್.ಅಂಗಾರ-ಸುಳ್ಯ ಶಾಸಕ ಇದನ್ನೂ ಓದಿ: ಇಂದು ಅಥವಾ ನಾಳೆ ಸಂಪುಟ ರಚನೆ: ಸಿಎಂ ಬೊಮ್ಮಾಯಿ