Tag: ಬೊಮ್ಮಾಯಿ

  • ಭಾರತೀಯ ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿ: ಬೊಮ್ಮಾಯಿ

    ಭಾರತೀಯ ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿ: ಬೊಮ್ಮಾಯಿ

    ಹುಬ್ಬಳ್ಳಿ: ಭಾರತೀಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ಜಿಲ್ಲೆಯ ಪ್ರವಾಸ ಕೈಗೊಂಡಿರುವ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೂತನ ಶಿಕ್ಷಣ ನೀತಿ ಕುರಿತು ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಲಯದ ಮೂರು ವರ್ಷಗಳ ಕಾಲ ಚರ್ಚಿಸಿ ಸಮಗ್ರವಾಗಿ ರೂಪಿಸಲಾಗಿದೆ. 21 ಶತಮಾನಕ್ಕೆ ತಕ್ಕಂತೆ, ದೇಶದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಅಂತರಾಷ್ಟ್ರೀಯ ಮಟ್ಟದ ಪೈಪೋಟಿಗೆ ಸಿದ್ದಪಡಿಸುವುದು, ಕೌಶಲ್ಯವನ್ನು ಹೆಚ್ಚಿಸವುದು ಶಿಕ್ಷಣ ನೀತಿಯ ಉದ್ದೇಶವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗದಗಿಗೆ ಸಿಎಂ ಬಾರ್ತಾರೆಂದು ತರಾತುರಿಯಲ್ಲಿ ರಸ್ತೆ ದುರಸ್ತಿ

    ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ಪ್ರಯತ್ನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೈಗೊಂಡಿದ್ದಾರೆ. ಭಾರತೀಯರಿಂದ ಭಾರತೀಯ ಮಕ್ಕಳಿಗಾಗಿ ರೂಪಿಸಿರುವ ಶಿಕ್ಷಣ ವ್ಯವಸ್ಥೆ ಇದಾಗಿದೆ ಎಂದರು.

    ಕೋವಿಡ್ ಲಾಕ್‍ಡೌನ್ ತೆರವಿನ ನಂತರ, ಜನರು ಸಾಮಾನ್ಯ ಜೀವನಕ್ಕೆ ಮರಳುತ್ತಿದ್ದಾರೆ. ವ್ಯಾಪಾರ ವಹಿವಾಟುಗಳು ಸಹಜವಾಗಿ ನಡೆಯುತ್ತಿವೆ ಈ ಸಂದರ್ಭದಲ್ಲಿ ಬಂದ್ ಕರೆ ನೀಡುವುದು ಸರಿಯಲ್ಲ. ಪಂಚಮಸಾಲಿ ಮೀಸಲಾತಿಗೆ ಕುರಿತು ಸದನದಲ್ಲಿ ಉತ್ತರಿಸಿದ್ದೇನೆ ಎಂದರು.

    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಬೃಹತ್ ಮಧ್ಯಮ ಕೈಗಾರಿಕೆ ಸಚಿವ ಮುರಗೇಶ್ ನಿರಾಣಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಲಾಭುರಾಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

  • ಚಿತ್ರರಂಗವಷ್ಟೇ ಅಲ್ಲ ಕನ್ನಡ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿರುವುದಕ್ಕೆ ಹೆಮ್ಮೆಯಾಗ್ತಿದೆ: ಬೊಮ್ಮಾಯಿ

    ಚಿತ್ರರಂಗವಷ್ಟೇ ಅಲ್ಲ ಕನ್ನಡ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿರುವುದಕ್ಕೆ ಹೆಮ್ಮೆಯಾಗ್ತಿದೆ: ಬೊಮ್ಮಾಯಿ

    – ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಷ್ಠಾನವನ್ನು ಮುಂದುವರಿಸುತ್ತೇನೆ
    – ನಿಮ್ಮ ಫೇವರೆಟ್ ನಟಿಯಾಗಿರುವುದು ನಮ್ಮ ಭಾಗ್ಯ ಅಂದ್ರು ಭಾರತಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಪ್ರತಿಷ್ಠಾನದ ಕೆಲಸವನ್ನು ನಾನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ನಟಿ ಭಾರತಿ ವಿಷ್ಣುವರ್ಧನ್‍ರವರಿಗೆ ತಿಳಿಸಿದ್ದಾರೆ.

    ಖಾಸಗಿ ಕಾರ್ಯಕ್ರಮವೊಂದರಲ್ಲಿ ಬಸವರಾಜ ಬೊಮ್ಮಾಯಿಯವರು ನನಗೆ ಕನ್ನಡದಲ್ಲಿ ಆಲ್ ಫೇವರೆಂಟ್ ನಟ ಎಂದರೆ ಡಾ. ರಾಜ್ ಕುಮಾರ್ ಮತ್ತು ಮೂವರು ನಟಿಯರೆಂದರೆ ಬಹಳ ಇಷ್ಟ. ಅದರಲ್ಲಿ ಭಾರತಿಯವರು ಕೂಡ ಒಬ್ಬರು ಎಂಬ ವಿಚಾರ ಬಹಿರಂಗಪಡಿಸಿದ್ದರು. ಅಲ್ಲದೇ ಡಾ. ರಾಜ್ ಕುಮಾರ್ ಹಾಗೂ ಭಾರತಿಯವರ ಕಾಂಬಿನೇಷನ್‍ನಲ್ಲಿ ಬಂದ ಬಂಗಾರದ ಮನುಷ್ಯ ಸಿನಿಮಾವನ್ನು ಹಲವಾರು ಬಾರಿ ವೀಕ್ಷಿಸಿರುವುದಾಗಿ ಹೇಳಿಕೊಂಡಿದ್ದರು. ಇದನ್ನೂ ಓದಿ: ಮಂತ್ರಾಲಯದಿಂದ ವಾಪಸ್ಸಾಗ್ತಿದ್ದಾಗ ಕಾರು ಅಪಘಾತ- ಮದ್ವೆಯಾಗ್ಬೇಕಿದ್ದ ಜೋಡಿ ಸಾವು

    ಹೀಗಾಗಿ ಪಬ್ಲಿಕ್ ಟಿವಿ ನಡೆಸಿದ ವಿಶೇಷ ಸಂದರ್ಶನದಲ್ಲಿ ಬೊಮ್ಮಾಯಿಯವರಿಗೆ ಸಪ್ರ್ರೈಸ್ ಆಗಿ ಹಿರಿಯ ನಟಿ ಭಾರತೀಯವರು ಕರೆ ಮಾಡಿ ಮಾತನಾಡಿದರು. ನೀವು ಮುಖ್ಯಮಂತ್ರಿಯಾಗಿರುವ ಬಗ್ಗೆ ನಮಗೆ ಬಹಳ ಸಂತೋಷವಿದೆ. ನಿಮ್ಮನ್ನು ಭೇಟಿಯಾಗಬೇಕೆಂದು ಬಹಳಷ್ಟು ಬಾರಿ ಪ್ರಯತ್ನಿಸಿದೆ. ಆದರೆ ಈವರೆಗೂ ಭೇಟಿಯಾಗಲು ಅವಕಾಶ ಸಿಗಲಿಲ್ಲ. ನೀವು ನಿಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿರುತ್ತೀರಾ ಎಂದು ನಾನು ಕೂಡ ತೊಂದರೆ ನೀಡಲಿಲ್ಲ ಎಂದಿದ್ದಾರೆ. ಆಗ ಬೊಮ್ಮಾಯಿಯವರು ನಾನು ಕೂಡ ನಿಮ್ಮನ್ನು ಭೇಟಿಯಾಗಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಶಿಷ್ಯ ಸಂತೋಷ್ ಲಾಡ್ ಅಸಮಾಧಾನ

    ಇದೇ ಸಂದರ್ಭದಲ್ಲಿ ಸಾಹಸ ಸಿಂಹ ಡಾ. ವಿಷ್ಟುವರ್ಧನ್ ಪ್ರತಿಷ್ಠಾನಕ್ಕೆ ನೀವು ಅಧ್ಯಕ್ಷರಾಗಿದ್ದೀರಾ, ಇದರಿಂದ ನಿಮ್ಮ ಜೊತೆ ಕೆಲಸ ಮಾಡುವಂತಹ ಸೌಭಾಗ್ಯ ನಮಗೆ ಸಿಕ್ಕಿದೆ. ಇದೇ ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್‍ರವರ ಹುಟ್ಟುಹಬ್ಬವಿರುವುದಾಗಿ ತಿಳಿಸಿದ ಅವರು, ವಿಷ್ಣುವರ್ಧನ್ ಅವರ ಪ್ರತಿಷ್ಠಾನದ ಬಗ್ಗೆ ಗಮನ ಹರಿಸುವಂತೆ ಮನವಿ ಮಾಡಿದ್ದಾರೆ. ಆಗ ನಾನು ಪ್ರತಿಷ್ಠಾನದ ಕೆಲಸವನ್ನು ನಾನು ಮುಂದುವರಿಸಿ ಮಾಡಿಕೊಡುತ್ತೇನೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸುದೀಪ್ ಒಬ್ಬ ನಟರಾಗುತ್ತಾರೆ ಅಂತ ಅಂದುಕೊಂಡಿರಲಿಲ್ಲ: ಬೊಮ್ಮಾಯಿ

    ನಿಮ್ಮ ಅಂದಿನ ಹಳೆಯ ಸಿನಿಮಾಗಳು ಇಂದಿಗೂ ಸಹ ಹಿಟ್ ಸಿನಿಮಾವಾಗಿದೆ. ನೀವೆಲ್ಲರೂ ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಕನ್ನಡವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೀರಾ. ಹೀಗಾಗಿ ನಿಮ್ಮೆಲ್ಲರ ಬಗ್ಗೆ ನನಗೆ ಬಹಳ ಹೆಮ್ಮೆ ಇದೆ ಬೊಮ್ಮಾಯಿಯವರು ನುಡಿದಿದ್ದಾರೆ. ಕೊನೆಗೆ ನಿಮ್ಮ ಫೇವರೆಟ್ ನಟಿಯಾಗಿರುವುದು ನಮ್ಮ ಭಾಗ್ಯ. ಭಗವಂತ ನಿಮಗೆ ಉತ್ತಮ ಕೆಲಸಗಳನ್ನು ಮಾಡುವಂತ ಶಕ್ತಿ ಕೊಡಲಿ ಎಂದು ಭಾರತಿಯವರು ಶುಭ ಹಾರೈಸಿದ್ದಾರೆ.

  • ಸುದೀಪ್ ಒಬ್ಬ ನಟರಾಗುತ್ತಾರೆ ಅಂತ ಅಂದುಕೊಂಡಿರಲಿಲ್ಲ: ಬೊಮ್ಮಾಯಿ

    ಸುದೀಪ್ ಒಬ್ಬ ನಟರಾಗುತ್ತಾರೆ ಅಂತ ಅಂದುಕೊಂಡಿರಲಿಲ್ಲ: ಬೊಮ್ಮಾಯಿ

    – ಬೊಮ್ಮಾಯಿ ಸರಳ ಜೀವಿ ಅಂದ್ರು ಕಿಚ್ಚ

    ಬೆಂಗಳೂರು: ಸುದೀಪ್ ಒಬ್ಬ ನಟರಾಗುತ್ತಾರೆ ಎಂದು ಅಂದುಕೊಂಡಿರಲಿಲ್ಲ. ಆದರೆ ಇಂದು ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಅವರೊಬ್ಬ ಕ್ಲಾಸ್ ಮತ್ತು ಪ್ರತಿಭಾವಂತ ನಟ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

    BASAVARAJ BOMMAI

    ಗಣೇಶ ಹಬ್ಬದ ವಿಶೇಷ ದಿನದಂದು ಪಬ್ಲಿಕ್ ಟಿವಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿಶೇಷ ಸಂದರ್ಶನ ನಡೆಸಿತ್ತು. ಈ ವೇಳೆ ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಸುದೀಪ್ ಕೂಡ ಕರೆ ಮಾಡಿ ತಮ್ಮ ಹಳೆಯ ದಿನಗಳನ್ನು ಮೆಲುಕು ಹಾಕಿಕೊಂಡರು. ಇದನ್ನೂ ಓದಿ: ನಿನ್ನ ವಾಹನದಿಂದ ಬೆಳೆ ಉಳಿಸು- ಗಣಪತಿಗೆ ಜೀವಂತ ಇಲಿ ನೀಡಿ ಬೇಡಿಕೊಂಡ ರೈತ

    ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿರನ್ನು ಭೇಟಿ ಮಾಡಲು ಕಚೇರಿಗೆ ಹೋದ ವೇಳೆ ನಾನು ಮುಖ್ಯಮಂತ್ರಿಯನ್ನು ಭೇಟಿ ಮಾಡುತ್ತಿದ್ದೇನೆ ಅಂತ ಮತ್ತು ಈಗಲೂ ನಾನು ಮುಖ್ಯಮಂತ್ರಿಯವರೊಟ್ಟಿಗೆ ಮಾತನಾಡುತ್ತೇನೆ ಎಂದು ಅನಿಸುತ್ತಿಲ್ಲ. ನಾನು ನನ್ನ ಬಾಲ್ಯದಿಂದಲೂ ಅವರನ್ನು ನೋಡುತ್ತಿದ್ದೇನೆ. ಅಂದಿನಿಂದ ಇಂದಿನವರೆಗೂ ಅವರು ನನ್ನ ವೃತ್ತಿ ಜೀವನಕ್ಕೆ ಹೆಚ್ಚು ಬೆಂಬಲ ನೀಡುತ್ತಾ ಬಂದಿದ್ದಾರೆ. ಬಸವರಾಜ ಬೊಮ್ಮಾಯಿ ಒಬ್ಬರು ಸರಳಜೀವಿ ಎಂದು ಸುದೀಪ್ ಹೇಳಿದ್ದಾರೆ.

    Basavaraj bommai

    ಇದೇ ವೇಳೆ ಬೊಮ್ಮಾಯಿ ಅವರು, ಸುದೀಪ್ ಒಬ್ಬರು ಆ್ಯಕ್ಟರ್ ಆಗುತ್ತಾರೆ ಎಂದು ಅಂದುಕೊಂಡಿರಲಿಲ್ಲ. ಸುದೀಪ್ ಶಾಲೆಯಲ್ಲಿದ್ದಾಗ ಕ್ರಿಕೆಟ್ ಮೇಲೆ ಬಹಳ ಆಸಕ್ತಿ ಹೊಂದಿದ್ದರು. ಹಾಗಾಗಿ ನಾನು ಕ್ರಿಕೆಟರ್ ಆಗುತ್ತಾರೆ ಎಂದು ಭಾವಿಸಿದ್ದೆ. ಆದರೆ ವಿದ್ಯಾಭ್ಯಾಸ ಮುಗಿದ ಬಳಿಕ ಸುದೀಪ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಸುದೀಪ್ ತಂದೆಗೆ ಚಿತ್ರರಂಗಕ್ಕೆ ಬರಬೇಕು ಎಂಬ ಆಸೆ ಇತ್ತು. ಅವರ ಆಸೆಯನ್ನು ಸುದೀಪ್ ಈಡೇರಿಸಿದ್ದಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಕಲಬುರಗಿ ಮೇಯರ್ ಚುನಾವಣೆ- ಮುಂದಿನ ವಾರ ಅಧಿಸೂಚನೆ

    sudeep

    ಸದ್ಯ ಎಲ್ಲಾ ಭಾಷೆಗಳಲ್ಲಿ ಅಭಿನಯಿಸಿ ಸುದೀಪ್ ಸೂಪರ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಸುದೀಪ್ ದೊಡ್ಡ ಸ್ಟಾರ್ ಆದ ನಂತರ ನನ್ನಿಂದ ಕೊಂಚ ದೂರ ಆದರು. ದೂರ ಎಂದರೆ ಸುದೀಪ್ ಸ್ಟಾರ್ ಆದಾಗ ಆಕಾಶದಲ್ಲಿದ್ದರು. ನಾವು ಭೂಮಿ ಮೇಲೆ ಇದ್ದೆವು ಎಂದು ಹಾಸ್ಯ ಮಾಡಿದ್ದಾರೆ. ಸುದೀಪ್ ಬಗ್ಗೆ ನನಗೆ ಬಹಳ ಹೆಮ್ಮೆ ಇದೆ. ಅವರೊಬ್ಬರು ಕ್ಲಾಸ್ ಹಾಗೂ ಪ್ರತಿಭಾವಂತ ನಟ. ಪ್ರತಿಯೊಂದು ಸಿನಿಮಾದಲ್ಲಿ ಬೆಳೆಯುತ್ತಲೇ ಬಂದಿದ್ದಾರೆ ಎಂದು ಹೊಗಳಿದ್ದಾರೆ.

    ಈ ವೇಳೆ ಸುದೀಪ್, ದೂರ ಆಗುವ ಪ್ರಶ್ನೆಯೇ ನಮ್ಮಲ್ಲಿ ಇಲ್ಲ. ಅವರೊಬ್ಬರು ಸಿಹಿಯಾದ ವ್ಯಕ್ತಿ. ಇತ್ತೀಚೆಗೆ ಅವರ ಮನೆಗೆ ಭೇಟಿ ನೀಡಿದಾಗ ಬ್ಯುಸಿಯಾಗಿದ್ದರೂ, ಎಲ್ಲರನ್ನೂ ಹೊರಗೆ ಕಳುಹಿಸಿ ನನ್ನೊಂದಿಗೆ 20 ನಿಮಿಷ ಸಮಯ ಕಳೆದಿದ್ದಾರೆ. ಅಂದು ನಾನು ಆಫೀಸ್‍ನಲ್ಲಿ ನನ್ನ ಹಳೆಯ ಬೊಮ್ಮಾಯಿ ಮಾಮನನ್ನು ನೋಡಿದೆ. ನೀವು ಬ್ಯುಸಿಯಾಗಿರುತ್ತೀರಾ ನಾನು ಬರುತ್ತೇನೆ ಎಂದು ಹೊರಡಲು ಮುಂದಾದಾಗ ಕೂಡ ನಾನು ಇಂದು ಮುಖ್ಯಮಂತ್ರಿಯಾಗುತ್ತೇನೆ, ನೀನು ದೊಡ್ಡ ಸ್ಟಾರ್ ಆಗುತ್ತಿಯಾ ಎಂದು ಯಾವತ್ತೂ ಭಾವಿಸಿರಲಿಲ್ಲ. ಇದೆಲ್ಲಾ ಜೀವನದಲ್ಲಿ ಬರುತ್ತಿರುತ್ತದೆ ಮತ್ತು ಹೋಗುತ್ತಿರುತ್ತದೆ ಎಂದಿದ್ದರು. ಈ ಮಾತನ್ನು ನಾನು ಯಾವತ್ತಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನದಲ್ಲಿ ಸಂಭ್ರಮದ ಗಣೇಶೋತ್ಸವ

  • ಡಿಸ್ಚಾರ್ಜ್ ಬಳಿಕವೂ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಉಚಿತ ಚಿಕಿತ್ಸೆ: ಬಸವರಾಜ್ ಬೊಮ್ಮಾಯಿ

    ಡಿಸ್ಚಾರ್ಜ್ ಬಳಿಕವೂ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಉಚಿತ ಚಿಕಿತ್ಸೆ: ಬಸವರಾಜ್ ಬೊಮ್ಮಾಯಿ

    ಬೆಂಗಳೂರು: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕವು ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿರುವವರಿಗೆ ರಾಜ್ಯ ಸರ್ಕಾರದ ವತಿಯಿಂದ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

    ಬ್ಲ್ಯಾಕ್ ಫಂಗಸ್ ಚಿಕಿತ್ಸೆಯು ದುಬಾರಿಯಾಗಿದ್ದು, ಪ್ರತಿ ಇಂಜೆಕ್ಷನ್‍ಗೆ 10,000 ದಿಂದ 12,000 ರೂ. ಆಗುತ್ತದೆ. ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕವೂ ನಾಲ್ಕು ವಾರಗಳ ಕಾಲ ಇಂಜೆಕ್ಷನ್ ತೆಗೆದುಕೊಳ್ಳಬೇಕಾಗುತ್ತದೆ. ಆದರೆ ರೋಗಿಗಳ ಕುಟುಂಬದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬ್ಲ್ಯಾಕ್ ಫಂಗಸ್ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಅವರ ಎಲ್ಲಾ ಖರ್ಚನ್ನು ಸರ್ಕಾರವೇ ವಹಿಸಿಕೊಳ್ಳಲು ನಿರ್ಧರಿಸಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಇದೇ ವೇಳೆ ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಮಾತನಾಡಿದ ಅವರು, ಕೊರೊನಾ ಮೂರನೇ ಅಲೆ ಕುರಿತಂತೆ ತಜ್ಞರ ಸಲಹೆ ಪಡೆದಿದ್ದು, ಮಕ್ಕಳ ಆರೋಗ್ಯಕ್ಕಾಗಿಯೇ ಶಿಬಿರಗಳನ್ನು ಸ್ಥಾಪಿಸಲಾಗುವುದು ಹಾಗೂ ಅಪೌಷ್ಟಿಕ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಆಹಾರ ಕಿಟ್‍ಗಳನ್ನು ಒದಗಿಸುತ್ತದೆ. ಅಲ್ಲದೇ ಅನಾರೋಗ್ಯದಿಂದ ಬಳಲುತ್ತಿರುವ ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ:ಕೋವಿಡ್ ಕಾಲಘಟ್ಟದಲ್ಲಿ ಹೊಸ ಮನ್ವಂತರ – ಇಂದಿನಿಂದ ರಾಜ್ಯದಲ್ಲಿ ಶಾಲೆ-ಕಾಲೇಜು ಓಪನ್

    ಈಗಾಗಲೇ ಕರ್ನಾಟಕ ಸರ್ಕಾರ ಜಿಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಐಸಿಯು ಬೆಡ್‍ಗಳನ್ನು ಸಿದ್ಧಪಡಿಸಲು ನಿರ್ದೇಶಿಸಿದೆ. ಅಲ್ಲದೇ ವಿಜಯಪುರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 40 ವೆಂಟಿಲೇಟರ್‌ಗಳೊಂದಿಗೆ 120 ಬೆಡ್‍ಗಳ ನಿರ್ಮಿಸಿಲು ಸರ್ಕಾರ 22 ಕೋಟಿ ಹಣವನ್ನು ಬಿಡುಗಡೆಗೊಳಿಸಿದೆ.  ಇದನ್ನೂ ಓದಿ:ಕೋವಿಡ್ ಕಾಲಘಟ್ಟದಲ್ಲಿ ಹೊಸ ಮನ್ವಂತರ – ಇಂದಿನಿಂದ ರಾಜ್ಯದಲ್ಲಿ ಶಾಲೆ-ಕಾಲೇಜು ಓಪನ್

  • ಬಿಜೆಪಿಯಲ್ಲಿ ಇಬ್ಬರು ವಲಸಿಗ ಸಚಿವರ ಖಾತೆ ಕ್ಯಾತೆ – ಸಿಎಂ ಬೊಮ್ಮಾಯಿಗೆ ಇಕ್ಕಟ್ಟು

    ಬಿಜೆಪಿಯಲ್ಲಿ ಇಬ್ಬರು ವಲಸಿಗ ಸಚಿವರ ಖಾತೆ ಕ್ಯಾತೆ – ಸಿಎಂ ಬೊಮ್ಮಾಯಿಗೆ ಇಕ್ಕಟ್ಟು

    ಬೆಂಗಳೂರು: ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಖಾತೆ ಕ್ಯಾತೆ ಸದ್ಯಕ್ಕೆ ಮುಗಿಯಲ್ಲ. ಪ್ರಬಲ ಖಾತೆಗಳಿಗೆ ಬೇಡಿಕೆ ಇಟ್ಟಿರುವ ಆನಂದ್ ಸಿಂಗ್ ಮತ್ತು ಎಂಟಿಬಿರನ್ನು ಮನವೊಲಿಸುವಲ್ಲಿ ಸಿಎಂ ವಿಫಲರಾಗಿದ್ದಾರೆ. ಖಾತೆ ಬದಲಾಯಿಸುವ ಭರವಸೆ ಕೊಡದ ಹಿನ್ನೆಲೆ ಆನಂದ್ ಸಿಂಗ್ ಸಿಟ್ಟು ಮುಂದುವರೆಸಿದ್ದು, ಎಂಟಿಬಿ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ.

    ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಖಾತೆ ಕಗ್ಗಂಟು ಮುಂದುವರೆದಿದೆ. ಕೇಳಿದ ಖಾತೆಗಳು ಸಿಗಲಿಲ್ಲ ಅಂತ ಅಸಮಾಧಾನಗೊಂಡಿದ್ದ ಸಚಿವರಾದ ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್, ಇಂದು ಸಿಎಂ ಬೊಮ್ಮಾಯಿ ಭೇಟಿ ಮಾಡಿ ಖಾತೆ ಬದಲಾವಣೆಗೆ ಪಟ್ಟು ಮುಂದುವರಿಸಿದರು. ಖಾತೆ ಬದಲಾಯಿಸುವ ವಿಷಯ ಹೈಕಮಾಂಡ್ ಗೆ ಬಿಟ್ಟಿದ್ದು. ವಿಚಾರ ಹೈಕಮಾಂಡ್ ಗಮನಕ್ಕೆ ತರುವುದಾಗಿ ಬೊಮ್ಮಾಯಿ ಭರವಸೆ ಕೊಟ್ಟು ಕಳಿಸಿದ್ದಾರೆ.

    ಸಿಎಂ ಅವರ ಈ ಭರವಸೆ ಅಸಮಧಾನಿತರಿಗೆ ಸಮಾಧಾನ ತಂದಿಲ್ಲ. ಸದ್ಯಕ್ಕೆ ಕಾದು ನೋಡುವ ತಂತ್ರಕ್ಕೆ ಮೊರೆ ಎಂಟಿಬಿ ನಾಗರಾಜ್ ಹೋಗಿದ್ದಾರೆ. ನಾನು ಹೆಚ್ಚು ದಿನ ಕಾಯೋದಿಲ್ಲ, ನನಗೆ ಬೇಗ ಬೇರೆ ಖಾತೆ ಕೊಡಿ, ಅಲ್ಲಿಯವರೆಗೂ ಕೊಟ್ಟಿರುವ ಖಾತೆಗಳನ್ನ ನಿಭಾಯಿಸೋದಾಗಿ ಸಿಎಂಗೆ ಎಂಟಿಬಿ ಹೇಳಿ ಹೋಗಿದ್ದಾರೆನ್ನಲಾಗಿದೆ. ಇತ್ತ ಆನಂದ್ ಸಿಂಗ್ ಮಾತ್ರ ಅಸಮಾಧಾನ ಮುಂದುವರೆಸಿದ್ದು, ನನಗೆ ಪದೇ ಪದೇ ಅನ್ಯಾಯ ಆಗ್ತಿದೆ. ಈ ಸಲ ನಾನು ಕಾಯೋದಿಲ್ಲ ಎಂದು ಸಿಎಂಗೆ ಎಚ್ಚರಿಸಿ ಹೋಗಿದ್ದಾರೆ ಎನ್ನಲಾಗಿದೆ. ಆನಂದ್ ಸಿಂಗ್, ಕುಟುಂಬಸ್ಥರು, ಆಪ್ತರು, ಹಿತೈಷಿಗಳ ಜತೆ ಚರ್ಚಿಸಿ ಮುಂದಿನ ನಡೆ ನಿರ್ಧರಿಸಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿ 2013ರಲ್ಲಿ ನುಡಿದಿದ್ದ ಭವಿಷ್ಯ ನಿಜವಾಯ್ತು

    ಇಬ್ಬರು ವಲಸಿಗ ಸಚಿವರ ಖಾತೆ ಕಗ್ಗಂಟು ಸಿಎಂಗೆ ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಈ ಮಧ್ಯೆ ಗೊಂದಲ ನಿವಾರಣೆ ಕುರಿತು ಸಿಎಂ ಬೊಮ್ಮಾಯಿ, ಇಂದು ಮಧ್ಯಾಹ್ನ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿ ಚರ್ಚಿಸಿದ್ದಾರೆ. ಆದರೆ ಈ ಸಲ ಸಚಿವ ಸ್ಥಾನ ಮತ್ತು ಖಾತೆ ಹಂಚಿಕೆಯಲ್ಲಿ ಹೈಕಮಾಂಡ್ ನೇರ ಭಾಗವಹಿಸಿದೆ. ಹೀಗಾಗಿ ಯಾರೂ ಏನೂ ಮಾಡಲಾಗದಂಥ ಸನ್ನಿವೇಶ ನಿರ್ಮಾಣವಾಗಿದೆ. ಆನಂದ್ ಸಿಂಗ್ ಮತ್ತು ಎಂಟಿಬಿರನ್ನು ಕರೆಸಿ ಮಾತಾಡೋದಾಗಿ ಬಿಎಸ್ವೈ ಸಿಎಂಗೆ ಭರವಸೆ ಕೊಟ್ಟಿದ್ದಾರೆ. ಒಂದೊಮ್ಮೆ ಅವರಿಬ್ರೂ ಪಟ್ಟು ಮುಂದುವರೆಸಿದರೆ, ವಿಷಯವನ್ನು ಹೈಕಮಾಂಡ್ ಗಮನಕ್ಕೆ ತರುವುದು ಉತ್ತಮ ಎಂದು ಯಡಿಯೂರಪ್ಪ ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ.

    ಈ ಮಧ್ಯೆ ಕೇಳಿದ ಖಾತೆ ಕೊಡಿಸ್ಲಿಲ್ಲ ಎಂದು ಯಡಿಯೂರಪ್ಪ ಮೇಲೂ ಆನಂದ್ ಸಿಂಗ್ ಮತ್ತು ಎಂಟಿಬಿ ಮುನಿಸಿಕೊಂಡಿದ್ದಾರೆ. ಖಾತೆ ಬದಲು ಮಾಡುವ ಸಂಬಂಧ ಇಬ್ಬರೂ ಸಿಎಂ ಬೊಮ್ಮಾಯಿಯವ್ರನ್ನು ಮಾತ್ರ ಭೇಟಿ ಮಾಡಿದ್ದು, ಯಡಿಯೂರಪ್ಪ ಭೇಟಿ ಮಾಡದಿರುವ ಮೂಲಕ ಮುನಿಸು, ಸಿಟ್ಟು ಪ್ರದರ್ಶಿಸಿದ್ದಾರೆ. ಒಟ್ಟಿನಲ್ಲಿ ವಲಸಿಗರ ಖಾತೆ ಕಗ್ಗಂಟಿನ ತಾಪಕ್ಕೆ ಸಿಎಂ ಇಕ್ಕಟ್ಟಿಗೆ ಸಿಲುಕಿರೋದಂತೂ ಹೌದು.

  • ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡೋದು ಬೇಡ: ಶಾಸಕ ಪ್ರೀತಂ ಗೌಡ

    ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡೋದು ಬೇಡ: ಶಾಸಕ ಪ್ರೀತಂ ಗೌಡ

    – ಸಿಎಂಗೆ ಹೆಚ್‍ಡಿಡಿ ಮನೆಗೆ ಹೋಗುವ ಅವಶ್ಯಕತೆ ಏನಿತ್ತು?

    ಹಾಸನ: ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡಿಕೊಳ್ಳಲು ನಾವು ಯಾರು ಕೂಡ ರಾಜಕೀಯದಲ್ಲಿ ಸನ್ಯಾಸಿಗಳಲ್ಲ. ನಾನು ರಾಜಕಾರಣ ಮಾಡಬೇಕೆಂದೇ ಬಂದಿರುವುದು ಎಂದು ಶಾಸಕ ಪ್ರೀತಂ ಗೌಡ ಹೇಳಿದ್ದಾರೆ.

    ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿಯವರು ಮೊದಲು ಸಿದ್ದಗಂಗಾ ಶ್ರೀ, ಸುತ್ತೂರು ಶ್ರೀ, ಸಿರಿಗೆರೆ ಸ್ವಾಮೀಜಿಗಳಿಗೆ ಅಥವಾ ಆದಿ ಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆಯಬೇಕಾಗಿತ್ತು. ಆದರೆ ಅವರ ತಂದೆ ಸರ್ಕಾರ ಉರುಳಿಸಿದಂತಹವರ ಮನೆಗೆ ಹೋಗಿ ಆಶೀರ್ವಾದ ಪಡೆಯುವ ಅಗತ್ಯ ಇರಲಿಲ್ಲ. ಇದು ನಾನು ಹೇಳುತ್ತಿಲ್ಲ ಎಲ್ಲಾ ಕಾರ್ಯಕರ್ತರು ಮಾತನಾಡುತ್ತಿದ್ದಾರೆ ಎಂದಿದ್ದಾರೆ.

    ನಾನು ಯಾವುದೇ ಮುಲಾಜಿಗೆ ಒಳಗಾಗಿ ರಾಜಕಾರಣ ಮಾಡುವಂತನಲ್ಲ. ನಮ್ಮ ಮನೆಗೆ ಕಲ್ಲು ಒಡೆದ ಸಮಯದಲ್ಲಿ ಯಡಿಯೂರಪ್ಪನವರು ಹಾಗೂ ಆರ್. ಅಶೋಕ್ ಬಂದು ಮಾನಸಿಕವಾಗಿ, ನೈತಿಕವಾಗಿ ಧೈರ್ಯ ತುಂಬಿ ಹೆಚ್ಚು ಶಕ್ತಿ ಕೊಟ್ಟಂತಹ ನಾಯಕರ ಮಧ್ಯೆ ನಾನು ಬೆಳೆದು ಬಂದಿದ್ದೇನೆ. ನಾವು ಬೆಳಗಾದರೆ ಜಾತ್ಯತೀಯ ಜನತ ದಳದ ವಿರುದ್ಧ ಗುದ್ದಾಟ ಮಾಡಿ ಪಕ್ಷ ಕಟ್ಟುವುದು, ಇನ್ನೊಬ್ಬರು ಹೋಗಿ ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡಿಕೊಳ್ಳುವುದು. ಇಂತಹ ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡಿಕೊಳ್ಳಲು ನಾವು ಯಾರು ಕೂಡ ರಾಜಕೀಯದಲ್ಲಿ ಸನ್ಯಾಸಿಗಳಲ್ಲ. ನಾನು ರಾಜಕಾರಣ ಮಾಡಬೇಕೆಂದೇ ಬಂದಿರುವುದು. ಹಳೇ ಮೈಸೂರು ಜಿಲ್ಲೆಯಲ್ಲಾಗಲಿ, ಹಾಸನ ಜಿಲ್ಲೆಯಲ್ಲಾಗಲಿ ಎಲ್ಲೆಯಾದರು ಯಾವುದೇ ಕಾರಣಕ್ಕೂ ಅಡ್ಜೆಸ್ಟ್‌ಮೆಂಟ್ ರಾಜಕಾರಣ ಆಗುವುದಿಲ್ಲ ಎಂದು ನಾನು ಕಾರ್ಯಕರ್ತರಿಗೆ ಪ್ರಾಮಾಣಿಕವಾಗಿ ತಿಳಿಸಿಕೊಡುವಂತಹ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

    ಮುಂದಿನ ದಿನಗಳಲ್ಲಿ ಯಾವುದೇ ಮಂತ್ರಿಗಳಾಗಲಿ ಜನತ ದಳದವರ ಮನೆಗೆ ಹೋಗಿ ಊಟ ಮಾಡುವುದು, ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಮುಂದೆ ಬರುವ ಚುನಾವಣೆಯಲ್ಲಿ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವಂತಹ ಕೆಲಸವನ್ನು ಮುಂದಿನ ದಿನಗಳಲ್ಲಿ ಮಾಡಬಾರದು. ಈ ಬಗ್ಗೆ ಹಳೇ ಮೈಸೂರಿನ ಕಡೆ ರಾಜಕಾರಣ ಮಾಡುವವರಿಗೆ ನೋವಿನ ಬಗ್ಗೆ ಗೊತ್ತಿರುತ್ತದೆ ಎಂದು ನುಡಿದಿದ್ದಾರೆ.

    ಪಕ್ಕದ ಭಾಗದವರು ಬಂದು ಹೈದರಾಬಾದ್ ಕರ್ನಾಟಕ, ಉತ್ತರ ಕರ್ನಾಟಕದವರಿಗೆ ಜನತ ದಳ ಅಂದರೆ ಫ್ರೆಂಡ್ಸ್. ಆದ್ರೆ ಹಳೇ ಮೈಸೂರು ಭಾಗದಲ್ಲಿ ಜಂಜಾಟ ಮಾಡಿಕೊಂಡು ಗುದ್ದಾಟ ಮಾಡಿಕೊಳ್ಳುವವರು ನಮ್ಮ ಕಾರ್ಯಕರ್ತರು ಟಿಪಿ, ಜೆಡ್‍ಪಿ ಚುನಾವಣೆ ಇದೆ. ಆ ಸಮಯದಲ್ಲಿ ಇದೆಲ್ಲಾ ನಡೆದಿದ್ದು, ನಮ್ಮ ಕಾರ್ಯಕರ್ತರಿಗೆ ನೋವುಂಟಾಗಿದೆ. ಆ ನೋವನ್ನು ನನ್ನ ಬಳಿ ವ್ಯಕ್ತಪಡಿಸಿದ್ದಾರೆ. ಅದರ ಬಗ್ಗೆ ನಾನು ಮುಖ್ಯಮಂತ್ರಿಗಳೊಂದಿಗೆ ನೇರವಾಗಿ ಚರ್ಚೆ ಮಾಡುತ್ತೇನೆ. ರಾಜ್ಯಾಧ್ಯಕ್ಷರಿಗೆ ಮನವಿ ಮಾಡುತ್ತೇನೆ, ನಮ್ಮ ಪರಿವಾರದ ಹಿರಿಯರ ಬಳಿ ಈ ಬಗ್ಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:ಖಾತೆ ಹಂಚಿಕೆ ಸಿಎಂ ಪರಮಾಧಿಕಾರ, ವಸತಿ ಖಾತೆ ಮತ್ತೆ ನಿಭಾಯಿಸುತ್ತೇನೆ: ವಿ.ಸೋಮಣ್ಣ

  • ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆ

    ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆ

    ಬೆಂಗಳೂರು: ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಅವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

    ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಭಾರತೀಯ ಜನತಾ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತುಳಿತಕ್ಕೆ ಒಳಗಾದವರಿಗೆ ಸ್ವಾಭಿಮಾನದ ಬದುಕು ಸಿಗಲಿದೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಆಗಲಿದೆ ಎಂಬ ವಿಶ್ವಾಸದೊಂದಿಗೆ ಕೊಳ್ಳೇಗಾಲದ ಶಾಸಕ ಮಹೇಶ್ ಅವರು ಬಿಜೆಪಿ ಸೇರಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಯ ಆಶಯವನ್ನು ರಾಜ್ಯ ಸರ್ಕಾರ ಈಡೇರಿಸಲಿದೆ. ಆ ಭಾಗದಲ್ಲಿ ಸಾಮರಸ್ಯ, ಸಹೋದರತ್ವ ಭಾವನೆ ಇರುವ ಸಾಮಾಜಿಕ ನೆಲೆಗಟ್ಟು ಸ್ಥಾಪನೆ ಆಗಲಿದೆ ಎಂದು ಅಭಿಪ್ರಾಯಪಟ್ಟರು.

    ಮಹೇಶ್ ಅವರು ಪಕ್ಷದ ಜೊತೆ ಮತ್ತು ಯಡಿಯೂರಪ್ಪ ಅವರ ಜೊತೆಗೆ ಹೊಂದಿರುವ ಸಂಬಂಧ ಮತ್ತು ಅನುಭವ ಇವತ್ತು ಅವರ ಈ ನಿರ್ಣಯಕ್ಕೆ ಪೂರಕವಾಗಿದೆ. ಅವರನ್ನು ಪಕ್ಷಕ್ಕೆ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು.

    ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ಎನ್.ಮಹೇಶ್ ಅವರ ಸೇರ್ಪಡೆಯ ಶುಭ ಕ್ಷಣ ಈಗ ಬಂದಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಬರುವುದರ ಮುನ್ಸೂಚನೆ ಇದಾಗಿದ್ದು, ರಾಜ್ಯದಲ್ಲಿ ದಲಿತ ಸಮೂಹ ಬಿಜೆಪಿ ಪರವಾಗಿದೆ ಎಂಬ ಸಂದೇಶ ಪ್ರಧಾನಿಯವರಾದ ನರೇಂದ್ರ ಮೋದಿ ಅವರನ್ನು ತಲುಪಲು ನಮ್ಮ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಅವರು ತಿಳಿಸಿದರು.

    ಮಹೇಶ್ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಹೆಚ್ಚಿನ ಬಲ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಕನಿಷ್ಠ 135 ಸ್ಥಾನ ಗೆದ್ದು ಸ್ವಂತ ಬಲದಿಂದ ಅಧಿಕಾರಕ್ಕೆ ಬರಬೇಕೆಂಬ ಸಂಕಲ್ಪ ನಮ್ಮದಾಗಿದೆ. ಅದಕ್ಕಾಗಿ ಎಲ್ಲರೂ ಶ್ರಮಿಸಬೇಕು. ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡೋಣ ಎಂದು ನುಡುದರು. ಇದನ್ನೂ ಓದಿ: ಜಮೀರ್ ಮನೆಗೆ ಹಾಲು ಹಾಕಲು ಬಂದ ವ್ಯಕ್ತಿಯೂ ಒಳಗೆ ಲಾಕ್

    ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಬಿಎಸ್‍ಪಿಯನ್ನು ರಾಜ್ಯದಲ್ಲಿ ಕಟ್ಟಿ ಬೆಳೆಸಿದ ಎನ್. ಮಹೇಶ್ ಅವರು ಈಗ ಬಿಜೆಪಿ ಸೇರಿದ್ದಾರೆ. ನರೇಂದ್ರ ಮೋದಿಯವರ ಆಡಳಿತ, ರಾಜ್ಯದಲ್ಲಿ ಯಡಿಯೂರಪ್ಪ ಅವರ ಆಡಳಿತ, ಬಿಜೆಪಿ ಚಿಂತನೆ, ವಿಚಾರಧಾರೆಗಳನ್ನು ಮೆಚ್ಚಿ ಬಿಜೆಪಿಗೆ ಸೇರಿದ್ದು ಅವರಿಗೆ ಸ್ವಾಗತ ಎಂದರು. ಅವರ ಮೂಲಕ ಬಿಜೆಪಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸ ಆಗಬೇಕು. ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ಬೇರೆ ಬೇರೆ ಪಕ್ಷಗಳ ಹತ್ತಾರು ಜನರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರ ಏಳು ವರ್ಷಗಳ ಅಭಿವೃದ್ಧಿ ಕಾರ್ಯ, ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಜನಪರ ಆಡಳಿತವನ್ನು ಮೆಚ್ಚಿಕೊಂಡು ಅನೇಕರು ಬಿಜೆಪಿ ಸೇರಲು ಉತ್ಸುಕತೆ ತೋರಿದ್ದಾರೆ. ಡಾ. ಬಾಬಾಸಾಹೇಬ್ ಅಂಬೇಡ್ಕರರಿಗೆ ನ್ಯಾಯ ನೀಡುವ ಕಾರ್ಯವನ್ನು ಬಿಜೆಪಿಯ ಕೇಂದ್ರ ಸರ್ಕಾರ ಮಾಡಿದೆ. ಇದನ್ನು ಗಮನಿಸಿ ದಲಿತ ಸಮುದಾಯವು ಈಗ ಬಿಜೆಪಿಯತ್ತ ಸಹಜವಾಗಿಯೇ ಆಕರ್ಷಿತವಾಗುತ್ತಿದೆ ಎಂದು ಅವರು ವಿವರಿಸಿದರು.

    ಎನ್.ಮಹೇಶ್ ಅವರು ಮಾತನಾಡಿ, ರಾಷ್ಟ್ರದ 130 ಕೋಟಿ ಜನರ ಅಭಿವೃದ್ಧಿಗಾಗಿ ಬಿಜೆಪಿ ಪ್ರಯತ್ನಿಸುತ್ತಿದೆ. ಆ ವಿಚಾರವನ್ನು ಗಮನಿಸಿ ನಾನು ಬಿಜೆಪಿ ಸೇರುತ್ತಿದ್ದೇನೆ. ಇದಕ್ಕೆ ಮತ್ತೊಂದು ಪ್ರೇರಕ ಶಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರು. ಬಿಜೆಪಿ ಈಗ ಪ್ರಬುದ್ಧ ಮನಸ್ಥಿತಿಯೊಂದಿಗೆ ರಾಷ್ಟ್ರವನ್ನು ಸಮಗ್ರ ಅಭಿವೃದ್ಧಿ ಕಡೆ ಒಯ್ಯುತ್ತಿದೆ. ಅದೂ ನನ್ನ ಬಿಜೆಪಿ ಸೇರ್ಪಡೆಗೆ ಕಾರಣ ಎಂದರು. ಮಾಜಿ ಸಿಎಂ ಯಡಿಯೂರಪ್ಪ ಅವರ ನನಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ನನಗೆ ಹಲವಾರು ವರ್ಷಗಳಿಂದ ಪರಿಚಿತರು. ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಎಲ್ಲಾ ಮುಖಂಡರ ಜೊತೆ ಸೇರಿ ಪಕ್ಷದ ಸಂಘಟನೆಗೆ ಶ್ರಮಿಸಲಿದ್ದೇನೆ ಎಂದು ಅವರು ತಿಳಿಸಿದರು.

    ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ರವಿಕುಮಾರ್, ಸಿದ್ದರಾಜು, ಪಕ್ಷದ ರಾಜ್ಯ ಉಪಾಧ್ಯಕ್ಷರಾದ ವಿಜಯೇಂದ್ರ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಆರ್ ಅಶೋಕ್, ಸಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್, ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಮುಖಂಡರು, ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • ‘ಲೆಕ್ಕ ತನ್ನಿ ಟ್ಯಾಲಿ ಮಾಡೋಣ’- ಸಿದ್ದರಾಮಯ್ಯಗೆ ಅಶೋಕ್ ಸವಾಲು

    ‘ಲೆಕ್ಕ ತನ್ನಿ ಟ್ಯಾಲಿ ಮಾಡೋಣ’- ಸಿದ್ದರಾಮಯ್ಯಗೆ ಅಶೋಕ್ ಸವಾಲು

    ಉಡುಪಿ: ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೋತಿಷ್ಯಾಲಯ ಮುಚ್ಚಿದೆ. ಜನ ಅವರ ಮಾತನ್ನು ನಂಬುವ ಸ್ಥಿತಿಯಲ್ಲಿ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರದ ಅನುದಾನದ ಬಗೆಗಿನ ಸಿದ್ದರಾಮಯ್ಯ ಆರೋಪಕ್ಕೆ ಉತ್ತರ ನೀಡಿದರು. ಸಿದ್ದರಾಮಯ್ಯಗೆ ಓಪನ್ ಚಾಲೆಂಜ್ ಕೊಡುತ್ತೇನೆ. ಕಾಂಗ್ರೆಸ್ ಹಾಗೂ ಬಿಜೆಪಿಯ 5 ವರ್ಷದ ಟ್ಯಾಲಿ ಮಾಡೋಣ. ಪ್ರಧಾನಿ ಮೋದಿ ಮತ್ತು ಮನಮೋಹನ್ ಸಿಂಗ್ ಅನುದಾನ ಟ್ಯಾಲಿ ಮಾಡೋಣ ಬನ್ನಿ, ಯಾರು ಎಷ್ಟು ಕೊಟ್ಟಿದ್ದಾರೆ ಲೆಕ್ಕಾ ಹಾಕೋಣ ಎಂದು ಹೇಳಿದ್ದಾರೆ.

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 10 ವರ್ಷದಲ್ಲಿ ಕರ್ನಾಟಕಕ್ಕೆ ಕೊಟ್ಟಿದ್ದೆಷ್ಟು? ಮೋದಿಯ ಕೊಡುಗೆಯೇನು ಎಂದು ನಾನು ಚರ್ಚೆ ಮಾಡೋದಕ್ಕೆ ಸಿದ್ಧನಿದ್ದೇನೆ. ಸಿದ್ದರಾಮಯ್ಯ ವಿವರ ತಗೊಂಡು ಬರಲಿ. ಅಭಿವೃದ್ಧಿ, ಬರ, ನೆರೆ, ರಸ್ತೆಯ ಅನುದಾದ ಲೆಕ್ಕ ಕೊಡಿ. ದಾಖಲೆ ತಂದು ಮಾತನಾಡಿ. ಉಪಚುನಾವಣೆಯಲ್ಲಿ 12 ಬಿಜೆಪಿ ಶಾಸಕರು ಗೆದ್ದಾಗ ಸಿದ್ದರಾಮಯ್ಯ ಅವರ ಮೇಲಿನ ನಂಬಿಕೆ ಹೋಗಿದೆ. ಅವರ ಜ್ಯೋತಿಷ್ಯಾಲಯ ಮುಚ್ಚಿದೆ, ಅಂಕಿ-ಅಂಶ ನೀಡಿ ಸಿದ್ದರಾಮಯ್ಯ ಅವರು ಮಾತನಾಡಿಲಿ. ಸುಮ್ಮನೆ ಹಾದಿ ಬೀದಿಯಲ್ಲಿ ಮಾತಾಡಿ ಏನೂ ಸಾಧಿಸಲಾಗದು ಎಂದರು.

    ಬಂದ್ ತಿರಸ್ಕರಿಸಿದ್ದಾರೆ: ಭಾರತ್ ಬಂದ್ ಕರೆಯುವ ಅವಶ್ಯಕತೆ ಇರಲಿಲ್ಲ. 50-60 ವರ್ಷದ ಹಿಂದಿನ ಬೇಡಿಕೆಗಳಿಗೆ ಅರ್ಥವಿಲ್ಲ. ಬಂದ್ ಕರೆ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ ಆಗುತ್ತದೆ. ಬಂದ್‍ಗೆ ಜನಗಳು ಕೂಡಾ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಜನ ಬಂದ್‍ಅನ್ನು ತಿರಸ್ಕಾರ ಮಾಡಿದ್ದಾರೆ. ನಾನಿದನ್ನು ಸ್ವಾಗತ ಮಾಡುತ್ತೇನೆ. ಕಮ್ಯೂನಿಸ್ಟ್ ಪ್ರೇರಿತ ಬಂದ್ ಹೇರಿಕೆ ಸರಿಯಲ್ಲ. ಬಂದ್‍ನಿಂದ ಯಾವುದೇ ಉದ್ದೇಶ ಈಡೇರಲ್ಲ ಎಂದು ಹೇಳಿದರು.

    ಬಂದ್ ಶಾಂತಿಯುತ: ಇತ್ತ ಗೃಹ ಸಚಿವ ಬೊಮ್ಮಾಯಿಯವರು ಮಾತನಾಡಿ, ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‍ಗೆ ಕರೆಕೊಟ್ಟಿದ್ದು, ರಾಜ್ಯದಲ್ಲಿ ಎಲ್ಲೂ ಬಂದ್ ಆಗಿಲ್ಲ ಎಂಬ ವರದಿ ಬಂದಿದೆ. ಕೆಲವು ಕಡೆ ಎಡಪಕ್ಷಗಳು ಮುಷ್ಕರ ಮಾಡಿವೆ. ಶಾಂತಿಯುತ ಪ್ರತಿಭಟನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

    ಉಡುಪಿಯಲ್ಲಿ ಬಂದ್ ಕುರಿತಾಗಿ ಮಾತನಾಡಿದ ಸಚಿವ ಬೊಮ್ಮಾಯಿ, ರಾಜ್ಯಾದ್ಯಂತ ಪರಿಸ್ಥಿತಿ ಹತೋಟಿಯಲ್ಲಿದೆ. ಸೂಕ್ತ ಬಂದೋಬಸ್ತ್ ಮಾಡಿದ್ದೆವು. ದಿನನಿತ್ಯದ ಚಟುವಟಿಕೆ ಸಾಮಾನ್ಯವಾಗಿದೆ. ಶಾಲಾ ಕಾಲೇಜು ನಡೆದಿದ್ದು, ವ್ಯಾಪಾರ-ವ್ಯವಹಾರ ಸಹಜವಾಗಿದೆ ಎಂದು ಹೇಳಿದರು.