Tag: ಬೊಲಿವಿಯಾ

  • ಹೊಸ ವಿವಾದದಲ್ಲಿ ನಿತ್ಯಾನಂದ – ವರ್ಷಕ್ಕೆ 8.96 ಲಕ್ಷ, ಬೊಲಿವಿಯಾದಲ್ಲಿ ಬೆಂಗಳೂರಿನ 5 ಪಟ್ಟು ಭೂಮಿ ಲೀಸ್‌ಗೆ ಪಡೆದು ವಂಚನೆ

    ಹೊಸ ವಿವಾದದಲ್ಲಿ ನಿತ್ಯಾನಂದ – ವರ್ಷಕ್ಕೆ 8.96 ಲಕ್ಷ, ಬೊಲಿವಿಯಾದಲ್ಲಿ ಬೆಂಗಳೂರಿನ 5 ಪಟ್ಟು ಭೂಮಿ ಲೀಸ್‌ಗೆ ಪಡೆದು ವಂಚನೆ

    ನವದೆಹಲಿ: ಭಾರತದಿಂದ ಓಡಿಹೋಗಿ ತನ್ನದೇ ಆದ ಕೈಲಾಸ ದೇಶ ಸ್ಥಾಪಿಸಿರುವ ನಿತ್ಯಾನಂದ (Nithyananda) ವಿರುದ್ಧ ಭೂ ವಂಚನೆ (Land Scam) ಯತ್ನ ಆರೋಪ ಕೇಳಿ ಬಂದಿದೆ. ದಕ್ಷಿಣ ಅಮೆರಿಕ ಖಂಡದಲ್ಲಿರುವ ಬೊಲಿವಿಯಾ (Bolivia) ದೇಶದಲ್ಲಿ 3,900 ಚದರ ಕಿಲೋಮೀಟರ್ ಭೂ ಕಬಳಿಕೆ ಆರೋಪ ಎದುರಿಸುತ್ತಿದ್ದಾರೆ.

    ಬೊಲಿವಿಯಾದ ಅಮೇಜಾನ್ ಪ್ರದೇಶದ ಬುಡಕಟ್ಟು ಜನಾಂಗಕ್ಕೆ ಅಸ್ತಿತ್ವದಲ್ಲಿಲ್ಲದ ಕೈಲಾಸ ದೇಶ ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ. ಅಮೆಜಾನ್ ಮಳೆ ಕಾಡು ಪ್ರದೇಶದ ಭೂಮಿಯನ್ನು ನಿತ್ಯಾನಂದ ಗ್ಯಾಂಗ್ 1 ಸಾವಿರ ವರ್ಷ ಲೀಸ್‌ಗೆ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ.


    2024ರ ಅಕ್ಟೋಬರ್- ನವೆಂಬರ್ ನಡುವೆ ಈ ಅನಧಿಕೃತ ಭೂವ್ಯವಹಾರ ನಡೆದಿದೆ. 1,08,000 ಡಾಲರ್‌ಗೆ (ವರ್ಷಕ್ಕೆ 8.96 ಲಕ್ಷ ರೂ.) ಈ ಭೂಮಿಯನ್ನು ಅಕ್ರಮವಾಗಿ ಲೀಸ್‌ಗೆ ಪಡೆದಿದೆ. ಪ್ರಕರಣ ಸಂಬಂಧ ಇದೀಗ ನಿತ್ಯಾನಂದನ 20ಕ್ಕೂ ಅಧಿಕ ಅನುಯಾಯಿಗಳನ್ನು ಬೊಲಿವಿಯಾದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ‘ಸೌಗತ್-ಎ-ಮೋದಿ’ ಅಭಿಯಾನದಡಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ಈದ್‌ ಕಿಟ್‌

    ಈ ಭೂಮಿಯು ದೆಹಲಿಯ ಗಾತ್ರಕ್ಕಿಂತ 2.6 ಪಟ್ಟು, ಮುಂಬೈನ ಗಾತ್ರಕ್ಕಿಂತ 6.5 ಪಟ್ಟು, ಬೆಂಗಳೂರಿನ ಗಾತ್ರಕ್ಕಿಂತ 5.3 ಪಟ್ಟು, ಕೋಲ್ಕತ್ತಾದ ಗಾತ್ರಕ್ಕಿಂತ 19 ಪಟ್ಟು ದೊಡ್ಡದಾಗಿದೆ.

    ಬಂಧಿತರ ಪೈಕಿ ಬಹುತೇಕ ಮಹಿಳೆಯರಿದ್ದಾರೆ. 122 ಚೀನಿಯರು, 7 ಜನ ಭಾರತೀಯರಿದ್ದಾರೆ. ಕೆಲವರನ್ನ ಬೊಲಿವಿಯಾದಿಂದ ಗಡೀಪಾರು ಮಾಡಲಾಗಿದೆ. ನಿತ್ಯಾನಂದ ತಂಡ ಆರೋಪ ನಿರಾಕರಿಸಿದೆ. ತಪ್ಪು ವರದಿಯಿಂದ ಹಿಂದು ಸನ್ಯಾಸಿಗಳನ್ನ ಬಂಧಿಸಿ ಹಲ್ಲೆ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದೆ.

     

  • America| ಬೊಲಿವಿಯಾದಲ್ಲಿ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ – 37 ಮಂದಿ ಸಾವು, 39 ಜನರಿಗೆ ಗಾಯ

    America| ಬೊಲಿವಿಯಾದಲ್ಲಿ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ – 37 ಮಂದಿ ಸಾವು, 39 ಜನರಿಗೆ ಗಾಯ

    ಬೊಲಿವಿಯಾ: ಎರಡು ಬಸ್‌ಗಳ (Bus) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದು, 39 ಮಂದಿ ಗಂಭೀರ ಗಾಯಗೊಂಡ ಘಟನೆ ಅಮೆರಿಕದ (America) ಬೊಲಿವಿಯಾದಲ್ಲಿ (Bolivia) ನಡೆದಿದೆ.

    ಶನಿವಾರ ಬೆಳಗ್ಗೆ 7 ಗಂಟೆಗೆ ಉಯುನಿ ಮತ್ತು ಕೊಲ್ಚಾನಿ ನಗರಗಳ ನಡುವಿನ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಉಯುನಿ ಪಟ್ಟಣದ ನಾಲ್ಕು ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಟೋಸಿಯ ಇಲಾಖಾ ಪೊಲೀಸ್ ಕಮಾಂಡ್‌ನ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ಹಿಮಕುಸಿತ – ಮೃತರ ಸಂಖ್ಯೆ 5ಕ್ಕೆ ಏರಿಕೆ; ರಕ್ಷಣಾ ಕಾರ್ಯಕ್ಕೆ ರೆಕೊ ರಾಡಾರ್‌ಗಳು, ಡ್ರೋನ್‌ ಬಳಕೆ 

    ಮೃತಪಟ್ಟವರನ್ನು ಮತ್ತು ಗಾಯಗೊಂಡವರನ್ನು ಗುರುತಿಸುವ ಕೆಲಸವನ್ನು ಪೊಲೀಸ್ ಸಿಬ್ಬಂದಿ ಮಾಡುತ್ತಿದ್ದಾರೆ. ಒಂದು ಬಸ್ಸು ಲ್ಯಾಟಿನ್ ಅಮೆರಿಕದ ಪ್ರಮುಖ ಕಾರ್ನೀವಲ್ ಆಚರಣೆಗಳಲ್ಲಿ ಒಂದಾದ ಒರುರೊಗೆ ಹೋಗುತ್ತಿದ್ದ ಸಂದರ್ಭ ಇನ್ನೊಂದು ಬಸ್‌ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಮೊದಲ ಬಾರಿಗೆ ಆಪಲ್‌ ಉತ್ಪನ್ನ ತಯಾರಿಸಲು ಚೀನಾ, ವಿಯೆಟ್ನಾಂಗೆ ಎಲೆಕ್ಟ್ರಾನಿಕ್‌ ಭಾಗಗಳು ರಫ್ತು!

  • ಅಮೆಜಾನ್ ಕಾಡಿನಲ್ಲಿ ಬೊಲಿವಿಯಾ ವಾಯುಪಡೆ ವಿಮಾನ ಪತನ – 6 ಮಂದಿ ಸಾವು

    ಅಮೆಜಾನ್ ಕಾಡಿನಲ್ಲಿ ಬೊಲಿವಿಯಾ ವಾಯುಪಡೆ ವಿಮಾನ ಪತನ – 6 ಮಂದಿ ಸಾವು

    ವಾಷಿಂಗ್ಟನ್: ಬೊಲಿವಿಯಾದ ವಾಯುಪಡೆಯ ವಿಮಾನ (Bolivian Airforce Plane) ಅಮೆಜಾನ್ ಅರಣ್ಯದಲ್ಲಿ ಪತನವಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ದಕ್ಷಿಣ ಅಮೆರಿಕಾದ ದೇಶ ಬೊಲಿವಿಯಾದ ಈಶಾನ್ಯದಲ್ಲಿರುವ ಬೆನಿ ಪ್ರದೇಶದ ಅಮೆಜಾನ್ ಕಾಡಿನಲ್ಲಿ ಶನಿವಾರ ಈ ದುರಂತ ನಡೆದಿದೆ. ಬೊಲಿವಿಯಾದ ಆರೋಗ್ಯ ಸಚಿವಾಲಯದ ಡೆಂಗ್ಯೂ-ಚಿಕೂನ್‍ಗುನ್ಯಾ ಕಾರ್ಯಕ್ರಮದ ನಾಲ್ವರು ಆರೋಗ್ಯಾಧಿಕಾರಿಗಳನ್ನು ರಿಬೆರಾಲ್ಟಾದಿಂದ ಕೋಬಿಜಾಗೆ ಕರೆದೊಯ್ಯಲಾಗುತ್ತಿತ್ತು. ಮಲೇರಿಯಾ ರೋಗ ಜಾಗೃತಿ ಮೂಡಿಸುವ ಜೊತೆಗೆ, ಮೌಲ್ಯಮಾಪನ ಕಾರ್ಯದಲ್ಲಿ ಇವರೆಲ್ಲ ತೊಡಗಿಸಿಕೊಂಡಿದ್ದರು. ನಾಲ್ವರೂ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

    ವಿಮಾನ ಪತನದಲ್ಲಿ ಇಬ್ಬರು ಸೇನಾ ಪೈಲಟ್‍ಗಳು, ನಾಲ್ವರು ನಾಗರಿಕರು ಮೃತಪಟ್ಟಿದ್ದಾರೆ. ಈ ವಿಮಾನ ಅಮೆಜಾನ್ ಕಾಡಿನ (Amazon Forest) ದಟ್ಟವಾದ ಮರಗಳ ಮಧ್ಯೆ ಪತನವಾಗಿದ್ದು, ತಕ್ಷಣ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ವಿಮಾನ ಪತನವಾದ ಸ್ಥಳದ ಸಮೀಪದಲ್ಲೇ ಇದ್ದ ಅಗುವಾ ಡುಲ್ಸೆ ಎಂಬ ಸಮುದಾಯದ ನಿವಾಸಿಗಳು ವಿಮಾನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಪ್ರಯತ್ನ ಪಟ್ಟರೂ ಫಲ ನೀಡಲಿಲ್ಲ ಎಂದು ಬೆನಿ ಪ್ರದೇಶದ ಪೊಲೀಸರು ಮಾಹಿತಿ ನೀಡಿದ್ದಾರೆ. ಸೇನಾ ವಿಮಾನ ಪತನಕ್ಕೆ (Plane Crash) ನೈಜ ಕಾರಣ  ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ.