Tag: ಬೋರಿಸ್ ಜಾನ್ಸನ್

  • ಲಂಡನ್‌ನಲ್ಲಿ ತಲೆಮರೆಸಿಕೊಂಡಿರುವ ವಿಜಯ್‌ ಮಲ್ಯ, ನೀರವ್‌ ಮೋದಿ ಬಗ್ಗೆ ಬೋರಿಸ್‌ ಹೇಳಿದ್ದೇನು?

    ಲಂಡನ್‌ನಲ್ಲಿ ತಲೆಮರೆಸಿಕೊಂಡಿರುವ ವಿಜಯ್‌ ಮಲ್ಯ, ನೀರವ್‌ ಮೋದಿ ಬಗ್ಗೆ ಬೋರಿಸ್‌ ಹೇಳಿದ್ದೇನು?

    ನವದೆಹಲಿ: ಬ್ಯಾಂಕ್‌ಗಳಿಂದ ಸಾವಿರಾರು ಕೋಟಿ ಸಾಲ ಪಡೆದು ವಂಚಿಸಿ ಲಂಡನ್‌ನಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿಗಳಾದ ವಿಜಯ್‌ ಮಲ್ಯ ಹಾಗೂ ನೀರವ್‌ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಬ್ರಿಟಿಷ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಪ್ರತಿಕ್ರಿಯಿಸಿದ್ದಾರೆ.

    ಭಾರತದಲ್ಲಿ ಎರಡು ದಿನ ಪ್ರವಾಸ ಕೈಗೊಂಡಿರುವ ಬೋರಿಸ್‌ ಜಾನ್ಸನ್‌, ವಿಜಯ್‌ ಮಲ್ಯ, ನೀರವ್‌ ಮೋದಿಯನ್ನು ವಿಚಾರಣೆಗಾಗಿ ಭಾರತಕ್ಕೆ ವಾಪಸ್ ಹಸ್ತಾಂತರಿಸಲು ನಾವು ಬಯಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್

    ಯುಕೆ ಸರ್ಕಾರವು ಅವರನ್ನು ಹಸ್ತಾಂತರಿಸಲು ಆದೇಶಿಸಿದೆ. ಅವರನ್ನು ವಿಚಾರಣೆಗಾಗಿ ಭಾರತಕ್ಕೆ ಹಿಂತಿರುಗಿಸಲು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

    ಅವರ ನಡೆಯನ್ನು ನಾವು ಸ್ವಾಗತಿಸುವುದಿಲ್ಲ. ನಾನು ಈಗ ಅದನ್ನು ಸಂಪೂರ್ಣವಾಗಿ ಸ್ಪಷ್ಟಪಡಿಸಲು ಬಯಸುತ್ತೇನೆ. ಭಾರತದಲ್ಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಕಾನೂನು ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಾರೆ ಈ ಜನರು ಎಂದು ಮಲ್ಯ, ನೀರವ್‌ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನನ್ನ ಸ್ನೇಹಿತನನ್ನು ಭೇಟಿಯಾಗಲಿದ್ದೇನೆ – ಮೋದಿ ಭೇಟಿಗೂ ಮುನ್ನ ಬ್ರಿಟಿಷ್ ಪ್ರಧಾನಿ

    ವಿಜಯ್‌ ಮಲ್ಯ ಮತ್ತು ನೀರವ್‌ ಮೋದಿ ಬ್ಯಾಂಕ್‌ಗಳಿಂದ 9 ಸಾವಿರ ಕೋಟಿ ರೂ. ಸಾಲ ಪಡೆದು ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದಾರೆ.

  • ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್

    ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್

    ನವದೆಹಲಿ: ಭಾರತದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಂದು ಸುದೀರ್ಘ ಮಾತುಕತೆ ನಡೆಸಿದರು. ರಕ್ಷಣಾ ಕ್ಷೇತ್ರ, ವ್ಯಾಪಾರ ಹಾಗೂ ಸ್ವಚ್ಛ ಇಂಧನದಲ್ಲಿ ಸಹಕಾರ ವಿಸ್ತರಿಸುವ ನಿಟ್ಟಿನಲ್ಲಿ ಚರ್ಚಿಸಿದ್ದಾರೆ.

    ಇದೇ ವೇಳೆ ಮಾತನಾಡಿರುವ ಅವರು, ನನ್ನ ಕೈಯ್ಯಲ್ಲಿ ಭಾರತದ ಲಸಿಕೆಯಿದೆ. ಅದು ನನಗೆ ಒಳ್ಳೆಯದನ್ನು ಮಾಡಿದೆ. ನಾನು ಭಾರತಕ್ಕೆ ಧನ್ಯವಾದ ಹೇಳುತ್ತೇನೆ. ನನ್ನ ವಿಶೇಷ ಗೆಳಯ ಪ್ರಧಾನಿ ನರೇಂದ್ರಮೋದಿ ಅವರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದೂ ಹೇಳಿದ್ದಾರೆ. ಇದನ್ನೂ ಓದಿ: ಹೊಸ ಆತಂಕ ಹುಟ್ಟಿಸಿದ ಓಮಿಕ್ರಾನ್ BA.2.12 ತಳಿ

    MODI MET BORIS

    ನಾವು ರಕ್ಷಣಾ ಪಾಲುದಾರಿಕೆಯೊಂದಿಗೆ ಆರೋಗ್ಯ ಪಾಲುದಾರಿಕೆಯ ಬಗ್ಗೆಯೂ ಚರ್ಚಿಸಿದ್ದೇವೆ. ಉದಾಹರಣೆಗೆ ಅಸ್ಟ್ರಾಜೆನಿಕಾ ಸೀರಂ ಸಂಸ್ಥೆಯು ಕೋವಿಡ್ ವಿರುದ್ಧ ಹೋರಾಡಲು ಶತಕೋಟಿ ಜನರಿಗೆ ಲಸಿಕೆ ನೀಡಿದೆ. ಅಲ್ಲದೆ, ಅದು ಭಾರತಕ್ಕೂ ಸಹಾಯ ಮಾಡಿದೆ. ಅದಕ್ಕಾಗಿ ವಿಶ್ವದ ಅತಿದೊಡ್ಡ ಲಸಿಕಾ ತಯಾರಕರಾದ ಸೀರಂ ಇನ್‌ಸ್ಟಿಟ್ಯೂಟ್ ಕೋವಿಡ್ ಲಸಿಕೆಯನ್ನು ಅಭಿವೃದ್ಧಿಪಡಿಸಲು ಸ್ವೀಡಿಷ್ ಅಸ್ಟ್ರಾಜೆನಿಕ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮ ಸಂಸತ್‍ನಲ್ಲಿ ದ್ವೇಷ ಭಾಷಣ – ದೆಹಲಿ ಪೊಲೀಸ್ ಸಲ್ಲಿಸಿದ್ದ ಅಫಿಡವಿಟ್‍ಗೆ ಸುಪ್ರೀಂ ಅಸಮಾಧಾನ

    PM MEET

    ಅಲ್ಲದೆ, ದೇಶೀಯವಾಗಿ ಯುದ್ಧ ವಿಮಾನಗಳ ತಯಾರಿಕೆ ಸಾಮಗ್ರಿಗಳ ಕ್ಷಿಪ್ರ ಪೂರೈಕೆ ಸೇರಿದಂತೆ ರಕ್ಷಣಾ ವ್ಯವಸ್ಥೆಯಲ್ಲಿ ಭಾರತಕ್ಕೆ ಸಹಕಾರ ನೀಡಲು ಬ್ರಿಟನ್ ಮುಂದಾಗಿದೆ. ಪ್ರಸ್ತುತ ಭಾರತಕ್ಕೆ ಅಗತ್ಯವಿರುವ ರಕ್ಷಣಾ ಸಾಮಗ್ರಿಗಳ ಪೈಕಿ ಅರ್ಧಕ್ಕಿಂತ ಹೆಚ್ಚು ರಷ್ಯಾದಿಂದ ಪೂರೈಕೆಯಾಗುತ್ತಿದೆ. ಹಿಂದೂ ಮಹಾಸಾಗರದಲ್ಲಿ ಅಪಾಯಗಳನ್ನು ಎದುರಿಸಲು ಅಗತ್ಯವಿರುವ ಹೊಸ ತಂತ್ರಜ್ಞಾನ ಹಾಗೂ ಯುದ್ಧ ವಿಮಾನಗಳ ಅಭಿವೃದ್ಧಿಯಲ್ಲಿ ಪೂರ್ಣ ಸಹಕಾರ ನೀಡುವುದಾಗಿ ಬ್ರಿಟಿಷ್ ಹೈ ಕಮಿಷನ್ ಹೇಳಿದೆ ಎನ್ನಲಾಗಿದೆ.

    ಕ್ಷಿಪ್ರಗತಿಯಲ್ಲಿ ರಕ್ಷಣಾ ಸಾಮಗ್ರಿಗಳ ಸಾಗಣೆಗೆ ಅನುವಾಗುವ ನಿಟ್ಟಿನಲ್ಲಿ ಭಾರತಕ್ಕೆ ಬ್ರಿಟನ್ ಮುಕ್ತ ಸಾರ್ವತ್ರಿಕ ರಫ್ತು ಪರವಾನಗಿ (OGEL) ಒದಗಿಸುವುದಾಗಿ ತಿಳಿಸಿದೆ. ಇದರಿಂದಾಗಿ ರಕ್ಷಣಾ ಸಾಮಗ್ರಿಗಳ ಪೂರೈಕೆ ಅವಧಿ ಕಡಿತಗೊಳ್ಳಲಿದೆ. ಇದನ್ನೂ ಓದಿ: ಮೇವು ಹಗರಣ – ಲಾಲೂ ಪ್ರಸಾದ್‌ ಯಾದವ್‌ಗೆ ಜಾಮೀನು

    ‘ಹವಾಮಾನ ಬದಲಾವಣೆಯಿಂದ ಹಿಡಿದು ಇಂಧನ, ಭದ್ರತೆ ಹಾಗೂ ರಕ್ಷಣಾ ವಲಯಗಳಲ್ಲಿ ನಮ್ಮ ಪಾಲುದಾರಿಗೆ ಉಭಯ ರಾಷ್ಟ್ರಗಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿದೆ. ಗೆಳೆಯ ನಿಮ್ಮನ್ನು ಭಾರತದಲ್ಲಿ ಕಂಡು ಪುಳಕಿತನಾಗಿರುವೆ…’ ಎಂದು ಪ್ರಧಾನಿ ಮೋದಿ ಅವರು ಬೋರಿಸ್ ಅವರನ್ನು ಭೇಟಿಯಾದ ಚಿತ್ರದೊಂದಿ ಟ್ವೀಟ್ ಮಾಡಿದ್ದಾರೆ.

  • ನನ್ನ ಸ್ನೇಹಿತನನ್ನು ಭೇಟಿಯಾಗಲಿದ್ದೇನೆ – ಮೋದಿ ಭೇಟಿಗೂ ಮುನ್ನ ಬ್ರಿಟಿಷ್ ಪ್ರಧಾನಿ

    ನನ್ನ ಸ್ನೇಹಿತನನ್ನು ಭೇಟಿಯಾಗಲಿದ್ದೇನೆ – ಮೋದಿ ಭೇಟಿಗೂ ಮುನ್ನ ಬ್ರಿಟಿಷ್ ಪ್ರಧಾನಿ

    ನವದೆಹಲಿ: ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ 2 ದಿನಗಳ ಭಾರತದ ಪ್ರವಾಸ ಕೈಗೊಂಡಿದ್ದು, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಬೋರಿಸ್ ಜಾನ್ಸನ್ ತಮ್ಮ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಸ್ನೇಹಿತ ಎಂದು ಕರೆದಿದ್ದಾರೆ.

    ನಾನಿಂದು ನವದೆಹಲಿಯಲ್ಲಿ ನನ್ನ ಗೆಳೆಯ ನರೇಂದ್ರ ಮೋದಿಯನ್ನು ಭೇಟಿಯಾಗಲಿದ್ದೇನೆ. ಹವಾಮಾನ ಬದಲಾವಣೆಯಿಂದ ಇಂಧನ ಭದ್ರತೆಯಿಂದ ರಕ್ಷಣೆ ಪಡೆಯಬೇಕಿದೆ. ಪ್ರಪಂಚ ನಿರಂಕುಶ ದೇಶಗಳಿಂದ ಬೆಳೆಯುತ್ತಿರುವ ಬೆದರಿಕೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಪ್ರಜಾಪ್ರಭುತ್ವ ದೇಶಗಳ ಒಗ್ಗಟ್ಟು ಅತ್ಯಗತ್ಯ ಎಂದು ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಜೆಸಿಬಿ ಕಾರ್ಖಾನೆ ಓಪನ್‌ – ಬ್ರಿಟನ್‌ ಪ್ರಧಾನಿ ಚಾಲನ

    ಗುರುವಾರ ಭಾರತಕ್ಕೆ ಭೇಟಿ ನೀಡಿದ ಬೋರಿಸ್ ಜಾನ್ಸನ್, ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಗಾಂಧೀಜಿಯವರ ಸಬರಾಮತಿ ಆಶ್ರಮಕ್ಕೆ ಭೇಟಿ ನೀಡಿದ್ದರು. ಬಳಿಕ ವಡೋದರಾ ಬಳಿಯ ಹಲೋಲ್‌ನಲ್ಲಿ ಜೆಸಿಬಿಯ ಹೊಸ ರಫ್ತು ಕೇಂದ್ರಿತ ಕಾರ್ಖಾನೆಯನ್ನು ಉದ್ಘಾಟಿಸಿದರು. ಇದನ್ನೂ ಓದಿ: ರಾಮನವಮಿಯಂದು ಖಾರ್ಗೋನ್‌ನಲ್ಲಿ ಹಿಂಸಾಚಾರ – ಐವರ ಬಂಧನ

  • ಗುಜರಾತ್‌ನಲ್ಲಿ ಜೆಸಿಬಿ ಕಾರ್ಖಾನೆ ಓಪನ್‌ – ಬ್ರಿಟನ್‌ ಪ್ರಧಾನಿ ಚಾಲನೆ

    ಗುಜರಾತ್‌ನಲ್ಲಿ ಜೆಸಿಬಿ ಕಾರ್ಖಾನೆ ಓಪನ್‌ – ಬ್ರಿಟನ್‌ ಪ್ರಧಾನಿ ಚಾಲನೆ

    ಗಾಂಧೀನಗರ: ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಗುರುವಾರ ಜೆಸಿಬಿಯ ಹೊಸ ರಫ್ತು-ಕೇಂದ್ರಿತ ಕಾರ್ಖಾನೆಯನ್ನು ವಡೋದರಾ ಬಳಿಯ ಹಲೋಲ್‌ನಲ್ಲಿ ಉದ್ಘಾಟಿಸಿದರು.

    ಗುಜರಾತ್‌ನಲ್ಲಿ ಸುಮಾರು 990 ಕೋಟಿ ರೂ. ಹೂಡಿಕೆಯಲ್ಲಿ ಸ್ಥಾಪಿಸಲಾದ ಕಾರ್ಖಾನೆಯು ಜಾಗತಿಕ ಉತ್ಪಾದನಾ ಮಾರ್ಗಗಳಿಗೆ ಬಿಡಿಭಾಗಗಳನ್ನು ತಯಾರಿಸುತ್ತದೆ. 47 ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ಹೊಸ ಕಾರ್ಖಾನೆಯು ವಾರ್ಷಿಕವಾಗಿ 85,000 ಟನ್ ಉಕ್ಕನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ ಬ್ರಿಟನ್ ಪ್ರಧಾನಿ

    ಭಾರತ ದೇಶವು ಈಗ ಪ್ರಮುಖ ಇಂಜಿನಿಯರಿಂಗ್ ಶಕ್ತಿಯಾಗಿದೆ. ಇದು ಅಸಾಧಾರಣ ಯಶಸ್ಸನ್ನು ಹೊಂದಿದೆ. ಬೆಳವಣಿಗೆಗೆ ಹೆಚ್ಚಿನ ಸಾಮರ್ಥ್ಯ ಹೊಂದಿದೆ. ಅಂತಹ ಪ್ರಗತಿಯು ನಿರಂತರ ಹೂಡಿಕೆಯಿಂದ ಮಾತ್ರ ಸಾಧ್ಯ. ಗುಜರಾತ್‌ನಲ್ಲಿ ಹೊಸ ಸೌಲಭ್ಯವೊಂದನ್ನು ಕಲ್ಪಿಸಲಾಗಿದೆ. ಪ್ರಪಂಚದಾದ್ಯಂತ ನಮ್ಮ ವ್ಯಾಪಾರವನ್ನು ಬೆಳೆಸುವಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ ಎಂದು ಜೆಸಿಬಿ ಕಾರ್ಖಾನೆ ಅಧ್ಯಕ್ಷ ಲಾರ್ಡ್ ಬ್ಯಾಮ್‌ಫೋರ್ಡ್ ಅಭಿಪ್ರಾಯಪಟ್ಟಿದ್ದಾರೆ.

    ಇದರಿಂದಾಗಿ ಸುಮಾರು 1,200 ಉದ್ಯೋಗಗಳು ಮತ್ತು ಪೂರೈಕೆಗಾಗಿ ಇನ್ನೂ ಸಾವಿರಾರು ಉದ್ಯೋಗಗಳನ್ನು ಸೃಷ್ಟಿ ಸಾಧ್ಯವಾಗಲಿದೆ ಎಂದು ಜೆಸಿಬಿ ಇಂಡಿಯಾ ಸಿಇಒ ಮತ್ತು ಎಂಡಿ ದೀಪಕ್ ಶೆಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ಮೊಸಳೆ ಬಾಯಲ್ಲಿ ನಿಮ್ಮ ಕಾಲಿರುವಾಗ, ಅದರೊಂದಿಗೆ ಮಾತನಾಡಲು ಹೇಗೆ ಸಾಧ್ಯ: ಬೋರಿಸ್ ಜಾನ್ಸನ್

    ಇಂಗ್ಲೆಂಡ್‌ನಲ್ಲಿ 11 ಕಾರ್ಖಾನೆಗಳಿದ್ದು, 7,500 ಕ್ಕಿಂತ ಹೆಚ್ಚು ಜನರನ್ನು ನೇಮಿಸಿಕೊಂಡಿವೆ. ಜೆಸಿಬಿ ಮೊದಲ ಬಾರಿಗೆ 1979 ರಲ್ಲಿ ಭಾರತದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸಿತು. ಈಗ ನಿರ್ಮಾಣ ಸಲಕರಣೆಗಳು ದೇಶದ ಪ್ರಮುಖ ಉತ್ಪಾದಕವಾಗಿದೆ. ಭಾರತವು 2007 ರಿಂದ ಪ್ರತಿ ವರ್ಷ ಜೆಸಿಬಿಯ ಅತಿದೊಡ್ಡ ಮಾರುಕಟ್ಟೆಯಾಗಿದೆ. ಈಗ ಭಾರತದಲ್ಲಿ ಮಾರಾಟವಾಗುವ ಪ್ರತಿಯೊಂದು ನಿರ್ಮಾಣ ಯಂತ್ರಗಳಲ್ಲಿ ಎರಡರಲ್ಲಿ ಒಂದನ್ನು ಜೆಸಿಬಿಯಿಂದ ತಯಾರಿಸಲಾಗುತ್ತದೆ.

    ಜೈಪುರ ಮತ್ತು ಪುಣೆ ಸೇರಿದಂತೆ ಭಾರತದಲ್ಲಿ ಜೆಸಿಬಿ ಆರು ಕಾರ್ಖಾನೆಗಳನ್ನು ಹೊಂದಿದೆ. ಜಾನ್ಸನ್ ಗುರುವಾರದಿಂದ ಭಾರತಕ್ಕೆ ಎರಡು ದಿನಗಳ ಭೇಟಿಯಲ್ಲಿದ್ದಾರೆ.

  • ಮೊಸಳೆ ಬಾಯಲ್ಲಿ ನಿಮ್ಮ ಕಾಲಿರುವಾಗ, ಅದರೊಂದಿಗೆ ಮಾತನಾಡಲು ಹೇಗೆ ಸಾಧ್ಯ: ಬೋರಿಸ್ ಜಾನ್ಸನ್

    ಮೊಸಳೆ ಬಾಯಲ್ಲಿ ನಿಮ್ಮ ಕಾಲಿರುವಾಗ, ಅದರೊಂದಿಗೆ ಮಾತನಾಡಲು ಹೇಗೆ ಸಾಧ್ಯ: ಬೋರಿಸ್ ಜಾನ್ಸನ್

    ಲಂಡನ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಮಾತುಕತೆ ನಡೆಸುವುದನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮೊಸಳೆಯೊಂದಿಗಿನ ಮಾತುಕತೆಗೆ ಹೋಲಿಸಿದ್ದಾರೆ. ಈ ಮೂಲಕ ಜಾನ್ಸನ್ ಉಕ್ರೇನ್ ಕುರಿತು ಯಾವುದೇ ಶಾಂತಿಯುತ ಮಾತುಕತೆ ವಿಫಲವಾಗುವ ಸಾಧ್ಯತೆ ಇದೆ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

    ಮೊಸಳೆಯ ಬಾಯಲ್ಲಿ ನಿಮ್ಮ ಕಾಲಿರುವಾಗ ಅದರೊಂದಿಗೆ ಮಾತನಾಡಿ ಬಿಡಿಸಿಕೊಳ್ಳಲು ಹೇಗೆ ಸಾಧ್ಯ? ಅದೇ ರೀತಿ ಉಕ್ರೇನಿಯನ್ನರು ದಾಳಿಯನ್ನು ಎದುರಿಸುತ್ತಿರುವಾಗ ರಷ್ಯಾದೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಸಾಧ್ಯವಿದೆಯೇ ಎಂದಿದ್ದಾರೆ. ಇದನ್ನೂ ಓದಿ: ಭೂಮಿಯ ಯಾವುದೇ ಭಾಗ ತಲುಪಬಲ್ಲ ಪರಮಾಣು ಸಾಮರ್ಥ್ಯದ ಕ್ಷಿಪಣಿ ಪರೀಕ್ಷಿಸಿದ ರಷ್ಯಾ

    ಪುಟಿನ್ ಬಗ್ಗೆ ಎಲ್ಲರಿಗೂ ನಂಬಿಕೆಯ ಕೊರತೆ ಇದೆ. ಆದರೂ ಉಕ್ರೇನ್ ರಷ್ಯಾದೊಂದಿಗೆ ಮಾತುಕತೆ ನಡೆಸುತ್ತಾರೆ ಎನ್ನುವುದೇ ಕಷ್ಟದ ವಿಚಾರ. ರಷ್ಯಾದ ಕಾರ್ಯತಂತ್ರ ಸ್ಪಷ್ಟವಾಗಿ ಗೋಚರಿಸುತ್ತಿದೆ. ಅವರು ಉಕ್ರೇನ್ ಅನ್ನು ಎಷ್ಟು ಸಾಧ್ಯವೋ ಅಷ್ಟು ಸುತ್ತುವರಿದು, ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದರು.

    ಬೋರಿಸ್ ಜಾನ್ಸನ್ ಭಾರತದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದು, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಮೋದಿಯನ್ನು ಉಕ್ರೇನ್‌ಗೆ ಬೆಂಬಲ ನೀಡುವಂತೆ ಮನವೊಲಿಸುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ವಿಕಿರಣ ವಿರೋಧಿ ಔಷಧಿ ಸಂಗ್ರಹಿಸಿ – ಉಕ್ರೇನಿಯನ್ನರಿಗೆ ಝೆಲೆನ್ಸ್ಕಿ ಕರೆ

    ನಾನು ಈಗಾಗಲೇ ಉಕ್ರೇನ್ ಬಗ್ಗೆ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದೇನೆ. ಉಕ್ರೇನ್‌ನ ಬೂಚಾದಲ್ಲಿ ನಡೆದ ಘಟನೆಯನ್ನು ಭಾರತೀಯರೂ ಖಂಡಿಸಿದ್ದಾರೆ. ಆದರೂ ಭಾರತ ರಷ್ಯಾದೊಂದಿಗೆ ಐತಿಹಾಸಿಕ ಸಂಬಂಧ ಹೊಂದಿದೆ ಎಂಬುದನ್ನು ನಾವು ಗಮನಿಸಲೇಬೇಕಾದ ವಿಚಾರ. ನಾವು ಭಾರತ-ರಷ್ಯಾ ಸಂಬಂಧವನ್ನು ಒಪ್ಪಿಕೊಂಡೇ ಮುನ್ನಡೆಯಬೇಕು ಎಂದಿದ್ದಾರೆ.

  • ಬೋರಿಸ್ ಜಾನ್ಸನ್, ರಿಷಿ ಸುನಾಕ್‌ ಸೇರಿದಂತೆ 13 ಬ್ರಿಟಿಷ್‌ ರಾಜಕಾರಣಿಗಳಿಗೆ ರಷ್ಯಾ ಪ್ರವೇಶ ನಿಷೇಧ

    ಬೋರಿಸ್ ಜಾನ್ಸನ್, ರಿಷಿ ಸುನಾಕ್‌ ಸೇರಿದಂತೆ 13 ಬ್ರಿಟಿಷ್‌ ರಾಜಕಾರಣಿಗಳಿಗೆ ರಷ್ಯಾ ಪ್ರವೇಶ ನಿಷೇಧ

    ಮಾಸ್ಕೋ: ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್, ರಿಷಿ ಸುನಾಕ್‌ ಸೇರಿದಂತೆ ಒಟ್ಟು 13 ಬ್ರಿಟಷ್ ಉನ್ನತ ಮಂತ್ರಿಗಳ ಪ್ರವೇಶಕ್ಕೆ ರಷ್ಯಾ ನಿಷೇಧ ಹೇರಿದೆ.

    ರಷ್ಯಾ ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧವನ್ನು ಬ್ರಿಟನ್ ವಿರೋಧಿಸಿದ್ದು, ಈ ಹಿನ್ನೆಲೆಯಲ್ಲಿ ಬೋರಿಸ್ ಜಾನ್ಸನ್ ಹಾಗೂ ಇತರ ಮಂತ್ರಿಗಳು ರಷ್ಯಾ ಪ್ರವೇಶಿಸದಂತೆ ಶನಿವಾರ ನಿಷೇಧ ಹೇರಿದೆ. ಇದನ್ನೂ ಓದಿ: ಇಮ್ರಾನ್ ಖಾನ್ ಆರೋಪವನ್ನು ತಳ್ಳಿ ಹಾಕಿದ ಪಾಕ್ ಸೇನೆ

    ರಷ್ಯಾ ಬೋರಿಸ್ ಜಾನ್ಸನ್‌ರೊಂದಿಗೆ ಭಾರತೀಯ ಮೂಲದ ಮಂತ್ರಿಗಳಾದ ರಿಷಿ ಸುನಾಕ್, ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಮತ್ತು ಅಟಾರ್ನಿ ಜನರಲ್ ಸುಯೆಲ್ಲಾ ಬ್ರೆವರ್ಮನ್‌ಗೆ ರಷ್ಯಾ ನಿಷೇಧ ಹೇರಿದೆ. ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್, ರಕ್ಷಣಾ ಕಾರ್ಯದರ್ಶಿ ಬೆನ್ ವ್ಯಾಲೇಸ್, ಕನ್ಸರ್ವೇಟಿವ್ ಸಂಸದ ಹಾಗೂ ಮಾಜಿ ಬ್ರಿಟಿಷ್ ಪ್ರಧಾನಿ ಥೆರೆಸಾ ಮೇ ಹೀಗೆ ಒಟ್ಟು 13 ಮಂತ್ರಿಗಳು ಮುಖ್ಯವಾಗಿ ಕ್ಯಾಬಿನೆಟ್ ಸದಸ್ಯರು ರಷ್ಯಾ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

    ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಿದ ಬಳಿಕ ಬ್ರಿಟನ್ ರಷ್ಯಾ ವಿರುದ್ಧ ನಿರ್ಬಂಧಗಳನ್ನು ಹೇರಿತ್ತು. ಇದಕ್ಕೆ ಪ್ರತಿಕಾರವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ರಷ್ಯಾ ತಿಳಿಸಿದೆ. ಇದನ್ನೂ ಓದಿ: ಜೆರುಸಲೇಮ್ ಮಸೀದಿಯಲ್ಲಿ ಹಿಂಸಾಚಾರ – 150ಕ್ಕೂ ಹೆಚ್ಚು ಮಂದಿಗೆ ಗಾಯ

    ಯುದ್ಧ ಪ್ರಾರಂಭವಾದ ಬಳಿಕ ಮಾರ್ಚ್‌ನಲ್ಲಿ ರಷ್ಯಾ ಅಮೆರಿಕ ಅಧ್ಯಕ್ಷ ಜೋ ಬೈಡನ್ ವಿರುದ್ಧವೂ ಇದೇ ರೀತಿಯ ನಿಷೇಧವನ್ನು ವಿಧಿಸಿತ್ತು. ವಾರದ ಆರಂಭದಲ್ಲಿ ಬ್ರಿಟನ್ ಹಾಗೂ ಅಮೆರಿಕ ಎರಡೂ ಮಾಸ್ಕೋ ಮೇಲೆ ಆರ್ಥಿಕತೆಯನ್ನು ಹಾನಿಮಾಡುವಂತಹ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಿದ್ದವು.

  • ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಔತಣಕೂಟ – ಬೋರಿಸ್ ಜಾನ್ಸನ್, ರಿಷಿ ಸುನಾಕ್ ಕ್ಷಮೆ

    ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಔತಣಕೂಟ – ಬೋರಿಸ್ ಜಾನ್ಸನ್, ರಿಷಿ ಸುನಾಕ್ ಕ್ಷಮೆ

    ಲಂಡನ್: ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಹಾಗೂ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅಳಿಯ, ಬ್ರಿಟನ್ನಿನ ಹಣಕಾಸು ಸಚಿವ ರಿಷಿ ಸುನಾಕ್ ಪಾರ್ಟಿಗೇಟ್ ಹಗರಣಕ್ಕೆ ಸಂಬಂಧ ಪಟ್ಟಂತೆ ಕ್ಷಮೆ ಯಾಚಿಸಿ, ದಂಡವನ್ನು ಭರಿಸಿದ್ದಾರೆ.

    2020ರ ಜೂನ್‌ನಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಬೋರಿಸ್ ಜಾನ್ಸನ್ ಅವರ ಹುಟ್ಟುಹಬ್ಬದಲ್ಲಿ ಭಾಗವಹಿಸಿದ ರಿಷಿ ಸುನಾಕ್ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ಗಿಫ್ಟ್‌ ಆಗಿ ಬಂದ ನೆಕ್ಲೆಸ್‌ನ್ನು 18 ಕೋಟಿಗೆ ಮಾರಿದ್ದಕ್ಕೆ ಇಮ್ರಾನ್‌ ಖಾನ್‌ ವಿರುದ್ಧ ತನಿಖೆ

    ಆರಂಭದಲ್ಲಿ ಯಾವುದೇ ಕಾನೂನುಗಳನ್ನು ಉಲ್ಲಂಘಿಸಿಲ್ಲ ಎಂದು ಹೇಳಿದ್ದ ಜಾನ್ಸನ್ ಬಳಿಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಈ ವೇಳೆ ಕ್ಷಮೆ ಯಾಚಿಸಿದ ಜಾನ್ಸನ್, ದಂಡವನ್ನು ಪಾವತಿಸಿರುವುದನ್ನು ದೃಢಪಡಿಸಿದ ಬಳಿಕ ರಿಷಿ ಸುನಾಕ್ ಕೂಡ ಕ್ಷಮೆ ಯಾಚಿಸಿದ್ದಾರೆ. ಇದನ್ನೂ ಓದಿ: ಪಾಕ್ ಸೇನಾ ಮುಖ್ಯಸ್ಥರಿಗೆ ಅವಮಾನ – ಇಮ್ರಾನ್ ಖಾನ್ ಸಾಮಾಜಿಕ ಮಾಧ್ಯಮ ತಂಡ ಅರೆಸ್ಟ್

    2020-21ರ ಅವಧಿಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ವೈಟ್‌ಹೌಸ್‌ನಲ್ಲಿರುವ ಡೌನಿಂಗ್ ಹಾಗೂ ಇತರ ಬ್ರಿಟನ್ನಿನ ಸರ್ಕಾರಿ ಕಚೇರಿಗಳಲ್ಲಿ ಸುಮಾರು 12 ಔತಣಕೂಟಗಳು ನಡೆದಿದೆ ಎಂದು ವರದಿಯಾಗಿತ್ತು. ಇದನ್ನು ಪಾರ್ಟಿಗೇಟ್ ಹಗರಣ ಎಂದು ಕರೆಯಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದರು.

  • ರಷ್ಯಾದ ಆಕ್ರಮಣ ಪ್ರತಿಭಟಿಸಲು ಕಚ್ಚಾ ತೈಲ, ಅನಿಲ ಖರೀದಿಯನ್ನು ನಿಲ್ಲಿಸಬೇಕು: ಇಂಗ್ಲೆಂಡ್ ಪ್ರಧಾನಿ

    ರಷ್ಯಾದ ಆಕ್ರಮಣ ಪ್ರತಿಭಟಿಸಲು ಕಚ್ಚಾ ತೈಲ, ಅನಿಲ ಖರೀದಿಯನ್ನು ನಿಲ್ಲಿಸಬೇಕು: ಇಂಗ್ಲೆಂಡ್ ಪ್ರಧಾನಿ

    ಲಂಡನ್: ಕಚ್ಚಾ ತೈಲ, ಅನಿಲಕ್ಕಾಗಿ ರಷ್ಯಾದ ಅವಲಂಬನೆಯಿಂದ ಹೊರಬರುವಂತೆ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ವಿಶ್ವಕ್ಕೆ ಕರೆ ನೀಡಿದ್ದಾರೆ.

    ಬೋರಿಸ್ ಜಾನ್ಸನ್, ಗಲ್ಫ್ ರಾಷ್ಟ್ರಗಳ ಪ್ರವಾಸದಲ್ಲಿದ್ದಾರೆ. ಈ ವೇಳೆ ಮಾತನಾಡಿ, ಉಕ್ರೇನ್ ಮೇಲಿನ ರಷ್ಯಾದ ಅತಿಕ್ರಮಣ ವಿರುದ್ಧ ಪ್ರತಿಭಟಿಸಲು ಅಲ್ಲಿನ ಕಚ್ಚಾ ತೈಲ, ಅನಿಲ ಖರೀದಿಯನ್ನು ನಿಲ್ಲಿಸಬೇಕು. ರಷ್ಯಾವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಕಟ್ಟಿಹಾಕುವ ಪ್ರಯತ್ನಕ್ಕೆ ಸೌದಿ ಅರೇಬಿಯಾ, ಯುಎಇ ರಾಷ್ಟ್ರಗಳು ಪ್ರಮುಖ ಭಾಗಿದಾರರು. ಈ ರಾಷ್ಟ್ರಗಳೊಂದಿಗೆ ಪ್ರಾದೇಶಿಕ ಭದ್ರತೆ, ಮಾನವೀಯ ಪರಿಹಾರ, ಜಾಗತಿಕ ಇಂಧನ ಮಾರುಕಟ್ಟೆ ನಿಯಂತ್ರಣದ ವಿಚಾರವಾಗಿ ಜೊತೆಯಾಗಿ ಕೆಲಸ ಮಾಡುತ್ತೇವೆ ಎಂದು ಜಾನ್ಸನ್ ಹೇಳಿದ್ದಾರೆ.  ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ: ಅಸ್ಸಾಂ ಸಿಎಂ

    ಅಬುಧಾಬಿ, ರಿಯಾದ್ ಮುಖಂಡರನ್ನು ಭೇಟಿ ಮಾಡಲಿರುವ ಜಾನ್ಸನ್ ಅವರು ಉಕ್ರೇನ್ ಸಂಘರ್ಷ ಸೇರಿದಂತೆ ಪ್ರಾದೇಶಿಕ ಭದ್ರತೆ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ. ರಷ್ಯಾ, ಉಕ್ರೇನ್ ಮೇಲೆ ನಡೆಸಿದ ದಾಳಿ ಪರಿಣಾಮ ಜಾಗತಿಕ ಇಂಧನ ಮತ್ತು ಆಹಾರ ಉತ್ಪನ್ನಗಳ ಬೆಲೆ ಏರಿಕೆಯನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ಮಾತುಕತೆ ನಡೆಸಲಿದ್ದಾರೆ.

  • ರಷ್ಯಾ ಯುದ್ಧ ಇಡೀ ಯೂರೋಪ್‌ ಭದ್ರತೆಗೆ ಪೆಟ್ಟು ನೀಡಿದೆ: ಬ್ರಿಟಿಷ್‌ ಪ್ರಧಾನಿ ಕಳವಳ

    ರಷ್ಯಾ ಯುದ್ಧ ಇಡೀ ಯೂರೋಪ್‌ ಭದ್ರತೆಗೆ ಪೆಟ್ಟು ನೀಡಿದೆ: ಬ್ರಿಟಿಷ್‌ ಪ್ರಧಾನಿ ಕಳವಳ

    ಲಂಡನ್‌: ಉಕ್ರೇನ್‌ ವಿರುದ್ಧದ ರಷ್ಯಾ ಅಜಾಗರೂಕ ಕಾರ್ಯಾಚರಣೆಯು ಇಡೀ ಯೂರೋಪ್‌ ಭದ್ರತೆಗೆ ಕೊಟ್ಟ ಹೊಡೆತವಾಗಿದೆ ಎಂದು ಬ್ರಿಟಿಷ್ ಪ್ರಧಾನಿ ಬೋರಿಸ್‌ ಜಾನ್ಸನ್‌ ಕಳವಳ ವ್ಯಕ್ತಪಡಿಸಿದ್ದಾರೆ.

    ರಷ್ಯಾದ ಪಡೆಗಳು ಉಕ್ರೇನಿಯನ್ ಪರಮಾಣು ವಿದ್ಯುತ್ ಸ್ಥಾವರವನ್ನು ಆಕ್ರಮಿಸಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಯುರೋಪಿನಾದ್ಯಂತ ಅಪಾಯವನ್ನುಂಟುಮಾಡುತ್ತಿದ್ದಾರೆ ಎಂದು ಬೋರಿಸ್ ಜಾನ್ಸನ್ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶ ರಾಕೆಟ್‌ನಿಂದ ಅಮೆರಿಕ, ಜಪಾನ್‌ ಧ್ವಜ ತೆಗೆದು ಭಾರತ ಧ್ವಜ ಉಳಿಸಿಕೊಂಡ ರಷ್ಯಾ- Video Viral

    ರಷ್ಯಾ ಅಧ್ಯಕ್ಷ ಪುಟಿನ್ ಅವರ ಅಜಾಗರೂಕ ಕ್ರಮಗಳು ಈಗ ನೇರವಾಗಿ ಯುರೋಪ್‌ನ ಸುರಕ್ಷತೆಗೆ ಬೆದರಿಕೆ ಹಾಕಬಹುದು. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತುರ್ತು ಸಭೆ ಅಗತ್ಯವಿದೆ ಎಂದು ಜಾನ್ಸನ್‌ ಆಶಯ ವ್ಯಕ್ತಪಡಿಸಿದ್ದಾರೆ.

    ನ್ಯಾಟೋ ಒಕ್ಕೂಟಕ್ಕೆ ಸೇರುವ ಉಕ್ರೇನ್‌ ನಿರ್ಧಾರವನ್ನು ವಿರೋಧಿಸಿ ಉಕ್ರೇನ್‌ ಮೇಲೆ ರಷ್ಯಾ ಯುದ್ಧವನ್ನು ನಡೆಸುತ್ತಿದೆ. ಆದರೆ ಯೂರೋಪ್‌ ರಾಷ್ಟ್ರಗಳು ರಷ್ಯಾ ಕ್ರಮವನ್ನು ಖಂಡಿಸಿವೆ. ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ, ಸಾಮಾನ್ಯ ಸಭೆಯಲ್ಲಿ ಬ್ರಿಟನ್‌ ಸೇರಿದಂತೆ 141 ರಾಷ್ಟ್ರಗಳು ರಷ್ಯಾ ವಿರುದ್ಧ ಮತ ಚಲಾಯಿಸಿವೆ. ಇದನ್ನೂ ಓದಿ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು- ಆಸ್ಪತ್ರೆಗೆ ದಾಖಲು

  • ಎರಡೂ ಡೋಸ್‌ ಲಸಿಕೆ ಪಡೆದ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಿಲ್ಲ: ಬ್ರಿಟನ್‌ ಪ್ರಧಾನಿ

    ಎರಡೂ ಡೋಸ್‌ ಲಸಿಕೆ ಪಡೆದ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಿಲ್ಲ: ಬ್ರಿಟನ್‌ ಪ್ರಧಾನಿ

    ಲಂಡನ್‌: ಹೊರ ದೇಶಗಳಿಂದ ಇಂಗ್ಲೆಂಡ್‌ಗೆ ಬರುವವರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯಗೊಳಿಸುವ ನಿಯಮವನ್ನು ತೆಗೆದು ಹಾಕಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಬೋರಿಸ್‌ ಜಾನ್ಸನ್‌ ತಿಳಿಸಿದ್ದಾರೆ.

    ಸೋಂಕು ಪ್ರಕರಣಗಳ ಸಂಖ್ಯೆ ಇಳಿಯುತ್ತಿದೆ. ಹೀಗಾಗಿ ಬೇರೆ ದೇಶಗಳಿಂದ ಬರುವವರಿಗೆ ಇರುವ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು. ಈ ವಿನಾಯಿತಿ ಸಂಪೂರ್ಣವಾಗಿ ಕೋವಿಡ್‌ ಲಸಿಕೆ ಪಡೆದವರಿಗೆ ಮಾತ್ರ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮುಂಬರುವ ವಾರಗಳಲ್ಲಿ ಓಮಿಕ್ರಾನ್ ಅಲೆ ತೀವ್ರಗೊಳ್ಳಬಹುದು ಎಂದ ತಜ್ಞರು!

    ಇಂಗ್ಲೆಂಡ್‌ ವ್ಯಾಪಾರ ಹಾಗೂ ಪ್ರಯಾಣಿಕರಿಗೆ ಮುಕ್ತವಾಗಿದೆ. ಆದ್ದರಿಂದ ಕೋವಿಡ್‌ ನಿರ್ಬಂಧಗಳನ್ನು ಸಡಿಲಗೊಳಿಸಲು ಸರ್ಕಾರ ನಿರ್ಧರಿಸಿದೆ. ಲಸಿಕೆ ಎರಡೂ ಡೋಸ್ ಪಡೆದವರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಲ್ಲ ಎಂದು ಹೇಳಿದ್ದಾರೆ. ‌

    ನಿರ್ಬಂಧ ಸಡಿಲಿಕೆ ದಿನಾಂಕವನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ಆದರೆ ಕೋವಿಡ್‌ ಲಸಿಕೆಯನ್ನು ಸಂಪೂರ್ಣವಾಗಿ ಪಡೆದವರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕ ನಿರ್ಣಾಯಕ ಹಂತದಲ್ಲಿದೆ: WHO ಮುಖ್ಯಸ್ಥ

    ಯೂರೋಪ್‌ನಲ್ಲಿ ಕೋವಿಡ್‌ ಹೊಡೆತಕ್ಕೆ ಹೆಚ್ಚು ತುತ್ತಾದ ದೇಶ ಇಂಗ್ಲೆಂಡ್‌. ಇಲ್ಲಿ ಈವರೆಗೆ ಸೋಂಕಿನಿಂದ 1,54,000 ಮಂದಿ ಸಾವಿಗೀಡಾಗಿದ್ದಾರೆ. ಆದರೆ ಈಚೆಗೆ ಇಂಗ್ಲೆಂಡ್‌ನಲ್ಲಿ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಆದ್ದರಿಂದ ನಿರ್ಬಂಧಗಳ ಸಡಿಲಿಕೆಗೆ ಸರ್ಕಾರ ಮುಂದಾಗಿದೆ.

    ನಿರ್ಬಂಧ ಸಡಿಲಿಕೆ ಬಗೆಗಿನ ಸರ್ಕಾರದ ನಿಲುವಿಗೆ ವಿರೋಧ ವ್ಯಕ್ತವಾಗಿದೆ. ನಿರ್ಬಂಧಗಳನ್ನು ಸಡಿಲಗೊಳಿಸಿದರೆ ಸೋಂಕು ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣಬಹುದು. ಇದರಿಂದ ಮತ್ತಷ್ಟು ಸಮಸ್ಯೆಯಾಗಬಹುದು ಅಭಿಪ್ರಾಯ ವ್ಯಕ್ತವಾಗಿದೆ.