Tag: ಬೋರಿಸ್ ಜಾನ್ಸನ್

  • ಇನ್ಫಿ ನಾರಾಯಣ ಮೂರ್ತಿ ಅಳಿಯ ಮುಂದಿನ ಬ್ರಿಟನ್ ಪ್ರಧಾನಿ?

    ಲಂಡನ್: ಬೋರಿಸ್ ಜಾನ್ಸನ್‌ ಪ್ರಧಾನಿ ಪಟ್ಟದಿಂದ ಕೆಳಗಿಳಿಯುವ ಎಲ್ಲಾ ಸಾಧ್ಯತೆಗಳಿದ್ದು, ಒಂದು ವೇಳೆ ಬೋರಿಸ್ ಜಾನ್ಸನ್  ಅಧಿಕಾರದಿಂದ ಕೆಳಗಿಳಿದರೆ ಮುಂದಿನ ಬ್ರಿಟನ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಾಕ್ ಪಟ್ಟವನ್ನು ಅಲಂಕರಿಸುವ ಸಾಧ್ಯತೆಯಿದೆ.

    ಕೋವಿಡ್ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಮದ್ಯದ ಪಾರ್ಟಿ ಮಾಡಿರುವ ವಿವಾದದಲ್ಲಿ ಸಿಲುಕಿರುವ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಸ್ವಪಕ್ಷದಲ್ಲೇ ರಾಜಿನಾಮೆ ನೀಡುವಂತೆ ಒತ್ತಡ ನಿರ್ಮಾಣವಾಗಿದೆ. 2020ರ ಮೇ ತಿಂಗಳಿನಲ್ಲಿ ಇಂತಹ ವಿವಾದಕ್ಕೆ ಸಿಲುಕಿದ್ದ ಪ್ರಧಾನಿ ಬಳಿಕವೂ 2021ರಲ್ಲಿ ಬ್ರಿಟನ್ ರಾಜಕುಮಾರ ಫಿಲಿಪ್ (ರಾಣಿ ಎಲಿಜಬೆತ್‍ರ ಪತಿ)ರ ಅಂತ್ಯಕ್ರಿಯೆಗೂ ಮುನ್ನ ಮದ್ಯದ ಪಾರ್ಟಿ ಮಾಡಿರುವುದಾಗಿ ಆರೋಪ ಈಗ ಕೇಳಿ ಬಂದಿದೆ. ಇದನ್ನೂ ಓದಿ: ಎಸ್‌ಪಿ ಕಚೇರಿಯಲ್ಲಿ ಕೋವಿಡ್‌ ರೂಲ್ಸ್‌ ಬ್ರೇಕ್‌ – 2,500 ಮಂದಿ ವಿರುದ್ಧ ಎಫ್‌ಐಆರ್‌

    ಸದ್ಯ ಬೋರಿಸ್ ಜಾನ್ಸನ್‌ಗೆ ಅಧಿಕಾರದಿಂದ ಕೆಳಗೆ ಇಳಿಯುವಂತೆ ಹಲವು ಕಡೆಗಳಿಂದ ಒತ್ತಡ ಇರುವಾಗ ಭಾರತೀಯ ರಿಷಿ ಸುನಾಕ್ ಮುಂದಿನ ಪ್ರಧಾನಿಯಾಗುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಮುಂದಿನ ಪ್ರಧಾನಿಯಾಗುವವರ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿ ರಿಷಿಯವರ ಹೆಸರು ಇದೆ ಎಂದು ವರದಿಯಾಗಿದೆ.

    ಯಾರು ಈ ರಿಷಿ ಸುನಾಕ್?
    41 ವರ್ಷದ ರಿಷಿ ಸುನಾಕ್ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ದಂಪತಿಯ ಅಳಿಯ. ಎನ್‍ಆರ್‍ಎನ್ ಅವರ ಪುತ್ರಿ ಅಕ್ಷತಾ ಮೂರ್ತಿಯವರನ್ನು ರಿಷಿ ವಿವಾಹವಾಗಿದ್ದಾರೆ. ಸದ್ಯ ಇವರು ಬ್ರಿಟನ್‍ನ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ಪ್ರಭಾವಿ ಮುಖಂಡರಾಗಿದ್ದಾರೆ. ಬ್ರಿಟನ್ ಸರ್ಕಾರದಲ್ಲಿ ಪ್ರಧಾನಿ ಬಿಟ್ಟರೆ ಅತ್ಯಂತ ಪ್ರಭಾವಿ ನಾಯಕ ಎಂದು ಹೇಳಲಾಗುತ್ತದೆ. ಇದನ್ನೂ ಓದಿ: ಟೆಸ್ಲಾ ಕಾರು ಬಗ್ಗೆ ಅಪ್‍ಡೇಟ್ – ಮಸ್ಕ್ ಒತ್ತಡ ತಂತ್ರಗಳಿಗೆ ಬಗ್ಗಲ್ಲ ಎಂದ ಕೇಂದ್ರ

    ರಿಷಿ ಸುನಾಕ್ ಒಂದುವೇಳೆ ಬ್ರಿಟನ್‍ನ ಪ್ರಧಾನಿಯಾದರೆ ಭಾರತೀಯ ಮೂಲದ ಮೊದಲ ಬ್ರಿಟನ್ ಪ್ರಧಾನಿ ಎಂಬ ಹೆಗ್ಗಳಿಕೆಯನ್ನೂ ಪಡೆಯಲಿದ್ದಾರೆ.

  • ಮೂರನೇ ಮದ್ವೆಯಾದ ಇಂಗ್ಲೆಂಡ್ ಪ್ರಧಾನಿ – ದಂಪತಿಗೆ ಇದ್ದಾನೆ 1 ವರ್ಷದ ಮಗ

    ಮೂರನೇ ಮದ್ವೆಯಾದ ಇಂಗ್ಲೆಂಡ್ ಪ್ರಧಾನಿ – ದಂಪತಿಗೆ ಇದ್ದಾನೆ 1 ವರ್ಷದ ಮಗ

    ಲಂಡನ್: ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಮೂರನೇ ಬಾರಿ ಮದುವೆಯಾಗಿದ್ದಾರೆ. ಪ್ರೇಯಸಿ ಕ್ಯಾರಿ ಸೈಮಂಡ್ಸ್ ಅವರನ್ನು ಶನಿವಾರ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದಾರೆ.

    ಕುಟುಂಬದವರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ರೋಮನ್ ಕ್ಯಾಥೋಲಿಕ್ ವೆಸ್ಟ್ ಮಿನಿಸ್ಟರ್ ಕ್ಯಾಥೆಡ್ರಲ್‍ನಲ್ಲಿ ಮದುವೆ ನಡೆದಿದೆ. ಇಂಗ್ಲೆಂಡಿನಲ್ಲಿ ಸದ್ಯ ಕೋವಿಡ್ ನಿರ್ಬಂಧಗಳು  ಜಾರಿಯಲ್ಲಿರುವ ಕಾರಣ 30 ಜನರಿಗೆ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು.

     

     

    ಕೇಂದ್ರ ಲಂಡನ್‍ನಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಕೊನೆಯ ಕ್ಷಣಗಳಲ್ಲಿ ಅತಿಥಿಗಳಿಗೆ ಆಹ್ವಾನ ನೀಡಲಾಗಿತ್ತು. ಪ್ರಧಾನಿ ಕಚೇರಿಯ ಹಿರಿಯ ಅಧಿಕಾರಿಗಳಿಗೂ ಈ ಮದುವೆ ಬಗ್ಗೆ ಮಾಹಿತಿ ಇರಲಿಲ್ಲ ಎಂದು ವರದಿಯಾಗಿದೆ.

    56 ವರ್ಷದ ಜಾನ್ಸನ್ ಮತ್ತು 33 ವರ್ಷ ಸೈಮಂಡ್ಸ್ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇವರಿಗೆ 1 ವರ್ಷದ ಮಗ ಇದ್ದಾನೆ. ಇದನ್ನೂ ಓದಿ:ಮದುವೆ ಆಗಿಲ್ಲ ಅಂತ ವಿಷ ಸೇವಿಸಿ ಯುವಕ ಆತ್ಮಹತ್ಯೆ

     

    2019ರಲ್ಲಿ ಜಾನ್ಸನ್ ಪ್ರಧಾನಿಯಾದ ಸಂದರ್ಭದಿಂದಲೂ ಇಬ್ಬರೂ ಲಿವ್ ಇನ್ ಟುಗೆದರ್ ನಲ್ಲಿ ವಾಸಿಸುತ್ತಿದ್ದಾರೆ. ಕಳೆದ ವರ್ಷ ಇಬ್ಬರೂ ತಾವು ನಿಶ್ಚಿತಾರ್ಥ ಮಾಡಿಕೊಂಡಿದ್ದಾಗಿ ಹಾಗೂ ಮಗುವಿನ ನಿರೀಕ್ಷೆಯಲ್ಲಿ ಇರುವುದಾಗಿ ಘೋಷಿಸಿದ್ದರು. 2020ರ ಏಪ್ರಿಲ್‍ನಲ್ಲಿ ಮಗ ಜನಿಸಿದ್ದ.

    ಬೋರಿಸ್ ಜಾನ್ಸನ್ ಅವರ ಖಾಸಗಿ ಜೀವನದ ಬಗ್ಗೆ ವಿರೋಧ ಪಕ್ಷ ಮತ್ತು ಮಾಧ್ಯಮಗಳು ಟೀಕೆ ಮಾಡಿದ್ದವು. ತಮ್ಮ ವಿವಾಹೇತರ ಸಂಬಂಧದ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಆಗ ವಿರೋಧಪಕ್ಷ ಕನ್ಸರ್ವೇಟಿವ್ ಪಾರ್ಟಿಯ ನೀತಿ ತಂಡದಿಂದ ಅವರನ್ನು ತೆಗೆದುಹಾಕಲಾಗಿತ್ತು. ಎರಡು ಬಾರಿ ವಿಚ್ಚೇದನ ಪಡೆದಿರುವ ಜಾನ್ಸನ್, ತಮಗೆ ಎಷ್ಟು ಮಕ್ಕಳಿದ್ದಾರೆ ಎಂಬ ಮಾಹಿತಿ ನೀಡಲು ನಿರಾಕರಿಸಿದ್ದರು.

    ಈ ಮೊದಲು ಅಲ್ಲೆಗ್ರಾ ಮೊಸ್ಟಿನ್ ಅವರ ಜೊತೆ ವಿವಾಹನ ನಡೆದಿತ್ತು. 1993ರಲ್ಲಿ ಬೋರಿಸ್ ಇವರಿಗೆ ವಿಚ್ಚೇದನ ನೀಡಿದ್ದರು. ನಂತರ ವಕೀಲೆ ಮರೀನಾ ವ್ಹೀಲರ್ ಅವರೊಂದಿಗೆ ನಡೆದಿತ್ತು. 2018ರ ಸೆಪ್ಟೆಂಬರ್ ನಲ್ಲಿ  ಇಬ್ಬರೂ ಬೇರೆಯಾಗಿದ್ದಾಗಿ ಪ್ರಕಟಿಸಿದ್ದರೂ 2020ರಲ್ಲಿ ವಿಚ್ಚೇದನ ಪ್ರಕ್ರಿಯೆ ಪೂರ್ಣಗೊಂಡಿತ್ತು. ಇವರಿಬ್ಬರಿಗೂ 4 ಮಂದಿ ಮಕ್ಕಳಿದ್ದಾರೆ.

  • ಕೊರೊನಾ ತಲ್ಲಣ – ಭಾರತದ ಪ್ರವಾಸ ರದ್ದುಗೊಳಿಸಿದ ಯುಕೆ ಪಿಎಂ ಬೋರಿಸ್ ಜಾನ್ಸನ್

    ಕೊರೊನಾ ತಲ್ಲಣ – ಭಾರತದ ಪ್ರವಾಸ ರದ್ದುಗೊಳಿಸಿದ ಯುಕೆ ಪಿಎಂ ಬೋರಿಸ್ ಜಾನ್ಸನ್

    ನವದೆಹಲಿ: ದೇಶದಲ್ಲಿ ಕೊರೊನಾ ಸ್ಫೋಟ ಹಿನ್ನೆಲೆ ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಏಪ್ರಿಲ್ 25ರಂದು ಬೋರಿಸ್ ಜಾನ್ಸನ್ ಭಾರತಕ್ಕೆ ಬರುವ ಸಮಯ ನಿಗದಿಯಾಗಿತ್ತು. ಮುಂದಿನ ದಿನಗಳಲ್ಲಿ ಮತ್ತೆ ಸಮಯ ನಿಗದಿಗೊಳಿಸೋದಾಗಿ ಇಂಗ್ಲೆಂಡ್ ಪ್ರಧಾನಿಗಳ ಕಚೇರಿ ಸ್ಪಷ್ಟನೆ ನೀಡಿದೆ.

    ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಎರಡು ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದು, ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತದ ಪ್ರವಾಸ ರದ್ದುಗೊಳಿಸಬೇಕೆಂದು ಇಂಗ್ಲೆಂಡ್ ವಿಪಕ್ಷಗಳು ಆಗ್ರಹಿಸಿದ್ದವು.

    ಜಾನ್ಸನ್ ಅವರು ಆನ್‍ಲೈನ್ ಮೂಲಕ ಭಾರತದ ಪಿಎಂ ನರೇಂದ್ರ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಬಹುದು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರವಾಸ ಕೈಗೊಳ್ಳುವುದು ಸೂಕ್ತವಲ್ಲ ಎಂದು ಲೇಬರ್ ಪಾರ್ಟಿ ಪ್ರಧಾನಿಗಳಿಗೆ ಸಲಹೆ ನೀಡಿತ್ತು.

    ಇಂತಹ ಸಂದರ್ಭದಲ್ಲಿ ಪಿಎಂ ಜಾನ್ಸನ್ ಮಾದರಿಯಾಗಿರಬೇಕು. ಭಾರತ ಪ್ರವಾಸದಿಂದ ದೇಶದ ಜನತೆಗೆ ತಪ್ಪು ಸಂದೇಶ ರವಾನೆ ಆಗುವ ಸಾಧ್ಯತೆಗಳಿವೆ. ಈ ಪ್ರವಾಸವನ್ನ ಸದ್ಯದ ಮಟ್ಟಿಗೆ ಮುಂದೂಡುವುದು ಉತ್ತಮ. ಭಾರತಕ್ಕೆ ಹೋಗುವ ಬದಲು ಝೂಮ್ ನಲ್ಲಿ ಸಭೆ ನಡೆಸಿ ಎಂದು ಲೇಬರ್ ಪಾರ್ಟಿಯ ಶೈಡೋ ಕಮ್ಯೂನಿಟಿ ಸೆಕ್ರಟರಿ ಸ್ವೀವ್ ರೀಡ್ ಆಗ್ರಹಿಸಿದ್ದರು.

    ಇದಕ್ಕೂ ಮೊದಲು ಜನವರಿ 26ಕ್ಕೆ ಜಾನ್ಸನ್ ಅವರ ಭಾರತದ ಪ್ರವಾಸ ನಿಗದಿಯಾಗಿತ್ತು. ಅದು ಸಹ ಕಾರಣಾಂತರಗಳಿಂದ ರದ್ದುಗೊಂಡಿತ್ತು. ಇದೀಗ ಎರಡನೇ ಬಾರಿ ಪ್ರವಾಸ ರದ್ದಾಗಿದೆ. 2019ರ ಬ್ರಿಟನ್ ಚುನಾವಣೆ ಬಳಿಕ ಜಾನ್ಸನ್ ಅವರ ಮೊದಲ ಅತಿ ಸುದೀರ್ಘ ವಿದೇಶ ಪ್ರವಾಸ ಇದಾಗಿತ್ತು.

  • ಭಾರತದ ಕಂಪನಿಯ ಸೈಕಲ್ ಏರಿ ಆರೋಗ್ಯ ಅಭಿಯಾನಕ್ಕೆ ಯುಕೆ ಪಿಎಂ ಚಾಲನೆ

    ಭಾರತದ ಕಂಪನಿಯ ಸೈಕಲ್ ಏರಿ ಆರೋಗ್ಯ ಅಭಿಯಾನಕ್ಕೆ ಯುಕೆ ಪಿಎಂ ಚಾಲನೆ

    ಲಂಡನ್: ಭಾರತದ ಪ್ರಸಿದ್ಧ ಹೀರೋ ಕಂಪನಿಯ ಸೈಕಲ್ ಓಡಿಸಿ ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರು, ಸರ್ಕಾರದ ಆರೋಗ್ಯ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

    ಇಡೀ ವಿಶ್ವಕ್ಕೆ ಕೊರೊನಾ ವೈರಸ್ ಮಾರಕವಾಗಿದ್ದು, ಇಂಗ್ಲೆಂಡ್‌ನಲ್ಲೂ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಕಳೆದ ಮೂರು ತಿಂಗಳ ಹಿಂದೆ ಪಿಎಂ ಬೋರಿಸ್ ಜಾನ್ಸನ್ ಅವರಿಗೂ ಕೊರೊನಾ ವೈರಸ್ ತಗಲಿತ್ತು. ಇದಕ್ಕಾಗಿ ಅವರು ಸೈಕಲ್ ಮತ್ತು ವಾಕಿಂಗ್ ಅಭಿಯಾನಕ್ಕೆ ದೇಶದಲ್ಲಿ ಚಾಲನೆ ನೀಡಿದ್ದಾರೆ. ಈ ವೇಳೆ ಮೇಡ್ ಇನ್ ಇಂಡಿಯಾ ಹೀರೋ ಸೈಕಲ್ ಓಡಿಸಿದ್ದಾರೆ.

    ಎರಡು ಶತಕೋಟಿ ಪೌಂಡ್ ಮೊತ್ತದ ಅಭಿಯಾನಕ್ಕೆ ಮಂಗಳವಾರ ಬೋರಿಸ್ ಜಾನ್ಸನ್ ಅವರು ಚಾಲನೆ ನೀಡಿದ್ದಾರೆ. ಸೈಕಲ್ ಮತ್ತು ಸಾಮಾಜಿಕ ಅಂತರದ ವಾಕಿಂಗ್ ಮಾಡುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡು ಕೊರೊನಾ ವಿರುದ್ಧ ಹೋರಾಡುವುದು ಇದರ ಉದ್ದೇಶವಾಗಿದೆ. ಈ ಅಭಿಯಾನಕ್ಕೆ ಚಾಲನೆ ನೀಡುವ ವೇಳೆ ಬೋರಿಸ್ ಜಾನ್ಸನ್ ಅವರು ಹೀರೋ ಕಂಪನಿ ನಿರ್ಮಾಣ ಮಾಡಿದ ವೈಕಿಂಗ್ ಪ್ರೋ ಎಂಬ ಸೈಕಲ್ ಅನ್ನು ಚಲಿಸಿಕೊಂಡು ನಾಟಿಂಗ್‍ಹ್ಯಾಮ್‍ನ ಬೀಸ್ಟನ್‍ನಲ್ಲಿರೋ ಹೆರಿಟೇಜ್ ಸೆಂಟರ್ ಗೆ ಹೋಗಿದ್ದಾರೆ.

    ಈ ವೇಳೆ ಮಾತನಾಡಿರುವ ಜಾನ್ಸನ್ ಅವರು, ಸೈಕಲ್ ಮತ್ತು ವಾಕಿಂಗ್ ಮಾಡುವುದರಿಂದ ಜನರು ಫಿಟ್ ಆಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಇದರ ಜೊತೆಗೆ ನಮ್ಮಲ್ಲಿ ವಾಹನ ಸಂಚಾರ ಜಾಸ್ತಿಯಾಗಿರುವ ಕಾರಣ ಅದು ಪರಿಸರದ ಮೇಲು ಪರಿಣಾಮ ಬೀರಿದೆ. ಇದರಿಂದ ಜನರಿಗೆ ಹಲವಾರು ತೊಂದರೆಗಳು ಆಗುತ್ತಿವೆ. ಈಗ ಜನರು ಹೆಚ್ಚು ಸೈಕಲ್ ಮತ್ತು ವಾಕಿಂಗ್ ಮಾಡುವುದರಿಂದ ಪರಿಸರಕ್ಕೂ ಉಪಯೋಗವಾಗಲಿದೆ ಮತ್ತು ಆರೋಗ್ಯವಾಗಿ ಇರಲು ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.

    ಕಳೆದ ಮಾರ್ಚ್‍ನಲ್ಲಿ ಬೋರಿಸ್ ಜಾನ್ಸನ್ ಅವರಿಗೂ ಕೊರೊನಾ ವೈರಸ್ ತಗುಲಿತ್ತು. ಬೋರಿಸ್ ಜಾನ್ಸನ್ ಅವರಿಗೆ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ವೈರಸ್ ನ ಗುಣಲಕ್ಷಣಗಳು ಕಂಡು ಬಂದಿದ್ದವು. ಇದಾದ ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿತ್ತು. ಇದರಿಂದ ಭಯಪಡುವ ಅಗತ್ಯವಿಲ್ಲ. ನಾನು ಮನೆಯಲ್ಲೇ ಕುಳಿತು ತಂತ್ರಜ್ಞಾನ ಬಳಸಿ ಸರ್ಕಾರ ನಡೆಸುತ್ತೇನೆ. ನಾವು ಕೊರೊನಾ ವಿರುದ್ಧ ಹೊರಾಡೋಣ ಎಂದು ಬೋರಿಸ್ ಜಾನ್ಸನ್ ಟ್ವೀಟ್ ಮಾಡಿದ್ದರು. ಇದನ್ನು ಓದಿ: ತನ್ನ ಮಗುವಿಗೆ ವೈದ್ಯರ ಹೆಸರಿಟ್ಟ ಯುಕೆ ಪ್ರಧಾನ ಮಂತ್ರಿ 

    ಬೋರಿಸ್ ಜಾನ್ಸನ್ ಅವರು ಮಂಗಳವಾರ ರೈಡ್ ಮಾಡಿದ ಹೀರೋ ಕಂಪನಿಯ ವೈಕಿಂಗ್ ಪ್ರೊ ಸೈಕಲ್ ಭಾರತದ ಹೀರೋ ಮೋಟಾರ್ಸ್ ಕಂಪನಿಯ ಒಡೆತನದ ಇನ್ಸಿಂಕ್ ಬ್ರಾಂಡ್‍ನ ಒಂದು ಭಾಗವಾಗಿದೆ. ಈ ಬ್ರಾಂಡ್ ಅನ್ನು ಇಂಗ್ಲೆಂಡ್‍ನ ಮ್ಯಾಂಚೆಸ್ಟರ್ ನಲ್ಲಿ ಡಿಸೈನ್ ಮಾಡಲಾಗುತ್ತದೆ. ಹೀರೋ ಸೈಕಲ್ಸ್ ವೈಕಿಂಗ್, ರಿಡ್ಡಿಕ್ ಮತ್ತು ರೈಡೇಲ್ ಬ್ರಾಂಡ್‍ಗಳನ್ನು ಇನ್ಸಿಂಕ್ ಎಂಬ ಬ್ರಾಂಡ್ ಹೆಸರಿನಲ್ಲಿ ಇಂಗ್ಲೆಂಡ್‍ನಲ್ಲಿ ಮಾರಾಟ ಮಾಡುತ್ತದೆ.

  • ತನ್ನ ಮಗುವಿಗೆ ವೈದ್ಯರ ಹೆಸರಿಟ್ಟ ಯುಕೆ ಪ್ರಧಾನ ಮಂತ್ರಿ

    ತನ್ನ ಮಗುವಿಗೆ ವೈದ್ಯರ ಹೆಸರಿಟ್ಟ ಯುಕೆ ಪ್ರಧಾನ ಮಂತ್ರಿ

    ಲಂಡನ್: ಕಳೆದ ಬುಧವಾರ ಜನಿಸಿದ ತನ್ನ ಗಂಡು ಮಗುವಿಗೆ ಯುಕೆ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರು ವೈದ್ಯರ ಹೆಸರನ್ನು ಇಟ್ಟಿದ್ದಾರೆ.

    ಇತ್ತೀಚೆಗೆ ಬೋರಿಸ್ ಜಾನ್ಸನ್ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಈ ವೇಳೆ ಅವರಿಗೆ ಚಿಕತ್ಸೆ ನೀಡಿದ ಇಬ್ಬರು ವೈದ್ಯರ ಹೆಸರನ್ನು ತನ್ನ ಮಗುವಿಗೆ ಇಟ್ಟಿದ್ದಾರೆ. ಈ ಮೂಲಕ ತನ್ನ ಜೀವ ಉಳಿಸಿದ ಮತ್ತು ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಿದ್ದಾರೆ.

    ಬುಧವಾರ ಬೋರಿಸ್ ಜಾನ್ಸನ್ ಮತ್ತು ಕ್ಯಾರಿ ಸೈಮಂಡ್ಸ್ ದಂಪತಿಗೆ ಗಂಡು ಮಗು ಜನಿಸಿದೆ. ಈ ವಿಚಾರವಾಗಿ ಶನಿವಾರ ತಮ್ಮ ಇನ್‍ಸ್ಟಗ್ರಾಮ್‍ನಲ್ಲಿ ಮಗು ಜೊತೆಗಿನ ಫೋಟೋವನ್ನು ಹಂಚಿಕೊಂಡಿರುವ ಕ್ಯಾರಿ ಸೈಮಂಡ್ಸ್, ನನ್ನ ಮಗುವಿಗೆ ವಿಲ್ಫ್ರೆಡ್ ಲಾರಿ ನಿಕೋಲಸ್ ಜಾನ್ಸನ್ ಎಂದು ಹೆಸರಡಿಲಾಗಿದೆ. ವಿಲ್ಫ್ರೆಡ್ ಬೋರಿಸ್ ಅವರ ತಾತನ ಹೆಸರು, ಲಾರಿ ನನ್ನ ತಾತನ ಹೆಸರು, ನಿಕೋಲಸ್ ಎಂಬುದು ಕೊರೊನಾದಿಂದ ಬೋರಿಸ್ ಅನ್ನು ಗುಣಪಡಿಸಿದ ವೈದ್ಯರ ಹೆಸರು ಎಂದು ತಿಳಿಸಿದ್ದಾರೆ.

    ಕೊರೊನಾ ಸೋಂಕಿಗೆ ತುತ್ತಾಗಿದ್ದ ಬೋರಿಸ್ ಜಾನ್ಸನ್ ಅವರಿಗೆ ವೈದ್ಯರಾದ ನಿಕೋಲಸ್ ಪ್ರೈಸ್ ಮತ್ತು ನಿಕೋಲಸ್ ಹಾರ್ಟ್ ಚಿಕಿತ್ಸೆ ನೀಡಿದ್ದರು. ಇವರಿಗೆ ಗೌರವ ಸೂಚಿಸಲು ಅವರ ಮಗನ ಹೆಸರಿನಲ್ಲಿ ನಿಕೋಲಸ್ ಎಂದು ಬಳಸಲಾಗಿದೆ. ಜೊತೆಗೆ ಕ್ಯಾರಿ ಸೈಮಂಡ್ಸ್ ತನ್ನ ಗಂಡನ ಪ್ರಾಣವನ್ನು ಉಳಿಸಿದ ವೈದ್ಯರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಮಗು ಹುಟ್ಟುವುದಕ್ಕಿಂತ ಒಂದು ವಾರದ ಹಿಂದೆಯಷ್ಟೇ ಬೋರಿಸ್ ಗುಣಮುಖರಾಗಿ ಆಸ್ಪತ್ರೆಗೆಯಿಂದ ಡಿಸ್ಚಾರ್ಜ್ ಆಗಿದ್ದರು.

    ಈ ವಿಚಾರವಾಗಿ ಮಾತನಾಡಿರುವ ವೈದ್ಯರು, ಚಿಕಿತ್ಸೆ ನೀಡಿದಕ್ಕೆ, ನಮ್ಮ ಪ್ರಧಾನಿಗಳು ನಮಗೆ ಈ ರೀತಿಯ ಗೌರವ ಸಲ್ಲಿಸಿದ್ದಕ್ಕೆ ಹೆಮ್ಮೆ ಇದೆ. ಅವರ ಕುಟುಂಬದ ಮುಂದಿನ ಜೀವನ ಚೆನ್ನಾಗಿರಲಿ. ನಾವು ಈ ಗೌರವವನ್ನು ನಮ್ಮ ಆಸ್ಪತ್ರೆ ಸಿಬ್ಬಂದಿಗೆ ಅರ್ಪಣೆ ಮಾಡುತ್ತೇವೆ. ಜೊತೆಗೆ ಪ್ರಧಾನಿ ಬೋರಿಸ್ ಅವರು ತಮ್ಮ ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ತಿಳಿಸಿದ್ದಾರೆ.

    ಮಾರ್ಚ್ 27ರಂದು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಮೊದಲಿಗೆ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ವೈರಸ್ ನ ಗುಣಲಕ್ಷಣಗಳು ಕಂಡು ಬಂದಿದ್ದವು. ಇದಾದ ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ, ಈ ವೇಳೆ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿತ್ತು. ಇದರಿಂದ ಭಯಪಡುವ ಅಗತ್ಯವಿಲ್ಲ. ನಾನು ಮನೆಯಲ್ಲೇ ಕುಳಿತು ತಂತ್ರಜ್ಞಾನ ಬಳಸಿ ಸರ್ಕಾರ ನಡೆಸುತ್ತೇನೆ. ನಾವು ಕೊರೊನಾ ವಿರುದ್ಧ ಹೊರಾಡೋಣ ಎಂದು ಬೋರಿಸ್ ಜಾನ್ಸನ್ ಟ್ವೀಟ್ ಮಾಡಿದ್ದರು.

  • ತನಗೆ ಕೊರೊನಾ ಬಂದಿದ್ದು ಹೇಗೆ ಅನ್ನೋದನ್ನು ತಿಳಿಸಿದ ಇಂಗ್ಲೆಂಡ್ ಪ್ರಧಾನಿ

    ತನಗೆ ಕೊರೊನಾ ಬಂದಿದ್ದು ಹೇಗೆ ಅನ್ನೋದನ್ನು ತಿಳಿಸಿದ ಇಂಗ್ಲೆಂಡ್ ಪ್ರಧಾನಿ

    ಲಂಡನ್: ಇಂಗ್ಲೆಂಡ್‍ನ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ತನಗೆ ಸೋಂಕು ಹೇಗೆ ಬಂದಿರಬಹುದು ಎನ್ನುವುದನ್ನು ಈಗ ತಿಳಿಸಿದ್ದಾರೆ.

    ಕೆಲ ದಿನಗಳ ಹಿಂದೆ ನಾನು ಆಸ್ಪತ್ರೆಗೆ ಭೇಟಿ ನೀಡಿದ್ದೆ. ಈ ವೇಳೆ ಅಲ್ಲಿ ಕೊರೊನಾ ವೈರಸ್ ರೋಗಿಗಳು ಇದ್ದರು. ಅಲ್ಲಿದ್ದ ಎಲ್ಲ ಮಂದಿಗೆ ಶೇಕ್ ಹ್ಯಾಂಡ್ ಮಾಡಿದ್ದೆ. ಇದರಿಂದಾಗಿ ನನಗೆ ವೈರಸ್ ಬಂದಿರಬಹುದು ಎಂದು ಹೇಳಿದ್ದಾರೆ.

    ಬೋರಿಸ್ ಜಾನ್ಸನ್ ಅವರಿಗೆ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಗುಣಲಕ್ಷಣಗಳು ಕಂಡು ಬಂದಿದ್ದವು. ಇದಾದ ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಇದರಿಂದ ಭಯಪಡುವ ಅಗತ್ಯವಿಲ್ಲ. ನಾನು ಮನೆಯಲ್ಲೇ ಕುಳಿತು ತಂತ್ರಜ್ಞಾನ ಬಳಸಿ ಸರ್ಕಾರ ನಡೆಸುತ್ತೇನೆ. ನಾವು ಕೊರೊನಾ ವಿರುದ್ಧ ಹೊರಾಡೋಣ ಎಂದು ಬೋರಿಸ್ ಜಾನ್ಸನ್ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡಿರುವ ಬೋರಿಸ್ ಜಾನ್ಸನ್, ನನಗೆ ಸ್ವಲ್ಪ ಪ್ರಮಾಣದಲ್ಲಿ ಕೆಮ್ಮು ಮತ್ತು ದೇಹದ ಉಷ್ಣಾಂಶ ಜಾಸ್ತಿ ಇತ್ತು. ಆಗ ನಾನು ವೈದ್ಯರನ್ನು ಭೇಟಿ ಮಾಡಿ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ನನಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ನಾನು ಮನೆಯಲ್ಲೇ ಪ್ರತ್ಯೇಕವಾಗಿ ಇದ್ದೇನೆ. ಜೊತೆಗೆ ತಂತ್ರಜ್ಞಾನ ಬಳಸಿ ವಿಡಿಯೋ ಕಾಲ್ ಮೂಲಕ ಸರ್ಕಾರ ನಡೆಸುತ್ತಿದ್ದೇನೆ. ನಾವು ಕೊರೊನಾ ವೈರಸ್ ವಿರುದ್ಧ ಹೊರಾಡೋಣ. ಆದಷ್ಟೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.

    ಇಂಗ್ಲೆಂಡಿನಲ್ಲಿ 14,590 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 760 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 13,690 ಪೀಡಿತರಿದ್ದು, 140 ಮಂದಿ ಗುಣಮುಖರಾಗಿದ್ದಾರೆ.

  • ಯುಕೆ ಪ್ರಧಾನಿಗೆ ಕೊರೊನಾ ಪಾಸಿಟಿವ್- ವಿಡಿಯೋ ಕಾಲ್‍ನಲ್ಲಿ ಸರ್ಕಾರ ಚಾಲನೆ

    ಯುಕೆ ಪ್ರಧಾನಿಗೆ ಕೊರೊನಾ ಪಾಸಿಟಿವ್- ವಿಡಿಯೋ ಕಾಲ್‍ನಲ್ಲಿ ಸರ್ಕಾರ ಚಾಲನೆ

    ಲಂಡನ್: ಕೊರೊನಾ ಮಹಾಮಾರಿ ಯಾರನ್ನು ಬಿಡುವಂತೆ ಕಾಣುತ್ತಿಲ್ಲ. ಈಗ ಇಂಗ್ಲೆಂಡ್‍ನ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು, ಅವರೇ ಪ್ರತ್ಯೇಕವಾಗಿ ಇರಲು ಆರಂಭಿಸಿದ್ದಾರೆ.

    ಕೊರೊನಾ ಮಹಾಮಾರಿ ಇಡೀ ವಿಶ್ವವನ್ನೇ ತಲ್ಲಣಗೊಳಿಸುತ್ತಿದೆ. ಈ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ವಿಶ್ವದ ಅನೇಕ ನಗರಗಳು ಲಾಕ್‍ಡೌನ್ ಆಗಿದೆ. ಈಗ ಇಂಗ್ಲೆಂಡ್‍ನ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಕೂಡ ಈ ಮಹಾಮಾರಿ ಸೋಂಕಿಗೆ ತುತ್ತಾಗಿದ್ದು, ಮನೆಯಲ್ಲೇ ಕುಳಿತು ವಿಡಿಯೋ ಕಾಲ್ ಮೂಲಕ ಸರ್ಕಾರ ನಡೆಸುತ್ತಿದ್ದಾರೆ.

    ಬೋರಿಸ್ ಜಾನ್ಸನ್ ಅವರಿಗೆ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ವೈರಸ್ ನ ಗುಣಲಕ್ಷಣಗಳು ಕಂಡು ಬಂದಿದ್ದವು. ಇದಾದ ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ, ಈ ವೇಳೆ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಇದರಿಂದ ಭಯಪಡುವ ಅಗತ್ಯವಿಲ್ಲ. ನಾನು ಮನೆಯಲ್ಲೇ ಕುಳಿತು ತಂತ್ರಜ್ಞಾನ ಬಳಸಿ ಸರ್ಕಾರ ನಡೆಸುತ್ತೇನೆ. ನಾವು ಕೊರೊನಾ ವಿರುದ್ಧ ಹೊರಾಡೋಣ ಎಂದು ಬೋರಿಸ್ ಜಾನ್ಸನ್ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಬೋರಿಸ್ ಜಾನ್ಸನ್, ನನಗೆ ಸ್ವಲ್ಪ ಪ್ರಮಾಣದಲ್ಲಿ ಕೆಮ್ಮು ಮತ್ತು ದೇಹದ ಉಷ್ಣಾಂಶ ಜಾಸ್ತಿ ಇತ್ತು. ಆಗ ನಾನು ವೈದ್ಯರನ್ನು ಭೇಟಿ ಮಾಡಿ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ನನಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ನಾನು ಮನೆಯಲ್ಲೇ ಪ್ರತ್ಯೇಕವಾಗಿ ಇದ್ದೇನೆ. ಜೊತೆಗೆ ತಂತ್ರಜ್ಞಾನ ಬಳಸಿ ವಿಡಿಯೋ ಕಾಲ್ ಮೂಲಕ ಸರ್ಕಾರ ನಡೆಸುತ್ತಿದ್ದೇನೆ. ನಾವು ಕೊರೊನಾ ವೈರಸ್ ವಿರುದ್ಧ ಹೊರಾಡೋಣ. ಆದಷ್ಟೂ ಮನೆಯಲ್ಲೇ ಇರಿ ಎಂದು ತಿಳಿಸಿದ್ದಾರೆ.

    ಮೊದಲಿಗೆ ಚೀನಾದಲ್ಲಿ ಕಾಣಿಸಿಕೊಂಡ ಈ ಕೊರೊನಾ ವೈರಸ್ ಇಂದು ವಿಶ್ವದ್ಯಾಂತ ಹರಡಿದೆ. ಈಗ ಈ ಕೊರೊನಾ ವೈರಸ್‍ಗೆ ವಿಶ್ವದಲ್ಲಿ 20,000 ಜನರು ಸಾವನ್ನಪ್ಪಿದ್ದರೆ, 5 ಲಕ್ಷ ಜನರು ಈ ಸೋಂಕಿಗೆ ತುತ್ತಾಗಿದ್ದಾರೆ. ಭಾರತದಲ್ಲಿ 20 ಜನರು ಸಾವನ್ನಪ್ಪಿದ್ದರೆ, ಸುಮಾರು 761 ಜನರು ಈ ಸೋಂಕಿನಿಂದ ಬಳಲುತ್ತಿದ್ದಾರೆ.

  • ಮೋದಿ ರಾಜಕೀಯ ಅದ್ಭುತ, ಫೈರ್ ಕ್ರ್ಯಾಕರ್: ಬ್ರಿಟಿಷ್ ಸಂಸದ

    ಮೋದಿ ರಾಜಕೀಯ ಅದ್ಭುತ, ಫೈರ್ ಕ್ರ್ಯಾಕರ್: ಬ್ರಿಟಿಷ್ ಸಂಸದ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಅದ್ಭುತ ಹಾಗೂ ಫೈರ್ ಕ್ರ್ಯಾಕರ್ ಎಂದು ಬ್ರಿಟಿಷ್ ಸಂಸದ ಬೋರಿಸ್ ಜಾನ್ಸನ್ ಹೇಳಿದ್ದಾರೆ.

    ನವದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ನಾನು ಮೆಚ್ಚಿದ್ದೇನೆ. ಹೀಗಾಗಿ ಅವರು ಮತ್ತೆ ಪ್ರಧಾನಿಯಾಗುವ ಅವಕಾಶ ಹೊಂದಿದ್ದಾರೆಂದು ಈ ಹಿಂದೆಯೇ ಹೇಳಿದ್ದೆ ಎಂದು ಬೋರಿಸ್ ಜಾನ್ಸನ್ ತಿಳಿದರು.

    ಉಗ್ರರ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ನಮ್ಮ ಬೆಂಬಲವಿದೆ. ಇದು ನಮ್ಮ ಜವಾಬ್ದಾರಿ ಕೂಡ ಆಗಿದೆ. ಈ ನಿಟ್ಟಿನಲ್ಲಿ ಎರಡು ದೇಶಗಳು ಉಗ್ರರಿಗೆ ತಕ್ಕ ಪಾಠ ಕಲಿಸಲಿವೆ ಎಂದು ತಿಳಿಸಿದರು.

    ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ದಾಳಿಯನ್ನು ಖಂಡಿಸುತ್ತೇವೆ. ಉಗ್ರರ ವಿರುದ್ಧ ಹೋರಾಡಲು ಭಾರತದ ಭುಜಕ್ಕೆ ಭುಜ ಕೊಡುತ್ತೇವೆಂದು ನಮ್ಮ ದೇಶದ ಜನರ ಮುಂದೆ ಹೇಳಿಕೊಂಡಿದ್ದೇನೆ. ಉಗ್ರರನ್ನು ಮಟ್ಟಹಾಕುವಲ್ಲಿ ಉಭಯ ದೇಶಗಳು ಯಶಸ್ವಿಯಾಗಲಿವೆ. ಭಯೋತ್ಪಾದನೆ ವಿರುದ್ಧ ಮೇಲುಗೈ ಸಾಧಿಸುತ್ತೇವೆ ಎಂದು ಹೇಳಿದರು.

    ನಾವು ಪಾಕಿಸ್ತಾನದ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದೇವೆ. ಆದರೆ ದೇಶದೊಳಗೆ ಭಯೋತ್ಪಾದನೆಗೆ ಸರ್ಕಾರವೇ ಹೊಣೆಯಾಗಿರುತ್ತದೆ. ಇದರಲ್ಲಿ ಯಾವುದೇ ಸಂದೇಹವೇ ಬೇಡ. ಈ ನಿಟ್ಟಿನಲ್ಲಿ ನಾವು ಪಾಕಿಸ್ತಾನದ ಮೇಲೆ ಭಾರೀ ಒತ್ತಡ ಹೇರುತ್ತಿದ್ದೇವೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv