Tag: ಬೌಲರ್ಸ್

  • ಆರ್‌ಸಿಬಿ ಬೌಲರ್‌ಗಳಿಗೆ ಭೇಷ್ ಅಂದ ಕೆ.ಎಲ್ ರಾಹುಲ್

    ಆರ್‌ಸಿಬಿ ಬೌಲರ್‌ಗಳಿಗೆ ಭೇಷ್ ಅಂದ ಕೆ.ಎಲ್ ರಾಹುಲ್

    ಕೋಲ್ಕತ್ತಾ: ಮೊನ್ನೆ ನಡೆದ ಆರ್‌ಸಿಬಿ ಮತ್ತು ಲಕ್ನೋ ನಡುವಿನ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ತಂಡದ ಬೌಲರ್‌ಗಳು ಇನ್ನಿಂಗ್ಸ್‌ನ ಕೊನೆಯ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಕನ್ನಡಿಗ ಕೆ.ಎಲ್. ರಾಹುಲ್ ಇನ್ನಿಂಗ್ಸ್‌ನ ಕೊನೆಯ ಹಂತದಲ್ಲಿ ನಮ್ಮ ತಂಡದ ಬ್ಯಾಟ್ಸ್‌ಮ್ಯಾನ್‌ಗಳು ದೊಡ್ಡ ಹೊಡೆತಗಳನ್ನು ಆಡಲು ಪ್ರಯತ್ನಿಸಿದರು. ಆದರೆ ಎದುರಾಳಿ ತಂಡದ ಬೌಲರ್‌ಗಳು ಉತ್ತಮವಾಗಿ ಬೌಲಿಂಗ್ ಮಾಡಿದರು ಎಂದು ಹೇಳಿದ್ದಾರೆ.

    ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ನೀಡಿದ್ದ 208 ರನ್‌ಗಳ ಗುರಿ ಬೆನ್ನಟ್ಟಿದ್ದ ಲಕ್ನೋ ತಂಡವು 14 ರನ್‌ಗಳಿಂದ ಸೋಲನುಭವಿಸಿತು. ಅದಕ್ಕಾಗಿ ತಂಡದ ನಾಯಕ ರಾಹುಲ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದಾರೆ.

    ಪವರ್‌ಪ್ಲೇ ನಂತರದ ಏಳು ಓವರ್‌ಗಳಲ್ಲಿ ರಾಹುಲ್ ಒಂದು ಬೌಂಡರಿ ಮಾತ್ರ ಗಳಿಸಿದ್ದರು. ಇದೇ ಮೊದಲ ಬಾರಿ ಟೂರ್ನಿಯಲ್ಲಿ ಆಡಿದ ಲಕ್ನೋ ತಂಡವು ಗುರಿ ಬೆನ್ನಟ್ಟಿದ್ದ ಏಳು ಪಂದ್ಯಗಳ ಪೈಕಿ ಐದರಲ್ಲಿ ಸೋತಿದೆ.

    ಟೂರ್ನಿಯಲ್ಲಿ ಚೇಸಿಂಗ್ ಮಾಡಿದ ಪಂದ್ಯಗಳಲ್ಲಿ ನಮ್ಮ ಸಾಧನೆ ಚೆನ್ನಾಗಿಲ್ಲ ಎನ್ನುವುದನ್ನು ಒಪ್ಪಿಕೊಳ್ಳುತ್ತೇನೆ. ಈ ವಿಷಯದಲ್ಲಿ ಸುಧಾರಣೆಗೆ ಪ್ರಯತ್ನಿಸುತ್ತೇವೆ ಎಂದು ರಾಹುಲ್ ಹೇಳಿದರು.

    ಈ ಪಂದ್ಯದಲ್ಲಿ ರಾಹುಲ್ 58 ಎಸೆತಗಳನ್ನು ಎದುರಿಸಿ 79 ರನ್ ಗಳಿಸಿದ್ದರು. ಟೂರ್ನಿಯಲ್ಲಿ ಒಟ್ಟು 600ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.