Tag: ಬ್ಯಾಂಕ್ ಉದ್ಯೋಗಿ

  • ಫೋಟೋ ಕಳುಹಿಸುವಂತೆ ಪ್ರಿಯಕರನ ಕಾಟ – ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

    ಫೋಟೋ ಕಳುಹಿಸುವಂತೆ ಪ್ರಿಯಕರನ ಕಾಟ – ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

    ಲಕ್ನೋ: ಪದೇ ಪದೇ ತನ್ನ ಫೋಟೋ ಕಳುಹಿಸುವಂತೆ ಒತ್ತಾಯಿಸುತ್ತಿದ್ದ ಪ್ರಿಯಕರನ ಕಾಟ ತಾಳಲಾರದೇ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಇಜ್ಜತ್ ನಜರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಉತ್ತರ ಪ್ರದೇಶದ ಬರೇಲಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಬ್ಯಾಂಕ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಹೇಳಲಾಗಿದೆ. ಇದನ್ನೂ ಓದಿ: 1.30 ಲಕ್ಷಕ್ಕೆ ಮಾರಾಟವಾಗಿದ್ದ ಬಾಲಕ – ಚಿಕ್ಕಮ್ಮ ಅರೆಸ್ಟ್

    ಏನಿದು ಪ್ರೇಮ್‌ ಕಹಾನಿ?
    ಬರೇಲಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಬ್ಯಾಂಕ್ ಉದ್ಯೋಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಪ್ರತಿದಿನ ಇಬ್ಬರೂ ಗಂಟೆಗಟ್ಟಲೇ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಪ್ರೇಮಿಯು ವಾಟ್ಸಾಪ್‌ನಲ್ಲಿ ಹುಡುಗಿಯ ಫೋಟೋ ಕಳಿಸುವಂತೆ ಕೇಳಿದ್ದಾನೆ. ಪದೇ ಪದೇ ಒತ್ತಾಯಿಸಿದ್ದಾನೆ. ಆದರೂ ಆಕೆ ಫೋಟೋ ಕಳುಹಿಸಲು ನಿರಾಕರಿಸಿದ್ದಾಳೆ. ನಂತರ ವೀಡಿಯೋ ಕಾಲ್‌ನಲ್ಲಿ ಮಾತನಾಡುವುದಕ್ಕೂ ಆಕೆ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಪ್ರಿಯಕರ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದೂರವಾಣಿ ಕರೆ ಮೂಲಕ ಬೆದರಿಕೆ ಹಾಕಿದ್ದಾನೆ. ಆಗ ಫೋನ್ ಕರೆ ಕಟ್ ಮಾಡಿದ್ದ ಗೆಳತಿ ಮತ್ತೆ ಅವನಿಗೆ ನಿರಂತರವಾಗಿ ಕರೆ ಮಾಡಿದ್ದಾಳೆ. ಸುಮಾರು 40 ಬಾರಿ ಕರೆ ಮಾಡಿದರೂ ಪ್ರೇಮಿ ತೆಗೆಯದಿದ್ದರಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ತನ್ನ ಪ್ರೇಮಿ ನಿಜವಾಗಿಯೂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆ ಭಾವಿಸಿ ತಾನೂ ವಿಷ ಸೇವಿಸಿದ್ದಾಳೆ. ಕೆಲ ಸಮಯ ಕಳೆದ ಬಳಿಕ ವಿಷಯ ತಿಳಿದ ಕುಟುಂಬಸ್ಥರು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಮಹಿಳಾ ಸಹೋದ್ಯೋಗಿ ಮೇಲೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಇನ್ಸ್‌ಪೆಕ್ಟರ್

    ಇದೇ ವೇಳೆಗೆ `ನಿನಗೇನಾದರೂ ಆಯಿತೆಂದರೆ ನಿನ್ನ ಕುಟುಂಬದವರನ್ನು ಸಾಯಿಸುತ್ತೇನೆ’ ಎಂದು ಯುವಕ ಸಂದೇಶ ಕಳುಹಿಸಿದ್ದಾನೆ. ಈ ಸಂಬಂಧ ಕುಟುಂಬಸ್ಥರು ಬ್ಯಾಂಕ್ ಉದ್ಯೋಗಿ ಸಂಚಿತ್ ಅರೋರಾ ಅವರ ಪ್ರಚೋದನೆಯೇ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

    ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಇಜ್ಜತ್ ನಜರ್ ಪೊಲೀಸರು ಆರೋಪಿ ಸಂಚಿತ್ ಅರೋರಾ ಅವರ ಹುಡುಕಾಟಕ್ಕೆ ಬಲೆ ಬೀಸಿದ್ದಾರೆ.

    Live Tv

  • ಬ್ಯಾಂಕ್ ಉದ್ಯೋಗಿಗೆ ಕೊರೊನಾ- ಆತಂಕದಲ್ಲಿ ಮಸ್ಕಿ, ಕೊಪ್ಪಳದ ಜನತೆ

    ಬ್ಯಾಂಕ್ ಉದ್ಯೋಗಿಗೆ ಕೊರೊನಾ- ಆತಂಕದಲ್ಲಿ ಮಸ್ಕಿ, ಕೊಪ್ಪಳದ ಜನತೆ

    -ಕೊಪ್ಪಳದಲ್ಲಿ ವಾಸ, ರಾಯಚೂರಿನಲ್ಲಿ ಕೆಲಸ

    ಕೊಪ್ಪಳ/ರಾಯಚೂರು: ಕೊಪ್ಪಳದಲ್ಲಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ 27 ವರ್ಷದ ಬ್ಯಾಂಕ್ ಉದ್ಯೋಗಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಹೀಗಾಗಿ ಸೋಂಕಿತ ಕಾರ್ಯ ನಿರ್ವಹಿಸುತ್ತಿದ್ದ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿಯೂ ಮತ್ತು ವಾಸವಾಗಿದ್ದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

    ರೋಗಿ 2254 ಕೇಸೂರು ಗ್ರಾಮದ ನಿವಾಸಿಯಾಗಿದ್ದು, ಮಸ್ಕಿಯ ಕೆನರಾ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿನಿತ್ಯ ಗ್ರಾಮದಿಂದ ಹೋಗಿ ಬರುತ್ತಿದ್ದರು. ಮೇ 17ರಂದು ಉದ್ಯೋಗಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. 22 ರಂದು ಕೇಸೂರು ಗ್ರಾಮದ ಪ್ರ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆಸ್ಪತ್ರೆ ಸಿಬ್ಬಂದಿ ಉದ್ಯೋಗಿ ಗಂಟಲು ದ್ರವದ ಮಾದರಿಯನ್ನು ಪಡೆದು ಕೋವಿಡ್-19 ಪರೀಕ್ಷೆಗೆ ಕಳುಗಹಿಸಿದ್ದರು. ಪರೀಕ್ಷೆಯ ಬಳಿಕ ಉದ್ಯೋಗಿಯನ್ನು ಕೊಪ್ಪಳದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

    ಇಂದು ಬಂದ ವರದಿಯಲ್ಲಿ ಉದ್ಯೋಗಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಸೋಂಕಿತ ಬ್ಯಾಂಕ್ ಉದ್ಯೋಗಿಯಾಗಿದ್ದರಿಂದ ಹಲವು ಜನರ ಜೊತೆ ಸಂಪರ್ಕ ಹೊಂದಿದ್ದಾರೆ. ಮಸ್ಕಿಯಲ್ಲಿ ಪುರಸಭೆ ಸಿಬ್ಬಂದಿ ಬ್ಯಾಂಕ್ ಒಳಗೆ ಡಿಸ್ ಇನ್ಫೆಕ್ಷನ್ ಸ್ಪ್ರೇ ಮಾಡಿದ್ದಾರೆ. ಮಸ್ಕಿಯಲ್ಲಿ ವ್ಯಕ್ತಿ ವಾಸವಿದ್ದ ಮನೆ ಹಾಗೂ ಓಡಾಡಿದ ಜಾಗದಲ್ಲೆಲ್ಲಾ ಕೆಮಿಕಲ್ ಸ್ಪ್ರೇ ಮಾಡಲಾಗಿದೆ.

    ಇತ್ತ ಸೋಂಕಿತ ವಾಸವಾಗಿದ್ದ ಕೇಸೂರು ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದೆ. ದೋಟಿಹಾಳ ಗ್ರಾಮವನ್ನು ಬಫರ್ ಝೋನ್ ಎಂದು ಗುರುತಿಸಲಾಗಿದೆ. ಇನ್ನು ಸೋಂಕಿತನ ಸೋದರ ಕೊಪ್ಪಳ ನಗರದ ಐಸಿಐಸಿಐ ಬ್ಯಾಂಕ್ ಗೆ ಆಗಮಿಸಿ ವ್ಯವಹಾರ ನಡೆಸಿದ್ದು, ನಗರದ ಗಂಜ್ ಸರ್ಕಲ್ ನಲ್ಲಿರುವ ಮೊಬೈಲ್ ಶಾಪ್ ನಲ್ಲಿ ವ್ಯವಹಾರ ಮಾಡಿರುವ ಮಾಹಿತಿ ಲಭ್ಯವಾಗಿದೆ.

    ಬ್ಯಾಂಕ್ ಉದ್ಯೋಗಿಯ ಸೋಂಕಿನ ಮೂಲ, ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿರುವವರ ಪತ್ತೆಗಾಗಿ ಕೊಪ್ಪಳ ಮತ್ತು ರಾಯಚೂರು ಜಿಲ್ಲಾಡಳಿತ ಮುಂದಾಗಿವೆ.

  • ನಿರಾಶ್ರಿತರ ಜೊತೆ ಹುಟ್ಟುಹಬ್ಬ – 2000 ಜನರಿಗೆ ಅನ್ನದಾನ ಮಾಡಿದ ನಿವೃತ್ತ ಬ್ಯಾಂಕ್ ಉದ್ಯೋಗಿ

    ನಿರಾಶ್ರಿತರ ಜೊತೆ ಹುಟ್ಟುಹಬ್ಬ – 2000 ಜನರಿಗೆ ಅನ್ನದಾನ ಮಾಡಿದ ನಿವೃತ್ತ ಬ್ಯಾಂಕ್ ಉದ್ಯೋಗಿ

    ಉಡುಪಿ: ದೇಶವೇ ಲಾಕ್‍ಡೌನ್ ಆಗಿರುವುದರಿಂದ ಉಡುಪಿಯಲ್ಲಿರುವ ಬಡವರಿಗೆ, ನಿರಾಶ್ರಿತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಊಟಕ್ಕೆ ಸಮಸ್ಯೆಯಾಗಿದೆ. ಇದೇ ವೇಳೆ ನಿವೃತ್ತ ಬ್ಯಾಂಕ್ ಉದ್ಯೋಗಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ 2000 ಜನರಿಗೆ ಅನ್ನದಾನ ಮಾಡಿದ್ದಾರೆ.

    ಹಲವಾರು ಸಂಘ ಸಂಸ್ಥೆಗಳು, ಸಮಾಜ ಸೇವಕರು ಮೂರು ಹೊತ್ತಿನ ಊಟೋಪಚಾರ ವ್ಯವಸ್ಥೆ ಮಾಡುತ್ತಿದ್ದಾರೆ. ಈ ನಡುವೆ ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಅಧಿಕಾರಿಯಾದ ಜಯರಾಮ್ ರಾವ್ ತಮ್ಮ 63ನೇ ಹುಟ್ಟುಹಬ್ಬವನ್ನು ನಿರಾಶ್ರಿತರ, ಕೂಲಿ ಕಾರ್ಮಿಕರ ಜೊತೆ ಆಚರಿಸಿದರು. ಅಲ್ಲದೇ ಸುಮಾರು 2000 ಜನರಿಗೆ ಊಟೋಪಚಾರದ ವ್ಯವಸ್ಥೆಯನ್ನು ಮಾಡಿದರು.

    ಈ ಸಂದರ್ಭದಲ್ಲಿ ಜಯರಾಮ್ ರಾವ್ ಮಾತನಾಡಿ. ನಾನು ಹುಟ್ಟುಹಬ್ಬ ಆಚರಿಸಿಲ್ಲ. ಆದರೆ ಈಗ ಜನ ಸಂಕಷ್ಟದಲ್ಲಿ ಇದ್ದಾರೆ. ಅವರಿಗೆ ಊಟ ಕೊಡುವ ಮನಸ್ಸಾಯ್ತು. ದೇಶ ಹಸಿವಿನಿಂದ ಇರುವಾಗ ನಾವು ಮನೆಯಲ್ಲಿ ಸಿಹಿಯೂಟ ಮಾಡುವುದು ಎಷ್ಟು ಸರಿ ಎಂಬ ಆಲೋಚನೆ ಬಂತು. ಆಗ ಗಣೇಶೋತ್ಸವ ಸಮಿತಿಯನ್ನು ಸಂಪರ್ಕಿಸಿದೆ. ಅವರ ಮೂಲಕ ಜನರಿಗೆ ಊಟದ ವ್ಯವಸ್ಥೆ ಮಾಡಿದೆ ಎಂದು ಹೇಳಿದರು.

    ಜಯರಾಮ್ ಅವರಿಂದ ವಿತರಣೆಯಾದ ಊಟ ಹಸಿದ ಹೊಟ್ಟೆಗೆ ಸೇರಿದೆ. ಸಂಕಷ್ಟದ ಈ ಸ್ಥಿತಿಯಲ್ಲಿ ದಾನಿಗಳು ಮುಂದೆ ಬಂದರೆ ಸರ್ಕಾರಕ್ಕೆ ಹೊರೆ ಕಡಿಮೆಯಾಗುತ್ತದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

    ಉಡುಪಿ ನಗರದ 10 ಕಡೆ ಮಧ್ಯಾಹ್ನದ ಅನ್ನದಾನ ಮಾಡಿ ವಿಶೇಷ ರೀತಿಯಲ್ಲಿ ಸದಾಕಾಲ ನೆನಪಿನಲ್ಲಿ ಇರುವಂತೆ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಜಯರಾಮ್ ಅವರ ಪತ್ನಿ ವೀಣಾ ರಾವ್ ಜೊತೆಗಿದ್ದು, ಊಟ ವಿತರಣೆ ಮಾಡಿದರು. ಕಡಿಯಾಳಿ ಗಣೇಶೋತ್ಸವ ಸಮಿತಿ ಮೂಲಕ ಅನ್ನದಾನ ಮಾಡಿದ್ದು, ವ್ಯವಸ್ಥಾಪಕ ಮಂಜುನಾಥ್ ಹೆಬ್ಬಾರ್, ಶಾಸಕ ರಘುಪತಿ ಭಟ್, ಮೇಲ್ವಿಚಾರಕ ರಾಘವೇಂದ್ರ ಕಿಣಿ, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

  • ಸ್ಪೈಡರ್ ಮ್ಯಾನ್ ವೇಷ ಧರಿಸಿ ಆಫೀಸ್‍ಗೆ ಬಂದ ಉದ್ಯೋಗಿ

    ಸ್ಪೈಡರ್ ಮ್ಯಾನ್ ವೇಷ ಧರಿಸಿ ಆಫೀಸ್‍ಗೆ ಬಂದ ಉದ್ಯೋಗಿ

    ರಿಯೋ ಡಿ ಜನೈರೊ: ಯಾವುದೇ ಒಂದು ಕಂಪನಿ ಅಥವಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ನಂತರ ಬೇರೆ ಕಂಪನಿಗೆ ಅಥವಾ ನಿವೃತ್ತಿಯ ವೇಳೆ ಕಡೆಯ ದಿನ ತುಂಬಾ ಉದ್ಯೋಗಿಗಳು ಭಾವುಕರಾಗುತ್ತಾರೆ. ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ.

    ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು, ಈಗ ಬ್ಯಾಂಕ್ ಉದ್ಯೋಗಿ ಸ್ಪೈಡರ್ ಮ್ಯಾನ್ ವೇಷ ಧರಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉದ್ಯೋಗಿ ತನ್ನ ಕಡೆಯ ಕೆಲಸದ ದಿನ ಜೀವತಾವಧಿಯಲ್ಲಿ ಸದಾ ನೆನಪಿರಬೇಕು ಎಂದು ಈ ರೀತಿಯ ವೇಷದಲ್ಲಿ ಹೋಗಿದ್ದಾನೆ.

    ಉದ್ಯೋಗಿ ಸ್ಪೈಡರ್ ಮ್ಯಾನ್ ವೇಷ ಧರಿಸಿ ಬಂದಿದ್ದು, ದಿನ ಅದೇ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸಹೋದ್ಯೋಗಿಯೊಬ್ಬರು ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಅದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಫೋಟೋ ಮತ್ತು ವಿಡಿಯೋದಲ್ಲಿ, ಉದ್ಯೋಗಿ ತನ್ನ ಜಾಗದಲ್ಲಿ ಕುಳಿತು ಅದೇ ವೇಷದಲ್ಲಿ ಕೆಲಸ ಮಾಡುತ್ತಿರುವುದು. ಜೊತೆಗೆ ಕಿವಿಗೆ ಹೆಡ್‍ಫೋನ್ ಹಾಕಿರುವುದು ಮತ್ತು ತನ್ನ ಸಹೋದ್ಯೋಗಿಗೆ ಸಲಹೆ ಕೊಡುತ್ತಿರುವುದನ್ನು ನೋಡಬಹುದಾಗಿದೆ. ಇನ್ನೂ ವಿಡಿಯೋದಲ್ಲಿ ತನ್ನ ಸಹೋದ್ಯೋಗಿಗಳಿಗೆ ಕಡೆದ ದಿನದ ಹಿನ್ನೆಲೆಯಲ್ಲಿ ಸ್ವೀಟ್ ನೀಡುತ್ತಿರುವುದನ್ನು ನೋಡಬಹುದಾಗಿದೆ.

    ಉದ್ಯೋಗಿಯ ಸ್ಪೈಡರ್ ಮ್ಯಾನ್ ವೇಷಧಾರಿಯ ಫೋಟೋವನ್ನು ಸಹೋದ್ಯೋಗಿಗಳು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದು, ಫನ್ನಿ ಫನ್ನಿಯಾಗಿ ಕಾಮೆಂಟ್ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ನಗ್ನ ಚಿತ್ರಗಳ ಬೆದರಿಕೆಯೊಡ್ಡಿ ಮಾಜಿ ಸಹೋದ್ಯೋಗಿ ಮೇಲೆ ಬ್ಯಾಂಕ್ ಉದ್ಯೋಗಿ ಅತ್ಯಾಚಾರ

    ನಗ್ನ ಚಿತ್ರಗಳ ಬೆದರಿಕೆಯೊಡ್ಡಿ ಮಾಜಿ ಸಹೋದ್ಯೋಗಿ ಮೇಲೆ ಬ್ಯಾಂಕ್ ಉದ್ಯೋಗಿ ಅತ್ಯಾಚಾರ

    ಮುಂಬೈ: ಸೆಕ್ಸ್ ವಿಡಿಯೋ, ಬೆತ್ತಲೆ ಫೋಟೋಗಳ ಬೆದರಿಕೆಯೊಡ್ಡಿ ಮಾಜಿ ಸಹೋದ್ಯೋಗಿಯ ಮೇಲೆ ಅತ್ಯಾಚಾರ ಎಸಗಿದ್ದ ಬ್ಯಾಂಕ್ ಉದ್ಯೋಗಿಯೊಬ್ಬನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

    ಲೋವರ್ ಪರೇಲ್ ನಿವಾಸಿ ವಿಲಾಸ್ ಕೃಷ್ಣ ಕದಂ (38) ಬಂಧಿತ ಆರೋಪಿ. ವಿಲಾಸ್ ಮೇಲೆ ಅತ್ಯಾಚಾರ, ಹಲ್ಲೆ, ಬೆದರಿಕೆ, ಉದ್ದೇಶಪೂರ್ವಕ ಅವಮಾನ ಆರೋಪದಡಿ ಪ್ರಕರಣ ದಾಖಲಾಗಿದೆ. ಜೊತೆಗೆ ಆತನ ಬಳಿ ಇದ್ದ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಏನಿದು ಪ್ರಕರಣ?:
    ಸಂತ್ರಸ್ತ ಮಹಿಳೆ ಹಾಗೂ ವಿಲಾಸ್ ಇಬ್ಬರು ಒಂದೇ ಬ್ಯಾಂಕ್‍ನಲ್ಲಿ 2008ರಿಂದ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಪ್ರೀತಿ ಬೆಳೆದು 2013ರಿಂದ 2015ರ ವರೆಗೆ ದೈಹಿಕ ಸಂಬಂಧ ಹೊಂದಿದ್ದರು. ಆದರೆ 2017ರಲ್ಲಿ ಸಂತ್ರಸ್ತ ಮಹಿಳೆಯು ಬೇರೊಬ್ಬ ಯುವಕನನ್ನು ಮದುವೆಯಾಗಿದ್ದಾಳೆ.

    ಮದುವೆಗೂ ಮುನ್ನ ವಿಲಾಸ್‍ನನ್ನು ಭೇಟಿಯಾಗಿ ನಮ್ಮ ಸಂಬಂಧವನ್ನು ನಿಲ್ಲಿಸುವಂತೆ ತಿಳಿಸಿದ್ದೆ. ಆದರೆ ಅವನು ಅದಕ್ಕೆ ಒಪ್ಪಲಿಲ್ಲ. ಕೊನೆಯದಾಗಿ ನಿನ್ನ ಜೊತೆಗೆ ಮಾತನಾಡಬೇಕು ದಾದರ್ ಸಮೀಪದ ಸೇನಾ ಭವನಕ್ಕೆ ಬಾ ಎಂದು 2017ರಲ್ಲಿ ಕರೆದಿದ್ದ. ಅಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾಳೆ.

    ಮದುವೆಯ ನಂತರವೂ ಫೋನ್ ಮಾಡಿ, ಕರೆಯುತ್ತಿದ್ದ. ಇದನ್ನು ನಿರಾಕರಿಸಿದರೆ, ನಮ್ಮಿಬ್ಬರ ಅಕ್ರಮ ಸಂಬಂಧದ ಕುರಿತು ನಿನ್ನ ಪತಿಗೆ ಹೇಳುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದ. ಅಷ್ಟೇ ಅಲ್ಲದೆ ನನ್ನ ಪತಿಯ ಮೊಬೈಲ್ ನಂಬರ್ ಪಡೆದು, ನಿನ್ನ ಬೆತ್ತಲೆ ಚಿತ್ರಗಳನ್ನು ಕಳುಹಿಸುತ್ತೇನೆ ಎಂದು ಹೇಳಿ ವಿಲಾಸ್ ಮಾನಸಿಕ ಹಿಂಸೆ ನೀಡುತ್ತಿದ್ದ. ಇದರಿಂದಾಗಿ ಅವನು ಕರೆದ ಅನೇಕ ಹೋಟೆಲ್‍ಗಳಿಗೆ ಹೋಗಬೇಕಾದ ಪರಿಸ್ಥಿತಿ ಬಂದಿತು ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

    ವಿಲಾಸ್‍ನಿಂದ ಮಾನಸಿಕ ಹಾಗೂ ದೈಹಿಕ ಹಿಂಸೆ ತಾಳಲಾರದೇ ಸಂತ್ರಸ್ತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ ಆಕೆಯ ಸ್ನೇಹಿತರು ಧೈರ್ಯ ಹೇಳಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣವೇ ಕಾರ್ಯಾಚರಣೆ ಚುರುಕುಗೊಳಿಸಿದ ಪೊಲೀಸರು ವಿಲಾಸ್‍ನನ್ನು ಬಂಧಿಸಿ, ಸಂತ್ರಸ್ತ ಮಹಿಳೆಯ ನಗ್ನ ಫೋಟೋಗಳಿದ್ದ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಾಕಿ ಸಲಹಿದ್ದ ಅಕ್ಕನಿಗೆ ಕ್ಯಾನ್ಸರ್ – ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!

    ಸಾಕಿ ಸಲಹಿದ್ದ ಅಕ್ಕನಿಗೆ ಕ್ಯಾನ್ಸರ್ – ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!

    ಬೆಂಗಳೂರು: ಬ್ಯಾಂಕ್ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯನಗರ ಸಮೀಪದ ಪ್ರಶಾಂತ್ ನಗರದಲ್ಲಿ ನಡೆದಿದೆ.

    ಹರ್ಷಿತ್ ಶೆಟ್ಟಿ (32)ಆತ್ಮಹತ್ಯೆಗೆ ಶರಣಾದ ದುರ್ದೈವಿ. ತನ್ನನ್ನು ಸಾಕಿ ಸಲಹಿದ್ದ ಸೋದರಿಗೆ ಕ್ಯಾನ್ಸರ್ ಬಂದಿದ್ದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

    ಮೃತ ಹರ್ಷಿತ್ ತಾಯಿ 2002ರಲ್ಲಿ, ತಂದೆ 2005ರಲ್ಲಿ ಕ್ಯಾನ್ಸರ್‍ನಿಂದ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಪಡೆಯುತ್ತಿದ್ದ ಹರ್ಷಿತ್, ಬಳಿಕ ಅಕ್ಕ ಆಶಾ ಶೆಟ್ಟಿ ಅವರ ಆಶ್ರಯದಲ್ಲೇ ಬೆಳೆದಿದ್ದರು. ಆದರೆ ಇದೀಗ ಅಕ್ಕನಿಗೂ ಕ್ಯಾನ್ಸರ್ ಬಂದಿದ್ದರಿಂದ ಸಾಕಷ್ಟು ಖಿನ್ನತೆಗೆ ಒಳಗಾಗಿದ್ದ ಹರ್ಷಿತ್ ಮನನೊಂದು ರಾತ್ರಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಕುಂದಾಪುರದ ಹರ್ಷಿತ್, ನಗರದ ದೇವರಬೀಸನಹಳ್ಳಿಯಲ್ಲಿರುವ `ವೆಲ್ಸ್ ಫಾರ್ಗೊ’ ಬ್ಯಾಂಕ್‍ನಲ್ಲಿ ತಾಂತ್ರಿಕ ತಂಡದ ಲೀಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮೃತ ಹರ್ಷಿತ್ ಪತ್ನಿ ರಮ್ಯಾ ಶೆಟ್ಟಿ ಹಾಗೂ ಎರಡು ವರ್ಷದ ಮಗುವಿನ ಜೊತೆ ವಿಜಯನಗರ ಸಮೀಪದ ಪ್ರಶಾಂತ್ ನಗರದಲ್ಲಿ ವಾಸವಾಗಿದ್ದರು.

    ಈ ಸಂಬಂಧ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.