Tag: ಬ್ಯಾಂಕ್ ಹಗರಣ

  • ಬ್ಯಾಂಕ್ ಹಗರಣ – ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬಿಗ್ ರಿಲೀಫ್!

    ಬ್ಯಾಂಕ್ ಹಗರಣ – ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬಿಗ್ ರಿಲೀಫ್!

    – 3 ವರ್ಷ ಜೈಲು ಶಿಕ್ಷೆ ಅಮಾನತುಗೊಳಿಸಿದ ಹೈಕೋರ್ಟ್
    – ದಂಡದ ಮೊತ್ತ ಠೇವಣಿ ಇಡಲು ಆದೇಶ

    ಬೆಂಗಳೂರು: ಬ್ಯಾಂಕ್ ಹಗರಣ (Bank Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ (Krishnaiah Shetty) ಹೈಕೋರ್ಟ್ (High Court) ಬಿಗ್ ರಿಲೀಫ್ ನೀಡಿದೆ. ಕೃಷ್ಣಯ್ಯ ಶೆಟ್ಟಿಗೆ ವಿಧಿಸಿದ್ದ 3 ವರ್ಷ ಜೈಲು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ.

    ಬ್ಯಾಂಕ್ ಹಗರಣದಲ್ಲಿ ಕೃಷ್ಣಯ್ಯ ಶೆಟ್ಟಿಗೆ ಕೆಳಹಂತದ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ನೀಡಿತ್ತು. ಕೆಳಹಂತದ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಕೃಷ್ಣಯ್ಯ ಶೆಟ್ಟಿಗೆ ಶಿಕ್ಷೆ ಅಮಾನತುಗೊಳಿಸಿ ದಂಡದ ಮೊತ್ತ ಠೇವಣಿ ಇಡಲು ಹೈಕೋರ್ಟ್ ಆದೇಶ ಹೊರಡಿಸಿದೆ. ಇದನ್ನೂ ಓದಿ:‌ ತುಂಬಾ ಅನ್ಯಾಯ: ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ ಟ್ರಂಪ್‌ ಅಪಸ್ವರ

    2012ರಲ್ಲಿ ಬಾಲಾಜಿಕೃಪಾ ಎಂಟರ್‌ಪ್ರೈಸಸ್’ನ ಮಾಲೀಕ ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ, ಹಲವು ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ 7.17 ಕೋಟಿ ರೂ. ಬ್ಯಾಂಕ್ ಸಾಲ ಪಡೆದಿದ್ದರು. ಈವರೆಗೆ 3.53 ಕೋಟಿ ರೂ. ಸಾಲ ತೀರಿಸಿಲ್ಲ ಎಂದು ಆರೋಪಿಸಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ, ಚಾರ್ಜ್‌ಶೀಟ್ ಸಲ್ಲಿಸಿತ್ತು. ಇದನ್ನೂ ಓದಿ: ಉದಯಗಿರಿ ದಾಂಧಲೆ ಕೇಸ್- ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ನ್ಯಾಯಾಂಗ ಬಂಧನ

    ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 120ಬಿ, 409, 419, 420, 467, 471 ಹಾಗೂ ಸಿಆರ್‌ಪಿಸಿ ಸೆಕ್ಷನ್ 13(1)ಡಿ, 13(2) ಅಡಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಪುತಿನ, ಕೆಎಸ್‌ನ ಟ್ರಸ್ಟ್‌ಗಳ ಚಟುವಟಿಕೆಗಳಿಗೆ ಸರ್ಕಾರದ ನೆರವು: ಸಚಿವ ಚಲುವರಾಯಸ್ವಾಮಿ

  • ಬ್ಯಾಂಕ್ ಹಗರಣ – ಜೆ&ಕೆ ಮಾಜಿ ಸಿಎಂಗೆ ಇಡಿ ಪ್ರಶ್ನೆ

    ಬ್ಯಾಂಕ್ ಹಗರಣ – ಜೆ&ಕೆ ಮಾಜಿ ಸಿಎಂಗೆ ಇಡಿ ಪ್ರಶ್ನೆ

    ಶ್ರೀನಗರ: 2021ರಲ್ಲಿ ನಡೆದ ಜೆ&ಕೆ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಪ್ರಶ್ನಿಸಿದೆ.

    ಜೆ&ಕೆ ಬ್ಯಾಂಕ್ ಹಗರಣ ಕುರಿತಂತೆ 2021ರಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಜಾರಿ ನಿರ್ದೇಶನಾಲಯ ಒಮರ್ ಅಬ್ದುಲ್ಲಾ ಅವರನ್ನು ಪ್ರಶ್ನಿಸಿದೆ.

    ಪ್ರಕರಣ ಏನು?
    ಜೆ&ಕೆ ಬ್ಯಾಂಕ್‌ನ ಬಳಕೆಗಾಗಿ ಮುಂಬೈನ ಬಾಂದ್ರಾ ಕುರ್ಲಾ ಕಂಪ್ಲೆಕ್ಸ್ನಲ್ಲಿ ಹೆಚ್ಚಿನ ಬೆಲೆಯ ಆಸ್ತಿಯನ್ನು ಖರೀದಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು 180 ಕೋಟಿ ರೂ. ವಂಚನೆ ಮಾಡಿರುವುದಾಗಿ ಸಿಬಿಐ ಜೆ&ಕೆ ಬ್ಯಾಂಕ್‌ನ ಅಂದಿನ ಆಡಳಿತದ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಇದನ್ನೂ ಓದಿ: ಹಿಜಬ್, ಹಲಾಲ್‍ನಿಂದಾಗಿ ಬೆಲೆ ಏರಿಕೆಯ ಗಮನ ದೂರವಾಗಿದೆ: ಶಶಿ ತರೂರ್

    ಮುಂಬೈ ಮೂಲದ ಬ್ಯಾಂಕ್ ನಿರ್ದೇಶಕ ನಿಹಾಲ್ ಚಂದ್ರಕಾಂತ್ ಗರ್ವಾರೆ ಈ ವ್ಯವಹಾರದಲ್ಲಿ ಮುಖ್ಯ ಪಾತ್ರ ವಹಿಸಿದ್ದು, ಬ್ಯಾಂಕ್‌ನಿಂದ ಕೋಟ್ಯಂತರ ಹಣವನ್ನು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗರ್ವಾರೆ ಅವರನ್ನು ಇತ್ತೀಚೆಗೆ ಬಂಧಿಸಲಾಯಿತು. ಇದನ್ನೂ ಓದಿ: ಎಲ್ಲ PIL ಗಳನ್ನು ನಾವೇ ವಿಚಾರಣೆ ನಡೆಸುವುದಾದರೆ ಜನ ಸರ್ಕಾರವನ್ನು ಆಯ್ಕೆ ಮಾಡಿರುವುದ್ಯಾಕೆ? – ಸುಪ್ರೀಂಕೋರ್ಟ್ ಗರಂ

    ನಿಹಾಲ್ ಚಂದ್ರಕಾಂತ್ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಈ ಕೇಸ್‌ನಲ್ಲಿ ಭಾಗಿಯಾಗಿದ್ದಾರೆಯೇ ಎಂದು ತಿಳಿಯಲು ಇದೀಗ ಇಡಿ ಒಮರ್ ಅವರನ್ನು ಪ್ರಶ್ನಿಸಿದೆ.