ಬೆಂಗಳೂರು: ಆಲೋವೆರಾ ಜ್ಯೂಸ್(Aloevera Juice) ಎಂದು ಬಾಲಕಿಯೊಬ್ಬಳು ಕ್ರಿಮಿನಾಶಕ ಸೇವಿಸಿದ್ದು, ಪೋಷಕರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ(Byatarayanapura) ನಡೆದಿದೆ.
ಬೆಂಗಳೂರು: ಬೆಸ್ಕಾಂ (BESCOM) ಕಂಬಕ್ಕೆ ಬೆಂಕಿ (Fire Accident) ತಗುಲಿ ಸ್ಫೋಟಗೊಂಡ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಬ್ಯಾಟರಾಯನಪುರ (Byatarayanapura) ಕ್ಷೇತ್ರದ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.
ಘಟನೆಯಿಂದ ಕಾರ್ಮಿಕರ ಮುಖ, ಕೆನ್ನೆ ಹಾಗೂ ಕೈ ಭಾಗಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಎರಡು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮ ಸ್ಥಳಕ್ಕೆ NSUI ಸಂಘಟನೆ ಮುತ್ತಿಗೆ ಯತ್ನ
ಬೆಂಗಳೂರು: ಅಂಬುಲೆನ್ಸ್‌ವೊಂದು (Ambulence) ಮೂರು ಕಾರು ಮತ್ತು ಒಂದು ಬೈಕ್‌ಗೆ ಸರಣಿಯಾಗಿ ಡಿಕ್ಕಿ (Accident) ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬ್ಯಾಟರಾಯನಪುರ (Byatarayanpura) ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ.
ಶುಕ್ರವಾರ ರಾತ್ರಿ 10:45ರ ಸುಮಾರಿಗೆ ಸರಣಿ ಅಪಘಾತ ನಡೆದಿದೆ. ಅಂಬುಲೆನ್ಸ್ ಚಾಲಕ ಸುಮಂತ್ ಮಾರ್ಕೆಟ್‌ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಬರುತ್ತಿದ್ದ ಸಂದರ್ಭ ನಿಯಂತ್ರಣ ಸಿಗದೆ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ: ಗಾಳಿಯಲ್ಲಿ ಹಾರಿ ಮರಕ್ಕೆ ಅಪ್ಪಳಿಸಿದ ಕಾರು – ಅಮೆರಿಕದಲ್ಲಿ ಮೂವರು ಭಾರತದ ಮಹಿಳೆಯರು ಸಾವು
ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಚಾಲಕ ಸುಮಂತ್‌ನನ್ನು ಬಂಧಿಸಿದ್ದಾರೆ. ಈ ಕುರಿತು ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಹೆಲಿಕಾಪ್ಟರ್ ಒಳಗೆ ಆಯತಪ್ಪಿ ಬಿದ್ದ ದೀದಿ- ಸಣ್ಣಪುಟ್ಟ ಗಾಯ
ಬೆಂಗಳೂರು: ಹಿಟ್ ಆ್ಯಂಡ್ ರನ್‌ಗೆ (Hit&Run) ವೃದ್ಧೆ (Old Woman) ಬಲಿಯಾದ ಘಟನೆ ಬ್ಯಾಟರಾಯನಪುರ (Byatarayanapura) ಬಳಿಯ ಮೈಸೂರು ರೋಡ್‌ನಲ್ಲಿ (Mysuru Road) ನಡೆದಿದೆ.
ಜಯಲಕ್ಷ್ಮಿ ಮೃತ ವೃದ್ಧೆ. ಇಂದು ಬೆಳಗ್ಗೆ 6 ಗಂಟೆಯ ವೇಳೆಗೆ ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ವೃದ್ಧೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಚಾಲಕ ವಾಹನದ ಸಮೇತ ಪರಾರಿಯಾಗಿದ್ದಾನೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಇದನ್ನೂ ಓದಿ: ಐಸಿಸ್ ಉಗ್ರರ ನಂಟು ಪ್ರಕರಣ – ಬೆಂಗ್ಳೂರು ಸೇರಿದಂತೆ 4 ರಾಜ್ಯಗಳ 19 ಕಡೆ NIA ದಾಳಿ
ಮೃತ ವೃದ್ಧೆ ಹೊಸಗುಡ್ಡದಹಳ್ಳಿ ನಿವಾಸಿಯಾಗಿದ್ದು, ಅಗರಬತ್ತಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪೊಲೀಸರು ಸಿಸಿಟಿವಿ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಕಿ ತಗುಲಿ ಬೀದಿ ಬದಿ ಅಂಗಡಿಗಳು ಭಸ್ಮ
ಬೆಂಗಳೂರು: ಭಾನುವಾರ ನಗರದಲ್ಲಿ (Bengaluru) ಸುರಿದ ಮಹಾಮಳೆಗೆ (Rain) ಯುವಕನೋರ್ವ ರಾಜಕಾಲುವೆಯಲ್ಲಿ (Raja Kaluve) ಕೊಚ್ಚಿ ಹೋದ ಘಟನೆ ಕೆಪಿ ಅಗ್ರಹಾರದ (KP Agrahara) ಬಳಿ ನಡೆದಿದೆ.
ಕೊಚ್ಚಿ ಹೋಗಿದ್ದ ಯುವಕನನ್ನು ಲೋಕೇಶ್ (27) ಎಂದು ಗುರುತಿಸಲಾಗಿದೆ. ಯುವಕನ ಮೃತದೇಹ ಬ್ಯಾಟರಾಯನಪುರದ (Byatarayanapura) ರಾಜಕಾಲುವೆ ಬಳಿ ಪತ್ತೆಯಾಗಿದೆ. ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಇದನ್ನೂ ಓದಿ: ಅಂಡರ್ ಪಾಸ್‌ನಲ್ಲಿ ಟೆಕ್ಕಿ ಸಾವು – ದುರ್ಘಟನೆ ಬಳಿಕ ಎಚ್ಚೆತ್ತ BBMP
ಈ ಸಂಬಂಧ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವೈಜ್ಞಾನಿಕ ರಾಜಕಾಲುವೆ ಕಾಮಗಾರಿಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ನಗರದ ಕೆಆರ್ ಸರ್ಕಲ್‍ನ ಅಂಡರ್ ಪಾಸ್‍ನಲ್ಲಿ ನಿಂತಿದ್ದ ಮಳೆ ನೀರಿನಲ್ಲಿ ಕಾರು ಮುಳುಗಿ ಟೆಕ್ಕಿ ಭಾನುರೇಖಾ ಎಂಬುವವರು ಸಾವನ್ನಪ್ಪಿದ್ದರು. ಈಗ ಯುವಕನ ಸಾವು ಮಳೆಯಿಂದ ಆದ ಎರಡನೇ ದುರ್ಘಟನೆ ಆಗಿದೆ. ಇದನ್ನೂ ಓದಿ: ಮಳೆ ಆರ್ಭಟಕ್ಕೆ ಮನೆಗೆ ನೀರು ನುಗ್ಗಿ ಜಗ್ಗೇಶ್ ಕಾರು ಮುಳುಗಡೆ
ಮತದಾರರಿಗೆ ಹಂಚಲು ಇಂಟರ್‌ನ್ಯಾಷನಲ್ ಶಾಲೆಯ (International School) ಹಿಂಭಾಗದ ಮೂರು ಮಳಿಗೆಗಳಲ್ಲಿ ವಸ್ತುಗಳನ್ನು ಸಂಗ್ರಹಿಸಿದ್ದಾರೆ ಎಂಬ ಖಚಿತ ಮಾಹಿತಿ ತಿಳಿದು ಅಧಿಕಾರಿಗಳು ಮುಂಜಾನೆ ದಾಳಿ ಮಾಡಿದ್ದಾರೆ. ಇದನ್ನೂ ಓದಿ: SSLC ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ BMTC
ಬೆಂಗಳೂರು: ಬೆಂಕಿ ಅವಘಡ (Fire accident) ಸಂಭವಿಸಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಾಯಂಡಹಳ್ಳಿಯ (Nayandahalli) ಪ್ರಮೋದ್ ಲೇಔಟ್ ಬಳಿಯ ಪ್ಲಾಸ್ಟಿಕ್ ಗೊಡಾನ್‍ನಲ್ಲಿ ಸಂಭವಿಸಿದೆ.
ರಾತ್ರಿ ಸಮಯದಲ್ಲಿ ಬೆಂಕಿ ಗೊಡಾನ್‍ಗೆ ತಗಲಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಮೂರು ಎಕರೆ ಇರುವ ಪ್ಲಾಸ್ಟಿಕ್ ಗೊಡಾನ್ ಸಂಪೂರ್ಣ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದ್ದು, ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು (Fire Department) ಆಗಮಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿವೆ. ಇದನ್ನೂ ಓದಿ: ಚರ್ಚ್ ಮೇಲೆ ಗುಂಡಿನ ದಾಳಿ 7 ಮಂದಿ ಸಾವು- ಹಲವರಿಗೆ ಗಾಯ
ಗೊಡಾನ್‍ನಲ್ಲಿದ್ದ ಪ್ಲಾಸ್ಟಿಕ್ ವಸ್ತುಗಳು ಹಾಗೂ ನಾಲ್ಕಕ್ಕೂ ಹೆಚ್ಚು ಗೂಡ್ಸ್ ವಾಹನಗಳು ಸುಟ್ಟು ಹೋಗಿದ್ದು, 50 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಗೊಡಾನ್‍ನ ಕಾರ್ಮಿಕರು ಅಲ್ಲೇ ನಿದ್ರೆಗೆ ಜಾರಿದ್ದು, ಬೆಂಕಿ ಹೊತ್ತಿಕೊಂಡಿದ್ದು ಗಮನಕ್ಕೆ ಬಂದಿಲ್ಲ. ಪಕ್ಕದಲ್ಲಿ ಕೆಲಸ ಮಾಡುತ್ತಿದ್ದ ಬಿಬಿಎಂಪಿ ಮಾರ್ಷಲ್‍ಗಳು ಹೋಗಿ ಕಾರ್ಮಿಕರನ್ನು ಎಚ್ಚರಿಸಿದ್ದಾರೆ. ಒಳಗಿದ್ದ ಗ್ಯಾಸ್ ಸಿಲಿಂಡರ್‌ಗಳನ್ನು ಹೊರಗೆ ಹಾಕಿಸಿ ಅನಾಹುತದ ತೀವ್ರತೆಯನ್ನು ಕಡಿಮೆ ಮಾಡಿದ್ದಾರೆ.
ಈ ಹಿಂದೆ ಸ್ಥಳೀಯರು ಗೊಡಾನ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಅನುಮತಿ ನೀಡಿದ್ದ ಬಿಬಿಎಂಪಿ ವಿರುದ್ಧ ಮತ್ತೆ ಜನ ತಿರುಗಿ ಬಿದ್ದಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ (Byatarayanapura) ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಕಾರು, ಬೈಕ್‌ಗೆ ಡಿಕ್ಕಿ – ಸವಾರ ಆಸ್ಪತ್ರೆ ದಾಖಲು
-ಹಣದ ಬ್ಯಾಗ್‍ನೊಂದಿಗೆ ರಾಜ್ಯಾದ್ಯಾಂತ ತೀರ್ಥಯಾತ್ರೆ -ಕಂತೆ ಕಂತೆ ನೋಟುಗಳೇ ಈತನ ತಲೆದಿಂಬು..!
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ನನ್ನ ಕಾರಿನ ಚಾಲಕ 75 ಲಕ್ಷ ರೂಪಾಯಿ ಹಣದ ಸಮೇತ, ಕಾರು ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ ನಗರದ ಬ್ಯಾಟರಾಯನಪುರ (Batarayanpura) ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ.
ಹೌದು, ಬೆಂಗಳೂರಿನ (Bengaluru) ಬ್ಯಾಟರಾಯನಪುರದಲ್ಲಿ ಎಲೆಕ್ಟ್ರಾನಿಕ್ ಸಿಟಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಹರೀಶ್ ಅವರ ಕಾರು ಚಾಲಕ ಸಂತೋಷ್ ಜೊತೆಗೆ ನಗರದ ಕಡೆಗೆ ಹೊರಟಿದ್ದರು. ಹೊರಡುವ ವೇಳೆ ವ್ಯವಹಾರ ಸಂಬಂಧ 75 ಲಕ್ಷ ರೂ. ಹಣದ ಬ್ಯಾಗ್ ಅನ್ನು ಕಾರಿನಲ್ಲಿಟ್ಟುಕೊಂಡು ಹೊರಟಿದ್ದರು. ಕಾರು ಬ್ಯಾಟರಾಯನಪುರದ ಬಳಿ ಬರುತ್ತಿದ್ದಂತೆ, ಮಾಲೀಕ ಹರೀಶ್ ಸಿಗರೇಟು ಸೇದುವುದಕ್ಕೆ ಅಂತಾ ಗಾಡಿ ನಿಲ್ಲಿಸಲು ಹೇಳಿ ಕೆಳಗೆ ಇಳಿದಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನ – ತುಮಕೂರಿಗೂ ಲಗ್ಗೆ ಇಟ್ಟ ನಕಲಿ ಭಗವದ್ಗೀತೆ ಪುಸ್ತಕ ಜಾಲ
ಇದೇ ಸಮಯಕ್ಕಾಗಿ ಕಾಯುತ್ತಿದ್ದ ಚಾಲಕ ಸಂತೋಷ್, ಕ್ಷಣಮಾತ್ರದಲ್ಲೇ ಪೋರ್ಡ್ ಕಾರಿನ ಸಮೇತ 75 ಲಕ್ಷ ಹಣ ರೂ. ದೋಚಿ ಎಸ್ಕೇಪ್ ಆಗಿದ್ದಾನೆ. ಹೀಗೆ ಹಣ ಜೊತೆಗೆ ಎಸ್ಕೇಪ್ ಆದ ಚಾಲಕ, ರಾಜ್ಯದ ಎಲ್ಲಾ ದೇವಸ್ಥಾನಗಳನ್ನು ಸುತ್ತಾಡಿ, ಯಾರಿಗೂ ಅನುಮಾನ ಬಾರದಂತೆ, ದೇವಸ್ಥಾನಗಳಲ್ಲಿ ಕೊಡುವ ಪ್ರಸಾದ ತಿಂದುಕೊಂಡು, ದೇವಸ್ಥಾನದ ಅವರಣದಲ್ಲೇ 75 ಲಕ್ಷ ರೂ. ಹಣದ ಬ್ಯಾಗ್ ತಲೆದಿಂಬು ಮಾಡಿಕೊಂಡು, ಯಾರಿಗೂ ಅನುಮಾನ ಬಾರದಂತೆ ನೆಮ್ಮದಿಯ ನಿದ್ದೆ ಮಾಡುತ್ತಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇದೀಗ ಆರೋಪಿಯನ್ನು ಶೃಂಗೇರಿಯಲ್ಲಿ ಬಂಧಿಸಿ 72 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾಮಾನ್ಯವಾಗಿ ಹಣ ಕಳೆದುಕೊಂಡ ಮರುಕ್ಷಣವೇ ಪೊಲೀಸರಿಗೆ ದೂರು ನೀಡುತ್ತಾರೆ. ಆದರೆ 75 ಲಕ್ಷ ರೂ. ಹಣವನ್ನು ತನ್ನ ಡ್ರೈವರ್ ಕಳ್ಳತನ ಮಾಡಿ ಎಸ್ಕೇಪ್ ಆಗಿರುವುದು ಕಣ್ಣಾರೆ ನೋಡಿದರೂ ಕೂಡ, ಉದ್ಯಮಿ ಹರೀಶ್ ಪೊಲೀಸರಿಗೆ ದೂರು ನೀಡಿಲ್ಲ. ಘಟನೆ ನಡೆದು 20 ದಿನಗಳ ನಂತರ ಪೊಲೀಸರಿಗೆ ದೂರು ನೀಡಿದ ಹಿಂದಿನ ಸತ್ಯವೇನು ಎಂಬ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಆದರೆ ಉದ್ಯಮಿ ಮಾತ್ರ 75 ಲಕ್ಷ ರೂ. ಹಣದ ಮೂಲದ ಬಗ್ಗೆ ಸೂಕ್ತ ಉತ್ತರ ನೀಡಿಲ್ಲ. ಬದಲಿದೆ, ಡ್ರೈವರ್‌ನ ಪತ್ತೆ ಮಾಡುವುದಕ್ಕೆ ತಾನೇ ಪ್ರಯತ್ನ ಪಟ್ಟು ಕೊನೆಗೆ ದೂರು ನೀಡಿದ್ದಾರೆ. ಹೀಗಾಗಿ ಅಷ್ಟು ದೊಡ್ಡ ಮೊತ್ತದ ಹಣ ಎಲ್ಲಿಂದ ಬಂತು ಎಂಬ ಬಗ್ಗೆ ಪರಿಶೀಲನೆ ನಡೆಸಲು ಐಟಿ ಇಲಾಖೆಗೆ ಬ್ಯಾಟರಾಯನಪುರ ಪೊಲೀಸರು, ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಯುವಜನತೆಗೆ ಕೇಂದ್ರ ಸರ್ಕಾರ 10 ಲಕ್ಷ ಉದ್ಯೋಗ ಒದಗಿಸುವ ಕೆಲಸ ಮಾಡ್ತಿದೆ – ಮೋದಿ
ಪೊಲೀಸರಿಗೆ ಇರುವ ಮಾಹಿತಿ ಪ್ರಕಾರ, 75 ಲಕ್ಷ ರೂ. ಬ್ಲಾಕ್ ಮನಿ ಇರಬಹುದು ಅಂತಾ ಶಂಕಿಸಲಾಗಿದೆ. ಈ ವಿಚಾರ ತಿಳಿದೇ ಡ್ರೈವರ್ ಹಣವನ್ನು ದೋಚಿದ್ದ ಎನ್ನಲಾಗಿದೆ. ಸದ್ಯ ತನಿಖೆ ಮುಂದುವರೆದಿದ್ದು, ನಂತವಷ್ಟೇ ಈ ಹೈಡ್ರಾಮದ ಆಸಲಿ ಕಹಾನಿ ತಿಳಿಯಬೇಕಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕೇಸರಿ ಫೌಂಡೇಷನ್‌ನ ಸಂಸ್ಥಾಪಕರಾದ ತಮ್ಮೇಶ್ ಗೌಡರ ನೇತೃತ್ವದಲ್ಲಿ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಸುಮಾರು 50 ದೇವಾಲಯಗಳು ಹಾಗೂ ಅಪಾರ್ಟ್‌ಮೆಂಟ್‌ಗಳಲ್ಲಿ ಏಕಕಾಲದಲ್ಲಿ ಆಷಾಢ ಅಷ್ಟಲಕ್ಷ್ಮಿ ಪೂಜೆ ಮೊದಲ ಆಷಾಢ ಶುಕ್ರವಾರವಾದ ಜುಲೈ 1ರಂದು ಅತ್ಯಂತ ವೈಭವದಿಂದ ನಡೆಯಿತು. ಈ ಪೂಜೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.
ಇದೇ ವೇಳೆ ತಮ್ಮೇಶ್ ಗೌಡ ಮಾತನಾಡುತ್ತಾ, ಒಂದು ಮನೆಗೆ ಶಕ್ತಿ ಅಂದರೆ ಆ ವಾನೆಯ ಮಹಿಳೆ, ಈ ಮಹಿಳೆಯಿಂದ ಲಕ್ಷ್ಮಿ ಪೂಜೆ ಮಾಡಿಸುವುದರಿಂದ ಆ ಮನೆಗೆ ಲಕ್ಷ್ಮೀ ಬರುತ್ತದೆ ಹಾಗೂ ಸುಖ-ನೆಮ್ಮದಿ ಬೆರೆಯುತ್ತದೆ ಎಂಬ ನಂಬಿಕೆಯಿಂದ ಈ ಪೂಜೆಯನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಯುವ ಸಾಹಿತ್ಯ ರತ್ನ ಪ್ರಶಸ್ತಿಗೆ ಶರಣು ಹುಲ್ಲೂರು ಆಯ್ಕೆ
ಕಳೆದ ವರ್ಷವೂ ಸಹ ಆಷಾಢ ಅಷ್ಟಲಕ್ಷ್ಮಿ ಪೂಜೆ ಹಾಗೂ ದುರ್ಗಾಷ್ಟಮಿಯ ದಿನ ದುರ್ಗಾಪೂಜೆಯನ್ನು ವಾಹಿಳೆಯರ ನೇತೃತ್ವದಲ್ಲಿ ಮಾಡಿದ್ದೆವು. ಸಾವಿರಾರು ಮಹಿಳೆಯರು ಪಾಲ್ಗೊಂಡಿದ್ದರು. ಅದೇ ರೀತಿ ಈ ಬಾರಿಯು ಸಹ ಆಷಾಢ ಅಷ್ಟಲಕ್ಷ್ಮಿ ಪೂಜೆಯನ್ನು ಇಂದು ಯಶಸ್ವಿಯಾಗಿ ನೆರವೇರಿಸಿದೆವು ಹಾಗೂ ಪಾಲ್ಗೊಂಡ ಎಲ್ಲಾ ಮಹಿಳೆಯರಿಗೂ ಎರಡು ಮಣ್ಣಿನ ದೀಪಗಳು, ಬಸ್ಸಿ, ಆಂಶಿನ, ಕುಂಕುಮ, ಬಳೆ, ಕನ್ನಡ ಬಟ್ಟೆ, ಬಾಳೆಹಣ್ಣು, ತೆಂಗಿನಕಾಯಿ ಸೇರಿ ಬಾಗಿನ ಮತ್ತು ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ತಾಯಿ ಪ್ರಸಾದ ನೀಡಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಲಡ್ಡುಗಳನ್ನು ಮಾಡಿಸಿ ಪ್ರಸಾದ ನೀಡಲಾಯಿತು ಎಂದರು.
ಬೆಂಗಳೂರು: ಮಾರಕ ಕೋವಿಡ್ ವೈರಸ್‍ನ ಮೂರು ಅಲೆಗಳ ನಂತರ ಯುಗಾದಿ ಸಂಭ್ರಮ ಗರಿಗೆದರಿದೆ. ಹಬ್ಬದ ನಂತರದ ದಿನದ ಹೊಸ ತೊಡಕಿಗೆ ನಗರದ ಗ್ರಾಹಕರು ಕ್ಯೂ ನಿಂತು ಮಟನ್ ಖರೀದಿಸುವಲ್ಲಿ ನಿರತರಾಗಿದ್ದಾರೆ. ಅದರಲ್ಲೂ ಬೆಳ್ಳಂ ಬೆಳಗ್ಗೆ ನಗರದ ಪ್ರಸಿದ್ಧ ಪಾಪಣ್ಣ ಮಟನ್ ಸ್ಟಾಲ್ ಮುಂದೆ ಕಿಲೋಮೀಟರ್ ಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಜನ ಮಟನ್ ಖರೀದಿಸುತ್ತಿದ್ದಾರೆ.
ಪ್ರಮುಖವಾಗಿ ದಕ್ಷಿಣ ಕರ್ನಾಟಕದಲ್ಲಿ ಯುಗಾದಿ ಹಬ್ಬದ ನಂತರದ ದಿನ ಆಚರಿಸುವ ಹೊಸ ತೊಡಕನ್ನು ಮಾಂಸಾಹಾರಿ ಭಕ್ಷ್ಯಗಳನ್ನು ಉಣಬಡಿಸುವ ಮೂಲಕ ಸಂಭ್ರಮಿಸಲಾಗುತ್ತದೆ. ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಪಾಪಣ್ಣ ಮಟನ್ ಸ್ಟಾಲ್‍ನಲ್ಲಿ ಮಟನ್ ಖರೀದಿಸುವವರ ಸಂಖ್ಯೆ ಹೆಚ್ಚು. ಸಿಲಿಕಾನ್ ಸಿಟಿಯ ಮೂಲೆ, ಮೂಲೆಗಳಿಂದಲೂ ಜನ ಸರತಿ ಸಾಲಲ್ಲಿ ನಿಂತು ಮಟನ್ ಖರೀದಿಸುತ್ತಾರೆ. ಉತ್ತಮ ಗುಣಮಟ್ಟದ ಮತ್ತು ತಾವು ಕೇಳಿದಂತೆ ಮಟನ್ ನೀಡುತ್ತಾರೆ ಎಂಬ ಕಾರಣಕ್ಕೆ ಬೆಲೆ ಕೊಂಚ ಹೆಚ್ಚಾದರೂ ಗ್ರಾಹಕರು ಇಲ್ಲಿ ಸರತಿ ಸಾಲಲ್ಲಿ ನಿಂತು ಮಟನ್ ಖರೀದಿಸುವುದು ವರ್ಷಗಳಿಂದ ನಡೆದುಕೊಂಡು ಬಂದಿದೆ. ಇದನ್ನೂ ಓದಿ: ಹಲಾಲ್ ಕಟ್, ಜಟ್ಕಾಕಟ್ ಫೈಟ್ ನಡುವೆಯೇ ಹೊಸ ತೊಡಕಿಗೆ ಮಾಂಸ ಖರೀದಿ ಜೋರು
74 ವರ್ಷಗಳ ಇತಿಹಾಸವಿರುವ ಪಾಪಣ್ಣ ಮಟನ್ ಸ್ಟಾಲ್: ಪಾಪಣ್ಣ ಮಟನ್ ಸ್ಟಾಲ್ ಸಿಬ್ಬಂದಿ, ಗ್ರಾಹಕರು ಮತ್ತು ವ್ಯಾಪರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಿ ಸಕಲ ರೀತಿಯ ಸಿದ್ಧತೆ ನಡೆಸಿದ್ದರು. ಸುಮಾರು 74 ವರ್ಷಗಳ ಇತಿಹಾಸವಿರುವ ಪಾಪಣ್ಣ ಮಟನ್ ಸ್ಟಾಲ್ ಮೂರು ತಲೆಮಾರಿನಿಂದ ನಡೆದುಕೊಂಡು ಬಂದಿದೆ. ಪ್ರಸ್ತುತ ಪಾಪಣ್ಣರ ಮೊಮ್ಮಗ ರೋಹಿತ್ ಅಂಗಡಿಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇದನ್ನೂ ಓದಿ: 13ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
1,500 ಕಿಲೋ ಮಟನ್ ಮಾರಾಟ: ಪಾಪಣ್ಣ ಮಟನ್ ಸ್ಟಾಲ್‍ನಲ್ಲಿ ಜನ ಏಕೆ ಮುಗಿಬಿದ್ದು ಮಾಂಸ ಖರೀದಿ ಮಾಡುತ್ತಾರೆ ಎಂಬ ಪ್ರಶ್ನೆಗೆ ಇಲ್ಲಿ ಗುಣಮಟ್ಟಕ್ಕಷ್ಟೇ ಬೆಲೆ. ಆಯ್ದ ಮತ್ತು ಉತ್ತಮ ಗುಣಮಟ್ಟದ ಕುರಿಗಳನ್ನು ಮಾತ್ರ ಬಳಕೆ ಮಾಡಲಾಗುತ್ತದೆ. ಇಲ್ಲಿನ ಸಿಬ್ಬಂದಿ ಕುರಿಗಳನ್ನು ಕನಕಪುರ, ರಾಮನಗರ, ಗೌರಿಬಿದನೂರು ಮತ್ತು ಮಾಗಡಿಯಿಂದ ಆರಿಸಿ ತರುತ್ತಾರೆ. ಪ್ರತಿ ವರ್ಷ ಈ ದಿನ ಸರಾಸರಿ 1,500 ಕಿಲೋ ಮಟನ್ ಅನ್ನು ಇಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ರೋಹಿತ್ ತಿಳಿಸಿದ್ದಾರೆ.