Tag: ಬ್ರಹ್ಮೋಸ್‌

  • ಐಎನ್‌ಎಸ್‌ ವಿಕ್ರಾಂತ್‌ ಪಾಕ್‌ಗೆ ನಿದ್ರೆಯಿಲ್ಲದಂತೆ ಮಾಡಿತು, ಬ್ರಹ್ಮೋಸ್‌ ತನ್ನ ಸಾಮರ್ಥ್ಯ ತೋರಿತು – ನರೇಂದ್ರ ಮೋದಿ

    ಐಎನ್‌ಎಸ್‌ ವಿಕ್ರಾಂತ್‌ ಪಾಕ್‌ಗೆ ನಿದ್ರೆಯಿಲ್ಲದಂತೆ ಮಾಡಿತು, ಬ್ರಹ್ಮೋಸ್‌ ತನ್ನ ಸಾಮರ್ಥ್ಯ ತೋರಿತು – ನರೇಂದ್ರ ಮೋದಿ

    – ನೌಕಾಪಡೆ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ

    ಪಣಜಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಗೋವಾ ಕರಾವಳಿಯಲ್ಲಿ (Goa Coast) ಭಾರತೀಯ ನೌಕಾಪಡೆಯೊಂದಿಗೆ ದೀಪಾವಳಿ ಆಚರಿಸಿದರು. ಗೋವಾದ ಕಾರವಾರ ಕರಾವಳಿಯಲ್ಲಿರುವ ಐಎನ್ಎಸ್ ವಿಕ್ರಾಂತ್‌ಗೆ ಭೇಟಿ ನೀಡಿದ ಅವರು ನೌಕಾಪಡೆ ಸೇನಾ ಸಿಬ್ಬಂದಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ್ರು. ಈ ವೇಳೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಐಎನ್‌ಎಸ್‌ ವಿಕ್ರಾಂತ್‌ ಹಾಗೂ ಬ್ರಹ್ಮೋಸ್‌ (BrahMos), ಆಕಾಶ್‌ ಕ್ಷಿಪಣಿಗಳ ಸಾಮರ್ಥ್ಯವನ್ನು ಕೊಂಡಾಡಿದರು.

    ಇಂದು ಅದ್ಭುತ ದಿನ, ಈ ದೃಶ್ಯ ಅವಿಸ್ಮರಣೀಯ. ಈ ದಿನ ನನ್ನ ಬಳಿ ಒಂದು ಕಡೆ ಸಾಗರವಿದೆ, ಮತ್ತೊಂದೆಡೆ ಭಾರತ ಮಾತೆಯ ವೀರ ಸೈನಿಕರ ಬಲವಿದೆ. ಇನ್ನೊಂದೆಡೆ ಅನಂತ ದಿಗಂತ, ಅನಂತ ಆಕಾಶ ಹಾಗೂ ಅನಂತ ಶಕ್ತಿಯ ಸಂಕೇತವಾದ ಐಎನ್ಎಸ್ ವಿಕ್ರಾಂತ್ (INS Vikrant) ಇದೆ. ಸಾಗರ ನೀರಿನ ಮೇಲೆ ಹೊಳೆಯುವ ಸೂರ್ಯನ ಕಿರಣಗಳು ವೀರ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಎಂದು ಪ್ರಧಾನಿ ಮೋದಿ ಬಣ್ಣಿಸಿದರು.

    ನೌಕಾಪಡೆಯ ಎಲ್ಲಾ ವೀರ ಸೈನಿಕರೊಂದಿಗೆ ಪವಿತ್ರ ಹಬ್ಬ ದೀಪಾವಳಿ (Deepavali Festival) ಆಚರಿಸುತ್ತಿರುವುದು ನನ್ನ ಅದೃಷ್ಟ. ಐಎನ್ಎಸ್ ವಿಕ್ರಾಂತ್ ಸ್ವಾವಲಂಬಿ ಭಾರತದ ಸಂಕೇತ, ನಾನು ನಮ್ಮ ಸಶಸ್ತ್ರ ಪಡೆಗಳಿಗೆ ವಿಶೇಷವಾಗಿ ವಂದನೆಗಳನ್ನು ಸಲ್ಲಿಸುತ್ತೇನೆ. ಏಕೆಂದ್ರೆ ಈ ಮೂರು ಪಡೆಗಳ ಪ್ರಚಂಡ ಸಮನ್ವಯವು ಪಾಕಿಸ್ತಾನವನ್ನು (Pakistan) ಆಪರೇಷನ್ ಸಿಂಧೂರದಲ್ಲಿ ಶರಣಾಗುವಂತೆ ಮಾಡಿತು. ಬ್ರಹ್ಮೋಸ್‌ ಆಕಾಶ್‌ ನಂತರ ಕ್ಷಿಪಣಿಗಳು ಆಪರೇಷನ್‌ ಸಿಂಧೂರದಲ್ಲಿ ತಮ್ಮ ಸಾಮರ್ಥ್ಯವನ್ನ ಸಾಬೀತುಪಡಿಸಿವೆ. ಹೀಗಿ ಇಂದು ಪ್ರಪಂಚದಾದ್ಯಂತ ಹಲವಾರು ದೇಶಗಳು ಈಗ ಬ್ರಹ್ಮೋಸ್‌ ಕ್ಷಿಪಣಿ ಖರೀದಿಸಲು ಆಸಕ್ತಿ ತೋರಿವೆ ಎಂದು ಮೋದಿ ಹೇಳಿದರು.

    ನಾನು ಮಿಲಿಟರಿ ಉಪಕರಣಗಳ ಶಕ್ತಿಯನ್ನು ನೋಡುತ್ತಿದ್ದೆ, ಈ ಬೃಹತ್ ಹಡಗುಗಳು, ಗಾಳಿಗಿಂತಲೂ ವೇಗವಾಗಿ ಹಾರುವ ವಿಮಾನಗಳು, ಜಲಾಂತರ್ಗಾಮಿ ನೌಕೆಗಳು ಅವು ತಮ್ಮಲ್ಲಿಯೇ ಪ್ರಭಾವಶಾಲಿಯಾಗಿವೆ. ಇದರ ಜೊತೆಗೆ ಅವುಗಳನ್ನು ನಿರ್ವಹಿಸುವವರ ಶೌರ್ಯ ಸಾಹಸ, ಅವುಗಳನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಮಾಡುತ್ತವೆ. ಉದಾಹರಣೆಗೆ ಈ ಹಡಗುಗಳು ಕಬ್ಬಿಣದಿಂದಲೇ ಮಾಡಿರಬಹುದು ಆದ್ರೆ, ನೀವು ಹತ್ತಿದಾಗ ಅವು ಜೀವಂತ ಹಾಗೂ ಉಸಿರಾಟ ಇರುವ ಶಕ್ತಿಶಾಲಿ ಅಸ್ತ್ರಗಳಾಗಿ ಬದಲಾಗುತ್ತವೆ ಎಂದು ಸೈನಿಕರನ್ನ ಶೌರ್ಯವನ್ನು ಹಾಡಿಹೊಗಳಿದರು.

    2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಪ್ರಧಾನಿ ಮೋದಿ ಅವರು ಸಶಸ್ತ್ರ ಪಡೆಗಳ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುತ್ತಿದ್ದಾರೆ. 2014ರಲ್ಲಿ ಲಡಾಖ್‌ನಲ್ಲಿರುವ ಸಿಯಾಚಿನ್ ಹಿಮನದಿಗೆ ಭೇಟಿ ನೀಡಿದ್ದರು. 2015 ರಲ್ಲಿ, ಅವರು 1965ರ ಭಾರತ-ಪಾಕಿಸ್ತಾನ ಯುದ್ಧದ ವೀರರಿಗೆ ಗೌರವ ಸಲ್ಲಿಸಲು ಪಂಜಾಬ್‌ನ ಅಮೃತಸರದಲ್ಲಿರುವ ಡೋಗ್ರೈ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು. 2016 ರಲ್ಲಿ, ದೀಪಾವಳಿಯಂದು ಹಿಮಾಚಲ ಪ್ರದೇಶದ ಭಾರತ-ಚೀನಾ ಗಡಿಯ ಬಳಿ ಗಡಿ ಭದ್ರತಾ ಪಡೆ ಮತ್ತು ಸೇನಾ ಸಿಬ್ಬಂದಿಯನ್ನು ಭೇಟಿ ಮಾಡಿದರು. 2017ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗುರೆಜ್ ವಲಯದಲ್ಲಿ ಭದ್ರತಾ ಪಡೆಗಳನ್ನು ಭೇಟಿ ಮಾಡಿದರು. 2018 ರಲ್ಲಿ, ಪ್ರಧಾನಿಯವರು ಉತ್ತರಾಖಂಡದ ಹರ್ಷಿಲ್‌ನಲ್ಲಿ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಸಿಬ್ಬಂದಿಯೊಂದಿಗೆ ದೀಪಾವಳಿಯನ್ನು ಕಳೆದರು. 2019 ರಲ್ಲಿ, ಅವರು ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಸೈನಿಕರನ್ನು ಭೇಟಿ ಮಾಡಿದರು.

    2020ರಲ್ಲಿ, ಪ್ರಧಾನ ಮಂತ್ರಿಗಳು ರಾಜಸ್ಥಾನದ ಜೈಸಲ್ಮೇರ್‌ನ ಲೋಂಗೆವಾಲಾದಲ್ಲಿದ್ದರು. 2021 ರಲ್ಲಿ, ಪ್ರಧಾನ ಮಂತ್ರಿಗಳು ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದರು. 2022 ರಲ್ಲಿ, ಪ್ರಧಾನ ಮಂತ್ರಿ ಮೋದಿ ಹುತಾತ್ಮರಿಗೆ ಗೌರವ ಸಲ್ಲಿಸಲು ಕಾರ್ಗಿಲ್‌ಗೆ ಭೇಟಿ ನೀಡಿದರು. 2023 ಮತ್ತು 2024 ರಲ್ಲಿ, ಅವರು ಹಿಮಾಚಲ ಪ್ರದೇಶದ ಲೆಪ್ಚಾ ಮತ್ತು ಗುಜರಾತ್‌ನ ಸರ್ ಕ್ರೀಕ್‌ನಲ್ಲಿ ನಿಯೋಜಿಸಲಾದ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು.

  • ಪಾಕ್‌ನ ಪ್ರತಿಯೊಂದು ಭೂಪ್ರದೇಶ ಈಗ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ – ರಾಜನಾಥ್ ಸಿಂಗ್

    ಪಾಕ್‌ನ ಪ್ರತಿಯೊಂದು ಭೂಪ್ರದೇಶ ಈಗ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ – ರಾಜನಾಥ್ ಸಿಂಗ್

    ಲಕ್ನೋ: ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ. `ಆಪರೇಷನ್ ಸಿಂಧೂರ’ (Operation Sindoor) ಸಮಯದಲ್ಲಿ ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಮೂಲಕ ಭಾರತ ತನ್ನ ಶತ್ರುಗಳನ್ನು ಬಿಡುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದರು.

    ಉತ್ತರ ಪ್ರದೇಶದ (Uttara Pradesh) ಲಕ್ನೋದಲ್ಲಿರುವ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್‌ಗೆ ಹಸಿರು ನಿಶಾನೆ ನೀಡಿದರು. ಬಳಿಕ ಮಾತನಾಡಿದ ಅವರು, `ಆಪರೇಷನ್ ಸಿಂಧೂರ’ ಇದು ಕೇವಲ `ಟ್ರೇಲರ್’ ಮಾತ್ರ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು.ಇದನ್ನೂ ಓದಿ: ಪಾಕ್‌ನಲ್ಲಿರುವ ಆಫ್ಘನ್ನರಿಗೆ ದೇಶ ತೊರೆಯುವಂತೆ ರಕ್ಷಣಾ ಸಚಿವ ಖವಾಜಾ ವಾರ್ನಿಂಗ್‌

    ಆಪರೇಷನ್ ಸಿಂಧೂರ ಗೆಲುವು ಒಂದು ಸಣ್ಣ ಘಟನೆಯಲ್ಲ. ಗೆಲುವು ನಮಗೆ ಅಭ್ಯಾಸವಾಗಿದೆ, ನಮ್ಮ ವಿರೋಧಿಗಳು ಬ್ರಹ್ಮೋಸ್‌ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಬ್ರಹ್ಮೋಸ್ ಕೇವಲ ಕ್ಷಿಪಣಿಯಲ್ಲ, ಬದಲಾಗಿ ಭಾರತದ ಬೆಳೆಯುತ್ತಿರುವ ಸ್ಥಳೀಯ ಸಾಮರ್ಥ್ಯಗಳ ಸಂಕೇತವಾಗಿದೆ. ವೇಗ, ನಿಖರತೆ ಮತ್ತು ಶಕ್ತಿಯ ಈ ಸಂಯೋಜನೆಯು ಬ್ರಹ್ಮೋಸ್ ಅನ್ನು ವಿಶ್ವದ ಅತ್ಯುತ್ತಮ ಕ್ಷಿಪಣಿಗಳಲ್ಲಿ ಒಂದನ್ನಾಗಿ ಮಾಡುತ್ತಿದೆ. ಬ್ರಹ್ಮೋಸ್ ಭಾರತೀಯ ಸಶಸ್ತ್ರ ಪಡೆಗಳ ಬೆನ್ನೆಲುಬಾಗಿ ಮಾರ್ಪಟ್ಟಿದೆ. ಭಾರತ ತನ್ನ ಭದ್ರತಾ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದರು.

    ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ಭಾರತವು ಈಗ ತನ್ನ ಭದ್ರತಾ ಅಗತ್ಯಗಳನ್ನು ಮಾತ್ರವಲ್ಲದೆ ಪ್ರಪಂಚದಾದ್ಯಂತದ ತನ್ನ ಸ್ನೇಹಪರ ರಾಷ್ಟ್ರಗಳ ಭದ್ರತಾ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ. ಲಕ್ನೋದ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್‌ಗೆ ಚಾಲನೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ‘ಮೇಕ್ ಇನ್ ಇಂಡಿಯಾ’ ಪ್ರತಿಜ್ಞೆಯನ್ನು ಈಡೇರಿಸುವ ಅದೃಷ್ಟಶಾಲಿ ನಾನು. ಇದು ಆತ್ಮನಿರ್ಭರದ ಅಡಿಪಾಯ ಎಂದರು.ಇದನ್ನೂ ಓದಿ: ಪಂಜಾಬ್‌ | ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್‌

  • Operation Sindoor – 1 ಬ್ರಹ್ಮೋಸ್‌ ಕ್ಷಿಪಣಿಯ ದರ ಎಷ್ಟು? ಸ್ಪೀಡ್‌ ಎಷ್ಟಿರುತ್ತೆ?

    Operation Sindoor – 1 ಬ್ರಹ್ಮೋಸ್‌ ಕ್ಷಿಪಣಿಯ ದರ ಎಷ್ಟು? ಸ್ಪೀಡ್‌ ಎಷ್ಟಿರುತ್ತೆ?

    – 1998 ರಲ್ಲಿ ಭಾರತ – ರಷ್ಯಾ ಜಂಟಿ ಹೂಡಿಕೆಯಲ್ಲಿ ಕಂಪನಿ ಆರಂಭ
    – ಪಾಕ್‌ ಉಗ್ರರ ನೆಲೆಗಳ ಮೇಲೆ ನಿಖರ ದಾಳಿ

    ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಯ ಬಳಿಕ ಭಾರತ (India) ಮತ್ತು ರಷ್ಯಾ (Russia) ಜಂಟಿಯಾಗಿ ಉತ್ಪಾದನೆ ಮಾಡಿದ ಬ್ರಹ್ಮೋಸ್‌ ಕ್ಷಿಪಣಿ (BrahMos Missile) ಖರೀದಿಗೆ ಹಲವು ದೇಶಗಳು ಈಗ ಆಸಕ್ತಿ ತೋರಿಸಿವೆ.

    ಹಲವು ದೇಶಗಳು ಕ್ಷಿಪಣಿ ಖರೀದಿಗೆ ಆಸಕ್ತಿ ತೋರಿಸಲು ಕಾರಣವೂ ಇದೆ. ಬ್ರಹ್ಮೋಸ್‌ ಚೀನಾದ HQ-9 ವಾಯು ರಕ್ಷಣಾ ವ್ಯವಸ್ಥೆಗೂ ಕಾಣದಂತೆ ಪಾಕ್‌ ಒಳಗಡೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಕಡಿಮೆ ಬೆಲೆಯಲ್ಲಿ ನಿಖರ ದಾಳಿ ನಡೆಸಿದ್ದಕ್ಕೆ ಈಗ ಸುಮಾರು 18 ದೇಶಗಳು ಬ್ರಹ್ಮೋಸ್‌ ಕ್ಷಿಪಣಿ ಖರೀದಿಗೆ ಆಸಕ್ತಿ ತೋರಿಸಿವೆ.

    250 ಮಿಲಿಯನ್ ಡಾಲರ್‌ (ಇಂದಿನ ಮೌಲ್ಯದಲ್ಲಿ ಹೇಳುವುದಾದರೆ 2,135 ಕೋಟಿ ರೂ.) ಹೂಡಿಕೆಯೊಂದಿಗೆ 1998ರಲ್ಲಿ ಬ್ರಹ್ಮೋಸ್‌ ಕ್ಷಿಪಣಿ ತಯಾರಿಸುವ ಕಂಪನಿ ಆರಂಭವಾಯಿತು. ಬ್ರಹ್ಮೋಸ್ ಕ್ಷಿಪಣಿಯ ಅಭಿವೃದ್ಧಿಯ ವೆಚ್ಚ ಅಧಿಕೃತವಾಗಿ ಎಲ್ಲಿಯೂ ಪ್ರಕಟವಾಗಿಲ್ಲ. ಆದರೆ ಮಾಧ್ಯಮ ವರದಿಗಳ ಪ್ರಕಾರ, ಬ್ರಹ್ಮೋಸ್‌ ಉತ್ಪಾದನಾ ಘಟಕವನ್ನು ಅಭಿವೃದ್ಧಿಪಡಿಸಲು 300 ಕೋಟಿ ರೂ.ವೆಚ್ಚ ಆಗಲಿದ್ದು ಪ್ರತಿ ಕ್ಷಿಪಣಿಗೆ ಮಾರುಕಟ್ಟೆ ಮೌಲ್ಯದಲ್ಲಿ ಸುಮಾರು 34 ಕೋಟಿ ರೂ. ವೆಚ್ಚವಾಗುತ್ತದೆ ಎಂದು ವರದಿಯಾಗಿದೆ.

    ವೇಗ ಎಷ್ಟು?
    ಎಷ್ಟು ವೇಗದಲ್ಲಿ ಹೋಗುತ್ತದೆ ಅಂದರೆ ಮ್ಯಾಕ್ 2.8 ರಿಂದ ಮ್ಯಾಕ್ 3.5 ವೇಗದಲ್ಲಿ ಸಂಚರಿಸುತ್ತದೆ. ಕ್ಷಿಪಣಿಗಳು ಶಬ್ದದ ವೇಗಕ್ಕಿಂತಲೂ ವೇಗವಾಗಿ ಹೋಗುವುದರಿಂದ ಅದರ ವೇಗವನ್ನು ಅಳೆಯಲು ಮ್ಯಾಕ್‌ ಸಂಖ್ಯೆಗಳನ್ನು ಬಳಸಲಾಗುತ್ತದೆ. ಶಬ್ಧದ ವೇಗ ಗಂಟೆಗೆ 1,234 ಕಿ.ಮೀ. ಅಂದರೆ ಬ್ರಹ್ಮೋಸ್‌ ಕ್ಷಿಪಣಿ ಗಂಟೆಗೆ 3,455 ಕಿ.ಮೀಗಿಂತಲೂ ಹೆಚ್ಚು ವೇಗದಲ್ಲಿ ಸಂಚರಿಸಿ ನೆಲೆಗಳನ್ನು ಧ್ವಂಸ ಮಾಡುತ್ತದೆ. ಇದನ್ನೂ ಓದಿ: ಪಾಕ್‌ ವಿರುದ್ಧ ‘ಬ್ರಹ್ಮೋಸ್‌’ ಪರಾಕ್ರಮ – ಬ್ರಹ್ಮೋಸ್‌ ಕ್ಷಿಪಣಿಗಾಗಿ 18 ರಾಷ್ಟ್ರಗಳಿಂದ ಬೇಡಿಕೆ

    ಬ್ರಹ್ಮೋಸ್‌ ಅಭಿವೃದ್ಧಿಯಾಗಿದ್ದು ಹೇಗೆ?
    ಸ್ವಾತಂತ್ರ್ಯ ಸಿಕ್ಕಿದ ಬಳಿಕ ಭಾರತ (India) ಶಾಂತಿ ಮಂತ್ರವನ್ನು ಅನುಸರಿಸಿದರೂ ಪಾಕಿಸ್ತಾನ ಮತ್ತು ಚೀನಾದ (China) ಮಧ್ಯೆ ಯುದ್ಧ ನಡೆಸಬೇಕಾಯಿತು. 1947, 1965, 1971 ರಲ್ಲಿ ಪಾಕಿಸ್ತಾನದ ಜೊತೆ 1962 ರಲ್ಲಿ ಚೀನಾದ ಜೊತೆ ಯುದ್ಧ ಮಾಡಬೇಕಾಯಿತು. ಪಾಕಿಸ್ತಾನ ಜೊತೆಗಿನ ಮೂರು ಯುದ್ಧದಲ್ಲಿ ಭಾರತ ಗೆದ್ದರೆ ಚೀನಾದ ವಿರುದ್ಧ ಭಾರತ ಸೋತಿತ್ತು. ಗಡಿಯಲ್ಲಿರುವ ಈ ದೇಶಗಳ ಕಿರಿಕಿರಿ ಜಾಸ್ತಿ ಆಗುತ್ತಿದ್ದಂತೆ ಭಾರತ ಸರ್ಕಾರ ರಕ್ಷಣೆಗೆ ಹೆಚ್ಚು ಒತ್ತು ನೀಡಲು ಆರಂಭಿಸಿತು. ಅಷ್ಟೇ ಅಲ್ಲದೇ ಸ್ವಂತ ಕ್ಷಿಪಣಿ ಅಭಿವೃದ್ಧಿ ಪಡಿಸಲು ಮುಂದಾಯಿತು.

    ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾದ ಡಿಆರ್‌ಡಿಒ ವಿಜ್ಞಾನಿಗಳು 1989ರಲ್ಲಿ ಅಗ್ನಿ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಿ ಪರೀಕ್ಷಾರ್ಥ ಪ್ರಯೋಗ ನಡೆಸಿದ್ದರು. ಈ ಸಂದರ್ಭದಲ್ಲಿ ಧ್ವನಿಗಿಂತ ವೇಗವಾಗಿ ಸಂಚರಿಸುವ ಸೂಪರ್‌ ಸಾನಿಕ್‌ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಲು ಭಾರತ ಮುಂದಾಯಿತು. ಆದರೆ ಅದಕ್ಕೆ ಬೇಕಾದ ತಂತ್ರಜ್ಞಾನ ಭಾರತದ ಬಳಿ ಇರಲಿಲ್ಲ.

    ಅಣುಬಾಂಬ್ ಪರೀಕ್ಷೆ ಮಾಡಿದ ಬಳಿಕ ಅಮೆರಿಕ ಭಾರತದ ಮೇಲೆ ಹಲವು ದಿಗ್ಭಂಧನ ವಿಧಿಸಿತ್ತು. ಈ ಸಂದರ್ಭದಲ್ಲಿ ಭಾರತ ಮತ್ತು ರಷ್ಯಾದ ಸಂಬಂಧ ಚೆನ್ನಾಗಿತ್ತು. ಕೊನೆಗೆ ಭಾರತ ಮತ್ತು ರಷ್ಯಾದ ಜಂಟಿ ಹೂಡಿಕೆಯಲ್ಲಿ ಬ್ರಹ್ಮೋಸ್‌ ಕಂಪನಿ 1998ರಲ್ಲಿ ಸ್ಥಾಪನೆಯಾಯಿತು.

    ಕ್ಷಿಪಣಿ ಮನುಷ್ಯ ಅಬ್ಧುಲ್‌ ಕಲಾಂ ಮತ್ತು ರಷ್ಯಾದ ರಕ್ಷಣಾ ಸಚಿವ ಮಿಖಾಲಿವೋ ಫೆಬ್ರವರಿ 12 ರಂದು ಮಾಸ್ಕೋದಲ್ಲಿ ಸಹಿ ಹಾಕಿದರು. ಬ್ರಹ್ಮೋಸ್ ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ರಷ್ಯಾದ NPOM ನಡುವಿನ ಜಂಟಿ ಉದ್ಯಮವಾಗಿದೆ. ʼಬ್ರಹ್ಮಪುತ್ರʼ ಮತ್ತು ರಷ್ಯಾದ ʼಮಾಸ್ಕೋವಾʼ ನದಿಗಳನ್ನು ಪ್ರತಿನಿಧಿಸಲು ಈ ಕ್ಷಿಪಣಿಗೆ ಬ್ರಹ್ಮೋಸ್‌ ಎಂದು ಹೆಸರನ್ನು ಇಡಲಾಯಿತು. 250 ಮಿಲಿಯನ್‌ ಡಾಲರ್‌ ಹೂಡಿಕೆಯ ಕಂಪನಿಯಲ್ಲಿ ಭಾರತದ ಪಾಲು 50.5% ಇದ್ದರೆ ರಷ್ಯಾದ ಪಾಲು 49.5% ಇದೆ.

    ಬ್ರಹ್ಮೋಸ್‌ ವಿಶೇಷತೆ ಏನು?
    ಚಲಿಸುವ ಪಥದ ಆಧಾರದ ಮೇಲೆ ಕ್ಷಿಪಣಿಗಳನ್ನು ಬ್ಯಾಲಿಸ್ಟಿಕ್‌ ಮತ್ತು ಕ್ರೂಸ್‌ ಕ್ಷಿಪಣಿಗಳಾಗಿ ವಿಂಗಡಿಸಲಾಗುತ್ತದೆ. ಬ್ಯಾಲಿಸ್ಟಿಕ್‌ ಕ್ಷಿಪಣಿ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ ನಂತರ ಭೂಮಿಗೆ ಅಪ್ಪಳಿಸುತ್ತದೆ. ಭಾರತದ ಅಗ್ನಿ, ಪೃಥ್ವಿ ಬ್ಯಾಲಿಸ್ಟಿಕ್‌ ಕ್ಷಿಪಣಿಗಳಾಗಿವೆ. ಇದನ್ನೂ ಓದಿ: ಪಾಕ್‌, ಉಗ್ರರ ಮೇಲೆ ಕಣ್ಣು – ನಾಳೆ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆ!

    ಕ್ರೂಸ್‌ ಕ್ಷಿಪಣಿ ಶಬ್ಧದ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಹೋಗುತ್ತದೆ. ಆರಂಭದಲ್ಲಿ ಕ್ರೂಸ್‌ ಕ್ಷಿಪಣಿ ಕೆಳಹಂತದಲ್ಲಿ ಭೂಮಿಯ ಮೇಲ್ಮೆಗೆ ಸಮಾನಂತರವಾಗಿ ಶಬ್ಧದ ವೇಗಕ್ಕಿಂತ ಕಡಿಮೆ ವೇಗದಲ್ಲಿ ಚಲಿಸಿ ಗುರಿ ತಲುಪುತ್ತಿದ್ದಂತೆ ಇದರ ವೇಗ ಶಬ್ಧದ ವೇಗಕ್ಕಿಂತ ಹೆಚ್ಚಾಗಿ ಕೊನೆಗೆ ಗುರಿಯನ್ನು ತಲುಪುತ್ತದೆ. ಈ ತಂತ್ರಜ್ಞಾನದಿಂದ ಶತ್ರುಗಳ ರೇಡಾರ್‌ಗಳಿಗೆ ಸಹ ಈ ಕ್ಷಿಪಣಿಯ ಪಥವನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಈ ಕ್ಷಿಪಣಿ ಸಮುದ್ರದ ಒಳಗೆ ಹೋಗಿ ಮತ್ತೆ ಮೇಲೆ ಬರುವ ಸಾಮರ್ಥ್ಯವನ್ನು ಹೊಂದಿದೆ. ಭಾರತದ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿಯ ವರ್ಗಕ್ಕೆ ಸೇರುತ್ತದೆ.

    ಚಲಿಸುವ ಗುರಿಯನ್ನು ನಿಖರವಾಗಿ ಹೊಡೆದು ಉರುಳಿಸವ ಸಾಮರ್ಥ್ಯ ಬ್ರಹ್ಮೋಸ್‌ಗೆ ಇದೆ. ಶತ್ರು ನೆಲೆಗಳಿಂದ ಬರುವ ಕ್ಷಿಪಣಿ ಹಾದಿಯನ್ನು ತಪ್ಪಿಸುವ ಎಲೆಕ್ಟ್ರಾನ್‌ ಸಂಕೇತಗಳ ವಿರುದ್ಧ ತನ್ನನ್ನು ರಕ್ಷಿಸಿಕೊಳ್ಳುವ ಸಿಗ್ನಲ್‌ ಜಾಮಿಂಗ್‌ ವ್ಯವಸ್ಥೆ ಬ್ರಹ್ಮೋಸ್‌ನಲ್ಲಿದೆ. ಈ ಕಾರಣಕ್ಕೆ ಬ್ರಹ್ಮೋಸ್‌ ಚೀನಾದ ವಾಯು ರಕ್ಷಣಾ ವ್ಯವಸ್ಥೆಗೂ ಸಿಗದಂತೆ ಯಶಸ್ವಿಯಾಗಿ ಒಳನಗ್ಗಿ ನೆಲೆಗಳನ್ನು ಧ್ವಂಸಗೊಳಿಸಿತ್ತು.

    ಮೊದಲ ಬಾರಿಗೆ ಬ್ರಹ್ಮೋಸ್‌ ಕ್ಷಿಪಣಿಯನ್ನು 2001ರ ಜೂನ್‌ 12 ರಲ್ಲಿ ಒಡಿಶಾದ ತೀರಪ್ರದೇದೇಶದದಲ್ಲಿ ಪರೀಕ್ಷೆ ಮಾಡಿದ್ದು ಈಗ ಭಾರತದ ಭೂ, ವಾಯು, ನೌಕಾ ಸೇನೆಗೆ ಸೇರ್ಪಡೆಯಾಗಿದೆ. 300 ಕೆಜಿ ಸಿಡಿತಲೆಯನ್ನು ಹೊತ್ತುಕೊಂಡು 300 ಕಿ.ಮೀ ದೂರದವರೆಗಿನ ಗುರಿಯನ್ನು ಧ್ವಂಸ ಮಾಡುವ ಸಾಮರ್ಥ್ಯ ಬ್ರಹ್ಮೋಸ್‌ಗೆ ಇದೆ.

  • ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ

    ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ

    ನವದೆಹಲಿ: ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ದಕ್ಕೆ ಪ್ರತಿಯಾಗಿ ಭಾರತದ (India)  ವಿರುದ್ಧ  ದಾಳಿ ನಡೆಸಿದ ಪಾಕಿಸ್ತಾನದ (Pakistan) ಮೇಲೆ 15 ಬ್ರಹ್ಮೋಸ್‌ ಕ್ಷಿಪಣಿಯನ್ನು (Brahmos Missile) ಹಾರಿಸಿ 11 ವಾಯುನೆಲೆಗಳನ್ನು ಧ್ವಂಸ ಮಾಡಿದ ವಿಚಾರ ಈಗ ಬೆಳಕಿಗೆ ಬಂದಿದೆ.

    ಮೇ 9 ರ ರಾತ್ರಿ ಭಾರತದ ನಗರಗಳನ್ನು ಗುರಿಯಾಗಿಸಿ ಪಾಕ್‌ನಿಂದ ದಾಳಿ ಆರಂಭವಾಗುತ್ತಿದ್ದಂತೆ ನಮ್ಮ ಪಡೆಗಳು ಅವುಗಳನ್ನು ನಿಷ್ಕ್ರಿಯಗಳಿಸಿತ್ತು. ಈ ಸಂದರ್ಭದಲ್ಲಿ ಪ್ರತಿ ದಾಳಿ ನಡೆಸುವ ಮೊದಲು ಭಾರತ ಪೈಲಟ್‌ ರಹಿತ ಡಮ್ಮಿ ಏರ್‌ಕ್ರಾಫ್ಟ್‌ (Dummy Aircraft) ಅನ್ನು ಹಾರಿಸಿತ್ತು. ಈ ಡಮ್ಮಿ ಏರ್‌ಕ್ರಾಫ್ಟ್‌ ಹೊಡೆದು ಹಾಕಲು ಪಾಕ್‌ ರೇಡಾರ್‌ ಮತ್ತು ಏರ್‌ ಡಿಫೆನ್ಸ್‌ ಸಿಸ್ಟಂ (Air Defence System) ಸಕ್ರಿಯಗೊಳಿಸಿತ್ತು. ರೇಡಾರ್‌ ಮತ್ತು ಏರ್‌ ಡಿಫೆನ್ಸ್‌ ಸಿಸ್ಟಂ ಎಲ್ಲಿದೆ ಎನ್ನುವುದು ಗೊತ್ತಾಗುತ್ತಿದ್ದಂತೆ ಭಾರತ ಇಸ್ರೇಲ್‌ ನಿರ್ಮಿಸಿದ್ದ ಹರೋಪ್ಸ್ ಮತ್ತು ಕ್ಷಿಪಣಿಗಳ ಹಾರಿಸಿ ಅವುಗಳನ್ನು ನಿಷ್ಕ್ರಿಯಗೊಳಿಸಿತು ಎಂದು ಮೂಲಗಳನ್ನು ಆಧಾರಿಸಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

    ಭಾರತದ ಈ ದಾಳಿಗೆ ಬೆಚ್ಚಿದ ಪಾಕಿಸ್ತಾನ ವಿವಿಧ ಸ್ಥಳಗಳಲ್ಲಿ ನಿಯೋಜಿಸಿದ್ದ HQ-9 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯ ಲಾಂಚರ್‌ಗಳು ಮತ್ತು ರಾಡಾರ್‌ಗಳನ್ನು ಸಕ್ರೀಯಗೊಳಿಸಿತ್ತು. ಈ ಪೈಕಿ ಕೆಲವು ಏರ್‌ ಡಿಫೆನ್ಸ್‌ಗಳನ್ನು ಹೊಸ ಸ್ಥಳಗಳಲ್ಲಿ ನಿಯೋಜಿಸಿತ್ತು. ಇದನ್ನೂ ಓದಿ: ಮೊದಲು ಉಗ್ರರನ್ನು ಹಸ್ತಾಂತರಿಸಿ – ಪಾಕ್‌ನ ಸಿಂಧೂ ನದಿ ಒಪ್ಪಂದ ಮನವಿಗೆ ಜೈಶಂಕರ್‌ ಮಾತು

    ಪಾಕ್‌ ರೇಡಾರ್‌ ಜಾಲವನ್ನು ನಿಷ್ಕ್ರಿಯಗೊಳಿಸಿದ ನಂತರ ಭಾರತೀಯ ವಾಯು ಸೇನೆ ಸ್ಕಾಲ್ಪ್, ಬ್ರಹ್ಮೋಸ್‌ ಕ್ಷಿಪಣಿಯನ್ನು ಬಳಸಿ ಭಯಂಕರ ದಾಳಿ ನಡೆಸಿತು. ಮುಖ್ಯವಾಗಿ ಭಾರತ ಪಶ್ಚಿಮ ವಾಯು ಕಮಾಂಡ್ ಮತ್ತು ನೈಋತ್ಯ ವಾಯು ಕಮಾಂಡ್‌ನಿಂದ ದಾಳಿ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಪಾಕ್‌ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ವಾಯು-ಉಡಾವಣಾ ಕ್ರೂಸ್ ಕ್ಷಿಪಣಿಗಳು ಮತ್ತು ಮಾನವರಹಿತ ಯುದ್ಧ ವಿಮಾನಗಳನ್ನು ಬಳಸಿಕೊಂಡು ದಾಳಿ ನಡೆಸಿತು. ಈ ದಾಳಿಯನ್ನು ರಷ್ಯಾದ S-400, MRSAM ಮತ್ತು ಆಕಾಶ್ ವಾಯು ರಕ್ಷಣಾ ಕ್ಷಿಪಣಿ ಘಟಕಗಳು ಮತ್ತು ಇತರ ಹಳೆಯ ವ್ಯವಸ್ಥೆಗಳನ್ನು ಬಳಸಿ ವಿಫಲಗೊಳಿಸಲಾಯಿತು. ಇದನ್ನೂ ಓದಿ: ಈಗ U Turn – ಕದನ ವಿರಾಮ ಬಿಲ್ಡಪ್ ಕೊಟ್ಟು ಈಗ ತಣ್ಣಗಾದ ಟ್ರಂಪ್‌!

    ದಾಳಿ ವೇಳೆ 15 ಬ್ರಹ್ಮೋಸ್‌ ಕ್ಷಿಪಣಿಯನ್ನು (Brahmos Missile) ಬಳಕೆ ಮಾಡಿದ್ದು ವಾಯುಸೇನೆಗೆ ಭಾರೀ ಬಲ ಬಂತು. ಒಂದು ದೇಶದ ವಿರುದ್ಧದ ಕಾದಾಟದಲ್ಲಿ ಬ್ರಹ್ಮೋಸ್‌ ಕ್ಷಿಪಣಿಯನ್ನು ಬಳಕೆ ಮಾಡಿದ್ದು ಇದೇ ಮೊದಲು. ಬ್ರಹ್ಮೋಸ್‌ ರನ್‌ವೇ, ಯುದ್ಧ ವಿಮಾನಗಳು ತಂಗಿದ್ದ ಜಾಗ ಇತ್ಯಾದಿಗಳ ಮೇಲೆ ದಾಳಿ ಮಾಡಿದ್ದರಿಂದ ಪಾಕ್‌ನ ಜಂಘಾಬಲವೇ ನಡುಗಿ ಹೋಯಿತು. ಹೆಚ್ಚಿನ ಮೌಲ್ಯದ ಸ್ವತ್ತುಗಳನ್ನು ಕಳೆದುಕೊಂಡ ಬೆನ್ನಲ್ಲೇ ರಾತ್ರಿಯೇ ಪಾಕ್‌ ತನ್ನ ವಿಮಾನಗಳನ್ನು ಹಿಂಭಾಗಕ್ಕೆ ಸ್ಥಳಾಂತರ ಮಾಡಿತು ಎಂದು ಮೂಲಗಳು ಹೇಳಿವೆ.

    ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ
    ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ

    ಬ್ರಹ್ಮೋಸ್‌ ಪಾಕ್‌ನ ಪ್ರಮುಖ 12 ವಾಯು ನೆಲೆಗಳ ಪೈಕಿ 11ರ ಮೇಲೆ ದಾಳಿ ನಡೆಸಿ ಮೂಲ ಸೌಕರ್ಯಗಳನ್ನೇ ಧ್ವಂಸ ಮಾಡಿತ್ತು. ಬ್ರಹ್ಮೋಸ್ ದಾಳಿಯ ತೀವ್ರತೆಗೆ ಪಾಕಿಸ್ತಾನ ಮತ್ತೆ ಪ್ರತಿದಾಳಿ ನಡೆಸುವ ಸ್ಥಿತಿಯಲ್ಲಿ ಇರಲಿಲ್ಲ. ಹೀಗಾಗಿ ಕೊನೆಗೆ ಪಾಕ್‌ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ತುರ್ತಾಗಿ ಭಾರತದ ಡಿಜಿಎಂಒಗೆ ಕರೆ ಮಾಡಿ ಯುದ್ಧ ವಿರಾಮ ಘೋಷಿಸುವಂತೆ ಮನವಿ ಮಾಡಿದರು. ಒಂದು ವೇಳೆ ದಾಳಿ ಮುಂದುವರಿಯುತ್ತಿದ್ದರೆ ಪಾಕಿಸ್ತಾನದ ಯುಎವಿಗಳು ಮತ್ತು ಸಿಂಧ್ ಪ್ರಾಂತ್ಯದಲ್ಲಿ ನಿಲ್ಲಿಸಿದ್ದ ವಿಮಾನಗಳು ಭಾರೀ ಪ್ರಮಾಣದಲ್ಲಿ ಹಾಳಾಗುವ ಸಾಧ್ಯತೆ ಇತ್ತು.

  • Explainer | ಬ್ರಹ್ಮೋಸ್‌ ನಿರ್ಮಾಣಕ್ಕೆ ಕೈ ಹಾಕಿದ್ದು ಯಾಕೆ? ಪಾಕ್‌ ರೇಡಾರ್‌ ಕಣ್ಣಿಗೆ ಬಿದ್ದಿಲ್ಲ ಯಾಕೆ?

    Explainer | ಬ್ರಹ್ಮೋಸ್‌ ನಿರ್ಮಾಣಕ್ಕೆ ಕೈ ಹಾಕಿದ್ದು ಯಾಕೆ? ಪಾಕ್‌ ರೇಡಾರ್‌ ಕಣ್ಣಿಗೆ ಬಿದ್ದಿಲ್ಲ ಯಾಕೆ?

    ಪಾಕಿಸ್ತಾನ (Pakistan) ಮೇಲೆ ಏರ್‌ಸ್ಟ್ರೈಕ್‌ ಮಾಡಿದ ಬಳಿಕ ದೇಶದಲ್ಲಿ ಈಗ ಬ್ರಹ್ಮೋಸ್‌ ಕ್ಷಿಪಣಿ (Brahmos Missile) ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಉಗ್ರರ ನೆಲೆಗಳು ಮತ್ತು ಪಾಕ್‌ ವಾಯುನೆಲೆಗಳ ಛಿದ್ರವಾಗಲು ಕಾರಣ ಈ ಬ್ರಹ್ಮೋಸ್‌. ಇಂದು ಲಕ್ನೋದಲ್ಲಿ ರಕ್ಷಣಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭ ನಡೆದಿದೆ. ಹೀಗಾಗಿ ಈ ಕ್ಷಿಪಣಿಯ ವಿಶೇಷತೆ ಏನು? ಈ ಕ್ಷಿಪಣಿ ನಿರ್ಮಾಣಕ್ಕೆ ಭಾರತ ಕೈ ಹಾಕಿದ್ದು ಯಾಕೆ? ಮಿಸೈಲ್‌ ಮ್ಯಾನ್‌ ಅಬ್ದುಲ್‌ ಕಲಾಂ ( APJ Abdul Kalam) ಪಾತ್ರ ಏನು? ಪಾಕಿಸ್ತಾನಕ್ಕೆ ಈ ಕ್ಷಿಪಣಿ ಹಾರಿದ್ದು ಹೇಗೆ? ಇತ್ಯಾದಿ ವಿವರಗಳನ್ನು ಇಲ್ಲಿ ನೀಡಲಾಗಿದೆ.

    ಬ್ರಹ್ಮೋಸ್‌ ಅಭಿವೃದ್ಧಿಯಾಗಿದ್ದು ಹೇಗೆ?
    ಸ್ವಾತಂತ್ರ್ಯ ಸಿಕ್ಕಿದ ಬಳಿಕ ಭಾರತ (India) ಶಾಂತಿ ಮಂತ್ರವನ್ನು ಅನುಸರಿಸಿದರೂ ಪಾಕಿಸ್ತಾನ ಮತ್ತು ಚೀನಾದ (China) ಮಧ್ಯೆ ಯುದ್ಧ ನಡೆಸಬೇಕಾಯಿತು. 1947, 1965, 1971 ರಲ್ಲಿ ಪಾಕಿಸ್ತಾನದ ಜೊತೆ 1962 ರಲ್ಲಿ ಚೀನಾದ ಜೊತೆ ಯುದ್ಧ ಮಾಡಬೇಕಾಯಿತು. ಪಾಕಿಸ್ತಾನ ಜೊತೆಗಿನ ಮೂರು ಯುದ್ಧದಲ್ಲಿ ಭಾರತ ಗೆದ್ದರೆ ಚೀನಾದ ವಿರುದ್ಧ ಭಾರತ ಸೋತಿತ್ತು. ಗಡಿಯಲ್ಲಿರುವ ಈ ದೇಶಗಳ ಕಿರಿಕಿರಿ ಜಾಸ್ತಿ ಆಗುತ್ತಿದ್ದಂತೆ ಭಾರತ ಸರ್ಕಾರ ರಕ್ಷಣೆಗೆ ಹೆಚ್ಚು ಒತ್ತು ನೀಡಲು ಆರಂಭಿಸಿತು. ಅಷ್ಟೇ ಅಲ್ಲದೇ ಸ್ವಂತ ಕ್ಷಿಪಣಿ ಅಭಿವೃದ್ಧಿ ಪಡಿಸಲು ಮುಂದಾಯಿತು.

    ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾದ ಡಿಆರ್‌ಡಿಒ ವಿಜ್ಞಾನಿಗಳು 1989ರಲ್ಲಿ ಅಗ್ನಿ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಿ ಪರೀಕ್ಷಾರ್ಥ ಪ್ರಯೋಗ ನಡೆಸಿದ್ದರು. ಈ ಸಂದರ್ಭದಲ್ಲಿ ಧ್ವನಿಗಿಂತ ವೇಗವಾಗಿ ಸಂಚರಿಸುವ ಸೂಪರ್‌ ಸಾನಿಕ್‌ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಲು ಭಾರತ ಮುಂದಾಯಿತು. ಆದರೆ ಅದಕ್ಕೆ ಬೇಕಾದ ತಂತ್ರಜ್ಞಾನ ಭಾರತದ ಬಳಿ ಇರಲಿಲ್ಲ.

    ಅಣುಬಾಂಬ್ ಪರೀಕ್ಷೆ ಮಾಡಿದ ಬಳಿಕ ಅಮೆರಿಕ ಭಾರತದ ಮೇಲೆ ಹಲವು ದಿಗ್ಭಂಧನ ವಿಧಿಸಿತ್ತು. ಈ ಸಂದರ್ಭದಲ್ಲಿ ಭಾರತ ಮತ್ತು ರಷ್ಯಾದ ಸಂಬಂಧ ಚೆನ್ನಾಗಿತ್ತು. ಕೊನೆಗೆ ಭಾರತ ಮತ್ತು ರಷ್ಯಾದ ಜಂಟಿ ಹೂಡಿಕೆಯಲ್ಲಿ ಬ್ರಹ್ಮೋಸ್‌ ಕಂಪನಿ 1998ರಲ್ಲಿ ಸ್ಥಾಪನೆಯಾಯಿತು.

    ಕ್ಷಿಪಣಿ ಮನುಷ್ಯ ಅಬ್ಧುಲ್‌ ಕಲಾಂ ಮತ್ತು ರಷ್ಯಾದ ರಕ್ಷಣಾ ಸಚಿವ ಮಿಖಾಲಿವೋ ಫೆಬ್ರವರಿ 12 ರಂದು ಮಾಸ್ಕೋದಲ್ಲಿ ಸಹಿ ಹಾಕಿದರು. ಬ್ರಹ್ಮೋಸ್ ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ರಷ್ಯಾದ NPOM ನಡುವಿನ ಜಂಟಿ ಉದ್ಯಮವಾಗಿದೆ. ʼಬ್ರಹ್ಮಪುತ್ರʼ ಮತ್ತು ರಷ್ಯಾದ ʼಮಾಸ್ಕೋವಾʼ ನದಿಗಳನ್ನು ಪ್ರತಿನಿಧಿಸಲು ಈ ಕ್ಷಿಪಣಿಗೆ ಬ್ರಹ್ಮೋಸ್‌ ಎಂದು ಹೆಸರನ್ನು ಇಡಲಾಯಿತು. 250 ಮಿಲಿಯನ್‌ ಡಾಲರ್‌ ಹೂಡಿಕೆಯ ಕಂಪನಿಯಲ್ಲಿ ಭಾರತದ ಪಾಲು 50.5% ಇದ್ದರೆ ರಷ್ಯಾದ ಪಾಲು 49.5% ಇದೆ. ಇದನ್ನೂ ಓದಿ: ʻಆಪರೇಷನ್‌ ಸಿಂಧೂರʼದಲ್ಲಿ ಬ್ರಹ್ಮೋಸ್‌ ಕ್ಷಿಪಣಿ ಪಾತ್ರ ದೊಡ್ಡದು, ಅನುಮಾನವಿದ್ರೆ ಪಾಕ್‌ನ ಕೇಳಿ: ಯೋಗಿ ಆದಿತ್ಯನಾಥ್

    ಬ್ರಹ್ಮೋಸ್‌ ವಿಶೇಷತೆ ಏನು?
    ಚಲಿಸುವ ಪಥದ ಆಧಾರದ ಮೇಲೆ ಕ್ಷಿಪಣಿಗಳನ್ನು ಬ್ಯಾಲಿಸ್ಟಿಕ್‌ ಮತ್ತು ಕ್ರೂಸ್‌ ಕ್ಷಿಪಣಿಗಳಾಗಿ ವಿಂಗಡಿಸಲಾಗುತ್ತದೆ. ಬ್ಯಾಲಿಸ್ಟಿಕ್‌ ಕ್ಷಿಪಣಿ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ ನಂತರ ಭೂಮಿಗೆ ಅಪ್ಪಳಿಸುತ್ತದೆ. ಭಾರತದ ಅಗ್ನಿ, ಪೃಥ್ವಿ ಬ್ಯಾಲಿಸ್ಟಿಕ್‌ ಕ್ಷಿಪಣಿಗಳಾಗಿವೆ.

    ಕ್ರೂಸ್‌ ಕ್ಷಿಪಣಿ ಶಬ್ಧದ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಹೋಗುತ್ತದೆ. ಆರಂಭದಲ್ಲಿ ಕ್ರೂಸ್‌ ಕ್ಷಿಪಣಿ ಕೆಳಹಂತದಲ್ಲಿ ಭೂಮಿಯ ಮೇಲ್ಮೆಗೆ ಸಮಾನಂತರವಾಗಿ ಶಬ್ಧದ ವೇಗಕ್ಕಿಂತ ಕಡಿಮೆ ವೇಗದಲ್ಲಿ ಚಲಿಸಿ ಗುರಿ ತಲುಪುತ್ತಿದ್ದಂತೆ ಇದರ ವೇಗ ಶಬ್ಧದ ವೇಗಕ್ಕಿಂತ ಹೆಚ್ಚಾಗಿ ಕೊನೆಗೆ ಗುರಿಯನ್ನು ತಲುಪುತ್ತದೆ. ಈ ತಂತ್ರಜ್ಞಾನದಿಂದ ಶತ್ರುಗಳ ರೇಡಾರ್‌ಗಳಿಗೆ ಸಹ ಈ ಕ್ಷಿಪಣಿಯ ಪಥವನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಈ ಕ್ಷಿಪಣಿ ಸಮುದ್ರದ ಒಳಗೆ ಹೋಗಿ ಮತ್ತೆ ಮೇಲೆ ಬರುವ ಸಾಮರ್ಥ್ಯವನ್ನು ಹೊಂದಿದೆ. ಭಾರತದ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿಯ ವರ್ಗಕ್ಕೆ ಸೇರುತ್ತದೆ.

    ಈ ಕ್ಷಿಪಣಿಗಳನ್ನು ಭೂಮಿಯಿಂದ, ಬಾನಿನಿಂದ, ಸಮುದ್ರದಿಂದ, ಜಲಾಂತರ್ಗಮಿ, ಚಲಿಸುವ ವಾಹನಗಳಿಂದಲೂ ಉಡಾಯಿಸಬಹುದು. ಭೂ ನೆಲೆ ಮತ್ತು ಯುದ್ಧ ನೌಕೆ ಆಧಾರಿತ ಬ್ರಹ್ಮೋಸ್ ಕ್ಷಿಪಣಿಗಳು ಗರಿಷ್ಠ 200 ಕೆಜಿ ಸಿಡಿತಲೆಗಳನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದರೆ ಯುದ್ಧ ವಿಮಾನದಿಂದ ಉಡಾವಣೆಯಾಗುವ ವೇರಿಯೆಂಟ್‌ 300 ಕೆಜಿ ಭಾರವನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ.

    ಚಲಿಸುವ ಗುರಿಯನ್ನು ನಿಖರವಾಗಿ ಹೊಡೆದು ಉರುಳಿಸವ ಸಾಮರ್ಥ್ಯ ಬ್ರಹ್ಮೋಸ್‌ಗೆ ಇದೆ. ಶತ್ರು ನೆಲೆಗಳಿಂದ ಬರುವ ಕ್ಷಿಪಣಿ ಹಾದಿಯನ್ನು ತಪ್ಪಿಸುವ ಎಲೆಕ್ಟ್ರಾನ್‌ ಸಂಕೇತಗಳ ವಿರುದ್ಧ ತನ್ನನ್ನು ರಕ್ಷಿಸಿಕೊಳ್ಳುವ ಸಿಗ್ನಲ್‌ ಜಾಮಿಂಗ್‌ ವ್ಯವಸ್ಥೆ ಬ್ರಹ್ಮೋಸ್‌ನಲ್ಲಿದೆ. ಮೊದಲ ಬಾರಿಗೆ ಬ್ರಹ್ಮೋಸ್‌ ಕ್ಷಿಪಣಿಯನ್ನು 2001ರ ಜೂನ್‌ 12 ರಲ್ಲಿ ಒಡಿಶಾದ ತೀರಪ್ರದೇದೇಶದದಲ್ಲಿ ಪರೀಕ್ಷೆ ಮಾಡಿದ್ದು ಈಗ ಭಾರತದ ಭೂ, ವಾಯು, ನೌಕಾ ಸೇನೆಗೆ ಸೇರ್ಪಡೆಯಾಗಿದೆ. ಇದನ್ನೂ ಓದಿ: 300 ಕೋಟಿ ವೆಚ್ಚದ ʻಬ್ರಹ್ಮೋಸ್ʼ ಕ್ಷಿಪಣಿ ಉತ್ಪಾದನಾ ಘಟಕ ಉದ್ಘಾಟನೆ; ವಾರ್ಷಿಕ 100 ಮಿಸೈಲ್‌ ಉತ್ಪಾದನೆ ಗುರಿ

    ಭಾರತ ಇಲ್ಲಿಯವರೆಗೆ ಯಾವುದೇ ಕಾರ್ಯಾಚರಣೆಗೆ ಬ್ರಹ್ಮೋಸ್‌ ಬಳಸಿರಲಿಲ್ಲ. ಆದರೆ  ಪಾಕ್‌ ವಿರುದ್ಧದ ಸಂಘರ್ಷದ ವೇಳೆ ಇದನ್ನು ಬಳಸಿತ್ತು.  ನಿಖರ ದಾಳಿಯಿಂದಾಗಿ ಈಗ ಸ್ವದೇಶಿ ಬ್ರಹ್ಮೋಸ್‌ ವಿಶ್ವದೆಲ್ಲೆಡೆ ಫೇಮಸ್‌ ಆಗಿದೆ.

    ಯಾವೆಲ್ಲ ದೇಶಗಳು ಆಸಕ್ತಿ ತೋರಿಸಿವೆ?
    ಫಿಲಿಪೈನ್ಸ್‌ ಬ್ರಹ್ಮೋಸ್‌ ನೆವಿ ಮಿಸೈಲ್‌ ಖರೀದಿ ಸಂಬಂಧ 375 ಮಿಲಿಯನ್‌ ಡಾಲರ್‌ ಮೊತ್ತದ ಒಪ್ಪಂದಕ್ಕೆ 2022ರಲ್ಲಿ ಸಹಿ ಹಾಕಿ ಖರೀದಿಸಿದೆ. ಇಂಡೋನೇಷ್ಯಾ, ವಿಯೆಟ್ನಾಂ, ಮಲೇಷ್ಯಾ, ಯುಎಇ, ಚಿಲಿ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ ಇತರ ದೇಶಗಳು ಆಸಕ್ತಿ ವ್ಯಕ್ತಪಡಿಸಿವೆ.

    ಬ್ರಹ್ಮೋಸ್‌ ಖರೀದಿಗೆ ಹಲವು ದೇಶಗಳು ಆಸಕ್ತಿ ತೋರಿಸಿದ್ದು ಯಾಕೆ ಎನ್ನುವುದಕ್ಕೆ ಕಾರಣವಿದೆ. ಬ್ರಹ್ಮೋಸ್‌ ಭಾರತದಲ್ಲಿ ಪ್ರಯೋಗ ಯಶಸ್ವಿಯಾಗಿದ್ದು ಈಗಾಗಲೇ ಮೂರು ಸೇನೆಗೆ ಸೇರ್ಪಡೆಯಾಗಿದೆ. ನಿಖರವಾಗಿ ಗುರಿಯನ್ನು ಹೊಡೆಯುವುದು ಅಲ್ಲದೇ ಬೆಲೆಯೂ ಕಡಿಮೆ. ಚಂದ್ರಯಾನದಂತೆ ಈ ಕ್ಷಿಪಣಿಯ ಬೆಲೆ ಕಡಿಮೆ ಇದೆ. ಅಧಿಕೃತವಾಗಿ ಈ ಕ್ಷಿಪಣಿಯ ಬೆಲೆ ಎಷ್ಟು ಎಂಬುದನ್ನು ಸರ್ಕಾರ ತಿಳಿಸದೇ ಇದ್ದರೂ ಮಾಧ್ಯಮಗಳಲ್ಲಿ ಬಂದಿರುವ ಮಾಹಿತಿ ಪ್ರಕಾರ ಒಂದು ಕ್ಷಿಪಣಿಯ ಬೆಲೆ 35 ಕೋಟಿ ರೂ. ಇದೆಯಂತೆ. ಇದರ ಜೊತೆ ಭಾರತದ ವಿಜ್ಞಾನಿಗಳ ಬಗ್ಗೆ ನಂಬಿಕೆ ಈಗ ವಿಶ್ವಕ್ಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮೋಸ್‌ ಖರೀದಿಗೆ ಹಲವು ದೇಶಗಳು ಆಸಕ್ತಿ ತೋರಿಸಿವೆ. ಇದನ್ನೂ ಓದಿ: ಅಣ್ವಸ್ತ್ರಗಳಿರೋ ಬೆಟ್ಟದ ಮೇಲೆ ದಾಳಿ – ಬೆದರಿದ ಪಾಕ್‌, ಅಮೆರಿಕಕ್ಕೂ ಶಾಕ್‌ |ಕದನ ವಿರಾಮದ ಇನ್‌ಸೈಡ್‌ ಸ್ಟೋರಿ ಓದಿ

    ಪಾಕಿಸ್ತಾನಕ್ಕೆ ಹಾರಿತ್ತು ಬ್ರಹ್ಮೋಸ್‌
    ಈ ಬ್ರಹ್ಮೋಸ್‌ ಕ್ಷಿಪಣಿ ಪಾಕಿಸ್ತಾನಕ್ಕೂ ಹಾರಿತ್ತು. 2022ರ ಮಾರ್ಚ್‌ 9ರ ಸಂಜೆಯ ವೇಳೆ ಹರ್ಯಾಣದ ಸಿರ್ಸಾದಿಂದ ಬ್ರಹ್ಮೋಸ್‌ ಕ್ಷಿಪಣಿ ಆಕಸ್ಮಿಕವಾಗಿ ಉಡಾವಣೆಯಾಗಿ ಕೇವಲ 3 ನಿಮಿಷ 44 ಸೆಕೆಂಡ್‌ನಲ್ಲಿ 124 ಕಿ.ಮೀ ಕ್ರಮಿಸಿ ಪಾಕಿಸ್ತಾನದ ಭೂ ಪ್ರದೇಶದ ಒಳಗಡೆ ಬಿದ್ದಿತ್ತು. ಈ ಘಟನೆಯಿಂದ ಯಾವುದೇ ಸಾವು,ನೋವು ಸಂಭವಿಸಲಿಲ್ಲ. ಈ ವಿಷಯವನ್ನು ಇಟ್ಟುಕೊಂಡು ಪಾಕಿಸ್ತಾನ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಭಾರತ ತಾಂತ್ರಿಕ ಸಮಸ್ಯೆಯಿಂದ ಈ ಕ್ಷಿಪಣಿ ಉಡಾವಣೆಯಾಗಿದೆ ಎಂದು ಹೇಳಿ ವಿಷಾದ ವ್ಯಕ್ತಪಡಿಸಿ ತನಿಖೆ ನಡೆಸುವುದಾಗಿ ಹೇಳಿತ್ತು. ತನಿಖೆಯ ಬಳಿಕ ವಾಯುಸೇನೆಯ ಇಮೇಜ್‌ಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿಂಗ್‌ ಕಮಾಂಡರ್‌ ಅಭಿನವ್‌ ಶರ್ಮಾ ಅವರನ್ನು ಸೇವೆಯಿಂದಲೇ ವಜಾಗೊಳಿಸಿತ್ತು. ಈ ಕ್ಷಿಪಣಿ ಪ್ರಕರಣದಿಂದ ಭಾರತ ಸರ್ಕಾರಕ್ಕೆ 24 ಕೋಟಿ ರೂ. ನಷ್ಟವಾಗಿತ್ತು.

    ಶಸ್ತ್ರಾಸ್ರ್ತ ಮಾರಾಟ ಹೆಚ್ಚಳ:
    ಶಸ್ತ್ರಾಸ್ತ್ರಗಳನ್ನು ಆಮದು ಮಾಡುಕೊಳ್ಳುವ ಟಾಪ್‌ ರಾಷ್ಟ್ರಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿತ್ತು. ಆದರೆ ರಷ್ಯಾದೊಂದಿಗಿನ ಯುದ್ಧದಿಂದಾಗಿ ಉಕ್ರೇನ್‌ ಮೊದಲ ಸ್ಥಾನಕ್ಕೆ ಜಿಗಿದರೆ ಭಾರತ ಎರಡನೇ ಸ್ಥಾನಕ್ಕೆ ಜಾರಿದೆ. ಆದರೆ ಈಗ ಭಾರತ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುವತ್ತಾ ಸಾಗುತ್ತಿದೆ. ಇದರ ಭಾಗವಾಗಿ ಈಗ ಭಾರತ ವಿಶ್ವದ ಹಲವು ದೇಶಗಳಿಗೆ ಬ್ರಹ್ಮೋಸ್‌ ಕ್ಷಿಪಣಿಯನ್ನು ರಫ್ತು ಮಾಡಲು ಮಾತುಕತೆ ನಡೆಸುತ್ತಿದೆ.

    ಸರ್ಕಾರದ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ರಫ್ತು ಮಾಡಲಾದ ಪ್ರಮುಖ ರಕ್ಷಣಾ ಸಾಧನಗಳಲ್ಲಿ ಸಿಮ್ಯುಲೇಟರ್, ಅಶ್ರುವಾಯು ಲಾಂಚರ್, ಟಾರ್ಪಿಡೊ-ಲೋಡಿಂಗ್ ಮೆಕ್ಯಾನಿಸಂ, ಅಲಾರ್ಮ್ ಮಾನಿಟರಿಂಗ್ ಮತ್ತು ಕಂಟ್ರೋಲ್, ನೈಟ್ ವಿಷನ್ ಮಾನೋಕ್ಯುಲರ್ ಮತ್ತು ಬೈನಾಕ್ಯುಲರ್, ಅಗ್ನಿಶಾಮಕ ನಿಯಂತ್ರಣ ವ್ಯವಸ್ಥೆಗಳು, ಶಸ್ತ್ರಸಜ್ಜಿತ ರಕ್ಷಣಾ ವಾಹನ, ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚುವ ರಾಡಾರ್, ಹೈ ಫ್ರಿಕ್ವೆನ್ಸಿ ರೇಡಿಯೊ ಇತ್ಯಾದಿಗಳನ್ನು ರಫ್ತು ಮಾಡಿವೆ.

    ಇಟಲಿ, ಶ್ರೀಲಂಕಾ, ರಷ್ಯಾ, ಮಾಲ್ಡೀವ್ಸ್, ಮಾರಿಷಸ್, ನೇಪಾಳ, ಫ್ರಾನ್ಸ್, ಶ್ರೀಲಂಕಾ, ಈಜಿಪ್ಟ್, ಇಸ್ರೇಲ್, ಭೂತಾನ್, ಯುಎಇ, ಸೌದಿ ಅರೇಬಿಯಾ, ಇಥಿಯೋಪಿಯಾ, ಫಿಲಿಪೈನ್ಸ್, ಪೋಲೆಂಡ್, ಸ್ಪೇನ್ ಮತ್ತು ಚಿಲಿ ದೇಶಗಳು ರಫ್ತು ಲಿಸ್ಟ್‌ನಲ್ಲಿವೆ.

    2029ರ ವೇಳೆಗೆ ಭಾರತ 50 ಸಾವಿರ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡಬೇಕೆಂಬ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಈ ಗುರಿಯನ್ನು ತಲುಪಬೇಕಾದರೆ ಸರ್ಕಾರ ಬಹಳ ಶ್ರಮಪಡಬೇಕಾದ ಅಗತ್ಯವಿದೆ.

  • Anytime, Anywhere – ಬ್ರಹ್ಮೋಸ್‌ ಹಾರಿಸಿ ಎಲ್ಲದ್ದಕ್ಕೂ ಸಿದ್ಧ ಎಂದ ನೌಕಾಸೇನೆ

    Anytime, Anywhere – ಬ್ರಹ್ಮೋಸ್‌ ಹಾರಿಸಿ ಎಲ್ಲದ್ದಕ್ಕೂ ಸಿದ್ಧ ಎಂದ ನೌಕಾಸೇನೆ

    ನವದೆಹಲಿ: ಪಹಲ್ಗಾಮ್‌ ಉಗ್ರರ ದಾಳಿಯ (Pahalgam Terror Attack) ಬಳಿಕ ಭಾರತದ ನೌಕಾಸೇನೆ (Indian Navy) ಬ್ರಹ್ಮೋಸ್‌ ಕ್ಷಿಪಣಿಯನ್ನು ಯುದ್ಧನೌಕೆಯಿಂದ ಹಾರಿಸಿದೆ.

    ಯುದ್ಧ ನೌಕೆಯಿಂದ ಹಾರಿಸಿ Anytime, Anywhere ಎಂದು ಭಾರತೀಯ ನೌಕಾಸೇನೆ ಪೋಸ್ಟ್‌ ಮಾಡಿದೆ.

    ಪೋಸ್ಟ್‌ನಲ್ಲಿ ಏನಿದೆ?
    ಭಾರತೀಯ ಯುದ್ಧನೌಕೆಗಳು ಅರೇಬಿಯನ್ ಸಮುದ್ರದಲ್ಲಿ ಅನೇಕ ಹಡಗು ವಿರೋಧಿ ಗುಂಡಿನ ದಾಳಿಗಳನ್ನು ನಡೆಸಿದೆ. ನೌಕಾಪಡೆಯು ದೇಶದ ಹಿತಾಸಕ್ತಿಗಳನ್ನು ರಕ್ಷಿಸಲು ಸಿದ್ಧವಾಗಿದೆ ಎಂದು ಹೇಳಿದೆ.

    ಸಮುದ್ರದ ಮಧ್ಯದಲ್ಲಿರುವ ಯುದ್ಧನೌಕೆಯಿಂದ ಬ್ರಹ್ಮೋಸ್ (BrahMos) ಮತ್ತು ಮೇಲ್ಮೈ ವಿರೋಧಿ ಕ್ರೂಸ್ ಕ್ಷಿಪಣಿಗಳನ್ನು ಹಾರಿಸುತ್ತಿರುವ ದೃಶ್ಯಗಳನ್ನು ನೌಕಾಪಡೆಯು ಹಂಚಿಕೊಂಡಿದೆ.

    ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನ ಸಂಬಂಧ ಮತ್ತಷ್ಟು ಹಳಸಿದೆ. ಪಾಕಿಸ್ತಾನ ಕ್ಷಿಪಣಿ ಪರೀಕ್ಷೆ ಮಾಡುತ್ತಿದ್ದರೆ ಇನ್ನೊಂದು ಕಡೆ ಭಾರತ ಅರಬ್ಬಿ ಸಮುದ್ರದಲ್ಲಿ ಕ್ಷಿಪಣಿ ಪರೀಕ್ಷೆ ನಡೆಸುತ್ತಿದೆ.

    ಬ್ರಹ್ಮೋಸ್‌ ವಿಶೇಷತೆ ಏನು?
    ಚಲಿಸುವ ಪಥದ ಆಧಾರದ ಮೇಲೆ ಕ್ಷಿಪಣಿಗಳನ್ನು ಬ್ಯಾಲಿಸ್ಟಿಕ್‌ ಮತ್ತು ಕ್ರೂಸ್‌ ಕ್ಷಿಪಣಿಗಳಾಗಿ ವಿಂಗಡಿಸಲಾಗುತ್ತದೆ. ಬ್ಯಾಲಿಸ್ಟಿಕ್‌ ಕ್ಷಿಪಣಿ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ ನಂತರ ಭೂಮಿಗೆ ಅಪ್ಪಳಿಸುತ್ತದೆ. ಭಾರತದ ಅಗ್ನಿ, ಪೃಥ್ವಿ ಬ್ಯಾಲಿಸ್ಟಿಕ್‌ ಕ್ಷಿಪಣಿಗಳಾಗಿವೆ. ಇದನ್ನೂ ಓದಿ: ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮೋದಿ

    ಕ್ರೂಸ್‌ ಕ್ಷಿಪಣಿ ಶಬ್ಧದ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಹೋಗುತ್ತದೆ. ಆರಂಭದಲ್ಲಿ ಕ್ರೂಸ್‌ ಕ್ಷಿಪಣಿ ಕೆಳಹಂತದಲ್ಲಿ ಭೂಮಿಯ ಮೇಲ್ಮೆಗೆ ಸಮಾನಂತರವಾಗಿ ಶಬ್ಧದ ವೇಗಕ್ಕಿಂತ ಕಡಿಮೆ ವೇಗದಲ್ಲಿ ಚಲಿಸಿ ಗುರಿ ತಲುಪುತ್ತಿದ್ದಂತೆ ಇದರ ವೇಗ ಶಬ್ಧದ ವೇಗಕ್ಕಿಂತ ಹೆಚ್ಚಾಗಿ ಕೊನೆಗೆ ಗುರಿಯನ್ನು ತಲುಪುತ್ತದೆ. ಈ ತಂತ್ರಜ್ಞಾನದಿಂದ ಶತ್ರುಗಳ ರೇಡಾರ್‌ಗಳಿಗೆ ಸಹ ಈ ಕ್ಷಿಪಣಿಯ ಪಥವನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಈ ಕ್ಷಿಪಣಿ ಸಮುದ್ರದ ಒಳಗೆ ಹೋಗಿ ಮತ್ತೆ ಮೇಲೆ ಬರುವ ಸಾಮರ್ಥ್ಯವನ್ನು ಹೊಂದಿದೆ. ಕ್ರೂಸ್‌ ಕ್ಷಿಪಣಿಯ ವರ್ಗಕ್ಕೆ ಸೇರುವ ಬ್ರಹ್ಮೋಸ್‌ 800 ಕಿ.ಮೀ ದೂರದಲ್ಲಿರುವ ಗುರಿಯನ್ನು ಧ್ವಂಸ ಮಾಡುವ ಸಾಮರ್ಥ್ಯ ಹೊಂದಿದೆ.

     

    ಈ ಕ್ಷಿಪಣಿಗಳನ್ನು ಭೂಮಿಯಿಂದ, ಬಾನಿನಿಂದ, ಸಮುದ್ರದಿಂದ, ಜಲಾಂತರ್ಗಮಿ, ಚಲಿಸುವ ವಾಹನಗಳಿಂದಲೂ ಉಡಾಯಿಸಬಹುದು. ಭೂ ನೆಲೆ ಮತ್ತು ಯುದ್ಧ ನೌಕೆ ಆಧಾರಿತ ಬ್ರಹ್ಮೋಸ್ ಕ್ಷಿಪಣಿಗಳು ಗರಿಷ್ಠ 200 ಕೆಜಿ ಸಿಡಿತಲೆಗಳನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದರೆ ಯುದ್ಧ ವಿಮಾನದಿಂದ ಉಡಾವಣೆಯಾಗುವ ವೇರಿಯೆಂಟ್‌ 300 ಕೆಜಿ ಭಾರವನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ.

    ಚಲಿಸುವ ಗುರಿಯನ್ನು ನಿಖರವಾಗಿ ಹೊಡೆದು ಉರುಳಿಸವ ಸಾಮರ್ಥ್ಯ ಬ್ರಹ್ಮೋಸ್‌ಗೆ ಇದೆ. ಶತ್ರು ನೆಲೆಗಳಿಂದ ಬರುವ ಕ್ಷಿಪಣಿ ಹಾದಿಯನ್ನು ತಪ್ಪಿಸುವ ಎಲೆಕ್ಟ್ರಾನ್‌ ಸಂಕೇತಗಳ ವಿರುದ್ಧ ತನ್ನನ್ನು ರಕ್ಷಿಸಿಕೊಳ್ಳುವ ಸಿಗ್ನಲ್‌ ಜಾಮಿಂಗ್‌ ವ್ಯವಸ್ಥೆ ಬ್ರಹ್ಮೋಸ್‌ನಲ್ಲಿದೆ. ಮೊದಲ ಬಾರಿಗೆ ಬ್ರಹ್ಮೋಸ್‌ ಕ್ಷಿಪಣಿಯನ್ನು 2001ರ ಜೂನ್‌ 12 ರಲ್ಲಿ ಒಡಿಶಾದ ತೀರಪ್ರದೇದೇಶದದಲ್ಲಿ ಪರೀಕ್ಷೆ ಮಾಡಿದ್ದು ಈಗ ಭಾರತದ ಭೂ, ವಾಯು, ನೌಕಾ ಸೇನೆಗೆ ಸೇರ್ಪಡೆಯಾಗಿದೆ.

    ಪಾಕಿಸ್ತಾನಕ್ಕೆ ಹಾರಿತ್ತು ಬ್ರಹ್ಮೋಸ್‌
    ಈ ಬ್ರಹ್ಮೋಸ್‌ ಕ್ಷಿಪಣಿ ಪಾಕಿಸ್ತಾನಕ್ಕೂ ಹಾರಿತ್ತು. 2022ರ ಮಾರ್ಚ್‌ 9ರ ಸಂಜೆಯ ವೇಳೆ ಹರ್ಯಾಣದ ಸಿರ್ಸಾದಿಂದ ಬ್ರಹ್ಮೋಸ್‌ ಕ್ಷಿಪಣಿ ಆಕಸ್ಮಿಕವಾಗಿ ಉಡಾವಣೆಯಾಗಿ ಕೇವಲ 3 ನಿಮಿಷ 44 ಸೆಕೆಂಡ್‌ನಲ್ಲಿ 124 ಕಿ.ಮೀ ಕ್ರಮಿಸಿ ಪಾಕಿಸ್ತಾನದ ಭೂ ಪ್ರದೇಶದ ಒಳಗಡೆ ಬಿದ್ದಿತ್ತು. ಈ ಘಟನೆಯಿಂದ ಯಾವುದೇ ಸಾವು,ನೋವು ಸಂಭವಿಸಲಿಲ್ಲ. ಈ ವಿಷಯವನ್ನು ಇಟ್ಟುಕೊಂಡು ಪಾಕಿಸ್ತಾನ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಭಾರತ ತಾಂತ್ರಿಕ ಸಮಸ್ಯೆಯಿಂದ ಈ ಕ್ಷಿಪಣಿ ಉಡಾವಣೆಯಾಗಿದೆ ಎಂದು ಹೇಳಿ ವಿಷಾದ ವ್ಯಕ್ತಪಡಿಸಿ ತನಿಖೆ ನಡೆಸುವುದಾಗಿ ಹೇಳಿತ್ತು. ತನಿಖೆಯ ಬಳಿಕ ವಾಯುಸೇನೆಯ ಇಮೇಜ್‌ಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿಂಗ್‌ ಕಮಾಂಡರ್‌ ಅಭಿನವ್‌ ಶರ್ಮಾ ಅವರನ್ನು ಸೇವೆಯಿಂದಲೇ ವಜಾಗೊಳಿಸಿತ್ತು. ಈ ಕ್ಷಿಪಣಿ ಪ್ರಕರಣದಿಂದ ಭಾರತ ಸರ್ಕಾರಕ್ಕೆ 24 ಕೋಟಿ ರೂ. ನಷ್ಟವಾಗಿತ್ತು.

  • ವಿದೇಶಕ್ಕೆ ಭಾರತದ ಬ್ರಹ್ಮೋಸ್‌ – ಶಸ್ತ್ರಾಸ್ತ ರಫ್ತು ಎಷ್ಟಿತ್ತು? ಎಷ್ಟು ಏರಿಕೆಯಾಗಿದೆ?

    ವಿದೇಶಕ್ಕೆ ಭಾರತದ ಬ್ರಹ್ಮೋಸ್‌ – ಶಸ್ತ್ರಾಸ್ತ ರಫ್ತು ಎಷ್ಟಿತ್ತು? ಎಷ್ಟು ಏರಿಕೆಯಾಗಿದೆ?

    ಸ್ತ್ರಾಸ್ತ್ರಗಳನ್ನು ಆಮದು ಮಾಡುಕೊಳ್ಳುವ ಟಾಪ್‌ ರಾಷ್ಟ್ರಗಳಲ್ಲಿ ಭಾರತ (India) ಮೊದಲನೇಯ ಸ್ಥಾನದಲ್ಲಿದೆ. ಆದರೆ ಈಗ ಭಾರತ ಶಸ್ತ್ರಾಸ್ತ್ರಗಳನ್ನು ರಫ್ತು (Arms Export) ಮಾಡುವ ದೇಶವಾಗಿ ನಿಧಾನವಾಗಿ ಹೊರಹೊಮ್ಮುತ್ತಿದೆ. ಇದರ ಭಾಗವಾಗಿ ಈಗ ಭಾರತ ವಿಶ್ವದ 12 ದೇಶಗಳಿಗೆ ಬ್ರಹ್ಮೋಸ್‌ ಕ್ಷಿಪಣಿಯನ್ನು (BrahMos Missile) ರಫ್ತು ಮಾಡಲು ಮಾತುಕತೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮೋಸ್‌ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಿದ್ದು ಹೇಗೆ? ಬ್ರಹ್ಮೋಸ್‌ ಕ್ಷಿಪಣಿ ವಿಶೇಷತೆ ಏನು? ಮಿಸೈಲ್‌ ಮ್ಯಾನ್‌ ಅಬ್ದುಲ್‌ ಕಲಾಂ (APJ Abdul Kalam) ಪಾತ್ರ ಏನು? ಪಾಕಿಸ್ತಾನಕ್ಕೆ ಈ ಕ್ಷಿಪಣಿ ಹಾರಿದ್ದು ಹೇಗೆ? 10 ವರ್ಷದ ಹಿಂದೆ ಶಸ್ತ್ರಾಸ್ತ್ರ ರಫ್ತು ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ? ಈ ಎಲ್ಲಾ ವಿಷಯಗಳ ಬಗ್ಗೆ ಕೆಲ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

    ಸ್ವಾತಂತ್ರ್ಯ ಸಿಕ್ಕಿದ ಬಳಿಕ ಭಾರತ ಶಾಂತಿ ಮಂತ್ರವನ್ನು ಅನುಸರಿಸಿದರೂ ಪಾಕಿಸ್ತಾನ (Pakistan) ಮತ್ತು ಚೀನಾದ (China) ಮಧ್ಯೆ ಯುದ್ಧ ನಡೆಸಬೇಕಾಯಿತು. 1947, 1965, 1971 ರಲ್ಲಿ ಪಾಕಿಸ್ತಾನದ ಜೊತೆ 1962 ರಲ್ಲಿ ಚೀನಾದ ಜೊತೆ ಯುದ್ಧ ಮಾಡಬೇಕಾಯಿತು. ಪಾಕಿಸ್ತಾನ ಜೊತೆಗಿನ ಮೂರು ಯುದ್ಧದಲ್ಲಿ ಭಾರತ ಗೆದ್ದರೆ ಚೀನಾದ ವಿರುದ್ಧ ಭಾರತ ಸೋತಿತ್ತು. ಗಡಿಯಲ್ಲಿರುವ ಈ ದೇಶಗಳ ಕಿರಿಕಿರಿ ಜಾಸ್ತಿ ಆಗುತ್ತಿದ್ದಂತೆ ಭಾರತ ಸರ್ಕಾರ ರಕ್ಷಣೆಗೆ ಹೆಚ್ಚು ಒತ್ತು ನೀಡಲು ಆರಂಭಿಸಿತು. ಅಷ್ಟೇ ಅಲ್ಲದೇ ಸ್ವಂತ ಕ್ಷಿಪಣಿ ಅಭಿವೃದ್ಧಿ ಪಡಿಸಲು ಮುಂದಾಯಿತು.

     

    ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾದ ಡಿಆರ್‌ಡಿಒ ವಿಜ್ಞಾನಿಗಳು 1989ರಲ್ಲೇ ಅಗ್ನಿ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಿ ಪರೀಕ್ಷಾರ್ಥ ಪ್ರಯೋಗ ನಡೆಸಿದ್ದರು. ಈ ಸಂದರ್ಭದಲ್ಲಿ ಧ್ವನಿಗಿಂತ ವೇಗವಾಗಿ ಸಂಚರಿಸುವ ಸೂಪರ್‌ ಸಾನಿಕ್‌ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಲು ಭಾರತ ಮುಂದಾಯಿತು. ಆದರೆ ಅದಕ್ಕೆ ಬೇಕಾದ ತಂತ್ರಜ್ಞಾನ ಭಾರತದ ಬಳಿ ಇರಲಿಲ್ಲ. ಅಣುಬಾಂಬ್ ಪರೀಕ್ಷೆ ಮಾಡಿದ ಬಳಿಕ ಅಮೆರಿಕ ಭಾರತದ ಮೇಲೆ ಹಲವು ದಿಗ್ಭಂಧನ ವಿಧಿಸಿತ್ತು. ಈ ಸಂದರ್ಭದಲ್ಲಿ ಭಾರತ ಮತ್ತು ರಷ್ಯಾದ ಸಂಬಂಧ ಚೆನ್ನಾಗಿತ್ತು. ಕೊನೆಗೆ ಭಾರತ ಮತ್ತು ರಷ್ಯಾದ ಜಂಟಿ ಹೂಡಿಕೆಯಲ್ಲಿ ಬ್ರಹ್ಮೋಸ್‌ ಕಂಪನಿ 1998ರಲ್ಲಿ ಸ್ಥಾಪನೆಯಾಯಿತು. ಕ್ಷಿಪಣಿ ಮನುಷ್ಯ ಅಬ್ಧುಲ್‌ ಕಲಾಂ ಮತ್ತು ರಷ್ಯಾದ ರಕ್ಷಣಾ ಸಚಿವ ಮಿಖಾಲಿವೋ ಫೆಬ್ರವರಿ 12 ರಂದು ಮಾಸ್ಕೋದಲ್ಲಿ ಸಹಿ ಹಾಕಿದರು. ಬ್ರಹ್ಮೋಸ್ ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ರಷ್ಯಾದ NPOM ನಡುವಿನ ಜಂಟಿ ಉದ್ಯಮವಾಗಿದೆ. ಬಹ್ಮಪುತ್ರ ಮತ್ತು ರಷ್ಯಾದ ಮಾಸ್ಕೋವಾ ನದಿಗಳನ್ನು ಪ್ರತಿನಿಧಿಸಲು ಈ ಕ್ಷಿಪಣಿಗೆ ಬ್ರಹ್ಮೋಸ್‌ ಎಂದು ಹೆಸರನ್ನು ಇಡಲಾಯಿತು. 250 ಮಿಲಿಯನ್‌ ಡಾಲರ್‌ ಹೂಡಿಕೆಯ ಕಂಪನಿಯಲ್ಲಿ ಭಾರತದ ಪಾಲು ಶೇ.50.5 ಇದ್ದರೆ ರಷ್ಯಾದ ಪಾಲು ಶೇ.49.5 ಇದೆ.  ಇದನ್ನೂ ಓದಿ: ನೀಲಿ ಬಣ್ಣದ ಜೀನ್ಸ್‌ ಬ್ಯಾನ್‌, ಆತ್ಮಹತ್ಯೆಗೈದ್ರೆ ಕುಟುಂಬಕ್ಕೆ ಶಿಕ್ಷೆ – ಉತ್ತರ ಕೊರಿಯಾದಲ್ಲಿದೆ ವಿಚಿತ್ರ ಕಾನೂನುಗಳು

    ಬ್ರಹ್ಮೋಸ್‌ ವಿಶೇಷತೆ ಏನು?
    ಚಲಿಸುವ ಪಥದ ಆಧಾರದ ಮೇಲೆ ಕ್ಷಿಪಣಿಗಳನ್ನು ಬ್ಯಾಲಿಸ್ಟಿಕ್‌ ಮತ್ತು ಕ್ರೂಸ್‌ ಕ್ಷಿಪಣಿಗಳಾಗಿ ವಿಂಗಡಿಸಲಾಗುತ್ತದೆ. ಬ್ಯಾಲಿಸ್ಟಿಕ್‌ ಕ್ಷಿಪಣಿ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ ನಂತರ ಭೂಮಿಗೆ ಅಪ್ಪಳಿಸುತ್ತದೆ. ಭಾರತದ ಅಗ್ನಿ, ಪೃಥ್ವಿ ಬ್ಯಾಲಿಸ್ಟಿಕ್‌ ಕ್ಷಿಪಣಿಗಳಾಗಿವೆ.

    ಕ್ರೂಸ್‌ ಕ್ಷಿಪಣಿ ಶಬ್ಧದ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಹೋಗುತ್ತದೆ. ಆರಂಭದಲ್ಲಿ ಕ್ರೂಸ್‌ ಕ್ಷಿಪಣಿ ಕೆಳಹಂತದಲ್ಲಿ ಭೂಮಿಯ ಮೇಲ್ಮೆಗೆ ಸಮಾನಂತರವಾಗಿ ಶಬ್ಧದ ವೇಗಕ್ಕಿಂತ ಕಡಿಮೆ ವೇಗದಲ್ಲಿ ಚಲಿಸಿ ಗುರಿ ತಲುಪುತ್ತಿದ್ದಂತೆ ಇದರ ವೇಗ ಶಬ್ಧದ ವೇಗಕ್ಕಿಂತ ಹೆಚ್ಚಾಗಿ ಕೊನೆಗೆ ಗುರಿಯನ್ನು ತಲುಪುತ್ತದೆ. ಈ ತಂತ್ರಜ್ಞಾನದಿಂದ ಶತ್ರುಗಳ ರೇಡಾರ್‌ಗಳಿಗೆ ಸಹ ಈ ಕ್ಷಿಪಣಿಯ ಪಥವನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಈ ಕ್ಷಿಪಣಿ ಸಮುದ್ರದ ಒಳಗೆ ಹೋಗಿ ಮತ್ತೆ ಮೇಲೆ ಬರುವ ಸಾಮರ್ಥ್ಯವನ್ನು ಹೊಂದಿದೆ. ಭಾರತದ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿಯ ವರ್ಗಕ್ಕೆ ಸೇರುತ್ತದೆ.

    ಬ್ರಹ್ಮೋಸ್‌ ಕ್ಷಿಪಣಿಗಳನ್ನು ಭೂಮಿಯಿಂದ, ಬಾನಿನಿಂದ, ಸಮುದ್ರದಿಂದ, ಜಲಾಂತರ್ಗಾಮಿ, ಚಲಿಸುವ ವಾಹನಗಳಿಂದಲೂ ಉಡಾಯಿಸಬಹುದು. ಭೂ ನೆಲೆ ಮತ್ತು ಯುದ್ಧ ನೌಕೆ ಆಧಾರಿತ ಬ್ರಹ್ಮೋಸ್ ಕ್ಷಿಪಣಿಗಳು ಗರಿಷ್ಠ 200 ಕೆಜಿ ಸಿಡಿತಲೆಗಳನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದರೆ ಯುದ್ಧ ವಿಮಾನದಿಂದ ಉಡಾವಣೆಯಾಗುವ ವೇರಿಯೆಂಟ್‌ 300 ಕೆಜಿ ಭಾರವನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ.

    ಚಲಿಸುವ ಗುರಿಯನ್ನು ನಿಖರವಾಗಿ ಹೊಡೆದು ಉರುಳಿಸವ ಸಾಮರ್ಥ್ಯ ಬ್ರಹ್ಮೋಸ್‌ಗೆ ಇದೆ. ಶತ್ರು ನೆಲೆಗಳಿಂದ ಬರುವ ಕ್ಷಿಪಣಿ ಹಾದಿಯನ್ನು ತಪ್ಪಿಸುವ ಎಲೆಕ್ಟ್ರಾನ್‌ ಸಂಕೇತಗಳ ವಿರುದ್ಧ ತನ್ನನ್ನು ರಕ್ಷಿಸಿಕೊಳ್ಳುವ ಸಿಗ್ನಲ್‌ ಜಾಮಿಂಗ್‌ ವ್ಯವಸ್ಥೆ ಬ್ರಹ್ಮೋಸ್‌ನಲ್ಲಿದೆ. ಮೊದಲ ಬಾರಿಗೆ ಬ್ರಹ್ಮೋಸ್‌ ಕ್ಷಿಪಣಿಯನ್ನು 2001ರ ಜೂನ್‌ 12 ರಲ್ಲಿ ಒಡಿಶಾದ ತೀರಪ್ರದೇದೇಶದದಲ್ಲಿ ಪರೀಕ್ಷೆ ಮಾಡಿದ್ದು ಈಗ ಭಾರತದ ಭೂ, ವಾಯು, ನೌಕಾ ಸೇನೆಗೆ ಸೇರ್ಪಡೆಯಾಗಿದೆ. ಇದನ್ನೂ ಓದಿ: ಡಾಲರ್‌ಗೆ ರೂಪಾಯಿ ಸೆಡ್ಡು – ಇಂಟರ್‌ನ್ಯಾಷನಲ್‌ ಕರೆನ್ಸಿ ಆಗುತ್ತಾ?

    ಯಾವೆಲ್ಲ ದೇಶಗಳು ಆಸಕ್ತಿ ತೋರಿಸಿವೆ?
    ಫಿಲಿಪೈನ್ಸ್‌ ಬ್ರಹ್ಮೋಸ್‌ ನೆವಿ ಮಿಸೈಲ್‌ ಖರೀದಿ ಸಂಬಂಧ 375 ಮಿಲಿಯನ್‌ ಡಾಲರ್‌ ಮೊತ್ತದ ಒಪ್ಪಂದಕ್ಕೆ 2022ರಲ್ಲಿ ಸಹಿ ಹಾಕಿದೆ. ಈ ವರ್ಷದ ಅಂತ್ಯಕ್ಕೆ ಕ್ಷಿಪಣಿ ರಫ್ತು ಆಗುವ ಸಾಧ್ಯತೆಯಿದೆ. ಈಗಾಗಲೇ 12 ದೇಶಗಳ ಜೊತೆ ಭಾರತ ಬ್ರಹ್ಮೋಸ್‌ ಕ್ಷಿಪಣಿ ರಫ್ತು ಸಂಬಂಧ ಮಾತುಕತೆ ನಡೆಸುತ್ತಿದೆ. ಈ ಜುಲೈ ತಿಂಗಳಿನಲ್ಲಿ ಅರ್ಜೆಂಟೀನಾ ರಕ್ಷಣಾ ಸಚಿವರ ಜೊತೆ ಭಾರತದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಾತುಕತೆ ನಡೆಸಿದ್ದಾರೆ.

    ಬ್ರಹ್ಮೋಸ್‌ ಖರೀದಿಗೆ ಹಲವು ದೇಶಗಳು ಆಸಕ್ತಿ ತೋರಿಸಿದ್ದು ಯಾಕೆ ಎನ್ನುವುದಕ್ಕೆ ಕಾರಣವಿದೆ. ಬ್ರಹ್ಮೋಸ್‌ ಭಾರತದಲ್ಲಿ ಪ್ರಯೋಗ ಯಶಸ್ವಿಯಾಗಿದ್ದು ಈಗಾಗಲೇ ಮೂರು ಸೇನೆಗೆ ಸೇರ್ಪಡೆಯಾಗಿದೆ. ನಿಖರವಾಗಿ ಗುರಿಯನ್ನು ಹೊಡೆಯುವುದು ಅಲ್ಲದೇ ಬೆಲೆಯೂ ಕಡಿಮೆ. ಅಧಿಕೃತವಾಗಿ ಈ ಕ್ಷಿಪಣಿಯ ಬೆಲೆ ಎಷ್ಟು ಎಂಬುದನ್ನು ಸರ್ಕಾರ ತಿಳಿಸದೇ ಇದ್ದರೂ ಮಾಧ್ಯಮಗಳಲ್ಲಿ ಬಂದಿರುವ ಮಾಹಿತಿ ಪ್ರಕಾರ ಒಂದು ಕ್ಷಿಪಣಿಯ ಬೆಲೆ 35 ಕೋಟಿ ರೂ. ಇದೆಯಂತೆ.. ಇದರ ಜೊತೆ ಭಾರತದ ವಿಜ್ಞಾನಿಗಳ ಬಗ್ಗೆ ನಂಬಿಕೆ ಈಗ ವಿಶ್ವಕ್ಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮೋಸ್‌ ಖರೀದಿಗೆ ಹಲವು ದೇಶಗಳು ಆಸಕ್ತಿ ತೋರಿಸಿವೆ.

    ಪಾಕಿಸ್ತಾನಕ್ಕೆ ಹಾರಿತ್ತು ಬ್ರಹ್ಮೋಸ್‌
    ಈ ಬ್ರಹ್ಮೋಸ್‌ ಕ್ಷಿಪಣಿ ಪಾಕಿಸ್ತಾನಕ್ಕೂ ಹಾರಿತ್ತು. 2022ರ ಮಾರ್ಚ್‌ 9ರ ಸಂಜೆಯ ವೇಳೆ ಹರ್ಯಾಣದ ಸಿರ್ಸಾದಿಂದ ಬ್ರಹ್ಮೋಸ್‌ ಕ್ಷಿಪಣಿ ಆಕಸ್ಮಿಕವಾಗಿ ಉಡಾವಣೆಯಾಗಿ ಕೇವಲ 3 ನಿಮಿಷ 44 ಸೆಕೆಂಡ್‌ನಲ್ಲಿ 124 ಕಿ.ಮೀ ಕ್ರಮಿಸಿ ಪಾಕಿಸ್ತಾನದ ಭೂ ಪ್ರದೇಶದ ಒಳಗಡೆ ಬಿದ್ದಿತ್ತು. ಈ ಘಟನೆಯಿಂದ ಯಾವುದೇ ಸಾವು, ನೋವು ಸಂಭವಿಸಲಿಲ್ಲ. ಈ ವಿಷಯವನ್ನು ಇಟ್ಟುಕೊಂಡು ಪಾಕಿಸ್ತಾನ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಭಾರತ ತಾಂತ್ರಿಕ ಸಮಸ್ಯೆಯಿಂದ ಈ ಕ್ಷಿಪಣಿ ಉಡಾವಣೆಯಾಗಿದೆ ಎಂದು ಹೇಳಿ ವಿಷಾದ ವ್ಯಕ್ತಪಡಿಸಿ ತನಿಖೆ ನಡೆಸುವುದಾಗಿ ಹೇಳಿತ್ತು. ತನಿಖೆಯ ಬಳಿಕ ವಾಯುಸೇನೆಯ ಇಮೇಜ್‌ಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿಂಗ್‌ ಕಮಾಂಡರ್‌ ಅಭಿನವ್‌ ಶರ್ಮಾ ಅವರನ್ನು ಸೇವೆಯಿಂದಲೇ ವಜಾಗೊಳಿಸಿತ್ತು. ಈ ಕ್ಷಿಪಣಿ ಪ್ರಕರಣದಿಂದ ಭಾರತ ಸರ್ಕಾರಕ್ಕೆ 24 ಕೋಟಿ ರೂ. ನಷ್ಟವಾಗಿತ್ತು.

    ಶಸ್ತ್ರಾಸ್ತ ರಫ್ತು ಹೆಚ್ಚಳ
    ಮೇಕ್‌ ಇನ್‌ ಇಂಡಿಯಾಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವ ಕಾರಣ ಈಗ ಶಸ್ತ್ರಾಸ್ತ್ರಗಳನ್ನು ಭಾರತ ಹೆಚ್ಚು ರಫ್ತು ಮಾಡುತ್ತಿದೆ. ವರ್ಷದಿಂದ ವರ್ಷಕ್ಕೆ ರಫ್ತು ಪ್ರಮಾಣ ಹೆಚ್ಚಾಗುತ್ತಿದೆ. ರಕ್ಷಣಾ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ 2014-15 – 1,941 ಕೋಟಿ ರೂ., 2017-18 – 4,682 ಕೋಟಿ ರೂ., 2018-19- 10,746 ಕೋಟಿ ರೂ., 2021-22- 12,815 ಕೋಟಿ ರೂ., 2022-23 – 15,918 ಕೋಟಿ ರೂ. ಮೊತ್ತದ ರಕ್ಷಣಾ ಸಾಮಾಗ್ರಿಗಳನ್ನು ರಫ್ತು ಮಾಡಿದೆ.

    ಸರ್ಕಾರದ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ರಫ್ತು ಮಾಡಲಾದ ಪ್ರಮುಖ ರಕ್ಷಣಾ ಸಾಧನಗಳಲ್ಲಿ ಸಿಮ್ಯುಲೇಟರ್, ಅಶ್ರುವಾಯು ಲಾಂಚರ್, ಟಾರ್ಪಿಡೊ-ಲೋಡಿಂಗ್ ಮೆಕ್ಯಾನಿಸಂ, ಅಲಾರ್ಮ್ ಮಾನಿಟರಿಂಗ್ ಮತ್ತು ಕಂಟ್ರೋಲ್, ನೈಟ್ ವಿಷನ್ ಮಾನೋಕ್ಯುಲರ್ ಮತ್ತು ಬೈನಾಕ್ಯುಲರ್, ಅಗ್ನಿಶಾಮಕ ನಿಯಂತ್ರಣ ವ್ಯವಸ್ಥೆಗಳು, ಶಸ್ತ್ರಸಜ್ಜಿತ ರಕ್ಷಣಾ ವಾಹನ, ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚುವ ರಾಡಾರ್, ಹೈ ಫ್ರಿಕ್ವೆನ್ಸಿ ರೇಡಿಯೊ ಇತ್ಯಾದಿಗಳನ್ನು ರಫ್ತು ಮಾಡಿವೆ. ಇಟಲಿ, ಶ್ರೀಲಂಕಾ, ರಷ್ಯಾ, ಮಾಲ್ಡೀವ್ಸ್, ಮಾರಿಷಸ್, ನೇಪಾಳ, ಫ್ರಾನ್ಸ್, ಶ್ರೀಲಂಕಾ, ಈಜಿಪ್ಟ್, ಇಸ್ರೇಲ್, ಭೂತಾನ್, ಯುಎಇ, ಸೌದಿ ಅರೇಬಿಯಾ, ಇಥಿಯೋಪಿಯಾ, ಫಿಲಿಪೈನ್ಸ್, ಪೋಲೆಂಡ್, ಸ್ಪೇನ್ ಮತ್ತು ಚಿಲಿ ದೇಶಗಳು ರಫ್ತು ಲಿಸ್ಟ್‌ನಲ್ಲಿವೆ.

    2025ರ ವೇಳೆಗೆ ಭಾರತ 35 ಸಾವಿರ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡಬೇಕೆಂಬ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಈ ಗುರಿಯನ್ನು ತಲುಪಬೇಕಾದರೆ ಸರ್ಕಾರ ಬಹಳ ಶ್ರಮಪಡಬೇಕಾದ ಅಗತ್ಯವಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]