Tag: ಬ್ರಾಹ್ಮಣರು

  • ಸಿದ್ದರಾಮಯ್ಯ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌: ಪ್ರತಾಪ್‌ ಸಿಂಹ

    ಸಿದ್ದರಾಮಯ್ಯ ಅವಧಿಯಲ್ಲಿ ಬ್ರಾಹ್ಮಣರು ಸಾಫ್ಟ್‌ ಟಾರ್ಗೆಟ್‌: ಪ್ರತಾಪ್‌ ಸಿಂಹ

    ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವಧಿಯಲ್ಲಿ ಬ್ರಾಹ್ಮಣರು (Brahmins) ಸಾಫ್ಟ್‌ ಟಾರ್ಗೆಟ್‌ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ (Pratap Simha) ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬ್ರಾಹ್ಮಣರ ಸಂಖ್ಯೆ ಬಹಳ ಕಡಿಮೆ ಇದೆ. ಅವರು ಪ್ರತಿರೋಧ ತೋರುವುದಿಲ್ಲ ಎಂಬ ಭಾವನೆ ಸಿದ್ದರಾಮಯ್ಯ ಅವರಿಗಿದೆ ಎಂದರು.

    ಉಡುಪಿಯ ಹಿಜಾಬ್ (Hijab) ವಿಚಾರ ಬಂದಾಗ ಸಿದ್ದರಾಮಯ್ಯ ಪ್ರಬಲವಾಗಿ ಪ್ರತಿಪಾದಿಸಿದರು. ಈಗ ಯಾಕೆ ಜನಿವಾರ (Janivara) ಪ್ರಕರಣದಲ್ಲಿ ಸಿದ್ದರಾಮಯ್ಯ ಸುಮ್ಮನಿದ್ದಾರೆ? ಜನಿವಾರದಲ್ಲಿ ಏನಾದ್ರೂ ಲೋಪ ಕಾಣುತ್ತಿದ್ಯಾ ಎಂದು ಪ್ರಶ್ನಿಸಿದರು.  ಇದನ್ನೂ ಓದಿ: ಪರಿಸರ ಚಟುವಟಿಕೆಯಲ್ಲಿ ತೊಡಗುತ್ತೇನೆ – ಬಿಜೆಪಿಗೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ

     

    ಜಾತಿ ಜನಗಣತಿಯಲ್ಲೂ ಬ್ರಾಹ್ಮಣರ ಸಂಖ್ಯೆ ಕಡಿಮೆ ತೋರಿಸಲಾಗಿದೆ, ಅವರೇನೂ ಹೇಳಲ್ಲ ಅಂತನಾ? ಜನಿವಾರವೇ ಒಂದು ಸಮಸ್ಯೆ ಅಂತ ಅನ್ಕೊಂಡು ಜನಿವಾರವನ್ನೇ ತೆಗೆಸುವ ಕೆಲಸ ಆಗಿದೆ. ಇದು ಹಿಂದೂಗಳ ಮೇಲಿನ ಆಕ್ರಮಣ. ಹಿಂದೂ ಸಮಾಜ ಒಟ್ಟಾಗಿ ಜನಿವಾರ ಪ್ರಕರಣ ವಿರೋಧಿಸಬೇಕು ಎಂದು ಹೇಳಿದರು.  ಇದನ್ನೂ ಓದಿ: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ? – ಅನುರಾಗ್‌ ಕಶ್ಯಪ್‌ ವಿವಾದ

    ಒಕ್ಕಲಿಗರು, ಲಿಂಗಾಯತರಿಗೆ ತಮ್ಮ ಸಮುದಾಯ ಸಂಖ್ಯೆ ಕಡಿಮೆಯಾಗಿದೆ ಅಂತ ಸಿಟ್ಟಿದೆ. ದಲಿತ ನಾಯಕರು ತಮ್ಮ ಸಂಖ್ಯೆ ಒಂದು ಕೋಟಿ ಆಗಿದೆ ಅಂತ ಒಳಗೊಳಗೇ ಖುಷಿ ಆಗಿರಬಹುದು. ಆದರೆ ಈ ಹಿಂದೆಯೇ ಅಹಿಂದ ಪ್ರಾರಂಭಿಸಿ ಸಿದ್ದರಾಮಯ್ಯ ಹಿಂದೂಗಳನ್ನು ಒಡೆದಿದ್ದರು. ಈಗ ಅಧಿಕಾರದಲ್ಲಿ ಮುಂದುವರೆಯಲು ಸಮಸ್ತ ಹಿಂದೂ ಧರ್ಮ ಒಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

    ಇನ್ನಾದರೂ ಜಾತಿ ಜಾತಿ ಎನ್ನುವುದನ್ನು ಬಿಟ್ಟು ಹಿಂದೂಗಳು ಸಿದ್ದರಾಮಯ್ಯನವರ ಅವರ ಕುರ್ಚಿ ತಂತ್ರ ಅರ್ಥ ಮಾಡಿಕೊಳ್ಳಬೇಕು. ಇನ್ನೂ ನಾನು ಗೌಡ, ಲಿಂಗಾಯತ, ಒಬಿಸಿ, ಎಸ್ಸಿ, ಎಸ್ಟಿ, ಕುರುಬ ಅನ್ನುವ ಮನಸ್ಥಿತಿಯಿಂದ ಹೊರಗೆ ಬರಬೇಕು. ಜಾತಿ ಆಧಾರದಲ್ಲಿ ಅಪಸ್ವರ ಎತ್ತಲು ಹೋಗಬಾರದು. ಹಿಂದೂ ಸಮಾಜದ ಪ್ರತಿನಿಧಿಗಳ ರೀತಿ ಸಮಯದಾಯಗಳ ನಾಯಕರು ಮಾತಾಡಬೇಕು ಎಂದು ಅಭಿಪ್ರಾಯಪಟ್ಟರು.

  • ಬ್ರಾಹ್ಮಣರ ಸಂಖ್ಯೆ 15 ಲಕ್ಷ ಅಲ್ಲ, ನಮ್ಮ ಸಂಖ್ಯೆ 45 ಲಕ್ಷ: ಅಶೋಕ್ ಹಾರನಹಳ್ಳಿ

    ಬ್ರಾಹ್ಮಣರ ಸಂಖ್ಯೆ 15 ಲಕ್ಷ ಅಲ್ಲ, ನಮ್ಮ ಸಂಖ್ಯೆ 45 ಲಕ್ಷ: ಅಶೋಕ್ ಹಾರನಹಳ್ಳಿ

    – ನಾವು ಪ್ರತ್ಯೇಕವಾಗಿ ಡಿಜಿಟಲ್‌ ಸಮೀಕ್ಷೆ ಮಾಡುತ್ತೇವೆ
    – ರಾಜ್ಯದಲ್ಲಿ ಬ್ರಾಹ್ಮಣರ ಸಂಖ್ಯೆ 15,64,741

    ಬೆಂಗಳೂರು: ಜಾತಿ ಗಣತಿಯ (Caste Census) ಮೇಲೆ ತೆಗೆದುಕೊಳ್ಳುವ ರಾಜಕೀಯ ನಿರ್ಧಾರಗಳು ತಪ್ಪಾಗಬಹುದು ಬ್ರಾಹ್ಮಣ (Brahmins) ಸಮುದಾಯದ ಸಂಖ್ಯೆ 15 ಲಕ್ಷ ಎನ್ನುತ್ತಿದ್ದಾರೆ. ನಮ್ಮ ಪ್ರಕಾರ ಸಮುದಾಯದ ಜನಸಂಖ್ಯೆ 45 ಲಕ್ಷ ಇದೆ ಎಂದು ಬ್ರಾಹ್ಮಣ ಮಹಾಸಭಾ ಮಾಜಿ ಅಧ್ಯಕ್ಷ ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ (Ashok Haranahalli) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಬ್ರಾಹ್ಮಣ ಸಮುದಾಯದ ಅಂಕಿ ಸಂಖ್ಯೆಗಳನ್ನು ನೋಡಿದ ಸಾಕಷ್ಟು ಜನರು ಮನೆಗೆ ಗಣತಿಗೆ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ನಾನು ರಾಜ್ಯಾದ್ಯಂತ ಓಡಾಡಿ ಮಾಹಿತಿಯನ್ನು ತೆಗೆದುಕೊಂಡಾಗಲೂ ಬಂದಿಲ್ಲ ಅಂದವರ ಸಂಖ್ಯೆ ಜಾಸ್ತಿ ಇದೆ. ಹೀಗಾಗಿ ಈ ವರದಿ ವೈಜ್ಞಾನಿಕವಾಗಿ ತಯಾರಿಸಿಲ್ಲ ಎನ್ನುವವುದು ನನ್ನ ಭಾವನೆ ಎಂದು ಹೇಳಿದರು. ಇದನ್ನೂ ಓದಿ: ಜಾತಿಗಣತಿ ವಿರುದ್ಧ ಸಿಡಿದ ಒಕ್ಕಲಿಗರು- ವರದಿ ಜಾರಿಯಾದ್ರೆ ಸರ್ಕಾರ ಪತನದ ಎಚ್ಚರಿಕೆ

     

    ಈ ಸಮೀಕ್ಷೆಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಂಡರೆ ಮುಂದೆ ನಾವು ಕಾನೂನು ಹೋರಾಟ ನಡೆಸಬೇಕಾಗುತ್ತದೆ. ಬ್ರಾಹ್ಮಣ ಸಮುದಾಯದಿಂದಲೇ ನಾವು ಪ್ರತ್ಯೇಕವಾಗಿ ಸಮೀಕ್ಷೆ ಮಾಡಿಸುತ್ತೇವೆ. ನಮ್ಮ ಸಮುದಾಯದ ಡಿಜಿಟಲ್ ಸರ್ವೆ ಮಾಡಿಸುತ್ತೇವೆ ಎಂದು ತಿಳಿಸಿದರು.

    ಬ್ರಾಹ್ಮಣರಲ್ಲಿ 55 ಒಳ ಪಂಗಡಗಳನ್ನು ಗುರುತಿಸಿರುವ ಹಿಂದುಳಿದ ವರ್ಗಗಳ ಆಯೋಗ, ರಾಜ್ಯದಲ್ಲಿ ಒಟ್ಟಾರೆ ಬ್ರಾಹ್ಮಣರ ಜನಸಂಖ್ಯೆ 15,64,741 ಎಂದು ವರದಿಯಲ್ಲಿ ಉಲ್ಲೇಖಿಸಿದೆ.

     ಬ್ರಾಹ್ಮಣ ಸಮುದಾಯದ ಜಾತಿಗಣತಿ
    * ಬ್ರಾಹ್ಮಣರ ಜನಸಂಖ್ಯೆ – 15,64,741
    * ಬ್ರಾಹ್ಮಣ – 11,85,605
    * ಗೌಡ ಸಾರಸ್ವತ – 1,14,119
    * ಹವ್ಯಕ – 85,595
    * ಶ್ರೀವೈಷ್ಣವ – 16,286
    * ಮಾಧ್ವ – 13,302,
    * ಅಯ್ಯಂಗಾರ್ – 12,070
    * ಸ್ಥಾನಿಕ 3,820
    * ಸಂಕೇತಿ – 1,276 ಇದನ್ನೂ ಓದಿ: ಜಾತಿಗಣತಿ | ಮನೆ ಮನೆಗೆ ಹೋಗಿ ಮತ್ತೆ ಸಮೀಕ್ಷೆ ಮಾಡ್ಬೇಕು – ಶಾಸಕ ಬಾಲಕೃಷ್ಣ ಆಗ್ರಹ

     

  • ಧರ್ಮದ ಹೆಸರಲ್ಲಿ ಬ್ರಾಹ್ಮಣರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ: ಬಿಜೆಪಿ ನಾಯಕ

    ಧರ್ಮದ ಹೆಸರಲ್ಲಿ ಬ್ರಾಹ್ಮಣರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ: ಬಿಜೆಪಿ ನಾಯಕ

    ಭೋಪಾಲ್: ಧರ್ಮದ ಹೆಸರಿನಲ್ಲಿ ಬ್ರಾಹ್ಮಣರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ. ಜೊತೆಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಗ್ವಾಲಿಯರ್-ಚಂಬಲ್ ಪ್ರದೇಶದ ನಾಯಕ ಪ್ರೀತಂ ಸಿಂಗ್ ಲೋಧಿ ಅವರು ವಿವಾದತ್ಮಕ ಹೇಳಿಕೆ ನೀಡಿದ್ದು, ಇದೀಗ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.

    ಶನಿವಾರ ಬೆಳಗ್ಗೆ ಅವರನ್ನು ಭೋಪಾಲ್‍ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಕರೆಸಿ, ಪ್ರೀತಂ ಸಿಂಗ್ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. ಬುಧವಾರ ಯೋಧ ರಾಣಿ ಅವಂತಿಬಾಯಿ ಲೋಧಿ ಅವರ ಜನ್ಮದಿನದಂದು ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರೀತಂ ಸಿಂಗ್ ಲೋಧಿ, ಬ್ರಾಹ್ಮಣರು ಧರ್ಮದ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಮತ್ತು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.

    bjP

    ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಪ್ರೀತಂ ಸಿಂಗ್ ಲೋಧಿ ಹೇಳಿಕೆ ವಿರುದ್ಧ ಬಿಜೆಪಿ ಯುವ ಘಟಕದ ನಾಯಕ ಪ್ರವೀಣ್ ಮಿಶ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದರು. ಅಲ್ಲದೇ ಲೋಧಿ ಅವರು ಜನರ ನಡುವೆ ದ್ವೇಷವನ್ನುಂಟುಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ವಿಜಯಪುರದ ಹಲವೆಡೆ ಭಾರೀ ಶಬ್ದದೊಂದಿಗೆ ಕಂಪಿಸಿದ ಭೂಮಿ

    62 ವರ್ಷದ ಅವರು ಈಗಾಗಲೇ 37 ಪ್ರಕರಣಗಳ ಆರೋಪಿಯಾಗಿದ್ದಾರೆ. ನಾಲ್ಕು ಕೊಲೆ ಯತ್ನ ಪ್ರಕರಣಗಳು ಮತ್ತು ಎರಡು ಕೊಲೆ ಪ್ರಕರಣಗಳು ಇವರ ಮೇಲಿದೆ. ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರಿಗೆ ಆತ್ಮೀಯರಾಗಿರುವ ಪ್ರೀತಂ ಸಿಂಗ್ ಲೋಧಿ ಅವರು 2013 ಮತ್ತು 2018 ರ ವಿಧಾನಸಭಾ ಚುನಾವಣೆಯಲ್ಲಿ ಪಿಚೋರ್ (ಶಿವಪುರಿ) ನಿಂದ ಬಿಜೆಪಿ ಟಿಕೆಟ್‍ನಲ್ಲಿ ಸೋತಿದ್ದರು. ಆದರೆ ಗ್ವಾಲಿಯರ್-ಚಂಬಲ್ ಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಪ್ರಭಾವಿ ನಾಯಕರಾಗಿದ್ದಾರೆ.

    ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಹಿರಿಯ ಮತ್ತು ಆರು ಬಾರಿ ಹಾಲಿ ಶಾಸಕ ಕೆಪಿ ಸಿಂಗ್ ‘ಕಕ್ಕಜು’ ವಿರುದ್ಧ ಪಿಚೋರ್ ವಿಧಾನಸಭಾ ಕ್ಷೇತ್ರದಿಂದ ಪ್ರೀತಂ ಸಿಂಗ್ ಲೋಧಿ ಸ್ಪರ್ಧಿಸಿದ್ದರು. 2018ರ ಚುನಾವಣೆಯಲ್ಲಿ ಕೇವಲ 2,500ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದರು. ಇದನ್ನೂ ಓದಿ: ಷರತ್ತಿನೊಂದಿಗೆ ಗಣೇಶೋತ್ಸವಕ್ಕೆ BBMP ಗ್ರೀನ್ ಸಿಗ್ನಲ್ – ಈದ್ಗಾ ಮೈದಾನ ಗಣಪನಿಗೆ ಸಿಕ್ಕಿಲ್ಲ ಪರ್ಮಿಷನ್

    ಶಿವಪುರಿಯ ಖರೈಹ್ ಗ್ರಾಮದಲ್ಲಿ ಬುಧವಾರ ನಡೆದ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ರಾಹ್ಮಣರು ಹಿಂದಿನ ಜನರ ಹಣ ಮತ್ತು ಸಂಪನ್ಮೂಲದಿಂದ ಏಳಿಗೆ ಹೊಂದುತ್ತಿದ್ದರು. ಒಳ್ಳೆಯ ಕುಟುಂಬದ ಸುಂದರ ಮಹಿಳೆಯರನ್ನು ನೋಡಿ, ಬ್ರಾಹ್ಮಣರು ಆ ಮಹಿಳೆಯರ ಮನೆಯಲ್ಲಿ ಊಟ ಮಾಡಲು ಬಯಸುತ್ತಾರೆ. ಬ್ರಾಹ್ಮಣರು ಯುವತಿಯರನ್ನು ಮುಂದಿನ ಸಾಲಿನಲ್ಲಿ ಕೂರಿಸಿ, ವಯಸ್ಸಾದ ಮಹಿಳೆಯರನ್ನು ಹಿಂದಿನ ಸಾಲಿನಲ್ಲಿ ಕೂರಿಸುತ್ತಾರೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹಾರಾಷ್ಟ್ರದಲ್ಲಿ ಬ್ರಾಹ್ಮಣರನ್ನು ಸಿಎಂ ಆಗಿ ನೋಡಲು ಬಯಸುತ್ತೇನೆ: ರಾವ್‍ಸಾಹೇಬ್ ಪಾಟೀಲ್ ದಾನ್ವೆ

    ಮಹಾರಾಷ್ಟ್ರದಲ್ಲಿ ಬ್ರಾಹ್ಮಣರನ್ನು ಸಿಎಂ ಆಗಿ ನೋಡಲು ಬಯಸುತ್ತೇನೆ: ರಾವ್‍ಸಾಹೇಬ್ ಪಾಟೀಲ್ ದಾನ್ವೆ

    ಮುಂಬೈ: ಮಹಾರಾಷ್ಟ್ರದಲ್ಲಿ ಬ್ರಾಹ್ಮಣ ಸಮುದಾಯದವರು ಮುಖ್ಯಮಂತ್ರಿಯಾಗುವುದನ್ನು ನೋಡಲು ನಾನು ಬಯಸುತ್ತೇನೆ ಎಂದು ಕೇಂದ್ರ ರೈಲ್ವೆ, ಕಲ್ಲಿದ್ದಲು ಮತ್ತು ಗಣಿ ರಾಜ್ಯ ಸಚಿವ ರಾವ್‍ಸಾಹೇಬ್ ಪಾಟೀಲ್ ದಾನ್ವೆ ಹೇಳಿದ್ದಾರೆ.

    ಮಂಗಳವಾರ ರಾತ್ರಿ ಜಾಲ್ನಾದಲ್ಲಿ ನಡೆದ ಪರಶುರಾಮ ಜಯಂತಿ ಆಚರಣೆಯಲ್ಲಿ ಬ್ರಾಹ್ಮಣ ಸಮುದಾಯದವರು ಆಯೋಜಿಸಿದ್ದ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಬ್ರಾಹ್ಮಣರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು. ನಾನು ಬ್ರಾಹ್ಮಣರನ್ನು ಕಾಪೊರೇಟರ್‌ಗಳಾಗಿ ಅಥವಾ ನಾಗರಿಕ ಸಂಸ್ಥೆಗಳ ಮುಖ್ಯಸ್ಥರನ್ನಾಗಿ ನೋಡಲು ಬಯಸುವುದಿಲ್ಲ. ಬ್ರಾಹ್ಮಣರನ್ನು ಈ ರಾಜ್ಯದ ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತೇನೆ ಎಂದಿದ್ದಾರೆ.

    ಈ ವರ್ಷದ ಆರಂಭದಲ್ಲಿ ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದೆ. ರಾಜಕೀಯಕ್ಕೆ ಜಾತೀಯತೆ ಬಂದಿದ್ದು, ಅದನ್ನು ಕಡೆಗಣಿಸುವಂತಿಲ್ಲ. ಆದರೆ ಸಮುದಾಯಗಳನ್ನು ಒಗ್ಗೂಡಿಸುವ ನಾಯಕನಿರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಆರ್‌ಸಿಬಿ ಅಭಿಮಾನಿಗೆ ಪ್ರಪೋಸ್ ಮಾಡಿ ಮನಗೆದ್ದ ಹುಡುಗಿ – ನೆಟ್ಟಿಗರು ಫುಲ್ ಆಕ್ಟಿವ್

    ರಾವ್‍ಸಾಹೇಬ್ ಪಾಟೀಲ್ ದಾನ್ವೆ ಅವರ ಈ ಹೇಳಿಕೆಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು, ಜಾತಿ ಅಥವಾ ಲಿಂಗದ ಆಧಾರದ ಮೇಲೆ ಬೆಂಬಲಿಸಿದರೇ 145 ಶಾಸಕರು ಕೂಡ ಮುಖ್ಯಮಂತ್ರಿಯಾಗಬಹುದು ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಆರ್ಭಟಕ್ಕೆ ಸೈಲೆಂಟಾದ ಕಿಂಗ್ಸ್ – ಚೆನ್ನೈ ವಿರುದ್ಧ 13 ರನ್‍ಗಳ ಜಯ