Tag: ಬ್ರಾಹ್ಮಣ್ಯ

  • ಬ್ರಾಹ್ಮಣ ಅಡುಗೆ ಭಟ್ಟ ಬಂದ್ರೆ ನಮಸ್ಕಾರ ಮಾಡ್ತಾರೆ, ಹಿಂದುಳಿದವನು ಶ್ರೀಮಂತನಾಗಿದ್ರೂ ಏನ್ಲಾ ಅಂತಾರೆ: ಸಿದ್ದು

    ಬ್ರಾಹ್ಮಣ ಅಡುಗೆ ಭಟ್ಟ ಬಂದ್ರೆ ನಮಸ್ಕಾರ ಮಾಡ್ತಾರೆ, ಹಿಂದುಳಿದವನು ಶ್ರೀಮಂತನಾಗಿದ್ರೂ ಏನ್ಲಾ ಅಂತಾರೆ: ಸಿದ್ದು

    ಬೆಂಗಳೂರು: ಒಬ್ಬ ಬ್ರಾಹ್ಮಣ ಅಡುಗೆ ಭಟ್ಟ ಬಂದರೆ ಎಲ್ಲರೂ ಬಗ್ಗಿ ನಮಸ್ಕಾರ ಮಾಡುತ್ತಾರೆ. ಆದರೆ ಹಿಂದುಳಿದವರು ಎಷ್ಟೇ ಶ್ರೀಮಂತರಾಗಿದ್ದರೂ ಏನ್ಲಾ ಅಂತಾ ಮಾತಾಡಿಸುತ್ತಾರೆ ಎಂದು ಗುಲಾಮಗಿರಿ ಮನಸ್ಥಿತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

    ನಮಗೆ ಗುಲಾಮಗಿರಿ ಮನಸ್ಥಿತಿ ಇನ್ನೂ ಹೋಗಿಲ್ಲ. ಇದೇ ಗುಲಾಮಗಿರಿ ಮನಸ್ಥಿತಿ. ಈ ಗುಲಾಮಗಿರಿ ಮನಸ್ಥಿತಿ ಹೋಗಬೇಕು ಎಂದು ಹೇಳಿದ್ದಾರೆ.

    ಶಿಕ್ಷಣ, ಅಧಿಕಾರ ಯಾವುದೇ ಒಂದು ಜಾತಿಯ ಸ್ವತ್ತಲ್ಲ. ಅವಕಾಶ ಸಿಕ್ಕರೆ ಎಲ್ಲ ಪ್ರತಿಭೆಗಳು ಹುಟ್ಟಿಕೊಳ್ತಾರೆ. ಯಾರು ಸಮಾಜದಲ್ಲಿ ಅಸಮಾನತೆ ಸೃಷ್ಟಿ ಮಾಡಿದ್ದಾರೋ ಅವರೇ ಮೀಸಲಾತಿ ಪ್ರಶ್ನೆ ಮಾಡ್ತಾರೆ. ಎಷ್ಟು ದಿನ ಬೇಕು ಮೀಸಲಾತಿ? ಇನ್ನೂ ಏಕೆ ಬೇಕು‌ ಮೀಸಲಾತಿ ಅಂತಾ ಪ್ರಶ್ನೆ ಮಾಡ್ತಾರೆ. ಚತುರ್ ವರ್ಷದಲ್ಲಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯರಿಗೆ ಮಾತ್ರ ಶಿಕ್ಷಣ, ಅಧಿಕಾರ ಎನ್ನುವಂತಿತ್ತು. ಇದು ಮೀಸಲಾತಿ ಅಲ್ಲವಾ? ಇದೊಂದು ರೀತಿ ಅಲಿಖಿತ ಮೀಸಲಾತಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನ, ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು: ಬಸವರಾಜ ಹೊರಟ್ಟಿ

    ಆರ್ಯರು ವಲಸೆ ಬಂದರು ಅಂದ್ರೆ ಎಲ್ಲ ನನ್ನ ಮೇಲೆ ಬೀಳ್ತಾರೆ. ದ್ರಾವಿಡರ ಮೇಲೆ ದಬ್ಬಾಳಿಕೆ ಮಾಡಿದ್ರು ಅಂದ್ರೆ ಕೋಪ ಬಂದು ಬಿಡುತ್ತೆ ಅವರಿಗೆ. ನನ್ನ ಮೇಲೆ ಮುಗಿ ಬಿದ್ದುಬಿಡ್ತಾರೆ. ಮಿಲ್ಲರ್ ಆಯೋಗವನ್ನು ವಿರೋಧ ಮಾಡಿದವರು ಯಾರು? ಆ ಸತ್ತ ವ್ಯಕ್ತಿ ಹೇಳಿದ್ರೆ ನಮ್ಮ ಮೇಲೆ ಬರ್ತಾರೆ. ನಾನು ಒಬ್ಬ ಮಾತಾಡಿದ್ರೆ ಅವರು 20 ಜನ ಬರ್ತಾರೆ. ನಮ್ಮವರೂ ಒಬ್ಬರೂ ಮಾತಾಡಲ್ಲ, ಸುಮ್ಮನೇ ಇರ್ತಾರೆ. ಸಿದ್ದರಾಮಯ್ಯ ತಾನೇ ಬೈಯ್ಯಿಸ್ಕೊಳ್ಳೋದು ಅಂತಾ ಸುಮ್ಮನಾಗ್ತಾರೆ ಎಂದು ಮಾತನಾಡಿದ್ದಾರೆ.

    ಈ ಹಿಂದೆ ಬ್ರಾಹ್ಮಣರು ಮಾತ್ರ ಓದಬೇಕಿತ್ತು, ಬ್ರಾಹ್ಮಣರು ಮಾತ್ರ ಅಧಿಕಾರ ಹೊಂದಬೇಕಿತ್ತು. ಇದು ಮೀಸಲಾತಿ ಅಲ್ವಾ? ಕೊಳಕು ಕೆಲಸ ಬಿಟ್ಟು ಅವರು‌ ಮಜಾ ಮಾಡ್ತಿದ್ರು. ಇದು ಅಲಿಖಿತ ಮೀಸಲಾತಿ. ಏಕೆ ಮೀಸಲಾತಿ ಕೊಡಬೇಕು. ಮೀಸಲಾತಿ ಎಷ್ಟು ವರ್ಷ ಇರಬೇಕು, ಪ್ರತಿಭೆಗಳಿಗೆ ತೊಂದರೆ ಆಗೋದಿಲ್ಲವಾ ಎಂದು ಪ್ರಶ್ನೆ ಮಾಡ್ತಾರೆ. ಸಮಾಜದಲ್ಲಿ ಅಸಮಾನತೆ ಉಂಟಾಗಲು ಕಾರಣರಾದವರೇ ಈಗ ಪ್ರಶ್ನೆ ಕೇಳ್ತಿರೋದು ಎಂದು ಮೀಸಲಾತಿ ವಿರೋಧಿಗಳಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

    ಎಲ್ಲಿಯವರಿಗೆ ಜಾತಿ ವ್ಯವಸ್ಥೆ ಇರುತ್ತೋ ಅಲ್ಲಿಯತನಕ ಮೀಸಲಾತಿ ಇರಲೇಬೇಕು ಎಂದು ಅಂಬೇಡ್ಕರ್ ಸ್ಪಷ್ಟಪಡಿಸಿದ್ದಾರೆ. ಅಂಬೇಡ್ಕರ್ ಅವರು ಎಸ್‌ಸಿ, ಎಸ್ಟಿಗೆ ಮೀಸಲಾತಿ ಕೊಟ್ಟರು. 90ರಲ್ಲಿ ಓಬಿಸಿ ಮೀಸಲಾತಿ ಸಿಕ್ಕಿದೆ. ವಿ.ಪಿ.ಸಿಂಗ್ ಬಂದ ಮೇಲೆ ಮೀಸಲಾತಿ ಸಿಕ್ಕಿದೆ. ಆಗ ವಿರೋಧ ಮಾಡಿದವರು ಯಾರು ಗೊತ್ತಾ? ಈಗ ಅಂಬೇಡ್ಕರ್ ಬಗ್ಗೆ, ದಲಿತರ ಬಗ್ಗೆ ಮಾತಾಡುತ್ತಾರಲ್ಲ ಅವರೇ. ರಥಯಾತ್ರೆ ಮಾಡಿದವರು ಯಾರು? ಸತ್ಯ ಮಾತಾಡಿದ್ರೆ ನಾವು ಬೈಯ್ಯಿಸಿಕೊಳ್ಳಬೇಕು ಎಂದು ವಿಷಾದಿಸಿದ್ದಾರೆ. ಇದನ್ನೂ ಓದಿ: 819 ಕೋಟಿ ವಂಚಿಸಿದ್ರಾ ಮಾಜಿ ಸಚಿವ..? – ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ

    ಪ್ರಧಾನಿ ಮೋದಿ ಸರ್ಕಾರ‌ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ 10% ಮೀಸಲಾತಿ ಜಾರಿಗೆ ತಂದರು. ಚರ್ಚೆ ಮಾಡದೇ ತರಾತುರಿಯಲ್ಲಿ ಜಾರಿಗೊಳಿಸಿದರು. ಇದು ಸಂವಿಧಾನದಲ್ಲಿ ಇದೆಯಾ? ಇದು ಸಂವಿಧಾನಕ್ಕೆ ವಿರೋಧ ಅಲ್ಲವಾ? ಸಂವಿಧಾನದಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಅಂತಿದೆ. ಆದರೆ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕು ಅಂತಾ ಸಂವಿಧಾನದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv

  • ಮಡಿ, ಮೈಲಿಗೆ ಹೆಸರಲ್ಲಿ ಬ್ರಾಹ್ಮಣ್ಯ ನಮ್ಮನ್ನು ಕೀಳಾಗಿ ಮಾಡಿದೆ: ನಟ ಚೇತನ್‌

    ಮಡಿ, ಮೈಲಿಗೆ ಹೆಸರಲ್ಲಿ ಬ್ರಾಹ್ಮಣ್ಯ ನಮ್ಮನ್ನು ಕೀಳಾಗಿ ಮಾಡಿದೆ: ನಟ ಚೇತನ್‌

    ಮಡಿಕೇರಿ: ಕಳೆದ 3,500 ವರ್ಷಗಳಿಂದಲೂ ಮಡಿ ಮೈಲಿಗೆ ಹೆಸರಿನಲ್ಲಿ ಬ್ರಾಹ್ಮಣ್ಯ ನಮ್ಮನ್ನು ಕೀಳಾಗಿ ಮಾಡಿದೆ, ಕೆಳಸ್ತರಲ್ಲಿಟ್ಟಿದೆ. ಇದನ್ನು ನಾವು ಒಪ್ಪುವುದಿಲ್ಲ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಕಿಡಿ ಕಾರಿದ್ದಾರೆ.

    ಮಡಿಕೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಾಹ್ಮಣ್ಯ ನಮ್ಮನ್ನು ಕೀಳಾಗಿ ಮಾಡಿದೆ. ನಮಗೆ, ಬುದ್ಧ, ಬಸವ, ಅಂಬೇಡ್ಕರರು ಹೇಳಿದಂತೆ ಸಮಾನತೆ ಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕೊಟ್ಟ ಬೊಕ್ಕೆ ಬಿಸಾಕಿ ಸಿದ್ದರಾಮಯ್ಯ ಕೋಪ ಮಾಡಿಕೊಂಡಿದ್ದು ಏಕೆ?

    ಆರ್ಯನ್ನರ ಡಿಎನ್‌ಎ ನೋಡಿದರೆ ಸಾಕು ವಲಸೆ ಬಂದವರೆಂದು ತಿಳಿಯುತ್ತದೆ. ಅವರು ಇರಾನ್‌, ಪರ್ಷಿಯನ್‌ ಹಾಗೂ ಮಧ್ಯ ಏಷ್ಯಾದಿಂದ ಬಂದವರು. ಆರ್ಯನ್‌, ಬ್ರಾಹ್ಮಣ್ಯ, ಸಂಸ್ಕೃತ ವೇದ ಇವೆಲ್ಲವೂ ಪರದೇಶದ್ದು. ಭಾರತದಲ್ಲಿ ಹುಟ್ಟಿದ್ದು ಬೌದ್ಧ ಧರ್ಮ,  ಬಸವ, ಅಂಬೇಡ್ಕರ್‌, ಸಿಖ್‌, ಪೆರಿಯಾರ್‌ ಧರ್ಮಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: RSS ಬಗ್ಗೆ ಸಿದ್ದರಾಮಯ್ಯಗೆ 1 ಪರ್ಸೆಂಟ್ ಅಷ್ಟೂ ಗೊತ್ತಿಲ್ಲ: ಎಸ್.ಟಿ.ಸೋಮಶೇಖರ್ ತಿರುಗೇಟು

    ಹಿಂದಿನಿಂದಲೂ ಬ್ರಾಹ್ಮಣ್ಯೀಕರಣದಿಂದ ದೇಶದ ಮೂಲ ನಿವಾಸಿಗಳಿಗೆ ಅನ್ಯಾಯವಾಗಿದೆ. ಮೇಲು, ಕೀಳು ಎಂಬ ಜಾತಿ ವ್ಯವಸ್ಥೆಯನ್ನು ಹುಟ್ಟು ಹಾಕಿ ಮೂಲ ನಿವಾಸಿಗಳ ಶೋಷಣೆ ಮಾಡುತ್ತಿದೆ. ಅದನ್ನು ಸರಿಪಡಿಸಬೇಕಾದ ಅಗತ್ಯವಿದೆ. ಮೂಲ ನಿವಾಸಿಗಳು ಅಂದರೆ ಎಸ್ಸಿ, ಎಸ್ಟಿ, ಓಬಿಸಿ ಅಲ್ಪಸಂಖ್ಯಾತರು. ಈ ದೇಶದ ಬಹುಜನರಿಗೆ ನ್ಯಾಯ ದೊರಕಬೇಕಾಗಿದೆ. ಮೇಲ್ವರ್ಗದ ಗಂಡಸರೇ ನಮ್ಮನ್ನು ಅಳುತ್ತಿದ್ದಾರೆ. ಅವರಿಂದ ಬ್ರಾಹ್ಮಣ್ಯದ ಅಂಶಗಳು ಹೇರಲ್ಪಟ್ಟು ಶೋಷಣೆ ನಡೆಯುತ್ತಿದೆ. ಇದನ್ನು ತಪ್ಪಿಸಬೇಕಾದರೆ ದೇಶದಲ್ಲಿ ದೊಡ್ಡ ಸಂಘಟನೆ ಆಗಬೇಕಾಗಿದೆ ಎಂದು ಕರೆ ನೀಡಿದರು.

    Siddaramaiah

    ಆರ್ಯನ್ನರು ಪಶ್ಚಿಮ ಏಷ್ಯಾದಿಂದ ಬಂದಿರುವವರು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಯಲ್ಲಿ ಸತ್ಯವಿದೆ. ಆರ್ಯರು 3,500 ವರ್ಷಗಳ ಹಿಂದೆ ಭಾರತಕ್ಕೆ ವಲಸೆ ಬಂದವರು. ಸೌರಾಷ್ಟ್ರೀಕರಣದಿಂದ ಪ್ರಭಾವಿತರಾಗಿ ಬಂದಿದ್ದಾರೆ. ಅದಕ್ಕೆ ದಾಖಲೆ, ಅಂಕಿ-ಅಂಶ, ಇತಿಹಾಸವಿದೆ. ಅದನ್ನು ಯಾರು ಬದಲಾಯಿಸಲು ಸಾಧ್ಯವಿಲ್ಲ. ಆ ಸತ್ಯ ಇತಿಹಾಸ ನಮಗೆ ಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ತಾಕತ್ತಿದ್ದರೆ SDPIನ್ನು ನಿಷೇಧ ಮಾಡಲಿ: ದಿನೇಶ್ ಗುಂಡೂರಾವ್

    ನಮಗೆ ರಾಜಕಾರಣಕ್ಕಾಗಿ ಹೇಳುವ ಸುಳ್ಳು ಇತಿಹಾಸ ನಮಗೆ ಬೇಕಾಗಿಲ್ಲ. ಹಾಗೆಂದ ಮಾತ್ರಕ್ಕೆ ಅವರನ್ನು ಇಲ್ಲಿಂದ ಓಡಿಸಬೇಕು ಎಂದು ಹೇಳಲು ಸಾಧ್ಯವಿಲ್ಲ. ಅವರೆಲ್ಲರೂ ಈ ದೇಶದ ನಾಗರಿಕರೇ, ಅವರೆಲ್ಲರೂ ಇಲ್ಲೇ ಬದುಕಬೇಕಾಗಿದೆ.

  • ಬ್ರಾಹ್ಮಣ್ಯದ ವಿರುದ್ಧ ಹೇಳಿಕೆ ಕೇಸ್ – ನಟ ಚೇತನ್‌ಗೆ ಮತ್ತೆ ಸಮನ್ಸ್‌

    ಬ್ರಾಹ್ಮಣ್ಯದ ವಿರುದ್ಧ ಹೇಳಿಕೆ ಕೇಸ್ – ನಟ ಚೇತನ್‌ಗೆ ಮತ್ತೆ ಸಮನ್ಸ್‌

    ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆಂಬ ಆರೋಪದ ಮೇಲೆ ಈಗಷ್ಟೇ ಬಂಧನಕ್ಕೊಳಗಾಗಿದ್ದ ನಟ ಚೇತನ್‌ಗೆ ಮೇ 31ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

    ಕಳೆದ ವರ್ಷ ಬ್ರಾಹ್ಮಣ್ಯದ ವಿರುದ್ಧ ಹೇಳಿಕೆ ನೀಡಿದ್ದರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆ 2ನೇ ಬಾರಿಗೆ ಸಮನ್ಸ್ ನೀಡಿದೆ.  ಇದನ್ನೂ ಓದಿ: ಬ್ರಾಹ್ಮಣ್ಯದ ವಿರುದ್ಧ ಪೋಸ್ಟ್ – ನಾಳೆ ನಟ ಚೇತನ್ ವಿಚಾರಣೆ

    IPC (ಭಾರತೀಯ ದಂಡ ಸಂಹಿತೆ) ಸೆಕ್ಷನ್ 295A (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು), ಸೆಕ್ಷನ್ 153(1)C (ಹಗೆತನದ ಭಾವನೆಗಳು ಮೂಡುವಂತೆ ಪ್ರತಿಪಾದನೆ ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಇದೇ ಮೇ 31ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

    ಇದನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ನಟ ಚೇತನ್, ನಾನು ಅವರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2021ರ ಜೂನ್ 16ರಂದು ವಿಚಾರಣೆಗೆ ಹಾಜರಾಗಿದ್ದರು. ಇದೀಗ ಮತ್ತೆ ಸಮನ್ಸ್ ಬಂದಿದ್ದು, 2ನೇ ಬಾರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಇದನ್ನೂ ಓದಿ: ಕನ್ನಡ ಸಿನಿಮಾ ಕಳಪೆ ಎಂದ ನೆಟ್ಟಿಗ – ಚೇತನ್ ಬೆಂಬಲ, ರಕ್ಷಿತ್ ಶೆಟ್ಟಿ ಕಿಡಿ

    ಹಿನ್ನೆಲೆ ಏನು?: ನಟ ಚೇತನ್ ಬ್ರಾಹ್ಮಣ್ಯದ ವಿರುದ್ಧ ಅವಹೇಳನವಾಗಿ ಮಾತನಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯ ಹಾಳು ಮಾಡಿ, ಜಾತಿ ಜಾತಿಗಳ ನಡುವೆ ಗಲಭೆ ಉಂಟು ಮಾಡಲು ಪ್ರಚೋದನೆ ನೀಡಿದ್ದಾರೆ. ಅವರ ಹೇಳಿಕೆಗಳು ಯು ಟ್ಯೂಬ್ , ಫೇಸ್ ಬುಕ್ ನಲ್ಲಿ ವೈರಲ್ ಆಗಿವೆ ಎಂದು ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ದೂರು ನೀಡಿದ್ದರು. ದೂರು ಸಂಬಂಧ ಎಫ್‌ಐಆರ್ ದಾಖಲಿಸಿದ್ದ ಬಸವನಗುಡಿ ಪೊಲೀಸರು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ನೋಟಿಸ್ ನೀಡಿದ್ದರು.

    ಈ ನೋಟಿಸ್‌ನಲ್ಲಿ ಬ್ರಾಹ್ಮಣ್ಯ, ಪುರೋಹಿತ ಶಾಹಿ, ಬ್ರಾಹ್ಮಣ ವಿರೋಧವಾಗಿ ಮಾತಾಡಿರುವ ವೀಡಿಯೋ ನಿಮ್ಮದೇನಾ? ನಿಮ್ಮ ಪಾಸ್ಪೋರ್ಟ್ ನಂಬರ್ ಏನು? ವೀಸಾ ಮಾಹಿತಿ ತಿಳಿಸಿ? ಶ್ರೇಣಿಕೃತ ಅಸಮಾನತೆಯ ವ್ಯವಸ್ಥೆಯಿಂದ ಪುರೋಹಿತ ಶಾಹಿ ವರ್ಗದವರಿಗೆ ಹೇಗೆ ಲಾಭವಾಗುತ್ತದೆ? ಹೀಗೆ 36 ಪ್ರಶ್ನೆಗಳನ್ನ ಕೇಳಿ ಉತ್ತರ ಪಡೆದಿದ್ದರು. ಇದನ್ನೂ ಓದಿ: ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ವಿಚಾರಣೆ ಮುಗಿದ ಬಳಿಕ, ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಜಾತಿ, ಜನಾಂಗದ ವಿರುದ್ಧ ಹೋರಾಟ ಮಾಡುತ್ತಲ್ಲ. ಕೆಲವರು ಹುಟ್ಟಿದ ತಕ್ಷಣ ಶ್ರೇಷ್ಠ, ಕೆಲವರು ಕೀಳು ಅಂಥ ಮಾಡಬಾರದು. ಬೇಧ ಭಾವದ ವಿರುದ್ಧ ಹೋರಾಟ ಮಾಡುತ್ತೀವಿ. ಈ ಹೋರಾಟವನ್ನು ಮುಂದುವರಿಸುತ್ತೇವೆ. ನಮಗೆ ನ್ಯಾಯ ಸಿಗುತ್ತೆ. ವಿಚಾರಣೆಗೆ ಅಗತ್ಯವಿದ್ದಲ್ಲಿ ಮತ್ತೆ ಬರುತ್ತೇನೆ. 18ನೇ ತಾರೀಖು ಮತ್ತೆ ಬರುವುದಕ್ಕೆ ಹೇಳಿದ್ದಾರೆ. ಎಲ್ಲಾ ಪ್ರಶ್ನೆಗಳಿಗೂ ಸಂಪೂರ್ಣ ಉತ್ತರ ಕೊಡುತ್ತೇನೆ. ತನಿಖೆಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುತ್ತೇನೆ ಎಂದು ಚೇತನ್ ಹೇಳಿದ್ದರು.

  • ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

    ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

    ಬೆಂಗಳೂರು: ನಾಥೂರಾಮ್ ಗೋಡ್ಸೆ ಮತ್ತು ಬ್ರಾಹ್ಮಣರ ಬಗ್ಗೆ ಚಂದನವನದ ನಟಿ ಅನಿತಾ ಭಟ್ ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿದ್ದು, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಬಿಗ್‍ಬಾಸ್ ಕನ್ನಡ ಸ್ಪರ್ಧಿ ಅನಿತಾ ಭಟ್ ಇತ್ತೀಚೆಗೆ ಟ್ವಿಟ್ಟರ್ ನಲ್ಲಿ ಬ್ರಾಹ್ಮಣ್ಯ ಮತ್ತು ಗಾಂಧೀಜಿಯನ್ನು ಕೊಂದ ಗೋಡ್ಸೆಗೆ ಜೈ ಎಂದು ಟ್ವೀಟ್ ಮಾಡಿದ್ದಾರೆ. ಈಗ ಈ ವಿಚಾರ ಪರ, ವಿರೋಧ ಚರ್ಚೆ ಆಗುತ್ತಿದೆ.

    ಟ್ವೀಟ್‍ನಲ್ಲಿ ಏನಿದೆ?
    ಅನಿತಾ ಭಟ್ ಟ್ವೀಟ್‍ನಲ್ಲಿ, ಗಾಂಧಿಯನ್ನು ಕೊಂದು ಎಂತ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಎಂದು ಗೊತ್ತಿದ್ರೂ, ಅದನ್ನ ಮಾಡಿದ ಗೋಡ್ಸೆಯ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ ಎಂದು ಪೋಸ್ಟ್ ಮಾಡಿದ್ದು, ಅದಕ್ಕೆ ವೀಕ್ಷಕರು ಗೋಡ್ಸೆ ಜಿಂದಾಬಾದ್ ಎಂದು ಕಾಮೆಂಟ್ ಮಾಡಿದ್ದಾರೆ.

    ನಟಿ ಮುಂದುವರೆದು, ಸ್ವಾತಂತ್ರ್ಯ ಹೋರಾಟದಲ್ಲಿ ಪಾಲುಗೊಂಡಿದ್ದ ಗೋಡ್ಸೆ ಅವರು ದೇಶಭಕ್ತನೇ. ಅವರನ್ನ ಭಯೋತ್ಪಾದಕ ಅಂತ ಕರೆಯೋದು ನಿಮ್ಮಗಳ ಅಜ್ಞಾನ. ಯಾರೋ ಒಬ್ಬರಿಂದ ದೇಶಕ್ಕೆ ಸ್ವಂತಂತ್ರ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದಾರೆ ಅನ್ನೋದು ಅರಿತುಕೊಂಡರೆ ಸಾಕು ಎಂದು ಅನಿತಾ ಭಟ್ ಹೇಳಿದ್ದಾರೆ. ಇದನ್ನೂ ಓದಿ: ಅಫ್ಘಾನ್ ನಿರಾಶ್ರಿತರಿಗೆ ಭಾರತದ ಆಶ್ರಯ – ಏನಿದು ವೀಸಾ? ವಿಶೇಷತೆ ಏನು? 

    ಮುಂದೆ ನೆಗೆಟಿವ್ ಕಾಮೆಂಟ್ ಬರುತ್ತಿರುವುದನ್ನು ಗಮನಿಸಿದ ಅವರು, ನನ್ನ ಟ್ವಿಟ್ಟರ್, ಪೋಸ್ಟ್ ಮಾಡುವುದು ನನ್ನ ಆಯ್ಕೆ. ನನ್ನ ಅಭಿಪ್ರಾಯವನ್ನು ನಿಮ್ಮ ಕೆಟ್ಟ ಕಾಮೆಂಟ್‍ಗಳು ಬದಲಾಯಿಸುವುದಿಲ್ಲ. ಇಷ್ಟಕ್ಕೆಲ್ಲ ಹೆದರೋ ಹಾಗಿದ್ರೆ ಭೂಮಿಯಿಂದಾನೆ ಹೋಗಿ ಬಿಡ್ತಿದ್ದೆ ಇಷ್ಟೊತ್ತಿಗೆ. ಎಷ್ಟು ಬೇಕಾದ್ರೂ ಗಂಟಲು ಹರ್ಕೊಳಿ ಹೋಗಿ ಎಂದು ಗರಂ ಆಗಿ ಉತ್ತರಿಸಿದ್ದಾರೆ.

    ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ
    ಸೋಶಿಯಲ್ ಮೀಡಿಯಾದಲ್ಲಿ ಬ್ರಾಹ್ಮಣ್ಯದ ಕುರಿತು ಮಾತನಾಡಿದ ಅವರು, ಇವರುಗಳು ತಮ್ಮ ಪದವಿ ಮುಂದೆ ಜಾತಿ ಹೆಸರು ಹಾಕಿದ ಹಾಗೆ ನಾನೇನಾದ್ರೂ ಬ್ರಾಹ್ಮಣ ನಟಿ ಅಂತ ಹಾಕಿದ್ದೇನಾ? ಜಾತಿ ಹೆಸರು ಹೇಳಿ ಕೆಲಸ ಗಿಟ್ಟಿಸೋ ಗತಿ ಇನ್ನು ನನಗೆ ಬಂದಿಲ್ಲ. ದೇವಸ್ಥಾನದ ಪ್ರಸಾದ ತಿಂದು ಬದುಕಿದ್ರೂ ಸರಿ. ಅದಕ್ಕೆ ಬ್ರಾಹ್ಮಣ್ಯ ಅನ್ನೋ ಹೆಸರು ಯಾಕ್ರೀ? ಬೇರೆ ಜಾತಿಯವರೂ ಮಾಡ್ತಾರೆ ಅಂದ್ರೆ ಅವರವರ ಜಾತಿ ಹೆಸರು ಹಾಕಿ. ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಕೊಂಡು ಕೂತಿದ್ದಾರೆ, ಅದಕ್ಕೆ ಬೇಕಾಬಿಟ್ಟಿ ಮಾತಾಡ್ತಾರೆ. ಅಷ್ಟೇ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್

    ಅದಕ್ಕೆ ಒಬ್ಬ ನೆಟ್ಟಿಗ, ತಾವೇ ಸರ್ವಶ್ರೇಷ್ಠರು ಅನ್ನೋ ವಾದ, ಮಡಿವಂತಿಕೆ ಆಚರಣೆಗಳು ಇದೆಯಲ್ಲ ಅದೇ ಬ್ರಾಹ್ಮಣ್ಯ. ಅದಕ್ಕೆ ಎಲ್ಲರ ವಿರೋಧ ಅಷ್ಟೇ. ಅದು ಬಿಟ್ಟರೆ ಎಲ್ಲರೂ ಒಂದೇ ಯಾರು ಸಹ ಮೇಲಿಲ್ಲ ಕೀಳಿಲ್ಲ. ಎಂದು ಕಾಮೆಂಟ್ ಮಾಡಿದ್ದಾರೆ.

    ನನ್ನ ಅಮ್ಮ ಎಷ್ಟೋ ವರ್ಷಗಳ ಹಿಂದೇನೆ ಜಾತಿ ಪದ್ದತಿಯನ್ನ ದೂರ ಇಟ್ಟಿದ್ದಾರೆ. ಒಂದು ಲಂಬಾಣಿ ಹುಡುಗಿ ನಮ್ಮ ಮನೆಯಲ್ಲಿ ಓದೋಕೆ ಅಂತ 4 ವರ್ಷ ಇದ್ದಳು. ನಮ್ಮನೇ ದೇವರ ಪೂಜೆ ಕೂಡ ಮಾಡಿದ್ದಾಳೆ. ನನಗೆ ಇದರಲ್ಲಿ ವಿಶೇಷತೆ ಏನು ಕಂಡಿಲ್ಲ. ಸಂದರ್ಭ ಬಂದಿದ್ದರಿಂದ ಹೇಳಿದೆ ಅಷ್ಟೇ ಎಂದು ಅದಕ್ಕೆ ಉತ್ತರಿಸಿದ್ದಾರೆ.

    ಅನಿತಾ ಭಟ್, 2008ರಲ್ಲಿ ಬಿಡುಗಡೆ ಆದ ‘ಸೈಕೊ’ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟದ್ದಾರೆ. ನಂತರ ‘ಡರ್ಟಿ ಪಿಕ್ಚರ್; ಸಿಲ್ಕ್ ಸಖತ್ ಹಾಟ್ ಮಗಾ’, ‘ದೊಡ್ಮನೆ ಹುಡ್ಗಾ’, ‘ಟಗರು'(ಡಾಲಿ ಗರ್ಲ್‍ಫ್ರೆಂಡ್ ಪಾತ್ರ), ‘ಹೊಸ ಕ್ಲೈಮ್ಯಾಕ್ಸ್’, ‘ಡಿಎನ್‍ಎ’, ‘ಕನ್ನೇರಿ’, ‘ಕಲಿವೀರ’, ‘ಬೆಂಗಳೂರು-69’, ‘ಬಳೆಪೇಟೆ’, ‘ಜೂಟಾಟ’, ತೆಲುಗಿನ ‘ಕೃಷ್ಣ ಲಂಕಾ’ ಸಿನಿಮಾ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

  • ಬ್ರಾಹ್ಮಣ್ಯದ ವಿರುದ್ಧ ನಟ ಚೇತನ್ ಹೇಳಿಕೆ – ವಿಚಾರಣೆಗೆ ಹಾಜರು

    ಬ್ರಾಹ್ಮಣ್ಯದ ವಿರುದ್ಧ ನಟ ಚೇತನ್ ಹೇಳಿಕೆ – ವಿಚಾರಣೆಗೆ ಹಾಜರು

    ಬೆಂಗಳೂರು: ಆ ದಿನಗಳು ಖ್ಯಾತಿಯ ನಟ ಚೇತನ್ ಇವತ್ತು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.

    ಬ್ರಾಹ್ಮಣ್ಯದ ವಿರುದ್ಧ ಅವಹೇಳನವಾಗಿ ಮಾತನಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡಿ, ಜಾತಿ ಜಾತಿಗಳ ನಡುವೆ ಗಲಭೆ ಉಂಟು ಮಾಡಲು ಪ್ರಚೋದನೆ ನೀಡಿದ್ದಾರೆ. ಅವರ ಹೇಳಿಕೆಗಳು ಯು ಟ್ಯೂಬ್ , ಫೇಸ್ ಬುಕ್ ನಲ್ಲಿ ವೈರಲ್ ಆಗಿವೆ ಎಂದು ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ದೂರು ನೀಡಿದ್ದರು. ದೂರು ಸಂಬಂಧ ಎಫ್‍ಐಆರ್ ದಾಖಲಿಸಿದ್ದ ಬಸವನಗುಡಿ ಪೊಲೀಸರು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಇದನ್ನೂ ಓದಿ:ಕನ್ನಡ ಸಿನಿಮಾ ಕಳಪೆ ಎಂದ ನೆಟ್ಟಿಗ – ಚೇತನ್ ಬೆಂಬಲ, ರಕ್ಷಿತ್ ಶೆಟ್ಟಿ ಕಿಡಿ

    ಅದರಂತೆ ಇಂದು ವಿಚಾರಣೆಗೆ ಹಾಜರಾದ ಚೇತನ್‍ರವರಿಗೆ ಬ್ರಾಹ್ಮಣ್ಯ, ಪುರೋಹಿತ ಶಾಹಿ, ಬ್ರಾಹ್ಮಣ ವಿರೋಧವಾಗಿ ಮಾತಾಡಿರುವ ವೀಡಿಯೋ ನಿಮ್ಮದೇನಾ? ನಿಮ್ಮ ಪಾಸ್ಪೋರ್ಟ್ ನಂಬರ್ ಏನು? ವೀಸಾ ಮಾಹಿತಿ ತಿಳಿಸಿ? ಶ್ರೇಣಿಕೃತ ಅಸಮಾನತೆಯ ವ್ಯವಸ್ಥೆಯಿಂದ ಪುರೋಹಿತ ಶಾಹಿ ವರ್ಗದವರಿಗೆ ಹೇಗೆ ಲಾಭವಾಗುತ್ತದೆ? ಹೀಗೆ 36 ಪ್ರಶ್ನೆಗಳನ್ನ ಕೇಳಿ ಉತ್ತರ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

    ವಿಚಾರಣೆ ಮುಗಿಸಿ ಹೊರ ಬಂದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾನೂನು ಮೇಲೆ ಅಪಾರ ನಂಬಿಕೆ ಇದೆ. ಜಾತಿ, ಜನಾಂಗದ ವಿರುದ್ಧ ಹೋರಾಟ ಮಾಡುತ್ತಲ್ಲ. ಕೆಲವರು ಹುಟ್ಟಿದ ತಕ್ಷಣ ಶ್ರೇಷ್ಠ, ಕೆಲವರು ಕೀಳು ಅಂಥ ಮಾಡಬಾರದು. ಬೇಧ ಭಾವದ ವಿರುದ್ಧ ಹೋರಾಟ ಮಾಡುತ್ತೀವಿ. ಈ ಹೋರಾಟವನ್ನು ಮುಂದುವರಿಸುತ್ತೇವೆ. ನಮಗೆ ನ್ಯಾಯ ಸಿಗುತ್ತೆ. ವಿಚಾರಣೆಗೆ ಅಗತ್ಯವಿದ್ದಲ್ಲಿ ಮತ್ತೆ ಬರುತ್ತೇನೆ. 18ನೇ ತಾರೀಖು ಮತ್ತೆ ಬರುವುದಕ್ಕೆ ಹೇಳಿದ್ದಾರೆ. ಎಲ್ಲಾ ಪ್ರಶ್ನೆಗಳಿಗೂ ಸಂಪೂರ್ಣ ಉತ್ತರ ಕೊಡುತ್ತೇನೆ. ತನಿಖೆಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬ್ರಾಹ್ಮಣ್ಯದ ವಿರುದ್ಧ ಪೋಸ್ಟ್ – ನಾಳೆ ನಟ ಚೇತನ್ ವಿಚಾರಣೆ

  • ಬ್ರಾಹ್ಮಣ್ಯದ ವಿರುದ್ಧ ಪೋಸ್ಟ್ – ನಾಳೆ ನಟ ಚೇತನ್ ವಿಚಾರಣೆ

    ಬ್ರಾಹ್ಮಣ್ಯದ ವಿರುದ್ಧ ಪೋಸ್ಟ್ – ನಾಳೆ ನಟ ಚೇತನ್ ವಿಚಾರಣೆ

    ಬೆಂಗಳೂರು: ಬ್ರಾಹ್ಮಣ್ಯದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಸ್ಯಾಂಡಲ್‍ವುಡ್ ನಟ ಚೇತನ್‍ರವರ ವಿರುದ್ಧ ಇತ್ತೀಚೆಗಷ್ಟೇ ಎಫ್‍ಐಆರ್ ದಾಖಲಾಗಿತ್ತು. ಸದ್ಯ ಈ ಕುರಿತಂತೆ ನಾಳೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಚೇತನ್ ವಿಚಾರಣೆ ನಡೆಯಲಿದೆ.

    ಆ ದಿನಗಳು ಸಿನಿಮಾದ ಮೂಲಕ ಸ್ಯಾಂಡಲ್‍ವುಡ್‍ಗೆ ಪಾದರ್ಪಣೆ ಮಾಡಿ ಖ್ಯಾತಿ ಪಡೆದಿದ್ದ, ನಟ ಚೇತನ್ ಅಹಿಂಸಾ ಲಾಕ್‍ಡೌನ್ ವೇಳೆ ರಾಜ್ಯಾದ್ಯಂತ ಕೊರೊನಾ ಸೋಂಕಿತರು, ಕೊರೊನಾ ವಾರಿಯರ್ಸ್, ಲಾಕ್ ಡೌನ್ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಒದಗಿಸುವ ಮೂಲಕ ಸಹಾಯ ಮಾಡಿದ್ದರು. ಈ ವೇಳೆ ಬ್ರಾಹ್ಮಣರಿಗೆ ಪ್ರತ್ಯೇಕವಾಗಿ ಆಹಾರ ವಿತರಣೆ ಮಾಡಿದ ನಟರೊಬ್ಬರ ಬಗ್ಗೆ ಚೇತನ್ ಟೀಕಿಸಿದ್ದರು. ಇದನ್ನೂ ಓದಿ: ಕನ್ನಡ ಸಿನಿಮಾ ಕಳಪೆ ಎಂದ ನೆಟ್ಟಿಗ – ಚೇತನ್ ಬೆಂಬಲ, ರಕ್ಷಿತ್ ಶೆಟ್ಟಿ ಕಿಡಿ

    ಹೀಗಾಗಿ ಬ್ರಾಹ್ಮಣರ ಕುರಿತು ವ್ಯಂಗ್ಯವಾಗಿ ಮಾತಾಡಿದ್ದಾರೆ. ಇಂಥ ವಿಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಬ್ರಾಹ್ಮಣರು ಭಯೋತ್ಪಾದಕರು ಎಂದು ವೀಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ವಿಪ್ರ ಯುವ ವೇದಿಕೆಯವರು ಬಸವನಗುಡಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚೇತನ್‍ರವರನ್ನು ತನಿಖಾಧಿಕಾರಿ ಮುರಳಿ ಬುಧವಾರ ಬೆಳಗ್ಗೆ 10:30ಕ್ಕೆ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

    ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪ್ರಶ್ನಾವಳಿಗಳನ್ನ ಸಿದ್ಧಪಡಿಸಿದ್ದು, ಚೇತನ್ ಬ್ರಾಹ್ಮಣ್ಯದ ಬಗ್ಗೆ ಮಾತನಾಡಿರೋ ಎರಡು ವಿಡಿಯೋ ಆಧಾರದ ಮೇಲೆ ಪ್ರಶ್ನೆಗಳನ್ನು ಕೇಳಲಿದ್ದಾರೆ. ಪೊಲೀಸರು ಪ್ರಶ್ನೆಗಳಿಗೆ ಸಮರ್ಪಕವಾದ ಉತ್ತರ ಕೊಡದೇ ಹೋದರೆ ಕಾನೂನು ಸಲಹೆ ಪಡೆದು ಮುಂದಿನ ಕ್ರಮದ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಈ ಕುರಿತಂತೆ ಚೇತನ್‍ರವರು, ನಾಳೆ ಬೆಳಗ್ಗೆ ನಾನು ಪೊಲೀಸ್ ಠಾಣೆಗೆ ಹೋಗುತ್ತಿದ್ದೇನೆ. ಸಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿ ಸಮಾನತೆ ಮತ್ತು ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:  ನಟ ಚೇತನ್ ವಿರುದ್ಧ FIR ದಾಖಲು

     

    View this post on Instagram

     

    A post shared by Chetan Ahimsa (@chetanahimsa)