Tag: ಬ್ರಾಹ್ಮಣ ಸಮುದಾಯ

  • ಕಲಬುರಗಿ | ನೀಟ್‌ ಪರೀಕ್ಷೆಯಲ್ಲೂ ಜನಿʻವಾರ್‌ʼ – ಜನಿವಾರ ತೆಗೆಸಿದ ಸಿಬಂದಿ ವಿರುದ್ಧ ಕ್ರಮಕ್ಕೆ ಆಗ್ರಹ

    ಕಲಬುರಗಿ | ನೀಟ್‌ ಪರೀಕ್ಷೆಯಲ್ಲೂ ಜನಿʻವಾರ್‌ʼ – ಜನಿವಾರ ತೆಗೆಸಿದ ಸಿಬಂದಿ ವಿರುದ್ಧ ಕ್ರಮಕ್ಕೆ ಆಗ್ರಹ

    ಕಲಬುರಗಿ: ಬೀದರ್-ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ (CET Exam) ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಸದ್ದು ಮಾಡಿತ್ತು. ಇದೀಗ ಆ ಪ್ರಕರಣ ಮಾಸುವ ಮುನ್ನವೆ ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆದ ಪರಿಣಾಮ ಬ್ರಾಹ್ಮಣರ (Brahmin Community) ತಾಳ್ಮೆ ಕಟ್ಟೆ ಒಡೆದಿದೆ.

    ಕಲಬುರಗಿಯಲ್ಲಿ ನಡೆದ ಕೆಇಎ ಪರೀಕ್ಷೆ (KEA Exam) ವೇಳೆ ಮಂಗಳಸೂತ್ರ ತೆಗೆಸಿದ ಪ್ರಕರಣ ವಿವಾದಕ್ಕೀಡಾಗಿತ್ತು. ಅದಾದ ಬಳಿಕ ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪರಿಣಾಮ ರಾಜ್ಯದ್ಯಂತ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಆ ಪ್ರಕರಣಗಳು ಮಾಸುವ ಮುನ್ನ ಮೇ 3ರಂದು ನಡೆದ ನೀಟ್ ಪರೀಕ್ಷೆಗೆ ಕಲಬುರಗಿಯ ಸಂತ ಮೇರಿ ಪರೀಕ್ಷಾ ಕೇಂದ್ರಕ್ಕೆ ಬಂದ ಶ್ರೀಪಾದ ಎಂಬ ವಿದ್ಯಾರ್ಥಿಯ ಜನಿವಾರ ತೆಗೆದ್ರೆ ಮಾತ್ರ ಪರೀಕ್ಷೆಗೆ ಅವಕಾಶ ಕೊಡುವುದಾಗಿ ಅಧಿಕಾರಿಗಳು ಹೇಳಿದ್ದಾರಂತೆ, ಹೀಗಾಗಿ ಒಲದ ಮನಸ್ಸಿನಿಂದ ಶ್ರೀಪಾದ ತನ್ನ ಜನಿವಾರ ತೆಗೆದು ತಂದೆ ಸುಧೀರ ಅವರ ಕೈಗೆ ಕೊಟ್ಟು ನೀಟ್ ಪರೀಕ್ಷೆ ಬರೆದಿದ್ದಾನೆ.

    ಇನ್ನೂ ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಷಯಕ್ಕೆ ತಿಳಿಯುತ್ತಿದ್ದಂತೆ ಸಂತ ಮೇರಿ ಪರೀಕ್ಷಾ ಮುಂಭಾಗದಲ್ಲಿ ಬ್ರಾಹ್ಮಣ ಸಭಾ ಹಾಗೂ ಎಬಿವಿಪಿ ಕಾರ್ಯಕರ್ತರು ಜಮಾವಣೆಗೊಂಡು, ಪ್ರತಿ ಬಾರಿ ಪರೀಕ್ಷೆಗಳು ಬಂದ್ರೆ ಸಾಕು ಸರ್ಕಾರ ಜನಿವಾರಕ್ಕೆ ಕೈ ಹಾಕುತ್ತಿದೆ. ಈ ಮೂಲಕ ಸನಾತನ ಧರ್ಮದ ನಂಬಿಕೆ ಮೇಲೆ ಕೈ ಹಾಕುತ್ತಿದೆ. ಅಂತಾ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಜನಿವಾರ ತೆಗೆದ ಪರೀಕ್ಷಾ ಕೇಂದ್ರದ ಮುಂದೆ ಅರ್ಚಕರ ಸಮ್ಮುಖದಲ್ಲಿ ಶ್ರೀಪಾದಗೆ ಜನಿವಾರ ಹಾಕಿಸಿದ್ದರು.

    ಈ ವೇಳೆ ʻಪಬ್ಲಿಕ್ ಟಿವಿʼ ಜೊತೆ ಮಾತನಾಡಿದ ಶ್ರೀಪಾದ ಒಲ್ಲದ ಮನಸ್ಸಿನಿಂದ ಜನಿವಾರ ತೆಗೆದು ಪರೀಕ್ಷೆ ಬರೆದಿದ್ದೇನೆ. ಇನ್ನೂ ಪರೀಕ್ಷೆ ವೇಳೆ ಮನಸ್ಸಿಗೆ ಅಘಾತವಾದ ಹಿನ್ನಲೆ ಕ್ರಮ ಸಂಖ್ಯೆ ಸಹ ತಪ್ಪು ನಮೂದಿಸಿದ್ದೇನೆ. ಹೀಗಾಗಿ ಮತ್ತೆ ಪರೀಕ್ಷೆಗೆ ಅವಕಾಶ ಕೊಡಬೇಕು ಅಂತಾ ಆಗ್ರಹಿಸಿದ್ದಾನೆ.

    ಪರೀಕ್ಷೆಯ ಬಳಿಕ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಗೆ ತೆರಳಿದ ವಿದ್ಯಾರ್ಥಿ ಶ್ರೀಪಾದ ಜನಿವಾರ ತೆಗೆಸಿದ ನೀಟ್‌ ಸಿಬ್ಬಂದಿ ವಿರುದ್ಧ ದೂರು ನೀಡಿದ್ದಾನೆ.

  • ಜನಿವಾರ ಕತ್ತರಿಸಿ ಪರೀಕ್ಷೆ ಬರೆಸಿದ ಪ್ರಕರಣ; ಬ್ರಾಹ್ಮಣ ಸಮುದಾಯದ ಆಕ್ರೋಶದಲ್ಲಿ ತಪ್ಪಿಲ್ಲ: ಎಂ.ಸಿ ಸುಧಾಕರ್

    ಜನಿವಾರ ಕತ್ತರಿಸಿ ಪರೀಕ್ಷೆ ಬರೆಸಿದ ಪ್ರಕರಣ; ಬ್ರಾಹ್ಮಣ ಸಮುದಾಯದ ಆಕ್ರೋಶದಲ್ಲಿ ತಪ್ಪಿಲ್ಲ: ಎಂ.ಸಿ ಸುಧಾಕರ್

    – ಅಮಾನವೀಯವಾಗಿ ನಡೆದುಕೊಂಡವರ ವಿರುದ್ಧ ಕ್ರಮದ ಎಚ್ಚರಿಕೆ

    ಬೆಂಗಳೂರು: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ (CET Exam) ಅವಕಾಶ ಕೊಡದೇ ಇರುವುದಕ್ಕೆ ಬ್ರಾಹ್ಮಣ ಸಮುದಾಯ (Brahmin community) ಆಕ್ರೋಶ ಮಾಡುವುದರಲ್ಲಿ ತಪ್ಪಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ (M C Sudhakar) ಹೇಳಿದ್ದಾರೆ.

    ಈ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ (Shivamogga) ಮತ್ತು ಬೀದರ್‌ನಲ್ಲಿ (Bidar) ಈ ರೀತಿ ಘಟನೆ ಆಗಿದೆ ಎಂದು ಬೆಳಗ್ಗೆ ನಮ್ಮ ಸ್ನೇಹಿತರು ಹೇಳಿದರು. ಇದರಲ್ಲಿ ಸ್ಥಳೀಯ ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ಇರುತ್ತದೆ. ಕೆಇಎಯಿಂದ ಜನಿವಾರ ತೆಗೆಸಿ ಬರೆಸುವಂತಹ ನಿಯಮ ಇಲ್ಲ ಎಂದರು. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಕೊಡದ ಸಿಬ್ಬಂದಿ; ಬ್ರಾಹ್ಮಣ ಸಂಘಟನೆಗಳಿಂದ ಆಕ್ರೋಶ

    ಶಿವಮೊಗ್ಗ ಎಡಿಸಿ ಜನಿವಾರ ತೆಗೆಸಿ ಪರೀಕ್ಷೆ ಬರೆಸಿಲ್ಲ ಎಂದು ಹೇಳುತ್ತಿದ್ದಾರೆ. ನಾನು ಸತ್ಯಾಸತ್ಯತೆ ತಿಳಿಯುತ್ತೇನೆ. ಈ ರೀತಿ ಸೂಚನೆ ಕೊಡಲು ನಾವು ಅವಿವೇಕಿಗಳಲ್ಲ. ಆ ರೀತಿ ಜನಿವಾರ ತೆಗೆಸಿದ್ದರೆ ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇನೆ. ಇದರ ವರದಿಯನ್ನು ನಾನು ತರಿಸಿಕೊಳ್ಳುತ್ತೇನೆ. ಇದನ್ನು ನಾವು ಒಪ್ಪುವುದಿಲ್ಲ. ಈ ರೀತಿ ಮಾಡಿರುವುದು ಸರಿ ಎಂದು ಹೇಳುವಂತಹ ಕೀಳುಮಟ್ಟದಲ್ಲಿ ನಾವು ಇಲ್ಲ. ತೊಂದರೆಗೆ ಒಳಗಾಗಿರುವ ವಿದ್ಯಾರ್ಥಿಗಳು ಇಂತಹ ಸೆಂಟರ್, ಇಂತಹ ಅಧಿಕಾರಿ ಎಂದು ಹೇಳಲಿ ಎಂದು ಹೇಳಿದರು. ಇದನ್ನೂ ಓದಿ: ಜನಿವಾರದಲ್ಲಿ ಬ್ಲೂಟೂತ್ ಹಾಕ್ಕೊಂಡು ಎಕ್ಸಾಂ ಬರೆಯೋಕೆ ಆಗುತ್ತಾ? – ಚಕ್ರವರ್ತಿ ಸೂಲಿಬೆಲೆ

    ಈ ವಿಚಾರವಾಗಿ ಬ್ರಾಹ್ಮಣ ಸಮುದಾಯ ಆಕ್ರೋಶ ಮಾಡುವುದರಲ್ಲಿ ತಪ್ಪಿಲ್ಲ. ಯಾವುದೇ ಧರ್ಮದ ನಂಬಿಕೆಗೆ ಧಕ್ಕೆ ಬರುವ ರೀತಿ ನಡೆದುಕೊಳ್ಳಬಾರದು. ಈ ರೀತಿ ಆಗಿಲ್ಲ ಎಂದು ಶಿವಮೊಗ್ಗ ಎಡಿಸಿ ಹೇಳುತ್ತಿದ್ದಾರೆ. ನಾನು ತನಿಖೆ ಮಾಡಿಸುತ್ತೇನೆ. ನಿನ್ನೆ ಅಥವಾ ಮೊನ್ನೆ ಇಂತಹ ಘಟನೆ ಆಗಿದೆಯಾ ಎಂದು ಗೊತ್ತಿಲ್ಲ. ಅಮಾನವೀಯವಾಗಿ ನಡೆದುಕೊಂಡಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ. ಅಧಿಕಾರಿಗಳು ಆಗಿಲ್ಲ ಎನ್ನುತ್ತಿದ್ದಾರೆ. ವಿದ್ಯಾರ್ಥಿಗಳು ಆಗಿದೆ ಅಂತಾ ಇದ್ದಾರೆ. ಇಂತಹ ಸೆಂಟರ್‌ನಲ್ಲಿ ನಡೆದಿದೆ ಎಂದು ಗೊತ್ತಾದರೆ ಖಂಡಿತಾ ತನಿಖೆ ಮಾಡಿಸುತ್ತೇನೆ ಎಂದು ಭರವಸೆ ನೀಡಿದರು.

    ಏನಿದು ಘಟನೆ?
    ಸಿಇಟಿ ಪರೀಕ್ಷೆಗಾಗಿ (CET Exam) ಕಾಲೇಜಿನ ಒಳಭಾಗಕ್ಕೆ ತೆರಳುವ ಸಮಯದಲ್ಲಿ ಸಿಇಟಿ ಸಿಬ್ಬಂದಿ ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಕಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿ ಹಾಕಿರುವುದು ಮಕ್ಕಳ ಪೋಷಕರಿಂದ ತಿಳಿದು ಬಂದಿದೆ. ಈ ಕೇಂದ್ರದಲ್ಲಿ ಈ ರೀತಿ ಗಾಯತ್ರಿ ಮಂತ್ರ ದೀಕ್ಷೆ ಪಡೆದು ಅಕ್ಕ ಸಾಕ್ಷರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಿಚ್ಚಿಸಿದ ಅವಮಾನಕಾರಿ ಘಟನೆ ಅಧಿಕಾರಿಗಳು ಮಾಡಿದ್ದು ಖಂಡನೀಯ ಎಂದು ಬ್ರಾಹ್ಮಣ ಸಮುದಾಯ ತೀವ್ರ ಆಕ್ರೋಶ ಹೊರಹಾಕಿದೆ.

    ವರ್ಷಪೂರ್ತಿ ಕಷ್ಟ ಪಟ್ಟು ಅಧ್ಯಯನ ಮಾಡಿ ಒಳ್ಳೆ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಛಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ. ಅಖಿಲ ಕನರ್ನಾಟಕ ಬ್ರಾಹ್ಮಣ ಮಹಾ ಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿಶ್ವ ಸಂಘಟನೆಗೆ ಒಕ್ಕೂಟವು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತದೆ.

    ಜಿಲ್ಲಾಧಿಕಾರಿಗಳು ತಕ್ಷಣ ತನಿಖೆ ನಡೆಸಿ ಹಿಂದೂ ಪರಂಪರೆಯ ಸಂಸ್ಕಾರವಾದ ಗಾಯತ್ರಿ ಮಂತ್ರ ದೀಕ್ಷೆಯ ಪ್ರಾಮುಖ್ಯತೆ. ಘನತೆ ಗೌರವ ಗೊತ್ತಿಲ್ಲದ ಧರ್ಮ ವಿರೋದಿ ಕೃತ್ಯ ಎಸಗಿರುವ ಹೀನ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ವಿನಂತಿಸಿದೆ.

  • ಜನಿವಾರದಲ್ಲಿ ಬ್ಲೂಟೂತ್ ಹಾಕ್ಕೊಂಡು ಎಕ್ಸಾಂ ಬರೆಯೋಕೆ ಆಗುತ್ತಾ? – ಚಕ್ರವರ್ತಿ ಸೂಲಿಬೆಲೆ

    ಜನಿವಾರದಲ್ಲಿ ಬ್ಲೂಟೂತ್ ಹಾಕ್ಕೊಂಡು ಎಕ್ಸಾಂ ಬರೆಯೋಕೆ ಆಗುತ್ತಾ? – ಚಕ್ರವರ್ತಿ ಸೂಲಿಬೆಲೆ

    ಬೆಂಗಳೂರು: ಜನಿವಾರ (Janivara) ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದ ಪ್ರಕರಣ ಈಗ ರಾಜ್ಯಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಹಿಂದೂಪರ ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy sulibele) ಈ ವಿಚಾರ ಕುರಿತು ʻಪಬ್ಲಿಕ್‌ ಟಿವಿʼಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಅಂಬೇಡ್ಕರ್ ಅವರೇ ನಾನು ಬ್ರಾಹ್ಮಣರ (Brahmins) ವಿರೋಧಿಯಲ್ಲ ಅಂತ ಹೇಳ್ತಿದ್ರು. ಆದ್ರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಬಂದ ನಂತರ ಈ ರೀತಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ತುಂಬಾ ಶಾಕಿಂಗ್ ವಿಚಾರ. ಒಂದು ಸಮುದಾಯವನ್ನ ಇನ್ನೊಂದು ಸಮುದಾಯದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಉದ್ಧ ತೋಳಿನ ಶರ್ಟ್ ತೆಗೆಸ್ತಾರೆ, ಜನಿವಾರದಲ್ಲಿ ಬ್ಲೂಟೂತ್ ಹಾಕ್ಕೊಂಡು ಬರೋಕೆ ಆಗುತ್ತಾ? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಕೊಡದ ಸಿಬ್ಬಂದಿ; ಬ್ರಾಹ್ಮಣ ಸಂಘಟನೆಗಳಿಂದ ಆಕ್ರೋಶ.

    CET 3

    ಹಿಜಬ್, ಬುರ್ಖಾಗೆ ಅನುಮತಿ ಕೊಡ್ತೀರ, ಇವೇಲ್ಲ ಇರಬಹುದು ಅದ್ರೆ ಜನಿವಾರ ಬೇಡ್ವಾ..? ಜಾತಿ ಜಾತಿಗಳ ನಡುವೆ ವಿಷ ಬೀತ್ತ ಬಿತ್ತಿವ ಕೆಲಸ ಇದು. ಜನಿವಾರ ಕಟ್ ಮಾಡಿದ ಮಾತ್ರಕ್ಕೆ ಹಿಂದುತ್ವ ಅಲುಗಾಡಿಸಲು ಆಗಲ್ಲ. ಜಾತಿಗಣತಿಯನ್ನ ಮರೆಮಾಚಲು ಈ ಘಟನೆ ತಂದಂತಿದೆ. ಕೂಡಲೇ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕ್ರಮ ಆಗಬೇಕು. ಮನಸ್ಸು ಮನಸ್ಸುಗಳ ಬಗ್ಗೆ ವಿಷಬೀಜ ಬಿತ್ತುವ ಕೆಲಸ ಆಗ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಹಣ ತರುವಂತೆ ಪತಿ ಮನೆಯವ್ರಿಂದ ಕಿರುಕುಳ ಆರೋಪ – ಮಹಿಳೆ ಆತ್ಮಹತ್ಯೆ

    ಏನಿದು ಘಟನೆ?
    ಸಿಇಟಿ ಪರೀಕ್ಷೆಗಾಗಿ (CET Exam) ಕಾಲೇಜಿನ ಒಳಭಾಗಕ್ಕೆ ತೆರಳುವ ಸಮಯದಲ್ಲಿ ಸಿಇಟಿ ಸಿಬ್ಬಂದಿ ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಕಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿ ಹಾಕಿರುವುದು ಮಕ್ಕಳ ಪೋಷಕರಿಂದ ತಿಳಿದು ಬಂದಿದೆ. ಈ ಕೇಂದ್ರದಲ್ಲಿ ಈ ರೀತಿ ಗಾಯತ್ರಿ ಮಂತ್ರ ದೀಕ್ಷೆ ಪಡೆದು ಅಕ್ಕ ಸಾಕ್ಷರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಿಚ್ಚಿಸಿದ ಅವಮಾನಕಾರಿ ಘಟನೆ ಅಧಿಕಾರಿಗಳು ಮಾಡಿದ್ದು ಖಂಡನೀಯ ಎಂದು ಬ್ರಾಹ್ಮಣ ಸಮುದಾಯ ತೀವ್ರ ಆಕ್ರೋಶ ಹೊರಹಾಕಿದೆ.

    ವರ್ಷಪೂರ್ತಿ ಕಷ್ಟ ಪಟ್ಟು ಅಧ್ಯಯನ ಮಾಡಿ ಒಳ್ಳೆ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಛಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ. ಅಖಿಲ ಕನರ್ನಾಟಕ ಬ್ರಾಹ್ಮಣ ಮಹಾ ಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿಶ್ವ ಸಂಘಟನೆಗೆ ಒಕ್ಕೂಟವು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತದೆ.

    ಜಿಲ್ಲಾಧಿಕಾರಿಗಳು ತಕ್ಷಣ ತನಿಖೆ ನಡೆಸಿ ಹಿಂದೂ ಪರಂಪರೆಯ ಸಂಸ್ಕಾರವಾದ ಗಾಯತ್ರಿ ಮಂತ್ರ ದೀಕ್ಷೆಯ ಪ್ರಾಮುಖ್ಯತೆ. ಘನತೆ ಗೌರವ ಗೊತ್ತಿಲ್ಲದ ಧರ್ಮ ವಿರೋದಿ ಕೃತ್ಯ ಎಸಗಿರುವ ಹೀನ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ವಿನಂತಿಸಿದೆ. ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿಂದು ಬೃಹತ್‌ ಪ್ರತಿಭಟನೆ – ಉಲೇಮಾ ಸಮಿತಿ ಕರೆ

  • ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಕೊಡದ ಸಿಬ್ಬಂದಿ; ಬ್ರಾಹ್ಮಣ ಸಂಘಟನೆಗಳಿಂದ ಆಕ್ರೋಶ

    ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ಅವಕಾಶ ಕೊಡದ ಸಿಬ್ಬಂದಿ; ಬ್ರಾಹ್ಮಣ ಸಂಘಟನೆಗಳಿಂದ ಆಕ್ರೋಶ

    ಶಿವಮೊಗ್ಗ/ಬೀದರ್‌: ಸಿಇಟಿ ಪರೀಕ್ಷೆ ವೇಳೇ ಅಮಾನವೀಯ ಘಟನೆ ನಡೆದಿದೆ. ಜನಿವಾರ (Janivara) ಹಾಕಿದ್ದಕ್ಕೆ ಸಿಬ್ಬಂದಿ ಪರೀಕ್ಷೆಗೆ ಅವಕಾಶ ಕೊಡದೇ ಇರುವ ಘಟನೆ ಶಿವಮೊಗ್ಗ (Shivamogga) ಮತ್ತು ಬೀದರ್‌ ಜಿಲ್ಲೆಗಳಲ್ಲಿ ನಡೆದಿದೆ.

    ಪರೀಕ್ಷಾ ಸಿಬ್ಬಂದಿ ವರ್ತನೆಗೆ ಬ್ರಾಹ್ಮಣ ಸಂಘಟನೆಗಳು (Brahmin Organisation) ತೀವ್ರ ಆಕ್ರೋಶ ಹೊರಹಾಕಿವೆ. ಈ ಬಗ್ಗೆ ವರದಿ ಪಡೆಯೋದಾಗಿ ಕೆಇಎ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ – ಮೋದಿಯನ್ನು ಭೇಟಿಯಾಗಿ ಧನ್ಯವಾದ ಹೇಳಿದ ಮುಸ್ಲಿಮರು

    ಏನಿದು ಘಟನೆ?
    ಸಿಇಟಿ ಪರೀಕ್ಷೆಗಾಗಿ (CET Exam) ಕಾಲೇಜಿನ ಒಳಭಾಗಕ್ಕೆ ತೆರಳುವ ಸಮಯದಲ್ಲಿ ಸಿಇಟಿ ಸಿಬ್ಬಂದಿ ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಕಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿ ಹಾಕಿರುವುದು ಮಕ್ಕಳ ಪೋಷಕರಿಂದ ತಿಳಿದು ಬಂದಿದೆ. ಈ ಕೇಂದ್ರದಲ್ಲಿ ಈ ರೀತಿ ಗಾಯತ್ರಿ ಮಂತ್ರ ದೀಕ್ಷೆ ಪಡೆದು ಅಕ್ಕ ಸಾಕ್ಷರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಿಚ್ಚಿಸಿದ ಅವಮಾನಕಾರಿ ಘಟನೆ ಅಧಿಕಾರಿಗಳು ಮಾಡಿದ್ದು ಖಂಡನೀಯ ಎಂದು ಬ್ರಾಹ್ಮಣ ಸಮುದಾಯ ತೀವ್ರ ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: Mangaluru| ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಹೊರರಾಜ್ಯದ ಯುವತಿ ಪತ್ತೆ – ಗ್ಯಾಂಗ್ ರೇಪ್ ಯತ್ನ ಶಂಕೆ, ಮೂವರು ಅರೆಸ್ಟ್

    ವರ್ಷಪೂರ್ತಿ ಕಷ್ಟ ಪಟ್ಟು ಅಧ್ಯಯನ ಮಾಡಿ ಒಳ್ಳೆ ಭವಿಷ್ಯಕ್ಕಾಗಿ ಸಿದ್ಧತೆ ಮಾಡಿಕೊಂಡು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ಬಿಚ್ಛಿಸುವ ಅಧಿಕಾರಿಗಳ ಕೃತ್ಯ ಬ್ರಾಹ್ಮಣ ಮತ್ತು ಹಿಂದೂ ವಿರೋಧಿಯಾಗಿದೆ. ಅಖಿಲ ಕನರ್ನಾಟಕ ಬ್ರಾಹ್ಮಣ ಮಹಾ ಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿಶ್ವ ಸಂಘಟನೆಗೆ ಒಕ್ಕೂಟವು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತದೆ. ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿಂದು ಬೃಹತ್‌ ಪ್ರತಿಭಟನೆ – ಉಲೇಮಾ ಸಮಿತಿ ಕರೆ

    ಜಿಲ್ಲಾಧಿಕಾರಿಗಳು ತಕ್ಷಣ ತನಿಖೆ ನಡೆಸಿ ಹಿಂದೂ ಪರಂಪರೆಯ ಸಂಸ್ಕಾರವಾದ ಗಾಯತ್ರಿ ಮಂತ್ರ ದೀಕ್ಷೆಯ ಪ್ರಾಮುಖ್ಯತೆ. ಘನತೆ ಗೌರವ ಗೊತ್ತಿಲ್ಲದ ಧರ್ಮ ವಿರೋದಿ ಕೃತ್ಯ ಎಸಗಿರುವ ಹೀನ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ತಮ್ಮಣ್ಣ ಏನಂತಿಸುತ್ತೇವೆ. ಇದನ್ನೂ ಓದಿ: ವರದಕ್ಷಿಣೆ ಹಣ ತರುವಂತೆ ಪತಿ ಮನೆಯವ್ರಿಂದ ಕಿರುಕುಳ ಆರೋಪ – ಮಹಿಳೆ ಆತ್ಮಹತ್ಯೆ

  • ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ‌ಒತ್ತಾಯ – ಪೋಷಕರಿಂದ ಆರೋಪ, ಕ್ರಮಕ್ಕೆ ಆಗ್ರಹ

    ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ‌ಒತ್ತಾಯ – ಪೋಷಕರಿಂದ ಆರೋಪ, ಕ್ರಮಕ್ಕೆ ಆಗ್ರಹ

    ಶಿವಮೊಗ್ಗ: ಆಹಾರ ಪದ್ದತಿ ಎನ್ನುವುದು ಅವರವರ ಇಚ್ಛೆ. ತಮ್ಮಿಷ್ಟದ ಆಹಾರ ಸೇವಿಸುವ ಹಕ್ಕನ್ನು ಸಂವಿಧಾನ ಒದಗಿಸಿಕೊಟ್ಟಿದೆ. ಸರ್ಕಾರಿ ಶಾಲೆಗಳಲ್ಲಿ (Government Schools) ಮಕ್ಕಳಿಗೆ ಮೊಟ್ಟೆ (Egg), ಚೆಕ್ಕಿ, ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದ್ದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ವಿತರಿಸಲಾಗುತ್ತಿದೆ. ಮಕ್ಕಳಿಗೆ ಯಾವುದು ಬೇಕು ಅಂತಾ ಮೊದಲೇ ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಮಾಹಿತಿ ಸಹ ಪಡೆದಿರುತ್ತಾರೆ. ಆದ್ರೆ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನುಷ ಘಟನೆಯೊಂದು ನಡೆದಿದೆ.

    ಹೌದು. ಸರ್ಕಾರಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಶಾಲೆಯಲ್ಲಿ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಆರೋಪ ಶಿವಮೊಗ್ಗ (Shivamogga) ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮದಲ್ಲಿ ಕೇಳಿಬಂದಿದೆ. ಇದನ್ನೂ ಓದಿ: ಉಗ್ರರ ವಿರುದ್ಧ ಎನ್‌ಕೌಂಟರ್‌ – ಕರ್ನಾಟಕ ಮೂಲದ ಕ್ಯಾಪ್ಟನ್‌ ಸೇರಿ ನಾಲ್ವರು ಯೋಧರು ಹುತಾತ್ಮ

    ಅಮೃತ ಗ್ರಾಮದ ಸರ್ಕಾರಿ ಕೆಪಿಎಸ್ ಪ್ರಾಥಮಿಕ ಶಾಲೆಯ ಶಿಕ್ಷಕ ಬಲವಂತವಾಗಿ ಬ್ರಾಹ್ಮಣ ವಿದ್ಯಾರ್ಥಿನಿಗೆ (Brahmin Student) ಮೊಟ್ಟೆ ತಿನ್ನಿಸಿದ್ದಾರೆ. ಮೊಟ್ಟೆ ತಿಂದ ಬಳಿಕ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಧಾರ್ಮಿಕ‌ ಆಚರಣೆಗೆ ಧಕ್ಕೆ ಉಂಟಾಗಿದೆ ಎಂದು‌‌ ಪೋಷಕರು ಆರೋಪಿಸಿದ್ದಾರೆ.‌ ಇದನ್ನೂ ಓದಿ: ಇಂದಿನಿಂದ ಭಾರತ-ಆಸೀಸ್‌ T20 ಸರಣಿ – ODI ನಲ್ಲಿ ಫ್ಲಾಪ್‌ ಆದ್ರೂ T20ಯಲ್ಲಿ ಅಬ್ಬರಿಸ್ತಾರಾ ಸೂರ್ಯ?

    ಇಂತಹ ಘಟನೆಗಳು‌ ಮಕ್ಕಳ ‌ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿಯ ತಂದೆ ಶ್ರೀಕಾಂತ್ ಸ್ಥಳೀಯ ಶಾಸಕ ಆರಗ ಜ್ಞಾನೇಂದ್ರ ಹಾಗೂ ಡಿಡಿಪಿಐ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಸದೇ ಕಳ್ಳಾಟ – 6 ಲಕ್ಷ ಜನರಿಗೆ ಮೊಬೈಲ್ ನೋಟಿಸ್

  • ಮನವಿಯನ್ನು ಪುರಸ್ಕರಿಸಿ, ಆಶೀರ್ವದಿಸಿ – ಮೌನ ಮುರಿದ ಧ್ರುವ ಸರ್ಜಾ

    ಮನವಿಯನ್ನು ಪುರಸ್ಕರಿಸಿ, ಆಶೀರ್ವದಿಸಿ – ಮೌನ ಮುರಿದ ಧ್ರುವ ಸರ್ಜಾ

    ಬೆಂಗಳೂರು: ಪೊಗರು ವಿವಾದದ ಬಗ್ಗೆ ನಟ ಧ್ರುವ ಸರ್ಜಾ ಮೌನ ಮುರಿದಿದ್ದು, ಟ್ವೀಟ್ ಮಾಡುವ ಮೂಲಕ ಆರೋಪಗಳಿಗೆ ಉತ್ತರ ನೀಡಿದ್ದಾರೆ.

    ನಮ್ಮ ಇಡೀ ಕುಟುಂಬ ಹನುಮ ಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತ, ಗೌರವಿಸುತ್ತ ಬದುಕುತ್ತಿದೆ. ತಾತನವರ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿಯೇ ಬದುಕುತ್ತಿದ್ದೇವೆ. ಕಲೆಯೇ ಧರ್ಮ, ನಾವು ಎಲ್ಲ ಧರ್ಮಗಳನ್ನು ಗೌರವಿಸಿದ್ದೇವೆ. ಚಿತ್ರದ ಕಥೆ, ಪಾತ್ರಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ನೋವಾಗಿದೆ ಎನ್ನುವಂತಹ ಮಾತು ನಿಜಕ್ಕೂ ನಮ್ಮ ತಂಡಕ್ಕೆ ಬೇಸರ ತಂದಿದೆ ಎಂದು ಟ್ವೀಟ್‍ನಲ್ಲಿ ಸ್ಪಷ್ಟಪಡಿಸಿದ್ದಾರೆ.

    ನೋವಾಗಿದ್ದಕ್ಕಾಗಿಯೇ ಬೇಷರತ್ ಕ್ಷಮೆ ಕೇಳುತ್ತಿದ್ದೇನೆ. ನಿಮಗೆ ಬೇಸರವಾಗಿರುವ ದೃಶ್ಯಗಳನ್ನು ಕತ್ತರಿಸಿದ್ದೇವೆ. ಮತ್ತೆ ಸೆನ್ಸಾರ್ ಆದಮೇಲೆ ನಿಮ್ಮೆದುರು ಮಾತನಾಡೋಣ ಎಂದು ನಾನೇ ನಿರ್ಧರಿಸಿದ್ದೆ. ಈಗ ಅದನ್ನು ಸರಿಪಡಿಸಲು ತಂತ್ರಜ್ಞರ ತಂಡ ಸಿದ್ಧವಾಗಿದೆ. ನನ್ನ ಮನವಿಯನ್ನು ಪುರಸ್ಕರಿಸಿ ಎಂದಿನಂತೆ ನಿಮ್ಮ ಆಶೀರ್ವಾದವಿರಲಿ, ಜೈ ಹನುಮಾನ್ ಎಂದು ಧ್ರುವ ಸರ್ಜಾ ಬೇಷರತ್ ಕ್ಷಮೆಯಾಚಿಸಿದ್ದಾರೆ.

    ಚಿತ್ರದಲ್ಲಿನ ವಿವಾದಿತ ದೃಶ್ಯಗಳನ್ನು ಖಂಡಿಸಿ ಬ್ರಾಹ್ಮಣ ಸಮುದಾಯದವರು ಹೋರಾಟ ನಡೆಸಿದ್ದರು. 12 ರಿಂದ 14 ದೃಶ್ಯಗಳನ್ನು ತೆಗೆಯಲು ಮಂಡಳಿ ಅಧ್ಯಕ್ಷರು ಸಭೆಯಲ್ಲಿ ಬೇಡಿಕೆ ಇಟ್ಟಿದ್ದರು. ಚಪ್ಪಲಿ ಕಾಲಿನಿಂದ ಜನಿವಾರ ಹಾಕಿರುವ ಬ್ರಾಹ್ಮಣನನ್ನು ಒದೆಯುವ ದೃಶ್ಯಗಳಿವೆ. ಆ ದೃಶ್ಯಗಳನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಲಾಗಿತ್ತು. ಆ ದೃಶ್ಯಗಳಿಗೆ ಕತ್ತರಿ ಹಾಕಲು ಪೊಗರು ಟೀಮ್ ಒಪ್ಪಿದ್ದು, ನಿರ್ದೇಶಕ ನಂದಕಿಶೋರ್ ಕ್ಷಮೆಯನ್ನು ಸಹ ಯಾಚಿಸಿದ್ದಾರೆ.

    ಅಖಿಲ ಕರ್ನಾಟಕ ಮಾಧ್ವ ಮಹಾಸಭಾ ಹಾಗೂ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪೊಗರು ಸಿನಿಮಾದ ವಿರುದ್ಧ ದೂರು ನೀಡಿ ದೃಶ್ಯಕ್ಕೆ ಕತ್ತರಿ ಹಾಕಬೇಕೆಂದು ಆಗ್ರಹಿಸಲಾಗಿತ್ತು.

    ಪೊಗರು ಸಿನಿಮಾದ ವಿರುದ್ಧ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಲಾಗಿತ್ತು. ಮೈಸೂರು, ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಅಲ್ಲದೆ ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಆಕ್ಷೇಪಾರ್ಹ ದೃಶ್ಯ ತೆಗೆಯಲು ಒತ್ತಾಯ ಮಾಡಲಾಗಿತ್ತು.

  • ದೃಶ್ಯಗಳಿಗೆ ಕತ್ತರಿ ಹಾಕಲು ಒಪ್ಪಿದ ಪೊಗರು ಟೀಮ್ – ನಂದಕಿಶೋರ್ ಕ್ಷಮೆಯಾಚನೆ

    ದೃಶ್ಯಗಳಿಗೆ ಕತ್ತರಿ ಹಾಕಲು ಒಪ್ಪಿದ ಪೊಗರು ಟೀಮ್ – ನಂದಕಿಶೋರ್ ಕ್ಷಮೆಯಾಚನೆ

    ಬೆಂಗಳೂರು: ಬ್ರಾಹ್ಮಣರಿಗೆ ಸಂಬಂಧಿಸಿದ ವಿವಾದಿತ ದೃಶ್ಯಗಳನ್ನು ಕತ್ತರಿಸಲು ಪೊಗರು ಟೀಮ್ ನಿರ್ಧರಿಸಿದ್ದು, ಸಿನಿಮಾ ನಿರ್ದೇಶಕ ನಂದಕಿಶೋರ್ ಸಹ ಈ ಬಗ್ಗೆ ಕ್ಷಮೆಯಾಚಿಸಿದ್ದಾರೆ.

    ಬ್ರಾಹ್ಮಣ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿ ಪೊಗರು ಚಿತ್ರದ ನಿರ್ದೇಶಕ ನಂದಕಿಶೋರ್ ಹಾಗೂ ನಿರ್ಮಾಪಕ ಬಿ.ಕೆ.ಗಂಗಾಧರ್ ಮಾತನಾಡಿದ್ದಾರೆ. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಎಸ್.ಸಚ್ಚಿದಾನಂದ ಮೂರ್ತಿ ಅವರೊಂದಿಗೆ ಸಿನಿಮಾ ತಂಡದವರು ಅರವಿಂದ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ.

    ಚಿತ್ರದಲ್ಲಿನ 12 ರಿಂದ 14 ದೃಶ್ಯಗಳನ್ನು ತೆಗೆಯಲು ಮಂಡಳಿ ಅಧ್ಯಕ್ಷರು ಸಭೆಯಲ್ಲಿ ಬೇಡಿಕೆ ಇಟ್ಟಿದ್ದರು. ಚಪ್ಪಲಿ ಕಾಲಿನಿಂದ ಜನಿವಾರ ಹಾಕಿರುವ ಬ್ರಾಹ್ಮಣನನ್ನು ಒದೆಯುವ ದೃಶ್ಯಗಳಿವೆ. ಆ ದೃಶ್ಯಗಳನ್ನು ತೆಗೆದು ಹಾಕಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಆ ದೃಶ್ಯಗಳಿಗೆ ಕತ್ತರಿ ಹಾಕಲು ಪೊಗರು ಟೀಮ್ ಒಪ್ಪಿದ್ದು, ನಿರ್ದೇಶಕ ನಂದಕಿಶೋರ್ ಕ್ಷಮೆಯನ್ನು ಸಹ ಯಾಚಿಸಿದ್ದಾರೆ.

    ಪೊಗರು ಚಿತ್ರತಂಡ ಕ್ಷಮೆ ಕೇಳಿದರೆ ಸಾಲುವುದಿಲ್ಲ. ಬ್ರಾಹ್ಮಣರಿಗೆ ಅಪಮಾನದ ದೃಶ್ಯಗಳನ್ನು ತೆಗೆಯಲೇಬೇಕು ಎಂದು ಬ್ರಾಹ್ಮಣ ಸಮುದಾಯವರು ಆಗ್ರಹಿಸಿದ್ದರು. ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬ್ರಾಹ್ಮಣ ಸಮುದಾಯದವರು ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟಿಸಿದ್ದರು. ಈ ವೇಳೆ ನಿರ್ದೇಶಕ ನಂದಕಿಶೋರ್ ಕ್ಷಮೆ ಕೇಳಿದರೆ ಸಾಲುವುದಿಲ್ಲ. ಅವಮಾನ ಮಾಡಿದ ದೃಶ್ಯಗಳನ್ನು ನಾಳೆ ಒಳಗಡೆ ತೆಗೆಯಬೇಕು ಎಂದು ಗಡುವು ನೀಡಿದ್ದರು.

    ಅಖಿಲ ಕರ್ನಾಟಕ ಮಾಧ್ವ ಮಹಾಸಭಾ ಹಾಗೂ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪೊಗರು ಸಿನಿಮಾದ ವಿರುದ್ಧ ದೂರು ನೀಡಿ ದೃಶ್ಯಕ್ಕೆ ಕತ್ತರಿ ಹಾಕಬೇಕೆಂದು ಆಗ್ರಹಿಸಲಾಗಿತ್ತು.

    ಪೊಗರು ಸಿನಿಮಾದ ವಿರುದ್ಧ ಇಂದು ರಾಜ್ಯದ ಹಲವೆಡೆ ಪ್ರತಿಭಟನೆ ನಡೆದಿದೆ. ಮೈಸೂರು, ಕಲಬುರಗಿಯಲ್ಲಿ ಪ್ರತಿಭಟನೆ ನಡೆದಿದ್ದು, ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಆಕ್ಷೇಪಾರ್ಹ ದೃಶ್ಯ ತೆಗೆಯಲು ಒತ್ತಾಯ ಮಾಡಲಾಗಿತ್ತು.

    ಪೊಗರು ನಿರ್ಮಾಪಕ ಬಿ.ಕೆ ಗಂಗಾಧರ್ ಪರ ನಿರ್ಮಾಪಕ ಸೂರಪ್ಪ ಬಾಬು ಮಾತನಾಡಿ, ಪೊಗರು ಸಿನಿಮಾ ಸೆನ್ಸಾರ್ ಆಗಿದೆ. ಈ ವಿಚಾರವನ್ನು ಕಾನೂನಾತ್ಮಕವಾಗಿ ಬಗೆಹರಿಸಬೇಕು. ಒಮ್ಮೆ ಸೆನ್ಸಾರ್ ಆದಮೇಲೆ ಅದನ್ನು ಮತ್ತೆ ಸೆನ್ಸಾರ್ ಮಂಡಳಿ ಮೂಲಕವೇ ಬಗೆಹರಿಸಬೇಕು. ನಾವು ಈಗಾಗಲೇ ಸೆನ್ಸಾರ್ ಮಂಡಳಿಗೆ ಮನವಿ ಮಾಡಿದ್ದೇವೆ. ಆಕ್ಷೇಪಾರ್ಹ ದೃಶ್ಯಗಳನ್ನ ತೆಗೆಯಲು 48 ಗಂಟೆಗಳ ಕಾಲ ಅವಕಾಶ ಬೇಕು ಎಂದು ಹೇಳಿದ್ದರು.

  • ಧ್ವಂಸಗೊಂಡಿದ್ದ ವೃಂದಾವನ ಭಕ್ತರ ನೆರವಿನಿಂದ ಮತ್ತೆ ನಿರ್ಮಾಣ

    ಧ್ವಂಸಗೊಂಡಿದ್ದ ವೃಂದಾವನ ಭಕ್ತರ ನೆರವಿನಿಂದ ಮತ್ತೆ ನಿರ್ಮಾಣ

    ಕೊಪ್ಪಳ: ಬುಧವಾರ ರಾತ್ರಿ ಕಿಡಿಗೇಡಿಗಳಿಂದ ಧ್ವಂಸಗೊಂಡಿದ್ದ ವ್ಯಾಸರಾಯರ ವೃಂದಾವನವನ್ನು ಭಕ್ತರ ನೆರವಿನಿಂದ ಮತ್ತೆ ನಿರ್ಮಾಣ ಮಾಡಲಾಗಿದೆ.

    9 ಯತಿಗಳ ನವವೃಂದಾವನದಲ್ಲಿ ವ್ಯಾಸರಾಯರ ವೃಂದಾವನವನ್ನ ನಿಧಿಗಾಗಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ವೃಂದಾವನ ಪುನರ್ ನಿರ್ಮಾಣ ಕಾರ್ಯಕ್ಕೆ ಇಂದು ಚಾಲನೆ ಸಿಕ್ಕಿತ್ತು. ಶುಕ್ರವಾರ ಮುಂಜಾನೆ ವ್ಯಾಸರಾಜ ಮಠಾಧೀಶರಾದ ವಿದ್ಯಾಶ್ರೀಶ ಶ್ರೀಗಳು, ಮಧ್ವಾಚಾರ್ಯ ಮಠದ ವಿದ್ಯಾಸಾಗರ ಮಾಧವ ತೀರ್ಥರ ನೇತೃತ್ವದಲ್ಲಿ ವ್ಯಾಸರಾಜರ ವೃಂದಾವನ ಪುನರ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಜೊತೆಗೆ ವಾಸ್ತುಶಿಲ್ಪಿ ನೀರಜ್ ಹಾಗೂ ತಮಿಳುನಾಡಿನ ರಾಘವಪ್ರಭ ಕಾರ್ಮಿಕರ ತಂಡ ವ್ಯಾಸರಾಯರ ವೃಂದಾವನ ಪುನರ್ ನಿರ್ಮಾಣ ಮಾಡಿದ್ದಾರೆ.

    ವ್ಯಾಸರಾಜರ ವೃಂದಾವನ ಪುನರ್ ನಿರ್ಮಾಣಕ್ಕೂ ಮುನ್ನ ನವವೃಂದಾವನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ವೃಂದಾವನದ ಭಕ್ತರು ವಿಶೇಷ ಹೋಮ ಪೂಜೆ ಮಾಡಿ ವೃಂದಾವನ ಪುನರ್ ನಿರ್ಮಾಣ ಕಾರ್ಯದಲ್ಲಿ ಭಾಗಿಯಾದರು.

    ಸಾವಿರಾರು ಭಕ್ತರು ಬುಧವಾರದಿಂದ ವೃಂದಾವನದಲ್ಲಿ ಬೀಡು ಬಿಟ್ಟಿದ್ದು ವ್ಯಾಸರಾಯರ ವೃಂದಾವನ ನಿರ್ಮಾಣ ಮಾಡಿ ಪೂಜೆ ಮಾಡಿ ಹೋಗುತ್ತೇವೆ ಎಂದು ಶಪಥ ಮಾಡಿದ್ದರು.  ಅದರಂತೆ ಇಂದು ನಿರ್ಮಾಣ ಮಾಡಿ ಶಪಥ ಪೂರ್ಣಗೊಳಿಸಿದರು. ಪುನರ್ ನಿರ್ಮಾಣಕ್ಕೆ ಕೊಪ್ಪಳ ಜಿಲ್ಲಾಡಳಿತವೂ ಸಂಪೂರ್ಣ ಸಹಕಾರ ನೀಡಿದೆ.

    ರಾಜ್ಯಾದ್ಯಂತ ಪ್ರತಿಟನೆ: ವ್ಯಾಸರಾಯರ ವೃಂದಾವನ ಧ್ವಂಸ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಗಿವೆ. ಬ್ರಾಹ್ಮಣ ಸಮುದಾಯದವರು ರಾಜ್ಯಾದ್ಯಂತ ಪ್ರತಿಭಟನೆ ಮಾಡಿ ಕಿಡಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಕೊಪ್ಪಳ, ರಾಯಚೂರು ಸೇರಿದಂತೆ ನಾನಾ ಭಾಗದಲ್ಲಿ ಪ್ರತಿಭಟನೆ ಮಾಡಿದ ಬ್ರಾಹ್ಮಣ ಸಮುದಾಯದವರು, ಮನವಿ ಸಲ್ಲಿಸಿದ್ದಾರೆ.

    ವಿಜಯನಗರ ಸಾಮ್ರಾಜ್ಯದ ವೃಂದಾವನವನ್ನು ಹಾಳು ಮಾಡಿ ಇಡೀ ಹಿಂದೂ ಸಂಸ್ಕೃತಿಗೆ ಧಕ್ಕೆ ತಂದಿದ್ದಾರೆ ಕೂಡಲೇ ಧ್ವಂಸ ಮಾಡಿದ ಕಿಡಿಗೇಡಿಗಳನ್ನು ಪತ್ತೆ ಮಾಡಿ ಬಂಧಿಸಬೇಕೆಂದು ಬೀದಿಗಿಳಿದು ಹೋರಾಟ ಮಾಡಿದ್ದಾರೆ.

    ವ್ಯಾಸರಾಯರ ವೃಂದಾವನ ಧ್ವಂಸ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಸಲಿಗೆ ನಿಧಿಗಾಗಿ ವ್ಯಾಸರಾಯರ ವೃಂದಾವನ ಧ್ವಂಸ ಮಾಡಿದ್ದಾರೋ ಅಥವಾ ಬೇರೇ ಏನಾದ್ರೂ ಕಾರಣ ಇತ್ತೇ ಎನ್ನುವುದು ಪೊಲೀಸರ ತನಿಖೆಯ ನಂತರವೇ ತಿಳಿಯಲಿದೆ.

    ಯಾವಾಗ ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಯಿತೋ ಎಚ್ಚೆತ್ತ ಕೊಪ್ಪಳ ಪೊಲೀಸ್ ಇಲಾಖೆ ಕಿಡಿಗೇಡಿಗಳ ಬಂಧನಕ್ಕೆ ಗಂಗಾವತಿ ಗ್ರಾಮೀಣ ಠಾಣೆಯ ಸಿಪಿಐ ಸುರೇಶ್ ತಳವಾರ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿದೆ.