Tag: ಬ್ರಿಜೇಶ್‌ ಚೌಟ

  • ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ

    ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ

    – ಲೋಕಸಭೆಯಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಪ್ರಶ್ನೆಗೆ ಶಿಕ್ಷಣ ಸಚಿವ ಜಯಂತ್ ಚೌಧರಿ ಉತ್ತರ

    ನವದೆಹಲಿ: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ (Samagra Shiksha) 2023-24 ಹಾಗೂ 2024-25ನೇ ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ (Jayant Chaudhary) ತಿಳಿಸಿದ್ದಾರೆ.

    ಲೋಕಸಭೆಯಲ್ಲಿ (Lok Sabha) ಸಂಸದ ಕ್ಯಾ. ಬ್ರಿಜೇಶ್ ಚೌಟ (Captain Brijesh Chowta) ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಸಮಗ್ರ ಶಿಕ್ಷಾ ಯೋಜನೆಡಿ ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ ಆದ್ಯತೆಯಾಗಿ ಶಾಲೆಗಳನ್ನು ದುರಸ್ತಿಗೊಳಿಸುವ (Repair of Schools) ಕಾರ್ಯ ನಡೆಯುತ್ತಿದೆ. ಪ್ರಬಂಧ್ ಪೋರ್ಟಲ್ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಾ ಯೋಜನೆಯಡಿ ಕಳೆದ ಎರಡು ಸಾಲಿನಲ್ಲಿ 11 ಶಾಲೆಗಳನ್ನು ದೊಡ್ಡ ಮಟ್ಟದಲ್ಲಿ ದುರಸ್ತಿಗೊಳಿಸಲು ಅನುಮೋದನೆ ನೀಡಲಾಗಿದೆ. ಕೇಂದ್ರದ ಈ ಸಮಗ್ರ ಶಿಕ್ಷಾ ಯೋಜನೆಯು ರಿಪೇರಿಗೆ ಕಾಯುತ್ತಿರುವ ಶಾಲೆಗಳನ್ನು ಆದ್ಯತೆ ಮೇರೆಗೆ ದುರಸ್ತಿಗೊಳಿಸುವುದಕ್ಕೆ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುತ್ತದೆ. ಆ ಮೂಲಕ, ನೈಸರ್ಗಿಕ ವಿಕೋಪದಿಂದ ಹಾನಿಗೊಳಗಾಗುವ ಶಾಲೆಗಳನ್ನು ಯಥಾಸ್ಥಿತಿಗೆ ತರುವುದಕ್ಕೆ ಕೇಂದ್ರ ಸರ್ಕಾರದ ಸೂಕ್ತ ಆರ್ಥಿಕ ನೆರವು ಪಡೆದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮುಂಬೈಯಲ್ಲಿ ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ – ತಪ್ಪಿದ ಭಾರೀ ಅವಘಡ

    ಮಳೆ ಪೀಡಿತ ಪ್ರದೇಶಗಳ ಶಾಲೆಗಳನ್ನು ತುರ್ತಾಗಿ ದುರಸ್ತಿಗೊಳಿಸಿ ಅವುಗಳಿಗೆ ಸೂಕ್ತ ಮೂಲಸೌಕರ್ಯ ಮರುಸ್ಥಾಪಿಸುವುದಕ್ಕೆ ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮನ್ವಯದಲ್ಲಿ ಪ್ರತ್ಯೇಕ ಮಾರ್ಗಸೂಚಿ ಹಾಗೂ ಸಲಹೆಗಳನ್ನು ಬಿಡುಗಡೆಗೊಳಿಸಿದೆ. ಈ ನಡುವೆ ಕೇಂದ್ರ ಸರ್ಕಾರವು ನೈಸರ್ಗಿಕ ವಿಪತ್ತು ನಿರ್ವಹಣಾ ನಿಧಿಯಡಿ ದಕ್ಷಿಣ ಕನ್ನಡದಲ್ಲಿ 2024-25ನೇ ಸಾಲಿನಲ್ಲಿ 240 ಹಾಗೂ ರಾಜ್ಯ ಸರ್ಕಾರದ ನಿಧಿಯಡಿ 312 ಶಾಲಾ ಕಟ್ಟಡಗಳ ದುರಸ್ತಿ ಕಾರ್ಯ ಕೈಗೊಂಡಿರುವುದಾಗಿ ಸಚಿವ ಚೌಧರಿ ವಿವರಿಸಿದರು. ಇದನ್ನೂ ಓದಿ: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಕೆಶಿ

    ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಸಂಸದ ಕ್ಯಾ. ಚೌಟ ಅವರು ದಕ್ಷಿಣ ಕನ್ನಡದಲ್ಲಿ ಅತಿವೃಷ್ಟಿಗೆ 290ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ಅವುಗಳ ದುರಸ್ತಿ ಕಾರ್ಯಕ್ಕೆ ತುರ್ತಾಗಿ ಕೇಂದ್ರ ಸರ್ಕಾರದ ನೆರವು ಕೋರಿದ್ದರು. ದಕ್ಷಿಣ ಕನ್ನಡವು ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಹಾನಿಗೊಂಡಿರುವ ಶಾಲೆಗಳ ರಿಪೇರಿ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸುವುದಕ್ಕೆ ಏನೆಲ್ಲ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಚುಕ್ಕೆಗುರುತಿಲ್ಲದ ಪ್ರಶ್ನೆಯಡಿ ಮಾಹಿತಿ ಕೋರಿದ್ದರು. ಇದನ್ನೂ ಓದಿ: CBSE ಯಿಂದ ಸೇಫ್ಟಿ ಗೈಡ್‌ಲೈನ್ಸ್ ‌- ಶೌಚಾಲಯ ಹೊರತುಪಡಿಸಿ ಶಾಲೆಯ ಉಳಿದೆಲ್ಲಕಡೆ ಆಡಿಯೋವಿಶುವಲ್ ಸಿಸಿಟಿವಿ ಕಡ್ಡಾಯ

    ಈ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಮಳೆ ಪೀಡಿತ ಪ್ರದೇಶಗಳ ಶಾಲೆಗಳನ್ನು ಸಮಗ್ರ ಶಿಕ್ಷಾ ಯೋಜನೆಯಡಿ ರಿಪೇರಿಗೆ ಆದ್ಯತೆಯಡಿ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಕ್ರಮ. ಆರಂಭಿಕ ಹಂತದಲ್ಲಿ ಜಿಲ್ಲೆಯ 11 ಶಾಲೆಗಳ ದುರಸ್ತಿಗೆ ಅನುಮೋದನೆ ಸಿಕ್ಕಿದೆ. ಮುಂದೆ ಮಳೆಯಿಂದ ಹಾನಿಗೊಳಗಾಗಿರುವ ದಕ್ಷಿಣ ಕನ್ನಡದ 290 ಶಾಲೆಗಳ ದುರಸ್ತಿ ಕಾರ್ಯಕ್ಕೂ ಕೇಂದ್ರ ಸರ್ಕಾರದಿಂದ ಹೆಚ್ಚಿನ ಆರ್ಥಿಕ ನೆರವು ಪಡೆಯುವುದಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸೋಪ್ ಬಾಕ್ಸ್‌ಲ್ಲಿ 14.69 ಕೋಟಿ ಮೌಲ್ಯದ ಕೊಕೇನ್ ಸ್ಮಗ್ಲಿಂಗ್ – ಇಬ್ಬರು ಮಹಿಳೆಯರು ಅರೆಸ್ಟ್

  • ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರ ಅನುಮೋದನೆ

    ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರ ಅನುಮೋದನೆ

    – ಕಳೆದ ವಾರ ಸತೀಶ್‌ ಜಾರಕಿಹೊಳಿಗೆ ಮನವಿ ಮಾಡಿದ್ದ ಚೌಟ
    – ಶೀಘ್ರದಲ್ಲೇ ಟೆಂಡರ್‌ ಪ್ರಕ್ರಿಯೆ ಆರಂಭ

    ಮಂಗಳೂರು: ರಾಷ್ಟ್ರೀಯ ಹೆದ್ದಾರಿ-275 ರಲ್ಲಿ ಮಾಣಿಯಿಂದ ಕೊಡಗಿನ ಗಡಿಭಾಗ ಸಂಪಾಜೆವರೆಗಿನ (Mani- Sampaje) ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(DPR) ತಯಾರಿಸುವುದಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ (Dakshina Kannada) ಕ್ಯಾ. ಬ್ರಿಜೇಶ್‌ ಚೌಟ (Brijesh Chowta) ತಿಳಿಸಿದ್ದಾರೆ.

    ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್‌ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಅವರು ಖುದ್ದು ಮನವಿ ಮಾಡಿದ್ದರು. ಈ ಮನವಿಗೆ ತುರ್ತು ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆಯು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ 71.60 ಕಿಮೀ. ದೂರದ ರಸ್ತೆ ಅಗಲೀಕರಣಕ್ಕೆ ಡಿಪಿಆರ್‌ ಸಿದ್ಧಪಡಿಸಲು ಸಮಾಲೋಚಕರನ್ನು ನೇಮಕಗೊಳಿಸುವುದಕ್ಕೆ ಅನುಮತಿ ನೀಡಿದೆ. ಜೊತೆಗೆ ಇದಕ್ಕೆ ತಗಲುವ ವೆಚ್ಚವಾದ 3.19 ಕೋಟಿ ರೂ.ವನ್ನು ಏಜೆನ್ಸಿ ವೆಚ್ಚದಡಿ ಭರಿಸುವುದಕ್ಕೆ ಅನುಮೋದನೆಯನ್ನು ಕೂಡ ನೀಡಿ ಆದೇಶ ಹೊರಡಿಸಿದೆ. ಹೀಗಿರುವಾಗ ಶೀಘ್ರದಲ್ಲೇ ಮಾಣಿ-ಸಂಪಾಜೆಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಸುವುದಕ್ಕೆ ಏಜೆನ್ಸಿ ಆಯ್ಕೆ ಮಾಡಲು ಟೆಂಡರ್‌ ಪ್ರಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ಮಧ್ಯೆ ಹೊಸ ಎಕ್ಸ್‌ಪ್ರೆಸ್‌ವೇ ನಿರ್ಮಾಣ- ಪ್ರಯಾಣ ಸಮಯ ಅರ್ಧಕರ್ಧ ಇಳಿಕೆ

     

    ಲೋಕೋಪಯೋಗಿ ಇಲಾಖೆಯ ತುರ್ತು ಸ್ಪಂದನೆಯನ್ನು ಶ್ಲಾಘಿಸಿರುವ ಸಂಸದ ಕ್ಯಾ. ಚೌಟ ಅವರು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಬಿಸಿ ರೋಡ್‌-ಅಡ್ಡಹೊಳೆ, ಪುಂಜಾಲಕಟ್ಟೆ-ಚಾರ್ಮಾಡಿ ಸೇರಿ ಹಲವು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಈಗ ಜಿಲ್ಲೆಯ ಮತ್ತೊಂದು ಹೆದ್ದಾರಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮುಖ್ಯ ಎಂಜಿನಿಯರ್‌ಗೆ ಅನುಮತಿಯನ್ನು ನೀಡಿ ಆದೇಶ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

    ದಕ್ಷಿಣ ಕನ್ನಡವನ್ನು ಮಡಿಕೇರಿ-ಮೈಸೂರು ಕಡೆಯಿಂದ ಸಂಪರ್ಕಿಸುವಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯು ಪ್ರಮುಖ ರಾಷ್ಟ್ರೀಯ ಹೆದ್ದಾರಿಯಾಗಿದೆ. ಈ ಹೆದ್ದಾರಿ ಅಭಿವೃದ್ಧಿಯಾದರೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಮಂಗಳೂರು ಬಂದರು ಅಥವಾ ಮಂಗಳೂರು ವಿಮಾನ ನಿಲ್ದಾಣ ಸಂಪರ್ಕಿಸುವುದಕ್ಕೆ ಮತ್ತಷ್ಟು ಸುಲಭವಾಗಲಿದ್ದು, ಜಿಲ್ಲೆಯ ವಾಣಿಜ್ಯೋದ್ಯಮ ಚಟುವಟಿಕೆಗಳ ಅಭಿವೃದ್ಧಿಗೂ ಹೆಚ್ಚಿನ ಅನುಕೂಲವಾಗಲಿದೆ. ಈ ಹಿನ್ನಲೆ ಲೋಕೋಪಯೋಗಿ ಇಲಾಖೆಯಿಂದ ಡಿಪಿಆರ್‌ ತಯಾರಿಕೆಗೆ ಅನುಮತಿ ಲಭಿಸಿರುವುದು ಈ ಹೆದ್ದಾರಿಯನ್ನು ಚತುಷ್ಪಥವಾಗಿ ಪರಿವರ್ತಿಸುವುದಕ್ಕೆ ಎದುರಾಗಿದ್ದ ಅಡ್ಡಿ ದೂರವಾಗಿದ್ದು, ಆದಷ್ಟು ಬೇಗ ಹೆದ್ದಾರಿ ಇಲಾಖೆಗಳಿಂದ ಮುಂದಿನ ಪ್ರಕ್ರಿಯೆ ಪೂರ್ಣಗೊಂಡು ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಮಾಣಿ-ಸಂಪಾಜೆ ಹೆದ್ದಾರಿ ಅಭಿವೃದ್ಧಿ ಯೋಜನೆಯನ್ನು ಇದಕ್ಕೆ ಸಂಬಂಧಪಟ್ಟ ಸ್ಥಳೀಯ ಶಾಸಕರುಗಳ ಸಹಕಾರದೊಂದಿಗೆ ಆದಷ್ಟು ಬೇಗ ಕಾರ್ಯರೂಪಕ್ಕೆ ತರುವ ವಿಶ್ವಾಸವಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ. ಇದನ್ನೂ ಓದಿ: ಶಿರಾಡಿಯಲ್ಲಿ ಸುರಂಗ ಮಾರ್ಗ – ಡಿಪಿಆರ್‌ ತಯಾರಿಸಲು ಕೇಂದ್ರ ಒಪ್ಪಿಗೆ

    ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಂಗಳೂರು ವಿಭಾಗದ ವ್ಯಾಪ್ತಿಯ ಉಪವಿಭಾಗದಲ್ಲಿ ಬರುವ ಮಾಣಿ-ಸಂಪಾಜೆ ಹೆದ್ದಾರಿಯನ್ನು ಕೂಡ ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಆದರೆ ಡಿಪಿಆರ್‌ಗೆ ಸಂಬಂಧಿಸಿದಂತೆ 2022 ರಲ್ಲಿ ಸಲ್ಲಿಕೆಯಾಗಿದ್ದ ಪ್ರಸ್ತಾವನೆಯು ನಾನಾ ಕಾರಣಗಳಿಂದ ನೆನೆಗುದ್ದಿಗೆ ಬಿದ್ದಿತ್ತು. ಅಲ್ಲದೇ ಹಿಂದಿನ ಪ್ರಸ್ತಾವನೆಯಲ್ಲಿ ಯಾವುದೇ ಪ್ರಗತಿಯನ್ನು ಕಾಣದ ಕಾರಣ ಹಿಂದಿನದನ್ನು ಹೊರತುಪಡಿಸಿ ಸಂಸದ ಕ್ಯಾ. ಚೌಟ ಹೆಚ್ಚಿನ ಮುತುವರ್ಜಿ ವಹಿಸಿ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಈ ಜನವರಿ ತಿಂಗಳಿನಲ್ಲಿ ಹೊಸದಾಗಿ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಅಲ್ಲದೆ ಇತ್ತೀಚೆಗೆ ಲೋಕೋಪಯೋಗಿ ಸಚಿವರು ಜಿಲ್ಲೆಗೆ ಬಂದ ವೇಳೆ ಆದಷ್ಟು ಬೇಗ ಡಿಪಿಆರ್‌ಗೆ ಅನುಮತಿಸಲು ಕ್ರಮ ಜರುಗಿಸುವಂತೆ ಕೋರಿದ್ದರು.

     

  • ದೆಹಲಿಯಲ್ಲಿ ESIC ಡಿಜಿ ಭೇಟಿಯಾದ ಸಂಸದ ಕ್ಯಾ.ಚೌಟ

    ದೆಹಲಿಯಲ್ಲಿ ESIC ಡಿಜಿ ಭೇಟಿಯಾದ ಸಂಸದ ಕ್ಯಾ.ಚೌಟ

    – ಕಾರ್ಮಿಕರ ಸಮಸ್ಯೆ, ಮಂಗಳೂರಿನ ಇಎಸ್‌ಐಸಿ ಆಸ್ಪತ್ರೆಯ ಸಮಸ್ಯೆ ಬಗ್ಗೆ ಚರ್ಚೆ

    ನವದೆಹಲಿ: ದಕ್ಷಿಣ ಕನ್ನಡದ ಸಂಸದ ಕ್ಯಾ.ಬ್ರಿಜೇಶ್ ಚೌಟ (Captain Brijesh Chowta) ಅವರು ನವದೆಹಲಿಯಲ್ಲಿ (New Delhi) ಇಂದು ಇಎಸ್‌ಐಸಿ (ESIC) ಪ್ರಧಾನ ಕಚೇರಿಯ ಮಹಾ ನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಂಗಳೂರಿನ ಇಎಸ್‌ಐಸಿ ಆಸ್ಪತ್ರೆ ಎದುರಿಸುತ್ತಿರುವ ಮೂಲಸೌಕರ್ಯ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ.

    ಕ್ಯಾ.ಚೌಟ ಅವರು ಇತ್ತೀಚೆಗೆ ಮಂಗಳೂರಿನ (Mangaluru) ಇಎಸ್‌ಐಸಿ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿದ್ದಾಗ ಅಲ್ಲಿ ದೂರದ ಊರುಗಳಿಂದ ಚಿಕಿತ್ಸೆಗೆ ಬಂದ ರೋಗಿಗಳು ಸರ್ವರ್ ಸಮಸ್ಯೆ ಸೇರಿದಂತೆ ಹಲವು ರೀತಿ ತೊಂದರೆ ಅನುಭವಿಸುತ್ತಿರುವುದು ಗಮನಕ್ಕೆ ಬಂದಿತ್ತು. ಇಎಸ್‌ಐಸಿ ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಕ್ಯಾ. ಚೌಟ ಅವರು ಅದಕ್ಕೆ ಶಾಶ್ವತ ಪರಿಹಾರ ಒದಗಿಸುವ ಹಿನ್ನಲೆಯಲ್ಲಿ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಇಎಸ್‌ಐಸಿ ಆಸ್ಪತ್ರೆಯಲ್ಲಿ ಅರ್ಹರಿಗೆ ಲಭಿಸುವ ಸೌಲಭ್ಯಗಳಿಗೆ ಸಂಬಂಧಿಸಿದ ಎದುರಿಸುತ್ತಿರುವ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: 3ರ ಬಾಲೆಯ ಕೆನ್ನೆಗೆ ಸೌಟ್‌ನಲ್ಲಿ ಬರೆ – ಅಂಗನಾಡಿ ಸಿಬ್ಬಂದಿ ಅಮಾನತು

    ಕೆಲವು ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ಗುತ್ತಿಗೆ ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯಗಳು ಲಭ್ಯವಿಲ್ಲದಿರುವ ವಿಷಯದ ಬಗ್ಗೆಯೂ ಈ ವೇಳೆ ಚರ್ಚಿಸಲಾಯಿತು. 10ಕ್ಕಿಂತ ಹೆಚ್ಚು ಗುತ್ತಿಗೆ ಕಾರ್ಮಿಕರನ್ನು ಹೊಂದಿರುವ ಯಾವುದೇ ಕಂಪನಿಯು ಇಎಸ್‌ಐಸಿ ಅಡಿಯಲ್ಲಿ ನೋಂದಾಯಿಸುವುದು ಕಡ್ಡಾಯ ಎಂದು ಡಿಜಿ ಸಿಂಗ್ ಇದೇ ವೇಳೆ ತಿಳಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನ | ಹೈವೇಯಲ್ಲಿ ಟೈರ್ ಸ್ಫೋಟ – ವ್ಯಾನ್‌ಗೆ ಬಸ್ ಡಿಕ್ಕಿಯಾಗಿ 8 ಮಂದಿ ದುರ್ಮರಣ

    ಇಎಸ್‌ಐಸಿ ಪ್ರಸ್ತುತ ಸೌಲಭ್ಯಗಳನ್ನು ಪಡೆಯುವುದಕ್ಕೆ ಗುತ್ತಿಗೆ ಕಾರ್ಮಿಕರೂ ಅರ್ಹರಾಗಿದ್ದಾರೆ. ಆದರೆ, ಮಂಗಳೂರಿನ ಕೆಲವು ಪಿಎಸ್ಯುಗಳಲ್ಲಿನ ಗುತ್ತಿಗೆ ಕಾರ್ಮಿಕರಿಗೂ ಇಎಸ್‌ಐಸಿ ವೈದ್ಯಕೀಯ ಸೌಲಭ್ಯ ನಿರಾಕರಿಸುತ್ತಿರುವುದು ಹಾಗೂ ಪ್ರಸ್ತುತ 21,000 ರೂ. ವೇತನದ ಮಿತಿಗಿಂತ ಹೆಚ್ಚು ಗಳಿಸುವ ಕಾರ್ಮಿಕರನ್ನು ಕೂಡ ಇಎಸ್‌ಐಸಿ ವೈದ್ಯಕೀಯ ಪ್ರಯೋಜನಗಳನ್ನು ಪಡೆಯಲು ಅರ್ಹರನ್ನಾಗಿ ಮಾಡುವ ಅಗತ್ಯತೆ ಬಗ್ಗೆಯೂ ಕ್ಯಾ.ಚೌಟ ಇಎಸ್‌ಐಸಿ ಡಿಜಿಯೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ. ಇದನ್ನೂ ಓದಿ: ಶೃಂಗೇರಿ ಅರಣ್ಯದಲ್ಲಿ ಹೂತಿಟ್ಟಿದ್ದ ಬಂದೂಕು, ಸಜೀವ ಗುಂಡುಗಳು ಪತ್ತೆ!

  • ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ – ಅಂತಿಮ ನಮನ ಸಲ್ಲಿಸಿದ ಚೌಟ, ಕೋಟ

    ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ – ಅಂತಿಮ ನಮನ ಸಲ್ಲಿಸಿದ ಚೌಟ, ಕೋಟ

    ಉಡುಪಿ: ಜಮ್ಮು ಕಾಶ್ಮೀರದ (Jammu Kashmir) ಪೂಂಚ್‌ನಲ್ಲಿ (Poonch) ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ (Kundapura) ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ (Hawaldar Anoop Poojari) ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ.

    ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ (Captain Brijesh Chowta) ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ (Kota Srinivas Poojari) ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ ಪಡೆದು ಅಂತಿಮ ನಮನ ಸಲ್ಲಿಸಿದರು. ಕೆಲವೇ ಕ್ಷಣಗಳಲ್ಲಿ ಉಡುಪಿ ನಗರದಿಂದ ಕುಂದಾಪುರಕ್ಕೆ ಮೃತದೇಹ ರವಾನೆಯಾಗಲಿದೆ. ಬೀಜಾಡಿ ಪಡು ಸರ್ಕಾರಿ ಶಾಲಾ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಸಿದ್ಧತೆ ನಡೆದಿದೆ. ಬೀಜಾಡಿ ಕಡಲ ಕಿನಾರೆಯಲ್ಲಿ ಇಂದು ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದ್ದು, ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಬೆಂಗಳೂರು| ರೈಲಿಗೆ ಸಿಲುಕಿ ಇಬ್ಬರು ಯುವಕರು ದಾರುಣ ಸಾವು

    ಕಳೆದ 13 ವರ್ಷಗಳಿಂದ ಸೈನ್ಯದಲ್ಲಿರುವ ಅನೂಪ್ 33ನೇ ವಯಸ್ಸಿಗೆ ಹವಾಲ್ದಾರ್ ಆಗಿ ಭಡ್ತಿ ಹೊಂದಿದ ವೀರ ಯೋಧ. ಅನೂಪ್ ಸಾವಿನಿಂದ ಇಡೀ ಕುಟುಂಬ ದಿಗ್ಬ್ರಾಂತಗೊಂಡಿದೆ. ಬಡತನದ ನಡುವೆ ಭಾರತಾಂಬೆಯ ಸೇವೆ ಮಾಡಬೇಕೆಂದು ಹಠದಿಂದ ಸೈನ್ಯ ಸೇರಿದ್ದ ಅನೂಪ್ 14 ವರ್ಷ ಸೇವೆ ಸಲ್ಲಿಸಿದ್ದಾರೆ. 2022ರಲ್ಲಿ ಅನೂಪ್‌ಗೆ ವಿವಾಹವಾಗಿತ್ತು. ಎರಡು ವರ್ಷದ ಪುಟ್ಟ ಮಗುವಿದ್ದು, ಇಬ್ಬರು ಸಹೋದರಿಯರು, ಅಪಾರ ಬಂಧು ಮಿತ್ರರು, ಗ್ರಾಮಸ್ಥರು, ಗೆಳೆಯರನ್ನು ಬಿಟ್ಟು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಮೂರು ವರ್ಷ ಮತ್ತೆ ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾಗುವ ಆಲೋಚನೆಯನ್ನು ಅನೂಪ್ ಹೊಂದಿದ್ದರು. ಈ ನಡುವೆ ಕಾಶ್ಮೀರದ ಪೂಂಚ್‌ನಲ್ಲಿ ದುರ್ಘಟನೆಯಾಗಿದೆ. 20 ದಿನದ ರಜೆಗೆ ಬಂದಿದ್ದ ಅನೂಪ್, ಶನಿವಾರವಷ್ಟೇ ಕಾಶ್ಮೀರಕ್ಕೆ ವಾಪಸ್ ಆಗಿದ್ದರು. ಘಟನೆಯಿಂದ ಕುಟುಂಬ ಕಣ್ಣೀರಾಗಿದೆ. ಮಗನನ್ನು ಕಳೆದುಕೊಂಡ ತಾಯಿ, ಸೋದರಿಯ ನೋವಿಗೆ ಕಣ್ಣೀರ ಮಾತೇ ಸಾಕ್ಷಿಯಾಗಿದೆ. ಇದನ್ನೂ ಓದಿ: ಕಾರವಾರ| 10 ಸಾವಿರ ಪಿಗ್ಮಿ ಹಣಕ್ಕಾಗಿ ವೃದ್ದೆ ಕತ್ತು ಹಿಸುಕಿ ಹತ್ಯೆ

    ಯೋಧ ಅನೂಪ್ ಪಾರ್ಥಿವ ಶರೀರ ಸ್ವಗ್ರಾಮ ತಲುಪಲಿದ್ದು, ಕುಂದಾಪುರದ ಬೀಜಾಡಿವರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ. 5,000ಕ್ಕೂ ಹೆಚ್ಚು ಮಂದಿ ಭಾಗಿ ಆಗುವ ನಿರೀಕ್ಷೆ ಇದ್ದು, ಅಂತಿಮ ಯಾತ್ರೆ ಬಳಿಕ ಪಾರ್ಥಿವ ಶರೀರವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ. ಇದನ್ನೂ ಓದಿ: ನನಗೇನಾದ್ರೂ ಆದ್ರೆ ಸಿಎಂ ಹೊಣೆ: ಸ್ನೇಹಮಯಿ ಕೃಷ್ಣ

    ಸ್ವಗ್ರಾಮದ ಬೀಜಾಡಿ ಪಡು ಸರಕಾರಿ ಶಾಲೆಯಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು.. ಸಕಲ ಸೇನೆ ಮತ್ತು ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ. ಇದನ್ನೂ ಓದಿ: ನಾನು ಧರ್ಮಸ್ಥಳಕ್ಕೂ ಹೋಗ್ತೀನಿ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗ್ತೀನಿ: ಸಿ.ಟಿ ರವಿ

  • ದಕ್ಷಿಣ ಕನ್ನಡದ ‘ಕ್ಯಾಪ್ಟನ್’ ಚೌಟ

    ದಕ್ಷಿಣ ಕನ್ನಡದ ‘ಕ್ಯಾಪ್ಟನ್’ ಚೌಟ

    ಮಂಗಳೂರು: ಬಿಜೆಪಿ ಭದ್ರಕೋಟೆ ಎಂದೇ ಕರೆಸಿಕೊಳ್ಳುವ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ (Brijesh Chowta) ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರ ಮನಸ್ಸನ್ನು ಗೆದ್ದಿದ್ದಾರೆ.

    ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ (Padmaraj R. Poojary) ವಿರುದ್ಧ ಸುಮಾರು 1 ಲಕ್ಷ 37 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯದ ಮಾಲೆಗೆ ಕೊರಳೊಡ್ಡಿದ್ದಾರೆ. ಈ ಮೂಲಕ ಚೌಟ ಅವರು ಮೊದಲ ಪ್ರಯತ್ನದಲ್ಲಿಯೇ ಸಂಸತ್ ಪ್ರವೇಶ ಮಾಡಲಿದ್ದಾರೆ.

    ಲೋಕಸಭಾ ಚುನಾವಣೆಗೆ (Loksabha Elections 2024) ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಈ ಬಾರಿ ಹೊಸ ಮುಖಗಳನ್ನೇ ಅಖಾಡಕ್ಕೆ ಇಳಿಸಿದ್ದವು. ಹೀಗಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಪದ್ಮರಾಜ್ ಪೂಜಾರಿ ಹೆಸರು ಕೇಳಿ ಬರುತ್ತಿದ್ದಂತೆಯೇ ಭಾರೀ ಪೈಪೋಟಿ ಇರುತ್ತದೆ ಎಂಬ ಮಾತುಗಳು ಕೇಳಿಬಂದಿತ್ತು. ಇದೀಗ ಚೌಟ ಅವರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಪೂಜಾರಿಯವರನ್ನು ಸೋಲಿಸಿದ್ದಾರೆ. ಇದನ್ನೂ ಓದಿ: ಅಂಜಲಿ ನಿಂಬಾಳ್ಕರ್‌ ವಿರುದ್ಧ ಕಾಗೇರಿಗೆ ಗೆಲುವು- ಉತ್ತರ ಕನ್ನಡದಲ್ಲಿ ಸಂಭ್ರಮಾಚರಣೆ

    ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಮಿಥುನ್ ರೈ (Mithun Rai) ಹಾಗೂ ಬಿಜೆಪಿಯಿಂದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಕಣಕ್ಕಿಳಿದಿದ್ದರು. ಈ ವೇಳೆ ಕಟೀಲ್ ಅವರು ಮಿಥುನ್ ರೈ ವಿರುದ್ಧ 2,74,621 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ 57.55 %ರಷ್ಟು ಮತಗಳನ್ನು ಪಡೆದಿತ್ತು.

    ದಕ್ಷಿಣ ಕನ್ನಡದಲ್ಲಿ 1951 ರಿಂದ 2019 ರವರೆಗೆ ಒಟ್ಟು 16 ಚುನಾವಣೆಗಳು ನಡೆದಿದೆ. ಇಲ್ಲಿಯವರೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ 8 ಬಾರಿ ಬಿಜೆಪಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ 9 ಬಾರಿ ಈ ಕ್ಷೇತ್ರದಿಂದ ಗೆಲುವನ್ನು ಸಾಧಿಸಿದ್ದಾರೆ.

  • 70 ಲಕ್ಷದ ಆಸ್ತಿ ಘೋಷಿಸಿದ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

    70 ಲಕ್ಷದ ಆಸ್ತಿ ಘೋಷಿಸಿದ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿಯಾಗಿರುವ ಬ್ರಿಜೇಶ್ ಚೌಟ (Brijesh Chowta) ಅವರು ಇಂದು ನಾಮಪತ್ರ ಸಲ್ಲಿಸಿದ್ದು ಒಟ್ಟು 70 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.

    ಇಂದು ಸಾಂಕೇತಿಕವಾಗಿ ನಾಮಪತ್ರ (Nomination)ಸಲ್ಲಿಸಿದ್ದು ಏಪ್ರಿಲ್ 4ರಂದು ಅಧಿಕೃತವಾಗಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಶಿಂಧೆ ಬಣದ ಶಿವಸೇನೆ ಸೇರಿದ ನಟ ಗೋವಿಂದ್

    ಸಾಂಕೇತಿಕ ನಾಮಪತ್ರದ ಜೊತೆ ಸಲ್ಲಿಸಿದ ಅಫಿಡವಿಟ್‌ನಲ್ಲಿ 27,31,365 ರೂ. ಮೌಲ್ಯದ ಸ್ಥಿರಾಸ್ತಿ ಮತ್ತು 43,50,000 ಚರಾಸ್ತಿ ಸೇರಿ ಒಟ್ಟು 70,81,365 ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.

    ಇನ್ನೋವಾ ಕಾರಿನ ಮಾಲೀಕರಾಗಿರುವ ಇವರು ಈ ಕಾರಿಗಾಗಿ 9,62,010 ರೂ. ಸಾಲ ಮಾಡಿದ್ದಾರೆ. ಅವಿವಾಹಿತರಾಗಿರುವ 42 ವರ್ಷದ ಬ್ರಿಜೇಶ್ ಚೌಟ ಬಿಎಸ್‌ಸಿ ಶಿಕ್ಷಣದ ಜೊತೆಗೆ ಐಐಎಂ ಇಂದೋರ್‌ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫಿಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ. ಇದನ್ನೂ ಓದಿ: ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

    80 ಸಾವಿರ ರೂ. ನಗದು ಹೊಂದಿರುವ ಇವರು 9 ಲಕ್ಷ ರೂ. ಮೌಲ್ಯದ 137 ಗ್ರಾಂ ಚಿನ್ನವನ್ನು ಹೊಂದಿದ್ದಾರೆ.