Tag: ಬ್ರಿಜ್ ಭೂಷಣ್

  • ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ – ಸಾಕ್ಷಿ ಮಲಿಕ್

    ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ – ಸಾಕ್ಷಿ ಮಲಿಕ್

    ನವದೆಹಲಿ: ನಾವು ಯಾರ ಜೊತೆಗೂ ರಾಜಿ ಮಾಡಿಕೊಂಡಿಲ್ಲ, ಹೋರಾಟದಿಂದ ಹಿಂದೆಯೂ ಸರಿಯುವುದಿಲ್ಲ, ನ್ಯಾಯಕ್ಕಾಗಿ ಒಗ್ಗಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ, ನಮ್ಮನ್ನು ದುರ್ಬಲಗೊಳಿಸಲು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಸಾಕ್ಷಿ ಮಲಿಕ್ (Sakshi Malik) ಹಾಗೂ ಅವರ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ (Satyawart Kadian) ಸ್ಪಷ್ಟನೆ ನೀಡಿದ್ದಾರೆ.

    ಶನಿವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜೊತೆಗೆ ಸಭೆ ನಡೆಸಿದ ಬೆನ್ನಲ್ಲೇ ಭಾರತೀಯ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ (Brij Bhushan Sharan Singh)
    ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪ್ರಮುಖ ಕುಸ್ತಿಪಟುಗಳಲ್ಲಿ ಒಬ್ಬರಾದ ಸಾಕ್ಷಿ ಮಲಿಕ್ ಹೋರಾಟದಿಂದ ಹಿಂದೆ ಸರಿದಿದ್ದು, ತಮ್ಮ ಕೆಲಸಕ್ಕಾಗಿ ರೈಲ್ವೇ ಇಲಾಖೆಗೆ (Railway Department) ಮರಳಿದ್ದಾರೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ಪ್ರತಿಭಟನೆಯಿಂದ ಹಿಂದೆ ಸರಿದ ಕುಸ್ತಿಪಟುಗಳು – ಮರಳಿ ರೈಲ್ವೇ ಉದ್ಯೋಗಕ್ಕೆ

    ಈ ವರದಿ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಾಕ್ಷಿ ಮಲಿಕ್ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ ಹೋರಾಟ ಹಿಂದಕ್ಕೆ ಪಡೆದಿರುವುದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಹೋರಾಟ ಮುಂದುವರಿಯಲಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ- ಪತ್ರದ ಮೂಲಕ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

    ಟ್ವಿಟ್ಟರ್‌ನಲ್ಲಿ (Twitter) ಈ ಬಗ್ಗೆ ಖುದ್ದು ಸಾಕ್ಷಿ ಮಲಿಕ್ ಕೂಡಾ ಪ್ರತಿಕ್ರಿಯೆ ನೀಡಿದ್ದು, ಹೋರಾಟದಿಂದ ಹಿಂದೆ ಸರಿದಿರುವ ಸುದ್ದಿ ಸಂಪೂರ್ಣ ತಪ್ಪು. ನ್ಯಾಯಕ್ಕಾಗಿ ನಡೆಸುತ್ತಿರುವ ಹೋರಾಟದಿಂದ ನಾವು ಹಿಂದೆ ಸರಿದಿಲ್ಲ, ನಾವೂ ಹಿಂದೆ ಸರಿಯುವುದೂ ಇಲ್ಲ. ಸತ್ಯಾಗ್ರಹದ ಜೊತೆಗೆ ರೈಲ್ವೇಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ದಯವಿಟ್ಟು ಯಾವುದೇ ತಪ್ಪು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

  • ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

    ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

    ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ (Wrestlers) ಭಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಶನಿವಾರ ರಾತ್ರಿ ಗೃಹ ಸಚಿವ ಅಮಿತ್ ಶಾ‌ (Amit Shah) ಅವರನ್ನು ಭೇಟಿಯಾಗಿದ್ದಾರೆ.

    ಭೇಟಿ ವೇಳೆ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಪ್ರಾಪ್ತ ವಯಸ್ಕ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಅವರ ವಿರುದ್ಧ ನಿಷ್ಪಕ್ಷಪಾತ ತನಿಖೆಯಾಗಬೇಕು ಮತ್ತು ತ್ವರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಶೃಂಗೇರಿಯಿಂದ ಪಂಚಲೋಹ ಮೂರ್ತಿ ರವಾನೆ – 75 ವರ್ಷಗಳ ಬಳಿಕ ಕಾಶ್ಮೀರದ ಶಾರದಾಂಬೆ ದೇಗುಲದಲ್ಲಿ ಪೂಜೆ

    ಕುಸ್ತಿಪಟುಗಳ ಮನವಿ ಆಲಿಸಿದ ಅಮಿತ್ ಶಾ, ಕಾನೂನು ಎಲ್ಲರಿಗೂ ಒಂದೇ, ಅದು ತನ್ನದೇ ಆದ ಕ್ರಮಗಳನ್ನು ತೆಗೆದುಕೊಳ್ಳಲಿ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದ್ದು, ಕಾನೂನು ಹೋರಾಟದಲ್ಲಿ ಹಸ್ತಕ್ಷೇಪ ಮಾಡದಿರುವ ಬಗ್ಗೆ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತ – ಅಪಘಾತವಾಗಿ 51 ಗಂಟೆಗಳ ಬಳಿಕ ಮೊದಲ ರೈಲು ಸಂಚಾರ

    ಮೇ 28ರವರೆಗೂ ಕುಸ್ತಿಪಟುಗಳು ದೆಹಲಿಯ (Delhi) ಜಂತರ್ ಮಂತರ್‌ನಲ್ಲಿ ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಹೊಸ ಸಂಸತ್ ಉದ್ಘಾಟನೆ ದಿನದಂದು ಪಾರ್ಲಿಮೆಂಟ್ ಬಳಿಗೆ ಮೆರವಣಿಗೆ ಹೊರಟ ಅವರನ್ನು ತಡೆದ ಪೊಲೀಸರು ಅಮಾನವೀಯವಾಗಿ ನಡೆದುಕೊಂಡಿದ್ದರು. ಇದನ್ನೂ ಓದಿ: ಮತ್ತೆ ಲಿಂಗಾಯತ ಸ್ವತಂತ್ರ ಧರ್ಮದ ಕೂಗು – ಹೈದರಾಬಾದ್‌ನಲ್ಲಿ ಸಮಾವೇಶ

    ಆ ಬಳಿಕ ಕುಸ್ತಿಪಟುಗಳು ತಾವು ಗೆದ್ದಿದ್ದ ಪದಕಗಳನ್ನು ಗಂಗಾ ನದಿಯಲ್ಲಿ ವಿರ್ಸಜನೆ ಮಾಡಲು ಹರಿದ್ವಾರಕ್ಕೆ ತೆರಳಿದ್ದರು. ಅನೇಕ ಜನರು ಮನವಿ ಮಾಡಿದ್ದರಿಂದ, ರೈತ ಮುಖಂಡರಿಗೆ ಪದಕಗಳನ್ನು ನೀಡಲು ನಿರ್ಧರಿಸಿ, ಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಐದು ದಿನದ ಗಡುವು ನೀಡಿದ್ದರು. ಇದನ್ನೂ ಓದಿ: ಕುಸಿದೇ ಬಿಡ್ತು 1,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ

  • ಬ್ರಿಜ್ ಭೂಷಣ್ ವಿರುದ್ಧದ ಕಿರುಕುಳ ಆರೋಪ – ತನಿಖೆಗೆ ಎಸ್‍ಐಟಿ ರಚನೆ

    ಬ್ರಿಜ್ ಭೂಷಣ್ ವಿರುದ್ಧದ ಕಿರುಕುಳ ಆರೋಪ – ತನಿಖೆಗೆ ಎಸ್‍ಐಟಿ ರಚನೆ

    ನವದೆಹಲಿ: ಕುಸ್ತಿ ಫೆಡರೇಶನ್ ಮುಖ್ಯಸ್ಥ (WFI) ಬ್ರಿಜ್ ಭೂಷಣ್ ಸಿಂಗ್ (Brij Bhushan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ ಎಂದು ದೆಹಲಿ ಪೊಲೀಸರು (Delhi Police) ಶುಕ್ರವಾರ ವಿಶೇಷ ನ್ಯಾಯಾಲಯಕ್ಕೆ (Special Court) ಮಾಹಿತಿ ನೀಡಿದ್ದಾರೆ.

    ನ್ಯಾಯಾಲಯ ನೀಡಿದ್ದ ಆದೇಶದ ಅನ್ವಯ ಎಸ್‍ಐಟಿ ರಚಿಸಲಾಗಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ನಾವು ಎಸ್‍ಐಟಿ ರಚಿಸಿದ್ದೇವೆ. ಎಸ್‍ಐಟಿ ಪ್ರಕರಣದ ತನಿಖೆ ನಡೆಸಲಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ್ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಪೀಠಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನನ್ನ ನೇಣಿಗಾದ್ರೂ ಹಾಕಿ, ಆದ್ರೆ ಕುಸ್ತಿ ನಿಲ್ಲಿಸಿದ್ರೆ ನಿಮ್ಮ ಭವಿಷ್ಯಕ್ಕೆ ಹಾನಿ – ಬ್ರಿಜ್‌ಭೂಷಣ್ ಭಾವುಕ ಹೇಳಿಕೆ

    ವರದಿಯನ್ನು ದೆಹಲಿ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ, ಪ್ರಕರಣದ ಸ್ವರೂಪವನ್ನು ಪರಿಗಣಿಸಿ ವರದಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ವಿನಂತಿಸಿದ್ದಾರೆ. ಬಳಿಕ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮೇ 27ಕ್ಕೆ ಮುಂದೂಡಿತು.

    ಅಪ್ರಾಪ್ತೆ ಸೇರಿದಂತೆ ಹಲವಾರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat), ಸಾಕ್ಷಿ ಮಲ್ಲಿಕ್, ಬಜರಂಗ್ ಪೂನಿಯಾ ಸೇರಿದಂತೆ ಹಲವರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ತನಿಖೆಯ ವಿಚಾರಣೆ ಕೋರಿ ಕುಸ್ತಿಪಟುಗಳು ಸಲ್ಲಿಸಿದ ಮನವಿಯ ಮೇರೆಗೆ ನ್ಯಾಯಾಲಯ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿತ್ತು.

    ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪೊಲೀಸರು ಪೋಕ್ಸೋ (POCSO) ಸೇರಿದಂತೆ ಎರಡು ಎಫ್‍ಐಆರ್‌ಗಳನ್ನು (FIR) ದಾಖಲಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ, ಅದ್ಕೆ ಬೇರೆ ಪಕ್ಷದ ಜೊತೆ ಮಾತಾಡುವ ಪ್ರಯತ್ನ ಮಾಡ್ತಿದ್ದಾರೆ – ಸಿಎಂ