Tag: ಬ್ರಿಜ್ ಭೂಷಣ್ ಸಿಂಗ್

  • ಮಣಿಪುರದಲ್ಲಿ ನಡೆದ ಘಟನೆ ದುಃಖಕರ – ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಬ್ರಿಜ್‌ ಭೂಷಣ್‌ ಸಿಂಗ್‌ ಖಂಡನೆ

    ಮಣಿಪುರದಲ್ಲಿ ನಡೆದ ಘಟನೆ ದುಃಖಕರ – ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಬ್ರಿಜ್‌ ಭೂಷಣ್‌ ಸಿಂಗ್‌ ಖಂಡನೆ

    ಲಕ್ನೋ: ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲಿರುವ ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಹಾಗೂ ಸಂಸದ ಬ್ರಿಜ್‌ ಭೂಷಣ್ ಶರಣ್ ಸಿಂಗ್ (Brij Bhushan Singh), ಮಣಿಪುರದಲ್ಲಿ ಇತ್ತೀಚೆಗೆ ನಡೆದ ಘಟನೆ ಖಂಡನೀಯ ಮತ್ತು ಸ್ವತಂತ್ರ ಭಾರತದಲ್ಲಿ ಇದು ದುಃಖಕರ ಘಟನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಮಣಿಪುರದಲ್ಲಿ (Manipur Violence) ಎರಡು ಬುಡಕಟ್ಟು ಸಮುದಾಯಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಮೇ 4 ರಂದು ನಡೆದಿದೆ ಎನ್ನಲಾದ ಘಟನೆಯೊಂದರ ವೀಡಿಯೋ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ ಕೆಲ ಪುರುಷರು ದೌರ್ಜನ್ಯ ಎಸಗಿದ್ದರು. ಈ ದೃಶ್ಯದ ವೀಡಿಯೋ ವೈರಲ್‌ ಆಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇದನ್ನೂ ಓದಿ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಯುವತಿಯರ ಮೇಲೆ ರೇಪ್, ಮರ್ಡರ್ ಆರೋಪ – ಮಣಿಪುರ ಧಗ ಧಗ

    ಈ ಕುರಿತು ಮಾತನಾಡಿರುವ ಬ್ರಿಜ್‌ ಭೂಷಣ್‌, ಮಣಿಪುರದ ಪರಿಸ್ಥಿತಿ ಕಷ್ಟಕರವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಅಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಮಣಿಪುರ ಘಟನೆ ಅತ್ಯಂತ ದುಃಖಕರವಾಗಿದೆ. ಇದು ಸ್ವತಂತ್ರ ಭಾರತದಲ್ಲಿ ನಡೆದಿರುವ ಅತ್ಯಂತ ದುಃಖಕರ ಘಟನೆ. ಪ್ರಧಾನಿಗಳು ಈ ವಿಷಯದ ಬಗ್ಗೆ ಗಮನ ಹರಿಸಿದ್ದಾರೆ. ಅಲ್ಲದೇ ಘಟನೆ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ. ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

    ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರ್ಗಮಿತ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಫೆಡರೇಶನ್‌ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯವು ಗುರುವಾರ ಜಾಮೀನು ನೀಡಿದೆ. ಇದನ್ನೂ ಓದಿ: ಪ.ಬಂಗಾಳದಲ್ಲಿಯೂ ನಡೆದಿತ್ತು ಮಹಿಳೆಯರಿಬ್ಬರ ಅರೆಬೆತ್ತಲೆ ಮೆರವಣಿಗೆ- ವೀಡಿಯೋ ವೈರಲ್

    ಸುಮಾರು ಎರಡೂವರೆ ತಿಂಗಳಿನಿಂದ ಎರಡು ಪ್ರಮುಖ ಸಮುದಾಯಗಳ ನಡುವೆ ನಡೆಯುತ್ತಿರೋ ಸಂಘರ್ಷದ ಕಾರಣದಿಂದ ಮಣಿಪುರ ಎಂಬ ಪುಟ್ಟ ರಾಜ್ಯ ಹೊತ್ತಿ ಉರಿಯುತ್ತಿದೆ. ಈವರೆಗೂ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಖುದ್ದು ಸೇನೆ ಫೀಲ್ಡ್‌ಗೆ ಇಳಿದರೂ ಸಂಘರ್ಷ ಶಮನವಾಗಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಸ್ತೆಯ ಮೇಲಲ್ಲ, ಕೋರ್ಟ್‍ನಲ್ಲಿ ಹೋರಾಟ ಮುಂದುವರೆಯಲಿದೆ – ಸಿಂಗ್‍ಗೆ ಕುಸ್ತಿಪಟುಗಳ ಎಚ್ಚರಿಕೆ

    ರಸ್ತೆಯ ಮೇಲಲ್ಲ, ಕೋರ್ಟ್‍ನಲ್ಲಿ ಹೋರಾಟ ಮುಂದುವರೆಯಲಿದೆ – ಸಿಂಗ್‍ಗೆ ಕುಸ್ತಿಪಟುಗಳ ಎಚ್ಚರಿಕೆ

    ನವದೆಹಲಿ: ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್  (Brij Bhushan Sharan Singh) ವಿರುದ್ಧದ ಹೋರಾಟವನ್ನು ರಸ್ತೆಯಲ್ಲಲ್ಲ, ನ್ಯಾಯಾಲಯದಲ್ಲಿ ನಡೆಸಲಾಗುತ್ತದೆ ಎಂದು ಕುಸ್ತಿಪಟುಗಳು (Wrestlers) ಎಚ್ಚರಿಕೆ ನೀಡಿದ್ದಾರೆ.

    ಸಿಂಗ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸುವ ಭರವಸೆಯನ್ನು ಸರ್ಕಾರ ಈಡೇರಿಸಿದೆ. ಅಲ್ಲದೇ ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ. ಅದು ರಸ್ತೆಯ ಮೇಲಲ್ಲ, ನ್ಯಾಯಾಲಯದಲ್ಲಿ ಎಂದು ಟ್ವಿಟ್ಟರ್‍ನಲ್ಲಿ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಪ್ರಕಟಿಸಿದ್ದಾರೆ. ಇದನ್ನೂ ಓದಿ: ವಿಶ್ವವಿಖ್ಯಾತ ಪಶುಪತಿನಾಥ ದೇವಾಲಯದ 10 ಕೆಜಿ ಚಿನ್ನ ಕಳವು – ದೇವಾಲಯ ಬಂದ್

    ಡಬ್ಲ್ಯುಎಫ್‍ಐನ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿದೆ. ಜುಲೈ 11 ರ ಚುನಾವಣೆಗೆ ಸರ್ಕಾರ ನೀಡಿರುವ ಭರವಸೆಗಾಗಿ ಕಾಯುತ್ತೇವೆ. ಅಲ್ಲದೇ ಕೆಲವು ದಿನಗಳ ಕಾಲ ಸಾಮಾಜಿಕ ಜಾಲತಾಣಗಳಿಂದ ವಿರಾಮ ತೆಗೆದುಕೊಳ್ಳುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

    ಡಬ್ಲ್ಯುಎಫ್‍ಐ ಮುಖ್ಯಸ್ಥರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಏಷ್ಯನ್ ಗೇಮ್ಸ್‍ಗೆ ಮುನ್ನ ತಯಾರಿಗೆ ವಿನಾಯಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ವಿನೇಶ್ ಫೋಗಟ್ ಅವರು ಪತ್ರವೊಂದರ ಚಿತ್ರವನ್ನು ಟ್ವಿಟರ್‍ನಲ್ಲಿ ಹಾಕಿದ್ದಾರೆ. ಇದನ್ನು ಬಿಜೆಪಿ ಮುಖಂಡ ಹಾಗೂ ಮಾಜಿ ಕುಸ್ತಿಪಟು ಯೋಗೇಶ್ವರ್ ದತ್ ಕ್ರೀಡಾ ಸಚಿವಾಲಯದ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

    ಶತ್ರುಗಳು ಕುಸ್ತಿಪಟುಗಳ ನಡುವಿನ ಒಗ್ಗಟ್ಟನ್ನು ಮುರಿಯಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರನ್ನು ಗೆಲ್ಲಲು ಬಿಡುವುದಿಲ್ಲ ಎಂದು ವಿನೇಶ್ ಫೋಗಟ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಇಂದು ಬೆಂಗಳೂರಿನಲ್ಲಿ ಬೀಳಲಿದೆ ಮಳೆ – ಭಾನುವಾರ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

  • ಸಾಕ್ಷಿ ಮಲಿಕ್ ಕಾಂಗ್ರೆಸ್ ಕೈಗೊಂಬೆ; ನಿಜ ಉದ್ದೇಶ ಬಹಿರಂಗಪಡಿಸೋ ಸಮಯ ಬಂದಿದೆ – ಬಬಿತಾ ಫೋಗಟ್

    ಸಾಕ್ಷಿ ಮಲಿಕ್ ಕಾಂಗ್ರೆಸ್ ಕೈಗೊಂಬೆ; ನಿಜ ಉದ್ದೇಶ ಬಹಿರಂಗಪಡಿಸೋ ಸಮಯ ಬಂದಿದೆ – ಬಬಿತಾ ಫೋಗಟ್

    ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ (Brij Bhushan Sharan Singh) ವಿರುದ್ಧ ಕುಸ್ತಿಪಟುಗಳು (Wrestlers) ಮಾಡಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಲೇ ಇದೆ. ಇದೀಗ ಭಾರತದ ಕುಸ್ತಿಪಟು ಬಬಿತಾ ಫೋಗಟ್ (Babita Phogat) ಈ ಪ್ರತಿಭಟನೆಗೆ ವಿರೋಧ ವ್ಯಕ್ತಪಡಿಸಿ, ಸಾಕ್ಷಿ ಮಲಿಕ್ (Sakshi Malik) ಅವರನ್ನು ಕಾಂಗ್ರೆಸ್‌ನ ಕೈಗೊಂಬೆ ಎಂದು ಆರೋಪಿಸಿದ್ದಾರೆ.

    ರಾಜಕೀಯ ಪ್ರೇರಿತವೆಂದು ಭಾರೀ ಟೀಕೆಗೆ ಗುರಿಯಾಗಿದ್ದ ತಮ್ಮ ಹೋರಾಟದ ಬಗ್ಗೆ ಶನಿವಾರ ಕುಸ್ತಿಪಟುಗಳು ಸ್ಪಷ್ಟನೆ ನೀಡಿದ್ದರು. ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ. ಕೇಂದ್ರ ಸರ್ಕಾರದ ವಿರುದ್ಧವೂ ಅಲ್ಲ. ನಮ್ಮ ಹೋರಾಟ ಬ್ರಿಜ್ ಭೂಷಣ್ ವಿರುದ್ಧ ಮಾತ್ರ ಎಂದು ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್ ಹಾಗೂ ಅವರ ಪತಿ ಸತ್ಯವರ್ತ್ ಕಡಿಯಾನ್ ಹೇಳಿದ್ದರು.

    ಈ ಬಗ್ಗೆ 11 ನಿಮಿಷಗಳ ಸುದೀರ್ಘ ವೀಡಿಯೋ ಹಂಚಿಕೊಂಡಿದ್ದ ಸಾಕ್ಷಿ ಮಲಿಕ್ ತಮ್ಮ ಹೋರಾಟದ ಬಗ್ಗೆ ಸ್ಪಷ್ಟನೆ ನೀಡುತ್ತಾ, ನಮ್ಮ ಹೋರಾಟದ ಬಗ್ಗೆ ವದಂತಿಗಳನ್ನು ಹರಡಲಾಗುತ್ತಿದೆ. ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ. ಕಳೆದ ಜನವರಿಯಲ್ಲಿ ನಾವು ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಇಳಿದಾಗ ಇಬ್ಬರು ಬಿಜೆಪಿ ನಾಯಕರನ್ನೇ ಕೋರಿ ಪೊಲೀಸರಿಂದ ಅನುಮತಿ ಪಡೆದುಕೊಂಡಿದ್ದೆವು. ಕಳೆದ 10-12 ವರ್ಷಗಳಿಂದ ಕುಸ್ತಿಪಟುಗಳ ಮೇಲೆ ಕಿರುಕುಳ ನಡೆಯುತ್ತಲೇ ಬಂದಿದೆ. 90% ಕ್ಕೂ ಹೆಚ್ಚು ಕುಸ್ತಿಪಟುಗಳು ತೊಂದರೆ ಅನುಭವಿಸುತ್ತಿರುವುದು ತಿಳಿದಿತ್ತು. ಆದರೆ ಒಗ್ಗಟ್ಟಿನ ಕೊರತೆಯಿಂದಾಗಿ ಸುಮ್ಮನಿದ್ದೆವು ಎಂದು ಹೇಳಿಕೊಂಡಿದ್ದರು. ಇದನ್ನೂ ಓದಿ: ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ – ಕುಸ್ತಿಪಟುಗಳ ಸ್ಪಷ್ಟನೆ

    ಈ ವೀಡಿಯೋವನ್ನು ಬಿಡುಗಡೆ ಮಾಡಿದ ಬಳಿಕ ಪ್ರತಿಕ್ರಿಯಿಸಿರುವ ಬಬಿತಾ ಫೋಗಟ್, ನನ್ನ ಕಿರಿಯ ಸಹೋದರಿ ಹಾಗೂ ಆಕೆಯ ಪತಿ ಮಾಡಿರುವ ವೀಡಿಯೋ ನೋಡಿ ನನಗೆ ಬಹಳ ದುಃಖ ಹಾಗೂ ನಗು ಎರಡೂ ಬಂದಿದೆ. ಸಾಕ್ಷಿ ಮಲಿಕ್ ಪ್ರದರ್ಶಿಸಿರುವ ಅನುಮತಿ ಪತ್ರದಲ್ಲಿ ನನ್ನ ಹೆಸರು ಅಥವಾ ಸಹಿ ಎಲ್ಲಿಯೂ ಇಲ್ಲ. ಸಹಮತಕ್ಕೆ ಇದು ಪುರಾವೆಯಾಗಲು ಸಾಧ್ಯವಿಲ್ಲ ಎಂದಿದ್ದಾರೆ.

    ನಿಮ್ಮ ಉದ್ದೇಶಗಳ ಬಗ್ಗೆ ದೇಶದ ಜನರಿಗೆ ಸ್ಪಷ್ಟನೆ ಸಿಗುತ್ತಿದೆ. ಹೊಸ ಸಂಸತ್ ಉದ್ಘಾಟನೆ ಸಂದರ್ಭ ನೀವು ನಡೆಸಿರುವ ಪ್ರತಿಭಟನೆ ಮತ್ತು ಗಂಗಾ ನದಿಯಲ್ಲಿ ಪದಕಗಳನ್ನು ವಿಸರ್ಜಿಸುವ ಬೆದರಿಕೆ ಹಾಕಿದ್ದು ದೇಶಕ್ಕೆ ಮುಜುಗರ ಉಂಟುಮಾಡಿದೆ. ನೀವು ಕಾಂಗ್ರೆಸ್‌ನ ಕೈಗೊಂಬೆಗಳು ಎಂಬುದು ಈಗ ದೇಶದ ಜನರಿಗೆ ಮನದಟ್ಟಾಗುತ್ತಿದೆ. ನಿಮ್ಮ ನಿಜವಾದ ಉದ್ದೇಶ ಏನು ಎಂಬುದನ್ನು ಬಹಿರಂಗಪಡಿಸಬೇಕಾದ ಸಮಯ ಬಂದಿದೆ ಎಂದು ಬಬಿತಾ ಫೋಗಟ್ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಬಿಕ್ಕಟ್ಟಿನ ನಡುವೆ 5 ವರ್ಷಗಳ ಬಳಿಕ ಅಮೆರಿಕ ರಾಜ್ಯ ಕಾರ್ಯದರ್ಶಿ ಚೀನಾಗೆ ಮೊದಲ ಭೇಟಿ

  • ಸಮಸ್ಯೆ ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೇನೆ: ಪಟ್ಟು ಬಿಡದ ಸಾಕ್ಷಿ ಮಲಿಕ್

    ಸಮಸ್ಯೆ ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೇನೆ: ಪಟ್ಟು ಬಿಡದ ಸಾಕ್ಷಿ ಮಲಿಕ್

    ನವದೆಹಲಿ: ಸಮಸ್ಯೆ ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ (Asian Games) ಭಾಗವಹಿಸುತ್ತೇನೆ ಎಂದು ಲೈಂಗಿಕ ಪ್ರಕರಣದ ಆರೋಪ ಹೊತ್ತಿರುವ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಸಿಂಗ್ (Brij Bhushan Sharan Singh) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಲ್ಲಿ (Wrestlers) ಒಬ್ಬರಾದ ಸಾಕ್ಷಿ ಮಲಿಕ್ (Sakshi Malik) ಸ್ಪಷ್ಟಪಡಿಸಿದ್ದಾರೆ.

    ಪ್ರಕರಣದಲ್ಲಿ ಪ್ರತಿದಿನ ಆಗುತ್ತಿರುವ ಬೆಳವಣಿಗೆಯಿಂದ ಮಾನಸಿಕವಾಗಿ ಅನುಭವಿಸುತ್ತಿರುವ ಹಿಂಸೆಯನ್ನು ಯಾರೂ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಪೊಲೀಸರೊಂದಿಗೆ ಪ್ರತಿದಿನ ಈ ವಿಚಾರದ ಬಗ್ಗೆ ಮಾತನಾಡುತ್ತಿದ್ದೇವೆ. ಈ ವಿಚಾರ ಬಗೆಹರಿಯುವ ವರೆಗೂ ಏಷ್ಯನ್ ಗೇಮ್ಸ್‌ನಲ್ಲಿ ಯಾವ ತಯಾರಿಯನ್ನೂ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ದೇಶದ ಕೋಟ್ಯಂತರ ಜನ ಗಡ್ಡ ಬಿಟ್ಟಿದ್ದಾರೆ, ಅವರೆಲ್ಲ ಲಾಡೆನ್ ಆಗುತ್ತಾರಾ? – ಬಿಜೆಪಿಗೆ ಮನೋಜ್ ಝಾ ಪ್ರಶ್ನೆ

    ಕುಸ್ತಿಪಟು ಸಂಗೀತಾ ಫೋಗಟ್ ಅವರನ್ನು ಘಟನೆಯ ಮರುಸೃಷ್ಟಿಗಾಗಿ ಪೊಲೀಸರು ಶುಕ್ರವಾರ ಬ್ರಿಜ್ ಭೂಷಣ್ ನಿವಾಸಕ್ಕೂ ಕರೆದೊಯ್ದಿದ್ದರು. ಈ ವೇಳೆ ಲೈಂಗಿಕ ದೌರ್ಜನ್ಯ ನಡೆದ ಘಟನೆಯನ್ನು ನೆನಪಿಸಿಕೊಳ್ಳುವಂತೆ ಪೊಲೀಸರು ತಿಳಿಸಿದ್ದರು. ಅಲ್ಲದೇ ಅರ್ಧ ಗಂಟೆಗಳ ಕಾಲ ಕಿರುಕುಳ ಕುರಿತಾದ ಘಟನೆಯ ಮರುಸೃಷ್ಟಿ ಮಾಡಿ ವಾಪಾಸ್ ಆಗಿದ್ದರು. ಇದನ್ನೂ ಓದಿ: ಬೆಂಗ್ಳೂರಲ್ಲೂ ದೆಹಲಿ ಮಾದರಿಯ ಮರ್ಡರ್ – ಮಹಿಳೆಯನ್ನ ಕೊಂದು, ದೇಹ ಪೀಸ್ ಪೀಸ್ ಮಾಡಿದ ಹಂತಕರು

  • ಬ್ರಿಜ್‌ ಭೂಷಣ್‌ ತೆಗೆದು ಆ ಸ್ಥಾನಕ್ಕೆ ಮಹಿಳೆ ನೇಮಿಸಿ – ಅಮಿತ್‌ ಶಾಗೆ ಕುಸ್ತಿಪಟುಗಳ ಬೇಡಿಕೆ

    ಬ್ರಿಜ್‌ ಭೂಷಣ್‌ ತೆಗೆದು ಆ ಸ್ಥಾನಕ್ಕೆ ಮಹಿಳೆ ನೇಮಿಸಿ – ಅಮಿತ್‌ ಶಾಗೆ ಕುಸ್ತಿಪಟುಗಳ ಬೇಡಿಕೆ

    ನವದೆಹಲಿ: ಭಾರತ ಕುಸ್ತಿ ಫೆಡರೇಷನ್‌ (WFI) ಅಧ್ಯಕ್ಷ ಸ್ಥಾನಕ್ಕೆ ಮಹಿಳೆಯನ್ನು ನೇಮಿಸಿ. ಬ್ರಿಜ್‌ ಭೂಷಣ್‌ ಸಿಂಗ್‌ (Brij Bhushan Sharan Singh) ಕುಟುಂಬದ ಯಾವೊಬ್ಬ ಸದಸ್ಯರನ್ನೂ ಆ ಸ್ಥಾನಕ್ಕೆ ನೇಮಿಸಬೇಡಿ ಎಂದು ಕೇಂಗ್ರ ಗೃಹ ಸಚಿವ ಅಮಿತ್‌ ಶಾ (Amit Shah) ಮುಂದೆ ಪ್ರತಿಭಟನಾನಿರತ ಕುಸ್ತಿಪಟುಗಳು (Wrestlers) ಬೇಡಿಕೆ ಇಟ್ಟಿದ್ದಾರೆ.

    ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9 ರೊಳಗೆ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನಾನಿರತ ಕುಸ್ತಿಪಟುಗಳು ಈಚೆಗೆ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಅಪ್ರಾಪ್ತರು ಸೇರಿದಂತೆ ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬ್ರಿಜ್‌ ಭೂಷಣ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಅಮಿತ್‌ ಶಾ ಮುಂದೆ ಕುಸ್ತಿಪಟುಗಳು ಇಟ್ಟ ಬೇಡಿಕೆ ಏನೆಂಬುದು ಈಗ ವೈರಲ್‌ ಆಗಿದೆ. ಇದನ್ನೂ ಓದಿ: ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ – ಸಾಕ್ಷಿ ಮಲಿಕ್

    ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್‌ಐಆರ್‌ ದಾಖಲಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣವೊಂದನ್ನು ದಾಖಲಿಸಲಾಗಿದೆ.

    ಗೃಹ ಮಂತ್ರಿ ಅಮಿತ್‌ ಶಾ ಅವರ ಭೇಟಿ ಫಲಪ್ರದವಾಗಿಲ್ಲ. ಸಚಿವರಿಂದ ಯಾವುದೇ ಭರವಸೆ ಸಿಕ್ಕಿಲ್ಲ ಎಂದು ಕುಸ್ತಿಪಟು ಸಾಕ್ಷಿ ಮಲಿಕ್‌ ಪತಿ ಸತ್ಯವ್ರತ್‌ ಕಡಿಯನ್‌ ತಿಳಿಸಿದ್ದರು. ನ್ಯಾಯ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯಲ್ಲ ಎಂದು ಸಾಕ್ಷಿ ಮಲಿಕ್‌ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

    ಈಗ ಮತ್ತೆ ಕುಸ್ತಿಪಟುಗಳನ್ನು ಕೇಂದ್ರ ಕ್ರೀಡಾ ಸಚಿವರು ಮಾತುಕತೆಗೆ ಕರೆದಿದ್ದಾರೆ. ಸಚಿವರ ಮನೆಗೆ ಪ್ರತಿಭಟನಾನಿರತರು ತೆರಳಿದ್ದಾರೆ.

    ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ವಿರುದ್ಧ ಕುಸ್ತಿಪಟುಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಡಬ್ಲ್ಯೂಎಫ್‌ಐ ಅಧ್ಯಕ್ಷ ಸ್ಥಾನದಿಂದ ಬ್ರಿಜ್‌ ಭೂಷಣ್‌ ತೆಗೆದುಹಾಕಿ, ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ ಕುಸ್ತಿಪಟುಗಳ ಆರೋಪವನ್ನು ಬ್ರಿಜ್‌ ಭೂಷಣ್‌ ತಳ್ಳಿಹಾಕಿದ್ದಾರೆ.

  • ಕುಸ್ತಿಪಟುಗಳ ಮೇಲೆ ಅತ್ಯಾಚಾರವಾದರೆ ದೇಶದ ಮೇಲೆ ಅತ್ಯಾಚಾರವಾದಂತೆ: ನಟ ಕಿಶೋರ್

    ಕುಸ್ತಿಪಟುಗಳ ಮೇಲೆ ಅತ್ಯಾಚಾರವಾದರೆ ದೇಶದ ಮೇಲೆ ಅತ್ಯಾಚಾರವಾದಂತೆ: ನಟ ಕಿಶೋರ್

    ಬೆಂಗಳೂರು: ಕಳೆದ ಹಲವು ದಿನಗಳಿಂದ ಭಾರತದ ಕುಸ್ತಿಪಟುಗಳು (Wrestlers) ಭಾರತೀಯ ಕುಸ್ತಿ ಫೆಡರೇಷನ್ (WFI) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಕುಸ್ತಿಪಟುಗಳ ಬೆಂಬಲಕ್ಕೆ ನಿಂತಿರುವ ನಟ ಕಿಶೋರ್ (Kishore) ಅವರ ಮೇಲೆ ಅತ್ಯಾಚಾರವಾದರೆ ದೇಶದ ಮೇಲೆ ಅತ್ಯಾಚಾರವಾದಂತೆ ಎಂದು ಹೇಳಿದ್ದಾರೆ.

    ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಕಿಶೋರ್, ಅಂದು ನಮ್ಮ ಕುಸ್ತಿ ಪಟುಗಳು ಗೆದ್ದಾಗ ಭಾರತ ಗೆದ್ದಿದ್ದು ನಿಜವಾದರೆ, ಇಂದು ಅವರ ಮೇಲೆ ಅತ್ಯಾಚಾರವಾದಾಗ ಭಾರತದ ಮೇಲೆ ಅತ್ಯಾಚಾರವಾಗುತ್ತದೆ. ಇಂದು ಅವರು ಸೋತರೆ ಭಾರತ ಸೋಲುತ್ತದೆ. ದೇಶದ ಗೌರವ ಹೆಚ್ಚಾಗುವುದು ಬೇರೆ ದೇಶದಲ್ಲೂ ನಮ್ಮ ಹಣ ಸುರಿದು ಜನರನ್ನು ಬಾಡಿಗೆಗೆ ತಂದು ಮಾಡುವ ರಾಜಕೀಯ ರ‍್ಯಾಲಿಯ ನಾಟಕಗಳಿಂದಲ್ಲ. ಜೀವ ತೇಯ್ದು ಬೆವರು ಹರಿಸಿ ಈ ಪಟುಗಳು ತಂದ ಮೆಡಲ್‌ಗಳಿಂದ ಎಂದು ಕಟುವಾಗಿ ಟೀಕಿಸಿದ್ದಾರೆ. ಇದನ್ನೂ ಓದಿ: ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ : ಕುಸ್ತಿಪಟುಗಳಿಗೆ ಸಿಂಗ್‌ ಸವಾಲ್‌

    ಒಲಿಂಪಿಕ್ಸ್ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಕ್ರೀಡಾಪಟುಗಳು ಈ ವರ್ಷದ ಜನವರಿಯಲ್ಲಿ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ಮಹಿಳಾ ಕ್ರೀಡಾಪಟುಗಳಿಗೆ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಆದರೆ ಇದುವರೆಗೆ ತನಿಖೆಯಲ್ಲಿ ಸಿಂಗ್ ಅವರನ್ನು ಬಂಧಿಸಲು ಪೊಲೀಸರಿಗೆ ಸಾಕಷ್ಟು ಪುರಾವೆಗಳು ಸಿಕ್ಕಿಲ್ಲ.

    ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿರುವ ಬ್ರಿಜ್ ಭೂಷಣ್ ಸಿಂಗ್, ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮೇ ತಿಂಗಳಿನಲ್ಲಿ 1.57 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ – ಕರ್ನಾಟಕದ ಪಾಲು ಎಷ್ಟು?

  • ಗಂಗಾ ನದಿಯಲ್ಲಿ ಪದಕ ವಿಸರ್ಜಿಸಲು ಮುಂದಾದ ಕುಸ್ತಿಪಟುಗಳನ್ನು ತಡೆದ ರೈತ ಹೋರಾಟಗಾರ

    ಗಂಗಾ ನದಿಯಲ್ಲಿ ಪದಕ ವಿಸರ್ಜಿಸಲು ಮುಂದಾದ ಕುಸ್ತಿಪಟುಗಳನ್ನು ತಡೆದ ರೈತ ಹೋರಾಟಗಾರ

    ನವದೆಹಲಿ: ಸರ್ಕಾರ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ ಹಾಗೂ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಸಿಂಗ್ (Brij Bhushan Sharan Singh) ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಬೇಸತ್ತ ಕುಸ್ತಿಪಟುಗಳು (Wrestlers) ತಮ್ಮ ಪದಕಗಳನ್ನು (Medals) ಗಂಗಾ ನದಿಯಲ್ಲಿ (Ganga River) ವಿಸರ್ಜಿಸಲು ಮುಂದಾಗಿದ್ದರು. ಕುಸ್ತಿಪಟುಗಳ ಈ ನಡೆಯನ್ನು ಸದ್ಯ ತಡೆಯಲಾಗಿದ್ದು, ಸಿಂಗ್ ಬಂಧನಕ್ಕೆ 5 ದಿನಗಳ ಕಾಲಾವಕಾಶ ನೀಡಲು ಒಪ್ಪಿಕೊಂಡಿದ್ದಾರೆ.

    ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಹೊರಿಸಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ತಮ್ಮ ಪದಕಗಳನ್ನು ಸಂಜೆ 6 ಗಂಟೆಗೆ ಹರಿದ್ವಾರದ ಬಳಿ ಗಂಗಾ ನದಿಯಲ್ಲಿ ಎಸೆಯುವುದಾಗಿ ಪ್ರಕಟಿಸಿದ್ದರು. ಗಂಗೆಯಲ್ಲಿ ಪದಕಗಳನ್ನು ವಿಸರ್ಜಿಸಲು ಮುಂದಾದಾಗ ರೈತ ಹೋರಾಟಗಾರ ನರೇಶ್ ಟಿಕಾಯತ್ ಕುಸ್ತಿಪಟುಗಳ ಮೆಡಲ್‌ಗಳನ್ನು ಪಡೆದುಕೊಂಡಿದ್ದಾರೆ.

    ಬಳಿಕ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿದ ನರೇಶ್ ಟಿಕಾಯತ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರೆ. ಮುಂದಿನ 5 ದಿನಗಳೊಳಗೆ ಬ್ರಿಜ್ ಭೂಷಣ್ ಬಂಧನವಾಗದಿದ್ದರೆ ಮತ್ತೆ ಹರಿದ್ವಾರಕ್ಕೆ ಬಂದು ಪದಕಗಳನ್ನು ವಿಸರ್ಜಿಸುವುದಾಗಿ ಕುಸ್ತಿಪಟುಗಳು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ Vs ಡಿಎಂಕೆ – ಬಿಜೆಪಿ ಕಾರ್ಯಕರ್ತ ಜಡೇಜಾ ಆಟದಿಂದ ಚೆನ್ನೈಗೆ ಜಯ ಎಂದ ಅಣ್ಣಾಮಲೈ

    ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಹಲವು ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದರು. ನೂತನ ಸಂಸತ್ ಭವನದತ್ತವೂ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದ್ದರು. ಇದನ್ನೂ ಓದಿ: ಮನೆಗೆ ಅತ್ತೆಯೇ ಸಿನಿಯರ್, ಅತ್ತೆ ಒಪ್ಪಿದ್ರಷ್ಟೇ ಸೊಸೆಗೆ 2,000 – ಲಕ್ಷ್ಮಿ ಹೆಬ್ಬಾಳ್ಕರ್