Tag: ಬ್ರಿಟನ್ ಸರ್ಕಾರ

  • ಹಾದಿ ಬೀದಿಯಲ್ಲಿ ಹುಡುಗಿಯರನ್ನ ರೇಗಿಸಿದ್ರೆ 2 ವರ್ಷ ಜೈಲು..!

    ಹಾದಿ ಬೀದಿಯಲ್ಲಿ ಹುಡುಗಿಯರನ್ನ ರೇಗಿಸಿದ್ರೆ 2 ವರ್ಷ ಜೈಲು..!

    ಲಂಡನ್: ಇನ್ಮುಂದೆ ಹಾದಿ-ಬೀದಿಗಳಲ್ಲಿ ಹುಡುಗಿಯರು, ಮಹಿಳೆಯರನ್ನ (Women) ರೇಗಿಸಿದ್ರೆ, ಅಣಕಿಸುವುದು, ರಸ್ತೆ ಅಡ್ಡಗಟ್ಟುವುದು ಅಥವಾ ಲೈಂಗಿಕ ಕಿರುಕುಳ ನೀಡಿದ್ರೆ 2 ವರ್ಷದ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಬ್ರಿಟನ್ (UK) ಗೃಹ ಸಚಿವಾಲಯ ಹೇಳಿದೆ.

    ಮಹಿಳೆಯರು ಹಾಗೂ ಹುಡುಗಿಯರಿಗೆ ಕಿರಕುಳ ನೀಡುವುದು ಬೆಂಬಲಿತ ಯೋಜನೆಗಳ ಅಡಿಯಲ್ಲಿ ಅಪರಾಧವಾಗುತ್ತದೆ ಅಂತಹವರಿಗೆ 2 ವರ್ಷ ಜೈಲುಶಿಕ್ಷೆ ವಿಧಿಸಲಾಗುವುದು. ಪ್ರತಿಯೊಬ್ಬ ಮಹಿಳೆಯೂ ತಮ್ಮ ಬೀದಿಗಳಲ್ಲಿ ನಡೆಯಲು ಅವರಿಗೆ ಸುರಕ್ಷಿತವಾಗಿದೆ ಅನ್ನೋ ಭಾವನೆ ಬರಬೇಕು. ಅದಕ್ಕಾಗಿ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಗೃಹಚಿವಾಲಯದ ಸುಯೆಲ್ಲಾ ಬ್ರಾವರ್ಮನ್ (Suella Braverman) ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ವ್ಯವಸ್ಥೆ ಸಾಂವಿಧಾನಿಕರಣಗೊಳಿಸಲು ಒತ್ತಾಯ – ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ

    ಲೈಂಗಿಕ ಕಿರುಕುಳವು ಈಗಾಗಲೇ ಕಾನೂನುಬಾಹಿರವಾಗಿದೆ. ಇದರ ಹೊರತಾಗಿಯೂ ಹಾದಿ, ಬೀದಿಗಳಲ್ಲಿ ಕಿರಕುಳ ನೀಡುತ್ತಿರುವುದು ಗಮನಕ್ಕೆ ಬರುತ್ತಿದೆ. ಈ ಹೊಸ ಕ್ರಮ ಕೈಗೊಳ್ಳುವುದರಿಂದ ಸೌರ್ವಜನಿಕರು ಹಾಗೂ ಮಹಿಳೆಯರು ಪೊಲೀಸರಿಗೆ (Police) ಬೇಗನೇ ದೂರು ನೀಡಲು ಉತ್ತೇಜಿಸುತ್ತದೆ ಎಂದು ಭಾವಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಗರ್ಭಿಣಿ, ವೃದ್ಧನ ಮೇಲೆ ಕಾರು ಹರಿಸಿದ ಭಾರತೀಯ ಮೂಲದ ಚಾಲಕನಿಗೆ 16 ವರ್ಷ ಜೈಲು ಶಿಕ್ಷೆ

    ಸಮೀಕ್ಷೆಯ ಪ್ರಕಾರ ದೇಶದಲ್ಲಿ ರಾತ್ರಿವೇಳೆಯಲ್ಲಿ ಒಂಟಿಯಾಗಿ ಓಡಾಡುವ ಮೂರನೇ ಎರಡರಷ್ಟು ಮಹಿಳೆಯರು ಸುರಕ್ಷಿತ ಎಂದು ಭಾವಿಸುತ್ತಿಲ್ಲ. ಕ್ರೌನ್ ಪ್ರಾಸಿಕ್ಯೂಷನ್ ಸರ್ವಿಸ್ (CPS) ಪ್ರಕಾರ, 34 ವರ್ಷದೊಳಗಿನ ಮಹಿಳೆಯರು ಲೈಂಗಿಕ ಅಪರಾಧಗಳಿಗೆ ಗುರಿಯಾಗುವ ಸಾಧ್ಯತೆ ಇದೆ. ಆದರೂ ಪ್ರಕರಣ ವರದಿ ಮಾಡುವ ಸಾಧ್ಯತೆಗಳು ಕಡಿಮೆಯಿವೆ. ಆದ್ದರಿಂದ ಹಾದಿ, ಬೀದಿಗಳಲ್ಲಿ ಕಂಡುಬರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಮಟ್ಟಹಾಕುವ ನಿಟ್ಟಿನಲ್ಲಿ ಸರ್ಕಾರ ಹೊಸ ಕಾನೂನು ನಿಯಮವನ್ನು ಜಾರಿಗೊಳಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ಬಿಕ್ಕಟ್ಟಿನ ನಡುವೆಯೂ ಹೊಸ ಆಶಾಕಿರಣ- ಬ್ರಿಟನ್ ಸರ್ಕಾರದಿಂದ ರಾಜ್ಯದ 1,000 ನರ್ಸುಗಳಿಗೆ ಉದ್ಯೋಗ

    ಕೋವಿಡ್ ಬಿಕ್ಕಟ್ಟಿನ ನಡುವೆಯೂ ಹೊಸ ಆಶಾಕಿರಣ- ಬ್ರಿಟನ್ ಸರ್ಕಾರದಿಂದ ರಾಜ್ಯದ 1,000 ನರ್ಸುಗಳಿಗೆ ಉದ್ಯೋಗ

    – ವಾರ್ಷಿಕ 20 ಲಕ್ಷ ರೂ. ಪ್ಯಾಕೇಜ್, ಕೌಶಲ್ಯಾಭಿವೃದ್ಧಿ ನಿಗಮದ ಜತೆ ಇಂಗ್ಲೆಂಡ್ ಒಪ್ಪಂದ

    ಬೆಂಗಳೂರು: ಇಡೀ ರಾಜ್ಯವು ಕೊರೊನ ಹೊಸ ಅಲೆಯ ಆತಂಕದಲ್ಲಿದ್ದರೆ ಕೌಶಲ್ಯಾವೃದ್ಧಿ ಖಾತೆ ಮಂತ್ರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.

    ಸದ್ಯಕ್ಕೆ ನಮ್ಮ ರಾಜ್ಯದ ನರ್ಸುಗಳಿಗೆ ವಿದೇಶಗಳಲ್ಲಿ ಅಪಾರ ಬೇಡಿಕೆ ಇದ್ದು, ಯುರೋಪ್ ಸೇರಿದಂತೆ ಅನೇಕ ದೇಶಗಳ ಆಸ್ಪತ್ರೆಗಳು ಅವರಿಗೆ ಉದ್ಯೋಗಾವಕಾಶ ನೀಡಲು ಮುಂದೆ ಬಂದಿವೆ. ಈ ನಿಟ್ಟಿನಲ್ಲಿ ಮೊದಲಿಗೆ ಬ್ರಿಟನ್ ಸರ್ಕಾರ 1,000 ಮಂದಿ ನರ್ಸುಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟು ಮಂದಿ ಶುಶ್ರೂಶಕಿಯರನ್ನು ಆ ದೇಶಕ್ಕೆ ಕಳಿಸಲಾಗುತ್ತಿದೆ ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಗುರುವಾರ ಈ ಬಗ್ಗೆ ಸಂಪೂರ್ಣ ವಿವರಗಳನ್ನು ಉಪಮುಖ್ಯಮಂತ್ರಿಗಳು ನೀಡಿದರು.

    * ಬ್ರಿಟನ್‍ಗೆ ಕಳಿಸಲಾಗುತ್ತಿರುವ ಶುಶ್ರೂಶಕಿಯರಿಗೆ ಸಂವಹನ ಕಲೆ ಸೇರಿದಂತೆ ಅವರ ವೃತ್ತಿಗೆ ಸಂಬಂಧಿಸಿದ ಎಲ್ಲ ರೀತಿಯ ಕುಶಲ ತರಬೇತಿಯನ್ನು ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮ (ಕೆವಿಟಿಎಸ್‍ಡಿಸಿ) ವತಿಯಿಂದ ನೀಡಲಾಗುತ್ತದೆ. ಬ್ರಿಟನ್ ಸರ್ಕಾರ ಈ ನರ್ಸುಗಳಿಗೆ ವಾರ್ಷಿಕ ತಲಾ 20 ಲಕ್ಷ ರೂ. ಪ್ಯಾಕೇಜ್ ನಿಗದಿ ಮಾಡಿದೆ.

    * ಈ ಉದ್ದೇಶಕ್ಕಾಗಿ ಅರ್ಹ ಹಾಗೂ ನುರಿತ ಶುಶ್ರೂಶಕಿಯರನ್ನು ನೇಮಕಾತಿ ಮಾಡಿಕೊಳ್ಳಲು ಆ ದೇಶದ ಹೆಲ್ತ್ ಎಜ್ಯೂಕೇಶನ್ ಇಂಗ್ಲೆಂಡ್ (ಎಚ್‍ಇಇ), ನ್ಯಾಷನಲ್ ಹೆಲ್ತ್ ಸರ್ವೀಸಸ್ (ಎನ್‍ಎಚ್‍ಎಸ್) ಸಂಸ್ಥೆಗಳ ಜತೆ ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆ ಒಪ್ಪಂದ ಮಾಡಿಕೊಂಡಿದೆ.

    * ವಿದೇಶದಲ್ಲಿ ಉದ್ಯೋಗ ಕೊಡಿಸುವ ಸಲುವಾಗಿ ಸರ್ಕಾರವೇ ಅಂತಾರಾಷ್ಟ್ರೀಯ ವಲಸೆ ಕೇಂದ್ರ ಸ್ಥಾಪಿಸಿದೆ. ಇದರ ಮೂಲಕ ಇಷ್ಟೂ ಶುಶ್ರೂಶಕಿಯರನ್ನು ಕಳಿಸಲಾಗುತ್ತಿದ್ದು, ಅವರ ಜತೆ ನಿರಂತರವಾಗಿ ಈ ಕೇಂದ್ರವು ಸಂಪರ್ಕದಲ್ಲಿರುತ್ತದೆ ಹಾಗೂ ಅವರ ಕುಂದುಕೊರತೆಗಳ ಬಗ್ಗೆ ನಿಗಾ ಇರಿಸುತ್ತದೆ. ಯಾವುದೇ ಸಮಸ್ಯೆ ಅಥವಾ ದೂರು ಇದ್ದರೆ ಬ್ರಿಟನ್‍ನಿಂದಲೇ ಇಲ್ಲಿಗೆ ತಿಳಿಸಬಹುದು. ಕೂಡಲೇ ಅವರಿಗೆ ಸೂಕ್ತ ಸಹಕಾರ ಒದಗಿಸಲಾಗುವುದು.

    * ಸದ್ಯಕ್ಕೆ ರಾಜ್ಯದಲ್ಲಿ ಕುಶಲತೆಯುಳ್ಳ ಮಾನವ ಸಂಪನ್ಮೂಲ ವಿಪುಲವಾಗಿದ್ದು, ಇಂಥ ನಿರುದ್ಯೋಗಿ ಯುವಜನರಿಗೆ ಜಾಗತಿಕ ಮಟ್ಟದಲ್ಲಿ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಈ ವಲಸೆ ಕೇಂದ್ರವನ್ನು ಸ್ಥಾಪಿಸಲಾಗಿದೆ.

    ಸಾಂದರ್ಭಿಕ ಚಿತ್ರ

    * ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯು ವಿದೇಶಗಳಿಗೆ ಉದ್ಯೋಗಕ್ಕಾಗಿ ತೆರಳುವ ಯುವಜನರಿಗೆ ಸೂಕ್ತ ಮಾರ್ಗದರ್ಶನ, ತಾಂತ್ರಿಕ ಬೆಂಬಲ ಹಾಗೂ ಪೂರಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪಬ್ಲಿಕ್ ಅಫೇಯರ್ಸ್ ಸೆಂಟರ್ ಜಗೆ ಒಡಂಬಡಿಕೆ ಮಾಡಿಕೊಂಡಿದೆ.

    * ಶುಶ್ರೂಶಕಿಯರ ಜತೆಗೆ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮವು (ಕೆವಿಟಿಎಸ್‍ಡಿಸಿ) ಕುವೈತ್‍ನ ಅರೆ ಸರಕಾರಿ ಸಂಸ್ಥೆಯಾದ ಅಲ್-ದುರಾ ಮ್ಯಾನ್‍ಪವರ್ ಸಪ್ಲೈ (Al-Durra Manpower Supply) ಜತೆ ಇನ್ನೊಂದು ಒಪ್ಪಂದವನ್ನು ಮಾಡಿಕೊಂಡಿದೆ. ಇದರ ಪ್ರಕಾರ ಕುವೈತ್‍ನಲ್ಲಿ ರಾಜ್ಯದ ಅನುಭವಿ ವಾಹನ ಚಾಲಕರು, ಹೌಸ್ ಬಾಯ್ಸ್ ಹಾಗೂ ಅಡುಗೆ ಮಾಡುವವರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ.

    * ಕೆವಿಟಿಎಸ್‍ಡಿಸಿ ಮತ್ತು ಕೆನಡಾ ಸರಕಾರದ ನಡುವೆ ಹೊಸ ಒಪ್ಪಂದ ಮಾತುಕತೆ ಪ್ರಗತಿಯಲ್ಲಿದ್ದು, ಅದರ ಪ್ರಕಾರ ಐಟಿ, ವಿಡಿಯೋ ಗೇಮ್ ಮತ್ತು ಎಐ (ಆರ್ಟಿಫಿಶಿಯಲ್ ಇಂಟಲಿಜೆನ್ಸ್) ವಲಯಕ್ಕೆ ಸಂಬಂಧಿಸಿದ ಅರ್ಹ ಅಭ್ಯರ್ಥಿಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು. ಕ್ಯುಬೆಕ್‍ನ ಮಾಂಟ್ರಿಯಲ್‍ಗೆ ಉದ್ಯೋಗ ಮತ್ತು ವಲಸೆಗೆ ಅನುಕೂಲವಾಗುವಂತೆ ಇಲಾಖೆಯು ಈ ಒಪ್ಪಂದ ಮಾಡಿಕೊಳ್ಳುವ ಕಾರ್ಯದಲ್ಲಿ ಹೆಜ್ಜೆ ಇಟ್ಟಿದೆ.

    * ಕೆವಿಟಿಎಸ್‍ಡಿಸಿ ಮೂಲಕ ವಿದೇಶದಲ್ಲಿ ಸೂಕ್ತ ವಿದೇಶಿ ಉದ್ಯೋಗದಾತರನ್ನು ಗುರುತಿಸುವ, ಸಂಪರ್ಕವನ್ನು ಸ್ಥಾಪಿಸಲು ಮತ್ತು ಕರ್ನಾಟಕ ರಾಜ್ಯದಿಂದ ಸುರಕ್ಷಿತ ವಲಸೆ ಕಾರ್ಯ ವಿಧಾನವನ್ನು ಉತ್ತೇಜಿಸಲು ವಿವಿಧ ದೇಶಗಳಲ್ಲಿನ ಕನ್ನಡ ಸಂಘಗಳ ಜತೆ ಸಂಪರ್ಕದಲ್ಲಿದೆ.