Tag: ಭಗವಂತ್‍ಮಾನ್

  • 26,454 ಹುದ್ದೆಗಳ ನೇಮಕಾತಿಗೆ ಪಂಜಾಬ್ ಸರ್ಕಾರ ಅನುಮೋದನೆ

    26,454 ಹುದ್ದೆಗಳ ನೇಮಕಾತಿಗೆ ಪಂಜಾಬ್ ಸರ್ಕಾರ ಅನುಮೋದನೆ

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿಂದು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 26,454 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಯಿತು.

    ಈಚೆಗೆ ನಡೆದ ವಿಧಾನಸಭೆ ಚುನಾವಣೆಲ್ಲಿ ಪಂಜಾಬ್ ಗೆಲುವು ಸಾಧಿಸಿದ ಎಎಪಿ ಪಕ್ಷವು ಖಾಲಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿ ಭರವಸೆ ನೀಡಿತ್ತು. ಅದರಂತೆ ಇಂದು ವಿವಿಧ ಇಲಾಖೆಗಳಲ್ಲಿ, ವಿವಿಧ ಹಂತಗಳಲ್ಲಿರುವ 26,454 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಿದ್ದು, ಹುದ್ದೆಗಳ ಮಾನದಂಡ ಮತ್ತು ವಿವರಗಳನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ನಾನು ಬಾಬರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದೆ, ಶಿವಸೇನೆ ನಾಯಕರು ಯಾರೂ ಇರಲಿಲ್ಲ : ಫಡ್ನವೀಸ್

    BhagwantMann

    ಅಲ್ಲದೆ, ಸಿಎಂ ಭಗವಂತ್ ಮಾನ್ ಈ ಹಿಂದೆಯೇ ಘೋಷಿಸಿದಂತೆ ಒಬ್ಬ ಶಾಸಕ ಒಂದು ಪಿಂಚಣಿ ಯೋಜನೆಗೂ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಮಾಜಿ ಶಾಸಕರಿಗೆ ಪಿಂಚಣಿ ನೀಡಲು ರಾಜ್ಯ ಸರ್ಕಾರ ಹೊಸ ನೀತಿಯನ್ನು ತರಲಿದೆ ಎಂದು ಸಭೆ ಹೇಳಿದೆ.

    ಮನೆ ಬಾಗಿಲಿಗೇ ಪಡಿತರ: ಇದೇ ವೇಳೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ರಾಜ್ಯದ 40 ಲಕ್ಷ ಮನೆಗಳ 1.5 ಕೋಟಿ ಫಲಾನುಭವಿಗಳಿಗೆ ತಿಂಗಳಿಗೆ 5 ಕೆಜಿ ಗೋಧಿ ಅಥವಾ ಗೋಧಿ ಹಿಟ್ಟನ್ನು ಮನೆ ಬಾಗಿಲಿಗೆ ತಲುಪಿಸಲು ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿತು. ಇದನ್ನೂ ಓದಿ: ಬಾಬರಿ ಮಸೀದಿ ಕೆಡವಿದಾಗ ನೀವು ಓಡಿಹೋಗಿದ್ದಿರಿ: ಬಿಜೆಪಿಗೆ ಉದ್ಧವ್‌ ಠಾಕ್ರೆ ತರಾಟೆ

    Bhagwant Mann

    ಒಬ್ಬ ಶಾಸಕ-ಒಂದು ಪಿಂಚಣಿ: ಭಗವಂತ್ ಮಾನ್ ಅಧಿಕಾರ ವಹಿಸಿಕೊಂಡ ಕೆಲ ದಿನಗಳಲ್ಲೇ, ಪಂಜಾಬ್ ಮಾಜಿ ಶಾಸಕರು 2 ಬಾರಿ, 5 ಬಾರಿ ಅಥವಾ ಹತ್ತು ಬಾರಿ ಗೆದ್ದಿದ್ದರೂ ಅವರು ಇನ್ನು ಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಅವರು ಸಲ್ಲಿಸಿದ್ದ ಸೇವೆಗೆ ಪ್ರತಿ ಅವಧಿಗೂ ಪಿಂಚಣಿ ಪಡೆಯುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುವುದು. ಇದರಿಂದ ಉಳಿತಾಯವಾಗುವ ಹಣವನ್ನು ಜನರ ಕಲ್ಯಾಣಕ್ಕೆ ವಿನಿಯೋಗಿಸಲಾಗುವುದು ಎಂದು ಹೇಳಿದ್ದರು. ಇದನ್ನೂ ಓದಿ: ಎರಡೂವರೆ ಗಂಟೆ ಸಭೆ – ರಾಜ್ಯದಲ್ಲೂ ಯುವ ಮುಖಗಳಿಗೆ ಮಣೆ?

    Bhagwant Mann

    ಚುನಾವಣೆಯಲ್ಲಿ ಸೋತರೂ ಕೆಲವರು 3.50 ರಿಂದ 5 ಲಕ್ಷ ರೂ. ವರೆಗೂ ಪಿಂಚಣಿ ಪಡೆಯುತ್ತಿದ್ದಾರೆ. ಲಾಲ್‌ಸಿಂಗ್, ಸರ್ವಾನ್‌ಸಿಂಗ್ ಫಿಲೌ ಹಾಗೂ ರಾಜಿಂದರ್ ಕೌರ್ ಭಟ್ಟಾಲ್ ತಿಂಗಳಿಗೆ 3.55 ಲಕ್ಷ ಪಿಂಚಣಿ ಪಡೆಯುತ್ತಿದ್ದಾರೆ. ರವಿಂದರ್ ಸಿಂಗ್, ಬೈಲ್ವಿಂದರ್ ಸಿಂಗ್ 2.75 ಲಕ್ಷ ಹಾಗೂ ಅಕಾಲಿ ದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ 5 ಲಕ್ಷ ಪಿಂಚಣಿ ಪಡೆಯುತ್ತಿದ್ದಾರೆ. ಇದರಿಂದ ಬೊಕ್ಕಸಕ್ಕೆ ಕೋಟ್ಯಂತರ ರೂ. ಆರ್ಥಿಕ ಹೊರೆಯಾಗುತ್ತಿದೆ ಎಂಬುದನ್ನು ಉಲ್ಲೇಖಿಸಿದ್ದರು.

  • ಮದ್ಯ ಸೇವಿಸಿ ಗುರುದ್ವಾರ ಪ್ರವೇಶಿಸಿದ ಆರೋಪ- ಪಂಜಾಬ್ ಸಿಎಂ ವಿರುದ್ಧ ದೂರು

    ಮದ್ಯ ಸೇವಿಸಿ ಗುರುದ್ವಾರ ಪ್ರವೇಶಿಸಿದ ಆರೋಪ- ಪಂಜಾಬ್ ಸಿಎಂ ವಿರುದ್ಧ ದೂರು

    ಚಂಡೀಗಢ: ಮದ್ಯ ಸೇವಿಸಿ ಗುರುದ್ವಾರಕ್ಕೆ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ತಜೀಂದ್ರಸಿಂಗ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ದೂರು ದಾಖಲಿಸಿದ್ದಾರೆ.

    ಅವರು ತಮ್ಮ ದೂರಿನ ಬಗ್ಗೆ ಕ್ರಮ ಕೈಗೊಳ್ಳುವಂತೆ ಪಂಜಾಬ್ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದ್ದಾರೆ. ದೂರಿನ ಸ್ಕ್ರೀನ್‌ಶಾಟ್‌  ಅನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಮಡಿದ್ದಾರೆ. ಭಗವಂತ್ ಮಾನ್ ಅವರಿಗೂ ಟ್ಯಾಗ್ ಮಾಡಿದ್ದು, ನನ್ನ ದೂರಿನ ಬಗ್ಗೆ ಕ್ರಮ ಕೈಗೊಳ್ಳುವಂತೆ ವಿನಂತಿಸುತ್ತೇನೆ ಎಂದು ಪಂಜಾಬ್ ಡಿಜಿಪಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ ಸೋಲಿನ ಬಳಿಕ ಎಚ್ಚೆತ್ತ ಕಾಂಗ್ರೆಸ್ – ಗುಜರಾತ್ ಎಲೆಕ್ಷನ್ ಮೇಲೆ ಕಣ್ಣು

    ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿಯು (SGPC) ಸಹ ಪಂಜಾಬ್ ಸಿಎಂ ಭಗವಂತ್ ಮಾನ್ ಬೈಸಾಖಿ ಆಚರಣೆ ಸಂದರ್ಭದಲ್ಲಿ ತಖ್ತ್ ದಮದಾಮಾ ಸಾಹಿಬ್ ಗುರುದ್ವಾರಕ್ಕೆ ಕುಡಿದ ಸ್ಥಿತಿಯಲ್ಲಿ ಪ್ರವೇಶಿಸಿದ್ದಾರೆ ಎಂದು ಆರೋಪಿಸಿತ್ತು. ಇದಕ್ಕಾಗಿ ಮಾನ್ ಕ್ಷಮೆಯಾಚಿಸಬೇಕು ಎಂದೂ ಸಮಿತಿ ಒತ್ತಾಯಿಸಿತ್ತು.

  • ಹಿಮಾಚಲ ಪ್ರದೇಶದಲ್ಲಿ ಭ್ರಷ್ಟಾಚಾರ ಕಿತ್ತೊಗೆಯುವ ಸಮಯ ಬಂದಿದೆ: ಕೇಜ್ರಿವಾಲ್

    ಹಿಮಾಚಲ ಪ್ರದೇಶದಲ್ಲಿ ಭ್ರಷ್ಟಾಚಾರ ಕಿತ್ತೊಗೆಯುವ ಸಮಯ ಬಂದಿದೆ: ಕೇಜ್ರಿವಾಲ್

    ಶಿಮ್ಲಾ(ಹಿಮಾಚಲ ಪ್ರದೇಶ): ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಹಿಮಾಚಲ ಪ್ರದೇಶದ ಮಂಡಿಯಲ್ಲಿಂದು `ಮಿಷನ್ ಹಿಮಾಚಲ್’ ರೋಡ್ ಶೋ ನಡೆಸಿದರು.

    ಈಚೆಗಷ್ಟೇ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ನಂತರ ಆಮ್ ಆದ್ಮಿ ಪಕ್ಷವು ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಬಯಸುತ್ತಿದ್ದು, ಹಿಮಾಚಲ ಪ್ರದೇಶದತ್ತ ಚಿತ್ತ ಹಾಯಿಸಿದೆ. ಇದನ್ನೂ ಓದಿ: ತರಗತಿಯಲ್ಲಿ ಹಿಂದೂ ಪುರಾಣಗಳಲ್ಲಿನ ʼಅತ್ಯಾಚಾರʼ ಉಲ್ಲೇಖಿಸಿ ಪಾಠ- ಮುಸ್ಲಿಂ ವಿವಿಯಿಂದ ಪ್ರಾಧ್ಯಾಪಕ ಸಸ್ಪೆಂಡ್‌

    AAP 01

    ರೋಡ್‌ಶೋ ವೇಳೆ ಮಾತನಾಡಿದ ಕೇಜ್ರಿವಾಲ್, ಮೊದಲು ನಾವು ದೆಹಲಿಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿದೆವು. ನಂತರ ಪಂಜಾಬ್‌ನಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದೆವು. ಇದೀಗ ಹಿಮಾಚಲ ಪ್ರದೇಶದಿಂದ ಭ್ರಷ್ಟಾಚಾರ ಕಿತ್ತೊಗೆಯುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

    ಈ ವರ್ಷಾಂತ್ಯದಲ್ಲಿ ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಎಪಿ 92 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇಲ್ಲಿಯೂ ಗೆದ್ದು ಹಿಮಾಚಲ ಪ್ರದೇಶದಿಂದ ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತುಹಾಕುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಜನಕಲ್ಯಾಣ ಯೋಜನೆ ರೂಪಿಸುವಾಗ ಬಜೆಟ್ ಮಿತಿಯಿರಲಿ: ಸುಪ್ರೀಂಕೋರ್ಟ್

    ನಾವು ಸಾಮಾನ್ಯ ಜನರು, ನಮಗೆ ರಾಜಕೀಯ ಮಾಡುವುದು ಗೊತ್ತಿಲ್ಲ. ಬದಲಾಗಿ, ಜನರಿಗಾಗಿ ಕೆಲಸ ಮಾಡುವುದು, ಶಾಲೆಗಳನ್ನು ನಿರ್ಮಿಸುವುದು ಮತ್ತು ಭ್ರಷ್ಟಾಚಾರ ಕೊನೆಗೊಳಿಸುವುದು ಹೇಗೆ? ಎಂಬುದು ಗೊತ್ತಿದೆ. ಭಗವಂತ್ ಮಾನ್ ಮುಖ್ಯಮಂತ್ರಿಯಾದ ನಂತರ ನಾವು ಪಂಜಾಬ್‌ನಲ್ಲಿ ಕೇವಲ 20 ದಿನಗಳಲ್ಲಿ ಭ್ರಷ್ಟಾಚಾರವನ್ನು ಕೊನೆಗೊಳಿಸಿದ್ದೇವೆ. ಈಗ ಹಿಮಾಚಲ ಪ್ರದೇಶದಲ್ಲೂ ಕ್ರಾಂತಿ ನಡೆಯಬೇಕು ಎಂದು ಕರೆ ನೀಡಿದರು.

     

  • ಚಂಡೀಗಢವನ್ನು ಪಂಜಾಬ್‌ಗೆ ವರ್ಗಾಯಿಸಿ: ಪಂಜಾಬ್ ಸಿಎಂ ನಿರ್ಣಯ ಮಂಡನೆ

    ಚಂಡೀಗಢವನ್ನು ಪಂಜಾಬ್‌ಗೆ ವರ್ಗಾಯಿಸಿ: ಪಂಜಾಬ್ ಸಿಎಂ ನಿರ್ಣಯ ಮಂಡನೆ

    ಚಂಡೀಗಢ: ಪಂಜಾಬ್‌ಗೆ ಚಂಡೀಗಢವನ್ನು ವರ್ಗಾಯಿಸುವಂತೆ ಕೋರಿ ಪಂಜಾಬ್ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

    ಚಂಡೀಗಢವು ಪಂಜಾಬ್ ಮತ್ತು ಹರಿಯಾಣದ ಜಂಟಿ ರಾಜಧಾನಿಯಾಗಿದೆ. ಚಂಡೀಗಢದ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಸೇವಾ ನಿಯಮಗಳು ಅನ್ವಯಿಸುತ್ತವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಘೋಷಣೆಯಿಂದ ರಾಜಕೀಯ ಗದ್ದಲದ ನಡುವೆ ಒಂದು ದಿನದ ವಿಶೇಷ ಅಧಿವೇಶನ ಕರೆಯಲಾಯಿತು.

    ಈ ಅಧಿವೇಶನದಲ್ಲಿ ಚಂಡೀಗಢವನ್ನು ತಕ್ಷಣವೇ ಪಂಜಾಬ್‌ಗೆ ವರ್ಗಾಯಿಸುವಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನಿರ್ಣಯ ಮಂಡಿಸಿದ್ದಾರೆ. ಜೊತೆಗೆ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಗೌರವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕೇವಲ 1 ರೂ. ಸಂಬಳ ತೆಗೆದುಕೊಳ್ಳುತ್ತೇನೆ: ಪಂಜಾಬ್‌ನ ಹೊಸ ಅಡ್ವೊಕೇಟ್ ಜನರಲ್

    BhagwantMann

    ಮಾನ್ ನಿರ್ಣಯ ಏನು?
    ಚಂಡೀಗಢದ ಆಡಳಿತದ ಸಮತೋಲನ ಮತ್ತು ಇತರ ಸಾಮಾನ್ಯ ಆಸ್ತಿಗಳಿಗೆ ಭಂಗ ತರುವಂತಹ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು. ಪಂಜಾಬ್ ಅನ್ನು ಪಂಜಾಬ್ ಮರುಸಂಘಟನೆ ಕಾಯ್ದೆ-1966ರ ಮೂಲಕ ಮರುಸಂಘಟಿಸಲಾಯಿತು. ಇದರಲ್ಲಿ ಪಂಜಾಬ್ ಅನ್ನು ಹರಿಯಾಣ ರಾಜ್ಯವಾಗಿ ಮರುಸಂಘಟಿಸಲಾಯಿತು. ಚಂಡೀಗಢದ ಕೇಂದ್ರಾಡಳಿತ ಪ್ರದೇಶ ಮತ್ತು ಪಂಜಾಬ್‌ನ ಕೆಲವು ಭಾಗಗಳನ್ನು ಅಂದಿನ ಕೇಂದ್ರಾಡಳಿತ ಪ್ರದೇಶವಾದ ಹಿಮಾಚಲ ಪ್ರದೇಶಕ್ಕೆ ನೀಡಲಾಯಿತು. ಸೌಹಾರ್ದತೆ ಕಾಪಾಡಲು ಮತ್ತು ಜನರ ಭಾವನೆಗಳನ್ನು ಗಣನೆಗೆ ತೆಗೆದುಕೊಂಡು ಚಂಡೀಗಢವನ್ನು ತಕ್ಷಣವೇ ಪಂಜಾಬ್‌ಗೆ ವರ್ಗಾಯಿಸಲು ಕೇಂದ್ರ ಸರ್ಕಾರಕ್ಕೆ ವಿಷಯ ಪ್ರಸ್ತಾಪಿಸಲು ಈ ಸದನವು ಮತ್ತೊಮ್ಮೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ ಎಂದು ನಿರ್ಣಯ ಮಂಡಿಸಲಾಯಿತು. ಇದನ್ನೂ ಓದಿ: ಉಡ್ತಾ ಪಂಜಾಬ್‌ ಅಲ್ಲ, ಪ್ರಗತಿಪರ ಪಂಜಾಬ್‌: ಭಗವಂತ್‌ ಮಾನ್‌

    ಚಂಡೀಗಢ ನಗರವನ್ನು ಪಂಜಾಬ್‌ನ ರಾಜಧಾನಿಯಾಗಿ ರಚಿಸಲಾಗಿದೆ. 1966ರಲ್ಲಿ ಹಿಂದಿ ಮಾತನಾಡುವ ಪ್ರದೇಶಗಳನ್ನು ಒಳಗೊಂಡಿರುವ ಪಂಜಾಬ್‌ನಿಂದ ಹರಿಯಾಣವನ್ನು ಬೇರ್ಪಡಿಸಿದ ನಂತರ ಚಂಡೀಗಢವು ಪಂಜಾಬ್ ಮತ್ತು ಹರಿಯಾಣದ ಜಂಟಿ ರಾಜಧಾನಿಯಾಯಿತು ಎಂದು ನಿರ್ಣಯ ಹೇಳಿದೆ.

    Bhagwant Mann

    ಚಂಡೀಗಢದ ಆಡಳಿತವನ್ನು ಯಾವಾಗಲೂ ಪಂಜಾಬ್ ಮತ್ತು ಹರಿಯಾಣದ ಅಧಿಕಾರಿಗಳು 60:40 ಅನುಪಾತದಲ್ಲಿ ನಿರ್ವಹಿಸುತ್ತಾರೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಂಡೀಗಢಕ್ಕೆ ಹೊರಗಿನ ಅಧಿಕಾರಿಗಳನ್ನು ನಿಯೋಜಿಸಿದೆ ಮತ್ತು ಚಂಡೀಗಢ ಆಡಳಿತದ ನೌಕರರಿಗೆ ಕೇಂದ್ರ ನಾಗರಿಕ ಸೇವಾ ನಿಯಮಗಳನ್ನು ಪರಿಚಯಿಸಿದೆ. ಇದು ಹಿಂದಿನ ತಿಳುವಳಿಕೆಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಮಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್‍ನಲ್ಲಿ `ಆಪ್’ ಸುನಾಮಿಗೆ ಕಾಂಗ್ರೆಸ್ ತತ್ತರ- ಚನ್ನಿ, ಸಿಧು, ಕ್ಯಾಪ್ಟನ್‍ಗೆ ಹೀನಾಯ ಸೋಲು

    ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಂಡೀಗಢ ಆಡಳಿತದ ನೌಕರರು ಕೇಂದ್ರ ಸರ್ಕಾರದಲ್ಲಿ ಕೆಲಸ ಮಾಡುವ ಅವರ ಸಹವರ್ತಿಗಳಿಗೆ ಸಮಾನವಾದ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ಘೋಷಿಸಿದ ನಂತರ ಇತ್ತೀಚಿನ ಪಂಜಾಬ್ ಹಾಗೂ ಕೇಂದ್ರದ ನಡುವೆ ವೈಮನಸ್ಯ ಶುರುವಾಗಿದೆ. ಇದು ಚಂಡೀಗಢದ ಮೇಲಿನ ಪಂಜಾಬ್‌ನ ಹಕ್ಕನ್ನು ದುರ್ಬಲಗೊಳಿಸುತ್ತದೆ ಎಂದು ಪಂಜಾಬ್ ರಾಜ್ಯದ ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಮುಖ್ಯವಾಗಿ ಎಎಪಿ ಅಧಿಕಾರಕ್ಕೆ ಬಂದ ನಂತರ ಇದು ಬಿಜೆಪಿಯ ಮೊದಲ ಬೆದರಿಕೆಯ ಕರೆ ಎಂದು ಹೇಳಿಕೊಂಡಿದ್ದು, ಕಾಂಗ್ರೆಸ್, ಅಕಾಲಿಕ ದಳ ಕೂಡ ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದೆ.

  • ಇನ್ಮುಂದೆ ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ: ಪಂಜಾಬ್ ಸಿಎಂ

    ಇನ್ಮುಂದೆ ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ: ಪಂಜಾಬ್ ಸಿಎಂ

    ಚಂಡೀಗಢ: ಪಂಜಾಬ್ ಮಾಜಿ ಶಾಸಕರು 2 ಬಾರಿ, 5 ಬಾರಿ ಅಥವಾ ಹತ್ತು ಬಾರಿ ಗೆದ್ದಿದ್ದರೂ ಅವರು ಇನ್ನು ಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಅವರು ಸಲ್ಲಿಸಿದ್ದ ಸೇವೆಗೆ ಪ್ರತಿ ಅವಧಿಗೂ ಪಿಂಚಣಿ ಪಡೆಯುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಿಳಿಸಿದ್ದಾರೆ.

    Bhagwant Mann

    ಶುಕ್ರವಾರ ವೀಡಿಯೋ ಸಂದೇಶವೊಂದರಲ್ಲಿ ಮಾತನಾಡಿರುವ ಅವರು, ಈ ಹಿಂದೆ ಶಾಸಕರಾಗಿದ್ದ ಹಲವಾರು ಸಂಸದರು ಸಹ ಪಿಂಚಣಿ ಪಡೆಯುತ್ತಿದ್ದಾರೆ. ಆದರೆ ಇನ್ನು ಮುಂದೆ ಅವರ ಪಿಂಚಣಿಯನ್ನು ಒಂದು ಅವಧಿಗೆ ಮಾತ್ರ ಸೀಮಿತಗೊಳಿಸಲಾಗುತ್ತದೆ. ಇದರಿಂದ ಉಳಿತಾಯವಾಗುವ ಹಣವನ್ನು ಜನರ ಕಲ್ಯಾಣಕ್ಕೆ ವಿನಿಯೋಗಿಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಭಗತ್ ಸಿಂಗ್ ಪುಣ್ಯಸ್ಮರಣೆಯಂದು ಪಂಜಾಬ್‌ನಲ್ಲಿ ಸಾರ್ವಜನಿಕ ರಜೆ

    `ನಮ್ಮ ರಾಜಕೀಯ ನಾಯಕ ಸಾರ್ವಜನಿಕರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕೈಮುಗಿದು ಮತ ಪಡೆದು ಗೆಲ್ಲುತ್ತಾರೆ. ಆದರೆ 3-4 ಬಾರಿ ಗೆದ್ದ ನಂತರವೂ ಹಲವು ಹಲವು ಶಾಸಕರು ಮುಂದಿನ ಚುನಾವಣೆಯಲ್ಲಿ ಸೋತರು ಅಥವಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದಿದ್ದರೂ ತಿಂಗಳಿಗೆ ಲಕ್ಷಾಂತರ ರೂಪಾಯಿ ಪಿಂಚಣಿ ಪಡೆಯುತ್ತಾರೆ. ಇದು ರಾಜ್ಯದ ಬೊಕ್ಕಸಕ್ಕೆ ದೊಡ್ಡ ಹೊಡೆತ ನೀಡುತ್ತಿದೆ ಭಗವಂತ್ ಮಾನ್ ಹೇಳಿದ್ದಾರೆ.

    Bhagwant Mann

    ಚುನಾವಣೆಯಲ್ಲಿ ಸೋತರೂ ಕೆಲವರು 3.50 ರಿಂದ 5 ಲಕ್ಷ ರೂ. ವರೆಗೂ ಪಿಂಚಣಿ ಪಡೆಯುತ್ತಿದ್ದಾರೆ. ಲಾಲ್‌ಸಿಂಗ್, ಸರ್ವಾನ್‌ಸಿಂಗ್ ಫಿಲೌ ಹಾಗೂ ರಾಜಿಂದರ್ ಕೌರ್ ಭಟ್ಟಾಲ್ ತಿಂಗಳಿಗೆ 3.55 ಲಕ್ಷ ಪಿಂಚಣಿ ಪಡೆಯುತ್ತಿದ್ದಾರೆ. ರವಿಂದರ್ ಸಿಂಗ್, ಬೈಲ್ವಿಂದರ್ ಸಿಂಗ್ 2.75 ಲಕ್ಷ ಹಾಗೂ ಅಕಾಲಿ ದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ 5 ಲಕ್ಷ ಪಿಂಚಣಿ ಪಡೆಯುತ್ತಿದ್ದಾರೆ. ಇದರಿಂದ ಬೊಕ್ಕಸಕ್ಕೆ ಕೋಟ್ಯಂತರ ರೂ. ಆರ್ಥಿಕ ಹೊರೆಯಾಗುತ್ತಿದೆ ಎಂದು ಆತಂಕಪಟ್ಟಿದ್ದಾರೆ.  ಇದನ್ನೂ ಓದಿ: ಉಡ್ತಾ ಪಂಜಾಬ್‌ ಅಲ್ಲ, ಪ್ರಗತಿಪರ ಪಂಜಾಬ್‌: ಭಗವಂತ್‌ ಮಾನ್‌

    ಒಂದು ಅವಧಿಗೆ ಮಾತ್ರ ಶಾಸಕರಾಗಿ ಆಯ್ಕೆಯಾದರೂ ಕೂಡ ಅವರಿಗೆ ಜೀವನಪರ್ಯಂತ ಪಿಂಚಣಿ ಹಣ ನೀಡಲಾಗುತ್ತದೆ. ಆದರೆ ಪಂಜಾಬ್‌ನ ಭಗವಂತ್ ಮಾನ್ ಸರ್ಕಾರಲ್ಲಿ ಈ ಯೋಜನೆಗೆ ಕಡಿವಾಣ ಹಾಕಲು ಮುಂದಾಗಿದೆ. ಇನ್ಮುಂದೆ ಶಾಸಕರು ಎಷ್ಟು ಬಾರಿ ಗೆದ್ದರೂ ಒಂದೇ ಅವಧಿಗೆ ಪಿಂಚಣಿ ಪಡೆಯಲಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.

  • 4 ರಾಜ್ಯ ಗೆದ್ದರೂ ಬಿಜೆಪಿ ಇನ್ನೂ ಸರ್ಕಾರ ಮಾಡಿಲ್ಲ: ಕೇಜ್ರಿವಾಲ್‌

    4 ರಾಜ್ಯ ಗೆದ್ದರೂ ಬಿಜೆಪಿ ಇನ್ನೂ ಸರ್ಕಾರ ಮಾಡಿಲ್ಲ: ಕೇಜ್ರಿವಾಲ್‌

    ಚಂಡೀಗಢ: ಇತ್ತೀಚೆಗಷ್ಟೇ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ 4 ರಾಜ್ಯಗಳನ್ನು ಬಿಜೆಪಿ ಗೆದ್ದಿದ್ದರೂ ಪಕ್ಷದಲ್ಲಿನ ಆಂತರಿಕ ಕಲಹದಿಂದಾಗಿ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವ್ಯಂಗ್ಯವಾಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬ್ ವಿಧಾನಸಭೆಯಲ್ಲಿ ಆಪ್ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ ಮತ್ತು ಸಮಯ ವ್ಯರ್ಥ ಮಾಡದೆ ಸರ್ಕಾರವನ್ನು ರಚಿಸಲಾಗಿದೆ. ಈಗಾಗಲೇ ಈ ಸರ್ಕಾರವು ಪಂಜಾಬ್‍ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದೆ ಎಂದು ಹೇಳಿದರು.

    ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಸಂಪುಟದ ಪ್ರತಿಯೊಬ್ಬ ಸಚಿವರಿಗೂ ಗುರಿಯನ್ನು ನಿಗದಿಪಡಿಸಿದ್ದಾರೆ. ಅದನ್ನು ಅವರು ಪೂರೈಸದಿದ್ದರೇ ಜನರು ತೆಗೆದುಹಾಕುವಂತೆ ಒತ್ತಾಯಿಸಬಹುದು. ಪಂಜಾಬ್ ಜನತೆ ವಜ್ರವನ್ನು ಆಯ್ಕೆ ಮಾಡಿದ್ದಾರೆ. ಭಗವಂತ್ ಮಾನ್ ನೇತೃತ್ವದ ಸಚಿವ ಸಂಪುಟದಲ್ಲಿ 92 ಜನರು ಕೆಲಸ ಮಾಡಬೇಕಾಗಿದೆ ಎಂದ ಅವರು, ಶಾಸಕರು ಜನರ ಮಧ್ಯೆ ಓಡಾಡುತ್ತಾರೆ. ಹಳ್ಳಿಗಳಿಗೆ ಹೋಗುತ್ತಾರೆ ಎನ್ನುವುದು ಪಕ್ಷದ ಮಂತ್ರವಾಗಿದೆ ಎಂದರು.

    ಭಗವಂತ್‍ಮಾನ್ ಅವರು ಈಗಾಗಲೇ ಹಳೆಯ ಮುಖ್ಯಮಂತ್ರಿಗಳ ಭದ್ರತೆಯನ್ನು ತೆಗೆದು ಹಾಕಿದ್ದಾರೆ. ಜೊತೆಗೆ ಸಾರ್ವಜನಿಕರಿಗೆ ಭದ್ರತೆಯನ್ನು ನೀಡಿದ್ದಾರೆ ಎಂದ ಅವರು, ಶಾಸಕರು ಸಮಯಪಾಲನೆ ಮಾಡುವ ಜೊತೆಗೆ ತಮ್ಮ ಕ್ಷೇತ್ರದ ಪ್ರತಿ ಪಟ್ಟಣದಲ್ಲೂ ಕಚೇರಿಯನ್ನು ತೆರೆಯಬೇಕು. ಅವರು ದಿನದ 18 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡೋದು ಬಿಡೋದು ಕಾಂಗ್ರೆಸ್ ಇಷ್ಟ: ಮಾಧುಸ್ವಾಮಿ

    ದೆಹಲಿಯಲ್ಲಿ ನಾನು ಗಮನಿಸುತ್ತಿದ್ದೇನೆ. ಪ್ರತಿಯೊಬ್ಬ ಶಾಸಕ ಮತ್ತು ಸಚಿವರ ಬಗ್ಗೆ ಜನರು ಏನು ಹೇಳುತ್ತಿದ್ದಾರೆಂದು ತಿಳಿದುಕೊಳ್ಳಲು ಸಮೀಕ್ಷೆ ಮಾಡಿದ್ದೇವೆ. 20-22 ಶಾಸಕರ ಬಗ್ಗೆ ನಕಾರಾತ್ಮಕ ಪ್ರತಿಕ್ರಿಯೆಗಳು ಬಂದಿದೆ. ಇದರಿಂದಾಗಿ ಅವರಿಗೆ ಟಿಕೆಟ್ ರದ್ದುಗೊಳಿಸಿ ಇತರರಿಗೆ ನೀಡಲಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ‘ದಿ ಕಾಶ್ಮೀರ್‌ ಫೈಲ್ಸ್’ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸಹಾಯ ಮಾಡುವುದಿಲ್ಲ: ಸಂಜಯ್ ರಾವತ್