Tag: ಭಗವಂತ್ ಖೂಬಾ

  • ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ

    ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ

    ಬೀದರ್: ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ನಾಗರಿಕರನ್ನು ಪ್ರಧಾನಿ ಮೋದಿ ಸರ್ಕಾರ ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಬೀದರ್‍ನಲ್ಲಿ ಕೇಂದ್ರ ಸಚಿವ ಭಗವಂತ್ ಖೂಬಾ ತಿಳಿಸಿದ್ದಾರೆ.

    ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಈಗಾಗಲೇ ನಮ್ಮ ಭಾರತೀಯರನ್ನು ಏರ್‍ಲಿಫ್ಟ್ ಮೂಲಕ ಕರೆತರಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಷ್ಯಾ ಹಾಗೂ ಉಕ್ರೇನ್ ಜೊತೆ ಮಾತಾನಾಡಿ ಎಲ್ಲ ನಮ್ಮ ನಾಗರಿಕರನ್ನು ತರುವ ಕೆಲಸ ಮಾಡಲಾಗುತ್ತಿದೆ ಎಂದಿದ್ದಾರೆ.

    ಯುದ್ಧ ನಡೆಯುವ ಸ್ಥಳದಲ್ಲಿ ಏರ್‍ಲಿಫ್ಟ್ ಮಾಡಲು ಕೆಲ ಸಮಸ್ಯೆಗಳು ಆಗುತ್ತವೆ. ಅದಕ್ಕೆ ನಮ್ಮ ಭಾರತೀಯರ ಸುರಕ್ಷಿತೆಗಾಗಿ ಭಾರತ ಸರ್ಕಾರ ಅಲ್ಲಿನ ಸರ್ಕಾರದ ಜೊತೆ ವಿಚಾರಗಳನ್ನು ಹಂಚಿಕೊಳ್ಳುತ್ತಿದೆ. ಯಾವುದೇ ಜೀವಕ್ಕೆ ಹಾನಿಯಾಗದಂತೆ ಈ ಸಮಯದಲ್ಲಿ ಯಾವ ನೀತಿಗಳನ್ನು ಅನುಸರಿಸಬೇಕು, ಅವುಗಳನ್ನು ಅನುಸರಿಸಿ ಭಾರತೀಯರನ್ನು ಕರೆತರುತ್ತೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಆವರಣದಲ್ಲಿ 14 ಅಡಿ ಎತ್ತರದ ಅಂಬರೀಶ್ ಪ್ರತಿಮೆ

    ನಮ್ಮ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯನ್ನು ವಿದೇಶಾಂಗ ಕಾರ್ಯಾಲಯಕ್ಕೆ ಕಳುಹಿಸಲಾಗಿದೆ. ನಾನು ವಿದೇಶಾಂಗ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದು, ನಾವು ಎಲ್ಲ ಭಾರತೀಯರ ಕಾಳಜಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

  • ಪಾದಯಾತ್ರೆ ಮೊಟಕುಗೊಳಿಸಲು ಸರ್ಕಾರದಿಂದ ವೀಕೆಂಡ್ ಕರ್ಫ್ಯೂ ಜಾರಿ: ಈಶ್ವರ್ ಖಂಡ್ರೆ

    ಪಾದಯಾತ್ರೆ ಮೊಟಕುಗೊಳಿಸಲು ಸರ್ಕಾರದಿಂದ ವೀಕೆಂಡ್ ಕರ್ಫ್ಯೂ ಜಾರಿ: ಈಶ್ವರ್ ಖಂಡ್ರೆ

    ಬೀದರ್: ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು. ಇದನ್ನು ನಿನ್ನೆ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಮೂಲಕ ಬಿಜೆಪಿ ಸರ್ಕಾರವೇ ಸಾಬೀತು ಮಾಡಿದೆ ಎಂದು ಆರೋಪಿಸಿದರು.

    ನಾವು ರಾಜಕೀಯ ಉದ್ದೇಶದಿಂದಲೇ ವೀಕೆಂಡ್ ಕರ್ಫ್ಯೂ ಹಾಕಿದ್ದು ಎಂದು ಜನರ ಮುಂದೆ ಸರ್ಕಾರವೇ ಸಾಬೀತು ಮಾಡಿದ್ದಾರೆ. ಬಿಜೆಪಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ಕಿಡಿಕಾರಿದ ಅವರು, ಸಾವಿರಾರು ಜನರನ್ನು ಸೇರಿಸಿ ಕೇಂದ್ರ ಸಚಿವ ಭಗವಂತ್ ಖೂಬಾ ಜನಾಶೀರ್ವಾದ ಯಾತ್ರೆಯಲ್ಲಿ ಮಾಡಿದ್ದರು. ಅಲ್ಲಿ ಅವರನ್ನು ಅಕ್ರಮ ಬಂದೂಕಿನಿಂದ ಸ್ವಾಗತ ಮಾಡಿದರು. ಈವರೆಗೂ ಪೊಲೀಸರು ಖೂಬಾ ಮೇಲೆ ಎಫ್‌ಐಆರ್ ದಾಖಲೆ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ ಯಾತ್ರೆ: ಎಸ್.ಆರ್.ಹಿರೇಮಠ

    Bhagwanth khuba Bidar MP

    ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ನನ್ನ ಮೇಲೆ ಹಾಗೂ ನಮ್ಮ ನಾಯಕರಾದ ಡಿಕೆಶಿ, ಸಿದ್ದರಾಮಯ್ಯ ಮೇಲೆ ಮೂರು ಕೇಸ್‌ಗಳನ್ನು ದಾಖಲಿಸಿದ್ದಾರೆ ಎಂದ ಅವರು, ಕೊರೊನಾ ಕೇಸ್ ಕಡಿಮೆಯಾದ ಮೇಲೆ ಮತ್ತೆ ರಾಮನಗರದಿಂದ ನಮ್ಮ ಪಾದಯಾತ್ರೆ ಮುಂದುವರೆಸುತ್ತೆವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಚಾಮುಂಡೇಶ್ವರಿಯಿಂದ ಓಡಿಸಲಾಗಿದೆ, ಬಾದಾಮಿಯಿಂದ ಓಡಿಸುವುದು ಬಾಕಿ ಇದೆ: ಸಿದ್ದು ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಪಂಚ ರಾಜ್ಯ ಚುನಾವಣೆಯ ಸಮೀಕ್ಷೆಗಳೆಲ್ಲಾ ಸುಳ್ಳಾಗಲಿದ್ದು, ಬಿಜೆಪಿ ಪಂಚರಾಜ್ಯ ಚುನಾವಣೆಯಲ್ಲಿ ಧೂಳಿ ಪಟವಾಗುತ್ತದೆ ಎಂದ ಅವರು ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

  • ತಜ್ಞರ ವರದಿಯ ಆಧಾರದ ಮೇಲೆ ಸರ್ಕಾರ ಕ್ರಮ ತಗೆದುಕೊಳ್ಳುತ್ತೆ: ಭಗವಂತ್ ಖೂಬಾ

    ತಜ್ಞರ ವರದಿಯ ಆಧಾರದ ಮೇಲೆ ಸರ್ಕಾರ ಕ್ರಮ ತಗೆದುಕೊಳ್ಳುತ್ತೆ: ಭಗವಂತ್ ಖೂಬಾ

    ಬೀದರ್: ತಜ್ಞರು ಕೊಟ್ಟಿರುವ ವರದಿಯ ಆಧಾರದ ಮೇಲೆ ಸರ್ಕಾರ ಕ್ರಮಗಳನ್ನು ತಗೆದುಕೊಳ್ಳುತ್ತೆ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ಹೇಳಿದ್ದಾರೆ.

    ಬೀದರ್ ನಲ್ಲಿ ಲಸಿಕೆ ಅಭಿಯಾನದ ಬಳಿಕ ಲಾಕ್ಡೌನ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಕೊರೊನಾಗೆ ಸಂಬಂಧಿಸಿದಂತೆ ಯಾವ ರೀತಿಯ ಕಠಿಣ ಕ್ರಮಗಳನ್ನು ತಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತದೆ. ಆದರೆ ಇದಕ್ಕೆ ನಮ್ಮ ಎಲ್ಲ ನಾಗರಿಕರು ಜಾಗೃತಿಯಿಂದ ಇರಬೇಕು. ಅದರ ಜೊತೆಗೆ ಕೊರೊನಾ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.

    ಇಂದು ಇಡೀ ಭಾರತದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ನಾನು ಕೂಡಾ ಇಂದು ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದೇನೆ. ಮಕ್ಕಳಲ್ಲಿ ಉತ್ಸಾಹ, ವಿಶ್ವಾಸವನ್ನು ನೋಡಿ ನನಗೆ ಸಂತೋಷವಾಗುತ್ತಿದೆ ಎಂದರು. ಇದನ್ನೂ ಓದಿ:  15 ರಿಂದ 18 ವರ್ಷದ ಮಕ್ಕಳ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಚಾಲನೆ

    ಈ ಲಸಿಕೆಯಿಂದ ಎಲ್ಲ ಮಕ್ಕಳು ಇದರ ಉಪಯೋಗ ಪಡೆದುಕೊಂಡು ಕೊರೊನಾದಿಂದ ಸುರಕ್ಷಿತವಾಗಿ ಇರಬೇಕು ಎಂದು ತಿಳಿಸಿದರು.

  • ಬಿಜೆಪಿ ಅಂದ್ರೆ ಭಾರತೀಯ ಜೂಟಾ ಪಾರ್ಟಿ: ಈಶ್ವರ್ ಖಂಡ್ರೆ

    ಬಿಜೆಪಿ ಅಂದ್ರೆ ಭಾರತೀಯ ಜೂಟಾ ಪಾರ್ಟಿ: ಈಶ್ವರ್ ಖಂಡ್ರೆ

    ಬೀದರ್: ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದ್ದು, ಈಗ ಬಿಜೆಪಿ ಅವರು ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ಬಿಜೆಪಿ ಎಂದರೆ ಭಾರತೀಯ ಜೂಟಾ ಪಾರ್ಟಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ಬೀದರ್ ನಲ್ಲಿ ಸುದ್ದಿಗೋಷ್ಠಿ ಮಾಡಿದ ಖಂಡ್ರೆ, ಗಾಂಧಿಜೀ ಅವರ ಸ್ವರಾಜ್ ಕಲ್ಪನೆಯನ್ನು ಪೂರ್ತಿಯಾಗಿ ಮಾಡದೆ ಗಾಂಧಿಜೀಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ. ಬಹಿರಂಗವಾಗಿ ಗಾಂಧಿಜಿ ಕೊಲೆ ಮಾಡಿದ ಗೋಡ್ಸೆಯ ದೇವಾಲಯ ಕಟ್ಟಲು ಹೋರಟಿದ್ದೀರಿ ಎಂದು ಜನ ಸ್ವರಾಜ್ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟರು. ಇದನ್ನೂ ಓದಿ:  70 ವರ್ಷದ ದೇಶದ ಸಾಧನೆಯನ್ನು ಪ್ರಶ್ನಿಸುತ್ತಿರುವುದು ದುರದೃಷ್ಟಕರ: ಭೂಪೇಶ್ ಬಘೇಲ್

    ಪಂಚ ರಾಜ್ಯಗಳ ಚುನಾವಣೆ ಇದ್ದು, ಚುನಾವಣೆಯ ದೃಷ್ಟಿಯಿಂದ ಹೆದರಿ ಪ್ರಧಾನಿ ಮೋದಿ ಅವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದಾರೆ. ಇದು ಪ್ರಜಾಪ್ರಭುತ್ವ ಹಾಗೂ ರೈತರಿಗೆ ಸಿಕ್ಕ ಜಯ ಜೊತೆಗೆ ಬೆಂಬಲ ನೀಡಿದ್ದ ವಿರೋಧ ಪಕ್ಷಗಳ ಜಯ ಎಂದರು.

    Bhagwanth khuba Bidar MP

    ಕೇಂದ್ರ ಸಚಿವ ಭಗವಂತ್ ಖೂಬಾ ರಸಗೊಬ್ಬರದ ಕೊರತೆ ಇಲ್ಲ ಎನ್ನುತ್ತಿದ್ದಾರೆ. ಆದರೆ ಒಂದೂವರೆ ತಿಂಗಳಿನಿಂದ ರಸಗೊಬ್ಬರದ ಕೊರತೆ ಇದೆ. ನೀವೇ ಹೋಗಿ ರಸಗೊಬ್ಬರದ ಅಂಗಡಿಗಳಲ್ಲಿ ಡಿಎಪಿ ರಸಗೊಬ್ಬರ ಕೇಳಿ ಆದ್ರೆ ರಸಗೊಬ್ಬರ ಸಿಗಲ್ಲ. ಏಕೆಂದರೆ ರಸಗೊಬ್ಬರ ಕೊರತೆ ಇದೆ ಎಂದು ಖೂಬಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ:  ಅನುಷ್ಕಾ ಸಂಗೀತ ಸಮಾರಂಭದಲ್ಲಿ ಕುಣಿದು ಕುಪ್ಪಳಿಸಿದ ಆಲಿಯಾ

  • ವಿಕೃತ ಮನಸ್ಸಿನವರಿಗೆ RSS ಅರ್ಥವಾಗಲ್ಲ- ಖೂಬಾ

    ವಿಕೃತ ಮನಸ್ಸಿನವರಿಗೆ RSS ಅರ್ಥವಾಗಲ್ಲ- ಖೂಬಾ

    – ಕಾಂಗ್ರೆಸ್ ಎಲ್ಲಾ ನಾಟಕಗಳನ್ನು ಬಿಡಬೇಕು

    ತುಮಕೂರು: ವಿಕೃತ ಮನಸ್ಸಿನವರಿಗೆ ಆರ್‌ಎಸ್‌ಎಸ್‌ ಅರ್ಥವಾಗುವುದಿಲ್ಲ. ಆರ್‌ಎಸ್‌ಎಸ್‌ ವಿರುದ್ಧ ಪ್ರತಿಪಕ್ಷಗಳು ಮಾಡುತ್ತಿರುವ ಆರೋಪವನ್ನು ಕೇಂದ್ರ ಸಚಿವ ಭಗವಂತ್ ಖೂಬಾ ಖಂಡಿಸಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಒಂದು ವಿಕೃತ ಮಾನಸಿಕತೆಯ ವರ್ಗ ಇದೆ. ಅವರು ಆರ್‍ಎಸ್‍ಎಸ್‍ನ್ನು ಸರಿಯಾಗಿ ಅರ್ಥಮಾಡಿಕೊಂಡಿಲ್ಲ. ಜಾತಿ ಓಲೈಕೆಗಾಗಿ ಕಳೆದ 70 ವರ್ಷಗಳಿಂದ ತುಷ್ಟಿಕರಣದ ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ ಕೊಡುವ ಮುನ್ನ ಒಂದು ಬಾರಿ ಶಾಖೆಗೆ ಹೋಗಿ ಬರಬೇಕು. ದೇಶ ಭಕ್ತಿ, ಶಿಸ್ತು ಅದರಲ್ಲಿ ಕಲಿಸಲಾಗುತ್ತದೆ. ಸಮಾಜದಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಭಾರತವನ್ನು ವಿಶ್ವಗುರು ಮಾಡುವ ಸಂಸ್ಕಾರ ಅದರಲ್ಲಿ ಕಲಿಸಲಾಗುತ್ತದೆ ಎಂದರು.

    Bhagwanth khuba Bidar MP

    ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ಕುರಿತು ಪ್ರತಿ ಕ್ರಿಯೆ ನೀಡಿದ ಅವರು, ಕಳೆದ ಐದಾರು ವರ್ಷದಿಂದ ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ನಿಯಂತ್ರಣದಲ್ಲಿದೆ. ನಾಲ್ಕೈದು ದಿನದಿಂದ ನಡೆಯುತ್ತಿರುವ ಘಟನೆಗೆ ಕೇಂದ್ರ ಸರ್ಕಾರ ಹೆಡೆಮುರಿ ಕಟ್ಟುವ ಕೆಲಸ ಮಾಡುತ್ತಿದೆ ಎಂದರು. ಇದನ್ನೂ ಓದಿ: ಕೈ ನಾಯಕರಿಂದ್ಲೇ ಡೀಲ್ ರಹಸ್ಯ ಬಯಲು – ಡಿಕೆಶಿಗೆ ಬಿಜೆಪಿ ತಿರುಗೇಟು

     

    ವಾರಣಾಸಿಯಲ್ಲಿ ಪ್ರಿಯಾಂಕಾ ವಾದ್ರಾ ಮಂತ್ರಪಠಣ ಮಾಡಿದ ವಿಚಾರವಾಗಿ ಪ್ರಿಯಾಂಕಾ ವಾದ್ರಾಗೆ ಮಂತ್ರ ಬರುತ್ತಾ? ಆ ಕುಟುಂಬದವರು ಕೇವಲ ಚುನಾವಣೆ ಸಂದರ್ಭದಲ್ಲಿ ಹಿಂದು ಆಗೋದು, ಮುಸ್ಲಿಂರನ್ನು ಓಲೈಕೆ ಮಾಡಲು ಅವರ ಟೋಪಿ ಹಾಕಿಕೊಳ್ಳೋದು, ಆಗಾಗ ಕ್ರಿಶ್ಚಿಯನ್ ಆಗೋದು, ಈ ಎಲ್ಲಾ ನಾಟಕಗಳನ್ನು ಅವರು ಬಿಡಬೇಕು. ನಿಮ್ಮ ಜಾತಿ ಯಾವೋದು ಅದರಲ್ಲಿ ಭಕ್ತಿ ಇಡಿ, ಆದರೆ ಇಂಥಹ ಡೋಂಗಿತನ ಬಿಡಬೇಕು ಎಂದು ಕಾಂಗ್ರೆಸ್ ವಿರುದ್ಧವಾಗಿ ವಾಗ್ದಾಳಿ ನಡೆಸಿದರು.

  • ಖೂಬಾ ಕಾರ್ಯಕ್ರಮದಲ್ಲಿ ನಾಡಬಂದೂಕು ಸಿಡಿಸಿದ ಪ್ರಕರಣ- ಮೂವರು ಕಾನ್‍ಸ್ಟೇಬಲ್‍ಗಳ ಅಮಾನತು

    ಖೂಬಾ ಕಾರ್ಯಕ್ರಮದಲ್ಲಿ ನಾಡಬಂದೂಕು ಸಿಡಿಸಿದ ಪ್ರಕರಣ- ಮೂವರು ಕಾನ್‍ಸ್ಟೇಬಲ್‍ಗಳ ಅಮಾನತು

    – ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಫುಲ್ ಸೇಫ್

    ಯಾದಗಿರಿ: ಕೇಂದ್ರ ಸಚಿವ ಭಗವಂತ್ ಖೂಬಾ ಸ್ವಾಗತಕ್ಕೆ ನಾಡಬಂದೂಕು ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆ ಮೂವರು ಪೊಲೀಸ್ ಕಾನ್‍ಸ್ಟೇಬಲ್‍ಗಳನ್ನು ಅಮಾನತು ಮಾಡಲಾಗಿದೆ.

    ಗ್ರಾಮೀಣ ಠಾಣೆಯ ಪೊಲೀಸ್ ಕಾನ್‍ಸ್ಟೇಬಲ್ ಗಳಾದ ವಿರೇಶ್, ಸಂತೋಷ್ ಹಾಗೂ ಮೈಬೂಬ್ ಅವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಎಸ್‍ಪಿ ಡಾ.ವೇದಮೂರ್ತಿ ಮಾಹಿತಿ ಮಾಧ್ಯಮಗಳಿಗೆ ನೀಡಿದ್ದಾರೆ. ಬಂದೂಕು ವ್ಯವಸ್ಥೆ ಮಾಡಿದ್ದ ಮಾಜಿ ಸಚಿವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನೂ ಓದಿ: ಕೇಂದ್ರ ಸಚಿವ ಖೂಬಾಗೆ ಗನ್ ಸ್ವಾಗತ

    ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರೇ ಬಂದೂಕು ವ್ಯವಸ್ಥೆ ಮಾಡಿದ್ದರು. ಆದರೂ ಅಮಾಯಕ ರೈತರ ಮೇಲೆ ಕೇಸ್ ಹಾಕಿ, ಅಮಾಯಕ ಪೊಲೀಸ್ ಕಾನ್‍ಸ್ಟೇಬಲ್ ಗಳಿಗೆ ಎಸ್‍ಪಿ ಸಸ್ಪೆಂಡ್ ಶಿಕ್ಷೆ ನೀಡಿದ್ದಾರೆ. ಚಿಂಚನಸೂರ ವಿಷಯದಲ್ಲಿ ಮಾತ್ರ ತುಟಿ ಬಿಚ್ಚುತ್ತಿಲ್ಲ. ರಾಜಕೀಯ ನಾಯಕರನ್ನು ಬಿಟ್ಟು ಅಮಾಯಕರನ್ನು ಶಿಕ್ಷೆಗೆ ಒಳಪಡಿಸಿದ ಎಸ್‍ಪಿ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಅದು ನಾಡಬಂದೂಕು ಅಲ್ಲ – ಬೆಂಬಲಿಗರ ನಡೆ ಸಮರ್ಥಿಸಿಕೊಂಡ ಸಚಿವ ಭಗವಂತ ಖೂಬಾ

    ಜನಾರ್ಶೀವಾದ ಕಾರ್ಯಕ್ರಮಕ್ಕೆ ಯಾದಗಿರಿಗೆ ಆಗಮಿಸಿದ್ದ ಕೇಂದ್ರ ಸಚಿವ ಖೂಬಾ ಅವರನ್ನು ಜನ ನಾಡಬಂದೂಕು ಸಿಡಿಸಿ ಭರ್ಜರಿಯಾಗಿ ಸ್ವಾಗತ ಮಾಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಯರಗೋಳ ಗ್ರಾಮದಲ್ಲಿ ಜನ ಕೇಂದ್ರ ಸಚಿವ ಭಗವಂತ ಖೂಬಾ ಆಗಮನ ಮಾಡುತ್ತಿದ್ದಂತೆ ನಾಡಬಂದೂಕು ಕೈಯಲ್ಲಿ ಹಿಡಿದುಕೊಂಡು ಪುಷ್ಪವನ್ನು ಅರ್ಪಿಸಿ ಭರ್ಜರಿ ಸ್ವಾಗತ ಮಾಡಿದ್ದರು. ಯಾದಗಿರಿ ತಾಲೂಕಿನ ಯರಗೋಳ ಗ್ರಾಮಕ್ಕೆ ಖೂಬಾ ಆಗಮಿಸಿದ್ದರು.

  • ಕೇಂದ್ರ ಸಚಿವ ಭಗವಂತ್ ಖೂಬಾ ನೇತೃತ್ವದಲ್ಲಿ ರಾಯಚೂರಿನಲ್ಲಿ ಜನಾಶೀರ್ವಾದ ಯಾತ್ರೆ

    ಕೇಂದ್ರ ಸಚಿವ ಭಗವಂತ್ ಖೂಬಾ ನೇತೃತ್ವದಲ್ಲಿ ರಾಯಚೂರಿನಲ್ಲಿ ಜನಾಶೀರ್ವಾದ ಯಾತ್ರೆ

    ರಾಯಚೂರು: ಬಿಜೆಪಿ ಪಕ್ಷದಿಂದ ರಾಯಚೂರಿನಲ್ಲಿ ಇಂದು ಜನಾಶೀರ್ವಾದ ಯಾತ್ರೆ ನಡೆಯಲಿದೆ. ಕೇಂದ್ರ ಸಚಿವ ಭಗವಂತ್ ಖೂಬಾ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿದೆ. ಇನ್ನೂ ಕೇಂದ್ರ ಸಚಿವರ ಸ್ವಾಗತಕ್ಕಾಗಿ ಅದ್ಧೂರಿ ಸಿದ್ಧತೆಯಾಗಿದ್ದು, ನಗರದೆಲ್ಲೆಡೆ ಫ್ಲೆಕ್ಸ್ ಬ್ಯಾನರ್ ಗಳು ರಾರಾಜಿಸುತ್ತಿವೆ.

    ಮಧ್ಯಾಹ್ನ 3 ಗಂಟೆಗೆ ರಾಯಚೂರು ತಾಲೂಕಿನ ದೇವಸುಗೂರು ಸೂಗುರೇಶ್ವರ ದೇವಾಲಯದಲ್ಲಿ ದರ್ಶನ ಪಡೆದು ಭಗವಂತ್ ಖೂಬಾ ನಗರಕ್ಕೆ ಆಗಮಿಸಲಿದ್ದಾರೆ. ನಿಯೋಜಿತಗೊಂಡ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಚಿವರಿಂದ ನಗರದ ಪ್ರಮುಖ ವೃತ್ತಗಳಲ್ಲಿನ ಪುತ್ಥಳಿಗಳಿಗೆ ಮಾಲಾರ್ಪಣೆ ನಡೆಯಲಿದೆ. ಇದನ್ನೂ ಓದಿ: ಇನ್ಫೋಸಿಸ್ ಫೌಂಡೇಶನ್‍ನಿಂದ ರಾಯರ ಮಠಕ್ಕೆ ಒಂದು ಲಾರಿ ಆಹಾರ ಪದಾರ್ಥ

    ಬಿಜೆಪಿಯ ಆಯ್ದ ಕಾರ್ಯಕರ್ತರೊಂದಿಗೆ ಸಂಜೆ ಸಭೆ ನಡೆಯಲಿದೆ. ಕೋವಿಡ್ ಹಿನ್ನೆಲೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸಂಕ್ಷಿಪ್ತ ಸಭೆ ಏರ್ಪಡಿಸಲಾಗಿದೆ. ಸಭೆಯ ಮೂಲಕ ಪ್ರಧಾನಿ ಮೋದಿ ಅವರ ಯೋಜನೆಗಳನ್ನ ಮನೆ ಮನೆಗೆ ತಲುಪಿಸಲು ಬಿಜೆಪಿ ಮುಂದಾಗಿದೆ. ಇದನ್ನೂ ಓದಿ: 60 ವರ್ಷದಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಮೋದಿ ಅವಧಿಯಲ್ಲಿ ನಡೆದಿದೆ: ರಾಜೀವ್ ಚಂದ್ರಶೇಖರ್

  • ಯಾದಗಿರಿಯ ಕಡೆಚೂರು ಬಳಿ ವಿಶ್ವದರ್ಜೆಯ ಔಷಧಿ ಪಾರ್ಕ್ ನಿರ್ಮಾಣ

    ಯಾದಗಿರಿಯ ಕಡೆಚೂರು ಬಳಿ ವಿಶ್ವದರ್ಜೆಯ ಔಷಧಿ ಪಾರ್ಕ್ ನಿರ್ಮಾಣ

    – ಕೇಂದ್ರ ಸಚಿವ ಭಗವಂತ ಖೂಬಾರನ್ನು ಭೇಟಿಯಾದ ಸಚಿವ ನಿರಾಣಿ

    ನವದೆಹಲಿ: ಕೇಂದ್ರ ಸರ್ಕಾರವು ಯಾದಗಿರಿ ಜಿಲ್ಲೆಯ ಕಡೆಚೂರುನಲ್ಲಿ ವಿಶ್ವದರ್ಜೆಯ ಬೃಹತ್ ಔಷಧ ಪಾರ್ಕ್ ಅಭಿವೃದ್ಧಿಪಡಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮನವಿ ಮಾಡಿದ್ದಾರೆ.

    ಬುಧವಾರ ಕೇಂದ್ರ ರಸಾಯನ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಅವರು, ಯಾದಗಿರಿ ಜಿಲ್ಲೆಯ ಕಡೆಚೂರಿನಲ್ಲಿ ಬೃಹತ್ ಔಷಧ ಪಾರ್ಕ್ ನಿರ್ಮಿಸಿದ್ರೆ, ಈ ಭಾಗಕ್ಕೆ ಹೆಚ್ಚಿನ ನ್ಯಾಯ ಸಿಗುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಿದರು. ಯಾದಗಿರಿ ಜಿಲ್ಲೆಯು ಹಿಂದುಳಿದ ಕರ್ನಾಟಕ ಜಿಲ್ಲಾ ವ್ಯಾಪ್ತಿಗೆ ಒಳಪಡಲಿದೆ. 2 ಮತ್ತು 3ನೇ ಹಂತದ ನಗರಗಳನ್ನು ಅಭಿವೃದ್ಧಿಪಡಿಸಿ ಇಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಿ ಹೂಡಿಕೆದಾರರನ್ನು ಆಕರ್ಷಿಸಬೇಕೆಂಬುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂಬುದನ್ನು ಸಚಿವರಿಗೆ ವಿವರಿಸಿದರು.

    ಯೋಜನೆ ಅನುಷ್ಟಾನಗೊಂಡರೆ ಸುಮಾರು 6 ಸಾವಿರ ಕೋಟಿ ಬಂಡವಾಳವನ್ನು ಆಕರ್ಷಣೆ ಮಾಡಬಹುದು. ಅಂದಾಜು 10 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿದೆ. ಪ್ರಧಾನಿನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಆತ್ಮನಿರ್ಭರ್ ಯೋಜನೆಯಡಿ ಇದನ್ನು ಕೈಗೆತ್ತಿಕೊಂಡರೆ ಉದ್ಯೋಗ ಕ್ರಾಂತಿಯೇ ಸೃಷ್ಟಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

    ಯಾದಗಿರಿ ಜಿಲ್ಲೆಯು ಕಲಬರುಗಿ ನಗರಕ್ಕೆ ಸಮೀಪದಲ್ಲಿದ್ದು, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ ಸೇರಿಂತೆ ಎಲ್ಲ ರೀತಿಯ ಸೌಕರ್ಯಗಳನ್ನು ಹೊಂದಿದೆ. ರಾಜ್ಯ ಸರ್ಕಾರವು ಔಷಾಧಾಲಯ ಕಾರ್ಖಾನೆಗಳಿಗೆ ಎಲ್ಲ ರೀತಿಯ ನೆರವು ನೀಡಲಿದೆ. ಈ ಯೋಜನೆಯನ್ನು ಸಕಾರಾತ್ಮಕವಾಗಿ ಪರಿಗಣಿಸಬೇಕೆಂದು ಸಚಿವರಿಗೆ ನಿರಾಣಿ ಮನವರಿಕೆ ಮಾಡಿದರು. ತುಮಕೂರು ಮಿಷನ್ ಟೂಲ್ ಪಾರ್ಕ್, ರಾಜ್ಯದಲ್ಲಿ ಈಗಾಗಲೇ ತುಮಕೂರು ಮಿಷನರಿ ಟೋಲ್ ಪಾರ್ಕ್, ಹೈಟೆಕ್ ರಕ್ಷಣಾ ಮತ್ತು ವೈಮಾನಿಕ ಪಾರ್ಕ್, ಜಪಾನೀಸ್ ಕೈಗಾರಿಕಾ ಟೌನ್‍ಶಿಪ್ ಸೇರಿದಂತೆ ಹತ್ತು ಹಲವು ಯೋಜನೆಗಳು ನಿರ್ಮಾಣವಾಗಿದೆ.

    ಯಾದಗಿರಿಯ ಕಡೆಚೂರಿನಲ್ಲಿ ವಿಶ್ವದರ್ಜೆಯ ಔಷಧಾಲಯ ಪಾರ್ಕ್ ನಿರ್ಮಾಣಕ್ಕೆ ಒಂದು ಸಾವಿರ ಕೋಟಿ ಆರ್ಥಿಕ ನೆರವು ನೀಡಲು ಸಿದ್ದವಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಯೋಜನೆ ಪ್ರಾರಂಭಿಸುವಂತೆ ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಭಗವಂತ ಕೂಬ, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದು ಯೋಜನೆಯನ್ನು ಕಾಲ ಮಿತಿಯೊಳಗೆ ಅನುಷ್ಠಾನಗೊಳಿಸುವ ಭರವಸೆಯನ್ನು ನೀಡಿದರು. ಇದನ್ನೂ ಓದಿ: ಸದ್ಯದಲ್ಲೇ ಕೆಜಿಎಫ್ ಬಳಿ ತಲೆ ಎತ್ತಲಿರುವ ಬೃಹತ್ ಕೈಗಾರಿಕಾ ಟೌನ್‍ಶಿಪ್

  • ಕಲಬುರಗಿ ಮಾರ್ಗವಾಗಿ ಬೀದರ್- ಯಶವಂತಪುರ ರೈಲು ಮಂಜೂರು

    ಕಲಬುರಗಿ ಮಾರ್ಗವಾಗಿ ಬೀದರ್- ಯಶವಂತಪುರ ರೈಲು ಮಂಜೂರು

    ಬೀದರ್: ಜಿಲ್ಲೆಯ ಜನರ ಬಹುದಿನಗಳ ಕನಸು ನನಸಾಗಿದ್ದು, ಕೆಲವೇ ದಿನಗಳಲ್ಲಿ ಕಲಬುರಗಿ ಮಾರ್ಗವಾಗಿ ಬೀದರ್ ಟು ಯಶವಂತಪುರ ರೈಲು ಸಂಚಾರ ಪ್ರಾರಂಭವಾಗಲಿದೆ.

    ಸೋಮವಾರ ಕೇಂದ್ರ ರೈಲ್ವೆ ಇಲಾಖೆ ರೈಲು ಮಂಜೂರು ಮಾಡಿದೆ ಸಂಸದ ಭಗವಂತ್ ಖೂಬಾ ಮಾಹಿತಿ ನೀಡಿದ್ದಾರೆ. ಈ ಮೊದಲು ತೆಲಂಗಾಣದ ಸಿಕಂದರಾಬಾದ್ ಮಾರ್ಗವಾಗಿ ಬೀದರ್ ಟು ಯಶವಂತಪುರ ರೈಲು ಸಂಚಾರ ಮಾಡುತ್ತಿತ್ತು. ಹೀಗಾಗಿ ಪ್ರಯಾಣ ಸಮಯ ಹೆಚ್ಚಾಗುತ್ತಿತ್ತು.

    ಕಲಬುರಗಿ ಮಾರ್ಗವಾಗಿ ರೈಲು ಸಂಚರಿಸಿದರೆ ಸಮಯ ಉಳಿಯುತ್ತದೆ ಎಂಬುದು ಜಿಲ್ಲೆಯ ಜನರ ಒತ್ತಾಯವಾಗಿತ್ತು. ಬೀದರ್ ಸಂಸದ ಭಗವಂತ್ ಖೂಬಾ ಹಲವಾರು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದ್ದರು. ಆದರೆ ಕಾರ್ಯ ಸಫಲವಾಗಿರಲಿಲ್ಲ. ಸೋಮವಾರ ಕೇಂದ್ರದ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿಯವರನ್ನು ಖೂಬಾ ಅವರು ಭೇಟಿ ಮಾಡಿದ್ದು, ಈ ವೇಳೆ ಸುರೇಶ್ ಅಂಗಡಿಯವರು ಈ ಮಾಹಿತಿ ನೀಡಿದ್ದಾರೆ.

    ಕೆಲವೇ ದಿನಗಳಲ್ಲಿ ರೈಲು ಸಂಚಾರ ಆರಂಭವಾಗಲಿದೆ ಎಂದು ಸುರೇಶ್ ಅಂಗಡಿ ತಿಳಿಸಿದ್ದಾರೆ. ರೈಲು ಮಂಜೂರು ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಸಂಸದ ಭಗವಂತ್ ಖೂಬಾ ಜಿಲ್ಲೆಯ ಜನರ ಪರವಾಗಿ ಧನ್ಯವಾದ ತಿಳಿಸಿದ್ದಾರೆ.

  • ಕುಂಬಳಕಾಯಿ ಕಳ್ಳ ಅಂದ್ರೆ ಖಂಡ್ರೆ ಹೆಗಲು ಮುಟ್ಕೊಂಡು ನೋಡ್ತಾರೆ- ಖೂಬಾ

    ಕುಂಬಳಕಾಯಿ ಕಳ್ಳ ಅಂದ್ರೆ ಖಂಡ್ರೆ ಹೆಗಲು ಮುಟ್ಕೊಂಡು ನೋಡ್ತಾರೆ- ಖೂಬಾ

    ಬೀದರ್: ಕುಂಬಳಕಾಯಿ ಕಳ್ಳ ಎಂದರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಹೆಗಲು ಮುಟ್ಟಿಕೊಂಡು ನೋಡಿಕೊಳ್ಳುತ್ತಾರೆ ಎಂದು ಸಂಸದ ಭಗವಂತ್ ಖೂಬಾ ತಿರುಗೇಟು ನೀಡಿದ್ದಾರೆ.

    ಪಕ್ಷ ಕಚೇರಿಯಲ್ಲಿ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಂಡ್ರೆ ತಮ್ಮ ಕ್ಷೇತ್ರದಲ್ಲಿ ಉಳ್ಳವರಿಗೆ ಮಾತ್ರ ವಸತಿ ಮನೆಗಳನ್ನು ನೀಡಿದ್ದು, ಇನ್ನೂ ಕೆಲವರಿಗೆ ಮನೆ ನೀಡದೆ ಹಣ ಕೊಳ್ಳೆ ಹೊಡೆದಿದ್ದಾರೆ. ನಾನು ವಸತಿ ಯೋಜನೆಯಲ್ಲಿ ಅವ್ಯವಹಾರ ನಡೆಸಿದ್ದರೆ ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೆನೆ ಎಂದು ಹೇಳುತ್ತಾರೆ. ತಾವು ಸಿಕ್ಕಿಹಾಕಿಕೊಳ್ಳುತ್ತಾರೆ ಎಂಬ ಭಯಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

    ಕಳೆದ ಬಾರಿ ವಸತಿ ಸಚಿವ ವಿ.ಸೋಮಣ್ಣ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಂದರ್ಭದಲ್ಲಿ ಸಂಸದ ಖೂಬಾ ಭಾಲ್ಕಿ ಕ್ಷೇತ್ರದ ವಸತಿ ಯೋಜನೆಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಈಶ್ವರ್ ಖಂಡ್ರೆ, ವಸತಿ ಯೋಜನೆಯಲ್ಲಿ ಅವ್ಯವಹಾರವಾಗಿದೆ ಎಂಬ ಆರೋಪ ಸಾಬೀತಾದರೆ ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದರು.