Tag: ಭಗವಂತ ಮಾನ್

  • ಇಂದಿನಿಂದ ಪಂಜಾಬ್ ಪ್ರತಿಮನೆಗೂ 300 ಯೂನಿಟ್ ಉಚಿತ ವಿದ್ಯುತ್ ಪೂರೈಕೆ: ಭಗವಂತ್ ಮಾನ್

    ಇಂದಿನಿಂದ ಪಂಜಾಬ್ ಪ್ರತಿಮನೆಗೂ 300 ಯೂನಿಟ್ ಉಚಿತ ವಿದ್ಯುತ್ ಪೂರೈಕೆ: ಭಗವಂತ್ ಮಾನ್

    ಚಂಡೀಗಢ: ಪಂಜಾಬ್‍ನಲ್ಲಿ ಜುಲೈ 1ರಿಂದ ಗೃಹ ಬಳಕೆಗಾಗಿ ತಿಂಗಳಿಗೆ 300 ಯೂನಿಟ್‍ಗಳ ಉಚಿತ ವಿದ್ಯುತ್ ಪೂರೈಸುವುದಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರ ಘೋಷಿಸಿತ್ತು. ಅದರಂತೆ ಇಂದಿನಿಂದ ಪಂಜಾಬ್‍ನ ಪ್ರತಿ ಮನೆಗೂ 300 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ಪೂರೈಸುತ್ತಿದೆ.

    2022 ರ ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಆಮ್ ಆದ್ಮಿ ಪಕ್ಷ ನೀಡಿದ ಪ್ರಮುಖ ಭರವಸೆಗಳಲ್ಲಿ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದು ಕೂಡ ಒಂದಾಗಿತ್ತು. ಅದರಂತೆ ಜುಲೈ 1 ರಿಂದ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಎಎಪಿ ಸರ್ಕಾರ ಸೋಮವಾರ ಘೋಷಿಸಿತ್ತು. ಇದನ್ನೂ ಓದಿ : ಹೋಂ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿ ಕಿವಿಯಲ್ಲಿ ರಕ್ತ ಬರುವಂತೆ ಹೊಡೆದ – ಶಿಕ್ಷಕನ ವಿರುದ್ಧ ಪೋಷಕರ ಆಕ್ರೋಶ

    ಈ ಕುರಿತಂತೆ ಟ್ವೀಟ್ ಮಾಡಿರುವ ಭಗವಂತ ಮಾನ್ ಅವರು, ಹಿಂದಿನ ಸರ್ಕಾರಗಳು ಚುನಾವಣೆಯ ಸಮಯದಲ್ಲಿ ಭರವಸೆಗಳನ್ನು ನೀಡುತ್ತಿದ್ದವು. ಅವರು ನೀಡಿದ ಭರವಸೆಗಳನ್ನು ಈಡೇರಿಸುವಷ್ಟರಲ್ಲಿ 5 ವರ್ಷ ಕಳೆದೆ ಹೋಗುತ್ತಿತ್ತು. ಆದರೆ ನಮ್ಮ ಸರ್ಕಾರ ಪಂಜಾಬ್ ಇತಿಹಾಸದಲ್ಲಿಯೇ ಹೊಸ ಮಾದರಿಯನ್ನು ಸ್ಥಾಪಿಸಿದೆ. ನಾವು ಪಂಜಾಬ್ ಜನತೆಗೆ ನೀಡಿದ ಭರವಸೆಯನ್ನು ಇಂದು ಈಡೇರಿಸುತ್ತಿದ್ದೇವೆ. ಇಂದಿನಿಂದ ಪಂಜಾಬ್‍ನ ಪ್ರತಿ ಕುಟುಂಬಗೂ ತಿಂಗಳಿಗೆ 300 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ : ಕೇವಲ 40ರೂ.ನಲ್ಲಿ ಧೋನಿ ಮಂಡಿ ನೋವು ಗುಣಪಡಿಸಿದ ಹಳ್ಳಿ ವೈದ್ಯ!

    ಮತ್ತೊಂದೆಡೆ ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಎಎಪಿ ನಾಯಕ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು, ಇಂದು ಐತಿಹಾಸಿಕ ದಿನವಾಗಿದ್ದು, ದೆಹಲಿಯ ನಂತರ ಜನರಿಗೆ ಉಚಿತ ವಿದ್ಯುತ್ ಒದಗಿಸುತ್ತಿರುವ ಎರಡನೇ ರಾಜ್ಯ ಪಂಜಾಬ್ ಆಗಿದೆ. ಪಂಜಾಬ್ ಜನತೆಗೆ ಕೇಜ್ರಿವಾಲ್ ನೀಡಿದ ಗ್ಯಾರಂಟಿ ನಿಜವಾಗುತ್ತಿದೆ ಎಂದು ಹೇಳಿದ್ದಾರೆ.

    Live Tv

  • ಹೃದಯಸ್ಪರ್ಶಿ ಫೋಟೋ ಜೊತೆಗೆ ಭಗವಂತ ಮಾನ್‌ಗೆ ಶುಭಕೋರಿದ ಹರ್ಭಜನ್ ಸಿಂಗ್

    ಹೃದಯಸ್ಪರ್ಶಿ ಫೋಟೋ ಜೊತೆಗೆ ಭಗವಂತ ಮಾನ್‌ಗೆ ಶುಭಕೋರಿದ ಹರ್ಭಜನ್ ಸಿಂಗ್

    ಚಂಡೀಗಢ: ಆಮ್ ಆದ್ಮಿ ಪಕ್ಷದ (ಎಎಪಿ) ಭಗವಂತ ಮಾನ್ (Bhagwant Mann) ಅವರಿಗೆ ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ (Harbhajan Singh) ವಿಶೇಷವಾಗಿ ಟ್ವೀಟ್ ಮಾಡಿ  ಅಭಿನಂದನೆ ಸಲ್ಲಿಸಿದ್ದಾರೆ.

    ಹೃದಯಸ್ಪರ್ಶಿ ಫೋಟೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಹರ್ಭಜನ್, ನಮ್ಮ ರಾಜ್ಯದ ನೂತನ ಮುಖ್ಯಮಂತ್ರಿಯಾಗುತ್ತಿರುವ ಎಎಪಿ ಪಕ್ಷದ ನನ್ನ ಸ್ನೇಹಿತ ಭಗವಂತ ಮಾನ್ ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?: ಭಗತ್  ಅವರು ಗ್ರಾಮ ಖಟ್‌ಕಡ್‌ಕಲಾಂನಲ್ಲಿ ಮಾನ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ತುಂಬ ಸಂತೋಷವಾಗುತ್ತಿದೆ. ಎಂಥ ಅದ್ಭುತ ಚಿತ್ರ ಇದು. ಮಾತಾ ಜೀಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಬರೆದುಕೊಂಡಿದ್ದಾರೆ. ಮಾನ್ ಅವರು ತನ್ನ ತಾಯಿಯನ್ನು ತಬ್ಬಿಕೊಂಡಿರುವ ಹೃದಯಸ್ಪರ್ಶಿ ಫೋಟೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡು ಶುಭಕೋರಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ – ಇನ್‍ಸ್ಟಾಗ್ರಾಮ್ ನಿರ್ಬಂಧಿಸಲು ಮುಂದಾದ ರಷ್ಯಾ

     ಭಗವಂತ ಮಾನ್ ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಮಾರ್ಚ್ 16ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಎಪಿಯ 92 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಡೇ – ನೈಟ್ ಪಿಂಕ್ ಬಾಲ್ ಟೆಸ್ಟ್‌ಗೆ ಬೆಂಗಳೂರು ಸಜ್ಜು – 2 ವರ್ಷಗಳ ಬಳಿಕ ಚಿನ್ನಸ್ವಾಮಿಯಲ್ಲಿ ಟೀಂ ಇಂಡಿಯಾ ಕಾದಾಟ