Tag: ಭಗವಾನ್ ಬಾಹುಬಲಿ

  • ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಅಂದ ಅಯೂಬ್ ಖಾನ್ – ಸಿಡಿದೆದ್ದ ಜೈನ ಸಮುದಾಯ

    ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಅಂದ ಅಯೂಬ್ ಖಾನ್ – ಸಿಡಿದೆದ್ದ ಜೈನ ಸಮುದಾಯ

    ಮೈಸೂರು: ಭಗವಾನ್ ಬಾಹುಬಲಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ನ್ಯೂ ಇಂಡಿಯನ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್‍ರನ್ನು ಉದಯಗಿರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಎಂದು ಅಯೂಬ್ ಖಾನ್ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜೈನ ಸಮುದಾಯ ಅಯೂಬ್ ಖಾನ್ ವಿರುದ್ಧ ಸಿಡಿದೆದ್ದಿದೆ. ಇದರೊಂದಿಗೆ ಅಯೂಬ್ ಖಾನ್ ಮೇಲೆ 50ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.

    ಅಯೂಬ್ ಖಾನ್‍ರ ಅವಹೇಳನಕಾರಿ ಮಾತಿಗೆ ಜೈನ ಸಂಘಟನೆಗಳು ಕ್ರಿಮಿನಲ್ ಕೇಸ್ ದಾಖಲಿಸುವಂತೆ ಒತ್ತಾಯಿಸಿದೆ. ಇದಕ್ಕೆ ಮಣಿದ ಮೈಸೂರು ಪೊಲೀಸರು ಅಯೂಬ್ ಖಾನ್‍ರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ದೇಗುಲದಲ್ಲಿ ನಡೆದ ಪೂಜೆಗೆ ಬಂದು ಎಲ್ಲರನ್ನೂ ಭೇಟಿಯಾಗಿದ್ದು ಸಂತಸ ತಂದಿದೆ: ನಲಪಾಡ್

    ಅಯೂಬ್ ಖಾನ್ ಹಿಜಬ್ ವಿಚಾರವಾಗಿ ಭಗವಾನ್ ಬಾಹುಬಲಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ, ದೇಶದ ಮಾನ ಉಳಿಸಿ ಎಂದಿದ್ದು, ಈ ಹೇಳಿಕೆಗೆ ಜೈನ ಸಮುದಾಯ ಭಾರೀ ಆಕ್ರೋಶ ವ್ಯಕ್ತಪಡಿಸಿದೆ.

  • ಧರ್ಮಸ್ಥಳ ಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಹಾಕಿದ್ದ ಬೃಹತ್ ಪೆಂಡಾಲ್ ಕುಸಿತ!

    ಧರ್ಮಸ್ಥಳ ಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಹಾಕಿದ್ದ ಬೃಹತ್ ಪೆಂಡಾಲ್ ಕುಸಿತ!

    ಮಂಗಳೂರು: ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಅಮೃತವರ್ಷಿಣಿ ಸಭಾಂಗಣದಲ್ಲಿ ಹಾಕಲಾಗಿದ್ದ ಬೃಹತ್ ಪೆಂಡಾಲ್ ಕುಸಿದು ಬಿದ್ದು ಸುಮಾರು 10 ಮಂದಿ ಗಾಯಗೊಂಡಿದ್ದಾರೆ.

    ಪಂಚಮಹಾವೈಭವ ಕಾರ್ಯಕ್ರಮ ವೀಕ್ಷಣೆಗಾಗಿ ದೇವಾಲಯದ ಪಾರ್ಕಿಂಗ್ ಜಾಗದ ಬಳಿ ಇರುವ ಅಮೃತವರ್ಷಿಣಿ ಸಭಾಂಗಣದಲ್ಲಿ ಬೃಹತ್ ಪೆಂಡಾಲ್ ಅನ್ನು ಹಾಕಲಾಗಿತ್ತು. ಈ ಪೆಂಡಾಲ್ ಗುರುವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದೆ.

    ಮಧ್ಯಾಹ್ನ ಬಿಸಿಲು ಇದ್ದರಿಂದ ಕೆಲವರು ಪೆಂಡಾಲ್ ಕೆಳಗೆ ಕುಳಿತ್ತಿದ್ದಾಗ ಅವಘಡ ಸಂಭವಿಸಿದೆ. ಒಂದು ವೇಳೆ ಕಾರ್ಯಕ್ರಮ ನಡೆಯುತ್ತಿದ್ದಾಗ ಕುಸಿದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಅದೃಷ್ಟವಶಾತ್ ಮಧ್ಯಾಹ್ನವೇ ಈ ಅವಘಡ ಸಂಭವಿಸಿದ್ದರಿಂದ ಭಾರೀ ಅನಾಹುತ ಕೈತಪ್ಪಿದೆ ಎಂದು ಸ್ಥಳದಲ್ಲಿದ್ದ ಜನ ತಿಳಿಸಿದ್ದಾರೆ.

    ಘಟನೆಯಿಂದಾಗಿ ಸುಮಾರು 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೆಂಡಾಲ್ ಕುಸಿಯುವಷ್ಟು ಜೋರಾಗಿ ಗಾಳಿ ಇರಲಿಲ್ಲ. ಪೆಂಡಾಲ್ ಅನ್ನು ಸರಿಯಾಗಿ ಕಟ್ಟದ ಕಾರಣ ಕುಸಿದಿರಬಹುದು ಎಂದು ಸ್ಥಳೀಯ ಜನ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv