Tag: ಭಟ್ಕಳ ಮಸೀದಿ

  • ಬಾಬರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮ ಆಗುತ್ತೆ – ಅನಂತಕುಮಾರ್ ಹೆಗಡೆ ಎಚ್ಚರಿಕೆ

    ಬಾಬರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮ ಆಗುತ್ತೆ – ಅನಂತಕುಮಾರ್ ಹೆಗಡೆ ಎಚ್ಚರಿಕೆ

    ಕಾರವಾರ: ಬಾಬರಿ ಮಸೀದಿ (Babri Masjid) ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಅದರ ಸಾಲಿಗೆ ಸೇರಲಿದೆ. ಇದನ್ನು ಬೆದರಿಕೆ ಅಂತ ಬೇಕಾದ್ರೆ ತಿಳಿಯಿರಿ, ಬಾಬರಿ ಮಸೀದಿಯಂತೆ ಭಟ್ಕಳದ ಮಸೀದಿಯನ್ನೂ ನಿರ್ನಾಮ ಮಾಡುವುದು ಗ್ಯಾರಂಟಿ ಎಂದು ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

    ಕುಮಟಾದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಸದರು, ಬಾಬರಿ ಮಸೀದಿಯಂತೆ ಭಟ್ಕಳದ ಮಸೀದಿಯನ್ನೂ (Mosque) ನಿರ್ನಾಮ ಮಾಡುವುದು ಗ್ಯಾರಂಟಿ. ಇದು ಅನಂತಕುಮಾರ ಹೆಗಡೆ ತೀರ್ಮಾನವಲ್ಲ, ಹಿಂದೂ ಸಮಾಜದ ತೀರ್ಮಾನ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮ ಬದುಕಿಗೆ ಸದುಪಯೋಗವಾಗಬೇಕು: ಸಿದ್ದರಾಮಯ್ಯ

    ಶಿರಸಿಯ ಸಿಪಿ ಬಜಾರ್‌ನಲ್ಲಿರುವ ಮಸೀದಿ, ಅದು ವಿಜಯ ವಿಠ್ಠಲ ದೇವಸ್ಥಾನ, ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಕೂಡು ಮಾರುತಿ ದೇವಸ್ಥಾನ. ಇದೇ ರೀತಿ ದೇಶದ ಹಳ್ಳಿಯ ಮೂಲೆ-ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ, ಅದನ್ನು ಕಿತ್ತುಹಾಕುವ ತನಕ ಹಿಂದೂ ಸಮಾಜ ಸುಮ್ಮನೆ ಕೂರಲ್ಲ. ಈಗ ರಣಭೈರವ ಎದ್ದಾಗಿದೆ. ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಹಿಂದೂ ಧರ್ಮ ಯಾರ ಋಣವನ್ನು ಇಟ್ಟುಕೊಳ್ಳುವ ಧರ್ಮವಲ್ಲ, ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದಿದ್ದರೇ ಇದು ಹಿಂದೂ ರಕ್ತವೇ ಅಲ್ಲ ಎಂದು ಕೆಂಡ ಕಾರಿದ್ದಾರೆ.

    ಜಾತಿ ಹೆಸರಲ್ಲಿ ಹಿಂದೂ ಸಮಾಜ ಒಡೆದರು: ಇಂದಿಗೂ ಮೂರ್ಖ ರಾಮಯ್ಯನಂತಹವರು ಹಿಂದೂ ಸಮಾಜ ಒಡೆಯುತ್ತಿದ್ದಾರೆ. ಶತಮಾನಗಳು ಕಳೆದ ಬಳಿಕವೂ ಹಿಂದೂ ಸಮಾಜ ಒಡೆಯುವ ಕೆಲಸ ಆಗಬಾರದು. ಮತ್ತೆ ನಾವೇ ಪ್ರತ್ನಿಸಿದರೂ ಸಮಾಜ ಒಡೆಯದಂತೆ ಸದೃಢಗೊಳಿಸಬೇಕು ಎಂದು ಕರೆ ನೀಡಿದ್ದಾರೆ.

    ಕಾಂಗ್ರೆಸ್ ನಮ್ಮ ವಿರೋಧಿ ಅಲ್ವೆ ಅಲ್ಲ, ಅವರು ಹಿಂದೂ ವಿರೋಧಿಗಳು, ಸನಾತನ ಧರ್ಮ ವಿರೋಧಿಗಳು. ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ, ಆದ್ರೆ ಸಿದ್ಧರಾಮಯ್ಯ ನಮ್ಮ ವಿರೋಧಿ. ಅಲ್ಪಸಂಖ್ಯಾತರ ವೋಟಿಗೆ ಹರಾಜಾಗಿ ಹೊದವರು ನಮ್ಮ ವಿರೋಧಿಗಳು ಎಂದು ಅಸಮಾಧನಾ ಹೊರಹಾಕಿದ್ದಾರೆ. ಇದನ್ನೂ ಓದಿ: ಕೈ ನಾಯಕರಿಗೆ ರಾಮನ ಮೇಲಿನ ಭಕ್ತಿಗಿಂತ, ಹೈಕಮಾಂಡ್ ಮೇಲಿನ ಭಯವೇ ಜಾಸ್ತಿ: ಅಶೋಕ್‌ ವ್ಯಂಗ್ಯ

    ಕೆಲವರು ರಾಮಮಂದಿರ ಆಮಂತ್ರಣ ನಮಗೆ ಬಂದಿಲ್ಲ ಅಂದರು, ಬಂದಮೇಲೆ ಕಾರ್ಯಕ್ರಮಕ್ಕೆ ಹೋಗಲ್ಲ ಅಂದರು. ಈಗ ಹೋಗ್ತೀನಿ ಅಂತಿದ್ದಾರೆ. ಇದು ಹಿಂದೂ ಸಮಾಜದ ದಮ್ಮು, ತಾಕತ್ತು ಎಂದು ಟಾಂಗ್‌ ಕೊಟ್ಟಿದ್ದಾರೆ.